Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2026-27 ನೇ ಶೈಕ್ಷಣಿಕ ಸಾಲಿನಲ್ಲಿ ಪ್ರತಿಷ್ಠಿತ ಶಾಲೆ ಯೋಜನೆಯಡಿ ಜಿಲ್ಲಾ ವ್ಯಾಪ್ತಿಯಲ್ಲಿನ ಪ್ರತಿಷ್ಠಿತ ಶಾಲೆಗಳಲ್ಲಿ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಅರ್ಹ ಪರೀಕ್ಷೆಯ ಮೂಲಕ ಪ್ರವೇಶಾವಕಾಶ ಕಲ್ಪಿಸಲು ಅರ್ಹ ವಿದ್ಯಾರ್ಥಿಗಳಿಂದ ವೆಬ್‌ಸೈಟ್ www.sw.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು 2026 ರ ಏಪ್ರಿಲ್ 15 ರಿಂದ ಮೇ 4ರ ವರೆಗೆ ಕಾಲಾವಕಾಶ ಕಲ್ಪಿಸಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಒಂದು ವಾರದ ಒಳಗಾಗಿ ಅರ್ಜಿಯನ್ನು ಹಾಗೂ ಸಂಬಂಧಿಸಿದ ದಾಖಲಾತಿಗಳನ್ನು ಉಪ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ ಇಲ್ಲಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0820-2574892 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಇಂದಿನಿಂದ ಜೂನ್‌ನ ಮುಂಗಾರು ಮಳೆ ಆರಂಭ ಆಗುವವರೆಗೆ ಜನರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಸೂಚನೆ ನೀಡಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಪ್ರಸ್ತುತ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಪ್ರದೇಶಗಳಲ್ಲಿ ಯಾವುದೇ ರೀತಿಯ ಕುಡಿಯುವ ನೀರಿನ ಸಮಸ್ಯೆ ಇರುವುದಿಲ್ಲ. ತಾಲೂಕು ವಾರು ನೀಡಿರುವ ವರದಿ ಆನ್ವಯ ಮುಂದಿನ ಮೇ.15ರ ವರೆಗೆ ನೀರಿನ ಸಮಸ್ಯೆ ಉಂಟಾಗುವುದಿಲ್ಲ, ಆದರೂ ಸಹ ಈಗಿನಿಂದಲೇ ಕುಡಿಯುವ ನೀರಿನ ಸಮಸ್ಯೆ ಉಂಟಾದಾಗ ನೀರನ್ನು ಸರಬರಾಜಿಗೆ ಯೋಜನೆ ರೂಪಿಸಿಕೊಳ್ಳಬೇಕು ಎಂದು ತಾಲೂಕು ತಹಶೀಲ್ದಾರ್ ಗಳು, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಹಾಗೂ ಸ್ಥಳೀಯ ಸಂಸ್ಥೆಯ ಮುಖ್ಯಸ್ಥರಿಗೆ ಸೂಚನೆ ನೀಡಿದರು. ಮುಂಬರುವ ದಿನಗಳಲ್ಲಿ ಕಾರ್ಕಳದ 14,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿಧಾನಸಭಾ ಕ್ಷೇತ್ರದಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಎದುರಾಗದಂತೆ ಕ್ರಮ ವಹಿಸಿ ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಸೂಚನೆ ನೀಡಿದರು. ಅವರು ಬಿಸಿಲು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಯಾವುದೇ ಸಮಸ್ಯೆ ಎದುರಾಗದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳಬೇಕು. ಗ್ರಾಮೀಣ ಭಾಗದಲ್ಲೂ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಪಿಡಿಒಗಳು ನೋಡಿಕೊಳ್ಳಬೇಕು ಎಂದು ಹೇಳಿದರು. ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯಿತಿಗಳ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು. ಯಾವುದೇ ಹಳ್ಳಿ ಜನರು ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕ್ರಮ ವಹಿಸಿ ಎಂದರು. ವೇದಿಕೆಯಲ್ಲಿ ಮೂರು ತಾಲೂಕಿನ ತಹಶೀಲ್ದಾರರು, ತಾಲೂಕು ಪಂಚಾಯತ್ ಕಾರ್ಯನಿರ್ವಣಧಿಕಾರಿಯವರು, ತಾಲೂಕ್ ಪಂಚಾಯತಿನ ಅಧಿಕಾರಿಗಳು , ಗ್ರಾಮ ಪಂಚಾಯತಿನ ಅಭಿವೃದ್ಧಿ ಅಧಿಕಾರಿಗಳು, ಗ್ರಾಮಕರಣಿಕರು, ಹಾಗೂ ಪಂಚಾಯತ್ ಕುಡಿಯುವ ನೀರಿನ ಯೋಜನೆಯ ಸಂಬಂಧಪಟ್ಟ ಅಧಿಕಾರಿಗಳು, ಟಾಸ್ಕ್ ಫೋರ್ಸ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಮನೆಯ ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಹಾಡಹಗಲೇ ದೋಚಿ ಪರಾರಿಯಾದ ಘಟನೆ ತಾಲೂಕಿನ ಪಡುವರಿ ಗ್ರಾಮದಲ್ಲಿ ಗುರುವಾರ ಬೆಳಗಿನ ಸಮಯದಲ್ಲಿ ನಡೆದಿದೆ. ಪಡುವರಿಯ ಪರಮೇಶ್ವರ ಪಟವಾಲ್ ಅವರ ಮನೆಗೆ ನುಗ್ಗಿದ ಕಳ್ಳರು ಗೊಡ್ರೇಜ್‌‌ನಲ್ಲಿ ಇರಿಸಿದ ಒಟ್ಟು ಸುಮಾರು 63 ಗ್ರಾಂ ತೂಕದ ಸುಮಾರು 5 ಲಕ್ಷ ಮೌಲ್ಯದ ಚಿನ್ನದ ಚೈನ್‌ ರಿಂಗ್‌ ಕೀ ಒಲೆ ಬ್ರಾಸ್‌ ಲೈಟ್‌ ಪೆಂಡೆಂಟ್‌ ಮತ್ತು ನಗದು ರೂ.20,000 ಕದ್ದು ಪರಾರಿಯಾಗಿದ್ದಾರೆ. ಪರಮೇಶ್ವರ ಪಟವಾಲ್ ಅವರ ಮನೆಯವರು ಕಾರ್ಯಕ್ರಮಕ್ಕೆ ತೆರಳಿದ್ದು, ಯಾರೂ ಇಲ್ಲದ್ದನ್ನು ಗಮನಿಸಿ ಮನೆಯ ಹಿಂಬದಿಯ ಮೂಲಕ ಒಳನುಗ್ಗಿ ಬಾಗಿಲು ಹಾಗೂ ಕಪಾಟು ಮುರಿದು ಕವಾಟಿನಲ್ಲಿದ್ದ ಚಿನ್ನಾಭರಣ – ನಗದು ಕದ್ದು ಪರಾರಿಯಾಗಿದ್ದಾರೆ ಎಂದು ಅಂದಾಜಿಸಲಗಿದೆ. ಬೈಂದೂರು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ತಂಡದೀದಮ ಪರಿಶೀಲನೆ ಮುಂದುವರಿದಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಅಂಪಾರು ಸಂಜಯ ಗಾಂಧಿ ಇಂಗ್ಲಿಷ್ ಮೀಡಿಯಂ ಸ್ಕೂಲ್, ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್ ರಿ. ಅಂಪಾರು ಹಾಗೂ ಆಚಾರ್ಯ ಅಕಾಡೆಮಿ ಸಿದ್ದಾಪುರ ಇವರ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೆಟಿಕ್ ಸ್ಪರ್ಧೆ – 2026  ಗುರುವಾರದಂದು ವಿದ್ಯಾದಾಯಿನಿ ಸಭಾಭವನದಲ್ಲಿ ವಿಜೃಂಭಣೆಯಿಂದ ನಡೆಯಿತು. ವಿವಿಧ ಹಂತಗಳಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಅನೇಕ ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಅಸಾಮಾನ್ಯ ಗಣಿತ ಸಾಮರ್ಥ್ಯವನ್ನು ಪ್ರದರ್ಶಿಸಿದರು. ಸ್ಪರ್ಧೆಯ ಬಳಿಕ ನಡೆದ ಬಹುಮಾನ ವಿತರಣಾ ಸಮಾರಂಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಂಪಾರು ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್ ರಿ. ಇದರ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ ಬಲಾಡಿ ವಹಿಸಿ, ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಮಾತನಾಡಿ, ಅಬಾಕಸ್ ಮತ್ತು ಮೆಂಟಲ್ ಅರಿತ್ಮೆಟಿಕ್ ತರಬೇತಿ ವಿದ್ಯಾರ್ಥಿಗಳಲ್ಲಿ ವೇಗವಾದ ಚಿಂತನೆ ಹಾಗೂ ಆತ್ಮವಿಶ್ವಾಸವನ್ನು ಬೆಳೆಸುತ್ತದೆ. ಇಂತಹ ಸ್ಪರ್ಧೆಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಿ ಉತ್ತೇಜಿಸಲು ಮಹತ್ತರ ವೇದಿಕೆಯಾಗಿವೆ ಎಂದು ಹೇಳಿದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೊಲ್ಲೂರು: ಶ್ರೀಮೂಕಾಂಬಿಕಾ ದೇವಸ್ಥಾನದ ಮನ್ಮಹಾರಥೋತ್ಸವದ ಅಂಗವಾಗಿ ನಾನಾ ಧಾರ್ಮಿಕ ಮತ್ತು ಸಾಂಸ್ಕೃತಿಕ ಉತ್ಸವಕ್ಕೆ ಗುರುವಾರ ಚಾಲನೆ ನೀಡಲಾಯಿತು. ಬೆಳಗ್ಗೆ 7.30ಕ್ಕೆ ಗಣಪತಿ ಪ್ರಾರ್ಥನೆ, ಅಂಕುರಾವಾಸ, ಸಿಂಹಯಾಗ ಧಾರ್ಮಿಕ ವಿಧಿಯ ಬಳಿಕ ವೃಷಭಲಗ್ನ ಸುಮೂಹರ್ತದಲ್ಲಿ ಧ್ವಜಾರೋಹಣ ನೆರವೇರಿಸಿ ಮನ್ಮಹಾರಥೋತ್ಸವದ ಉತ್ಸವಾದಿಗಳಿಗೆ ಚಾಲನೆ ನೀಡಲಾಯಿತು. ದೇವಳದ ತಂತ್ರಿ, ವ್ಯವಸ್ಥಾಪನಾ ಸಮಿತಿ ಸದಸ್ಯ ನಿತ್ಯಾನಂದ ಅಡಿಗ ಧಾರ್ಮಿಕ ವಿಧಿ ನೆರವೇರಿಸಿದರು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಬು ಶೆಟ್ಟಿ, ಸದಸ್ಯರಾದ ಧನಾಕ್ಷಿ, ಸುರೇಂದ್ರ ಶೆಟ್ಟಿ ಉಪ್ಪಿನಕುದ್ರು ರಾಜೇಶ್ ಕಾರಂತ, ಮಹಾಲಿಂಗ ನಾಯ್, ಸುಧಾ ಕೆ., ಅಭಿಲಾಷ್, ರಘು ರಾಮ ದೇವಾಡಿಗ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್‌ ಶೆಟ್ಟಿ ಉಪಸ್ಥಿತರಿದ್ದರು. ಮಾ.12ರಂದು ಮನ್ಮಹಾರಥೋತ್ಸವ:ಮಾ.6ರಿಂದ ಮಾ.14ರ ತನಕ ಪ್ರತಿದಿನ ಸಂಜೆ ನಾನಾ ಉತ್ಸಾವಾದಿಗಳು ನಡೆಯಲಿದ್ದು ಮಾ.12ರಂದು ಮನ್ಮಹಾರಥೋತ್ಸವ ಜರುಗಲಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಬೈಂದೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಡಿ. ದೇವರಾಜು ಅರಸು ಅಭಿವೃದ್ಧಿ ನಿಗಮ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದಡಿ ವಿವಿಧ ಸ್ವ ಉದ್ಯೋಗ ಯೋಜನೆಗಳಡಿ ಆಯ್ಕೆಯಾದ ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳನ್ನು ವಿತರಿಸಿದರು. ಬಳಿಕ ಮಾತನಾಡಿದ ಅವರು ಯೋಜನೆಗಳಡಿ ಆಯ್ಕೆಯಾದ ಫಲಾನುಭವಿಗಳು ಸ್ವಯಂ ಉದ್ಯೋಗ ಸೌಲಭ್ಯಗಳನ್ನು ಬಳಸಿಕೊಂಡು ಉದ್ಯೋಗದಾತರಾಗಿ ಇತರರಿಗೂ ಮಾದರಿಯಾಗಿ ಎಂದರು. ದೇವರಾಜು ಅರಸು ಅಭಿವೃದ್ಧಿ ನಿಗಮದಿಂದ ಟೈಲರಿಂಗ್ ಮೆಷಿನ್ ವಿತರಣೆ :ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಕ್ಷೇತ್ರದ ಸುಮಾರು 21 ಮಂದಿ ಮಹಿಳಾ ಫಲಾನುಭವಿಗಳಿಗೆ ಟೈಲರಿಂಗ್ ಮೆಷಿನ್ ನ್ನು ಶಾಸಕರು ವಿತರಿಸಿದರು. ಅಂಬೇಡ್ಕರ್ ನಿಗಮದಿಂದ ಸ್ವಯಂ ಉದ್ಯೋಗ ಮಂಜೂರಾತಿ ಪತ್ರ ವಿತರಣೆ :ಡಾ. ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಉದ್ಯಮ ಶೀಲತೆ ಯೋಜನೆಯಡಿಯಲ್ಲಿ ಆಯ್ಕೆಯಾದ 3 ಜನ ಫಲಾನುಭವಿಗಳಿಗೆ ರೂ.5 ಲಕ್ಷ ಮೊತ್ತದ ಸಾಲ ಸಹಾಯಧನ ಹಾಗೂ 07…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ರಂಗಭೂಮಿ ಕ್ಷೇತ್ರದಲ್ಲಿ ಲಾವಣ್ಯ ತನ್ನ ಪರಿಪೂರ್ಣ ಸಾಧನೆಯ ಮೂಲಕ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿದೆ. ಇಂದಿನ ಕಾಲಘಟ್ಟಕ್ಕೆ ತಕ್ಕಂತೆ ಅನೇಕ ಬದಲಾವಣೆಗಳಿಗೆ ಒಗ್ಗಿಕೊಂಡು ಅಭಿನಯ, ನಾಟಕದ ಆಯ್ಕೆ ಜತೆಗೆ ಹೊಸ ಪ್ರಸ್ತುತಿಗಳನ್ನು ರಂಗಭೂಮಿಗೆ ನೀಡುತ್ತಿರುವುದು ಸಂಸ್ಥೆಯ ಹೆಗ್ಗಳಿಕೆಯಾಗಿದೆ ಎಂದು ನೃಪತುಂಗ ಹೋಟೆಲ್ಸ್ ಪ್ರೈ.ಲಿ. ರಾಯಚೂರು ಮಾಲಕರಾದ ಯು. ರಾಮಚಂದ್ರ ಪ್ರಭು ಹೇಳಿದರು. ಅವರು ಬುಧವಾರ ಇಲ್ಲಿನ ಶಾರದಾ ವೇದಿಕೆಯಲ್ಲಿ ನಡೆದ ಲಾವಣ್ಯದ ಸ್ಥಾಪಕಾಧ್ಯಕ್ಷ ದಿ ಉಪ್ಪುಂದ ಶ್ರೀನಿವಾಸ ಪ್ರಭು ಅವರ ಸ್ಮರಣಾರ್ಥ ಲಾವಣ್ಯ ರಿ. ಬೈಂದೂರು ಇದರ 49ನೇ ವಾರ್ಷಿಕೋತ್ಸವದ ಪ್ರಯುಕ್ತ ರಂಗಶ್ರೀ -ರಂಗಹಬ್ಬ -2026 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಲಾವಣ್ಯ ಸಂಸ್ಥೆ ಬೈಂದೂರಿನ ಸಾಂಸ್ಕೃತಿಕ ಹಿರಿಮೆಯನ್ನು ಜಗದಗಲ ಪಸರಿಸಿದ ಸಾಧನ ಹೊಂದಿದೆ ಹಾಗೂ ಬೈಂದೂರಿನಂತಹ ಗ್ರಾಮೀಣ ಭಾಗದಲ್ಲಿ ಲಾವಣ್ಯ ಸಂಸ್ಥೆ ಕಲಾಭೂಮಿಯನ್ನು ಬೆಳೆಸಿದ ಹಿರಿಮೆ ಬೈಂದೂರಿನ ಹೆಮ್ಮೆಯಾಗಿದೆ ಎಂದು ನೃಪತುಂಗ ಹೋಟೆಲ್ಸ್ ಪ್ರೈ ಲಿ ರಾಯಚೂರು ಮಾಲಕರಾದ ಯು ರಾಮಚಂದ್ರ ಪ್ರಭು ಹೇಳಿದರು. ಲಾವಣ್ಯ ಸಂಸ್ಥೆಯ ಅಧ್ಯಕ್ಷ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪುರಸಭೆಯ ಹಿಂದಿನ ಆಡಳಿತ ಮಂಡಳಿಯ ಸಾಮಾನ್ಯ ಸಭೆಯಲ್ಲಿ ಕುಂದಾಪುರ ಪೇಟೆಯಲ್ಲಿ ವಾಹನ ನಿಲುಗಡೆ ಮಾಡುವವರಿಗೆ ಪಾರ್ಕಿಂಗ್ ಶುಲ್ಕ ನಿಗದಿ ಮಾಡಿದ್ದನ್ನು ಈಗ ಆಡಳಿತ ಮಂಡಳಿಯ ಅಧಿಕಾರ ಮುಗಿದ ಮೇಲೆ ಹಿಂದಿನ ನಿರ್ಣಯವನ್ನು ಇಟ್ಟುಕೊಂಡು ಪುರಸಭಾ ಮುಖ್ಯಾಧಿಕಾರಿಗಳು ಪಾರ್ಕಿಂಗ್ ಶುಲ್ಕ ವಸೂಲಿಗೆ ಟೆಂಡರ್ ಕರೆದಿರುವುದು ಜನವಿರೋಧಿ ಕ್ರಮವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಹೇಳಿದರು. ಕುಂದಾಪುರ ಪುರಸಭೆ ಕಟ್ಟಡ ನಿರ್ಮಾಣದ ಪರವಾನಿಗೆ ನೀಡುವಾಗ ಪ್ರತಿಯೊಂದಕ್ಕೂ ತೆರಿಗೆ ಪಡೆದುಕೊಂಡು ಈಗ ಹೊಸದಾಗಿ ವಾಹನ ನಿಲುಗಡೆಗೆ ಶುಲ್ಕ ವಿಧಿಸಲು ಹೊರಟಿರುವುದು ಕಾನೂನು ವಿರೋಧಿ ಕ್ರಮವಾಗಿದೆ. ಇದರಿಂದ ವ್ಯಾಪಾರಸ್ಥರು, ಶುಲ್ಕ ವಸೂಲಿ ಟೆಂಡರ್ ಪಡೆದವರು ಮತ್ತು ವಾಹನ ಮಾಲಕರುಗಳ ನಡುವೆ ಅನಗತ್ಯ ವಾಗ್ವಾದಕ್ಕೆ ಎಡೆಮಾಡಿಕೊಡುತ್ತದೆ. ಪುರಸಭೆ ಪುರಸಭೆ ವ್ಯಾಪ್ತಿಯಲ್ಲಿ ಬಹುಮಹಡಿ ಪಾರ್ಕಿಂಗ್ ಕಟ್ಟಡ ನಿರ್ಮಾಣ ಮಾಡಿ ಪಾರ್ಕಿಂಗ್ ಸಮಸ್ಯೆ ಪರಿಹಾರ ಮಾಡಬೇಕು ಹಾಗೂ ಈಗಾಗಲೇ ವಾಹನ ಪಾರ್ಕಿಂಗ್ ಶುಲ್ಕ ವಸೂಲಿಗೆ ಕರೆದಿರುವ ಟೆಂಡರ್ ಪ್ರಕ್ರಿಯೆಗಳನ್ನು ಕೂಡಲೇ ನಿಲ್ಲಿಸಬೇಕು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಾತೃಸಂಸ್ಥೆ ಪಂಚವರ್ಣ ಯುವಕ ಮಂಡಲದ ಮಾರ್ಗದರ್ಶನದಲ್ಲಿ ಸ್ನೇಹಕೂಟ ಮಣೂರು ಇವರ ಸಹಯೋಗದೊಂದಿಗೆ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಇದೇ ಬರುವ ಮಾ.9ರ ಸೋಮವಾರ ಬೆಳಿಗ್ಗೆ 10.30ಕ್ಕೆ ಕೋಟದ ಪಂಚವರ್ಣ ಕಛೇರಿಯಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದೆ. ಪಂಚವರ್ಣ ಮಹಿಳಾ ಸಾಧಕ ಪುರಸ್ಕಾರಕ್ಕೆ ಜಿಲ್ಲೆಯ ಸಾಮಾಜಿಕ ಕಾರ್ಯಕರ್ತೆ ಸಾಸ್ತಾನ ಪಾಂಡೇಶ್ವರದ ಲೀಲಾವತಿ ಗಂಗಾಧರ್ ಆಯ್ಕೆಗೊಳಿಸಿದ್ದು ಗಣ್ಯರ ಸಮ್ಮುಖದಲ್ಲಿ ಈ ಪುರಸ್ಕಾರ ಪ್ರದಾನ ನಡೆಯಲಿದೆ ಎಂದು ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್, ಸ್ನೇಹಕೂಟದ ಭಾರತಿ ವಿ. ಮಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More