ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ನಾಡ-ನುಡಿಯಾದ ಕನ್ನಡ ಭಾಷೆಯನ್ನು ಸರಕಾರಿ ಕಚೇರಿಗಳು ಸೇರಿದಂತೆ ಎಲ್ಲಾ ಖಾಸಗಿ, ವಾಣಿಜ್ಯ ಹಾಗೂ ಇತರೆ ಸಂಸ್ಥೆಗಳು ದೈನಂದಿನ ಕಾರ್ಯಚಟುವಟಿಕೆಗಳಲ್ಲಿ ಕಡ್ಡಾಯವಾಗಿ ಬಳಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ ನೀಡಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಪ್ರತಿಯೊಬ್ಬರೂ ಮಾತೃಭಾಷೆಯಾದ ಕನ್ನಡದ ಬಗ್ಗೆ ಅಭಿಮಾನ ಹೊಂದಿ, ದೈನಂದಿನ ಕಾರ್ಯಗಳಲ್ಲಿ ಹೆಚ್ಚಾಗಿ ಬಳಸಬೇಕು. ಜಿಲ್ಲೆಯಲ್ಲಿ ಉದ್ಯೋಗ ಅರಸಿ ಬಂದಿರುವ ಹೊರ ರಾಜ್ಯದ ಅನ್ಯ ಭಾಷಿಕರಿಗೂ ಸಹ ನಮ್ಮ ಭಾಷೆಯನ್ನು ಕಲಿಯಲು ಉತ್ತೇಜಿಸಬೇಕು ಎಂದ ಅವರು, ಎಲ್ಲಾ ಸರ್ಕಾರಿ ಕಚೇರಿಯ ಆಡಳಿತದಲ್ಲಿ ಕನ್ನಡ ಬಳಸಬೇಕು. ಆಡಳಿತದಲ್ಲಿ ಕನ್ನಡ ತಂತ್ರಾಶದ ಬಳಕೆಯನ್ನು ಅಳವಡಿಸಿಕೊಳ್ಳಬೇಕು ಎಂದರು. ರಾಜ್ಯದ ಸರ್ಕಾರಿ ಕಚೇರಿಗಳು, ವಾಣಿಜ್ಯ ಸಂಸ್ಥೆಗಳು, ಕೈಗಾರಿಕೆಗಳು, ಅಂಗಡಿ, ಹೋಟೆಲ್, ಶಾಲಾ-ಕಾಲೇಜು, ಪ್ರವಾಸೋದ್ಯಮ ಸೇರಿದಂತೆ ಮತ್ತಿತರ ಕಡೆಗಳಲ್ಲಿ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯವಾಗಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕೋಡಿ ಕನ್ಯಾಣ ಶನೀಶ್ವರ ದೇಗುಲದ ಸನಿಹದಲ್ಲಿ ಇದೇ ಡಿ.21ರ ಭಾನುವಾರ ತಿರುಪತಿಯ ಶ್ರೀ ದೇವಿ ಭೂದೇವಿ ಸಹಿತ ಶ್ರೀನಿವಾಸ ದೇವರಿಗೆ ಉಂಜಾಲೋತ್ಸವ ಸಹಿತ ಪುಷ್ಪಯಾಗ ಮಹೋತ್ಸವದ ಅಂಗವಾಗಿ ಸ್ಥಳೀಯ ಗ್ರಾಮಸ್ಥರ ಹೊರೆಕಾಣಿಕೆ ಸಮರ್ಪಣೆ ಗುರುವಾರ ನಡೆಯಿತು. ಕೋಡಿ ಶ್ರೀ ರಾಮದೇಗುಲದಲ್ಲಿ ಚಾಲನೆಗೊಂಡ ಹೊರೆಕಾಣಿಕೆಗೆ ಉದ್ಯಮಿ ಧನಂಜಯ ಅಮೀನ್ ಪೇತ್ರಿ ಅವರು ಚಾಲನೆ ನೀಡಿದರು. ಅಲ್ಲದೆ ಕೋಡಿ ಮಹಾಸತೀಶ್ವರಿ ದೇಗುಲದಿಂದ ಸುತ್ತಮುತ್ತಲಿನ ಪರಿಸರದ ಭಕ್ತಾಧಿಗಳು ಹೊರೆಕಾಣಿಕೆಯನ್ನು ಸಮರ್ಪಸಿದರು. ಈ ಸಂದರ್ಭದಲ್ಲಿ ಉಂಜಲೋತ್ಸವ ಸಮಿತಿಯ ಪದಾಧಿಕಾರಿಗಳು ಗ್ರಾಮಸ್ಥರು ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿ. ಉಪ್ಪುಂದ ಹಾಗೂ ರೈತ ಸಿರಿ, ರೈತ ಸೇವಾ ಒಕ್ಕೂಟ ಉಪ್ಪುಂದ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ರೈತರ ದಿನಾಚರಣೆ, ಹಿರಿಯ ರೈತರ ಸನ್ಮಾನ, ಸಾಧಕರಿಗೆ ರೈತಸಿರಿ ಗೌರವಾರ್ಪಣೆ ಹಾಗೂ ಹಾಲು ಉತ್ಪಾದಕರಿಗೆ ಪುರಸ್ಕಾರವು ಡಿ.23ರ ಮಂಗಳವಾರ ಅಪರಾಹ್ನ 3.00ಕ್ಕೆ ಉಪ್ಪುಂದದ ಸಂಘದ ರೈತಸಿರಿ ಸಭಾಭವನದಲ್ಲಿ ನಡೆಯಲಿದೆ. ರೈತರ ದಿನಾಚರಣೆಯ ಉದ್ಘಾಟನೆಯನ್ನು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ನೆರವೇರಿಸಲಿದ್ದಾರೆ. ಖಂಬದಕೋಣೆ ರೈ.ಸೇ.ಸ.ಸಂಘದ ಅಧ್ಯಕ್ಷರಾದ ಎಸ್. ಪ್ರಕಾಶ್ವಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿ. ಮಾಜಿ ನಿರ್ದೇಶಕ ಹಾಗೂ ಪ್ರಗತಿಪರ ಕೃಷಿಕರು ಮತ್ತು ಹಿರಿಯ ಸದಸ್ಯರಾದ ದೀಟಿ ಸೀತಾರಾಮ ಮಯ್ಯ ಅವರಿಗೆ ಸನ್ಮಾನ ಕಾರ್ಯಕ್ರಮಗಳು ನಡೆಯಲಿದೆ. ಈ ವೇಳೆ ವಿವಿಧ ಅತಿಥಿ ಗಣ್ಯರು, ಸಂಘದ ನಿರ್ದೇಶಕರುಗಳು ಉಪಸ್ಥಿತರಿರಲಿದ್ದಾರೆ. ಅಂದು ಮಧ್ಯಾಹ್ನ ಗಂಟೆ 2.00ರಿಂದ ಪ್ರಸಿದ್ದ ಕಲಾವಿದರ ಕೊಡುವಿಕೆಯಿಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಪ್ರಸಿದ್ಧ ದೇಗುಲ ಕೋಟದ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇವಸ್ಥಾನ ಇದರ ವಾರ್ಷಿಕ ಜಾತ್ರೆ ಬರುವ ಜನವರಿ 10 ಮತ್ತು 11ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಶ್ರೀ ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಆನಂದ್ ಸಿ. ಕುಂದರ್ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿ, ಪ್ರತಿ ವರ್ಷ ಸಾವಿರಾರು ಮಂದಿ ಶ್ರೀ ಕ್ಷೇತ್ರದ ಗೆಂಡೋತ್ಸವ ಹಾಗೂ ತುಲಾಭಾರ ಸೇವೆಯಲ್ಲಿ ಪಾಲ್ಗೊಳ್ಳುತ್ತಿದ್ದು