Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ, ಪ್ರಥಮ ವರ್ಷದ ಪದವಿಯ ವಿದ್ಯಾರ್ಥಿಗಳಿಗಾಗಿ ರಕ್ಷಕ – ಶಿಕ್ಷಕ ಸಭೆಯನ್ನು ಆಯೋಜಿಸಲಾಯಿತು. ಸ್ಥಳೀಯ ಪ್ರಸಿದ್ಧ ಶಿಕ್ಷಣ ಸಂಸ್ಥೆಯಾದ, ಕುಂದಾಪುರ ಎಜುಕೇಶನ್ ಸೊಸೈಟಿಯ ಅಧ್ಯಕ್ಷರಾದ ಬಿ. ಎಮ್. ಸುಕುಮಾರ ಶೆಟ್ಟಿ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕುಂದಾಪುರ ಎಜುಕೇಶನ್ ಸೊಸೈಟಿ ಸುವರ್ಣ ಸಂಭ್ರಮದ ಹೊಸ್ತಿಲಿನಲ್ಲಿದೆ. ಈ ಸಂಸ್ಥೆಯ ಆಡಳಿತಕ್ಕೆ ಒಳಪಟ್ಟ ನಾಲ್ಕು ಶಿಕ್ಷಣ ಸಂಸ್ಥೆಗಳು ಕನ್ನಡ ಕರಾವಳಿ ಭಾಗದಲ್ಲಿ ಗಮನಾರ್ಹ ಸಾಧನೆ ಮಾಡುತ್ತಿರುವುದು ಸಂತೋಷದ ಸಂಗತಿ. ಕಾಲೇಜಿನ ಎಲ್ಲಾ ಕ್ರೀಯಾ ಚಟುವಟಿಕೆಗಳಿಗೆ ಬೆಂಬಲ ಮತ್ತು ಪ್ರೋತ್ಸಾಹ ನೀಡುತ್ತಿರುವ ಹೆತ್ತವರಿಗೆ ಹಾಗೂ ಪೋಷಕರಿಗೆ ಈ ಮೂಲಕ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಮೊಳಹಳ್ಳಿ ಶಾಲೆಯ ಹಿರಿಯ ಶಿಕ್ಷಕಿ ಶೋಭಾ ಸಿ. ಶೆಟ್ಟಿ ಅವರು ಮುಖ್ಯ ಅತಿಥಿ ನೆಲೆಯಲ್ಲಿ ಮಾತನಾಡಿ, ಕಾಲೇಜು ಅತ್ಯಂತ ಕಿರು ಅವಧಿಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಜಿಲ್ಲೆಯ ಸ್ತುತ್ಯಾರ್ಹ ಸಾಧನೆ ಮಾಡುತ್ತಿರುವುದು ಉಲ್ಲೇಖನೀಯ. ಈ ಸಂಸ್ಥೆಯಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ವಿಜ್ಞಾನಿ ಇದ್ದಲ್ಲಿ ಜ್ಞಾನ, ಜ್ಞಾನ ಇದ್ದಲ್ಲಿ ಕಲೆ ಇರುತ್ತದೆ. ಅಂತೆಯೇ, ಕಲೆ ಇದ್ದಲ್ಲಿ ಪರಿಸರ ರಕ್ಷಣೆ ಮತ್ತು ಕಾಳಜಿಯೂ ಇರುತ್ತದೆ  ಎಂದು ಮೂಡುಬಿದಿರೆಯ ಶ್ರೀ ಜೈನಮಠದ  ಡಾ. ಸ್ವಸ್ತಿ ಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯಮಹಾಸ್ವಾಮೀಜಿ  ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದಿರೆ, ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್‌ಸಿ) ಎನರ್ಜಿ ಮತ್ತು ವೆಟ್ ಲಾಂಡ್ಸ್ ರಿಸರ್ಚ್ ಗ್ರೂಪ್ ಇವುಗಳ ಆಶ್ರಯದಲ್ಲಿ ವಿದ್ಯಾಗಿರಿಯ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆದ 4ದಿನಗಳ ಲೇಕ್ ಅಂತಾರಾಷ್ಟ್ರೀಯ ದ್ವೈವಾರ್ಷಿಕ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಪ್ರಸ್ತುತದಲ್ಲಿ ಪ್ರಕೃತಿಯ ಮೇಲೆ ನಡೆಯುತ್ತಿರುವ ಅತಿವೃಷ್ಟಿ ಮತ್ತು ಅನಾವೃಷ್ಟಿಯ ಕಾರಣವನ್ನು ಅರ್ಥೈಸಿಕೊಳ್ಳುವುದು ಬಹಳ ಅಗತ್ಯವಿದೆ. ಮನುಷ್ಯನ ಅನೇಕ ಪರಿಸರ ವಿರೋಧಿ ಚಟುವಟಿಕೆಗಳಿಂದ ನೆಲ, ಜಲ ವಾತಾವರಣ, ಪಶು ಪಕ್ಷಿಗಳಿಗೆ ಉತ್ತಮ ವಾತಾವರಣವನ್ನು ರೂಪಿಸಿಕೊಡುವಲ್ಲಿ ಹಾನಿಯುಂಟಾಗುತ್ತಿವೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ ಆಳ್ವರ ಪರಿಸರ ಕಾಳಜಿಯನ್ನು ಪ್ರಶಂಸಿದರು. ಕಾರ್ಯಕ್ರಮದಲ್ಲಿ ಮಂಗಳೂರಿನ ಸಂತ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ 12 ತಿಂಗಳ ಅಪ್ರೆಂಟಿಸ್ ತರಬೇತಿಗೆ ಅರ್ಹ ಪತ್ರಿಕೋಧ್ಯಮ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಉಡುಪಿ ಜಿಲ್ಲಾ ಕಚೇರಿಗೆ 2024 – 25 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯ ಇಬ್ಬರು ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಆಯ್ಕೆಯಾದ ಪ್ರತಿ ಅಪ್ರೆಂಟಿಸ್‌ಗೆ ತರಬೇತಿ ಅವಧಿಯಲ್ಲಿ ತಿಂಗಳಿಗೆ 15 ಸಾವಿರ ರೂ.ಗಳ ಸ್ಟೈಪಂಡ್ ನೀಡಲಾಗುವುದು. ಅಭ್ಯರ್ಥಿಯು ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರುವುದು ಕಡ್ಡಾಯ. ಕನ್ನಡ ಭಾಷೆ ಬಳಕೆಯಲ್ಲಿ ಪ್ರಬುದ್ಧತೆ ಇರಬೇಕು. ಅಭ್ಯರ್ಥಿಗಳ ವಯಸ್ಸು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದಂದು 35 ವರ್ಷದೊಳಗಿರಬೇಕು. ಅರ್ಜಿ ಸಲ್ಲಿಸಲು ನವೆಂಬರ್ 12 ಕೊನೆಯ ದಿನ. ಆಸಕ್ತರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಂಘಸಂಸ್ಥೆಗಳು ನಿತ್ಯನಿರಂರರವಾಗಿ ಸಾಮಾಜಿಕ ಕಳಕಳಿಯೊಂದಿಗೆ ಪರಿಸರವನ್ನು ಪ್ರೀತಿಸಿ ಸಾಮಾಜಿಕ ಬದ್ಧತೆಯನ್ನು ಪ್ರದರ್ಶಿಸುತ್ತಿರಬೇಕು ಈ ದಿಸೆಯಲ್ಲಿ ಪಂಚವರ್ಣದ ಸಮಾಜಮುಖಿ ಕಾರ್ಯ ಮಾದರಿಯಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ನುಡಿದರು. ಉಡುಪಿ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಇದೇ ಬರುವ ನವೆಂಬರ್ 16ರಂದು ಕೋಟದ ಗಾಂಧಿ ಮೈದಾನದಲ್ಲಿ ನಡೆಯಲಿರುವ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿ, ಪಂಚವರ್ಣದ ಪರಿಸರ ಸಂಬಂಧಿಸಿದ ಕಾರ್ಯಕ್ರಮ, ವಿದ್ಯಾರ್ಥಿಗಳನ್ನು ದತ್ತು ಪಡೆಯುವ ವಿವಿಧ ವಿಶೇಷ ಕಾರ್ಯಕ್ರಮಗಳು ಜನಸಾಮಾನ್ಯರ ಮನಮುಟ್ಟುವಂತ್ತಾಗಿದೆ. ಜಿಲ್ಲಾಡಳಿತ ಹಮ್ಮಿಕೊಂಡ ಹೆಚ್ಚಿನ ಕಾರ್ಯಕ್ರಮಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದೆ ಇಂತಹ ಸಂಸ್ಥೆಯ ರಾಜ್ಯೋತ್ಸವ ಕಾರ್ಯಕ್ರಮಗಳು ಹೊಸತನ ಹೊಸತೇರಾಗಿ ಸಂಭ್ರಮಿಸಲಿ ಎಂದು ಹಾರೈಸಿದರು. ಮುಖ್ಯ ಅಭ್ಯಾಗತರಾಗಿ ಉಡುಪಿಯ ಪ್ರಸಿದ್ಧ ಸೃಷ್ಠಿ ಇಂಜಿನಿಯರ್ ಮುಖ್ಯಸ್ಥ ಜಯರಾಜ್ ವಿ. ಶೆಟ್ಟಿ, ಪಂಚವರ್ಣದ ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಪಂಚವರ್ಣ ಯುವಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿ ಮೀನುಗಾರಿಕೆ ಬಂದರಿನಲ್ಲಿ ಹಾಗೂ ಅಳಿವೆಯಲ್ಲಿ ತುರ್ತು ಹೂಳೆತ್ತುವ ಕಾರ್ಯ ನಡೆಸಬೇಕೆಂದು ಗಂಗೊಳ್ಳಿಯ ಹಸಿ ಮೀನು ವ್ಯಾಪರಸ್ಥರ ಮತ್ತು ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ನಿಯೋಗ ರಾಜ್ಯದ ಮೀನುಗಾರಿಕೆ ಇಲಾಖೆ ಸಚಿವ ಮಂಕಾಳು ವೈದ್ಯ ಅವರನ್ನು ಗುರುವಾರ ಭೇಟಿ ಮಾಡಿ ಮನವಿ ಸಲ್ಲಿಸಿತು. ಮೀನುಗಾರರ ಬೇಡಿಕೆಗಳಿಗೆ ಸ್ಪಂದಿಸಿದ ಸಚಿವ ಮಂಕಾಳು ವೈದ್ಯ ಅವರು, ಹೂಳೆತ್ತುವ ಬಗ್ಗೆ ಇಲಾಖೆ ಅಧಿಕಾರಿಗಳ ಮೂಲಕ ವರದಿ ತರಿಸಿಕೊಂಡು ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು. ಸಚಿವರ ಸೂಚನೆ ಮೇರೆಗೆ ಗಂಗೊಳ್ಳಿ ಮೀನುಗಾರಿಕೆ ಬಂದರು ಪ್ರದೇಶಕ್ಕೆ ಶುಕ್ರವಾರ ಭೇಟಿ ನೀಡಿ, ಬಂದರು ಮತ್ತು ಮೀನುಗಾರಿಕೆ ಇಲಾಖೆಯ ಜೆಇ ಭಾನುಪ್ರಕಾಶ್ ಅವರು ಬಂದರು ಹಾಗೂ ಅಳಿವೆ ಪ್ರದೇಶವನ್ನು ವೀಕ್ಷಿಸಿ ಅಳಿವೆಯಲ್ಲಿ ತುರ್ತು ಹೂಳೆತ್ತುವ ಕಾಮಗಾರಿ ಪ್ರಾರಂಭಿಸುವ ಬಗ್ಗೆ ಇಲಾಖೆ ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು. ಕಳೆದ ನವೆಂಬರ್ ತಿಂಗಳಿನಲ್ಲಿ ಸುಮಾರು 4.6 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾದ ಅಳಿವೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: 14 ವಯೋಮಾನದ ಬಾಲಕರ ಕಬಡ್ಡಿಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಾಬ್ರಕಟ್ಟೆ ತಂಡ ಹೋಬಳಿ, ತಾಲೂಕು ಜಿಲ್ಲೆಯಲ್ಲಿ ತನ್ನ ತಂಡದ ಬಲಿಷ್ಠತೆಯನ್ನು ಪ್ರಚುರ ಪಡಿಸುತ್ತಾ ದೊಡ್ಡ ಅಂತರದೊಂದಿಗೆ ಉಳಿದ ತಂಡಗಳನ್ನು ಮಣಿಸಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿತ್ತು. ಅ.15ರಿಂದ 17ರ ವರೆಗೆ ಚಿಕ್ಕಮಗಳೂರಿನ ಕಡೂರಿನಲ್ಲಿ ನಡೆದ ಮೈಸೂರು ವಿಭಾಗ ಮಟ್ಟದಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿದ್ದ ತಂಡ ತೃತೀಯ ಸ್ಥಾನ ಪಡೆಯುವುದರೊಂದಿಗೆ ಶಾಲೆ ಹಾಗೂ ಉಡುಪಿ ಜಿಲ್ಲೆಗೆ ಕೀರ್ತಿಯನ್ನು ತಂದಿರುತ್ತದೆ. ಕ್ರೀಡಾ ಸ್ಪೂರ್ತಿ, ಸಮರ್ಪಣ ಮನೋಭಾವ ಮತ್ತು ಕಠಿಣ ಪರಿಶ್ರಮದಿಂದ ದೈಹಿಕ ಶಿಕ್ಷಕರಾದ ಗಜೇಂದ್ರ ಶೆಟ್ಟಿ ಅವರ ಗರಡಿಯಲ್ಲಿ ತಯಾರಾದ ಕುಮಾರ ರೋಹಿತ್ ನಾಯಕತ್ವದ ತಂಡ ಪ್ರಥಮ ಪಂದ್ಯಾಟದಲ್ಲಿ ಮೈಸೂರಿನ ವಿರುದ್ಧ 40-08ರ ದೊಡ್ಡ ಅಂತರದಲ್ಲಿ ಜಯಶಾಲಿಯಾಗಿ ಸೆಮಿಫೈನಲ್ ಹಂತ ತಲುಪಿತ್ತು. ಸೆಮಿಫೈನಲ್‌ನಲ್ಲಿ ಮಂಡ್ಯದ ವಿರುದ್ಧ ಕೇವಲ 08 ಅಂಕಗಳ ಅಂತರದಲ್ಲಿ ವಿರೋಚಿತ ಸೋಲನ್ನು ಅನುಭವಿಸಿತು. ಮೂರನೇ ಸ್ಥಾನಕ್ಕಾಗಿ ಹಾಸನ ತಂಡದ ವಿರುದ್ಧ ನಡೆದ ಪಂದ್ಯಾಟದಲ್ಲಿ 45-21ರ ಅಂತರದಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ದಕ್ಷಿಣ ಕನ್ನಡ – ಉಡುಪಿ ಸ್ಥಳೀಯ ಸಂಸ್ಥೆಗಳ ಕರ್ನಾಟಕ ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಗೆಲುವು ಶತಸಿದ್ಧ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿಶ್ವಾಸ ವ್ಯಕ್ತಪಡಿಸಿದ್ಧಾರೆ.  ಉಡುಪಿಯ ಕಾಂಗ್ರೆಸ್ ಭವನದಲ್ಲಿ ನಡೆದ ಚುನಾವಣಾ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಗೆಲುವು ನಿಶ್ಚಿತ. ಕರಾವಳಿಯಲ್ಲಿ ಪಕ್ಷದ ಅಭ್ಯರ್ಥಿ ರಾಜು ಪೂಜಾರಿ ಪರ ಒಲವು ಇದೆ. ಗೆಲುವಿಗೆ ಉತ್ತಮ ವಾತಾವರಣವಿದೆ. ಅದಕ್ಕಾಗಿ ಪಕ್ಷದ ನಾಯಕರು ಶ್ರಮಿಸುತ್ತಿದ್ದಾರೆ ಎಂದು ಹೇಳಿದರು. ಜನಪರ ಕಾರ್ಯಕ್ರಮಗಳನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತಿದ್ದೇವೆ. ಮತದಾರರು ಕೂಡ ಕಾಂಗ್ರೆಸ್‌ ಪಕ್ಷದ ಯೋಜನೆಗಳ ಬಗ್ಗೆ ವಿಶ್ವಾಸವಿಟ್ಟಿದ್ದಾರೆ. ಪಂಚ ಗ್ಯಾರಂಟಿ ಯೋಜನೆಗಳು ನಮ್ಮನ್ನು ಕೈ ಬಿಡುವುದಿಲ್ಲ. ಪ್ರತಿ ಪಂಚಾಯತಿಗೆ ಎರಡು ಕೋಟಿ ಅನುದಾನ ತರಲು ಉದ್ಯೋಗ ಖಾತ್ರಿ ಸಹಕಾರಿಯಾಗಿದೆ. ಇದನ್ನು ಜಾರಿಗೆ ತಂದ ಶ್ರೇಯಸ್ಸು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಇಂಡಿಯನ್ ರೆಡ್ ಕ್ರಾಸ್, ಲಯನ್ಸ್  ಕ್ಲಬ್ , ಹೆಚ್.ಡಿ.ಎಫ್.ಸಿ. ಬ್ಯಾಂಕ್ ಲಿಮಿಟೆಡ್, ರೆಡ್ ರಿಬ್ಬನ್ ಕ್ಲಬ್‌ ಕುಂದಾಪುರ, ಭಂಡಾರ್ಕಾರ್ಸ್ ಕಾಲೇಜಿನ ಎನ್.ಸಿ.ಸಿ ನೌಕಾದಳ ಮತ್ತು ಭೂದಳ, ರಾಷ್ಟ್ರೀಯ ಸೇವಾ ಯೋಜನೆ ಘಟಕ, ಯುಥ್ ರೆಡ್ ಕ್ರಾಸ್ ಘಟಕ, ರೇಂಜರ್ಸ್ ಮತ್ತು ರೋವರ್ಸ್ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವು ಶನಿವಾರದಂದು ನಡೆಯಿತು. ಕುಂದಾಪುರ ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರೇಮಾನಂದ ಅವರು ಉದ್ಘಾಟಿಸಿ ಮಾತನಾಡಿ, ವ್ಯಕ್ತಿಯ ಆರೋಗ್ಯದ ನೆಲೆಯಲ್ಲಿ ರಕ್ತದಾನ ಒಳ್ಳೆಯದು. ನಾಲ್ಕು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು. ಅಲ್ಲದೆ ರಕ್ತದಾನ ಪ್ರಕ್ರಿಯೆ ಯಲ್ಲಿ ನಿಮ್ಮ ರಕ್ತದಲ್ಲಿ ಮಲೇರಿಯಾ, ಹೆಪಾಟೈಟಿಸ್ ಹೀಗೆ ಬೇರೆ ಬೇರೆ ಪರೀಕ್ಷೆ ನಡೆಯುತ್ತದೆ. ಇದರಿಂದ ನಿಮಗೆ ಸಹಕಾರಿಯಾಗುತ್ತದೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ವಹಿಸಿದ್ದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಕುಂದಾಪುರದ ಭಾರತೀಯ ರೆಡ್ ಕ್ರಾಸ್ ಸಭಾಪತಿಗಳಾದ ಜಯಕರ ಶೆಟ್ಟಿ ಕೋಶಾಧಿಕಾರಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ಮತ್ತು ವಿಜ್ಞಾನ ವಿಭಾಗದ ಆಶ್ರಯದಲ್ಲಿ ವಿಭಾಗದ ಅಂತಿಮ ವರ್ಷದ ಬಿಸಿಎ ಹಾಗೂ ಬಿಎಸ್ಸಿ ವಿದ್ಯಾರ್ಥಿಗಳಿಗೆ ಮಣಿಪಾಲದ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ಗೆ ಅಧ್ಯಯನ ಭೇಟಿಯನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ರೋಬೋಟಿಕ್ಸ್, ಕೃತಕ ಬುದ್ಧಿಮತ್ತೆ, ಮತ್ತಿತರ ಆಧುನಿಕ ತಂತ್ರಜ್ಞಾನಗಳ ಕುರಿತು ಮಾಹಿತಿಯನ್ನು ನೀಡಲಾಯಿತು.  ಈ ಸಂದರ್ಭದಲ್ಲಿ ವಿಭಾಗದ ಪ್ರಾಧ್ಯಾಪಕರುಗಳಾದ ವಿಲ್ಮಾ, ಹರೀಶ್ ಕಾಂಚನ್, ಶ್ರೀಕಾಂತ್, ಮೇಘಾ ಮತ್ತು ನಿರ್ಮಲಾ ವಿದ್ಯಾರ್ಥಿಗಳೊಂದಿಗೆ ಪಾಲ್ಗೊಂಡಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಹಾಗೂ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ಸಹಯೋಗದೊಂದಿಗೆ ನಡೆಯುತ್ತಿರುವ ಲೇಕ್ 2024 – 14ನೇ ದ್ವೈವಾರ್ಷಿಕ  ವಿಚಾರ ಸಂಕಿರಣ ಎರಡನೇ  ದಿನ ಒಟ್ಟು ತಾಂತ್ರಿಕ ಅವಧಿಯಲ್ಲಿ ನಗರ ವಿಭಾಗದ ಆರರಿಂದ ಒಂಬತ್ತನೇ ತರಗತಿಯ  83 ವಿದ್ಯಾರ್ಥಿಗಳು ಹಾಗೂ ಗ್ರಾಮೀಣ ವಿಭಾಗದಿಂದ 45 ವಿದ್ಯಾರ್ಥಿಗಳ ಪ್ರಸ್ತುತಿ, 21 ಸಂಶೋಧಕರು ಮತ್ತು ಅಧ್ಯಾಪಕರಿಂದ ಪ್ರಸ್ತುತಿ, ಹತ್ತರಿಂದ ಹನ್ನೆರಡನೇ ತರಗತಿಯ 32 ವಿದ್ಯಾರ್ಥಿಗಳ ಪ್ರಸ್ತುತಿ, ಪದವಿ, ಸ್ನಾತಕೋತ್ತರ ಪದವಿ, ಸಂಶೋಧನಾ ವಿದ್ಯಾರ್ಥಿಗಳಿಂದ  ಒಟ್ಟು  38  ಜನರ ವಿಚಾರ ಮಂಡನೆ ಕಾಲೇಜಿನ ವಿವಿಧ ಸಭಾಂಗಣದಲ್ಲಿ ನಡೆಯಿತು. ಜೊತೆಯಲ್ಲಿ, ಎಲ್ಲಾ ವರ್ಗಗಳಲ್ಲಿ  ಒಟ್ಟು  63 ಸಂಶೋಧನಾ ಆಸಕ್ತರು  ಪೋಸ್ಟರ್ ಪ್ರಸ್ತುತಿಯಲ್ಲಿ ಭಾಗಿಯಾದರು. ಮೈಕ್ರೋ ಪ್ಲಾಸ್ಟಿಕ್ ಕಾರಣಅಂತರರಾಷ್ಟ್ರೀಯ ಸಂಶೋಧನಾ ಪ್ರಸ್ತುತಿಯಲ್ಲಿ ರಷ್ಯಾದ ನಿಕೋಲಾಯ್ ಫಿಲೆಟೊವ್- ಹವಾಮಾನ ತಾಪಮಾನ ಮತ್ತು ಮಾನವಜನ್ಯ ಪರಿಣಾಮಗಳು: ರಷ್ಯಾದ ಕೆರೆಗಳ ಆಧುನಿಕ ಸ್ಥಿತಿ ಮತ್ತು ಬದಲಾವಣೆಗಳಲ್ಲಿ ಪರಿಸರ ಮತ್ತು ಸಾಮಾಜಿಕ, ಆರ್ಥಿಕ ಅಂಶಗಳ ಕುರಿತು ಮಾತನಾಡಿ,…

Read More