ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಸರಕಾರ ಕೊಂಕಣ ರೈಲ್ವೆ ಯನ್ನು ಕೇಂದ್ರ ಸರಕಾರಕ್ಕೆ ಹಸ್ತಾಂತ ರಿಸುವ ಮೂಲಕ ಪ್ರಗತಿಗೆ ಸಹಕರಿಸಬೇಕು ಎಂದು ಕುಂದಾಪುರ ರೈಲ್ವೆ ಪ್ರಯಾಣಿಕರ ಹಿತರಕ್ಷಣಾ ಸಮಿತಿ ಒತ್ತಾಯಿಸಿದೆ. ಕೊಂಕಣ ರೈಲ್ವೆ ನಿಗಮದ ಎರಡನೇ ದೊಡ್ಡ ಆಡಳಿತ ಪಾಲುದಾರನಾಗಿರುವ ಕರ್ನಾಟಕ ಸರಕಾರ ಕೊಂಕಣ ರೈಲ್ವೆ ಡಬ್ಲಿಂಗ್ ಮಾಡಲು ತನ್ನ ಪಾಲಿನ ಹಣಕಾಸು ನೆರವು ನೀಡಲು ಒಪ್ಪದ ಕಾರಣ ಡಬ್ಲಿಂಗ್ ಯೋಜನೆಯೇ ರದ್ದಾಗಿರುವ ಮಾಹಿತಿ ಈಗ ಹೊರಬಿದ್ದಿದೆ ಎಂದು ಸಮಿತಿ ಹೇಳಿದೆ. ಸ್ಟೇಶನ್, ಟರ್ಮಿನಲ್ ಸೌಲಭ್ಯಗಳಿಗೆ ಅಗಾಧ ಹಣಕಾಸಿನ ನೆರವು ಬೇಕಾಗಿದ್ದು ಕೇವಲ ಭಾರತೀಯ ರೈಲ್ವೇ ಮಾತ್ರವೇ ತನ್ನ ಪಾಲಿನ ಹಣ ಬಿಡುಗಡೆ ಮಾಡುತ್ತಿದ್ದು ಕರ್ನಾಟಕ ಸರಕಾರ ಶೇರು ಖರೀದಿ ಬಿಟ್ಟರೆ ಇನ್ನುಳಿದ ಯಾವುದೇ ಪ್ರಮುಖ ಮೂಲ ಸೌಲಭ್ಯಗಳಿಗೆ ಹಣಕಾಸು ನೆರವು ನೀಡುತ್ತಿಲ್ಲ ಎಂದು ಸಮಿತಿ ಆರೋಪಿಸಿದೆ. ಕರ್ನಾಟಕ ರಾಜ್ಯ ನೀಡಬೇಕಾದ ಸುಮಾರು ಐದು ಸಾವಿರ ಕೋಟಿ ಹಣ ನೀಡಲು ಸಾಧ್ಯವಿಲ್ಲವಾದರೆ ಕೇಂದ್ರ ಸರಕಾರವೇ ಆ ಹಣಕಾಸು ಪೂರೈಕೆ ಮಾಡಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಯಡಮೊಗೆ ಗ್ರಾಮದ ತಟ್ಟೆಗುಳಿ ನಿವಾಸಿ ಕುಶಲ (38) ಅವರು ತೆಂಗಿನಮರದಿಂದ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಅವರು ಕೃಷಿ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದು ನ.21ರಂದು ತೆಂಗಿನಮರ ಏರಿ ಕಾಯಿ ಕೊಯ್ಯುತ್ತಿರುವ ವೇಳೆ ಆಕಸ್ಮಿಕವಾಗಿ ಕೆಳಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಚಿಕಿತ್ಸೆಯ ಬಗ್ಗೆ ಅವರನ್ನು ಮಂಗಳೂರಿನ ವೆಸ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಶುಕ್ರವಾರ ಮೃತಪಟ್ಟಿ ದ್ದಾರೆ. ಮೃತರ ಸಹೋದರ ಚಂದ್ರ ನೀಡಿದ ದೂರಿನಂತೆ ಶಂಕರನಾರಾಯಣ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಟಾಟ್ ಕಾಂ ಸುದ್ದಿ.