ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳಿಗೆ ಸ್ಥಳೀಯ ಭಾಷೆ, ಸಂಸ್ಕೃತಿ, ಆಚರಣೆ, ಆಹಾರ ಪದ್ಧತಿಗಳನ್ನು ತಿಳಿಸುವ ಪ್ರಯತ್ನ ಶ್ಲಾಘನೀಯವಾಗಿದ್ದು, ಸುಮಾರು 123 ಕುಂದಾಪುರದ ವಿಶೇಷ ಖಾದ್ಯಗಳನ್ನು ವಿದ್ಯಾರ್ಥಿಗಳು ಸ್ಪರ್ಧೆಯೊಂದಲ್ಲಿ ಪ್ರದರ್ಶಿಸಿದ್ದು ಸಂಸ್ಥೆಯ ಪ್ರೋತ್ಸಾಹದ ಪ್ರತೀಕ ಎಂದು ಕಂಡ್ಲೂರಿನ ನೇತಾಜಿ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕರಾದ ಎ. ಜಯಕರ ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಮತ್ತು ಕುಂದಗನ್ನಡ ಸಂಘದ ಜಂಟಿ ಆಶ್ರಯದಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯ ಪ್ರಯುಕ್ತ ಆಯೋಜಿಸಿದ ಆಸಾಡಿ ಖಾದ್ಯಗಳ ತಯಾರಿ ಮತ್ತು ಪ್ರದರ್ಶನ ಸ್ಪರ್ಧೆಯ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಕೈಲ್ಕೆರೆ-ಮೊಳಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ವಡ್ಡರ್ಸೆ ಸಂತೋಷ್ ಶೆಟ್ಟಿ, ಕುಂದಗನ್ನಡ ಭಾಷೆಯ ಚಿಂತಕ ರಾಮ್ ಶೆಟ್ಟಿ ಅತ್ತಿಕಾರ್ ತೀರ್ಪುಗಾರರಾಗಿ ಅನಿಸಿಕೆ ವ್ಯಕ್ತಪಡಿಸಿದರು. ಈ ಸಂದರ್ಭ ಹೌದರಾಯನ ವಾಲ್ಗದ ಮೂಲಕ ಜನಪ್ರಿಯರಾದ ಹಿರಿಯ ಜಾನಪದ ಕಲಾವಿದ ಶ್ರೀ ಮಂಜು ಪೂಜಾರಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಸೈಂಟ್ ಪಿಯೂಸ್ ಆಂಗ್ಲ ಮಾಧ್ಯಮ ಶಾಲೆ ಹಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ನಡೆದ, 14ರ ವಯೋಮಾನದ ಬಾಲಕರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ವಿದ್ಯಾರ್ಥಿಗಳಾದ ತನೀಷ್ ಜೆ. ಪೂಜಾರಿ, ಅಭಿನವ್ ಪೈ, ಗಿರಿಧರ್ ಪೈ, ಮನನ್ ಆಚಾರ್ ಹಾಗೂ ಸಮ್ರಾಟ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ವಿದ್ಯಾ ಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ ಸಂಬಂಧಿತ ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ ಆಯೋಜನೆಯಲ್ಲಿ ಪಿ.ಆರ್.ಎನ್ ಅಮೃತ ಭಾರತಿ ಸಮೂಹ ಸಂಸ್ಥೆಗಳು, ಹೆಬ್ರಿ ಇಲ್ಲಿ ನಡೆದ ಜಿಲ್ಲಾ ಮಟ್ಟದ ವಿಜ್ಞಾನ ಮೇಳದ ವಿವಿಧ ಸ್ಪರ್ಧೆಗಳಲ್ಲಿ ಶಿಶು ವರ್ಗ ವಿಭಾಗದಲ್ಲಿ ತೆಕ್ಕಟ್ಟೆ ಸೇವಾಸಂಗಮ ವಿದ್ಯಾಕೇಂದ್ರದ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ. ಇಲ್ಲಿನ ವಿದ್ಯಾರ್ಥಿಗಳಾದ ಮನ್ವಿತ್ ಕಾರಂತ್, ನವಚಾರಿತ ವಿಜ್ಞಾನ ಮಾದರಿಯಲ್ಲಿ , ಅನಿರುದ್ಧ, ವಸ್ತುವಿನ ಸ್ಥಿತಿಗಳ ಮಾದರಿಯಲ್ಲಿ ಪ್ರಥಮ ದ್ವಿತೀಯ ಸ್ಥಾನ ಗಳಿಸಿದರೆ, ನಮೀಶ್ ಚಂದನ್ ಪರಿಸರ ಮಾಲಿನ್ಯ ಮತ್ತು ಅದರ ವಿಧಗಳು, ನಿತ್ಯಾ ಎನ್ ಪುತ್ರನ್, ಸರಳಯಂತ್ರಗಳ ತಯಾರಿಕಾ ಮಾದರಿಯಲ್ಲಿ ಸ್ಪರ್ಧೆಯಲ್ಲಿ ಗಳಿಸಿದರೆ, ಗಣಿತ ನವಚಾರಿತ ಮಾದರಿ ಸ್ಪರ್ಧೆಯಲ್ಲಿ ಕಾರ್ತಿಕೇಯ ತೃತೀಯ ಸ್ಥಾನ ಗಳಿಸಿದರೆ, ವಿಜ್ಞಾನ ಪ್ರಯೋಗ ಸ್ಪರ್ಧೆಯಲ್ಲಿ ಗೌರಿ ತೃತೀಯ ಸ್ಥಾನ ಗಳಿಸಿದರೆ, ಸಂಸ್ಕೃತಿ ಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಸುಧಾಂಶ್ ಕುಮಾರ್, ಹರಿಪ್ರಿಯಾ ಮತ್ತು ಮನಸ್ವಿ, ಪ್ರಥಮ ಸ್ಥಾನ ಪಡೆದಿರುತ್ತಾರೆ. ಬಾಲ ವಿಭಾಗದ …
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಬೆಂಗಳೂರಿನ ಕರ್ನಾಟಕ ಅಥ್ಲೆಟಿಕ್ಸ್ ಸಂಸ್ಥೆಯ ವತಿಯಿಂದ ನಡೆದ ಕರ್ನಾಟಕ ರಾಜ್ಯ ಕಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಸ್ಪೋಟ್ಸ್ ಕ್ಲಬ್ನ ಕ್ರೀಡಾಪಟುಗಳಿಗೆ 15 ಚಿನ್ನ, 08 ಬೆಳ್ಳಿ, 10 ಕಂಚು ಒಟ್ಟು 33 ಪದಕಗಳು ಹಾಗೂ 04 ನೂತನ ಕೂಟ ದಾಖಲೆಯನ್ನು ನಿರ್ಮಿಸಿದ್ದಾರೆ. ನೂತನ ಕೂಟ ದಾಖಲೆಗಳು: 14 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ಸುಭಾಷ್ (ಟ್ರಯಥ್ಲಾನ್ ಸಿ)ನಲ್ಲಿ, 18 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ಸಾಹಿಲ್ (100ಮೀ)ನಲ್ಲಿ, 16 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ರಾಜು (60ಮೀ)ನಲ್ಲಿ ಹಾಗೂ 18 ವರ್ಷ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ಬಾನವಿ (400ಮೀ)ನಲ್ಲಿ ನೂತನ ಕೂಟ ದಾಖಲೆಯನ್ನು ನಿರ್ಮಿಸಿದ್ದಾರೆ. ಫಲಿತಾಂಶ:14 ವರ್ಷ ವಯೋಮಿತಿಯ ಬಾಲಕರ ಮತ್ತು ಬಾಲಕಿಯರ ವಿಭಾಗದಲ್ಲಿ : ಸುಭಾಷ್ – ಟ್ರಯಥ್ಲಾನ್ ಸಿ (ಪ್ರಥಮ), ಮೋಕ್ಷಿತ್ ಆರ್ ಗೌಡ – ಟ್ರಯಥ್ಲಾನ್-ಬಿ (ದ್ವಿತೀಯ)16 ವರ್ಷ ವಯೋಮಿತಿಯ ಬಾಲಕರ ಮತ್ತು ಬಾಲಕಿಯರ ವಿಭಾಗದಲ್ಲಿ : ಕೌಶಿಕ್ ಪಿ ಶೆಟ್ಟಿಗಾರ್–…
ಕುಂದಾಪ್ರ ಡಾಟ್ ಕೋಟ:ಕೋಟ: ಇಲ್ಲಿನ ಕೋಟ ಮಣೂರು ಪಡುಕರೆ ಸಂಯುಕ್ತ ಪ್ರೌಢಶಾಲೆಯಲ್ಲಿ 29 ವರ್ಷಗಳ ಕಾಲ ಶಿಕ್ಷಕರಾಗಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ವಿಠ್ಠಲ ವಿ. ಗಾಂವ್ಕರ್ (75) ಶುಕ್ರವಾರ ಅನಾರೋಗ್ಯದಿಂದ ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಶಿಕ್ಷಣ ತಜ್ಞರಲ್ಲದೆ ಸಾಹಿತ್ಯಿಕ ಕ್ಷೇತ್ರದಲ್ಲಿ ತನ್ನದೇ ಆದ ಕೊಡುಗೆಯನ್ನು ಸಲ್ಲಿಸಿದ ಅವರು ಕರಾವಳಿ ಭಾಗದಲ್ಲಿ ಅಸಂಖ್ಯ ವಿದ್ಯಾಸಮೂಹವನ್ನು ಧಾರೆ ಎರೆದಿದ್ದಾರೆ,ಕೋಟದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ.ಕೆ.ಶಿವರಾಮ ಕಾರಂತ ಹುಟ್ಟೂರ ಪ್ರತಿಷ್ಠಾನದಲ್ಲಿ ನಿರಂತರವಾಗಿ ಸೇವೆ ,ಕಸಾಪ ಉಡುಪಿ,ಉತ್ತರ ಕನ್ನಡ ಇಲ್ಲಿ ಸಕ್ರೀಯ ಸೇವೆ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಯಲ್ಲಿ ಸಾಹಿತ್ಯ ಸಮ್ಮೇಳದ ಸರ್ವಾಧ್ಯಕ್ಷರಾಗಿ ಕಾರ್ಯನಿರ್ವಹಣೆಗೈದಿದ್ದಾರೆ. ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರದ ಅಗಾಧ ಸೇವೆಯನ್ನು ಗುರುತಿಸಿ ಹಲವು ರಾಜ್ಯ ಹಾಗೂ ರಾಷ್ಟ್ರೀಯ ಪ್ರಶಸ್ತಿಗಳಿಗೆ ಭಾಜನರಾಗಿದ್ದರು. ಉತ್ತರಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಬೊಳೆ ಗ್ರಾಮದಲ್ಲಿ ಜನಿಸಿದ ಗಾಂವ್ಕರ್ ರವರು ಪತ್ನಿ,ಒರ್ವ ಪುತ್ರ ಪುತ್ರಿಯನ್ನು ಅಗಲಿದ್ದಾರೆ.ಇವರ ಪಾರ್ಥಿವ ಶರೀರವನ್ನು ಕೋಟದ ಮಣೂರು ಪಡುಕರೆ ಶಾಲೆಯಲ್ಲಿ ಸಾರ್ವಜನಿಕರ ದರ್ಶನಕ್ಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗ್ರಾಮೀಣ ಬದುಕಿನ ಸೊಗಡು, ಕೃಷಿ ಸಂಸ್ಕೃತಿ ಹಾಗೂ ಸಾಂಪ್ರದಾಯಿಕ ಕ್ರೀಡೆಗಳನ್ನು ಪರಿಚಯಿಸುವ ಮತ್ತು ಉಳಿಸಿ ಬೆಳೆಸುವ ಉದ್ದೇಶದಿಂದ ಕಾಲೇಜು ಅಭಿವೃದ್ಧಿ ಸಮಿತಿ, ಹಳೆ ವಿದ್ಯಾರ್ಥಿ ಸಂಘ ಹಾಗೂ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಹೊಸಂಗಡಿ ಇವರ ಸಹಭಾಗಿತ್ವದಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಘಟಕದ ವತಿಯಿಂದ ಹೊಸಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರದಂದು ʼಹೂಂಟಿ ಗದ್ದೆಗೆ ಆಟ’ ಎಂಬ ವಿಶಿಷ್ಟ ಗ್ರಾಮೀಣ ಕ್ರೀಡಾಕೂಟವು ಸಂಭ್ರಮ ಸಡಗರದಿಂದ ನಡೆಯಿತು ʼಮಣ್ಣಿನ ಮಡಿಲಲ್ಲಿ ಒಂದ್ ದಿನʼ ಎಂಬ ಆಶಯದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು, ಉಪನ್ಯಾಸಕರು, ಶಿಕ್ಷಕರು ಹಾಗೂ ಸಾರ್ವಜನಿಕರು ಉತ್ಸಾಹದಿಂದ ಪಾಲ್ಗೊಂಡರು. ಕೆಸರಿನ ಗದ್ದೆಯಲ್ಲಿ ನಡೆದ ವಿವಿಧ ಗ್ರಾಮೀಣ ಆಟಗಳಲ್ಲಿ ಸ್ಪರ್ಧಾಳುಗಳು ಕ್ರೀಡಾಸ್ಫೂರ್ತಿಯಿಂದ ಭಾಗವಹಿಸಿ ಸಂಭ್ರಮಿಸಿದರು. ಆಧುನಿಕ ಜೀವನಶೈಲಿಯ ನಡುವೆ ಮರೆಯಾಗುತ್ತಿರುವ ಗ್ರಾಮೀಣ ಕ್ರೀಡೆಗಳು ಮತ್ತು ಕೃಷಿ ಸಂಸ್ಕೃತಿಯನ್ನು ಯುವಜನರಿಗೆ ಪರಿಚಯಿಸುವಲ್ಲಿ ಕಾರ್ಯಕ್ರಮ ವಿಶೇಷ ಗಮನ ಸೆಳೆಯಿತು. ಮಣ್ಣಿನೊಂದಿಗೆ ಬೆರೆತು, ನಗುತ್ತಾ, ಆಟವಾಡುತ್ತಾ ಪಾಲ್ಗೊಂಡ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಲಾವಣ್ಯ ರಿ. ಬೈಂದೂರು ಇದರ ಸುವರ್ಣ ಮಹೋತ್ಸವದ ಮಹಾಸಭೆ ಲಾವಣ್ಯ ರಂಗಮನೆಯಲ್ಲಿ ನಡೆಯಿತು. ಮುಂದಿನ ಎರಡು ವರ್ಷಗಳ ಅವಧಿಗೆ ಹಾಗೂ ಸುವರ್ಣ ಮಹೋತ್ಸವ ಆಚರಣೆಗಾಗಿ ನೂತನ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು. ನೂತನ ಅಧ್ಯಕ್ಷರಾಗಿ ಬಿ. ಗಣೇಶ ಕಾರಂತ್, ಪ್ರಧಾನ ಕಾರ್ಯದರ್ಶಿ ಎಚ್. ಉದಯ ಆಚಾರ್ಯ ಆಯ್ಕಾಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಬಾಲಚಂದ್ರ ವಿ.ಆರ್. ರಾಮ ಟೈಲರ್, ಉಪಾಧ್ಯಕ್ಷರಾಗಿ ನಾರಾಯಣ ಕೆ., ಪಾಂಡುರಂಗ ಪಡಿಯಾರ್, ಸುಬ್ರಹ್ಮಣ್ಯ ಜಿ. ಉಪ್ಪುಂದ, ಜೊತೆ ಕಾರ್ಯದರ್ಶಿಯಾಗಿ ಗಣೇಶ ಪರಮಾನಂದ, ರೋಶನ್ ಕುಮಾರ್, ಶಶಿಧರ ಕಾರಂತ್ ಬಿ., ಕೋಶಾಧಿಕಾರಿಯಾಗಿ ಸುರೇಶ್ ಹುದಾರ್, ಸಂಘಟನಾ ಕಾರ್ಯದರ್ಶಿಯಾಗಿ ನಾಗರಾಜ ಯಡ್ತರೆ, ರಾಜೇಶ್ ನಾಯ್ಕ, ಸುಮಂತ ಆಚಾರ್ಯ, ವ್ಯವಸ್ಥಾಪಕರಾಗಿ ಗಣಪತಿ ಎಸ್., ನರಸಿಂಹ ನಾಯಕ್, ಸತ್ಯ ಪ್ರಸನ್ನ ಗೌರವ ಸಲಹೆಗಾರರಾಗಿ ನಾಗರಾಜ ಶೆಟ್ಟಿ, ಸದಾಶಿವ ಡಿ., ಗಿರೀಶ್ ಬೈಂದೂರು, ದಿನೇಶ ಕೆ, ಉದಯ ಪಡಿಯಾರ್ ಆಯ್ಕೆಯಾಗಿದ್ದಾರೆ. ಕಾರ್ಯಕಾರಿ ಸಮಿತಿ ಸದಸ್ಯರಾಗಿ ಮೋಹನ್ ಕಾರಂತ್, ನಾಗಪ್ಪ ಬಿ., ಜನಾರ್ದನ ಪಟವಾಲ್, ಗುರುರಾಜ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ಶಿಸ್ತು, ವೈಯಕ್ತಿಕ ಬೆಳವಣಿಗೆ ಹಾಗೂ ಭವಿಷ್ಯದ ಗುರಿಗಳ ಕುರಿತು ಚರ್ಚಿಸುವ ಮಹತ್ವದ ಉದ್ದೇಶದೊಂದಿಗೆ ಬಾರ್ಕೂರಿನ ಸುಜ್ಞಾನ ನ್ಯಾಷನಲ್ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ಪೋಷಕ-ಶಿಕ್ಷಕರ ಸಭೆಯು ಅತ್ಯಂತ ಯಶಸ್ವಿಯಾಗಿ ನೆರವೇರಿತು. ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ನಡೆದ ಸಭೆಯಲ್ಲಿ ವಿದ್ಯಾರ್ಥಿಗಳ ಹಾಜರಾತಿ, ಕಲಿಕಾ ಪ್ರಗತಿ, ವೈಯಕ್ತಿಕ ಸಾಮರ್ಥ್ಯ ಹಾಗೂ ಶೈಕ್ಷಣಿಕ ಗುರಿಗಳ ಕುರಿತು ಪೋಷಕರು ಮತ್ತು ಶಿಕ್ಷಕರ ನಡುವೆ ಅರ್ಥಪೂರ್ಣ ವಿಚಾರ ವಿನಿಮಯ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸುಜ್ಞಾನ ಎಜುಕೇಶನಲ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, “ಶಿಸ್ತು ಜೀವನಕ್ಕೆ ಸರಿಯಾದ ದಾರಿ ತೋರಿಸಿದರೆ, ಹೊಂದಾಣಿಕೆಯು ಜೀವನವನ್ನು ಸುಂದರಗೊಳಿಸುತ್ತದೆ. ಶಿಸ್ತು ಮತ್ತು ಹೊಂದಾಣಿಕೆಗಳು ಉತ್ತಮ ಸಂಬಂಧಗಳನ್ನು ಕಟ್ಟುವ ಸೇತುವೆಯಾಗಿದ್ದು, ವಿದ್ಯಾರ್ಥಿಗಳು ಸ್ಪಷ್ಟ ಗುರಿ ರೂಪಿಸಿಕೊಂಡು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗಬೇಕು,” ಎಂದು ಕರೆ ನೀಡಿದರು. ಮುಖ್ಯ ಅತಿಥಿಯಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸೈಂಟ್ ಥಾಮಸ್ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶನಿವಾರ ಅತ್ಯಂತ ಸಂಭ್ರಮ, ಸಡಗರ ಹಾಗೂ ದೇಶಭಕ್ತಿಯ ವಾತಾವರಣದಲ್ಲಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಭಾರತೀಯ ಸೇನೆಯ ನಿವೃತ್ತ ಯೋಧರಾದ ಜಾನ್ ಸಿ. ಥಾಮಸ್ ಅವರು ಆಗಮಿಸಿ, ಧ್ವಜಾರೋಹಣ ನೆರವೇರಿಸಿ, ಮಾತನಾಡಿ, ದೇಶದ ಭದ್ರತೆ ಮತ್ತು ಸ್ವಾತಂತ್ರ್ಯಕ್ಕಾಗಿ ಸೈನಿಕರು ಸಲ್ಲಿಸುವ ಸೇವೆಯನ್ನು ವಿವರಿಸಿದರು. ವಿದ್ಯಾರ್ಥಿಗಳು ದೇಶದ ಉತ್ತಮ ನಾಗರಿಕರಾಗಿ ಬೆಳೆಯಬೇಕು, ಶಿಸ್ತು, ಪ್ರಾಮಾಣಿಕತೆ ಮತ್ತು ದೇಶಪ್ರೇಮವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಪ್ರಾಂಶುಪಾಲರಾದ ವಂದನೀಯ ಫಾದರ್ ಫಿಲಿಪ್ ನೆಲ್ಲಿವಿಳಾ ಅವರು ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯದ ಮಹತ್ವವನ್ನು ತಿಳಿಸಿ, ದೇಶದ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು. ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು. ದೇಶಭಕ್ತಿ ಗೀತೆಗಳು, ನೃತ್ಯಗಳು, ದೇಶಭಕ್ತಿಯ ನಾಟಕಗಳು, ಭಾಷಣಗಳು ಹಾಗೂ ವಿವಿಧ ಕಲಾ ಪ್ರದರ್ಶನಗಳ ಮೂಲಕ ವಿದ್ಯಾರ್ಥಿಗಳು ಭಾರತದ ವೈವಿಧ್ಯತೆ, ಸಂಸ್ಕೃತಿ ಮತ್ತು ದೇಶಪ್ರೇಮವನ್ನು ಮನೋಜ್ಞವಾಗಿ ಅನಾವರಣಗೊಳಿಸಿದರು. ವಿದ್ಯಾರ್ಥಿಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ನಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷರು ಹಾಗೂ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಧ್ವಜಾರೋಹಣಗೈದು ಮಾತನಾಡಿ,ಇಂದು ಜಾಗತಿಕ ಮಟ್ಟದಲ್ಲಿ ಭಾರತ ದೇಶದ ಖ್ಯಾತಿ ಹೆಚ್ಚುತ್ತಿದೆ. ಸ್ವಾತಂತ್ರ್ಯ ಸಂಪಾದನೆ ಎಂಬುದು ಸುಲಭಕ್ಕೆ ಸಿಕ್ಕ ಫಲವಾಗಿರಲಿಲ್ಲ. ಅನೇಕ ಮಹನೀಯರು, ಸ್ವಾತಂತ್ರ್ಯ ಸಿಂಹಗಳು ತಮ್ಮ ಇಡೀ ಬದುಕನ್ನು ಸ್ವಾತಂತ್ರ್ಯಕ್ಕಾಗಿ ತ್ಯಾಗ ಮಾಡಿದ್ದಾರೆ. ಹಿರಿಯರ ಶ್ರಮದ ಫಲದಿಂದ ಈ ಸ್ವಾತಂತ್ರ್ಯವನ್ನು ನಾವೆಲ್ಲರೂ ಒಗ್ಗೂಡಿ ರಾಷ್ಟ್ರ ಕಟ್ಟುವ ಕೆಲಸ ಮಾಡುವ ಮೂಲಕ ಸಾರ್ಥಕಗೊಳಿಸಬೇಕೆಂದು ಕರೆ ಕೊಟ್ಟರು. ಸಂಸ್ಥೆಯ ಸಹಶಿಕ್ಷಕರಾದ ರಾಘವೇಂದ್ರ ದುರ್ಗ ಬಿಲ್ಲವ ಸ್ವಾತಂತ್ರ್ಯ ಸಂಭ್ರಮದ ಬಗ್ಗೆ ಮಾತನಾಡಿ, “ಇಂದಿನ ದಿನ ಸಮಸ್ತ ಭಾರತೀಯರಿಗೂ ಹೆಮ್ಮೆಯ ದಿನವಾಗಿದೆ. ಸ್ವಾತಂತ್ರ್ಯ ದೊರಕಿ 80 ವರ್ಷಗಳೇ ಉರುಳಿ ಹೋಗಿವೆ, ಇಷ್ಟು ವರ್ಷಗಳ ಇತಿಹಾಸದಲ್ಲಿ ಈ ದೇಶ ಬಹಳಷ್ಟನ್ನು ಸಾಧಿಸಿದೆ. ಆರ್ಥಿಕತೆ, ಕ್ರೀಡೆ, ಸಾಂಸ್ಕೃತಿಕ ಮತ್ತು ಬಾಹ್ಯಾಕಾಶ ಕ್ಷೇತ್ರದಲ್ಲಿ ಅನುಪಮವಾದ ಸಾಧನೆಗಳು…
