ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ದೇವರಲ್ಲಿ ಭಕ್ತಿಯಿಂದ ಸಲ್ಲಿಸಿದ ಪ್ರಾರ್ಥನೆಗೆ ಖಂಡಿತವಾಗಿ ಫಲ ಸಿಗುತ್ತದೆ. ನಾವು ಸತ್ಕರ್ಮಗಳನ್ನು ನಿರಂತರವಾಗಿ ಮಾಡುತ್ತಾ ಹೋಗಬೇಕು. ಇದರಿಂದ ಯಾವುದೇ ಫಲವನ್ನು ನಿರೀಕ್ಷಿಸಬಾರದು. ನಾವು ಮಾಡುವ ಪ್ರತಿಯೊಂದು ಸತ್ಕರ್ಮಗಳಿಗೆ ದೇವರು ಸಂತುಷ್ಟಗೊಂಡು ಸಕಾಲದಲ್ಲಿ ನಮ್ಮ ಮನೋಭಿಷ್ಟಗಳನ್ನು ನೆರವೇರಿಸುತ್ತಾನೆ ಎಂದು ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಅವರು ಹೇಳಿದರು. ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಮೊಕ್ಕಾಂ ನಿಮಿತ್ತ ಗುರುವಾರ ಚಿತ್ತೈಸಿದ ಶ್ರೀಗಳು ಆಶೀರ್ವಚನ ನೀಡಿದರು. ಮಠಕ್ಕೆ 550 ವರ್ಷ ಪೂರ್ಣಗೊಳ್ಳುವ ಸಂದರ್ಭ ಹಮ್ಮಿಕೊಳ್ಳಲಾದ ಶ್ರೀ ರಾಮ ನಾಮ ತಾರಕ ಜಪ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಿ ಶಕ್ತ್ಯಾನುಸಾರ ಜಪವನ್ನು ಮಾಡಿ ದೇವರ ಮತ್ತು ಗುರುಗಳ ಕೃಪೆಗೆ ಪಾತ್ರರಾಗುತ್ತಿದ್ದಾರೆ. ಮುಂದಿನ ವರ್ಷ ಪರ್ತಗಾಳಿ ಮಠದಲ್ಲಿ ಈ ಸಂಬಂಧ ದೊಡ್ಡ ಧಾರ್ಮಿಕ ಅನುಷ್ಠಾನ, ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಎಲ್ಲಾ ಕಾರ್ಯಕ್ರಮಗಳಲ್ಲಿ ಸಮಾಜಬಾಂಧವರು ಪಾಲ್ಗೊಂಡು ದೇವರ ಮತ್ತು ಗುರುಗಳ ಸೇವೆ ಸಲ್ಲಿಸುವಂತಾಗಬೇಕು ಎಂದರು.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಹಳಗೇರಿಯಶ್ರೀ ಕ್ಷೇತ್ರ ತೆಂಕಬೆಟ್ಟು ಶ್ರೀ ಕಾಲಭೈರವ ದೇವಸ್ಥಾನದಲ್ಲಿ ಶ್ರೀ ಕಾಲಭೈರವಾಷ್ಠಮಿ, ಕಾರ್ತಿಕ ದೀಪೋತ್ಸವವು ನ.23 ಶನಿವಾರದಂದು ಜರುಗಲಿದೆ. ಬೆಳಿಗ್ಗೆ 7.30ರಿಂದ ಶ್ರೀ ಕಾಲಭೈರವಾಷ್ಠಮಿ ಅಂಗವಾಗಿ 108 ಸೀಯಾಳ ಸಹಿತ ವಿಶೇಷ ಪಂಚಾಮೃತ ಅಭಿಷೇಕ, ಅಲಂಕಾರ ಪೂಜೆ, ದೇವರ ಉತ್ಸವ, ರೂಟ್ ಪೂಜೆ, ಅನ್ನಸಂತರ್ಪಣೆ ಹಾಗೂ ಸಂಜೆ 6ಗಂಟೆಯಿಂದ ದೇವಸ್ಥಾನದಲ್ಲಿ ದೇವರ ಉತ್ಸವ, ಭಜನಾ-ಕಾರ್ಯಕ್ರಮ ಹಾಗೂ ದೀಪೋತ್ಸವವು ನಡೆಯಲಿದೆ. ಈ ವೇಳೆ ಭಕ್ತಾಭಿಮಾನಿಗಳಿಗೆ ದೀಪ ಬೆಳಗಿಸುವ ಅವಕಾಶವಿದೆ ಎಂದು ದೇವಳದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಕೆಲವು ದೇಶಗಳು ಆರ್ಥಿಕವಾಗಿ ಹಿಂದುಳಿಯಲು ಮಹಿಳಾ ಉದ್ಯೋಗಿಗಳ ಪ್ರಮಾಣ ಕಡಿಮೆ ಪ್ರಮುಖ ಕಾರಣವಾಗಿದೆ. ಯಾವುದೇ ದೇಶ ಅಥವಾ ಸಂಸ್ಥೆ ಉನ್ನತಿಯನ್ನು ಕಾಣಲು ಮಹಿಳೆಯರ ಪಾತ್ರ ಮುಖ್ಯ. ಮಹಿಳೆಯರು ವಿವಿಧ ವೃತ್ತಿರಂಗಗಳಲ್ಲಿ ತೊಡಗಿಸಿಕೊಳ್ಳುವುದರ ಮೂಲಕ ದೇಶದ ಪ್ರಗತಿಗೆ ಕಾಣಿಕೆ ನೀಡಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಅಭಿಪ್ರಾಯಪಟ್ಟರು. ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಗುರುವಾರ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮಹಿಳಾ ಘಟಕ ‘ಸಕ್ಷಮಾ’ದ ವತಿಯಿಂದ ಮಹಿಳಾ ಮಾನಸಿಕ ಆರೋಗ್ಯದ ಜಾಗೃತಿ ಕಾರ್ಯಕ್ರಮ ‘ಎಂಪವರ್‌ಹರ್’ ಉದ್ಘಾಟಿಸಿ ಮಾತನಾಡಿದ ಅವರು ಮಹಿಳೆಯರು ವಿವಿಧ ಸ್ತರದ ಉದ್ಯೋಗಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವುದನ್ನು ಪ್ರೋತ್ಸಾಹಿಸಿಸುವ ಸಮಾಜ ನಮ್ಮದಾಗಬೇಕು ಎಂದರು. ಆಳ್ವಾಸ್ ಸಂಸ್ಥೆಯ ಯಶಸ್ಸಿನಲ್ಲಿ ಮಹಿಳೆಯರ ಪಾತ್ರ ಅನನ್ಯ. ಮಹಿಳೆಯರು ತಮ್ಮ ಜವಾಬ್ದಾರಿಗಳನ್ನು ಶ್ರೇಷ್ಠತೆಯಿಂದ ನಿಭಾಯಿಸುವುದರಿಂದ ಸಂಸ್ಥೆಯ ಜೇಷ್ಠತೆ ಹೆಚ್ಚಿದೆ ಎಂದರು. ಮಹಿಳೆಯರು ವೃತ್ತಿ ಜೀವನ ಹಾಗೂ ಕೌಟುಂಬಿಕ ಜೀವನದಲ್ಲಿ ಸಮತೋಲನ ಕಾಪಾಡಿಕೊಳ್ಳುವುದು ಬಹಳ ಅವಶ್ಯ. ಇತ್ತೀಚಿನ ದಿನಗಳಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ರಾಜ್ಯ ಸರಕಾರದಿಂದ ಬಡವರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಅರ್ಹರಾಗಿದ್ದು ಯಾರಿಗಾದರೂ ಬಿಪಿಎಲ್ ಕಾರ್ಡ್ ತಪ್ಪಿ ಹೋಗಿದ್ದರೆ ಹೊಸದಾಗಿ ಅರ್ಜಿ ಪಡೆದುಕೊಂಡು ಬಿಪಿಎಲ್ ಕಾರ್ಡ್ ನೀಡಲಾಗುತ್ತದೆ ಎಂದು ರಾಜ್ಯದ ಉಪಮುಖ್ಯಮಂತ್ರಿ, ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಅವರು ಕೊಲ್ಲೂರು ಮೂಕಾಂಬಿಕೆಯ ಸನ್ನಿಧಿಗೆ ಗುರುವಾರ ಪತ್ನಿ ಸಮೇತ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಚುನಾವಣೆ ಪೂರ್ವದಲ್ಲಿ ದೇವರಲ್ಲಿ ಪ್ರಾರ್ಥಿಸಿಕೊಂಡಿದ್ದೆ. ಅದರಂತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಗ್ಯಾರೆಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ. ಹಾಗಾಗಿ ತಾಯಿ ಮೂಕಾಂಬಿಕೆಗೆ ಪೂಜೆ ಸಲ್ಲಿಸಲು ಬಂದಿರುವುದಾಗಿ ತಿಳಿಸಿದರು. ಇದೇ ವೇಳೆ ಗ್ಯಾರೆಂಟಿ ಯೋಜನೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದರು. ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡುವ ನಬಾರ್ಡ್ ಸಾಲದ ಪೈಕಿ ಶೇ 58ನ್ನು ಕಡಿತಗೊಳಿಸಲು ತೀರ್ಮಾನಿಸಿರುವುದು ಖಂಡನೀಯ. ರಾಜ್ಯಕ್ಕೆ ಮೊದಲಿನಿಂದ ಅನ್ಯಾಯ ನಡೆಯುತ್ತಲೇ ಇದೆ. ನಂದಿನಿ ಹಾಲಿನ ಮಾರುಕಟ್ಟೆ ಬಗ್ಗೆ ದೆಹಲಿಗೆ ಹೋಗಿದ್ದು, ಇದೇ ಸಂದರ್ಭ ಹಣಕಾಸು ಸಚಿವರೊಂದಿಗೆ ಮಾತುಕತೆ ನಡೆಸಲಿದ್ದಾರೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ 2024ರ ನವೆಂಬರ್‌ನಲ್ಲಿ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಹಂತದಲ್ಲಿಯೇ ಉತ್ಕೃಷ್ಟ್ಟ ಸಾಧನೆ ಗೈದಿದ್ದಾರೆ. ವಿದ್ಯಾರ್ಥಿಗಳಾದ ಕೌಶಿಕ್, ಅಕ್ಷೋಭ್ಯ, ಶಾಶ್ವತ್, ಸಿದ್ದಾರ್ಥ, ಸುಷ್ಮಾ, ವರ್ಷಾ, ದರ್ಶನ್, ಮೈತ್ರೆಯಿ ಹಾಗೂ ಕೀರ್ತನಾ ಅವರು ಸಿ. ಎಸ್. ಎಕ್ಸಿಕ್ಯೂಟಿವ್ ಪ್ರೋಗ್ರಾಮ್ ಗೆ ಅರ್ಹತೆ ಪಡೆದಿದ್ದಾರೆ. ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ವೀ ರೀಚ್ ಸಂಸ್ಥೆಯ ನುರಿತ ತರಬೇತುದಾರರಿಂದ ವಿದ್ಯಾರ್ಥಿಗಳು ನಿರಂತರ ತರಬೇತಿ ಪಡೆದು ಈ ಸಾಧನೆಗೈದಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಒತ್ತಡ ನಿರ್ವಹಣೆ ಮತ್ತು ಮಾದಕ ವಸ್ತುಗಳ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಿತು. ಉಡುಪಿ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿಯಲ್ಲಿ ಉಡುಪಿಯ ಕ್ಲಿನಿಕಲ್ ಸೈಕೋಲಾಜಿಸ್ಟ್ ಆದ ಕ್ಯಾಥರಿನ್ ಜೆನಿಫರ್ ಮಾಬೆನ್ ಅವರು ವಿದ್ಯಾರ್ಥಿಗಳಿಗೆ ಒತ್ತಡ ನಿರ್ವಹಣೆಯ ಬಗ್ಗೆ ತಿಳಿಸುತ್ತಾ, ಒತ್ತಡವು ಒಂದು ಸಾಮಾನ್ಯ ಭೌತಿಕ, ಮಾನಸಿಕ ಮತ್ತು ಭಾವನಾತ್ಮಕ ಪ್ರತಿಕ್ರಿಯೆಯಾಗಿದೆ. ಬದುಕಿನ ಕಠಿಣ ಪರಿಸ್ಥಿತಿಗಳಲ್ಲಿ ಇವು ಎದುರಾಗುತ್ತವೆ. ಇವು ಧನಾತ್ಮಕ ಮತ್ತು ಋಣಾತ್ಮಕ ರೂಪಗಳಲ್ಲಿ ಕಂಡು ಬರುತ್ತವೆ. ಧನಾತ್ಮಕ ಒತ್ತಡವು ನಮ್ಮಲ್ಲಿನ ಕ್ರಿಯಾಶೀಲತೆಯನ್ನು ಹೆಚ್ಚಿಸುತ್ತದೆ ಮತ್ತು ಸವಾಲುಗಳನ್ನು ಎದುರಿಸಲು ನೆರವು ನೀಡುತ್ತದೆ. ಋಣಾತ್ಮಕ ಒತ್ತಡವು ನಮ್ಮ ಕಾರ್ಯಕ್ಷಮತೆಯನ್ನು ಕುಗ್ಗಿಸುತ್ತದೆ ಹಾಗೂ ಆರೋಗ್ಯ ಸಮಸ್ಯೆಗಳನ್ನು ತಂದೊಡ್ಡುತ್ತದೆ. ಕೌಟುಂಬಿಕ ಸಮಸ್ಯೆಗಳು, ವಿದ್ಯಾಭ್ಯಾಸದ ತೊಂದರೆಗಳು, ಸಾಮಾಜಿಕ ಪರಿಸ್ಥಿತಿಗಳು, ಆತ್ಮಸಂಶಯಗಳು