Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪಾರ್ಶ್ವವಾಯು ರೋಗದಿಂದ ಬಳಲುತ್ತಿದ್ದ ಬೈಂದೂರು ತಾಲೂಕು ಮುದೂರು ಗ್ರಾಮದ ಶಂಕರಮುಖ ಎಂಬಲ್ಲಿಯ ತೆಲಾಯಿಲ್ ಮನೆಯ ನಿವಾಸಿ ಜಯಕುಮಾರ್ (58) ಎಂಬ ವ್ಯಕ್ತಿಯು ನವೆಂಬರ್ 7 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. ಅವರು 5 ಅಡಿ 4 ಇಂಚು ಎತ್ತರ, ಬಿಳಿ ಮೈಬಣ್ಣ ಕೋಲು ಮುಖ, ಸಾಧಾರಣ ದೃಢಕಾಯ ಶರೀರ ಹೊಂದಿದ್ದು, ತಮಿಳು, ಹಿಂದಿ ಹಾಗೂ ಮಳೆಯಾಳಂ ಭಾಷೆ ಮಾತನಾಡುತ್ತಾರೆ. ಅವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್‍ ಠಾಣೆ ದೂ.ಸಂಖ್ಯೆ: 08254-258233, 9480805460, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ:08254-251031, 9480805434 ಹಾಗೂ ಕಂಟ್ರೋಲ್ ರೂಂ : 100 ಅಥವಾ 0820- 2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೊಲ್ಲೂರು ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 17 ತಿಂಗಳಲ್ಲಿ ಕುಂದಾಪುರ ತಾಲೂಕಿನಲ್ಲಿ ಐದು ಗ್ಯಾರಂಟಿ ಯೋಜನೆಯ ಫಲಾನುಭವಿಗಳಿಗೆ ಒಟ್ಟು 248 ಕೋಟಿ ರೂಪಾಯಿ ಸರಕಾರದಿಂದ ಬಿಡುಗಡೆಯಾಗಿರುತ್ತದೆ ಎಂದು ಗ್ಯಾರಂಟಿ ಯೋಜನೆಗಳ ತಾಲೂಕು ಮಟ್ಟದ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿದರು. ಇಲ್ಲಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ ಅವರು ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗ್ಯಾರೆಂಟಿ‌ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು. ಕುಂದಾಪುರ ತಾಲೂಕಿನಲ್ಲಿ 17 ತಿಂಗಳಲ್ಲಿ ಶಕ್ತಿ ಯೋಜನೆಯಡಿ 97,99 , 147 ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದು 33,81,95,617 ರೂಪಾಯಿ ರಿಯಾಯಿತಿ ಪಡೆದಿರುತ್ತಾರೆ. ಗೃಹ ಜ್ಯೋತಿ ಯೋಜನೆಯಡಿ 15 