ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಡಿ.02: ಡ್ಯಾಂನಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬೆಳ್ವೆ ಸಮೀಪದ ಗುಮ್ಮೋಲ ಎಂಬಲ್ಲಿ ಭಾನುವಾರ ನಡೆದಿದೆ. ಮೃತರನ್ನು ಸ್ಥಳೀಯ ನಿವಾಸಿಗಳಾದ ಶ್ರೀಶ ಆಚಾರ್ (14) ಹಾಗೂ ಜಯಂತ್ (20) ಎಂದು ಗುರುತಿಸಲಾಗಿದೆ. ಬೆಳ್ವೆ ಸಮೀಪದ ಗೂಮ್ಮೋಲ ಚರ್ಚ್ ಹಿಂಭಾಗದಿಂದ ಕಜ್ಕೆ ಸಂತೆಕಟ್ಟೆ ಸಂಪರ್ಕ ರಸ್ತೆಯ ಬಳಿ ಇರುವ ಕಿಂಡಿ ಅಣೆಕಟ್ಟುವಿನ ಮೇಲ್ಭಾಗದಲ್ಲಿ ಶ್ರೀಶ ಆಚಾರ್, ಜಯಂತ್ ನಾಯ್ಕ್ ಸೇರಿದಂತೆ ನಾಲ್ಕು ಮಕ್ಕಳು ಈಜಲು ತೆರಳಿದ್ದರು ಎನ್ನಲಾಗಿದೆ. ಶ್ರೀಶ ನೀರಿನಲ್ಲಿ ಆಯ ತಪ್ಪುತ್ತಿದ್ದಂತೆ ರಕ್ಷಣೆಗೆ ಜಯಂತ್ ನೀರಿಗೆ ಧುಮುಕಿದ್ದು ಇಬ್ಬರು ನೀರು ಪಾಲಾಗಿದ್ದಾರೆ. ಶ್ರೀಶ ಹೆಬ್ರಿಯ ಎಸ್ಆರ್ಎಸ್ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿ ಸ್ಥಳದಲ್ಲಿದ್ದ ಇತರ ಮಕ್ಕಳು ಬೊಬ್ಬೆ ಹೊಡೆದಿದ್ದನ್ನು ಕೇಳಿ ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ನೀರಿನಲ್ಲಿ ಮುಳುಗಿದ್ದ ಮಕ್ಕಳ ಹುಡುಕಲು ಮುಂದಾದರು. ತಕ್ಷಣ ಶಂಕರನಾರಾಯಣ ಪೊಲೀಸ್ ಠಾಣೆಗೂ ಮಾಹಿತಿ ನೀಡಲಾಯಿತು. ನೀರಿನಲ್ಲಿ ಮುಳುಗಿದ್ದ ಮಕ್ಕಳನ್ನು ಹುಡುಕಲು ಸ್ಥಳೀಯರು ಪೊಲೀಸರಿಗೆ ಸಹಕರಿಸಿದ್ದು,…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡೇರಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಬೈಂದೂರು ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಮೋಘ ಸಾಧನೆ ಮೆರೆದು, 7 ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಕ್ರಮವಾಗಿ, ಕನ್ನಡ ಭಾಷಣ ಸ್ಪರ್ಧೆಯಲ್ಲಿ ಶ್ರುತಿಕಾ ಶೆಟ್ಟಿ ಪ್ರಥಮ ಸ್ಥಾನ, ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ರಕ್ಷಿತಾ ಭಟ್ ಪ್ರಥಮ ಸ್ಥಾನ, ಕನ್ನಡ ಆಶುಭಾಷಣ ಸ್ಪರ್ಧೆಯಲ್ಲಿ ಸ್ಮೃತಿಕಾ ಪ್ರಥಮ ಸ್ಥಾನ, ಸಂಸ್ಕ್ರತ ಭಾಷಣ- ಪ್ರಥಮ್ ಜಿ. ಪ್ರಥಮ ಸ್ಥಾನ, ಭರತನಾಟ್ಯ- ವೈಷ್ಣವಿ ಪ್ರಥಮ ಸ್ಥಾನ, ಸಂಸ್ಕ್ರತ ಧಾರ್ಮಿಕ ಪಠಣ- ಅವನಿ ಭಟ್ ಪ್ರಥಮ ಸ್ಥಾನ, ಭಾವಗೀತೆ- ಜಯಶ್ರೀ ಪ್ರಥಮ ಸ್ಥಾನ, ಗಝಲ್- ಶ್ರೀ ರಾಮ್ ಭಟ್ ದ್ವಿತಿಯ ಸ್ಥಾನ, ಕವ್ವಾಲಿ(ಗುಂಪು ಸ್ಪರ್ಧೆ)ರಿಷಿಕಾ, ದಿತ್ಯಾ, ದೀಕ್ಷಾ, ನಿರೀಕ್ಷಾ, ನಿಶಾಂತ್ ಕಿಣಿ, ಮಂದಿರ್ ತೃತೀಯ ಸ್ಥಾನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗೋವಾ ಬಂಟರ ಸಂಘದ ವಾರ್ಷಿಕ ಮಹಾಸಭೆ ಮತ್ತು ರಜತ ಮಹೋತ್ಸವದ ಕಾರ್ಯಕ್ರಮ ಜ.19ರ ಭಾನುವಾರ ಹೋಟೆಲ್ ಲಕ್ಷ್ಮಿ ಎಂಪೈರ್ ಮಡಗಾಂವ್ನಲ್ಲಿ ನಡೆಯಲಿದ್ದು, ಇದರ ಪೂರ್ವಭಾವಿ ಸಭೆಯನ್ನು ಸಂಘದ ಅಧ್ಯಕ್ಷರಾದ ಕಾವಡಿ ಸದಾಶಿವ ಶೆಟ್ಟಿ ಅವರ ನೇತೃತ್ವದಲ್ಲಿ ನ.30ರ ಶನಿವಾರ ಸಂಜೆ ಹೋಟೆಲ್ ಸಾಗರ್ ವಿವ್ ಕನ್ಸೋಲಿನ್ ಪಣಜಿಯಲ್ಲಿ ಪದಾಧಿಕಾರಿಗಳ ಸಭೆ ನಡೆಯಿತು. ಸಭೆಯಲ್ಲಿ ರಜತ ಮಹೋತ್ಸವದ ಪ್ರಯುಕ್ತ ಹಮ್ಮಿಕೊಳ್ಳುವ ಕಾರ್ಯಕ್ರಮಗಳ ರೂಪುರೇಷೆಗಳ ಬಗ್ಗೆ ಚರ್ಚಿಸಲಾಯಿತು. ಗೋವಾ ಬಂಟರ ಸಂಘದ ಮಾಜಿ ಅಧ್ಯಕ್ಷರಾದ ಶಶಿ ಶೆಟ್ಟಿ ಬೊಮ್ಮರ ಬೆಟ್ಟು, ಪ್ರಧಾನ ಕಾರ್ಯದರ್ಶಿ ಸುನಿಲ್ ಶೆಟ್ಟಿ ಬೆಳ್ಳಂಪಳ್ಳಿ, ಕೋಶಾಧಿಕಾರಿ ಪ್ರಶಾಂತ್ ಶೆಟ್ಟಿ, ಸಂಘದ ಉಪಾಧ್ಯಕ್ಷರಾದ ವಿಜಯೇಂದ್ರ ಶೆಟ್ಟಿ ಪರ್ಕಳ, ಜಗದೀಶ್ ಶೆಟ್ಟಿ ಪಳ್ಳಿ, ಜೊತೆ ಕಾರ್ಯದರ್ಶಿ ರಾಘವ ಶೆಟ್ಟಿ ಕೊಡ್ಲಾಡಿ, ಹರ್ಷ ಶೆಟ್ಟಿ ಕಾವಡಿ, ಕರುಣಾಕರ ಶೆಟ್ಟಿ ಪೆರ್ಡೂರು ಹಾಗೂ ಕುಂದಾಪುರ ಯುವ ಬಂಟರ ಸಂಘದ ನಿಕಟ ಪೂರ್ವ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ರಾಜ್ಯ ಸರಕಾರದ ಜಿಲ್ಲಾ ಹಾಗೂ ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರುಗಳು ಸರಕಾರಕ್ಕೆ ಹಾಗೂ ಜನರ ಮಧ್ಯ ಕೊಂಡಿಯಾಗಿ ಕರ್ತವ್ಯ ನಿರ್ವಹಿಸಬೇಕು. ಸರಕಾರದ ಐದು ಗ್ಯಾರಂಟಿ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವ ಮೂಲಕ ಗ್ಯಾರಂಟಿ ಯೋಜನೆಗಳನ್ನು ಇನ್ನಷ್ಟು ಯಶಸ್ವಿಗೊಳಿಸೋಣ ಎಂದು ಮಹಿಳಾ ಮತ್ತು ಮಕ್ಕಳ ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು, ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು. ಅವರು ಅಂದು ನಗರದ ತಾಲೂಕು ಪಂಚಾಯತ್ ಕಟ್ಟಡದಲ್ಲಿ ರಾಜ್ಯ ಸರಕಾರದ ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದರು. ಜನ ಸಾಮಾನ್ಯರ ಜೀವನಮಟ್ಟವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರವು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ, ಯಶಸ್ವಿಯಾಗಿದೆ. ಅಭಿವೃದ್ಧಿಗಳ ಜೊತೆಗೆ ಮಹಿಳೆಯರಿಗೆ, ಮಕ್ಕಳಿಗೆ, ಯುವಕರಿಗೆ ಅವರ ಆರ್ಥಿಕ ಸಬಲೀಕರಣಕ್ಕೆ ಸಹಾಯಮಾಡುತ್ತಿದೆ. ಸರಕಾರ ಹಾಗೂ ಜಿಲ್ಲಾಡಳಿತದ ವತಿಯಿಂದ ಎಲ್ಲಾ ರೀತಿಯ ಸಹಕಾರ ನೀಡುವುದರೊಂದಿಗೆ ಜನಸಾಮಾನ್ಯರಿಗೆ ಐದು ಗ್ಯಾರಂಟಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ ಅಧಿನಿಯಮದನ್ವಯ ಜಿಲ್ಲೆಯಲ್ಲಿರುವ ಪ್ರವರ್ಗ ಸಿ ಗೆ ಸೇರಿದ 5 ದೇವಸ್ಥಾನಗಳಿಗೆ ವ್ಯವಸ್ಥಾಪನ ಸಮಿತಿಯನ್ನು ಮೂರು ವರ್ಷಗಳ ಅವಧಿಗೆ ರಚಿಸಲು ಆಸಕ್ತ ಭಕ್ತಾದಿಗಳು ಹಾಗೂ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಕನಿಷ್ಠ 25 ವರ್ಷ ವಯಸ್ಸಾಗಿರುವ ಆಸಕ್ತ ಭಕ್ತಾದಿಗಳು ಯಾವುದೇ ಒಂದು ಅಧಿಸೂಚಿತ ಸಂಸ್ಥೆ ಹಾಗೂ ದೇವಾಲಯದ ವ್ಯವಸ್ಥಾಪನಾ ಸಮಿತಿಗೆ ಮಾತ್ರ ಸದಸ್ಯತ್ವ ಕೋರಿ ಅರ್ಜಿಯನ್ನು ನಿಗಧಿತ ನಮೂನೆ -1 (ಬಿ) (22 ನೇ ನಿಯಮ) ನಮೂನೆಯಲ್ಲಿ ಭರ್ತಿ ಮಾಡಿ ಡಿಸೆಂಬರ್ 9 ರ ಒಳಗಾಗಿ ಸಲ್ಲಿಸಬಹುದಾಗಿದೆ. ಪ್ರವರ್ಗ ಸಿ ದೇವಸ್ಥಾನಗಳು:ಕಾರ್ಕಳ ತಾಲೂಕು ತೆಳ್ಳಾರು ಗ್ರಾಮದ ಶ್ರೀ ಜಲದುರ್ಗಾಪರಮೇಶ್ವರೀ ದೇವಸ್ಥಾನ ಹಾಗೂ ಮಾಳ ಹಳೆಪಳ್ಳಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಸಾಮಾನ್ಯ ವರ್ಗದ 1 ಸ್ಥಾನಕ್ಕೆ ಮಾತ್ರ ಮರುಪ್ರಕಟಣೆ ಹಾಗೂ ತೆಳ್ಳಾರು ಶ್ರೀ ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ಮರು ಪ್ರಕಟಣೆ, ಬ್ರಹ್ಮಾವರ ತಾಲೂಕು ಹೊಸಾಳ ಬದನಗೋಳಿ ಶ್ರೀ ಬ್ರಹ್ಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ತಮ್ಮ ಕೆಲಸ ಕಾರ್ಯಗಳನ್ನು ಅರಿಸಿ ಬಂದಾಗ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಸ್ಪಂದಿಸಿ, ಚುರುಕುಗಾಗಿ ಕೆಲಸಗಳನ್ನು ಮಾಡಿಕೊಟ್ಟಲ್ಲಿ ಯಾವುದೇ ಸಮಸ್ಯೆಗಳು ಉಂಟಾಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು, ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರಸ್ತುತ ಸಾಲಿನಲ್ಲಿ ವಾಡಿಕೆಗಿಂಡ ಶೇಕಡ 17 ರಷ್ಟು ಹೆಚ್ಚು ಮಳೆಯಾಗಿದೆ. ಹೆಚ್ಚಿನ ಮಳೆಯಿಂದಾಗಿ ಬೆಳೆಹಾನಿ, ಮೂಲಭೂತ ಸೌಕರ್ಯಗಳಾದ ರಸ್ತೆ, ಸರ್ಕಾರಿ ಕಟ್ಟಡಗಳು, ಸೇತುವೆ ಸೇರಿದಂತೆ ಮತ್ತಿತ್ತರ ಆಸ್ತಿ ಪಾಸ್ತಿಗಳಿಗೆ ಹಾನಿವುಂಟಾಗಿದೆ. ಈ ಸಂಬಂಧ ಈಗಾಗಲೇ ಬೆಳೆಹಾನಿ, ಮಾನವನಹಾನಿಗೆ ಸೇರಿದಂತೆ ಮತ್ತಿತರ ಹಾನಿಗಳಿಗೆ ಪರಿಹಾರವನ್ನು ನೀಡಲಾಗಿದೆ ಎಂದರು. ಮೂಲಭೂತ ಸೌಕರ್ಯಗಳ ಹಾನಿಗಳ ಕಾಮಗಾರಿಗಳನ್ನು ಕೈಗೊಳ್ಳಲು ಪ್ರಕೃತಿ ವಿಕೋಪ ಅನುದಾನದ ಅಡಿಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಪ್ರಸಕ್ತ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಕ್ರೀಡಾ ಸ್ಫೂರ್ತಿ, ಆಸಕ್ತಿ ಹಾಗೂ ಇಚ್ಛಾಶಕ್ತಿಯಿಂದ ಪರಿಶ್ರಮ ಪಟ್ಟು ಆಡಿದಾಗ ತಕ್ಕ ಪ್ರತಿಫಲ ಸಿಗುತ್ತದೆ ಎಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ಬಾಬು ಶೆಟ್ಟಿ ತಿಳಿಸಿದರು. ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ವ್ಯವಸ್ಥಾಪನ ಸಮಿತಿಯ ಸದಸ್ಯ ಮಹಾಲಿಂಗ ನಾಯ್ಕ್ ಕ್ರೀಡಾಕೂಟದ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ವಿದ್ಯಾಸಂಸ್ಥೆಗಳ ಕ್ರೀಡಾಕೂಟದ ಸಂಘಟನೆ ಉತ್ತಮವಾಗಿದೆ. ವಿದ್ಯಾರ್ಥಿಗಳ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಬೇಕಾದರೆ ಗುರಿ, ಪರಿಶ್ರಮ ಅಗತ್ಯವಾಗಿ ಬೇಕು ಎಂದರು. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ವ್ಯವಸ್ಥಾಪನಾ ಸಮಿತಿಯ ಸದಸ್ಯ ಸುರೇಂದ್ರ ಶೆಟ್ಟಿ ಕ್ರೀಡಾಕೂಟದ ಕ್ರೀಡಾ ಜ್ಯೋತಿ ಬೆಳಗಿಸಿ ಮಾತನಾಡಿ, ನಿರಂತರವಾಗಿ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿ ಬಹುಮಾನ ಪಡೆದುಕೊಂಡರೆ ಬದುಕು ಕಟ್ಟಿಕೊಳ್ಳಲು ಸಾಧ್ಯವಿದೆ. ಸೋಲು ಗೆಲುವು ಮುಖ್ಯವಲ್ಲ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿ ಜೀವನದಲ್ಲಿ ಕ್ರೀಡೆ ಬಹುಮುಖ್ಯ, ವಿದ್ಯಾರ್ಥಿಗಳು ವಿವಿಧ ಕ್ರೀಡೆಯಲ್ಲಿ ಭಾಗವಹಿಸುವ ಮೂಲಕ ಸಮಯ ನಿರ್ವಹಣೆ, ಹಿನ್ನಡೆ ಮತ್ತು ಟೀಕೆಗಳನ್ನು ಎದುರಿಸಲು ತಾಳ್ಮೆ ಮತ್ತು ಶಿಸ್ತನ್ನು ಕಾಪಾಡಿಕೊಳ್ಳಲು ಸಾಧ್ಯ ಎಂದು ಕುಂದಾಪುರ ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ ಹೇಳಿದರು. ಅವರು ಕುಂದಾಪುರ ಗಾಂಧಿ ಮೈದಾನದಲ್ಲಿ ನಡೆದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಕಾರ್ಯದರ್ಶಿ ಸೀತಾರಾಮ ನಕ್ಕತ್ತಾಯ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಪ್ರಾಸ್ತಾವಿಸಿದರು. ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿ ರೇಷ್ಮಾ ಶೆಟ್ಟಿ ನಿರೂಪಿಸಿದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು. ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಸುಹಾಸ್ ಜೆ.ಜಿ. ಅತಿಥಿಗಳನ್ನು ಪರಿಚಯಿಸಿ, ಸತೀಶ್ ಶೆಟ್ಟಿ ಬಹುಮಾನ ವಿತರಣಾ ಪಟ್ಟಿ ವಾಚಿಸಿ, ಪೂಜಾ ವಂದಿಸಿದರು. ದ್ವಿತೀಯ ಬಿ.ಕಾಂ. (ಇ) ವಿಭಾಗದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಉಡುಪಿ, ಪದವಿಪೂರ್ವ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಕರ್ನಾಟಕ 50ರ ಸಂಭ್ರಮಾಚರಣೆಯ ಪ್ರಯಕ್ತ ಆಯೋಜಿಸಿದ ಜಿಲ್ಲಾ ಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಹೆಮ್ಮಾಡಿಯ ಜನತಾ ಕಾಲೇಜಿನ ಶ್ರುತಿಕಾ ಶೆಟ್ಟಿ ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದಿರುತ್ತಾಳೆ. ಸಾಧಕವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಕ್ರೀಡಾಕೂಟವು ಸಂಸ್ಥೆಯ ಕಾರ್ಯದರ್ಶಿಯವರಾದ ಕೆ. ರಾಧಾಕೃಷ್ಣ ಶೆಣೈ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳಾದ ಸತ್ಯನಾರಾಯಣ. ಜಿ ಅವರು ಕ್ರೀಡಾಪಟುಗಳಿಂದ ಗೌರವ ವಂದನೆ ಸ್ವೀಕರಿಸಿ, ಕ್ರೀಡಾಜ್ಯೋತಿಯನ್ನು ಬೆಳಗಿಸುತ್ತಾ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವವಿರಬೇಕು, ಸೋಲೇ ಗೆಲುವಿನ ಸೋಪಾನ ಎಂಬ ನುಡಿಯಂತೆ ಪ್ರತಿಯೊಬ್ಬರು ಸ್ಪರ್ಧೆಯಲ್ಲಿ ಭಾಗವಹಿಸಬೇಕು. ಸೋಲು ಮತ್ತು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ನುಡಿಯುತ್ತಾ ವಿದ್ಯಾರ್ಥಿಗಳಿಗೆ ಕ್ರೀಡಾಸ್ಪರ್ಧೆಯಲ್ಲಿ ಭಾಗವಹಿಸುವಂತೆ ಪ್ರೆರೇಪಿಸಿದರು. ಶ್ರೀ ವೆಂಕಟರಮಣ ಪದವಿಪೂರ್ವಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ, ಪ್ರಾಥಮಿಕ ವಿಭಾಗ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿ’ಸೋಜಾ ಮತ್ತು ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿಪ್ರಮೀಳಾ ಡಿ’ಸೋಜಾ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಶ್ರೀನಿಧಿ ಪೈ ಕಾರ್ಯಕ್ರಮ ನಿರೂಪಿಸಿ, ಮದೀಹಾ ಮಸೂದ್ ಸ್ವಾಗತಿಸಿ ಹಾಗೂ ಆಯುಷ್ ರಾವ್ ವಂದಿಸಿದರು. ಈ ಸಮಾರಂಭದಲ್ಲಿ…
