ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಬೈಂದೂರು ಮತ್ತು ಕುಂದಾಪುರ ಎರಡೂ ಕ್ಷೇತ್ರಗಳಿಗೆ ಸಂಪರ್ಕ ಕಲ್ಪಿಸುವ ಕಂಡ್ಲೂರು ಹಳೆ ಸೇತುವೆ ವಿಚಾರದಲ್ಲಿ ಹಳೆ ಸೇತುವೆಯನ್ನು ತೆರವುಗೊಳಿಸಿದರೆ ಸಾರ್ವಜನಿಕರಿಗೆ ಆಗುವ ತೊಂದರೆಗಳ ಬಗ್ಗೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಉಡುಪಿ ಜಿಲ್ಲಾಧಿಕಾರಿಗಳಿಗೆ ಸಮಗ್ರ ಮಾಹಿತಿ ನೀಡಿದರು. ಅವರು ಬುಧವಾರ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರನ್ನು ಕುಂದಾಪುರ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಹಾಗೂ ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ಜಂಟಿಯಾಗಿ ಭೇಟಿ ಮಾಡಿ ಮನವಿ ಸಲ್ಲಿಸಿದ ಶಾಸಕರು ಮಾತನಾಡಿದರು. ಕಂಡ್ಲೂರು ಹಳೆ ಸೇತುವೆಯು ರಾಜ್ಯ ಹೆದ್ದಾರಿಯ ಪ್ರಮುಖ ಮಾರ್ಗವಾಗಿದ್ದು, ಈ ಮಾರ್ಗದ ಮೂಲಕ ಸಾವಿರಾರು ಜನರು ವಿವಿಧ ಜಿಲ್ಲೆಗಳಿಗೆ ಸಂಚರಿಸುತ್ತಾರೆ. ಮೀನುಗಾರರು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ರೈತರು ದಿನನಿತ್ಯ ಈ ಸೇತುವೆಯನ್ನು ಅವಲಂಬಿಸಿದ್ದಾರೆ. ಒಂದು ವೇಳೆ ಹಳೆ ಸೇತುವೆಯನ್ನು ಈಗಲೇ ಕೆಡವಿದರೆ, ಹೊಸ ಸೇತುವೆ ನಿರ್ಮಾಣ ಪೂರ್ಣಗೊಳ್ಳುವವರೆಗೂ ಜನರು 15-20 ಕಿ.ಮೀ. ಸುತ್ತುವರೆದು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2014ನೇ ಬ್ಯಾಚ್ನ ಬಿಬಿಎ ಹಳೆ ವಿದ್ಯಾರ್ಥಿಗಳ ವತಿಯಿಂದ ಗುರುವಂದನೆ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳು ತಮ್ಮ ಜೀವನದ ಪಯಣದಲ್ಲಿ ಜ್ಞಾನದ ಬೆಳಕಾಗಿ ತಮ್ಮನ್ನು ರೂಪಿಸಿದ ಗುರುಗಳನ್ನು ಗೌರವಿಸಿ ಅವರ ಪ್ರೋತ್ಸಾಹ ಮತ್ತು ಮಾರ್ಗದರ್ಶನದಿಂದ ತಮ್ಮ ಜೀವನದಲ್ಲಿ ದೊರೆತ ಸ್ಪೂರ್ತಿಯನ್ನು ಸ್ಮರಿಸುವುದರೊಂದಿಗೆ ಒಂದೆಡೆ ಸೇರಿ ತಮ್ಮ ಹಳೆಯ ನೆನಪುಗಳನ್ನು ಹಂಚಿಕೊಂಡು ಕಾಲೇಜಿನೊಂದಿಗೆ ತಮ್ಮ ಬಾಂಧವ್ಯ ಮುಂದುವರಿಸುವುದಾಗಿ ತಿಳಿಸಿದರು. ಸಂಸ್ಥೆಯಲ್ಲಿ ಈ ಹಿಂದೆ ಸೇವೆ ಸಲ್ಲಿಸಿದ ಉಪನ್ಯಾಸಕರಾದ ಪಂಜು, ಮಣಿಕಂಠ, ಸುಚಿತ್ರಾ, ಜ್ಯೋತಿ, ಮಂಜುಳ, ಭಾಸ್ಕರ ಬಿಲ್ಲವ, ಹರೀಶ್, ಉದಯ್, ದೀಪಕ, ಡಾ.