ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ನಡೆದ ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಎತ್ತರ ಜಿಗಿತದಲ್ಲಿ ಸಿನನ್ ಚಿನ್ನದ ಪದಕ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ವಿದ್ಯಾರ್ಥಿಯ ಸಾಧನಪಥ ಇನ್ನಷ್ಟು ಬೆಳೆಯಲಿ ಎಂದು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಹಾರೈಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದರೆ: ’ಮಹಿಳೆಯರು ತಮ್ಮ ಸಮಸ್ಯೆಗಳನ್ನು ಮುಕ್ತವಾಗಿ ವ್ಯಕ್ತಪಡಿಸುವ ವೇದಿಕೆಗಳು ನಿರ್ಮಾಣಗೊಳ್ಳಬೇಕುʼ ಎಂದು ಬಂಟರ ಮಹಿಳಾ ಸಂಘದ ಮೂಡುಬಿದಿರೆ ಘಟಕದ ಅಧ್ಯಕ್ಷೆ ಶೋಭಾ ಎಸ್. ಹೆಗ್ಡೆ ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ವತಿಯಿಂದ ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ’ಸಕ್ಷಮ – ಆಳ್ವಾಸ್ ಮಹಿಳಾ ಸಂಘಟನೆಯ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಸ್ತುತ ಸಮಾಜದಲ್ಲಿ ಮಹಿಳೆ ಹಲವಾರು ಸಮಸ್ಯೆಗಳನ್ನು ತೋರ್ಪಡಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆದರೆ, ಇಂತಹ ವೇದಿಕೆಗಳ ಮೂಲಕ ಆಕೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಬೇಕು ಎಂದು ಅವರು ಆಶಿಸಿದರು. ಮುಂದಿನ ದಿನಗಳಲ್ಲಿ ಸಕ್ಷಮ ಸಂಘಟನೆಯ ಮೂಲಕ ಅನೇಕ ಸಮಾಜಮುಖಿ ಕಾರ್ಯ ನಡೆಯಲಿ. ಸಂಘಟನೆಯ ಎಲ್ಲಾ ನೂತನ ಪದಾಧಿಕಾರಿಗಳು ತಮ್ಮ ತಮ್ಮ ಜವಾಬ್ದಾರಿಯನ್ನು ಮುತುವರ್ಜಿ ಹಾಗೂ ಚಾಕಚಕ್ಯತೆಯಿಂದ ನಿಭಾಯಿಸಬೇಕು ಎಂದು ಸಲಹೆ ನೀಡಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಮಾತನಾಡಿ, ಸರಿಯಾದ ಶಕ್ತಿ ಮತ್ತು ಸಾಮರ್ಥ್ಯದ ಶಕ್ತಿಯೇ ಸಕ್ಷಮ. ಮಹಿಳೆಯರು ತಮ್ಮ ಶಕ್ತಿಯನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ, ಕ್ರಿಯಾಶೀಲತೆ ಮತ್ತು ಸ್ಪರ್ಧಾತ್ಮಕ ಮನೋಭಾವನೆ ಬೆಳೆಸುವ ಉದ್ದೇಶದಿಂದ ಶೈಕ್ಷಣಿಕ ವರ್ಷದ ಪ್ರಥಮ ಸೆಮಿಸ್ಟರ್ ಅವಧಿಯಲ್ಲಿ ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಹುಡುಗ ಮತ್ತು ಹುಡುಗಿಯರಿಗೆ ನಾಲ್ಕು ತಂಡಗಳನ್ನಾಗಿ (ಎಮರಾಲ್ಡ್, ಸಪಾಯರ್, ರೂಬಿ ಮತ್ತು ಟೋಪಾಜ್ ) ರಚಿಸಿ ಜೂನ್ ಆರಂಭದಿಂದ ಸೆಪ್ಟೆಂಬರ್ ಅಂತ್ಯದವರೆಗೆ ವಿವಿಧ ರೀತಿಯ ಒಳಾOಗಣ ಮತ್ತು ಹೊರಾಂಗಣ ಕ್ರೀಡೆ, ಸಾಂಸ್ಕೃತಿಕ ಸಹಪಠ್ಯಚಟುವಟಿಕೆ ಮತ್ತು ಶಿಸ್ತು ಇತ್ಯಾದಿ ವಿಭಾಗಗಳಲ್ಲಿ ತೋರಿದ ಸರ್ವಾಂಗೀಣ ಪ್ರಗತಿಯನ್ನು ಪರಿಗಣಿಸಿ ನೀಡಲಾಗುವ ಪ್ರತಿಷ್ಠಿತ ವಿಕ್ಟರ ಅವಾರ್ಡ್ ಪ್ರಶಸ್ತಿಯನ್ನು ವರ್ಷದ ಪ್ರಥಮಾರ್ದದಲ್ಲಿ ಸಪಾಯರ್ ತಂಡ ತನ್ನ ಮಡಿಗೇರಿಸಿಕೊಂಡಿತು. ಅಪರಾಹ್ನ ನಾಲ್ಕು ತಂಡದ ವಿದ್ಯಾರ್ಥಿಗಳ ಆಕರ್ಷಕ ಪಥಸಂಚಲನದೊಂದಿಗೆ ಕಾರ್ಯಕ್ರಮ ಚಾಲನೆಗೊಂಡಿತು. ಜಿದ್ದಾಜಿದ್ದಿನಿಂದ ಕೂಡಿದ ಹಗ್ಗಜಗ್ಗಾಟ, ಒಂಟಿ ಕಾಲಿನ ರಿಲೇ ಸ್ಪರ್ಧೆಯಲ್ಲಿ ಎಲ್ಲಾ ತಂಡದ ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಪಾಲ್ಗೊಂಡು ಸಂಭ್ರಮಿಸಿದರು. ಮಿನುಗುತ್ತಿರುವ ಆಕರ್ಷಕ ರಜತ ಟ್ರೋಫಿಯನ್ನು ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳು, ಶಿಕ್ಷಕರ ಸಮ್ಮುಖದಲ್ಲಿ ಸಪಾಯರ್ ತಂಡದ ನಾಯಕ ಪ್ರಜ್ವಲ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಸೆ.29: ಬೈಕ್ ಹಾಗೂ ಬುಲೆಟ್ ಮುಖಾಮುಖಿ ಢಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ಹಂಗಳೂರಿನ ನಗು ಪ್ಯಾಲೇಸ್ ಎದುರುಗಡೆಯ ಸರ್ವೀಸ್ ರಸ್ತೆಯಲ್ಲಿ ಘಟನೆ ನಡೆದಿದೆ. ಕುಂದಾಪುರ ಬಾಳೆಹಿತ್ಲು ನಿವಾಸಿಯಾದ ವೆಂಕಟೇಶ್ ಎಂಬುವವರ ಪುತ್ರ ಶಶಾಂಕ್ ಮೊಗವೀರ (22) ಎಂದು ಗುರುತಿಸಲಾಗಿದೆ. ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಶಶಾಂಕ ಮೊಗವೀರ ರಾತ್ರಿ 11.00 ರ ವೇಳೆಗೆ ರಿಲಯನ್ಸ್ ಪೆಟ್ರೋಲ್ ಬಂಕಿನಲ್ಲಿ ಪೆಟ್ರೋಲ್ ತುಂಬಿಸಿಕೊಂಡು ಮನೆಗೆ ಹಿಂತಿರುಗುವ ಸಮಯದಲ್ಲಿ ಅಪಘಾತವಾಗಿದ್ದು ತಕ್ಷಣ ಅವರನ್ನು ಮಣಿಪಾಲದ ಕೆಏಂಸಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮದ್ಯೆ ಅವರು ಕೊನೆರುಸಿರೆಳೆದಿದ್ದಾರೆ. ಬುಲೆಟ್ ಸವಾರ ಮತ್ತು ಹಿಂದೆ ಕುಳಿತಿದ್ದ ಮಹಿಳೆಯೂ ಕೂಡ ಗಂಭೀರವಾಗಿ ಗಾಯಗೊಂಡಿದ್ದು ಇಬ್ಬರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಕುಂದಾಪುರ ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ತಗ್ಗರ್ಸೆ ಮೋಗವೀರ ಗರಡಿ ಸಾರ್ವಜನಿಕ ಶ್ರೀ ಶಾರಾದೋತ್ಸವ ಸಮಿತಿಯ ಶಾರದೋತ್ಸವ ರಜತ ಮಹೋತ್ಸವ ಸಂಭ್ರಮ ಅ.06ರಿಂದ ಅ.07ರ ತನಕ ಜರುಗಲಿದೆ. ಅ.06ರ ಬೆಳಿಗ್ಗೆ 9:30ರಿಂದ ಮಧ್ಯಾಹ್ನ 01ರ ತನಕ ಪ್ರಸಾದ್ ನೇತ್ರಾಲಯದಿಂದ ಉಚಿತ ನೇತ್ರ ತಪಸಣೆ ಹಾಗೂ ಪೊರೆ ಶಸ್ತ್ರ ಚಿಕಿತ್ಸೆ ಶಿಬಿರ, ಬೆಳಿಗ್ಗೆ 10.30ಕ್ಕೆ ದುರ್ಗಾಹೋಮ, ಮಧ್ಯಾಹ್ನ ಅನ್ನಸಂತರ್ಪಣೆ, ಸಂಜೆ ಅಂಗನವಾಡಿ ಮಕ್ಕಳಿಂದ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ ಮಕ್ಕಳಿಂದ ನೃತ್ಯ ವೈವಿಧ್ಯ ನಡೆಯಲಿದೆ. ರಾತ್ರಿ 09ರಿಂದ ದುರ್ಗಾ ಕಲಾತಂಡ ಪುಗರ್ತೆ ಕಲಾವಿದೆರ್ ವಿಟ್ಲ ಮೈರ ಕೇಪು ಅಭಿನಯದ ಕನ್ನಡ ಅದ್ದೂರಿ ಭಕ್ತಿ ಪ್ರಧಾನ ನಾಟಕ ಕಲಿಯುಗದ ಕಾಳಿ ಮಂತ್ರದೇವತೆ ನಾಟಕ ನಡೆಯಲಿದೆ ಎಂದು ತಗ್ಗರ್ಸೆ ಮೋಗವೀರ ಗರಡಿ ಸಾರ್ವಜನಿಕ ಶ್ರೀ ಶಾರಾದೋತ್ಸವ ಸಮಿತಿಯ ಅಧ್ಯಕ್ಷ ಶಿವಾನಂದ ಗಾಣಿಗ ಹಾಗೂ ಕಾರ್ಯದರ್ಶಿ ಅಭಿಷೇಕ್ ಸುವರ್ಣ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೇಂದ್ರ ಭೂಸಾರಿಗೆ ಮಂತ್ರಾಲಯದ ಡೈರೆಕ್ಟರ್ ಜನರಲ್ ದರ್ಮೇಂದ್ರ ಸಾರಂಗಿ ಅವರು ಶುಕ್ರವಾರದಂದು ಶಿವಮೊಗ್ಗ ಜಿಲ್ಲೆಯ ರಾಷ್ಠ್ರೀಯ ಹೆದ್ದಾರಿ ಕಾಮಗಾರಿಗಳ ಪರಿವೀಕ್ಷಣೆಗೆ ಭೇಟಿ ನೀಡಿದ ಸಮಯದಲ್ಲಿ ಸಂಸದರಾದ ಬಿ.