ಒತ್ತಡಗಳಿಗೆ ಕಾರಣಗಳಾಗುತ್ತವೆ. ಯೋಗ, ಧ್ಯಾನ, ಪ್ರಾಣಾಯಾಮಗಳ ಮೂಲಕ ಒತ್ತಡವನ್ನು ನಿಯಂತ್ರಿಸಿಕೊಳ್ಳಬಹುದು ಎಂಬುವುದನ್ನು ವಿವಿಧ ದೃಷ್ಟಾಂತಗಳ ಮೂಲಕ ತಿಳಿಸಿಕೊಟ್ಟರು. ಮನೋವೈದ್ಯರು ಹಾಗೂ ಸಾಮಾಜಿಕ ಕಾರ್ಯಕರ್ತೆಯಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ 2024-25 ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭವು ತಗ್ಗರ್ಸೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ನಾರಾಯಣ ಹೆಗ್ಡೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ನಾಗರಾಜ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಬೈಂದೂರು ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ನಾಗೇಶ್ ನಾಯ್ಕ, ಶಾಲೆಯ ಎಸ್, ಡಿ.ಎಂ.ಸಿ. ಸದಸ್ಯರಾದ ಸುಬ್ರಹ್ಮಣ್ಯ ಪೂಜಾರಿ, ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮಂಜುನಾಥ ಪೂಜಾರಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ಮುತ್ತಯ್ಯ ಪೂಜಾರಿ, ಶಾಲೆ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿಗಳಾದ ಸುಧಾಕರ ಮೊಗವೀರ, ಶಾಲೆಯ ಶಿಕ್ಷಕಿಯಾದ ಮಾಲತಿ, ಎನ್ಎಸ್ಎಸ್ ಘಟಕ 1 ಯೋಜನಾಧಿಕಾರಿಗಳಾದ ನವೀನ್ ಹೆಚ್ ಜೆ ಇನ್ನಿತರರು ಉಪಸ್ಥಿತರಿದ್ದರು. ಎನ್ಎಸ್ಎಸ್ ಘಟಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಾವೀನ್ಯತೆ, ತಾರ್ಕಿಕ ಸಾಧನೆ, ಕ್ರೀಡೆ, ಕಲೆ, ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿರುವಂತಹ 5 ವರ್ಷದಿಂದ 18 ವರ್ಷದೊಳಗಿನ ಮಕ್ಕಳಿಂದ ಜಿಲ್ಲಾ ಮಟ್ಟದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸೂಕ್ತ ದಾಖಲೆಗಳೊಂದಿಗೆ ಪ್ರಸ್ತಾವನೆ ಸಲ್ಲಿಸಲು ಡಿಸೆಂಬರ್ 2 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ 204, ಮೊದಲನೇ ಮಹಡಿ, ರಜತಾದ್ರಿ, ಮಣಿಪಾಲ ದೂ.