ಉಡುಪಿ: 2023 ರ ಡಿಸೆಂಬರ್ ಮಾಹೆಯಿಂದ 2025 ರ ಜನವರಿ ಮಾಹೆಯವರೆಗೆ ಅವಧಿ ಮುಕ್ತಾಯವಾಗಲಿರುವ ಜಿಲ್ಲೆಯ ಕುಂದಾಪುರ ತಾಲೂಕಿನ 45-ಗಂಗೊಳ್ಳಿ ಗ್ರಾಮ ಪಂಚಾಯತಿಯ 33 ಸದಸ್ಯ ಸ್ಥಾನಗಳಿಗೆ ಸಾರ್ವತ್ರಿಕ ಚುನಾವಣೆ ನಡೆಸುವಂತೆ ವೇಳಾಪಟ್ಟಿಯನ್ನು ನಿಗಧಿಪಡಿಸಿ ರಾಜ್ಯ ಚುನಾವಣಾ ಆಯೋಗವು ಆದೇಶ ಹೊರಡಿಸಿದ್ದು, ಆಯೋಗದ ನಿರ್ದೇಶನದಂತೆ ಡಿಸೆಂಬರ್ 8ರಂದು ಮತದಾನ ನಡೆಯಲಿದೆ. ಈ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಮುಕ್ತ ಮತ್ತು ನ್ಯಾಯಯುತ ಹಾಗೂ ನಿಷ್ಪಕ್ಷಪಾತವಾಗಿ ಚುನಾವಣೆಯನ್ನು ನಡೆಸುವ ನಿಟ್ಟಿನಲ್ಲಿ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಕಲಂ 163 ಮತ್ತು ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 35 ರಡಿ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ, ಡಿಸೆಂಬರ್ 6 ರ ಬೆಳಗ್ಗೆ 6 ಗಂಟೆಯಿAದ ಡಿಸೆಂಬರ್ 8 ರಂದು ಮತದಾನ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ಈ ಮೆಲ್ಕಂಡ ತಾಲೂಕಿನ ಚುನಾವಣೆ ನಡೆಯಲಿರುವ ಗ್ರಾಮ ಪಂಚಾಯತ್ ಕ್ಷೇತ್ರ ವ್ಯಾಪ್ತಿಯ ಪ್ರದೇಶಗಳಲ್ಲಿನ ಮತದಾನ ಕೇಂದ್ರಗಳ ಸುತ್ತಮುತ್ತ 100 ಮೀಟರ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿಶ್ವ ಶ್ರೇಷ್ಟ ಸಾಧನೆಗಳ ಮೂಲಕ ತಾಯ್ನಾಡಿಗೆ ಕೀರ್ತಿಯನ್ನು ತರುತ್ತಿರುವ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿಶಾಲೆಯು 2024ರ ಸ್ಟಾರ್ ಎಜ್ಯುಕೇಷನ್ ರಾಷ್ಟ್ರೀಯ ಮಟ್ಟದ ಗೌರವ ಪುರಸ್ಕಾರಕ್ಕೆ ಭಾಜನವಾಯಿತು. ನ26.ರಂದು ಮುಂಬೈಯ ಎಂ ಎಂ ಆರ್ ಡಿ ಎ ಮೈದಾನದಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ ಮತ್ತು ಆಡಳಿತಾಧಿಕಾರಿ ವೀಣಾ ರಶ್ಮೀ ಎಂ. ಪಾಲ್ಗೊಂಡು ಪ್ರಶಸ್ತಿಯನ್ನು ಸ್ವೀಕರಿಸಿದರು. ಮುಂಬೈನ ಎಫ್ ಎಫ್ ಟಿ ಪ್ರೈವೆಟ್ ಲಿಮಿಟೆಡ್ನ ನಿರ್ದೇಶಕರಾದ ಅಲಾಖ್ ಸಿಂಗ್ ಪ್ರಶಸ್ತಿಯನ್ನು ವಿತರಿಸಿದರು. ಶಿಕ್ಷಣ ಕ್ಷೇತ್ರದಲ್ಲಿ ತರಲಾಗುತ್ತಿರುವ ಕ್ರಾಂತಿಕಾರಿ ಬದಲಾವಣೆಗಳು-ಸುಧಾರಣೆಗಳು, ತಂತ್ರಜ್ಞಾನದ ಪರಿಣಾಮಕಾರಿ ಬಳಕೆ, ಪರಿಸರ ಸ್ನೇಹಿ ಕಾರ್ಯಕ್ರಮಗಳು, ಸಮಾಜಕ್ಕೆ ನೀಡಲಾಗುತ್ತಿರುವ ಕೊಡುಗೆಗಳು ಇತ್ಯಾದಿ ಅಂಶಗಳ ಆಧಾರದಲ್ಲಿ ಶ್ರೀ ಸಿದ್ಧಿವಿನಾಯಕ ವಸತಿಶಾಲೆಯು ಈ ಪ್ರತಿಷ್ಠಿತ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿತು. ಪ್ರಶಸ್ತಿ ಸ್ವೀಕರಿಸಿದ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿ ಹಾಗೂ ಶಾಲಾ ಪ್ರಾಂಶುಪಾಲರಾದ ಶರಣಕುಮಾರ ಮಾತನಾಡುತ್ತಾ, ನಮ್ಮ ಸಂಸ್ಥೆಯ ಸಂಸ್ಥಾಪಕರಾದ ವೇದಮೂರ್ತಿ ಹೆಚ್ ರಾಮಚಂದ್ರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಡ್ರೋನ್ ಆಧಾರಿತ ಫೋಟೋಗ್ರಾಫಿ ಮತ್ತು ವೀಡಿಯೋಗ್ರಾಫಿ ತರಬೇತಿಗಾಗಿ (ಮೂಲನಿವಾಸಿ, ಅಲೆಮಾರಿ, ಅರೆಅಲೆಮಾರಿ ಸೂಕ್ಷ್ಮ/ಅತಿ ಸೂಕ್ಷ್ಮ ಪರಿಶಿಷ್ಟ ಪಂಗಡದ ಸಮುದಾಯದವರಿಗೆ ಆದ್ಯತೆ) ಪರಿಶಿಷ್ಟ ಪಂಗಡ ಯುವಕ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 12 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಐ.ಟಿ.ಡಿ.ಪಿ ಕಚೇರಿ, ರಜತಾದ್ರಿ, ಮಣಿಪಾಲ ಉಡುಪಿ ದೂ.ಸಂಖ್ಯೆ: 0820-2574814 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಜಪ್ತಿಯ ಸಮೀಪದ ರಸ್ತೆ ಬದಿಯಲ್ಲಿದ್ದ ತಗಡು ಶೀಟಿನ ಸಣ್ಣ ದಿನಸಿ ಅಂಗಡಿಗೆ ಬೆಂಕಿ ತಗುಲಿ ರೂ. 2ಲಕ್ಷಕ್ಕೂ ಅಧಿಕ ನಷ್ಟವಾದ ಘಟನೆ ನಡೆದಿದೆ.. ಅಂಬಿಕಾ ಮತ್ತು ಅವರ ಪತಿ ನಡೆಸುತ್ತಿದ್ದ ದಿನಸಿ ಅಂಗಡಿಯಲ್ಲಿ ದಿನಸಿ ಸಾಮಗ್ರಿ, ತಿಂಡಿ, ಕೋಲ್ಡ್ ಡ್ರಿಂಕ್ಸ್, ತರಕಾರಿ ಇನ್ನಿತರ ಸಾಮಗ್ರಿಗಳಿದ್ದವು. ಅಂಗಡಿ ಮಾಲೀಕರು ರಾತ್ರಿ ಬಾಗಿಲು ಹಾಕಿ ಮನೆಗೆ ಹೋದ ಬಳಿಕ ರಾತ್ರಿ 10 ಗಂಟೆಗೆ ಸುಮಾರಿಗೆ ಬೆಂಕಿ ಬಿದ್ದಿದೆ. ಅಂಗಡಿ ಸಮೀಪದ ಮನೆಯ ಅಭಿ ಅವರು