ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಿದರೆ ಸಮಸ್ಯೆ ಕಟ್ಟಿಟ್ಟ ಬುತ್ತಿ ಅದರ ಬಗ್ಗೆ ಕಾಳಜಿ ಅತ್ಯಗತ್ಯ ಎಂದು ಉಡುಪಿ ಪ್ರಸಿದ್ಧ ವೈದ್ಯ ನರೇಂದ್ರ ಕುಮಾರ್ ಎಚ್. ಎಸ್. ಹೇಳಿದರು. ಅವರು ಭಾನುವಾರ ಕೋಡಿ ಕನ್ಯಾಣದ ಸೇತುವೆ ಬಳಿ ಕೆನರಾ ಬ್ಯಾಂಕ್ ಮಣಿಪಾಲ ವೃತ್ತ ಪ್ರಾಯೋಜಕತ್ವದಲ್ಲಿ ಸೀಎಂಸಿ2 ಮಂಗಳೂರು, ಉಡುಪಿ ಕಿನಾರ ಮೀನುಗಾರ ಉತ್ಪಾದಕ ಕಂಪನಿ, ಅಯೋಧ್ಯಾ ಫ್ರೆಂಡ್ಸ್ ಕೋಡಿ ಕನ್ಯಾಣ ಇವರ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದರು. ಗ್ರಾಮೀಣ ಕರಾವಳಿ ಭಾಗದಲ್ಲಿ ಮೀನುಗಾರ ವೃತ್ತಿ ನಿರಂತರ ಹೆಚ್ಚಿದ್ದು ಅವರ ಆರೋಗ್ಯದ ಬಗ್ಗೆ ಹೆಚ್ಚು ಆಸಕ್ತಿ ವಹಿಸಬೇಕು. ಮೂಳೆ ಸವೆತ ಸೇರಿದಂತೆ ಅನೇಕ ರೋಗಗಳನ್ನು ಅವರು ಎದುರಿಸುತ್ತಾರೆ. ಅಂತಹ ಸಂದರ್ಭದಲ್ಲಿ ಇಂತಹ ಆರೋಗ್ಯ ಶಿಬಿರಗಳು ಸಹಕಾರಿಯಾಗಿ ಕಾರ್ಯನಿರ್ವಹಿಸುತ್ತವೆ ಎಂದರು. ಕಾರ್ಯಕ್ರಮವನ್ನು ಕೆನರಾ ಬ್ಯಾಂಕ್ ಮಣಿಪಾಲ ಇದರ ಹಿರಿಯ ಪ್ರಭಂಧಕಿ ಅನಿತಾ ಶೆಟ್ಟಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೀಎಂಸಿ2 ಮಂಗಳೂರು ಇದರ ಅಧ್ಯಕ್ಷ ರಮೇಶ್ ಎಂ.ಆರ್. ವಹಿಸಿದ್ದರು.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆಯ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ಯುವ ರೆಡ್ ಕ್ರಾಸ್ ಸಂಘದ ವಿದ್ಯಾರ್ಥಿಗಳು ಶೈಕ್ಷಣಿಕ ಮುನ್ನುಡಿಯ ಭಾಗವಾಗಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ರಕ್ತ ಬ್ಯಾಂಕ್ಗೆ ಭೇಟಿ ನೀಡಿದರು. ಅವರು ರಕ್ತ ಸಂಗ್ರಹಣೆ, ಸುರಕ್ಷತಾ ಕ್ರಮಗಳು ಮತ್ತು ಕೆಂಪು ರಕ್ತ ಕಣಗಳು, ಪ್ಲಾಸ್ಮಾ ಮತ್ತು ಪ್ಲೇಟ್ಲೆಟ್ಳಂತಹ ಘಟಕಗಳ ಪ್ರತ್ಯೇಕತೆಯ ಬಗ್ಗೆ ತಿಳಿದುಕೊಂಡರು. ಅಧಿವೇಶನವನ್ನು ಹಿರಿಯ ತಾಂತ್ರಿಕ ಶಿಕ್ಷಣ ಮೇಲ್ವಿಚಾರಕರಾದ ಸುಜಯಾ ಮತ್ತು ವೀರೇಂದ್ರ ಅವರ ಮಾರ್ಗದರ್ಶನದಲ್ಲಿ ನಡೆಯಿತು. ಭಾರತಿ ಗಾಣಿಗ ಅವರ ಸಂಯೋಜನೆಯಲ್ಲಿ ನಡೆದ ಈ ಭೇಟಿಯು ರಕ್ತದಾನದ ಮಹತ್ವ ಮತ್ತು ಜೀವಗಳನ್ನು ಉಳಿಸುವಲ್ಲಿ ರಕ್ತ ಬ್ಯಾಂಕುಗಳ ಪಾತ್ರವನ್ನು ಅರ್ಥಮಾಡಿಕೊಳ್ಳಲು ವಿದ್ಯಾರ್ಥಿಗಳಿಗೆ ಸಹಾಯ ಮಾಡಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ (DST) ಮತ್ತು ನ್ಯಾಷನಲ್ ಇನ್ನೋವೇಶನ್ ಫೌಂಡೇಶನ್ (NIF) ಜಂಟಿಯಾಗಿ ಆಯೋಜಿಸುವ ಇನ್ಸ್ಪಾಯರ್ ಅವಾರ್ಡ್ ಸ್ಪರ್ಧೆಗೆ ನಾವುಂದದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಸುಜನ್ ಪೂಜಾರಿ ಮತ್ತು ಸಂದೇಶ ಪೂಜಾರಿ ಆಯ್ಕೆ ಆಗಿರುತ್ತಾರೆ. ಅವರಿಗೆ ಗಣಿತಶಾಸ್ತ್ರ ಉಪನ್ಯಾಸಕಿ ಸಾವಿತ್ರಿ ಎಸ್. ಅವರು ಮಾರ್ಗದರ್ಶನ ಮಾಡಿದ್ದರು.ವಿದ್ಯಾರ್ಥಿಗಳ ಈ ಸಾಧನೆಯನ್ನು ಕಾಲೇಜಿನ ಪ್ರಾಂಶುಪಾಲರು ಬೋಧಕ ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ಯಕ್ಷಮಿತ್ರರು ನೀಡಿದ ಸನ್ಮಾನ ಅರ್ಥಪೂರ್ಣ ಎಂದು ಪಾಂಡೇಶ್ವರ ರಕ್ತೇಶ್ವರಿ ದೇಗುಲದ ಧರ್ಮದರ್ಶಿ ಕೆ.ವಿ. ರಮೇಶ್ ರಾವ್ ಹೇಳಿದರು. ಅವರು ಶನಿವಾರ ಸಾಸ್ತಾನದ ಪಾಂಡೇಶ್ವರ ಯಡಬೆಟ್ಟು ಯಕ್ಷಮಿತ್ರರು ಆಯೋಜಿಸಿದ ಪಂಚಮ ವರ್ಷದ ಯಕ್ಷಗಾನ ಕಾರ್ಯಕ್ರಮದಲ್ಲಿ ಪದ್ಮಶ್ರೀ ಹರೇಕಳ ಹಾಜಬ್ಬರನ್ನು ಗೌರವಿಸಿ ಮಾತನಾಡಿದರು. ಅಕ್ಷರ ದೇಗುಲವನ್ನು ಕಟ್ಟಿ ಸಮಾಜಕ್ಕೆ ತನ್ನನ್ನು ಸಮರ್ಪಿಸಿಕೊಂಡ ಹಾಜಬ್ಬ ಎನ್ನುವ ನಿಸ್ವಾರ್ಥ ಸೇವಾರ್ಥಿ ತನ್ನ ಸರ್ವಸ್ವವನ್ನೂ ಈ ಸಮಾಜಕ್ಕೆ ಧಾರೆ ಎರೆದಿದ್ದಾರೆ ಇದು ಯಕ್ಷ ಮಿತ್ರರ ಹೆಸರನ್ನು ಇಮ್ಮಡಿಗೊಳಿಸಿದೆ ಎಂದರು. ಈ ಸಂದರ್ಭದಲ್ಲಿ ಅಕ್ಷರ ಸಂತ ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಯಕ್ಷಮಿತ್ರ ಗೌರವ ಸನ್ಮಾನ ನೀಡಲಾಯಿತು. ಸಭೆಯಲ್ಲಿ ಪಾಂಡೇಶ್ವರ ಕಳಿಬೈಲು ಶ್ರೀ ಕ್ಷೇತ್ರದ ಧರ್ಮದರ್ಶಿ ಅಭಿಜಿತ್ ಪಾಂಡೇಶ್ವರ, ಸಾಸ್ತಾನ ಗೋಳಿಗರಡಿ ದೈವಸ್ಥಾನದ ಪಾತ್ರಿ ಶಂಕರ್ ಪೂಜಾರಿ, ಯಕ್ಷ ಮಿತ್ರರ ಬಳಗದ ಕರಿಯ ದೇವಾಡಿಗ, ಅಣ್ಣಯ್ಯ ದೇವಾಡಿಗ ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೂ ಮೊದಲು ಸಾಸ್ತಾನ ಗೋಳಿಗರಡಿ ದೈವಸ್ಥಾನದಿಂದ ಅದ್ಧೂರಿಯ ಚಂಡೆ, ಕೀಲು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟ ಗ್ರಾಮಪಂಚಾಯತ್ನ ಘನ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉಮೇಶ್ ಹಾಗೂ ಘಟಕದ ಮುಖ್ಯಸ್ಥೆ ಭವ್ಯ ಇವರೊಂದಿಗೆ ಕಸ ವಿಲೇವಾರಿ ಹಾಗೂ ವಿಂಗಡನಾ ಕ್ರಮಗಳ ಕುರಿತು ಚರ್ಚಿಸಿ ಅಲ್ಲಿನ ಸಿಬ್ಬಂದಿಗಳ ಕಾರ್ಯವೈಕರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ವೇಳೆ ಪಂಚಾಯತ್ ಆಡಳಿತಾಧಿಕಾರಿ ಪ್ರತಾಪಚಂದ್ರ ಶೆಟ್ಟಿ, ಮಾಜಿ ಸದಸ್ಯರು, ಸಂಸದರ ಆಪ್ತ ಕಾರ್ಯದರ್ಶಿ ಹರೀಷ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಹರ್ತಟ್ಟು ಯುವಕ ಮಂಡಲ ಕೋಟ 6ನೇ ವರ್ಷದ ಕಾರ್ಯಕ್ರಮದ ಅಂಗವಾಗಿ ಕೋಟ ಸಿ.ಎ. ಬ್ಯಾಂಕ್ ಹಿಂಭಾಗ ಪ್ರದೇಶದಲ್ಲಿ ಬುಧವಾರ ವೇ.ಮೂ ಜನಾರ್ದನ ಅಡಿಗ ಸಾಲಿಗ್ರಾಮ ಮತ್ತು ಮಿಥುನ್ ಅಡಿಗ ಅವರ ನೇತೃತ್ವದಲ್ಲಿ ಲೋಕಕಲ್ಯಾಣಾರ್ಥವಾಗಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಶ್ರೀ ಲಕ್ಷ್ಮೀ ನಾರಾಯಣ ಹೃದಯ ಹೋಮ ಸತ್ಯನಾರಾಯಣ ಕಥಾಶ್ರವಣ ಸಂಪನ್ನಗೊಂಡಿತು. ಈ ಹಿನ್ನಲ್ಲೆಯಲ್ಲಿ ಸಾವಿರಾರು ಜನ ಅನ್ನಸಂತರ್ಪಣೆಯಲ್ಲಿ ಭಾಗಿಯಾದರಲ್ಲದೆ ರಾತ್ರಿ ನಡೆದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಅವರ ಗಾನ ಸಾರಥ್ಯದ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ, ಶ್ರೀ ಕ್ಷೇತ್ರ ಪಾವಂಜೆ ಮೇಳದವರಿಂದ ಅದ್ಧೂರಿಯ ಯಕ್ಷಗಾನ ಬಪ್ಪನಾಡು ಕ್ಷೇತ್ರ ಮಹಾತ್ಮ ಯಕ್ಷಗಾನ ಪ್ರದರ್ಶನವನ್ನು ಕಣ್ತುಂಬಿಕೊಂಡರು. ಅಪರಾಹ್ನ ರಾಮಾಮೃತ ಭಗವತ್ ಭಜನಾ ಮಂಡಳಿ ಕೋಟ ರಾಮ ಸಂಕೀರ್ತನೆ, ರಾತ್ರಿ ಪಟ್ಲ ಫೌಂಡೇಶನ್ ಪ್ರವರ್ತಕ ಪಟ್ಲ ಸತೀಶ್ ಶೆಟ್ಟಿ ಅವರನ್ನು ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷ ಮಹೇಂದ್ರ ಪೂಜಾರಿ, ಪ್ರಮುಖರಾದ ಕೀರ್ತಿಶ ಪೂಜಾರಿ, ತಿಮ್ಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕತಾರ್: ಫೆಬ್ರವರಿ 28, 2026ರ ಮಧ್ಯಾಹ್ನದಿಂದ ಅಮೆರಿಕ ಹಾಗೂ ಇಸ್ರೇಲ್ ದೇಶಗಳು ಇರಾನ್ ದೇಶದ ಮೇಲೆ ಯುದ್ಧ ಪ್ರಾರಂಭಿಸಿದ ಪರಿಣಾಮವಾಗಿ ಇರಾನ್ ದೇಶವು ಕೊಲ್ಲಿದೇಶಗಳಲ್ಲಿರುವ ಅಮೆರಿಕದ ವಾಯುನೆಲೆಗಳ ಮೇಲೆ ಪ್ರತಿ ದಾಳಿ ನಡೆಸುತ್ತಿರುವುದು ಎಲ್ಲರಿಗೂ ತಿಳಿದ ವಿಚಾರ. ಇಲ್ಲಿ ನೆಲೆಸಿರುವ ಭಾರತೀಯರಲ್ಲಿ, ಕನ್ನಡಿಗರಾಗಲಿ ಹಾಗೂ ಅವರ ಕುಟುಂಬದ ಸದಸ್ಯರು ಭಾರತದಲ್ಲಿರುವ ಸಂಬಂಧಿಕರು ಸ್ನೇಹಿತರು ಯಾವುದೇ ರೀತಿಯ ಆತಂಕಕ್ಕೊಳಗಾಗದೆ, ಅಂತರರಾಷ್ಟ್ರೀಯ ಮಟ್ಟದಲ್ಲಿ ಪರಿಸ್ಥಿತಿಯು ಸಾಮಾನ್ಯ ರೀತಿ ಬರುವವರೆಗೆ ತಾಳ್ಮೆಯಿಂದ ಇರಲು ಕೋರಲಾಗುತ್ತಿದೆ ಎಂದು ಕತಾರ್ನ ಐ.ಸಿ.ಬಿ.ಎಫ್. ಮಾಜಿ ಜಂಟಿ ಕಾರ್ಯದರ್ಶಿ, ಭಾರತೀಯ ಸ್ಪೋರ್ಟ್ಸ್ ಸೆಂಟರ್ ಸಲಹಾ ಸಮಿತಿ ಸದಸ್ಯ ಸುಬ್ರಹ್ಮಣ್ಯ ಹೆಬ್ಬಾಗಿಲು ತಿಳಿಸಿದ್ದಾರೆ. ಕತಾರಿನ ದೋಹಾದಲ್ಲಿರುವ ಜನಸಾಮಾನ್ಯರಿಗೆ, ಸ್ಥಳೀಯ ಸಂಘ-ಸಂಸ್ಥೆಗಳು ಹಾಗೂ ಕತಾರ್ ದೇಶದ ಆಂತರಿಕ ಮಂತ್ರಾಲಯಗಳು ಸೂಚನೆಗಳನ್ನು ನೀಡುತ್ತಿವೆ. 