ರವಿಚಂದ್ರ, ಶ್ರೀಕಾಂತರಾಜ, ಕ್ರಿಸ್ಟಿ ಶರಣ್ಯ, ನಾಗವೇಣಿ ಗೌರವವಂದನೆ ಸ್ವೀಕರಿಸಿದರು. ಕಾಲೇಜಿನ ಪ್ರಿನ್ಸಿಪಾಲ್ ಡಾ. ಉಮೇಶ ಮಯ್ಯ, ಡಾ. ರಘುನಾಯ್ಕ, ಪಾಂಡುರಂಗ, ಪ್ರಾಧ್ಯಾಪಕಿ ಚಿತ್ರ ಪಡೆಯಾರ್, ಹಳೆ ವಿದ್ಯಾರ್ಥಿ ಸಂಘದ ಸಂಚಾಲಕಿ ಮಮತಾ, ಕಚೇರಿ ಸಿಬ್ಬಂದಿ ವಿಜಯ ಶೆಟ್ಟಿ, ರಾಜೇಶ್ವರಿ, ಮಂಜುನಾಥ ಉಪಸ್ಥಿತರಿದ್ದರು. ಮಿತ್ರ ಸೇವಾಶ್ರಮ ಸಮಿತಿಯ ಸಾಧನೆ ಸ್ಮರಿಸಲಾಯಿತು. ಚೇತನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ ಬೆಂಗಳೂರು ಇವರ ವತಿಯಿಂದ ಪ್ರಸಕ್ತ ಸಾಲಿಗೆ ಪ.ಜಾತಿ/ಪ.ಪಂ/ಹಿಂದುಳಿದ ವರ್ಗ/ಸಾಮಾನ್ಯ ವರ್ಗದ ಗ್ರಾಮೀಣ ರೈತ ಮಹಿಳೆಯರಿಂದ 5 ವಾರದ 20 ದೇಶಿ/ನಾಟಿ ಕೋಳಿ ಮರಿಗಳ ವಿತರಣೆಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ರೈತ ಮಹಿಳೆಯರು ಅಕ್ಟೋಬರ್ 31ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಪಶುವೈದ್ಯ ಸಂಸ್ಥೆ, ತಾಲೂಕು ಪಶು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳಿಂದುಟಾಗುವ ದುಷ್ಪರಿಣಾಮಗಳು ಎಂಬ ವಿಷಯದ ಕುರಿತು ಮಾಹಿತಿ ಕಾರ್ಯಗಾರವನ್ನು ಆಯೋಜಿಸಲಾಗಿತ್ತು. ಉಡುಪಿ ಕ್ರೈಂ ಡಿಪಾರ್ಟ್ಮೆಂಟ್ನ ನಿಲೇಶ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಪ್ರೌಢಶಾಲಾ ಮುಖ್ಯ ಶಿಕ್ಷಕ ಕೃಷ್ಣ ಅಡಿಗ ಸರ್ವರನ್ನು ಸ್ವಾಗತಿಸಿದರು. ಈ ಕಾರ್ಯಕ್ರಮದಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಕಿರಿಯ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿಸೋಜ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿಸೋಜ ಅವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದು ರಜೆಯಲ್ಲಿ ಊರಿಗೆ ಬಂದಿರುವ ಯುವತಿ ಮನೆ ಬಿಟ್ಟು ಹೋಗಿ ನಾಪತ್ತೆಯಾಗಿರುವ ಘಟನೆ ಬೈಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ. ಕೆ. ಆಯಿಶಾ ಶವಾನಾ (23) ನಾಪತ್ತೆಯಾದ ಯುವತಿ. ಬೆಂಗಳೂರಿನಲ್ಲಿ ಮೊಬೈಲ್ ಕಂಪೆನಿಯಲ್ಲಿ ಕೆಲಸ ಮಾಡಿಕೊಂಡಿದ್ದ ಅವರು 15 ದಿನಗಳ ಹಿಂದೆ ಮನೆಗೆ ಬಂದಿದ್ದು ಮನೆಯವರು ಮದುವೆ ಬಗ್ಗೆ ಪ್ರಸ್ತಾಪಿಸಿದಾಗ ಮದುವೆಯಾಗಲು ನಿರಾಕರಿಸಿದ್ದರೆನ್ನಲಾಗಿದೆ. ಅ. 5ರಂದು ಬೆಳಗ್ಗೆ 4.30ರ ಸುಮಾರಿಗೆ ಮನೆಯಿಂದ ಕಾಣೆಯಾಗಿದ್ದು ಎಲ್ಲೂ ಪತ್ತೆಯಾಗಿಲ್ಲ ಎಂದು ಮನೆಯವರು ಬೈಂದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಮಿಜಾರಿನ ಶೋಭಾವನ ಆವರಣದಲ್ಲಿರುವ ಆಳ್ವಾಸ್ ಆನಂದಮಯ ಆರೋಗ್ಯಧಾಮದಲ್ಲಿ ‘ತ್ರಯಾ ಓ3 ಓಝೋನ್ ಥೆರಪಿ’ ನೂತನ ಘಟಕವನ್ನು ಬುಧವಾರ ಉದ್ಘಾಟಿಸಲಾಯಿತು. ಇದರೊಂದಿಗೆ ಆರೋಗ್ಯಧಾಮದ ಸಮಗ್ರ ಆರೋಗ್ಯ ಹಾಗೂ ಪ್ರಕೃತಿ ಚಿಕಿತ್ಸಾ ಸೇವೆಗಳ ವ್ಯಾಪ್ತಿಗೆ ಮತ್ತೊಂದು ಚಿಕಿತ್ಸಾ ವಿಧಾನ ಸೇರ್ಪಡೆಯಾಗಿದೆ. ನೂತನ ಘಟಕದಲ್ಲಿ ರೋಗಿಯ ಆರೋಗ್ಯ ಸ್ಥಿತಿ ಹಾಗೂ ಚಿಕಿತ್ಸೆಯ ಅಗತ್ಯಕ್ಕೆ ಅನುಗುಣವಾಗಿ ಓಝೋನೇಟೆಡ್ ನೀರು, ಓಝೋನ್ ಬ್ಯಾಗಿಂಗ್, ಸ್ಕಾಲ್ಪ್ ಬ್ಯಾಗಿಂಗ್, ಸಂಪೂರ್ಣ ದೇಹ ಬ್ಯಾಗಿಂಗ್, ಓಝೋನ್ ಫನಲಿಂಗ್, ಓಝೋನ್ ಎನಿಮಾ, ಕಿವಿ ಮತ್ತು ರೆಕ್ಟಲ್ ಇನ್ಸಫ್ಲೇಷನ್, ಯೋನಿ ಇನ್ಸಫ್ಲೇಷನ್, ಇಂಟ್ರಾ-ಆರ್ಟಿಕ್ಯುಲರ್ ಓಝೋನ್ ಇಂಜೆಕ್ಷನ್, ಅಬ್ಡೊಮಿನಲ್ ಓಝೋನ್ ಥೆರಪಿ ಹಾಗೂ ಒಟಿಒ ಸೇರಿದಂತೆ ವಿವಿಧ ಚಿಕಿತ್ಸಾ ವಿಧಾನಗಳನ್ನು ಒದಗಿಸಲಾಗುತ್ತದೆ. ಆಳ್ವಾ ಫಾರ್ಮಾಸಿಯ ಆಡಳಿತಾಧಿಕಾರಿ ಹಾಗೂ ಆಳ್ವಾಸ್ ಅನಂದಮಯದ ತಜ್ಞವೈದ್ಯೆ ಡಾ. ಗ್ರೀಷ್ಮಾ ವಿವೇಕ್ ಆಳ್ವ ಮಾತನಾಡಿ, ಪ್ರಕೃತಿ ಚಿಕಿತ್ಸೆ, ಯೋಗ, ಪೌಷ್ಟಿಕತೆ ಮತ್ತು ಜೀವನಶೈಲಿ ಆಧಾರಿತ ಆರೋಗ್ಯ ಕ್ರಮಗಳೊಂದಿಗೆ ಓಝೋನ್ ಥೆರಪಿಯನ್ನು ಪೂರಕವಾಗಿ ಸಂಯೋಜಿಸುವ ಮೂಲಕ ರೋಗಿ ಕೇಂದ್ರಿತ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೋಟ ಸಹಕಾರಿ ವ್ಯವಸಾಯಕ ಸಂಘಕ್ಕೆ 2025-26ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಕೃಷಿ ಅಭಿವೃದ್ಧಿ ಸಹಕಾರಿ ಸಂಘ ನಿ. ಮಂಗಳೂರು (ಸ್ಕ್ಯಾಡ್ಸ್) ಇದರ ಕುಂದಾಪುರ ಶಾಖೆಯಿಂದ ಸಂಘವು ಅತ್ಯಧಿಕ ಮೌಲ್ಯದ ಕೃಷಿ ಯಂತ್ರೋಪಕರಣಗಳನ್ನು ಹಾಗೂ ಬಿಡಿಭಾಗಗಳನ್ನು ಖರೀದಿಸಿ ತನ್ನ ಸದಸ್ಯರಿಗೆ ವಿತರಿಸುವ ಮೂಲಕ ಪ್ರಥಮ ಸ್ಥಾನಗಳಿಸಿರುತ್ತದೆ. ದಕ್ಷಿಣ ಕನ್ನಡ ಕೃಷಿ ಅಭಿವೃದ್ಧಿ ಸಹಕಾರಿ ಸಂಘ ಮಂಗಳೂರು (ಸ್ಕ್ಯಾಡ್ಸ್) ಇದರ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷ ರವೀಂದ್ರ ಕಂಬಳಿ, ಉಪಾಧ್ಯಕ್ಷರು ಮತ್ತು ಎಲ್ಲಾ ನಿರ್ದೇಶಕರು ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷರಾದ ಡಾ. ಕೃಷ್ಣ ಕಾಂಚನ್ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಶರತ್ ಕುಮಾರ್ ಶೆಟ್ಟಿ ಇವರಿಗೆ ಅಭಿನಂದನಾ ಪತ್ರ ಮತ್ತು ಸ್ಮರಣಿಕೆಯನ್ನು ನೀಡಿ ಸನ್ಮಾನಿಸಿದರು. ಈ ಸಂದರ್ಭ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರ ಸಂಘಗಳ ಉಪನಿಬಂಧಕರಾದ ರಮೇಶ ಎಚ್. ಎನ್., ಸ್ಕ್ಯಾಡ್ಸ್ ಮತ್ತು ಸಂಘದ ನಿರ್ದೇಶಕರಾದ ಜಿ. ತಿಮ್ಮ ಪೂಜಾರಿಯವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸರಕಾರವು ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಅಭಿವೃದ್ಧಿಗಾಗಿ ಹಲವು ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಅವುಗಳನ್ನು ಸಮುದಾಯದ ಕಟ್ಟಕಡೆಯ ವ್ಯಕ್ತಿಗಳಿಗೆ ಸಕಾಲದಲ್ಲಿ ತಲುಪುವಂತೆ ಮಾಡುವುದರೊಂದಿಗೆ ಅವರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಮಪ್ಪ ಎಂ. ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಭೋವಿ (ವಡ್ಡರ) ಅಭಿವೃದ್ಧಿ ನಿಗಮ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಮತ್ತು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಿಗಮದಿಂದ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಪ್ರಗತಿ ಪರಿಶೀಲನ ಸಭೆ ಹಾಗೂ ಸಮುದಾಯದ ಮುಖಂಡರೊಂದಿಗೆ ಹಾಗೂ ಕಾರ್ಯಕರ್ತರೊಂದಿಗೆ ನಡೆದ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯ ಸರಕಾರವು ಜನ ಸಾಮಾನ್ಯರ ಶ್ರೇಯೋಭಿವೃದ್ಧಿಗೆ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡುವುದರೊಂದಿಗೆ ಭೋವಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿಶ್ವಕರ್ಮ ಸಮಾಜದ ಕೆಲವರು, ತಮ್ಮ ಸಮುದಾಯಕ್ಕೆ ನಿಂದನೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ನಡೆಸಿದ ಸಭೆಯಲ್ಲಿಯೂ ನನ್ನ ಮಾತನ್ನು ತಿರುಚಿ ತಪ್ಪು ಸಂದೇಶ ಹರಡಿದ್ದಾರೆ. ನಾನು ಯಾವುದೇ ತಪ್ಪು ಮಾಡಿಲ್ಲ. ಆದ್ದರಿಂದ, ನಾನು ಕ್ಷಮೆಯಾಚಿಸುವ ಪ್ರಶ್ನೆಯೇ ಇಲ್ಲ. ವಿಷಾದವೂ ಇಲ್ಲ, ಕ್ಷಮೆಯೂ ಇಲ್ಲ. ನನ್ನಿಂದ ಕ್ಷಮೆಯಾಚನೆ ಮಾಡಲಾಗಿದೆ ಎಂಬ ಮಾಹಿತಿ ಸಂಪೂರ್ಣವಾಗಿ ತಪ್ಪಾಗಿದೆ ಎಂದು ಹಿರಿಯ ಸಾಹಿತಿ, ವಕೀಲ ಎ.