ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಮ ಪಂಚಾಯಿತಿಯ 33 ಸದಸ್ಯ ಸ್ಥಾನಗಳಿಗೆ ರಾಜ್ಯ ಚುನಾವಣೆ ಆಯೋಗದ ಆದೇಶದಂತೆ ಡಿ.8ರಂದು ಮತದಾನ ನಡೆಯಲಿದೆ. ಈ ಸಂದರ್ಭ ಸಾರ್ವಜನಿಕ ಶಾಂತಿ ಸುವ್ಯವಸ್ಥೆ ಕಾಪಾಡುವ ಮೂಲಕ ಮುಕ್ತ ಮತ್ತು ನ್ಯಾಯಯುತ ಹಾಗೂ ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸುವ ನಿಟ್ಟಿನಲ್ಲಿ ಡಿ.6ರ ಬೆಳಗ್ಗೆ 6 ಗಂಟೆಯಿಂದ ಡಿ.8ರಂದು ಮತದಾನ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ಚುನಾವಣೆ ನಡೆಯಲಿರುವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರದೇಶದ ಮತದಾನ ಕೇಂದ್ರಗಳ ಸುತ್ತಮುತ್ತ 100 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಾದಕ ವಸ್ತುಗಳ ಬಳಕೆಯಿಂದ ಆರೋಗ್ಯದ ಆಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಅರಿವು ಮೂಡಿಸಿ, ಅವುಗಳಿಂದ ದೂರವಿರುವ ಹಾಗೇ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎನ್.ಸಿ.ಓ.ಆರ್.ಡಿ (Narco Co-ordination Center) ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾಮಾನ್ಯವಾಗಿ ಯುವಜನರು ಹೆಚ್ಚು ಮಾದಕ ವಸ್ತುಗಳಿಗೆ ವ್ಯಾಸನಿಗಳಾಗುತ್ತಿದ್ದಾರೆ. ಶಾಲಾ- ಕಾಲೇಜುಗಳಲ್ಲಿ ಅವುಗಳ ಬಳಕೆಯಿಂದ ಆಗುವ ಪರಿಣಾಮಗಳು ಹಾಗೂ ಭವಿಷ್ಯದಲ್ಲಿ ಆಗುವ ಅನಾನುಕೂಲಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಗಿಂದಾಗ್ಗೆ ನಡೆಸುವುದರ ಜೊತೆಗೆ ಪ್ರಬಂಧ ಸ್ಪರ್ಧೆ, ಆಶುಭಾಷಣ ಸ್ಪರ್ಧೆ ಸೇರಿದಂತೆ ಮತ್ತಿತರ ಚಟುವಟಿಕೆಗಳನ್ನು ಸಹ ಹಮ್ಮಿಕೊಳ್ಳಬೇಕು ಎಂದರು. ದುಶ್ಚಟಗಳಿಗೆ ಕಾರ್ಮಿಕರು ಸಹ ಬಲಿಯಾಗುತ್ತಿದ್ದಾರೆ. ಅವರಿಗೂ ಸಹ ಅರಿವು ಮೂಡಿಸುವುದರ ಜೊತೆಗೆ ಸಮಾಲೋಚನೆಗಳನ್ನು ನಡೆಸಿ, ಅವರುಗಳಿಗೆ ಮನಮುಟ್ಟುವ ರೀತಿ ತಿಳಿಸಿ, ದುಶ್ಚಟದಿಂದ ಮುಕ್ತರಾಗಿಸಲು ಮುಂದಾಗಬೇಕು ಎಂದರು. ಕಾಡಂಚಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಶೈಕ್ಷಣಿಕ ವರ್ಷಕ್ಕೆ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ಸ್ನಾತಕೋತ್ತರ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾರ್ಥಿವೇತನ, ಬಿ.