01ಮಾರ್ಚ್ 2026ರಿಂದ ವೈದ್ಯಕೀಯ ಹಾಗೂ ನಾಗರೀಕ ಸರಬರಾಜು ಸೇವೆಗಳನ್ನು ಹೊರತುಪಡಿಸಿ ಇನ್ನು ಯಾವುದೇ ಮತ್ತಿತರ ಸಂಸ್ಥೆಗಳು ಹಾಗೂ ಶಾಲೆಗಳು ಮುಖಾಮುಖಿ ಚಟುವಟಿಕೆಗಳನ್ನು ನಡೆಸುತ್ತಿಲ್ಲ. ಕರೋನ ಮಹಾಮಾರಿಯು ತಾಂಡವವಾಡುತ್ತಿದ್ದ ಕಾಲಾದಂತೆ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ ಘಟಕ ಸಂಯುಕ್ತ ಆಶ್ರಯದಲ್ಲಿ ಕ್ಯಾಂಪಸ್ ನೇಮಕಾತಿ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಶ್ರೀ ಸಾಯಿ ಮ್ಯಾನ್ ಪವರ್ ಸಪೊರ್ಟ್ ಸರ್ವಿಸಸ್ ಇದರ ಹೆಚ್. ಆರ್. ಆದ ಗುರುಮೂರ್ತಿ ಮಾತನಾಡಿ, ಆಧುನಿಕ ಜಗತ್ತಿನಲ್ಲಿ ತಂತ್ರಜ್ಞಾನಕ್ಕೆ ಹೆಚ್ಚಿನ ಉದ್ಯೋಗ ಅವಕಾಶಗಳಿದ್ದು ಅದಕ್ಕೆ ಪೂರಕವಾದ ವೃತ್ತಿ ಕೌಶಲ್ಯಗಳನ್ನು ಬೆಳೆಸಿಕೊಂಡು ತಮ್ಮ ವೃತ್ತಿ ಬದುಕುಗಳನ್ನು ರೂಪಿಸಿಕೊಳ್ಳಬೇಕೆಂದು ಎಂದರು. ಕಾರ್ಯಕ್ರಮದಲ್ಲಿ ವಾಣಿಜ್ಯ ಘಟಕದ ಮುಖ್ಯಸ್ಥರಾದ ಡಾ. ರವಿಚಂದ್ರ, ಸಂದೀಪ ಕೆ. ಉಪಸ್ಥಿತರಿದ್ದರು. ರಾಜ್ಯಶಾಸ್ತ್ರ ಉಪನ್ಯಾಸಕ ಡಾ. ವಿಶ್ವನಾಥ ಆಚಾರ್ಯ ಕಾರ್ಯಕ್ರಮ ಸಂಯೋಜಿಸಿದರು. ಕಾಲೇಜಿನ ವಿದ್ಯಾಥಿಗಳು ವಿವಿಧ ಕಂಪನಿಗಳಾದ ಮದರಸನ್, ಟಯೋಟ, ಟಾಟಾ ಇಲೆಕ್ಟ್ರಾನಿಕ್ಸ್, ಪಾಕ್ಸ್ಕಾನ್ ಮೊದಲಾದ ಕಂಪನಿಗಳಲ್ಲಿ ಉದ್ಯೋಗ ಪ್ರಸ್ತಾಪ ಪತ್ರವನ್ನು ಪಡೆದಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅರಾಟೆ ಸೇತುವೆ ಬಳಿ, ಸೌಪರ್ಣಿಕಾ ನದಿಯಲ್ಲಿ ಮಳಿ ಚಿಪ್ಪು ಹೆಕ್ಕತ್ತಿದ್ದ ಯುವಕನೊಬ್ಬ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ವ್ತಕ್ತಿ ಹಂಗಳೂರಿನ ಚಂದ್ರ (39) ಎಂದು