ಜಾತ್ರೆಯನ್ನುಶ್ರದ್ಧಾ ಭಕ್ತಿಯಿಂದ ಯಶಸ್ವಿಗೊಳಿಸುತ್ತಿದ್ದಾರೆ ಅದೇ ರೀತಿಯಲ್ಲಿ ಈ ಬಾರಿ ಜಾತ್ರೆಯನ್ನು ಯಶಸ್ವಿಗೊಳಿಸಲು ಭಕ್ತಾಧಿಗಳಲ್ಲಿ ಮನವಿ ಮಾಡಿದರು. ದೇಗುಲದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಸುಭಾಷ್ ಶೆಟ್ಟಿ, ಗಣೇಶ್ ನೆಲ್ಲಿಬೆಟ್ಟು, ಜ್ಯೋತಿ ಡಿ. ಕಾಂಚನ್, ಸುಬ್ರಾಯ ಜೋಗಿ, ಅರ್ಚಕ ಪ್ರತಿನಿಧಿ ಕೃಷ್ಣ ಜೋಗಿ, ಉದಯ್ ಜೋಗಿ, ಕೋಟ ಪಂಚಾಯತ್ ಸದಸ್ಯ ಭುಜಂಗ ಗುರಿಕಾರ, ಸ್ಥಳೀಯರಾದ ದೇವದಾಸ್ ಕಾಂಚನ್, ಜೀವನ್ ಕದ್ರಿಕಟ್ಟು, ಶೇವಧಿ ಸುರೇಶ್ ಗಾಣಿಗ, ದೇಗುಲದ ವ್ಯವಸ್ಥಾಪಕ ಗಣೇಶ್ ಹೊಳ್ಳ ಇದ್ದರು. ಕಾರ್ಯಕ್ರಮವನ್ನು ವ್ಯವಸ್ಥಾಪನಾ ಸಮಿತಿಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದುಶ್ಚಟಗಳಿಗೆ ಬಲಿಯಾದವರು ಜೀವನದಲ್ಲಿ ಎಂದಿಗೂ ಉದ್ಧಾರ ಆಗಲು ಸಾಧ್ಯವಿಲ್ಲ. ಸಹವಾಸ ದೋಷ ಮತ್ತಿತರ ಕಾರಣಗಳಿಂದ ಯುವಕ ಯುವತಿಯರು ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ಕ್ಷಣಿಕ ಸುಖಕ್ಕಾಗಿ ಮಾದಕ ದ್ರವ್ಯಗಳನ್ನು ಸೇವಿಸಿ ತಮ್ಮ ಜೀವನವನ್ನೇ ಹಾಳು ಮಾಡಿಕೊಳ್ಳುತ್ತಿದ್ದು, ಮಾದಕ ದ್ರವ್ಯ ಸೇವನೆಯಿಂದ ನಮ್ಮ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ಯುವ ಜನಾಂಗಕ್ಕೆ ಅರಿವು ಮೂಡಿಸಬೇಕಿದೆ. ಯುವ ಜನಾಂಗ ಇಂತಹ ದುಶ್ಚಟಗಳಿಗೆ ಬಲಿಯಾಗದಂತೆ ಎಚ್ಚರ ವಹಿಸಿಬೇಕು ಎಂದು ಬೈಂದೂರು ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಸುಧಾಕರ ಆಚಾರ್ಯ ತ್ರಾಸಿ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬೈಂದೂರು ತಾಲೂಕು, ಜನಜಾಗೃತಿ ವೇದಿಕೆ ತ್ರಾಸಿ ವಲಯ ಇದರ ಆಶ್ರಯದಲ್ಲಿ ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ಸಹಕಾರದೊಂದಿಗೆ ಗಂಗೊಳ್ಳಿ ಎಸ್.ವಿ. ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು. ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎಸ್.ವಿ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಿಕ್ಷಣ ಕ್ಷೇತ್ರದ ಮಹೋನ್ನತ ಗುರಿಯೊಂದಿಗೆ ಏಳು ಜನ ಅತ್ಯಂತ ಅನುಭವಿ ಉಪನ್ಯಾಸಕರುಗಳೇ ಸೇರಿ ಸ್ಥಾಪಿಸಿದ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ 2022ರಲ್ಲಿ ತನ್ನ ಶಿಕ್ಷಣ ಸೇವೆಯನ್ನು ಉಡುಪಿಗೂ ವಿಸ್ತರಿಸುವ ಯೋಜನೆಯೊಂದಿಗೆ ಕಲ್ಯಾಣಪುರದ ತ್ರಿಶಾ ಪಪೂ. ಕಾಲೇಜಿನ ಶೈಕ್ಷಣಿಕ ಸಹಭಾಗಿತ್ವ ವಹಿಸಿಕೊಂಡಿತು. ಈಗಾಗಲೇ ಪಿ.ಯು ಫಲಿತಾಂಶದಲ್ಲಿ ಆರಂಭಿಕ ವರ್ಷದಲ್ಲೇ ರಾಜ್ಯದ ಗಮನ ಸೆಳೆದ ಕ್ರಿಯೇಟಿವ್ ಸಂಸ್ಥೆ ಉಡುಪಿಯ ಶಾಖೆಯಲ್ಲೂ ಆ ಯಶಸ್ಸನ್ನು ಮುಂದುವರೆಸಿದೆ. ತನ್ನ ಪ್ರಥಮ ವರ್ಷದ ಫಲಿತಾಂಶದಲ್ಲೇ 100% ಗಳಿಸುವುದರ ಜೊತೆಗೆ ಪಿ.ಯು ಪರೀಕ್ಷೆಯಲ್ಲಿ ರಾಜ್ಯಕ್ಕೆ 8ನೇ ರ್ಯಾಂಕ್‌ಗಳಿಸುವ ಮೂಲಕ ಸಂಸ್ಥೆ ಕೀರ್ತಿ ಗಳಿಸಿದೆ. 94 ಮಕ್ಕಳೊಂದಿಗೆ ಪ್ರಾರಂಭವಾದ ವಿದ್ಯಾಸಂಸ್ಥೆಯಲ್ಲಿ ಇಂದು 400ಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳಲ್ಲಿ ಕೇವಲ ಅಂಕ ಗಳಿಕೆಯ ಹಸಿವನ್ನು ಮಾತ್ರ ಬೆಳೆಸದೆ ಜೀವನ ಮೌಲ್ಯಗಳು, ನೈತಿಕತೆ, ಸದ್ವಿಚಾರಗಳನ್ನು ಪ್ರತಿನಿತ್ಯ ಬೋಧಿಸುತ್ತಿರುವುದು ಸಂಸ್ಥೆಯು ಗುಣಮಟ್ಟದ ಶಿಕ್ಷಣಕ್ಕೆ ಸಾಕ್ಷಿಯಾಗಿದೆ. ಉಡುಪಿಯಲ್ಲಿ ಕ್ರಿಯೇಟಿವ್ ಸಂಸ್ಥೆಯ ಯಶಸ್ಸಿನ ಪಯಣ ಅತೀ ಹೆಚ್ಚು ವಿದ್ಯಾರ್ಥಿಗಳು ಸರ್ಕಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಕ್ಲಾಟ್ ಒಕ್ಕೂಟವು ನಡೆಸಿದ ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ ಸಿಎಲ್‌ಎಟಿ 2025ರ ಫಲಿತಾಂಶದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಆಳ್ವಾಸ್‌ನ ದರ್ಶನ್ ಹೆಚ್‌ಜೆ, ಮಧು, ರಕ್ಷಾ ಕೆ., ರಾಜ್‌ದೀಪ್ ಎಸ್. ನಾಯಕ್, ಕುಂದನಿಕ ಗೌಡ, ಭೂಮಿ, ಗೌರಿ ಎಸ್. ಪಾಟೀಲ್, ಅರ್ವಿನ್, ಅನನ್ಯ ಡಿ, ಅನ್ನಾ ಲಹರಿ, ಮಿಥಾಲಿ ನಾಯ್ಕ ಕ್ಲಾಟ್ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ, ಪ್ರಾಚರ್ಯ, ಮಹಮ್ಮದ್ ಸದಾಕತ್, ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಮ್‌ಡಿ ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನ ಪದವಿ ವಿದ್ಯಾರ್ಥಿಗಳಿಗೆ ಕಾಲೇಜಿನ ಯೂತ್ ರೆಡ್ ಕ್ರಾಸ್ ಘಟಕ ಮತ್ತು ಜಿಲ್ಲಾ ಪಂಚಾಯತ್ ಉಡುಪಿ ರಾಷ್ಟ್ರೀಯ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮ, ಜಿಲ್ಲಾ ಆರೋಗ್ಯ ಕೇಂದ್ರ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಶ್ರೀ ಗಣೇಶ್ ದೇವಾಡಿಗ ಉಪ್ಪುಂದ, ಶ್ರೀ ಶಾರದಾಂಬ ಟ್ರಸ್ಟ್ ರಿ. ತೊಂಡೆಮಕ್ಕಿ ಇವರಿಂದ ಜಾನಪದ ಕಲಾ ಪ್ರಕಾರ ದಡಿಯಲ್ಲಿ ಯಕ್ಷಗಾನದ ಮೂಲಕ ಆರೋಗ್ಯ ಜಾಗೃತಿ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ, ಪ್ರಾಥಮಿಕ ಆರೋಗ್ಯ ಕೇಂದ್ರ ಬಸ್ರೂರಿನ ಸಿಬ್ಬಂದಿಗಳು, ಕಾಲೇಜಿನ ಬೋಧಕ, ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾಲೇಜಿನ ರೆಡ್ ಕ್ರಾಸ್ ಘಟಕದ ಸಂಯೋಜಕರಾದ ಮುರಳೀಧರ ಹೆಗ್ಡೆ ಕಾರ್ಯಕ್ರಮ ನಿರ್ವಹಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ. ರಾಘವೇಂದ್ರ ಅವರು ಕರ್ನಾಟಕದಲ್ಲಿ ಅಂಚೆ ಕಚೇರಿಗಳು ವಹಿಸುತ್ತಿರುವ ಮಹತ್ವದ ಪಾತ್ರ, ಹಣಕಾಸು ಒಳಗೊಳ್ಳುವಿಕೆ ಹಾಗೂ ಗ್ರಾಮೀಣ ಸೇವಾ ವಿತರಣೆ ಕುರಿತು ಲೋಕಸಭೆಯಲ್ಲಿ ಪ್ರಶ್ನೆ ಮಾಡಿದ್ದಾರೆ. ಅಂಚೆ ಕಚೇರಿಗಳ ಮೂಲಕ ಬ್ಯಾಂಕಿಂಗ್, ಡೈರೆಕ್ಟ್ ಬೆನಿಫಿಟ್ ಟ್ರಾನ್ಸ್ಫರ್ (DBT), ಡಿಜಿಟಲ್ ಸೇವೆಗಳು ಹಾಗೂ ಲಾಸ್ಟ್–ಮೈಲ್ ಡೆಲಿವರಿ ಬಲಪಡಿಸುವ ಕುರಿತು ಅವರು ಸರ್ಕಾರದ ಗಮನ ಸೆಳೆದಿದ್ದಾರೆ. ಈ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಂವಹನ ಸಚಿವಾಲಯದ ರಾಜ್ಯ ಸಚಿವರು, ಕರ್ನಾಟಕದಲ್ಲಿ ಅಂಚೆ ಕಚೇರಿಗಳು ಮತ್ತು ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ಮೂಲಕ ಹಣಕಾಸು ಒಳಗೊಳ್ಳುವಿಕೆ ಮತ್ತು ಗ್ರಾಮೀಣ ಆರ್ಥಿಕ ಚಟುವಟಿಕೆಗಳು ಬಲಪಡಿಸಲಾಗುತ್ತಿವೆ ಎಂದು ಸದನಕ್ಕೆ ತಿಳಿಸಿದರು. ಕಳೆದ ಐದು ವರ್ಷಗಳಲ್ಲಿ ರಾಜ್ಯದಲ್ಲಿ 48.5 ಲಕ್ಷಕ್ಕೂ ಹೆಚ್ಚು IPPB ಖಾತೆಗಳು ತೆರೆಯಲ್ಪಟ್ಟಿದ್ದು, 28,000 ಕೋಟಿಗೂ ಅಧಿಕ ಮೊತ್ತದ 23 ಕೋಟಿ ಡಿಬಿಟಿ ವ್ಯವಹಾರಗಳು ಅಂಚೆ ಕಚೇರಿಗಳ ಮೂಲಕ ನೆರವೇರಿವೆ ಎಂದು ಸಚಿವರು ವಿವರಿಸಿದರು. ರಾಜ್ಯದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಪ್ರತಿಯೊಂದು ಮಗುವಿನ ಹಕ್ಕು ಆಗಿದೆ. ಮಗುವಿಗೆ ಅವಶ್ಯವಿರುವ ಪ್ರೀತಿ ಮತ್ತು ಆರೈಕೆಯನ್ನು ಕುಟುಂಬದ ವಾತಾವರಣವು ಕಲ್ಪಿಸುತ್ತದೆ. ದತ್ತು ಪ್ರಕ್ರಿಯೆ ಕಾನೂನು ಬದ್ಧವಾಗಿ ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ತಿದ್ದುಪಡಿ ಕಾಯಿದೆ 2021ರ ಸೆಕ್ಷನ್ 56 (1) 58 ಮತ್ತು 61ರ ಅಡಿಯಲ್ಲಿ ಕುಟುಂಬದ ಪ್ರೀತಿ ವಂಚಿತ, ಪೋಷಕರನ್ನು ಕಳೆದುಕೊಂಡ, ಪಾಲನೆ ಪೋಷಣೆ ವಂಚಿತ ಪರಿತ್ಯಕ್ತ ಹಾಗೂ ನಿರ್ಗತಿಕ ಮಕ್ಕಳು ಮಾತ್ರ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯಿಂದ ದತ್ತು ಮುಕ್ತ ಆದೇಶ ಪಡೆದು ದತ್ತು ನೀಡಲು ಅರ್ಹರಾಗಿರುತ್ತಾರೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದರು. ಅವರು ಇತ್ತೀಚೆಗೆ ಮಣಿಪಾಲ ರಜತಾದ್ರಿಯ ತಮ್ಮ ಕಚೇರಿಯಲ್ಲಿ ತಮಿಳುನಾಡು ಮೂಲದ ಇಬ್ಬರು ದಂಪತಿಗಳಿಗೆ ಹಾಗೂ ಹಾಸನ ಮೂಲದ ಓರ್ವ ದಂಪತಿಗಳಿಗೆ ಒಟ್ಟು ಮೂರು ಮಕ್ಕಳ ಅಂತಿಮ ದತ್ತು ಆದೇಶ ನೀಡಿ, ಮಾತನಾಡಿದರು. ದತ್ತು ಪಡೆಯಲು ಇಚ್ಛಿಸುವ ದಂಪತಿಗಳು ಕಾನೂನು ಬದ್ಧವಾಗಿ ದತ್ತು ಪ್ರಕ್ರಿಯೆ ಮೂಲಕ ದತ್ತು…