ತಿಂಗಳಲ್ಲಿ ತಿಂಗಳ ಸರಾಸರಿ 63,860 ಫಲಾನುಭವಿಗಳು 41,23,22,559 ರೂಪಾಯಿ ಲಾಭ ಪಡೆದಿರುತ್ತಾರೆ. ಗೃಹಲಕ್ಷ್ಮಿ ಯೋಜನೆಯಡಿ 50485 ಫಲಾನುಭವಿಗಳ ಖಾತೆಗೆ ನೇರವಾಗಿ 131,26,10,000 ರೂಪಾಯಿ ಜಮೆಯಾಗಿರುತ್ತದೆ. ಅನ್ನಭಾಗ್ಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ  ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಆರ್ಯನ್ ಎ. ಖಾರ್ವಿ  ಗೋಕಾಕ್‌ನಲ್ಲಿ ನಡೆದ ರಾಜ್ಯಮಟ್ಟದ 17ರ ವಯೋಮಾನದ ಕ್ರೀಕೆಟ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ಜಮ್ಮು ಕಾಶ್ಮಿರದಲ್ಲಿ ನಡೆಯುವ ರಾಷ್ಟ್ರಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಮಣೂರು ಗ್ರಾಮದ ನಿವಾಸಿ ಚಂದ್ರ (63) ಅವರು ಬುಧವಾದಂದು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ ಬಿಪಿ, ಶುಗರ್ ಹಾಗೂ ದಮ್ಮಿನ ಕಾಯಿಲೆಯಿಂದ ಬಳಲುತ್ತಿದ್ದು, ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಟಾರ್ಜ್ ಆಗಿ ಮನೆಗೆ ಬಂದಿದ್ದರು. ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರ ಪುತ್ರ ಗಣೇಶ್ ನೀಡಿದ ದೂರಿನಂತೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮಂಗಳೂರಿನಿಂದ ಬಳ್ಳಾರಿಗೆ ಕಲ್ಲಿದ್ದಲು ತುಂಬಿಸಿಕೊಂಡು ಸಾಗುತ್ತಿದ್ದ ಲಾರಿಯ ಚಾಲಕ ಮಂಗಳೂರಿನ ವಿಶ್ರಾಂತ್ (29) ಎದೆನೋವಿನಿಂದ ಮೃತಪಟ್ಟ ಘಟನೆ ಬುಧವಾರದಂದು ನಡೆದಿದೆ. ನಡುರಾತ್ರಿ 12.30ಗಂಟೆ ಸುಮಾರಿಗೆ ತಾಲೂಕಿನ ಅಂಪಾರು ಗ್ರಾಮದ ನೆಲ್ಲಿಕಟ್ಟೆ ಸಮೀಪ ಅವರು ಹೋಗುತ್ತಿರುವಾಗ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಲಾರಿಯಲ್ಲಿದ್ದ ಸ್ನೇಹಿತ ನಾಗೇಂದ್ರ ಕೂಡಲೆ ಲಾರಿ ನಿಲ್ಲಿಸಿ 108 ಅಂಬ್ಯುಲೆನ್ಸ್‌ ಗೆ ಕರೆ ಮಾಡಿ ಚಿಕಿತ್ಸೆಗಾಗಿ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದು, ಪರೀಕ್ಷಿಸಿದ ವೈದ್ಯರು ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೋಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಮೂಡಿಸುವ ಸಲುವಾಗಿ ‘ವಿಧಿಕ್ತ – 2024’ ಅಂತರ್ ತರಗತಿ ಸ್ಪರ್ಧೆ ನಡೆಯಿತು. ಮೂಟ್ ಕೋರ್ಟ್ ಮಾದರಿ ಆಧಾರಿತ ಈ ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಅವರು ನ್ಯಾಯದೇವತೆಯ ಕಣ್ಣಿಗೆ ಕಟ್ಟಿದ ಕಪ್ಪು ಪಟ್ಟಿಯನ್ನು ಬಿಡಿಸುವ ಮೂಲಕ ಚಾಲನೆ ನೀಡಿದರು. ಇದೇ ಸಂದರ್ಭ ಕಾನೂನಿನ ಅರಿವು ಕೇವಲ ನ್ಯಾಯಾಲಯಕ್ಕೆ ಮಾತ್ರ ಸೀಮಿತವಲ್ಲದೆ, ಅದು ದೈನಂದಿನ ಪರಿಸ್ಥಿತಿಗಳಲ್ಲಿಯೂ ಅನ್ವಯವಾಗುತ್ತದೆ ಮತ್ತು ವಿದ್ಯಾರ್ಥಿಗಳು ಜೀವನಕ್ಕೆ ಅಮೂಲ್ಯವಾದ ಮತ್ತು ಅಳಿಸಲಾಗದ ಪಾಠಗಳನ್ನು ಕಲಿಯುವಾಗ ಕಾನೂನು ಶಿಕ್ಷಣದ ಅರಿವು ಮಹತ್ವದ್ದಾಗಿರುತ್ತದೆ ಎಂದು ಹೇಳಿದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು. ವಾಣಿಜ್ಯ ವಿಭಾಗದ ಮುಖ್ಯಸ್ಥೆ ವೀಣಾ ವಿ. ಭಟ್ ಪ್ರಾಸ್ತಾವಿಸಿ, ಸಂಯೋಜಕ ಸತೀಶ್ ಶೆಟ್ಟಿ ಹೆಸ್ಕತ್ತೂರು ಸ್ವಾಗತಿಸಿ, ವಿದ್ಯಾರ್ಥಿ ಆದಿತ್ಯ ಪ್ರಾರ್ಥಿಸಿ, ಸಂಯೋಜಕ ಸುಹಾಸ್ ಜೆ.ಜಿ. ವಂದಿಸಿ, ವಾಣಿಜ್ಯ ವಿಭಾಗದ ಪ್ರಾಧ್ಯಾಪಕ ಯೋಗೀಶ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಹಿಂದುಳಿದ ವರ್ಗಗಳ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿ.ಹೆಚ್.ಡಿ ವ್ಯಾಸಾಂಗ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಡಿ. ದೇವರಾಜ ಅರಸು ವಿದೇಶಿ ವ್ಯಾಸಾಂಗ ವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 5 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ https://bcwd.karnataka.gov.in/ ಸಹಾಯವಾಣಿ ಸಂಖ್ಯೆ: 8050770004 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಸಂಭ್ರಮದಿಂದ ತುಳಸಿ ಪೂಜೆಯನ್ನು ಆಚರಿಸಲಾಯಿತು. ಈ ಸಮಯದಲ್ಲಿ ಶಾಲೆಯ ವಿದ್ಯಾರ್ಥಿಗಳು ದೀಪಗಳನ್ನು ಬೆಳಗಿಸಿ, ತುಳಸಿ ಮತ್ತು ಕಾರ್ತಿಕ ದಾಮೋದರರನ್ನು ವಿಷ್ಣುಸಹಸ್ರನಾಮ ಶ್ಲೋಕಪಠನೆ, ಭಜನೆಗಳ ಮೂಲಕ ಆರಾಧಿಸಿದರು. ಶ್ರೀನಿವಾಸ ಶೇಟ್ ಕುಂದಾಪುರ ತಮ್ಮ ಸಿರಿಕಂಠದಿಂದ ಭಜನೆಗಳ ಮೂಲಕ ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು. ಅಧ್ಯಾಪಕ ರಾಮಕೃಷ್ಣ ಉಡುಪ ತುಳಸಿಪೂಜೆಯನ್ನು ನೆರವೇರಿಸಿ, ಅದರ ಮಹತ್ವವನ್ನು ತಿಳಿಸುತ್ತಾ, ನಮ್ಮ ಒಂದು ವರ್ಷದ ಆಚರಣೆ ದೇವತೆಗಳ ಒಂದು ದಿನದ ದಿನಚರಿಯಂತಿದ್ದು, ಬೆಳಗಿನ ಜಾವದ ಕರ್ತವ್ಯಗಳನ್ನು ತಿಳಿಸುವಂತಿವೆ. ಭಾರತೀಯ ಸಂಸ್ಕೃತಿಯಲ್ಲಿ ಬೆಳಿಗ್ಗೆ ಎದ್ದು ಹಸುವನ್ನು ನೋಡಬೇಕು, ತುಳಸಿಯನ್ನು ನಮಸ್ಕರಿಸಬೇಕು. ಅದಕ್ಕೆ ಕಾರ್ತಿಕ ಶುಕ್ಲಪಾಡ್ಯದಂದು ಗೋಪೂಜೆ, ದ್ವಾದಶಿಯಂದು ತುಳಸಿಪೂಜೆ ನಡೆಸುತ್ತೇವೆ. ಅರುಣೋದಯ ಕಾಲದಲ್ಲಿ ದೀಪದ ಅವಶ್ಯಕತೆ ನಮಗಿರುವುದು. ಅದರಂತೆ ದೇವತೆಗಳ ಕಾರ್ಯಗಳಿಗೆ ಅನುವು ಮಾಡಲು ದೀಪಗಳನ್ನು ಬೆಳಗಿಸುತ್ತೇವೆ ಎಂದರು. ಅನಂತರ ಸಿಡಿಮದ್ದುಗಳ ಪ್ರದರ್ಶನದ ಮೂಲಕ ವಿದ್ಯಾರ್ಥಿಗಳ ಮನಸ್ಸನ್ನು ರಂಜಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಸಿದ್ಧಿ ಪ್ರತಿಷ್ಠಾನ ಹಟ್ಟಿಅಂಗಡಿಯ ಕಾರ್ಯದರ್ಶಿಗಳೂ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ವಕ್ವಾಡಿಯ ಗುರುಕುಲ ಪಬ್ಲಿಕ್ ಶಾಲೆಯಲ್ಲಿ ಮಕ್ಕಳ ದಿನಾಚರಣೆಯ ಕಾರ್ಯಕ್ರಮವು ಗುರುವಾರದಂದು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಆಡಳಿತ ಮಂಡಳಿಯ ಜಂಟಿ ಕಾರ್ಯನಿರ್ವಾಹಕಿ ಅನುಪಮಾ ಎಸ್. ಶೆಟ್ಟಿ ಮಾತನಾಡಿ, ಮಕ್ಕಳ ದಿನಾಚರಣೆಯ ಉದ್ದೇಶವನ್ನು ತಿಳಿಸಿ, ಮಕ್ಕಳಿಗೆ ಶುಭ ಹಾರೈಸಿದರು.  