ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಯಡಾಡಿ- ಮತ್ಯಾಡಿ ಇದರ ವಾರ್ಷಿಕ ಕ್ರೀಡಾಕೂಟವು ಕುಂದಾಪುರ ಗಾಂಧಿ ಮೈದಾನದಲ್ಲಿ ನಡೆಯಿತು. ಉಡುಪಿ ಲೋಕಸಭಾ ಕ್ಷೇತ್ರ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಅವರು ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ, ” ಸಾಧನೆಯಲ್ಲಿ ಛಲವಿದ್ದವರಿಗೆ ಯಾವುದೂ ಹಿನ್ನಡೆಯಾಗುವುದಿಲ್ಲ. ನಿರ್ದಿಷ್ಟವಾದ ಗುರಿ ಉದ್ದೇಶದಿಂದ ಸ್ಪಷ್ಟವಾದ ದಾರಿಯಲ್ಲಿ ಸಾಗಿದಾಗ ಯಶಸ್ಸು ಖಂಡಿತ ಸಿಗುತ್ತದೆ. ಕ್ರೀಡಾ ಕ್ಷೇತ್ರದಲ್ಲಿ ಸೋಲು ಮತ್ತು ಗೆಲುವು ಸಾಮಾನ್ಯ. ಅವೆರಡನ್ನೂ ಸಮಾನವಾಗಿ ಸ್ವೀಕರಿಸಿ ನಿರಂತರ ಪ್ರಯತ್ನ ಮಾಡಬೇಕು.ಕ್ರೀಡಾ ಕ್ಷೇತ್ರದಲ್ಲಿ ಅಸಕ್ತಿಯುಳ್ಳ ಮಕ್ಕಳಿಗೆ ಹಿಮಾಲಯ ಪರ್ವತ ಏರಿದ ತೇನ್ ಸಿಂಗ್ ಮಾದರಿಯಾಗಬೇಕು. ಗ್ರಾಮೀಣ ಪ್ರದೇಶದ ಮಕ್ಕಳು ಕೂಡ ಕ್ರೀಡಾ ವಿಭಾಗದಲ್ಲಿ ಹೆಚ್ಚಿನ ಸಾಧನೆ ಮಾಡುವಂತಾಗಬೇಕು. ಡಾ. ರಮೇಶ್ ಶೆಟ್ಟಿ ಅವರ ಸಮರ್ಥವಾದ ನೇತೃತ್ವದಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಮತ್ತು ಸುಜ್ಞಾನ ಪದವಿ ಪೂರ್ವ ಕಾಲೇಜು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡುತ್ತಿದ್ದು,…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್ ಆಯೋಜನೆಯಲ್ಲಿ ರೋಟರಿ ಜಿಲ್ಲೆ 3182 ಇದರ ಜಿಲ್ಲಾ ಸಾಂಸ್ಕೃತಿಕ ಉತ್ಸವ ದಿಗಣ ಕಾರ್ಯಕ್ರಮ ಇತ್ತೀಚಿಗೆ ಜರುಗಿತು. ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ರೋಟರಿ ಕ್ಲಬ್ ಬೈಂದೂರು ಚಾಂಪಿಯನ್ ಆಗಿ ಹೊರಹೊಮ್ಮಿತು. ಭಾವಗೀತೆ, ಯುಗಳ ಗೀತೆ ಹಾಗೂ ಸಮೂಹ ನೃತ್ಯ ವಿಭಾಗದಲ್ಲಿ ಬೈಂದೂರು ರೋಟರಿ ಪ್ರಥಮ ಸ್ಥಾನ ಪಡೆದುಕೊಂಡಿತ್ತು. ರೋಟರಿ ಕ್ಲಬ್ ಕುಂದಾಪುರ ರನ್ನರ್‌ಅಪ್ ಆಯಿತು. ಪ್ರಶಸ್ತಿ ಸ್ವೀಕರಿಸುವ ವೇಳೆ ರೋಟರಿ ಕ್ಲಬ್ ಬೈಂದೂರು ಅಧ್ಯಕ್ಷರಾದ ಮೋಹನ್ ರೇವಣ್ಕರ್, ಪೂರ್ವಾಧ್ಯಕ್ಷರುಗಳಾದ ಐ. ನಾರಾಯಣ, ಡಾ. ಪ್ರವೀಣ್ ಶೆಟ್ಟಿ, ಪ್ರಸಾದ್ ಪ್ರಭು, ಸುಧಾಕರ ಪಿ, ಮಂಜುನಾಥ ಮಹಾಲೆ, ಉದಯ್ ಆಚಾರ್, ಕಾರ್ಯದರ್ಶಿ ಸುನಿಲ್ ಹೆಚ್. ಜಿ., ವಿವಿಧ ಸ್ಪರ್ಧಿಗಳು ಹಾಗೂ ಬೈಂದೂರು ರೋಟರಿ ಕುಟುಂಬದ ಸದಸ್ಯರುಗಳು ಉಪಸ್ಥಿತರಿದ್ದರು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್ ಅಧ್ಯಕ್ಷ ಶೇಖರ್ ಎನ್. ಶೆಟ್ಟಿ ವಹಿಸಿದ್ದರು. ರೋಟರಿ ಜಿಲ್ಲಾ ಗವರ್ನರ್ ದೇವ್ ಆನಂದ್, ಮಾಜಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಅಂಪಾರು ಗ್ರಾಮದ ಹೆಬ್ರಿಯ ನೆಲ್ಲಿಕಟ್ಟೆಯ ನಿವಾಸಿ ಮನೋಜ್ (48) ಅವರು ತಲಕಲ್‌ಗುಡ್ಡೆಯ ರಾಜ್ಯ ಹೆದ್ದಾರಿಯಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದು ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನ. 26ರಂದು ಮೃತಪಟ್ಟರು. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ನಿವೃತ್ತ ಇತಿಹಾಸ ಉಪನ್ಯಾಸಕ ಮತ್ತು ಉತ್ತಮ ಕೃಷಿಕರು ಆಗಿರುವ ಹೊಸಾಡು ಭಾಸ್ಕರ ಶೆಟ್ಟಿ ಅವರಿಗೆ ಗಂಗೊಳ್ಳಿಯ ಸ್ನೇಹಿತರ ಬಳಗದಿಂದ ಅಭಿಮಾನದ ಸನ್ಮಾನ ಕಾರ್ಯಕ್ರಮವು ಗಂಗೊಳ್ಳಿಯ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ನಮೆಂಬರ್ 28ರ ಗುರುವಾರ ಸಂಜೆ ನಡೆಯಲಿರುವುದು. ಜಿ ಎಸ್ ವಿ ಎಸ್ ಅಸೋಸಿಯೇಷನ್ ಅಧ್ಯಕ್ಷರಾದ ಡಾ. ಕಾಶಿನಾಥ್ ಪಿ ಪೈ ಸಭೆಯ ಅಧ್ಯಕ್ಷತೆಯನ್ನು ವಹಿಸಲಿದ್ದು, ಕುಂದಾಪುರದ ಚಿನ್ಮಯಿ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾ. ಉಮೇಶ್ ಪುತ್ರನ್, ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಮಾಜಿ ಪ್ರಾಂಶುಪಾಲ ಕೆ. ಎನ್ ಟಿ ನಂಬಿಯಾರ್, ಉಡುಪಿಯ ಖ್ಯಾತ ವಕೀಲರಾದ ಹೆಚ್ ರಾಘವೇಂದ್ರ ಶೆಟ್ಟಿ, ಸಮಾಜ ಸೇವಕಿ ಮಂಜುಳ ದೇವಾಡಿಗ ಮತ್ತು ಖ್ಯಾತ ಉದ್ಯಮಿ ಇಮ್ತಿಯಾಜ್ ಖಲೀಫೆ ಇವರು ಪಾಲ್ಗೊಳ್ಳಲಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಏಷ್ಯನೆಟ್ ಸುವರ್ಣ ಹಾಗೂ ಕನ್ನಡ ಪ್ರಭ ಪತ್ರಿಕೆ ಕೊಡಮಾಡುವ ಅಂತರಾಷ್ಟ್ರೀಯ ಮಟ್ಟದ ಪ್ರಶಸ್ತಿಗೆ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾಗಿರುವ ಗಣೇಶ್ ಮೊಗವೀರ ಅವರನ್ನು ಆಯ್ಕೆ ಮಾಡಲಾಗಿದೆ. ಅವರು ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ವಿಶೇಷ ಕೊಡುಗೆಗಳನ್ನು ಪರಿಗಣಿಸಿ ಆಯ್ಕೆ ಪ್ರಕ್ರಿಯೆಯ ಮೂಲಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ನ.28ರಂದು ವಿಯೆಟ್ನಾಂ ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಗಣ್ಯಾತಿಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ನಮ್ಮ ಸಂವಿಧಾನದ ಮೂಲತತ್ವಗಳ ಬೇರು ದೇಶದ ಇತಿಹಾಸ, ನಾಗರಿಕತೆ, ಸಂಸ್ಕೃತಿಯಲ್ಲಿದೆ. ನಮ್ಮದು ಅಪ್ಪಟ ದೇಶೀಯ, ಅಸಮಾನತೆ ನಿರ್ಮೂಲನೆಯ ಪರಿವರ್ತನಾಶೀಲ ಸಂವಿಧಾನ ಎಂದು ದೆಹಲಿ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ಕಾನೂನು ಪೀಠದ ಪ್ರಾಧ್ಯಾಪಕ ಡಾ. ಪಿ. ಪುನೀತ್ ಹೇಳಿದರು. ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಮಂಗಳವಾರ ಮಾನವಿಕ ವಿಭಾಗಗಳು ಹಮ್ಮಿಕೊಂಡ ‘ರಾಷ್ಟ್ರೀಯ ಸಂವಿಧಾನ ದಿನ’ ಆಚರಣೆಯಲ್ಲಿ ಅವರು ಮಾತನಾಡಿದರು. ಸಂವಿಧಾನ ಕುರಿತು ಅದರ ರಚನೆ ಸಂದರ್ಭದಲ್ಲಿಯೇ ಆರೋಪಗಳು ಬಂದಿದ್ದವು. ಆದರೆ, ಅದಕ್ಕೆ ರಚನಾ ಸಮಿತಿ ವಿಸ್ತೃತವಾಗಿ ಉತ್ತರಿಸಿತ್ತು ಎಂದರು. ಇತರರ ತಪ್ಪಿನಿಂದ ನೀವು ತಿದ್ದಿಕೊಳ್ಳಿ ಎಂದು ಚಾಣಕ್ಯ ಹೇಳಿದ್ದರು. ಜ್ಞಾನ ಎಲ್ಲೆಡೆಯಿಂದ ಬರಲಿ ಎಂದು ಋಗ್ವೇದ ಹೇಳಿದೆ. ಇದನ್ನು ಉಲ್ಲೇಖಿಸಿದ ಅಂಬೇಡ್ಕರ್, ಯಾವುದೇ ಉನ್ನತ ಮೌಲ್ಯಗಳನ್ನು ಅನುಕರಿಸುವುದು ಅಥವಾ ಅನುಸರಿಸುವುದು ತಪ್ಪಲ್ಲ ಎಂದು ಹೇಳಿದ್ದರು. ಸಂವಿಧಾನ ರಚನಾ ಸಮಿತಿಯಲ್ಲಿ ನಡೆದ ಚರ್ಚೆಯು ದೇಶದಲ್ಲಿ ನಡೆದ ಅತ್ಯುತ್ತಮ ಚರ್ಚೆ ಎಂದು ವಿವರಿಸಿದರು. ಸಂವಿಧಾನಗಳ ಸರಾಸರಿ ಜೀವಿತಾವಧಿ 17…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ಕುಂದೇಶ್ವರ ದೇವರ ಸನ್ನಿದಿಯಲ್ಲಿ ನ.30ರ ಶನಿವಾರ ಕಾರ್ತಿಕ ಬಹುಳ ಅಮಾವಾಸ್ಯೆಯಂದು ಲಕ್ಷದೀಪೋತ್ಸವ ಹಾಗೂ ರಥೋತ್ಸವ ನಡೆಯಲಿದೆ. ಬೆಳಿಗ್ಗೆ ಶ್ರೀ ಕುಂದೇಶ್ವರ ದೇವರ ಸನ್ನಿಧಿಯಲ್ಲಿ ಬ್ರಹ್ಮಕಲಶ ಸ್ಥಾಪನೆ – ಕಲಾಭಿವೃದ್ಧಿ ಹೋಮ – ಶತರುದ್ರಾಭಿಷೇಕ – ಕಲಶಾಭಿಷೇಕ ಮಹಾಪೂಜೆ- ಅನ್ನಸಂತರ್ಪಣೆ – ಪ್ರಸಾದ ವಿತರಣೆ ಹಾಗೂ ಸೂರ್ಯೋದಯದಿಂದ ಸೂರ್ಯಾಸ್ತಮಾನದವರೆಗೆ ಕುಂದಾಪುರ ತಾಲೂಕಿನ ಭಜನಾ ಮಂಡಳಿಗಳ ಒಕ್ಕೂಟ ಅವರಿಂದ ಶ್ರೀ ದೇವರ ನಾಮ ಸಂಕೀರ್ತನೆ ಮತ್ತು ಕುಣಿತ ಭಜನೆ ನಡೆಯಲಿದೆ. ಸಂಜೆ ರಂಗಪೂಜೆ – ಮಹಾಮಂಗಳಾರತಿ ಪ್ರಸಾದ ವಿನಿಯೋಗ – ಲಕ್ಷ ದೀಪೋತ್ಸವ – ಪುಷ್ಪಕ ರಥದಲ್ಲಿ ಶ್ರೀ ದೇವರ ಪುರ ಮೆರವಣಿಗೆ – ಕಟ್ಟೆ ಪೂಜೆ – ಕೆರೆದೀಪ ಇತ್ಯಾದಿ ನಡೆಯಲಿದೆ. ಶ್ರೀ ದೇವರ ಪುಷ್ಪಕ ರಥೋತ್ಸವದುದ್ದಕ್ಕೂ ಜಾನಪದ ಮತ್ತು ಸಾಂಸ್ರೃತಿಕ ವೈಭವ ಪ್ರದರ್ಶನಗೊಳ್ಳಲಿದೆ. ಸಂಜೆ 7.00ರಿಂದ ನೃತ್ಯವಿದುಷಿ ಪ್ರವಿತಾ ಅಶೋಕ ಅವರ ನಿರ್ದೇಶನದಲ್ಲಿ ನೃತ್ಯವಸಂತ ನಾಟ್ಯಾಲಯದ ಕಲಾವಿದೆಯರಿಂದ ನೃತ್ಯ ಸಿಂಚನ ಕಾರ್ಯಕ್ರಮ ನಡೆಯಲಿದೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸ್ವಚ್ಛತೆಯಲ್ಲಿ ಉಡುಪಿಯು ರಾಷ್ಟ್ರಮಟ್ಟದಲ್ಲಿ ಗುರುತಿಸಲು ಕಾರಣ ಜಿಲ್ಲೆಯ ಪೌರಕಾರ್ಮಿಕರು. ಅವರುಗಳು ತಮ್ಮ ಕರ್ತವ್ಯದ ಜವಾಬ್ದಾರಿಯನ್ನು ಅರಿತು ನಗರದ ಸ್ವಚ್ಛತೆಗೆ ಅಮೂಲ್ಯವಾದ ಕೊಡುಗೆ ನೀಡುತ್ತಿದ್ದಾರೆ ಎಂದು