ಸಂಖ್ಯೆ: 0820-2574978 ಅನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಸುರಿದ ಮುಂಗಾರು ಮಳೆಯಿಂದ ಉಂಟಾದ ಮೂಲಸೌಕರ್ಯಗಳ ಹಾನಿಯ ಪುನರ್‌ನಿರ್ಮಾಣ ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಿ ಎಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಜನವರಿಯಿಂದ ಈವರೆಗೆ ವಾಡಿಕೆಗಿಂತ ಹೆಚ್ಚು ಮಳೆ ಸುರಿದು ರಸ್ತೆ, ವಿದ್ಯುತ್ ಕಂಬ ಸೇರಿದಂತೆ ಮತ್ತಿತರ ಮೂಲಸೌಕರ್ಯಗಳ ಕಾಮಗಾರಿಗಳನ್ನು ಕೈಗೊಳ್ಳಲು ಈಗಾಗಲೇ ಅನುದಾನ ಬಿಡುಗಡೆಯಾಗಿದ್ದು, ಅವುಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಬೇಕು ಎಂದರು. ಯಾವುದೇ ಇಲಾಖೆಗಳು ಈಗಾಗಲೇ ಆಗಿರುವ ಮನೆಹಾನಿ, ಮಾನವ ಜೀವ ಹಾನಿ, ಜಾನುವಾರು ಜೀವ ಹಾನಿಗೆ ಸಂಬಂಧಿಸಿದಂತೆ ಪರಿಹಾರ ಬಾಕಿ ಇರಿಸಿಕೊಳ್ಳಬಾರದು. ಶಾಲೆ, ಅಂಗನವಾಡಿ ಹಾಗೂ ರಸ್ತೆ ತುರ್ತು ದುರಸ್ಥಿ ಕಾರ್ಯಗಳಿಗೆ ಬಿಡುಗಡೆಯಾಗಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ತ್ವರಿತಗತಿಯಲ್ಲಿ ಕೆಲಸಗಳನ್ನು ಪೂರ್ಣಗೊಳಿಸಬೇಕು ಎಂದ ಅವರು, ತಹಶೀಲ್ದಾರರುಗಳು ಕಾಮಗಾರಿಗಳನ್ನು ಸ್ಥಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕುಂಭಾಶಿ ರಾ.ಹೆ. 66ರಲ್ಲಿ ಇನ್ನೋವಾ ಕಾರಿಗೆ ಹಿಂದಿನಿಂದ ಅತೀ ವೇಗವಾಗಿ ಬಂದ ಇನ್ಸುಲೇಟರ್ ಲಾರಿ ಢಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲಕ್ಕೆ ಭೇಟಿ ನೀಡಿ ಕೇರಳ ಕಡೆಗೆ ಏಳು ಮಂದಿ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಬುಧವಾರ ಮಧ್ನಾಹ್ನದ ವೇಳೆಗೆ ಕುಂಭಾಶಿ ಶ್ರೀ ಚಂಡಿಕಾ ದುರ್ಗಾಪರಮೇಶ್ವರೀ ದೇವಸ್ಥಾನದ ಬಳಿ ಬರುತ್ತಿದ್ದಂತೆ ಕಾರಿನಲ್ಲಿದ್ದವರು ದೇವಸ್ಥಾನಕ್ಕೆ ತೆರಳುವಂತೆ ಚಾಲಕನಿಗೆ ಸೂಚಿಸಿದ್ದಾರೆ. ಅದರಂತೆ ಚಾಲಕ ಕಾರನ್ನು ಹಿಂದಕ್ಕೆ ಚಲಾಯಿಸಿಕೊಂಡು ಬರುತ್ತಿದ್ದರು. ಈ ವೇಳೆ ಗೋವಾದಿಂದ ಕೆರಳ ಕಡೆಗೆ ಸಾಗುತ್ತಿದ್ದ ಇನ್ಸುಲೇಟರ್ ವಾಹನ ಇನ್ನೋವಾ ಕಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಇನ್ನೋವಾ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಇನ್ಸುಲೇಟರ್ ವಾಹನ ಪಲ್ಟಿಯಾಗಿ ಬಿದ್ದಿದೆ. ಸ್ಥಳೀಯರ ಸಹಕಾರದಿಂದ ಗಾಯಾಗಳುಗಳನ್ನು ತಕ್ಷಣ ಕಾರಿನಿಂದ ಹೊರತೆಗೆದು ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಗಂಭೀರ ಗಾಯಗೊಂಡ ನಾಲ್ವರನ್ನು ಮಣಿಪಾಲದ ಆಸ್ಪತ್ರೆಗೆ, ಸಣ್ಣಪುಟ್ಟ ಗಾಯಗೊಂಡವರನ್ನು…