ಗುರುತಿಸಲಾಗಿದೆ. ಚಂದ್ರ ಹಾಗೂ ಅವರ ಭಾವ ಅಜಿತ್ ಅವರು ಅರಾಟೆ ಸೇತುವೆ ಬಳಿ ಮಳಿ ಹೆಕ್ಕಲು ಹೋಗಿದ್ದರು. ನೀರಿಗೆ ಇಳಿದ ಸ್ವಲ್ಪ ಸಮಯದ ನಂತರ ಚಂದ್ರ ಅವರು ಕಾಣದೇ ಇದ್ದು, ಹುಡುಕಾಟ ನಡೆಸಲಾಗಿದೆ. ಮರುದಿನ ಬೆಳಗ್ಗೆ ಆರಾಟೆ ಸೇತುವೆ ಬಳಿಯ ನದಿಯಲ್ಲಿ ಚಂದ್ರ ಅವರ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮಹಿಳೆ ಇಂದು ಸರ್ವಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದಾಳೆ ಅಲ್ಲದೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸ್ತ್ರೀ ಮಾನ್ಯತೆಯ ಸಮಾಜದ ಕೊಡುಗೆ ಅನನ್ಯ ಎಂದು ಉಪನ್ಯಾಸಕಿ, ಸಾಹಿತಿ ಪಾರ್ವತಿ ಐತಾಳ್ ಹೇಳಿದರು. ಅವರು ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಸಭಾಂಗಣದಲ್ಲಿ ವಿಪ್ರ ಮಹಿಳಾ ವಲಯ ಸಾಲಿಗ್ರಾಮ ಇವರ ಆಶ್ರಯದಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಹಿಳೆ ಮನೆಯ ಗಂಭೀರ ವಾತಾವರಣದಲ್ಲೂ ಹೊರ ಸಮಾಜದೊಂದಿಗೆ ಗುರುತಿಸಿಕೊಂಡಿದ್ದಾಳೆ. ಎಷ್ಟೆ ಸಂಕಷ್ಟದ ಸಮಯದಲ್ಲೂ ತಾನೇ ಹೊರೆ ಹೊತ್ತು ಸಂಸಾರವನ್ನು ಮುನ್ನೆಡೆಸುತ್ತಿದ್ದಾಳೆ. ಅಂತಹ ಮಹಿಳೆ ಸಮಾಜಕಟ್ಟುವ ಕಾಯಕಕ್ಕೂ ಸೈ ಎಸಿಕೊಂಡಿದ್ದಾಳೆ ಎಂದರು. ಈ ವೇಳೆ ಸಾಧಕ ಮಹಿಳೆ ಕೆ.ಎಂ.ಎಫ್ ಮಾಜಿ ನಿರ್ದೇಶಕಿ ಜಾನಕಿ ಹಂದೆ ಅವರನ್ನು ಗುರುತಿಸಿ ಗೌರವಿಸಲಾಯಿತು. ವಿಶೇಷವಾಗಿ ಮಹಾಲಿಂಗೇಶ್ವರ ವಿಪ್ರ ಮಹಿಳಾ ಭಜನಾ ಸಂಘವನ್ನು ಸನ್ಮಾನಿಸಲಾಯಿತು. ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಡಾ. ಕೆ.ಎಸ್. ಕಾರಂತ್ ಅವರಿಗೆ ಅಭಿನಂದನೆ ಸಲ್ಲಿಸಲಾಯಿತು. ಸಭೆಯ ಅಧ್ಯಕ್ಷತೆ ವಿಪ್ರ ಮಹಿಳಾ ವಲಯ ಸಾಲಿಗ್ರಾಮ ಅಧ್ಯಕ್ಷೆ ವನಿತಾ…