ಶಾಸಕ ಯಶ್‌ಪಾಲ್ ಎ ಸುವರ್ಣ ಹೇಳಿದರು. ಅವರು ಅಂದು ನಗರಸಭೆ ವತಿಯಿಂದ ನಗರದ ಅಜ್ಜರಕಾಡುವಿನ ಪುರಭವನದಲ್ಲಿ ನಡೆದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪೌರಕಾರ್ಮಿಕರು ಉಡುಪಿಯ ಆಸ್ತಿ. ತಮ್ಮ ವೃತ್ತಿಗೆ ನ್ಯಾಯ ಕೊಡಿಸುವ ಮೂಲಕ ಜಿಲ್ಲೆಯ ಗೌರವವನ್ನು ಎತ್ತಿ ಹಿಡಿಯುವ ಕೆಲಸ ಮಾಡಿದ್ದಾರೆ. ಉಡುಪಿ ನಗರಸಭೆಯು ಇತರೆ ಸ್ಥಳೀಯಾಡಳಿತ ಸಂಸ್ಥೆಗಳಿಗೆ ಮಾದರಿಯಾಗಿ ಕರ್ತವ್ಯನಿರ್ವಹಿಸುತ್ತಿದ್ದು, ಪೌರಕಾರ್ಮಿಕರ ಪ್ರಾಮಾಣಿಕ ಸೇವೆಯಿಂದಾಗಿ ನಗರದ ಸ್ವಚ್ಛತೆ ಕಾಪಾಡಿಕೊಳ್ಳಲು ಸಾಧ್ಯವಾಯಿತು ಎಂದರು. ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣೆ, ಮನೆ ನಿರ್ಮಾಣ, ಮಕ್ಕಳ ವಿಧ್ಯಾಬ್ಯಾಸ ಸೇರಿದಂತೆ ಮತ್ತಿತರ ಸವಲತ್ತುಗಳನ್ನು ತಲುಪಿಸಲು ಗರಿಷ್ಠ ಮಟ್ಟದಲ್ಲಿ ನಗರಸಭೆ ವತಿಯಿಂದ ಸಹಕಾರ ನೀಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿಯೂ ಸಹ ಹೆಚ್ಚಿನ ಸಹಕಾರ ನೀಡಲಾಗುವುದು ಎಂದರು. ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಮಾತನಾಡಿ, ನಗರದ ಸ್ವಚ್ಛತೆಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬುಡೋಕೋನ್ ಕರಾಟೆ ಮತ್ತು ಸ್ಪೋರ್ಟ್ಸ್ ಅಸೋಸಿಯೇಷನ್ ಕರ್ನಾಟಕ ಇವರ ವತಿಯಿಂದ ಶ್ರೀ ಕೃಷ್ಣ ಮಠ ಉಡುಪಿಯಲ್ಲಿ ನಡೆದ ಉಡುಪಿ ಮುಕ್ತ ಕರಾಟೆ ಚಾಂಪಿಯನ್ ಶಿಪ್ ರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿ 2024ರಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ವಿದ್ಯಾರ್ಥಿಗಳು ಟ್ರೋಪಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳು ಕ್ರಮವಾಗಿ ಅಶ್ವಿನ್ ಪೂಜಾರಿ (6ನೇ ತರಗತಿ) ಕುಮಿಟೆ ವಿಭಾಗದಲ್ಲಿ ಚಿನ್ನ ಮತ್ತು ಕಟಾ ವಿಭಾಗದಲ್ಲಿ ಕಂಚಿನ ಪದಕ , ಅನ್ವೇಷಣ್ (7ನೇ ತರಗತಿ) ಕುಮಿಟೆ ವಿಭಾಗದಲ್ಲಿ ಚಿನ್ನ ಮತ್ತು ಕಟಾ ವಿಭಾಗದಲ್ಲಿ ಬೆಳ್ಳಿ, ಹರ್ಷಿತಾ ಎ. ಖಾರ್ವಿ (3ನೇ ತರಗತಿ) ಕುಮಿಟೆ ವಿಭಾಗದಲ್ಲಿ ಚಿನ್ನ ಮತ್ತು ಕಟಾ ವಿಭಾಗದಲ್ಲಿ ಬೆಳ್ಳಿ , ರಿಷಿಕ್ (7ನೇ ತರಗತಿ) ಕಟಾ ವಿಭಾಗದಲ್ಲಿ ಚಿನ್ನ ಮತ್ತು ಕುಮಿಟೆ ವಿಭಾಗದಲ್ಲಿ ಬೆಳ್ಳಿ, ಆರ್ಯನ್ ವಿ. (7ನೇ ತರಗತಿ) ಕಟಾ ವಿಭಾಗದಲ್ಲಿ ಚಿನ್ನ ಮತ್ತು ಕುಮಿಟೆಯಲ್ಲಿ ಬೆಳ್ಳಿ, ರಜತ್ (7ನೇ ತರಗತಿ) ಕಟಾ ವಿಭಾಗದಲ್ಲಿ ಚಿನ್ನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಕುಂದಾಪುರದ ಪ್ರತಿಷ್ಟಿತ ವಿದ್ಯಾಸಂಸ್ಥೆಗಳಲ್ಲಿ ಮಂಚೂಣಿಯಲ್ಲಿರುವ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ಪ್ರಾಥಮಿಕ (6&7ನೇ) ತರಗತಿ ಮಕ್ಕಳಿಗೆ ಅರ್ಧದಿನದ ವೇದಿಕ್ ಮಾಥ್ಸ್ ಸ್ಪರ್ಧೆ ಆಯೋಜಿಸಲಾಯಿತು. ಆಡಳಿತಾಧಿಕಾರಿ ರೆನಿಟಾ ಲೋಬೊ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅತಿಕಡಿಮೆ ಸಮಯದಲ್ಲಿ ವಿವಿಧ ರೀತಿಯ ಗಣಿತದ ಲೆಕ್ಕಗಳನ್ನು ಮಾಡುವ ಮೂಲಕ ಸುಮಾರು 100 ವಿದ್ಯಾರ್ಥಿಗಳು ತಮ್ಮ ಪಾಲಕರ ಉಪಸ್ಥಿತಿಯಲ್ಲಿ ತಮ್ಮತಮ್ಮ ಚಾಣಾಕ್ಷತೆಯನ್ನು ಪ್ರದರ್ಶಿಸಿ ಎಲ್ಲರಿಂದ ಪ್ರಶಂಸೆಗೆ ಒಳಗಾದರೂ ಅತ್ಯಂತ ಚುರುಕುತನದಿಂದ ಆರಂಭಗೊಂಡ ಈ ಸ್ಪರ್ಧೆಯು ಪಾಲಕರ ಪೋಷಕರಿಂದ ಮೆಚ್ಚುಗೆ ಗಳಿಸಿತು. ಶಿಕ್ಷಣದಲ್ಲಿ ಸದಾ ನಾವಿನ್ಯತೆಯನ್ನು ಪರಿಚಯಿಸುತ್ತಿರುವ ಆಡಳಿತಮಂಡಳಿಯ ಉತ್ಸುಕತೆಯನ್ನು ಪೋಷಕರು ಕೊಂಡಾಡಿದರು . ತಮ್ಮ ಮಕ್ಕಳ ಗಣಿತದ ಕೌಶಲ್ಯವನ್ನು ಕಣ್ಣಾರೆ ಕಂಡ ಎಲ್ಲಾ ಪಾಲಕರು ಅತೀವ ಸಂತಸಪಟ್ಟು ಸಂಭ್ರವಿಸಿದರು ವೇದಿಕ್ ಮಾಥ್ಸ್ ತರಬೇತುದಾರರಾದ ಗೀತಾ (ಉಪನ್ಯಾಸಕರು ಮದರ್ ತೆರೇಸಾಸ್ ಪಿ ಯು ಕಾಲೇಜು, ವೇದಿಕ್ ಮಾಥ್ಸ್ ಮತ್ತು ಅಬಾಕಸ್ ತರಬೇತುದಾರರು ಹಾಗೂ ರಾಜ್ಯ ಮತ್ತು ರಾಷ್ಟ್ರಮಟ್ಟದ ಪ್ರಶಸ್ತಿ ವಿಜೇತರು)…
