ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೇನಾಪುರ ಸಮೀಪ ಹೆಚ್ಚೇನು ದಾಳಿಗೆ ಸಿಲುಕಿ ಮೂವರು ಗಾಯಗೊಂಡು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಹೆಮ್ಮಾಡಿ ನಿವಾಸಿ ಯೂಸುಫ್ ಸಾಹೇಬ್ (62) ಮೃತಪಟ್ಟವರು. ಗುಜರಿ ವ್ಯಾಪಾರ ಮಾಡಿಕೊಂಡಿದ್ದ ಅವರು ಬಗ್ವಾಡಿ ರಸ್ತೆಯಲ್ಲಿ ಸಾಗುತ್ತಿದ್ದಾಗ ಏಕಾಏಕಿ ಹೆಚ್ಚೇನು ದಾಳಿ ನಡೆಸಿತು. ಗಂಭೀರವಾಗಿ ಅಸ್ವಸ್ಥಗೊಂಡಿದ್ದ ಅವರನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆತರಲಾಗಿದ್ದು, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇತ್ತೀಚಿಗೆ ದೆಹಲಿಯ ಕಿಯೋದಲ್ಲಿ ನಡೆದ ಅಖಿಲ ಭಾರತ ಸಬ್ ಜೂನಿಯರ್ ಕರಾಟೆ ಚಾಂಪಿಯನ್‌ಶಿಪ್ 2024ರಲ್ಲಿ 13 ವಯೋಮಿತಿಯ 52 ಕೆಜಿ ಕುಮಿಟೆ ವಿಭಾಗದಲ್ಲಿ ವಕ್ವಾಡಿ ಗುರುಕುಲ ಪಬ್ಲಿಕ್ ಸ್ಕೂಲ್ಕ್‌ನ ಎಂಟನೇ ತರಗತಿಯ ವಿದ್ಯಾರ್ಥಿನಿ ಝಾರಾ ಕಂಚಿನ ಪದಕ ಪಡೆದಿದ್ದಾಳೆ. ಸಬ್ ಜೂನಿಯರ್ 11 ವಯೋಮಿತಿಯ 45 ಕೆಜಿ ಕುಮಿಟೆ ವಿಭಾಗದಲ್ಲಿ ಏಳನೇ ತರಗತಿಯ ವಿದ್ಯಾರ್ಥಿನಿ ಸಾನಿಧ್ಯಾ ಸಂತೋಷ್ ನಾಯ್ಕ್ ಬೆಳ್ಳಿ ಪದಕ ಪಡೆದಿದ್ದಾಳೆ. ಈ ಕ್ರೀಡಾಕೂಟದಲ್ಲಿ ಬೇರೆ ಬೇರೆ ರಾಜ್ಯದ ಕ್ರೀಡಾಳುಗಳು ಭಾಗವಹಿಸಿದ್ದರು. ಅವರಿಬ್ಫರೂ ಕುಂದಾಪುರದ ಕೆ.ಡಿ.ಎಫ್. ಕರಾಟೆ ಶಾಲೆಯ ಕಿಯೋಷಿ ಕಿರಣ್ ಕುಂದಾಪುರ ಮತ್ತು ಶಿಹಾನ್ ಸಂದೀಪ್ ವಿ.ಕೆ. ಅವರಿಂದ ತರಬೇತಿ ಪಡೆಯುತ್ತಿದ್ದಾರೆ . ವಿದ್ಯಾರ್ಥಿನಿಯರ ಈ ಸಾಧನೆಯನ್ನು ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿಗಳು ಪ್ರಶಂಸಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ದೇವರಿಗೆ ಕುಂಭಾಬಿಷೇಕ ಮಾಡುವುದರಿಂದ ಆಯುಷ್ಯ, ಶ್ರಿಯ ಪ್ರಾಪ್ತಿಯಾಗುತ್ತದೆ. ಮಾಡಿದ ಕೆಲಸ ಅಕ್ಷಯವಾಗುತ್ತದೆ. ಜೀವನದಲ್ಲಿ ಕೀರ್ತಿ ಪ್ರಾಪ್ತಿಯಾಗುತ್ತದೆ. ಯೋಗ್ಯತೆಗೆ ತಕ್ಕಂತೆ ಫಲ, ಪುಣ್ಯ ಸಿಗುತ್ತದೆ. ಸಹಸ್ರ ಕನಕಾಭಿಷೇಕ ಮಾಡುವುದರಿಂದ ದೇಶಕ್ಕೆ, ಸಮಾಜಬಾಂಧವರಿಗೆ ಒಳಿತಾಗುತ್ತದೆ. ಸುಮಾರು 475 ವರ್ಷ ಇತಿಹಾಸವುಳ್ಳ ಬಸ್ರೂರು ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನವು ಜೀರ್ಣೋದ್ಧಾರಗೊಂಡು, ಬಳಿಕ ಬ್ರಹ್ಮ ರಥೋತ್ಸವ, ಸಹಸ್ರ ಕುಂಭಾಬಿಷೇಕ ನಡೆದು ಸಮಾಜದಲ್ಲಿ ಅಭಿವೃದ್ಧಿ ಕಾಣುವಂತಾಗಿದೆ. ಇಂದು ಶ್ರೀದೇವಿಗೆ ಸಹಸ್ರಾಧಿಕ ಅಷ್ಟತ್ತರ ಶತ (1108) ಸ್ವರ್ಣ ನಾಣ್ಯ ಸಹಿತ ರಜತ ಕುಂಭಾಭಿಷೇಕ ನಡೆದಿದ್ದು, ಇದರ ಪುಣ್ಯದ ಫಲ ಸಮಸ್ತ ಸಮಾಜಬಾಂಧವರಿಗೆ ಪ್ರಾಪ್ತಿಯಾಗಿ ಉತ್ತರೋತ್ತರ ಅಭಿವೃದ್ಧಿ ಆಗಲಿ ಎಂದು ಶ್ರೀ ಸಂಸ್ಥಾನ ಕಾಶೀ ಮಠಾಧೀಶ ಶ್ರೀಮತ್ ಸಂಯಮೀಂದ್ರ ತೀರ್ಥ ಸ್ವಾಮೀಜಿ ಅವರು ಹೇಳಿದರು. ಅವರು ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನದ ಜೀರ್ಣೋದ್ಧಾರ ಪುನಃ ಪ್ರತಿಷ್ಠಾ ರಜತ ಮಹೋತ್ಸವ ಪ್ರಯುಕ್ತ ಶ್ರೀದೇವಿಗೆ ಸಹಸ್ರಾಧಿಕ ಅಷ್ಟತ್ತರ ಶತ ಸ್ವರ್ಣ ನಾಣ್ಯ ಸಹಿತ ರಜತ ಕುಂಭಾಭಿಷೇಕವು ನೆರವೇರಿಸಿ ಆಶೀರ್ವಚನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದ ಕನ್ನಡ ಭಾಷಾಭಿವೃದ್ಧಿ ಸಮಿತಿಯ ಸದಸ್ಯತ್ವ ಅಭಿಯಾನಕ್ಕೆ ಅಧ್ಯಕ್ಷ ಶ್ರೀ ಬಸ್ರೂರು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಬಿ. ಅಪ್ಪಣ್ಣ ಹೆಗ್ಡೆ ಚಾಲನೆ ನೀಡಿದರು. ಸದಸ್ಯತ್ವ ಸ್ವೀಕರಿಸುವ ಮೂಲಕ ಹಾಗೂ ಸಂಘಟನೆಯ ಪೋಷಕರಾಗುವ ಮೂಲಕ ಅವರು ಕುಂದ ಕನ್ನಡ ಭಾಷಾಭಿವೃದ್ಧಿ ವೇದಿಕೆಯ ಉದ್ದೇಶಕ್ಕೆ ಶುಭ ಕೋರಿದರು. “ಕುಂದಾಪ್ರ ಕನ್ನಡ ಭಾಷಾಭಿಮಾನಿಗಳು ಕುಂದಾಪ್ರ ಕನ್ನಡ ಸಾಹಿತ್ಯ, ಕಲೆ, ಜಾನಪದ ಸಂಸ್ಕೃತಿ ಉಳಿಸುವಲ್ಲಿ ಒಗ್ಗೂಡಿ ನಮ್ಮತನ ಉಳಿಸಿ ಬೆಳೆಸಬೇಕು.” ಎಂದರು. ಸಮಿತಿಯ ಖಜಾಂಚಿ ಕೆ. ಆರ್. ನಾಯ್ಕ, ಬಿ. ಅಪ್ಪಣ್ಣ ಹೆಗ್ಡೆ ಅವರಿಗೆ ಪ್ರಥಮ ರಶೀದಿ ಹಸ್ತಾಂತರಿಸಿದರು. ಸಮಿತಿ ಸಂಚಾಲಕ ಯು. ಎಸ್. ಶೆಣೈ ಬಿ. ಅಪ್ಪಣ್ಣ ಹೆಗ್ಡೆ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಮುಖ್ಯ ಅತಿಥಿಯಾಗಿ ಬಿ. ಅಪ್ಪಣ್ಣ ಹೆಗ್ಡೆ ಚಾರಿಟೆಬಲ್ ಟ್ರಸ್ಟ್‌ನ ಅಧ್ಯಕ್ಷ ಬಿ. ರಾಮಕಿಶನ್ ಹೆಗ್ಡೆ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆ ಇವರ ವತಿಯಿಂದ ಡ್ರೋನ್ ಆಧಾರಿತ ಫೋಟೊಗ್ರಫಿ ಮತ್ತು ವೀಡಿಯೋಗ್ರಫಿ ತರಬೇತಿಗಾಗಿ ಪರಿಶಿಷ್ಟ ಪಂಗಡದ ಯುವಕ ಹಾಗೂ ಯುವತಿಯರಿಂದ (ಮೂಲನಿವಾಸಿ, ಅಲೆಮಾರಿ, ಅರೆ ಅಲೆಮಾರಿ & ಸೂಕ್ಷ್ಮ/ ಅತಿ ಸೂಕ್ಷ್ಮ ಪರಿಶಿಷ್ಟ ಪಂಗಡದ ಸಮುದಾಯದವರಿಗೆ ಅದ್ಯತೆ) ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 23 ರವರೆಗೆ ವಿಸ್ತರಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಐ.ಟಿ.ಡಿ.ಪಿ ಕಚೇರಿ, ರಜತಾದ್ರಿ, ಮಣಿಪಾಲ ಉಡುಪಿ ದೂ.ಸಂಖ್ಯೆ: 0820-2574814 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಅಹಿಂಸೆಯು ಹಿಂಸೆಯ ಬದಲಿ ಅಥವಾ ಪ್ರತಿ ಅಲ್ಲ. ಅದು ಪರಿಪೂರ್ಣ ಜೀವನ ದರ್ಶನ. ಮನುಷ್ಯ ಜೀವನ ನಿರ್ವಹಿಸುವ ವಿಧಾನ ಎಂದು ವಿಶ್ರಾಂತ ಪ್ರಾಧ್ಯಾಪಕ ರಾಜಾರಾಮ ತೋಳ್ಪಾಡಿ ವಿಶ್ಲೇಷಿಸಿದರು. ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಮಂಗಳವಾರ ಕನ್ನಡ ವಿಭಾಗ ಹಾಗೂ ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಬೆಂಗಳೂರು ಆಶ್ರಯದಲ್ಲಿ ನಡೆದ ’ಮಹಾತ್ಮರನ್ನು ಅರ್ಥ ಮಾಡಿಕೊಳ್ಳಲು ಕೆಲವು ಪ್ರಶ್ನೆಗಳು’ ವಿಚಾರ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಅಹಿಂಸೆ ಎನ್ನುವುದು ಅಧ್ಯಾತ್ಮ. ಆದರೆ, ಅದಕ್ಕೆ ಲೋಕ ಹಾಗೂ ವಾಸ್ತವದ ಸ್ಪರ್ಶ ಇದೆ ಎಂದು ಉಲ್ಲೇಖಿಸಿದ ಅವರು, ಹಿಂಸೆಯ ಮೂಲಕ ಸ್ವಾತಂತ್ರ್ಯ ಗಾಂಧಿಗೆ ಬೇಕಾಗಿರಲಿಲ್ಲ. ಉಗ್ರ ಹೋರಾಟಗಾರರು ಜನರ ಜೊತೆ ಬೆರೆತು ಹೋರಾಡುತ್ತಿರಲಿಲ್ಲ. ಜನರ ಭಾಗವಹಿಸುವಿಕೆ ಗಾಂಧೀಜಿಗೆ ಬಹುಖ್ಯವಾಗಿತ್ತು ಎಂದರು. ಮಾಂಸಾಹಾರ ಮಾಡುವುದೇ ಹಿಂಸೆಯ ಭಾಗ ಅಲ್ಲ. ಹಿಂಸೆ ಎಂಬುದು ಬದುಕಿನಲ್ಲಿ ಹಾಸುಹೊಕ್ಕ ಅನೇಕ ವರ್ತನೆಗಳು ಎಂದರು. ಅಹಿಂಸೆ ಎಂದರೆ ಒಂದು ಬಾಂಧವ್ಯ. ಹಿಂಸೆ ಮಾಡದೇ ಇರುವುದು ಅಹಿಂಸೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವಂತೆ ಉಡುಪಿ ಜಿಲ್ಲೆಯ ಶಾಸಕರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ನೀಡಿದ್ದಾರೆ. ಮೊದಲ ಬಾರಿಗೆ ನೂತನವಾಗಿ ಶಾಸಕರಾಗಿ ಆಯ್ಕೆಯಾಗಿ ಒಂದು ವರ್ಷ ಏಳು ತಿಂಗಳು ಪೂರ್ಣಗೊಳಿಸಿ, ಐದನೇ ಅಧಿವೇಶನದಲ್ಲಿ ಪಾಲ್ಗೊಳ್ಳುತ್ತಿದ್ದು, ಕ್ಷೇತ್ರದ ಜನರಿಗೆ ನೂತನವಾಗಿ ಆಯ್ಕೆಯಾದ ನಮ್ಮೆಲ್ಲರ ಶಾಸಕರ ಮೇಲೆ ಹೆಚ್ಚಿನ ನಿರೀಕ್ಷೆ ಇದೆ ಕ್ಷೇತ್ರದ ಅಭಿವೃದ್ಧಿ ಕೆಲಸಗಳಿಗೆ ಹಾಗೂ ನಿರ್ವಹಣೆಯ ಕೆಲಸಗಳಿಗೆ ಜನರಿಂದ ದಿನಂಪ್ರತಿ ಮನವಿಗಳನ್ನು ಸ್ವೀಕರಿಸುತ್ತಿದ್ದು, ಜನರ ಸಮಸ್ಯೆಗಳನ್ನು ನಿವಾರಿಸಲು ಮತ್ತು ಕ್ಷೇತ್ರದಲ್ಲಿ ಹೊಸ ಅಗತ್ಯ ಯೋಜನೆಗಳನ್ನು ಪ್ರಾರಂಭಿಸಲು ಜನರು ನಿರಂತರವಾಗಿ ಒತ್ತಾಯಿಸುತ್ತಿದ್ದಾರೆ. ನಾವು ಶಾಸಕರಾದ ಆಗಿನಿಂದಲೂ ಯಾವುದೇ ಗಮನಾರ್ಹ ಅನುದಾನ ಲಭಿಸದೆ ಜನರ ಆದ್ಯತೆಯ ಬೇಡಿಕೆಗಳಿಗೆ, ತುರ್ತು ಸಮಸ್ಯೆಗಳಿಗೆ, ಮೂಲಭೂತ ಸೌಕರ್ಯಗಳ ನಿರ್ವಹಣೆಗೆ ಹಾಗೂ ಅಭಿವೃದ್ಧಿಯ ಕಾಮಗಾರಿಗಳಿಗೆ ಸ್ಪಂದಿಸಲು ಸಾಧ್ಯವಾಗುತ್ತಿಲ್ಲ. ಪ್ರಗತಿಯಲ್ಲಿರುವ ಅನೇಕ ಕಾಮಗಾರಿಗಳು ನಿಧಾನಗತಿಯಲ್ಲಿದ್ದು ಅಥವಾ ಸ್ಥಗಿತಗೊಂಡಿದೆ. ಆದ್ದರಿಂದ ಪ್ರಥಮ ಬಾರಿ ಶಾಸಕರಾಗಿ ಆಯ್ಕೆಯಾದ ನಮ್ಮ ಕ್ಷೇತ್ರಕ್ಕೆ ಮಳೆಹಾನಿ, ಕೃಷಿಹಾನಿ, ಸಮುದ್ರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ತುರ್ತು ಸಂದರ್ಭ, ಪ್ರಾಕೃತಿಕ ವಿಕೋಪ ಸೇರಿದಂತೆ ಪೊಲೀಸ್ ಇಲಾಖೆಯ ಜೊತೆಯಲ್ಲಿ ಆಂತರಿಕ ಭದ್ರತಾ ಕಾರ್ಯಗಳನ್ನು ಗೃಹ ರಕ್ಷಕ ದಳದವರು ಉತ್ತಮವಾಗಿ ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಶ್ಲಾಘಿಸಿದರು. ಅವರು ಅಂದು ನಗರದ ಅಜ್ಜರಕಾಡು ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಜಿಲ್ಲಾ ಗೃಹರಕ್ಷಕ ದಳ ಉಡುಪಿ ಜಿಲ್ಲೆ ಇವರ ವತಿಯಿಂದ ಪಶ್ಚಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟದ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಮಾತನಾಡಿದರು. ಪೊಲೀಸ್ ಸಿಬ್ಬಂದಿಗಳ ಕೊರತೆ ಅಥವಾ ಸಂಕಷ್ಟ ಸಂದರ್ಭದಲ್ಲಿ ಜಿಲ್ಲಾಡಳಿತದ ಜೊತೆ ಗೃಹ ರಕ್ಷಕ ದಳದವರು ಕೈಜೋಡಿಸಿ, ಸಮಾಜಕ್ಕೆ ಉತ್ತಮ ಸೇವೆಯನ್ನು ಗೃಹ ರಕ್ಷಕ ದಳದವರು ನೀಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಗೃಹರಕ್ಷಕ ದಳದವರು ತಮ್ಮ ಕರ್ತವ್ಯವನ್ನು ನಿರ್ವಹಿಸುವುದರ ಜೊತೆಗೆ ತಮ್ಮ ಕುಟುಂಬ ವರ್ಗದವರ ಜೊತೆ ಉತ್ತಮ ಬಾಂಧವ್ಯ ಹೊಂದಿ, ತಮ್ಮ ಮಕ್ಕಳ ವಿಧ್ಯಾಭ್ಯಾಸಕ್ಕೆ ಉತ್ತೇಜನ ನೀಡುವುದರ ಜೊತೆಗೆ ತಾವುಗಳು ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿನ್ನೆಲೆ, ತಮ್ಮ ಆರೋಗ್ಯದ ಕಾಳಜಿಯನ್ನು ವಹಿಸಿ, ಕಾಲಕಾಲಕ್ಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಪ್ರವಾಸೋದ್ಯಮ/ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಫುಡ್ ಕ್ರಾಫ್ಟ್ ಇನ್ಸಿಟ್ಯೂಟ್ (ಈಅI) ಮೈಸೂರು ಹಾಗೂ ಇನ್ಸಿಟಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್ (Iಊಒ) ಬೆಂಗಳೂರು ಇವರ ಮೂಲಕ ವಸತಿ ಸಹಿತ ಕಾರ್ಯಕ್ರಮವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದ್ದು, ರಾಜ್ಯಾದ್ಯಂತ 20 ರಿಂದ 45 ವರ್ಷದೊಳಗಿನ ಪರಿಶಿಷ್ಟ ಜಾತಿಗೆ ಸೇರಿದ 292 ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಂದ ತರಬೇತಿ ಕಾರ್ಯಕ್ರಮಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿ ವಿವರ: ಫುಡ್ ಮತ್ತು ಬಿವರೇಜ್ ಸರ್ವೀಸ್ ಸ್ಟೀವರ್ಡ್ ತರಬೇತಿಗೆ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳ ಗುರಿ -100 ಹಾಗೂ ಪರಿಶಿಷ್ಟ ಪಂಗಡದ – 49 ಅಭ್ಯರ್ಥಿಗಳ ಗುರಿ ನಿಗಧಿಪಡಿಸಲಾಗಿದ್ದು, ಕನಿಷ್ಟ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳು, ರೂಮ್ ಅಟೆಂಡೆಂಟ್ ತರಬೇತಿಗೆ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳ ಗುರಿ – 30 ಹಾಗೂ ಪರಿಶಿಷ್ಟ ಪಂಗಡದ – 19 ಅಭ್ಯರ್ಥಿಗಳ ಗುರಿ ನಿಗಧಿಪಡಿಸಲಾಗಿದ್ದು, ಕನಿಷ್ಟ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಂಬರ್ ಗ್ರೀಸ್ ಕಳ್ಳ ಸಾಗಾಣಿಕೆಯ ಮಾಹಿತಿ ಆಧರಿಸಿ ಕೋಡಿ ಗ್ರಾಮದ ಮಧ್ಯ ಕೋಡಿಗೆ ಮಪ್ತಿಯಲ್ಲಿ ತೆರಳಿದ್ದ ಸಿಐಡಿ ಅರಣ್ಯ ವಿಭಾಗದ ಅಧಿಕಾರಿಗಳ ಮೇಲೆ ತಪ್ಪು ಗ್ರಹಿಕೆಯಿಂದ ಸ್ಥಳೀಯರು ಹಲ್ಲೆ ನಡೆಸಿದ ಘಟನೆ ನಡೆದಿದೆ. ಘಟನೆಯಲ್ಲಿ ಓರ್ವ ಅಧಿಕಾರಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳು ಗುರುತು ಪರಿಚಯ ಹೇಳಿಕೊಳ್ಳದೇ ವಯೋವೃದ್ಧ ವ್ಯಕ್ತಿಗೆ ಗನ್ ತೋರಿಸಿರುವುದು ಸಂಘರ್ಷಕ್ಕೆ ಕಾರಣವಾಗಿದ್ದು, ಸ್ಥಳೀಯರು ಆಕ್ರೋಶಗೊಂಡು ಮುಗಿಬಿದ್ದು ತಳ್ಳಾಟ ನಡೆಸಿದ್ದಾರೆ. ಬುಧವಾರ ಮಧ್ಯಾಹ್ನ 2:30ರ ಸಮಾರಿಗೆ ಎನ್.ಎನ್.ಎಂ. ಸೌಹಾರ್ದ ಭವನದ ಎದುರಿನ ಐಸ್‌ಕ್ರೀಮ್ ಅಂಗಡಿ ಎದುರು 2 ಕಾರುಗಳು ಬಂದಿತ್ತು. ಕಾರಿನಲ್ಲಿ ಒಬ್ಬರು ಮಹಿಳೆ ನಾಲ್ವರು ಪುರುಷರು ಇಳಿದು ಅಂಗಡಿ ಬಳಿ ಇದ್ದ 3 ಮಂದಿ ಯುವಕರು ಹಾಗೂ ಓರ್ವ ವೃದ್ಧರಿಗೆ ಗನ್ ತೋರಿಸಿ ಕಾರು ಹತ್ತುವಂತೆ ಹೇಳಿದರು. ಆ ಸಂದರ್ಭ ಮಪ್ತಿಯಲ್ಲಿದ್ದ ಅಧಿಕಾರಿಗಳ ಬಳಿ ಐಡಿ ಕಾರ್ಡ್ ತೋರಿಸುವಂತೆ ಕೇಳಿದ್ದಾರೆ. ಆದರೆ ಅವರು ತೋರಿಸದೇ ಗನ್ ಹಿಡಿದಿದ್ದರಿಂದ ನಾಲ್ವರು…