ಎಸ್ಸಿ/ ಜಿ.ಎನ್.ಎಂ ನರ್ಸಿಂಗ್, ಐ.ಐ.ಟಿ, ಐ.ಐ.ಐ.ಟಿ, ಎನ್.ಐ.ಟಿ, ಐ.ಐ.ಎಂ, ಐ.ಐ.ಎಸ್.ಇ.ಆರ್, ಎ.ಐ.ಐ.ಎಂ.ಎಸ್, ಎನ್.ಎಲ್.ಯು, ಐ.ಎನ್.ಐ ಮತ್ತು ಐ.ಯು.ಎಸ್.ಎಲ್.ಎ ಇತ್ಯಾದಿ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ಅಂಗಿಕೃತವಾದ ವಿಶ್ವವಿದ್ಯಾನಿಲಯಗಳಲ್ಲಿ ಪೂರ್ಣಕಾಲಿಕವಾಗಿ ಪಿ.ಹೆಚ್.ಡಿ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಫೆಲೋಶಿಪ್‌ಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 31 ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣೀಪಾಲ ದೂ.ಸಂಖ್ಯೆ: 0820-2573596 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ವಿಕಲಚೇತನರು ಸಮಾಜದಲ್ಲಿ ಎಲ್ಲರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗಿ ಆತ್ಮವಿಶ್ವಾಸದಿಂದ ಜೀವನ ನಡೆಸುವಂತೆ ಅವಕಾಶ ಕಲ್ಪಿಸುವುದು ಸಮಾಜ ಹಾಗೂ ಸರಕಾರದ ಜವಾಬ್ದಾರಿ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕಾರ್ಯಪ್ರವೃತ್ತರಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನ (ಮಿನಿಹಾಲ್) ದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ವಿಕಲಚೇತನರ ಸಂಘಟನೆಗಳು ಮತ್ತು ಪಾಲಕರ ಸಂಘಟನೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿಕಲಚೇತನ ಮಕ್ಕಳ ಸಬಲೀಕರಣಕ್ಕಾಗಿ ಅನೇಕ ಶಾಲಾ- ಕಾಲೇಜು ಹಾಗೂ ಸಂಘ-ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಕಾಲದಲ್ಲಿ ವಿಕಲಚೇತನರಿಗೆ ವಿಧ್ಯಾಭ್ಯಾಸದ ಅವಕಾಶಗಳ ಜೊತೆಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಸಿದ್ಧಿ ಸೌರಭ ವಾರ್ಷಿಕೋತ್ಸವ ಸಮಾರಂಭದ ಸಂದರ್ಭದಲ್ಲಿ ನೂತನ ಎಲ್. ಟಿ. ತಿಮ್ಮಪ್ಪ ಹೆಗಡೆ ಮೆಮೋರಿಯಲ್ ಹಾಲ್ ‘ಜ್ಞಾನನಿಕೇತನʼ ವನ್ನು ಲೋಕಾರ್ಪಣೆಗೊಳಿಸಲಾಯಿತು. ತುರುವೆಕೆರೆ ಮಾದಿಹಳ್ಳಿಯ ರಾಮಕೃಷ್ಣ ಮಠದ ಶ್ರೀ ಧರ್ಮಾವೃತಾನಂದ ಸ್ವಾಮಿಗಳು ಈ ನೂತನ ಮೆಮೋರಿಯಲ್ ಹಾಲ್‌ನ್ನು ಉದ್ಘಾಟಿಸಿದರು. ಶ್ರೀ ಸಿದ್ಧಿವಿನಾಯಕ ವಸತಿಶಾಲೆಯ ಉಪ ಪ್ರಾಂಶುಪಾಲರಾದ ರಾಮ ದೇವಾಡಿಗ ಎಲ್ ಟಿ. ತಿಮ್ಮಪ್ಪ ಹೆಗಡೆ ಅವರ ಜೀವನ ಮತ್ತು ಸಾಮಾಜಿಕ ಕೊಡುಗೆಗಳ ಕುರಿತಾಗಿ ಮಾತನಾಡುತ್ತಾ, ಎಲ್ ಟಿ ತಿಮ್ಮಪ್ಪ ಹೆಗಡೆ ಅವರು ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಧರ್ಮದರ್ಶಿಗಳಾಗಿದ್ದ ದಿ. ವೇದಮೂರ್ತಿ ಹೆಚ್. ರಾಮಚಂದ್ರ ಭಟ್ಟರಿಗೆ ಆತ್ಮೀಯರಾಗಿದ್ದು, ಅವರೆಲ್ಲ ಕಾರ್ಯಚಟುವಟಿಕೆಗಳಿಗೆ ಬೆನ್ನೆಲುಬಾಗಿದ್ದರು. ಕುಗ್ರಾಮವಾಗಿದ್ದ ಈ ಪ್ರದೇಶದಲ್ಲಿ ಅತ್ಯುತ್ತಮ ಗುಣಮಟ್ಟದ ವಿದ್ಯಾಸಂಸ್ಥೆಯ ಅಗತ್ಯತೆಯನ್ನು ಮನಗಂಡು ವೇದಮೂರ್ತಿ ಹೆಚ್. ರಾಮಚಂದ್ರ ಭಟ್ಟರ ಜೊತೆಗಿದ್ದು ಶ್ರೀ ಸಿದ್ಧಿವಿನಾಯಕ ವಸತಿಶಾಲೆಯ ಸ್ಥಾಪನೆಗೆ ಹೆಗಲೇಣಿಯಾದರು. ಅವರ ತ್ಯಾಗ ಮನೋಭಾವ, ಸಮಾಜಸೇವೆ, ಧಾರ್ಮಿಕ ಶ್ರದ್ಧೆ, ಪರಿಸರ ಕಾಳಜಿ, ಸಹಕಾರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಮೂಲಕ ಟ್ರಸ್ಟ್ ಅಧ್ಯಕ್ಷ, ಉದ್ಯಮಿ ಹೆಚ್. ಎಸ್. ಶೆಟ್ಟಿ ಅವರು ಜನ್ನಾಡಿಯ ಕೊರಗ ಕುಟುಂಬಗಳಿಗೆ 14 ಮನೆ ನಿರ್ಮಿಸಿ ಇತ್ತೀಚೆಗೆ ಹಸ್ತಾಂತರಿಸಲಾದ ಮನೆಗಳ ಗೃಹ ಪ್ರವೇಶ ಸೋಮವಾರ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್. ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿಯವರ ಮುಂದಾಳತ್ವದಲ್ಲಿ ಶಾಸ್ತ್ರೋಕ್ತ ವಾಗಿ ನೆಡೆಯಿತು. ಪುರೋಹಿತರಾದ ಉದಯ ಐತಾಳ ಸೌಡ ಹಾಗೂ ಶ್ರೀಧರ ಉಡುಪ ಮೊಳಹಳ್ಳಿಯವರ ನೇತೃತ್ವದಲ್ಲಿ 20ಕ್ಕೂ ಹೆಚ್ಚು ಪುರೋಹಿತರು ಗೃಹ ಪ್ರವೇಶದ ಪೂಜಾ ವಿಧಿ ವಿಧಾನ ನೆರವೇರಿಸಿದರು. ನಂತರ ಸಹಬೋಜನ ಕಾರ್ಯಕ್ರಮ ನಡೆಯಿತು. ಸ್ಥಳೀಯರಾದ ಲವಕರ ಶೆಟ್ಟಿ ಮಾಲಾಡಿ, ರಂಜಿತ್ ಸೌಡ, ದೀಕ್ಷಿತ ಮಡಿವಾಳ, ವೆಂಕಟೇಶ ಪ್ರಭು, ಗಣೇಶ್ ಮಡಿವಾಳ, ಶರತ ಕಾನ್ಮಕ್ಕಿ ಮಂಜುನಾಥ ಜನ್ನಾಡಿ, ಶರತ ಮೊಗವೀರ, ಸುನಿಲ್ ಶೆಟ್ಟಿ ಹಾಗೂ ನೂತನ ಗೃಹದ ಕುಟುಂಬ ಸದಸ್ಯರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅವಿಭಜಿತ ಕುಂದಾಪುರ ತಾಲೂಕಿನಲ್ಲಿ ಪದವಿ ಕಾಲೇಜು ಇಲ್ಲದ ಸಂದರ್ಭ ಜನ್ಮ ತಳೆದ ಭಂಡಾರ್‌ಕಾರ್ಸ್ ಕಾಲೇಜು ಇಂದು ವಿಶ್ವಮಟ್ಟದಲ್ಲಿ ಗುರುತಿಸಿಕೊಳ್ಳುವಂತಾಗಲು ಕಾರಣ ಡಾ.ಎಚ್.ಶಾಂತಾರಾಮ್ ಮಣಿಪಾಲ ಅಕಾಡೆಮಿ ಆಡಳಿತಾಧಿಕಾರಿಯಾಗಿ ಕಾಲೇಜನ್ನು ಕಟ್ಟಿದ ಪರಿ ಅದ್ವಿತೀಯ. ಅವರೊಬ್ಬ ನಿಜಾರ್ಥದ ಸ್ವಪ್ನಶಿಲ್ಪಿ ಎಂದು ಕುಂದಾಪುರ ಶಾಸಕ ಕಿರಣ್ ಕುಮಾರ ಕೊಡ್ಗಿ ಹೇಳಿದರು. ಸೋಮವಾರ ಇಲ್ಲಿನ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜರುಗಿದ ಡಾ. ಎಚ್. ಶಾಂತಾರಾಮ್ ಭಾವಾಭಿನಂದನ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಹಿರಿಯ ನ್ಯಾಯವಾದಿ ಎ.ಎಸ್.ಎನ್. ಹೆಬ್ಬಾರ್ ಅಭಿನಂದನಾ ನುಡಿಗಳನ್ನಾಡಿದರು. ಮಣಿಪಾಲ ಅಕಾಡೆಮಿ ರಿಜಿಸ್ಟ್ರಾರ್ ಡಾ. ಎಚ್.ಎಸ್. ಬಲ್ಲಾಳ್ ಅಧ‍್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಕಾಲೇಜು, ಹಳೆ ವಿದ್ಯಾರ್ಥಿಗಳ ವಿಶ್ವಸ್ಥ ಮಂಡಳಿ, ರಕ್ಷಕ-ಶಿಕ್ಷಕ ಸಂಘ, ಸಮಸ್ತ ವಿದ್ಯಾರ್ಥಿಗಳ ಸಹಯೋಗದೊಂದಿಗೆ ಡಾ.ಎಚ್.ಶಾಂತಾರಾಮ್ ಮತ್ತು ವಿಜಯಲಕ್ಷ್ಮೀ ದಂಪತಿಯನ್ನು ಸನ್ಮಾನಿಸಲಾಯಿತು. ವಿವಿಧ ಶಿಕ್ಷಣ ಸಂಸ್ಥೆಗಳ ಪ್ರಮುಖರು, ಸಂಘ ಸಂಸ್ಥೆಗಳ ಪ್ರಮುಖರು ಗೌರವ ಸಲ್ಲಿಸಿದರು. ಮಾಜಿ ಸಚಿವ ಅಭಯಚಂದ್ರ ಜೈನ್, ವರದರಾಯ ಪೈ, ದೇವದಾಸ ಕಾಮತ್, ರಾಜೇಂದ್ರ ತೋಳಾರ್, ಡಾ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು, ಸಂಸದರು ಜನರ ಸಮಸ್ಯೆ ಪರಿಹರಿಸಲು ವಿಫಲರಾಗಿದ್ದಾರೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ವಿಕಾಸ್ ಹೆಗ್ಡೆ ಆರೋಪಿಸಿದ್ದಾರೆ. ಜಿಲ್ಲೆಯ ಜ್ವಲಂತ ಸಮಸ್ಯೆಗಳಾದ ಅಕ್ರಮ-ಸಕ್ರಮ, ಅರ್ಜಿ ನಮೂನೆ 94ಸಿ ಹಾಗೂ 94ಸಿಸಿ ಯಡಿ ಭೂ ಮಂಜೂರಾತಿ, ಸರಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರ, ಪಶ್ಚಿಮ ವಾಹಿನಿ ಯೋಜನೆಯಡಿ ನಡೆದ ಕಿಂಡಿ ಅಣೆಕಟ್ಟುಗಳ ಅಸಮರ್ಪಕ ನಿರ್ವ ಹಣೆ ಹಾಗೂ ಕೋಟ್ಯಂತರ ರೂ. ಅವ್ಯವಹಾರ, ಮರಳು, ಜಲ್ಲಿ, ಕಲ್ಲು ಇತ್ಯಾದಿ ಪೂರೈಕೆಯಲ್ಲಿ ಸಮಸ್ಯೆ, ಸ್ಥಳೀಯ ಸಂಸ್ಥೆಗಳಲ್ಲಿ ದೈನಂದಿನ ಜನಸಾಮಾನ್ಯರ ವ್ಯವಹಾರಗಳಲ್ಲಿ ಅನಗತ್ಯ ಕಿರುಕುಳ, ಪ್ರವಾಸೋದ್ಯಮದಲ್ಲಿ ಹಿನ್ನಡೆ, ಸಿಆರ್ ಝಡ್ ಸಮಸ್ಯೆ, ಡೀಮ್ಸ್ ಅರಣ್ಯ ಸಮಸ್ಯೆ, ಕಸ್ತೂರಿ ರಂಗನ್ ವರದಿ, ಪರಿಸರ ಸೂಕ್ಷ್ಮ ವಲಯದ ಸಮಸ್ಯೆಗಳಿಗೆ ಹಿಂದಿನ ಬಿಜೆಪಿ ಸರಕಾರ ಹಾಗೂ ಬಿಜೆಪಿ ಜನಪ್ರತಿನಿಧಿಗಳೇ ಕಾರಣ. ಉಡುಪಿ ಬಿಜೆಪಿ ಜನಪ್ರತಿನಿಧಿ ಗಳು ಜಿಲ್ಲೆಯ ಅಭಿವೃದ್ಧಿಯನ್ನು ಕಡೆಗಣಿಸಿ ಕಾಂಗ್ರೆಸ್ ಸರಕಾರ ಹಾಗೂ ಉಸ್ತುವಾರಿ ಸಚಿವರನ್ನು ಟೀಕಿಸುವುದು ಅವರ ರಾಜ ಕೀಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕಾವಾಡಿ ಗ್ರಾಮದ ನಿವಾಸಿ ಸತೀಶ (48) ಎಂಬುವರು ಕಾಲಿಗೆ ಬಾಟಲಿ ತಾಗಿ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಅವರು ಹಾಲಾಡಿ ಶ್ರೀ ಗುರುರಾಘವೇಂದ್ರ ಹೊಟೇಲ್‌ನಲ್ಲಿ 12 ವರ್ಷಗಳಿಂದ ಕೆಲಸ ಮಾಡಿಕೊಂಡಿದ್ದರು. ಭಾನುವಾರದಂದು ಕೆಲಸದ ವೇಳೆ ಸೋಡಾ ಬಾಟಲಿಗಳ ಕ್ರೇಟ್ ಅನ್ನು ಎತ್ತಿ ಇಡುವಾಗ ಒಂದು ಬಾಟಲಿ ನೆಲಕ್ಕೆ ಬಿದ್ದು ಒಡೆದು, ಬಲ ಕಾಲಿಗೆ ಚೂರುತಾಗಿ ರಕ್ತಸ್ರಾವ ಉಂಟಾಗಿತ್ತು. ಕೂಡಲೇ ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಬಳಿಕ ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದ್ದು ಸಂಜೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಉತ್ತಮ ಸ್ನೇಹಿತರನ್ನು ಹೊಂದುವುದು ಜೀವನದಲ್ಲಿ ನಾವು ಮಾಡುವ ಅತಿ ದೊಡ್ಡ ಆಸ್ತಿ. ಉತ್ತಮ ಸ್ನೇಹಿತರನ್ನು ಪಡೆದುಕೊಳ್ಳುವಂತಹ ವ್ಯಕ್ತಿತ್ವವನ್ನು ನಾವು ನಮ್ಮದಾಗಿಸಿಕೊಳ್ಳಬೇಕು ಎಂದು ಕುಂದಾಪುರದ ಚಿನ್ಮಯಿ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾ. ಉಮೇಶ್ ಪುತ್ರನ್ ಹೇಳಿದರು. ಅವರು ಗಂಗೊಳ್ಳಿಯಲ್ಲಿ ಸ್ನೇಹಿತರ ಬಳಗ ಹಮ್ಮಿಕೊಂಡಿದ್ದ ಸರಸ್ವತಿ ವಿದ್ಯಾಲಯದ ನಿವೃತ್ತ ಇತಿಹಾಸ ಉಪನ್ಯಾಸಕ ಹೆಚ್. ಭಾಸ್ಕರ್ ಶೆಟ್ಟಿ ಅವರ ಅಭಿಮಾನದ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಎಸ್‌ವಿಎಸ್ ಅಸೋಸಿಯೇಷನ್ ಅಧ್ಯಕ್ಷ ಡಾ.ಕಾಶಿನಾಥ್ ಪಿ ಪೈ ಮಾತನಾಡಿ, ಸರಳತೆ ಮತ್ತು ಸಜ್ಜನಿಕೆಯಂತಹ ಉತ್ತಮ ಅಂಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ನಮ್ಮ ಜೀವನದಲ್ಲಿ ಉತ್ತಮ ಸ್ನೇಹಿತರು ಸಿಗುತ್ತಾರೆ. ಅಂತಹ ಸ್ನೇಹವನ್ನು ಯಾವತ್ತು ಕಾಪಿಟ್ಟುಕೊಳ್ಳಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಉಡುಪಿಯ ಖ್ಯಾತ ವಕೀಲ ಹೆಚ್. ರಾಘವೇಂದ್ರ ಶೆಟ್ಟಿ, ಗಂಗೊಳ್ಳಿಯ ಸಮಾಜ ಸೇವಕಿ ಮಂಜುಳ ದೇವಾಡಿಗ, ಗಂಗೊಳ್ಳಿಯ ಬಿಲ್ಲವರ ಸಮಾಜ ಸೇವಾ ಸಂಘದ ಅಧ್ಯಕ್ಷ ಗೋಪಾಲ ಬಿಲ್ಲವ ಉಪಸ್ಥಿತರಿದ್ದರು. ಹೆಚ್. ಭಾಸ್ಕರ್…