ದಿನಾಚರಣೆಯ ಅಂಗವಾಗಿ ಶಾಲಾ ಕಟ್ಟಡವು ಜಗಮಗಿಸುವ ಬೆಳಕಿನ ಸಾಲು ದೀಪಗಳು, ಬಣ್ಣದ ರಂಗೋಲಿಯಿಂದ ಕಂಗೋಳಿಸುವುದರ ಜೊತೆಗೆ ಮಕ್ಕಳ ಸೆಲ್ಫಿ ಕಾರ್ನರ್ ಕೂಡ ಮಾಡಲಾಗಿತ್ತು. ಮಕ್ಕಳ ಖುಷಿಗಾಗಿ ಎಲ್ಲಾ ಶಿಕ್ಷಕರು ಮಕ್ಕಳಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡುವುದರ ಮೂಲಕ ಕಾರ್ಯಕ್ರಮಕ್ಕೆ ಇನ್ನಷ್ಟು ಮೆರುಗು ನೀಡಿದರು. ಕೊನೆಯಲ್ಲಿ ಸಿಹಿ ತಿಂಡಿ ಹಂಚಿ ಒಂದಿಷ್ಟು ಆಟಗಳನ್ನು ಆಡಿಸಿ, ವಿಜೇತರಿಗೆ ಬಹುಮಾನ ನೀಡುವುದರ ಮೂಲಕ ಮಕ್ಕಳ ದಿನವನ್ನು ಮಕ್ಕಳಿಗಾಗಿಯೇ ಮೀಸಲಿಟ್ಟು ಅವರ ಖುಷಿಯಲ್ಲಿ ತಮ್ಮ ಖುಷಿಯನ್ನು ಶಿಕ್ಷಕರು ಕಂಡುಕೊಂಡರು. ಈ ಸಂದರ್ಭದಲ್ಲಿ ಶಾಲಾ ಪ್ರಾಂಶುಪಾಲರಾದ ಸುನಿಲ್ ಪ್ಯಾಟ್ರಿಕ್ ಹಾಗೂ ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು…

Read More

ಕುಂದಾಪ್ರ ಡಾಟ್‌ ಕಾಂ ಲೇಖನಬೆಳಗ್ಗೆ ಎದ್ದ ಕೂಡಲೇ ಬಿಸಿ ಬಿಸಿ ಚಹಾ ಕುಡಿಯುವುದು ಹಲವರ ಅಭ್ಯಾಸವಾಗಿದೆ . ಹಾಗೆ ಮಾಡದಿದ್ದರೆ ದಿನವಿಡೀ ಮಂಕಾಗಿರುತ್ತಾರೆ ಎಂಬುದು ಕೆಲವರ ಅಭಿಪ್ರಾಯ. ಇನ್ನು ಕೆಲವರಿಗೆ ಟೀ ಹೊಟ್ಟೆಗೆ ಬೀಳದಿದ್ದರೆ ಕರುಳಿನಲ್ಲಿ ಸಂಗ್ರಹವಾಗಿದ್ದು ಆಚೆ ಹೋಗುವುದೇ ಇಲ್ಲವಂತೆ. ಇದೆಲ್ಲವೂ ಅಭ್ಯಾಸದ ಪರಿಣಾಮವೇ ಹೊರತು ಮತ್ತೇನಲ್ಲ. ಖಾಲಿ ಹೊಟ್ಟೆಗೆ ಟೀ ಕುಡಿಯುವುದರಿಂದ ಈ ಕೆಳಗಿನ ಅಪಾಯಗಳು ಉಂಟಾಗುತ್ತವೆ. ಬೆಳಗ್ಗೆ ಖಾಲಿ ಹೊಟ್ಟೆಗೆ ಟೀ ಕುಡಿಯುವುದರಿಂದಾಗುವ ಪ್ರಯೋಜನಗಳುಚಯಾಪಚಯ ಕ್ರಿಯೆ: ಬೆಳಗ್ಗೆ ಖಾಲಿ ಹೊಟ್ಟೆ ಚಹಾ ಕುಡಿಯುವುದರಿಂದ ಹೊಟ್ಟೆಯಲ್ಲಿ ಆಮ್ಲೀಯ ಮತ್ತು ಕ್ಷಾರೀಯ ಪದಾರ್ಥಗಳ ಅಸಮತೋಲನದಿಂದಾಗಿ ಚಯಾಪಚಯ ವ್ಯವಸ್ಥೆಗೆ ಅಡ್ಡಿ ಉಂಟಾಗುವ ಸಾಧ್ಯತೆ ಇರುತ್ತದೆ. ಆಸಿಡಿಕ್ ಕಂಟೆಂಟ್:ಟೀ ರಿಸರ್ಚ್ ಅಸೋಸಿಯೇಷನ್ ​​ಆಫ್ ಇಂಡಿಯಾ ನಡೆಸಿರುವ ಒಂದು ಅಧ್ಯಯನದ ಪ್ರಕಾರ, ಹಾಲನ್ನು ಚಹಾದೊಂದಿಗೆ ಬೆರೆಸಿದಾಗ, ಹಾಲಿನಲ್ಲಿ ತೂಕ ನಷ್ಟಕ್ಕೆ ಕಾರಣವಾಗಿರುವ ವಸ್ತುಗಳ ಪ್ರಭಾವ ಕಡಿಮೆಯಾಗುತ್ತವೆ. ಇದಲ್ಲದೇ, ಹಾಲಿನಿಂದ ಮಾಡಿದ ಚಹಾವು ಹೊಟ್ಟೆಯ ಆಮ್ಲವನ್ನು ಹೆಚ್ಚಿಸುವ ಮೂಲಕ ನಿಮ್ಮ ಜೀರ್ಣಾಂಗ ವ್ಯವಸ್ಥೆಯ ಮೇಲೆ ಕೆಟ್ಟ…

Read More