ವೈ. ರಾಘವೇಂದ್ರ ಅವರು ನಗರದ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳನ್ನು ಕ್ಷೇತ್ರದ ಜನತೆಯ ಪರವಾಗಿ ಸ್ವಾಗತಿಸಿ, ಅಧಿಕಾರಿಗಳೊಂದಿಗೆ ಸಭೆ ನೆಡೆಸಿ ಕ್ಷೇತ್ರದಲ್ಲಿ ಅಭಿವೃದ್ದಿಯಾಗುತ್ತಿರುವ ಹಾಗೂ ಆಗಬೇಕಾದ ಪ್ರಮುಖ ಕಾಮಗಾರಿಗಳ ಬಗ್ಗೆ ವಿಸ್ತಾರವಾಗಿ ಚರ್ಚಿಸಿದರು. ಈ ಸಂದರ್ಭದಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಗಳಾದ ಸಿಗಂದೂರು ಸೇತುವೆ, ಚಿತ್ರದುರ್ಗ-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ರಸ್ತೆ ಹಾಗೂ ಸಾಗರ ಪಟ್ಟಣದ ಚತುಷ್ಪಥ ರಸ್ತೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವ ಬಗ್ಗೆ ಚರ್ಚಿಸಿದರು. ಟೆಂಡರ್ ಪ್ರಕ್ರಿಯೆ ಮುಗಿದಿರುವ ಕಾಮಗಾರಿಗಳಾದ ಶಿವಮೊಗ್ಗ-ಆನಂದಪುರ 4 ಪಥದ ರಸ್ತೆ, ನೆಲ್ಲಿಸರದಿಂದ-ತೀರ್ಥಹಳ್ಳಿವರೆಗಿನ 4 ಪಥದ ರಸ್ತೆ, ಬೈಂದೂರು-ನಾಗೋಡಿವರೆಗಿನ ದ್ವಿಪಥ ರಸ್ತೆ, ಹಾಗು ಹೊಸೂರು ಮತ್ತು ತಾಳಗುಪ್ಪ ರೈಲ್ವೇ ಮೇಲ್ಸೇತುವೆ ಕಾಮಗಾರಿಗಳನ್ನು ಶೀಘ್ರ ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ಮನವಿ ಮಾಡಿದರು. 2024-25 ನೇ ಸಾಲಿಗೆ ಮಂಜೂರಾದ ಕಾಮಗಾರಿಗಳಾದ ಆಗುಂಬೆ ರಸ್ತೆ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪ್ರವಾಸೋದ್ಯಮ ಇಲಾಖೆಯ ವತಿಯಿಂದ “ವಿಶ್ವ ಪ್ರವಾಸೋದ್ಯಮ ದಿನಾಚರಣೆ” ಅಂಗವಾಗಿ ಇಂದು ಕೋಡಿ ಕನ್ಯಾನ (ಡೆಲ್ಟಾ ಬೀಚ್) ಬೀಚ್ನಲ್ಲಿ ನಡೆದ ಬೀಚ್ ಸ್ವಚ್ಛತಾ ಕಾರ್ಯಕ್ರಮಕ್ಕೆ ಡಾ.ಕೆ.ವಿದ್ಯಾಕುಮಾರಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರವಾಸೋದ್ಯಮಕ್ಕೆ ಪೂರಕವಾಗುವ ಚಟುವಟಿಕೆಗಳನ್ನು ಕೈಗೊಳ್ಳುವ ಜೊತೆಗೆ ಸ್ಥಳೀಯ ಜನರಿಗೆ ಉದ್ಯೋಗ ಅವಕಾಶಗಳು ದೊರೆಯುವಂತೆ ಯೋಜನೆಗಳನ್ನು ರೂಪಿಸಬೇಕು. ಜಿಲ್ಲೆಯ ಪ್ರವಾಸಿ ತಾಣಗಳತ್ತ ಪ್ರವಾಸಿಗರು ಆಕರ್ಷಿತರಾಗುವಂತೆ ಪ್ರವಾಸೋದ್ಯಮವನ್ನು ಇನ್ನಷ್ಟು ಅಭಿವೃದ್ಧಿಗೊಳಿಸಬೇಕು ಎಂದರು. ಹೊಸ ಬೀಚಿನ ಅಭಿವೃದ್ಧಿಯ ದೃಷ್ಠಿಕೋನದೊಂದಿಗೆ ಕೋಡಿ ಕನ್ಯಾನ ಬೀಚಿನಲ್ಲಿ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಮುಖ್ಯವಾಗಿ ಮಳೆಗಾಲದ ನಂತರ ಹೆಚ್ಚು ತ್ಯಾಜ್ಯಗಳು ಕಡಲತೀರದ ಬಳಿ ಸೇರಿಕೊಂಡಿದೆ. ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬೀಚ್ಗೆ ಆಗಮಿಸುವುದರಿಂದ ಬೀಚ್ಗಳ ಸ್ವಚ್ಛತೆಗೆ ಪ್ರತಿಯೊಬ್ಬರೂ ಮೊದಲ ಆದ್ಯತೆ ನೀಡಿ, ಜಲಚರಗಳ ರಕ್ಷಣೆಗೆ ಮುಂದಾಗಬೇಕು. ಜೊತೆಗೆ ಪರಿಸರ ಸ್ಚಚ್ಛವಾಗಿ ಇರಿಸಿಕೊಳ್ಳುವುದರಿಂದ ನಮ್ಮ ಆರೋಗ್ಯವೂ ಸಹ ಉತ್ತಮವಾಗಿರುತ್ತದೆ ಎಂದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ ಬಿ ಹೆಗ್ಡೆ ಕಾಲೇಜಿನ ರೋಟರಾಕ್ಟ್ ಕ್ಲಬ್ ಹಾಗೂ ರೋಟರಿ ಕ್ಲಬ್ ಕುಂದಾಪುರದ ಜಂಟಿ ಆಶ್ರಯದಲ್ಲಿ ‘ಡೆಂಗ್ಯೂ ಅರಿವು’ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಕುಂದಾಪುರ ತಾಲೂಕು ಆರೋಗ್ಯ ಅಧಿಕಾರಿ ಡಾ| ಪ್ರೇಮಾನಂದ ಅವರು ಮಾತನಾಡಿ, ಡೆಂಗ್ಯೂ ಜ್ವರದ ಅಪಾಯಗಳು ಮತ್ತು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು, ರೋಗ ಲಕ್ಷಣದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ ಶೆಟ್ಟಿ ವಹಿಸಿದ್ದರು. ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷ ಲಿಯಾಕತ್, ಕಾರ್ಯದರ್ಶಿ ಸಚ್ಚಿದಾನಂದ, ರೋಟರಾಕ್ಟ್ ಕ್ಲಬ್ ಕುಂದಾಪುರದ ಸಭಾಪತಿ ವೆಂಕಟೇಶ್ ಪ್ರಭು, ಕಾರ್ಯಕ್ರಮದ ಸಂಯೋಜಕಿ ಅವಿತಾ ಕೊರೆಯಾ, ಕಾಲೇಜಿನ ರೋಟರಾಕ್ಟ್ ಕ್ಲಬ್ನ ಅಧ್ಯಕ್ಷ ದ್ವಿತೀಯ ಬಿಸಿಎ ಆದಿತ್ಯ ಹಾಗೂ ಕಾರ್ಯದರ್ಶಿ ದ್ವಿತೀಯ ಬಿಸಿಎ ಮಾನ್ಯ ಉಪಸ್ಥಿತರಿದ್ದರು. ಕಾಲೇಜಿನ ರೋಟರಾಕ್ಟ್ ಕ್ಲಬ್ನ ಸಂಯೋಜಕ ಸತೀಶ್ ಶೆಟ್ಟಿ ಹೆಸ್ಕೂತ್ತೂರು ಸ್ವಾಗತಿಸಿ, ವಿದ್ಯಾರ್ಥಿನಿ ಸ್ನೇಹಾ ಪ್ರಾರ್ಥಿಸಿ, ಪ್ರಥಮ್ ಭಂಡಾರಿ ದ್ವಿತೀಯ ಬಿಬಿಎ ವಂದಿಸಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 26ರಂದು ನಡೆದ ದಕ್ಷಿಣ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಮೂಡುಬಿದಿರೆ ತಾಲ್ಲೂಕನ್ನು ಪ್ರತಿನಿಧಿಸಿದ ಆಳ್ವಾಸ್ ಕಾಲೇಜು ತಂಡವು ಸಮಗ್ರ ಪ್ರಶಸ್ತಿಗೆ ಭಾಜನವಾಗಿದೆ. ಪುರುಷ ಮತ್ತು ಮಹಿಳಾ ಸೇರಿದಂತೆ ಎರಡೂ ವಿಭಾಗಗಳ ಅಥ್ಲೆಟಿಕ್ಸ್ನಲ್ಲಿ ಒಟ್ಟು 23 ಚಿನ್ನ, 10 ಬೆಳ್ಳಿ, 02ಕಂಚಿನ ಪದಕಗಳೊಂದಿಗೆ ಒಟ್ಟು 35 ಪದಕ, ಕುಸ್ತಿಯಲ್ಲಿ 16 ಚಿನ್ನ, 08 ಬೆಳ್ಳಿ, 08 ಕಂಚಿನ ಪದಕಗಳೊಂದಿಗೆ ಒಟ್ಟು 32 ಪದಕ, ಯೋಗದಲ್ಲಿ 05 ಚಿನ್ನ, 04 ಬೆಳ್ಳಿ, 02 ಕಂಚಿನ ಪದಕಗಳೊಂದಿಗೆ ಒಟ್ಟು 11 ಪದಕ ಹಾಗೂ ಕಬಡ್ಡಿ, ಬಾಲ್ ಬ್ಯಾಡ್ಮಿಂಟನ್ ಮತ್ತು ಖೋ-ಖೋ ಪಂದ್ಯಾಟಗಳ ಪುರುಷ ಮತ್ತು ಮಹಿಳಾ ವಿಭಾಗಗಳಲ್ಲಿ ಪ್ರಥಮ ಸ್ಥಾನ ಹಾಗೂ ವಾಲಿವಾಲ್ ಪುರುಷರ ವಿಭಾಗದಲ್ಲಿ ದ್ವಿತೀಯ, ತ್ರೋಬಾಲ್ ಮಹಿಳೆಯರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಆಳ್ವಾಸ್ ಪಡೆದುಕೊಂಡಿದೆ. ಮಂಗಳೂರು, ಉಡುಪಿ, ಚಾಮರಾಜನಗರ, ಕೊಡಗು ಜಿಲ್ಲೆಗಳಲ್ಲಿ ನಡೆಯುವ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಳ್ವಾಸ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ತಾಲೂಕಿನ ಕಾಲೇಜುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಮಂಜೂರಾತಿಗಾಗಿ ಸಂಬಂಧಪಟ್ಟ ಕಾಲೇಜು ಪ್ರಾಂಶುಪಾಲರು ವಿದ್ಯಾರ್ಥಿಗಳ ದಾಖಲೆಗಳೊಂದಿಗೆ ನೇರವಾಗಿ ಇಲಾಖಾ ವೆಬ್ಸೈಟ್ ಪರಿಶಿಷ್ಟ ಜಾತಿ SW.KAR.NIC.IN, ಪರಿಶಿಷ್ಟ ಪಂಗಡ: TW.KAR.NIC.IN ಅಥವಾ http://ssp.karnataka.gov.in ಲಿಂಕ್ಗೆ ಲಾಗಿನ್ ಆಗಿ ಸಂಪೂರ್ಣ ಮಾಹಿತಿಯನ್ನು ನೀಡಿ ಕಡ್ಡಾಯವಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿದ ಪ್ರತಿ ವಿದ್ಯಾರ್ಥಿಗಳು ಬ್ಯಾಂಕ್ ಖಾತೆಗೆ ಆಧಾರ್ ಸೀಡ್ ಹಾಗೂ ಓPಅI ಮ್ಯಾಪಿಂಗ್ ಮಾಡಿಸುವುದು ಕಡ್ಡಾಯವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0820-2528884 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
