Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಕಾರು ಬೈಕ್‌ಗೆ ಢಿಕ್ಕಿಯಾಗಿ ಬೈಕ್‌ ಸವಾರ ಶಿರೂರಿನ ಶೋಯೆಬ್ ಹಾಗೂ ಬೈಕ್ ಢಿಕ್ಕಿಯಾಗಿ ಪಾದಚಾರಿ ಥಾಮಸ್ ಗಾಯಗೊಂಡ ಘಟನೆ ಸೋಮವಾರದಂದು ಬೆಳಗ್ಗೆ ಮರವಂತೆಯ ನಿರೋಣಿ ಶಾಲೆ ಬಳಿಯ ಹೆದ್ದಾರಿಯಲ್ಲಿ ಸಂಭವಿಸಿದೆ. ಗಾಯಗೊಂಡ ಶೋಯೆಬ್ ಅವರನ್ನು ಕಾರು ಚಾಲಕ ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಥಾಮಸ್ ಅವರ ಎಡ ಕಾಲಿಗೆ ಗಾಯವಾಗಿದೆ. ಈ ಬಗ್ಗೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಳಕ್ಕೆ ತಮಿಳು ಚಿತ್ರರಂಗದ ಖ್ಯಾತ ಸ್ಟಾರ್ ದಂಪತಿ ಸೂರ್ಯ ಹಾಗೂ ಜ್ಯೋತಿಕಾ ಭೇಟಿ ನೀಡಿ ದೇವರ ದರ್ಶನ ಪಡೆದರು. ಕಾಲಿವುಡ್‌ನಲ್ಲಿ ಸಾಕಷ್ಟು ಹೆಸರು ಮಾಡಿರೋ ಸೂರ್ಯ ಹಾಗೂ ಜ್ಯೋತಿಕಾ ಅವರು ದೇವಳಕ್ಕೆ ಭೇಟಿ ನೀಡಿ ಚಂಡಿಕಾಯಾಗದಲ್ಲಿ ಭಾಗಿಯಾಗಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ. ಸೆಲೆಬ್ರಿಟಿ ದಂಪತಿಯನ್ನು ನೋಡಲು ಅಭಿಮಾನಿಗಳು ಮುಗಿ ಬಿದ್ದಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರತಿಯೊಬ್ಬರ ದೈಹಿಕ ಸದೃಢತೆಗೆ ಕ್ರೀಡಾ ಚಟುವಟಿಕೆಗಳು ಪೂರಕವಾಗಿವೆ. ಸದಾ ಕೆಲಸದ ಒತ್ತಡವನ್ನು ಅನುಭವಿಸುವ ಪೊಲೀಸರ ದೈಹಿಕ ಸಾಮರ್ಥ್ಯ ಹಾಗೂ ಸಾಮಾಜಿಕ ಒಲವು ಹೆಚ್ಚಿಸುವ ನಿಟ್ಟಿನಲ್ಲಿ ಕ್ರೀಡಾಕೂಟವನ್ನು ಆಯೋಜಿಸಲಾಗಿದ್ದು, ಯಾವುದೇ ಒತ್ತಡವಿಲ್ಲದೇ ಪೂರ್ಣವಾಗಿ ಕ್ರೀಡೆಗಳಲ್ಲಿ ಭಾಗವಹಿಸಿ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಅಜ್ಜರಕಾಡುವಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಪೊಲೀಸರ ವಾರ್ಷಿಕ ಕ್ರೀಡಾಕೂಟಕ್ಕೆ ಬಲೂನು ಹಾರಿ ಬಿಡುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು. ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಪೊಲೀಸ್ ಇಲಾಖೆಯ ಸೇವೆ ಅಪಾರ. ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ದೈನಂದಿನ ಕರ್ತವ್ಯವನ್ನು ನಿಭಾಯಿಸಿಕೊಂಡು ಹೋಗುವುದರ ಜೊತೆಗೆ ಕ್ರೀಡಾ ಅಭಿರುಚಿ ಬೆಳೆಸಿಕೊಂಡಿರುವುದು ಉತ್ತಮ ವಿಚಾರ. ಕ್ರೀಡೆಗಳಲ್ಲಿ ಸೋಲು-ಗೆಲುವು ಸಹಜವಾಗಿದ್ದು, ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ಆರೋಗ್ಯವನ್ನು ಸದೃಢವಾಗಿರಿಸಿಕೊಳ್ಳಿ ಎಂದರು. ಕರಾವಳಿ ಕಾವಲು ಪಡೆಯ ಪೊಲೀಸ್ ಅಧೀಕ್ಷಕ ಮಿಥುನ್ ಹೆಚ್.ಎನ್ ಮಾತನಾಡಿ, ಪೊಲೀಸರು ಹಾಗೂ ಸಿಬ್ಬಂದಿಗಳು ಕ್ರೀಡೆಗಳಲ್ಲಿ ಸಕ್ರೀಯವಾಗಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಶ್ರುತಿಕಾ ಶೆಟ್ಟಿ ಕನ್ನಡ ಆಶುಭಾಷಣ ಸ್ಪರ್ಧೆಯಲ್ಲಿ ಪ್ರಥಮ, ಜಯಶ್ರೀ ಭಾವಗೀತೆ ಸ್ಪರ್ಧೆಯಲ್ಲಿ ಪ್ರಥಮ, ನಿಶಾಂತ್ ಕಿಣಿ ಭಕ್ತಿಗೀತೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ ಪ್ರಾಂಶುಪಾಲರು ಬೋಧಕ ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಕುಂದಾಪುರದ ಪ್ರತಿಷ್ಟಿತ ವಿದ್ಯಾಸಂಸ್ಥೆಗಳಲ್ಲಿ ಮಂಚೂಣಿಯಲ್ಲಿರುವ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ಪ್ರಾಥಮಿಕ (2 ಮತ್ತು5) ತರಗತಿ ಮಕ್ಕಳಿಗೆ ಅರ್ಧದಿನದ ಅಬಾಕಸ್ ಸ್ಪರ್ಧೆ ಆಯೋಜಿಸಲಾಗಿತ್ತು. ಆಡಳಿತಾಧಿಕಾರಿ ರೆನಿಟಾ ಲೋಬೊ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅತಿಕಡಿಮೆ ಸಮಯದಲ್ಲಿ ವಿವಿಧ ರೀತಿಯ ಮನೋಗಣಿತ ಲೆಕ್ಕಗಳನ್ನು ಮಾಡುವ ಮೂಲಕ ಸುಮಾರು 125 ಮಕ್ಕಳು ತಮ್ಮ ಪಾಲಕರ ಉಪಸ್ಥಿತಿಯಲ್ಲಿ ಎಲ್ಲರಿಂದ ಪ್ರಶಂಸೆಗೆ ಒಳಗಾದರೂ ಅತ್ಯಂತ ಕ್ರಿಯಾಶೀಲತೆಯಿಂದ ಆರಂಭಗೊಂಡ ಈ ಸ್ಪರ್ಧೆಯು ಎಲ್ಲರಿಂದ ಮೆಚ್ಚುಗೆ ಗಳಿಸಿತು. ಶಿಕ್ಷಣದಲ್ಲಿ ಸದಾ ನವೀನತೆಯನ್ನು ಪರಿಚಯಿಸುತ್ತಿರುವ ಆಡಳಿತಮಂಡಳಿಯ ಉತ್ಸುಕತೆಯನ್ನು ಪೋಷಕರು ಕೊಂಡಾಡಿದರು. ತಮ್ಮ ಮಕ್ಕಳ ಮನೋಗಣಿತದ ಬುದ್ಧಿಮತ್ತೆಯನ್ನು ಕಣ್ಣಾರೆ ಕಂಡ ಎಲ್ಲಾ ಪಾಲಕರು ಅತೀವ ಸಂತಸಪಟ್ಟು ಸಂಭ್ರವಿಸಿದರು. ಅಬಾಕಸ್ ತರಬೇತುದಾರರಾದ ಗೀತಾ (ಉಪನ್ಯಾಸಕರು ಮದರ್ ತೆರೇಸಾಸ್ ಪಿ ಯು ಕಾಲೇಜು, ವೇದಿಕ್ ಮಾಥ್ಸ್ ಮತ್ತು ಅಬಾಕಸ್  ತರಬೇತುದಾರರು ಹಾಗೂ ರಾಜ್ಯ ಮತ್ತು ರಾಷ್ಟ್ರಮಟ್ಟದ ಪ್ರಶಸ್ತಿ ವಿಜೇತರು) ಅವರು ಅರ್ಧದಿನ ವಿದ್ಯಾರ್ಥಿಗಳಿಗೆ ಮನೋಗಣಿತದ ವಿವಿಧ ಹಂತದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲೆಯ ಕಣಜಾರಿನಲ್ಲಿನ ಲೂರ್ಡ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಉಡುಪಿ ಜಿಲ್ಲಾ ಅಂತರ್ ಶಾಲಾ ಖೋ ಖೋ ಪಂದ್ಯಾವಳಿಯಲ್ಲಿ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯು 14 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ರನ್ನರ್ ಅಪ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು. 14 ಮತ್ತು 17 ವರ್ಷದೊಳಗಿನ ಬಾಲಕರು ತೃತೀಯ ಸ್ಥಾನವನ್ನು ಪಡೆದು ಸಂಭ್ರಮಿಸಿದರು.14 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಖುಷಿ ಬಿ. ಟಿ. ‘ಬೆಸ್ಟ್ ಚೇಸರ್’ ಗೌರವಕ್ಕೆ ಪಾತ್ರರಾದರು. ವಿದ್ಯಾರ್ಥಿಗಳ ಈ ಅಭೂತಪೂರ್ವ ಸಾಧನೆಗೆ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳೂ ಹಾಗೂ ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ ಅಭಿನಂದನೆಗಳನ್ನು ಸಲ್ಲಿಸುತ್ತಾ” ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ನಮ್ಮ ವಿದ್ಯಾರ್ಥಿಗಳು ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಗಳಲ್ಲಿ ಅತ್ಯುತ್ತಮ ನಿರ್ವಹಣೆಯೊಂದಿಗೆ ಪ್ರಶಸ್ತಿಗಳನ್ನು ಪಡೆಯುತ್ತಿರುವುದು ಇಡೀ ಸಂಸ್ಥೆಗೆ ಹೆಮ್ಮೆಯ ವಿಷಯವಾಗಿದೆ. ಈ ಸಾಧನೆ ನಮ್ಮ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಾಕ್ಷಿಯಂತಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಸಾಧನೆಗಾಗಿ ಇನ್ನಷ್ಟು ಪ್ರಯತ್ನಿಸಲಿದ್ದೇವೆ “ಎಂದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಸಂಘಟಿತ ಸಮಾಜ ಮನಸ್ಸು ಮಾಡಿದರೆ ಎನನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಬಿಜೂರು ನಂದಿಕೇಶ್ವರ ದೇವಳದ ಸಭಾಭವನ ನಿರ್ಮಾಣ ಸಾಕ್ಷಿಯಾಗಿದೆ, ಸಂಘಟಿತ ದುಡಿಮೆಯಿಂದ ನಿರ್ಮಾಣಗೊಂಡ ಈ ಸಭಾಭವನವು