ಎಸ್.ಎನ್. ಹೆಬ್ಬಾರ್ ಸ್ಪಷ್ಟೀಕರಣ ನೀಡಿದ್ದಾರೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಅವರು, ಸಾಸ್ತಾನದಲ್ಲಿ ಜರುಗಿದ ಬ್ರಹ್ಮಾವರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ನನ್ನ ಭಾಷಣದಲ್ಲಿ ಹಳೆಯ ಹಾಸ್ಯದ ತುಣುಕೊಂದನ್ನು ತಪ್ಪಾಗಿ ಗ್ರಹಿಸಿಕೊಂಡು ತಮ್ಮ ಸಮುದಾಯಕ್ಕೆ ಅನ್ವಯಿಸಿಕೊಂಡ ವಿಶ್ವಕರ್ಮ ಸಮಾಜದ ಕೆಲವರು, ತಮ್ಮ ಸಮುದಾಯಕ್ಕೆ ನಿಂದನೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ, ಸಂಘಟನೆಯ ಅಧ್ಯಕ್ಷರು ಹಾಗೂ ನನ್ನ ಪರಿಚಿತರಾದ ಸುಬ್ರಾಯ ಆಚಾರ್ ಅವರು ನನಗೆ ದೂರವಾಣಿ ಕರೆ ಮಾಡಿ, “ನೀವು ಒಂದು ಗಳಿಗೆ ಸಭೆಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಹಳಗೇರಿಯ ಶ್ರೀ ಕೊಕ್ಕೇಶ್ವರ ಹಾಗೂ ಶ್ರೀ ವನದುರ್ಗಾದೇವಿ ದೇವಸ್ಥಾನದಲ್ಲಿ ಅ.11ರಿಂದ ಅ.21ರತನಕ ಶರನ್ನವರಾತ್ರಿ ಮಹೋತ್ಸವವು ಜರುಗಲಿದೆ. ಪ್ರತಿದಿನ ಸಂಜೆ 5.00 ಗಂಟೆಗೆ ಶ್ರೀ ದೇವರ ಸನ್ನಿಧಿಯಲ್ಲಿ ಹಳಗೇರಿ ಕೊಕ್ಕೇಶ್ವರ ಭಜನಾ ಸಂಘ ರಿ., ಶ್ರೀ ವನದುರ್ಗಿ ಮಹಿಳಾ ಮತ್ತು ಮಕ್ಕಳ ಭಜನಾ ಸಂಘ ಹಾಗೂ ವಿವಿಧ ಭಜನಾ ಸಂಘದಿಂದ ಭಜನಾ ಕಾರ್ಯಕ್ರಮ ಹಾಗೂ ಪ್ರತಿ ದಿನ 06.00ಗಂಟೆಯಿಂದ ನವರಾತ್ರಿ ಪೂಜೆ ಪ್ರಾರಂಭ ಮತ್ತು ಪ್ರತಿದಿನ ಸಂಜೆ 09.00ಕ್ಕೆ ಅನ್ನಸಂತರ್ಪಣೆ ಜರುಗಲಿರುವುದು. ಅ.21ರಂದು ವಿಜಯದಶಮಿಯ ದಿನ ಚಂಡಿಕಾ ಹೋಮ ಹಾಗೂ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ. ಅದೇ ದಿನ ಸಂಜೆ 06.00ರಿಂದ ಟೀಮ್ ಗೆಳಯರ ಬಳಗ ಇವರ ಸಹಯೋಗದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ, ಪ್ರಸಾದ ವಿತರಣೆ ಹಾಗೂ ಲಘು ಉಪಹಾರ ನಡೆಯಲಿದೆ. ಅದೇ ದಿನ ರಾತ್ರಿ 08.00ರಿಂದ ಸಭಾ ಕಾರ್ಯಕ್ರಮ ನಡೆಯಲ್ಲಿದ್ದು, ಬಳಿಕ ಸ್ಥಳೀಯ ಮಕ್ಕಳಿಂದ ವೈವಿಧ್ಯಮ ನೃತ್ಯ ಪ್ರದರ್ಶನ, ಸುಮಂಗಲಾ ಶೇಖರ್ ಗಾಣಿಗ ಬೀಜಮಕ್ಕಿ ಇವರ…