ಫೋನ್ ಮಾಡಿ ಅಂಗಡಿಗೆ ಬೆಂಕಿ ಬಿದ್ದಿರುವುದಾಗಿ ತಿಳಿಸಿದ್ದರು. ಅಕ್ಕಪಕ್ಕದವರು ಹಾಗೂ ಇತರರು ಸೇರಿ ನೀರು ಹಾಕಿ ಬೆಂಕಿ ನಂದಿಸಿದ್ದರೂ ಅಂಗಡಿಯಲ್ಲಿದ್ದ ಸೊತ್ತುಗಳು ಸುಟ್ಟು ಹೋಗಿವೆ. ಬಳಿಕ ಪರಿಶೀಲಿಸಿದಾಗ ಅಂಗಡಿಯ ಹಿಂಬದಿಯ ತಗಡನ್ನು ಎತ್ತಿ ಒಳಗೆ ಬೆಂಕಿ ಹಾಕಿರುವುದು ಕಂಡು ಬಂದಿದೆ. ಫ್ರಿಜ್, ವಿವಿಧ ಎಣ್ಣೆಗಳ ಪೆಟ್ಟಿಗೆಗಳು ಹಾಗೂ ಪ್ರತಿನಿತ್ಯ ಮಾರಾಟಕ್ಕೆ ಇಟ್ಟಿದ್ದ ಸಾಮಗ್ರಿಗಳು ಸುಟ್ಟು ಹೋಗಿ ಅಂದಾಜು 2 ಲಕ್ಷ ರೂ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಳೆದ ಹತ್ತು ವರ್ಷಗಳಿಂದ ಯುವ ಬಂಟರ ಸಂಘ ನಡೆದು ಬಂದ ಹಾದಿ ಅತ್ಯಂತ ಸ್ಮರಣೀಯವಾದದ್ದು. ಕಳೆದ ಎರಡು ವರ್ಷದ ದಶಮ ಸಂಭ್ರಮದ ಕಾಲಘಟ್ಟದಲ್ಲಿ ತನ್ನ ವಿಶಿಷ್ಟ ಕಾರ್ಯಕ್ರಮಗಳ ಮೂಲಕ ಕರ್ನಾಟಕದ ಎಲ್ಲಾ ಸಂಘಗಳಿಗೆ ಮಾದರಿಯಾಗಿ ತೋರಿಸಿ ಕೊಟ್ಟಿದ್ದಲ್ಲದೆ, ಜಾಗತಿಕ ಮಟ್ಟದಲ್ಲೂ ಸಹ ಮನ್ನಣೆಯನ್ನು ಪಡೆದುಕೊಂಡಿದೆ ಎಂದು ಮುಂಬೈನ ಯುವ ಉದ್ಯಮಿ, ಯುವ ಬಂಟರ ಸಂಘದ ನಿರ್ದೇಶಕರು ಆದ ಬೆಳ್ಳಾಡಿ ಅಶೋಕ್ ಶೆಟ್ಟಿ ಹೇಳಿದರು. ಕುಂದಾಪುರ ತಾಲೂಕು ಯುವ ಬಂಟರ ಸಂಘದ 2024 – 26ನೇ ಸಾಲಿನ ನೂತನ ಅಧ್ಯಕ್ಷರ ಆಡಳಿತಾವಧಿಯ ಕಾರ್ಯಕ್ರಮಗಳ ರೂಪುರೇಷೆಗಳ ಕೈಪಿಡಿಯನ್ನು ಬೆಳ್ಳಾಡಿಯಲ್ಲಿ ಅನಾವರಣಗೊಳಿಸಿ ಅವರು ಮಾತನಾಡಿದರು. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ನಿತೀಶ್ ಶೆಟ್ಟಿ ಬಸ್ರೂರು ವಹಿಸಿದ್ದರು. ಸ್ಥಾಪಕಾಧ್ಯಕ್ಷ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಶುಭ ಹಾರೈಸಿ ಈ ಹಿಂದೆ ಸಂಘಕ್ಕೆ ಉದಾರ ಮನಸ್ಸಿನಿಂದ ದೇಣಿಗೆಗಳನ್ನು ನೀಡಿದ ದಾನಿಗಳನ್ನು ಸ್ಮರಿಸಿಕೊಂಡರು. ನಿಕಟ ಪೂರ್ವ ಅಧ್ಯಕ್ಷರಾದ ಸುನಿಲ್ ಶೆಟ್ಟಿ ಹೇರಿಕುದ್ರು, ನಿಕಟ ಪೂರ್ವ ಕಾರ್ಯದರ್ಶಿ ಉದಯ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದರೆ: ವಿದ್ಯಾರ್ಥಿಗಳ ಪ್ರತೀ ಹೆಜ್ಜೆಯಲ್ಲೂ ಗುರುವಿನ ಸ್ಥಾನ ಇರಬೇಕು ಎಂದು ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟ್ರೀಸ್ ಆಫ್ ಇಂಡಿಯಾದ (ಐಸಿಎಸ್ಐ) ಕೇಂದ್ರ ಸಮಿತಿ ಸದಸ್ಯ ಸಿ. ಎಸ್. ದ್ವಾರಕಾನಂದ್ ಹೇಳಿದರು. ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟ್ರೀಸ್ ಆಫ್ ಇಂಡಿಯಾ ಸಹಯೋಗದಲ್ಲಿ ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಗುರುವಾರ ನಡೆದ ’ಶಿಕ್ಷಣ ತಜ್ಞರ ಸಶಕ್ತೀಕರಣ – ಶಿಕ್ಷಕರ ಸಮ್ಮೇಳನ’ದಲ್ಲಿ ಅವರು ಮಾತನಾಡಿದರು. ಇಷ್ಟಪಟ್ಟು ಓದಬೇಕು. ಕಷ್ಟ ಪಟ್ಟು ಓದುವ ಹಾಗೆ ಆಗಬಾರದು. ವಿದ್ಯಾರ್ಥಿಗಳಿಗೆ ಗುರಿ ಅತಿ ಮುಖ್ಯ. ಯಾವುದಕ್ಕಾಗಿ ಓದುತ್ತಿದ್ದೇವೆ ಎನ್ನುವ ಜ್ಞಾನ ನಿಮ್ಮಲ್ಲಿರಬೇಕು. ನಿಮ್ಮ ಸಮಯವನ್ನು ಓದಿಗೆ ಮೀಸಲಿಡಬೇಕು. ಇಷ್ಟ ಪಟ್ಟು ಕೆಲಸ ಮಾಡಿದಾಗ ಅದು ಕಷ್ಟ ವೆನಿಸುವುದಿಲ್ಲ’ ಎಂದರು. ಎಸ್. ಕೆ. ಎಫ್. ಎಲಿಕ್ಸರ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನಿರ್ದೇಶಕ ಪ್ರಜ್ವಲ್ ಆಚಾರ್ ಮಾತನಾಡಿ, ಶಿಕ್ಷಕರು ತುಂಬಾ ಸವಾಲುಗಳನ್ನು ಎದುರಿಸಬೇಕಾಗಿದೆ. ಶಿಕ್ಷಣ ನೀಡುವ ಜೊತೆಗೆ ತಂತ್ರಜ್ಞಾನಕ್ಕೆ ಸ್ಪಂದಿಸಬೇಕು. ನಾಳೆಯ ಸಮಾಜಕ್ಕೆ ನಾಯಕರನ್ನು ನೀಡುವ ದೊಡ್ಡ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಪ್ರಾಂಶುಪಾಲರಾದ ಶರಣ ಕುಮಾರ ಸ್ಟಾರ್ ಎಜ್ಯುಕೇಷನ್ ಅವಾರ್ಡ್ನವರು ಕೊಡಮಾಡುವ 2024ನೇ ಸಾಲಿನ ರಾಷ್ಟ್ರೀಯಮಟ್ಟದ ‘ಬೆಸ್ಟ್ ಪ್ರಿನ್ಸಿಪಾಲ್’ ಪ್ರಶಸ್ತಿಗೆ ಭಾಜನರಾದರು. 2024ರ ಶೈಕ್ಷಣಿಕ ವರ್ಷದಲ್ಲಿ ಶಿಕ್ಷಣಕ್ಷೇತ್ರದಲ್ಲಿ ಉತ್ಕೃಷ್ಟ ಸಾಧನೆ, ಅಸಾಧಾರಣ ನಾಯಕತ್ವ, ಕರ್ತವ್ಯದಲ್ಲಿ ಅಚಲ ನಿಷ್ಠೆ, ಸೃಜನಾತ್ಮಕತೆ, ಪ್ರಕೃತಿ ಸಂರಕ್ಷಣೆಗೆ ವಿನೂತನ ಶೈಕ್ಷಣಿಕ ಕಾರ್ಯಕ್ರಮಗಳು ಇತ್ಯಾದಿ ಮಾನದಂಡಗಳ ಮೇಲೆ ಕೊಡಮಾಡುವ ಪ್ರಶಸ್ತಿ ಇದಾಗಿದ್ದು, ನ.26 ರಂದು ಮುಂಬೈನ ಎಂ ಎಂ ಆರ್ ಡಿ ಎ ಮೈದಾನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಮುಂಬೈನ ಎಫ್ ಎಫ್ ಟಿ ಪ್ರೈವೆಟ್ ಲಿಮಿಟೆಡ್ನ ನಿರ್ದೇಶಕರಾದ ಅಲಾಖ್ ಸಿಂಗ್ ಪ್ರಶಸ್ತಿಯನ್ನು ವಿತರಿಸಿದರು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಶರಣಕುಮಾರ “ಈ ಗೌರವವು ನನ್ನ ವೈಯಕ್ತಿಕ ಸಾಧನೆಯಲ್ಲ, ಈ ಗೌರವವು ನಮ್ಮ ತಂಡದ ಶ್ರೇಷ್ಠ ಪ್ರಯತ್ನಗಳ ಸಾಧನೆಯ ಸಮರ್ಪಣೆಯ ಪ್ರತಿಫಲವಾಗಿದೆ. ಈ ಪ್ರಶಸ್ತಿಯು ದೇಶಾದಾದ್ಯಂತ ಶಿಕ್ಷಣ ಕ್ಷೇತ್ರದಲ್ಲಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಮಹತ್ವವನ್ನು ಮತ್ತಷ್ಟು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕ್ರೀಡೆ ವಿದ್ಯಾರ್ಥಿಗಳ ಆರೋಗ್ಯ ವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಕ್ರೀಡೆಯಲ್ಲಿ ಭಾಗವಹಿಸುವುದು ಪದಕ ಗಳಿಸುವುದಕ್ಕೆ ಸೀಮಿತವಾಗಬಾರದು ಎಂದು ಉಪ್ಪುಂದ ಇಲ್ಲಿನ ದೈಹಿಕ ಶಿಕ್ಷಣ ಶಿಕ್ಷಕರಾದ ಮಂಜುನಾಥ್ ಶೆಟ್ಟಿ ಅವರು ತಿಳಿಸಿದ್ದಾರೆ. ಅವರು ನ. 29ರಂದು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಶ್ರೀ ವೆಂಕಟರಮಣ ದೇವ್ ಎಜುಕೇಶನಲ್ & ಕಲ್ಚರಲ್ ಟ್ರಸ್ಟ್ ನ ಕಾರ್ಯದರ್ಶಿ ಕೆ.ರಾಧಾಕೃಷ್ಣ ಶೆಣೈ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಆರೋಗ್ಯವೇ ಭಾಗ್ಯವಾಗಿರುವುದರಿಂದ ಕ್ರೀಡಾ ಚಟುವಟಿಕೆಯಲ್ಲಿ ಭಾಗವಹಿಸಿಸುವುದರ ಮೂಲಕ ಸದೃಢ ಆರೋಗ್ಯವನ್ನು ಹೊಂದಿ ಎಂದು ಶುಭ ಹಾರೈಸಿದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಶ್ರೀ ವೆಂಕಟರಮಣ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ, ಪ್ರಾಥಮಿಕ ವಿಭಾಗದ ಮುಖ್ಯಸ್ಥರಾದ ರೇಷ್ಮಾ ಡಿಸೋಜಾ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥರಾದ ಪ್ರಮೀಳಾ ಡಿಸೋಜಾ ಉಪಸ್ಥಿತರಿದ್ದರು. ಕ್ರೀಡಾ ಕಾರ್ಯದರ್ಶಿ ಶಬರೀಶ್ ಪ್ರತಿಜ್ಞಾ ವಿಧಿ ಬೋಧಿಸಿದನು. ವಿದ್ಯಾರ್ಥಿಗಳನ್ನು ಶ್ರದ್ಧಾ, ವಿದ್ಯಾ, ಉನ್ನತಿ…