ಭಕ್ತರ ಭಕ್ತಿಯ ಪ್ರತೀಕವಾಗಿದೆ ಎಂದು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಬಿಜೂರು ಮೂರ್ಗೊಳಿಹಕ್ಕು ಶ್ರೀ ನಂದಿಕೇಶ್ವರ ಹಾಗೂ ಸಪರಿವಾರ ದೇವಸ್ಥಾನದಲ್ಲಿ ಭಕ್ತರ ಸೇವಾ ಸಂಕಲ್ಪದಂತೆ ನೂತನವಾಗಿ ನಿರ್ಮಾಣವಾಗಿರುವ ಶ್ರೀ ನಂದಿಕೇಶ್ವರ ಸಭಾಭವನ ಉದ್ಘಾಟಿಸಿ ಅವರು ಮಾತನಾಡಿದರು. ಶ್ರೀ ನಂದಿಕೇಶ್ವರ ದೈವಸ್ಥಾನದ ಅಧ್ಯಕ್ಷ ಶ್ರೀನಿವಾಸ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಪ್ರಿಯದರ್ಶಿನಿ ಕಮಲೇಶ್ ಬೆಸ್ಕೊರು, ಸಮೃದ್ಧ ಬೈಂದೂರು ಜನಸೇವಾ ಟ್ರಸ್ಟ್ ಅಧ್ಯಕ್ಷ ಬಿ.ಎಸ್. ಸುರೇಶ ಶೆಟ್ಟಿ ಉಪ್ಪುಂದ, ಬಿಜೂರು ಗ್ರಾ.ಪಂ.ಅಧ್ಯಕ್ಷೆ ಚಣ್ಣಮ್ಮ, ಉದ್ಯಮಿಗಳಾದ ಲಕ್ಷ್ಮಣ ದೇವಾಡಿಗ ಕಿರಿನಮನೆ, ರಾಘವೇಂದ್ರ ಶ್ಯಾನುಭಾಗ್ ಬಿಜೂರು, ಬಿಜೂರು ಕಾತ್ಯಾಯಿನಿ ರೈಸ್‌ಮಿಲ್  ಮಾಲಕ ಸಂತೋಷ್‌ ಶ್ಯಾನುಬಾಗ್, ಸವಿತಾ ದಿನೇಶ ಗಾಣಿಗ, ಉಪ್ಪುಂದ ವರಲಕ್ಷ್ಮೀ ಚಾರಿಟೆಬಲ್ ಟ್ರಸ್ಟ್ ಮಾನ್ವೇಜಿಂಗ್ – ಡೈರೆಕ್ಟರ್ ಡಾ. ಗೋವಿಂದಬಾಬು ಪೂಜಾರಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು : ತಾಲೂಕಿನ ಕೆರ್ಗಾಲು ಗ್ರಾಮದ ನಿವಾಸಿ ವೆಂಕು (80) ಅವರು ಜೇನುನೊಣ ಕಡಿತದಿಂದ ಸಾವನ್ನಪ್ಪಿದ್ದಾರೆ. ಅವರು ತೋಟಕ್ಕೆ ಹೋದ ವೇಳೆ ಜೇನುನೊಣ ದಾಳಿ ನಡೆಸಿತ್ತು. ತೀವ್ರವಾಗಿ ಅಸ್ವಸ್ಥಗೊಂಡ ವೆಂಕು ಅವರನ್ನು ಚಿಕಿತ್ಸೆಗೆಂದು ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಬೈಂದೂರು ಪೋಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳಲ್ಲಿ ಗುರಿ, ತಾಳ್ಮೆ ಹಾಗೂ ನಿರಂತರ ಪರಿಶ್ರಮ ಇದ್ದಲ್ಲಿ ಮಾತ್ರ ಸರಿಯಾದ ಬದುಕು ರೂಪಿಸಿಕೊಳ್ಳಲು ಸಾಧ್ಯ ಎಂದು ಬೆಂಗಳೂರಿನ ಟೊಯೊಟೊ ಕಿರ್ಲೋಸ್ಕರ್ ಮೋಟಾರ್‌ನ ಉಪ ಪ್ರಧಾನ ವ್ಯವಸ್ಥಾಪಕ ಡಾ. ದೀಪಕ್ ಶೆಟ್ಟಿ ಬಾರ್ಕೂರು ನುಡಿದರು. ವಕ್ವಾಡಿಯ ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ ನಡೆದ ಗುರುಕುಲ ಸಮೂಹ ಶಿಕ್ಷಣ ಸಂಸ್ಥೆಗಳ 19ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮದ ಅಂಗವಾಗಿ ನಡೆದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಹಿರಿಯರು ಹಾಗೂ ತಮ್ಮೂರಿನ ಮೇಲೆ ಇರಿಸಿಕೊಳ್ಳುವ ಗೌರವ, ನಂಬಿಕೆ ಮತ್ತು ಅರಿವು ಭವಿಷ್ಯದ ವೃತ್ತಿ ಜೀವನವನ್ನು ರೂಪಿಸಿಕೊಳ್ಳುವಲ್ಲಿ ಸಹಕಾರಿಯಾಗುತ್ತದೆ. ಮಕ್ಕಳ ಜೀವನವನ್ನು ವ್ಯವಸ್ಥಿತವಾಗಿ ರೂಪಿಸುವ ಸಂಪೂರ್ಣ ಜವಾಬ್ದಾರಿ ಪೋಷಕರದ್ದಾಗಿರುವುದರಿಂದಾಗಿ ಅದನ್ನು ಅರ್ಥೈಸಿಕೊಂಡು ನಡೆಯಬೇಕು. ಗುರು ಎನ್ನುವ ಸ್ಥಾನವೇ ದೊಡ್ಡದು. ಸಮಾಜದಲ್ಲಿ ಮಕ್ಕಳನ್ನು ತಿದ್ದುವ ಮೂಲಕ ಒಂದು ಸ್ವಸ್ಥ ಸಮಾಜದ ನಿರ್ಮಾಣದಲ್ಲಿ ಗುರುಗಳ ಪಾತ್ರ ಹಿರಿದಾಗಿದೆ. ಮಕ್ಕಳಲ್ಲಿ ಅಡಗಿರುವ ಸೂಪ್ತ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ವೇದಿಕೆ ಕಲ್ಪಿಸಿ ಕೊಡುವುದೇ ಗುರುವಿನ ಜವಾಬ್ದಾರಿ ಎಂದು ಅಭಿಪ್ರಾಯ…

Read More

ಕುಂದಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಗೋಪಾಡಿ ಪರಿಸರದಲ್ಲಿ ಮುಸುಕುಧಾರಿ ಕಳ್ಳನೊಬ್ಬ ಶೋರೂಮ್ ಒಂದರ ಬಾಗಿಲು ಒಡೆಯಲು ಯತ್ನಿಸಿದ ಘಟನೆ ಶನಿವಾರದಂದು ನಡೆದಿದೆ. ಮುಂಜಾನೆ 3 ಗಂಟೆಯ ಹೊತ್ತಿನಲ್ಲಿ ಮುಸುಕುದಾರಿ ವ್ಯಕ್ತಿಯೊಬ್ಬ ಶೋರೂಮ್ ಶೆಟರ್ ಒಡೆಯಲು ಪ್ರಯತ್ನಿಸುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಸ್ಥಳೀಯರೊಡನೆ ಕಳ್ಳನಿಗಾಗಿ ಹುಡುಕಾಡಿದ್ದರು.ಕಳ್ಳ ಅಲ್ಲಿಂದ ಪರಾರಿ ಆಗಿದ್ದಾನೆ ಎಂದು ತಿಳಿದುಬಂದಿದೆ. ಇತ್ತೀಚಿಗೆ ಈ ಪರಿಸರದಲ್ಲಿ ಮುಸುಕುಧಾರಿ ಕಳ್ಳರ ಸಂಚಾರದಿಂದ ಜನರಲ್ಲಿ ನಡುಕ ಹುಟ್ಟಿಸಿದೆ. ಕಳ್ಳ ಸ್ಥಳಿಯನಾಗಿರಬಹುದು ಆತ ಅಂತರ್ ರಾಜ್ಯ ಕಳ್ಳರ ಸಂಪರ್ಕದಲ್ಲಿರಬಹುದೆಂದು ಸ್ಥಳೀಯರು ಸಂಶಯ ವ್ಯಕ್ತಪಡಿಸಿದ್ದಾರೆ. ರಾತ್ರಿ ಹೊತ್ತು ವಕ್ವಾಡಿ ಮಾರ್ಗದ ರಸ್ತೆಯ ಅಕ್ಕ ಪಕ್ಕ ಮೂಡು ಗೋಪಾಡಿ, ಕುಂಭಾಸಿ, ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿರುವ ಕಾರಿನ ಬಗ್ಗೆಯೂ ಸಂಶಯವಿರುವುದರಿಂದ ಪೊಲೀಸ್ ಬಂದೋಬಸ್ತ್ ಹೆಚ್ಚಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ

Read More