Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸುಣ್ಣಾರಿಯ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ಚಿತ್ರಕಲೆ ಸ್ಪರ್ಧೆಯಲ್ಲಿ  ಆರ್. ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ಮಂಜುನಾಥ್ ಪ್ರಥಮ ಸ್ಥಾನಗಳಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಚಿತ್ರಕಲಾ ಕ್ಷೇತ್ರದಲ್ಲಿ  ಸಾಧನೆಗೈದ ವಿದ್ಯಾರ್ಥಿ ಮಂಜುನಾಥ್ ಗೆ ಕಾಲೇಜಿನ‌ ಸಂಚಾಲಕರಾದ ಬಿ.ಎಮ್ ಸುಕುಮಾರ ಶೆಟ್ಟಿ ಅವರು, ಆಡಳಿತ ಮಂಡಳಿ‌ ಕುಂದಾಪುರ ಎಜುಕೇಶನ್ ಸೊಸೈಟಿಯ ಸದಸ್ಯರು, ಪ್ರಾಂಶುಪಾಲರು, ಉಪಪ್ರಾಂಶುಪಾಲರು ಹಾಗೂ ಕಾಲೇಜಿನ ಬೋಧಕ- ಬೋಧಕೇತರ ಸಿಬ್ಬಂಧಿಯವರು ಅಭಿನಂದನೆ‌ ಸಲ್ಲಿಸಿರುತ್ತಾರೆ. 

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ನ. 17 ರಂದು ಶ್ರೀ ಭಗವದ್ಗೀತಾ ಅಭಿಯಾನ-ಕರ್ನಾಟಕ 2024  ಶ್ರೀ ಸೋಂದಾ ಸ್ವರ್ಣವಲ್ಲೀ  ಮಹಾಸಂಸ್ಥಾನ ಆಯೋಜಿಸಿದ ಭಾಷಣ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ದಿವೀಶ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು  ಹಾಗೂ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ   ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹಟ್ಟಿಅಂಗಡಿ ವಸತಿಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟವು ಸಂಪನ್ನಗೊಂಡಿತು. 14 ಮತ್ತು 17 ರ ವಯೋಮಿತಿಯ ಬಾಲಕ ಮತ್ತು ಬಾಲಕಿಯರ ವಿಭಾಗಗಳಲ್ಲಿ ಉದ್ದಜಿಗಿತ, ಗುಂಡೆಸೆತ, 100ಮೀ, 200ಮೀ, 400ಮೀ, 800ಮೀ, 1500ಮೀ ಓಟ ಮತ್ತು ರಿಲೇ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ವಿದ್ಯಾರ್ಥಿಗಳು ಅತ್ಯುತ್ಸಾಹದಿಂದ ಪಾಲ್ಗೊಂಡಿದ್ದರು. ಈ ಕ್ರೀಡಾಕೂಟದಲ್ಲಿ ಮುಖ್ಯ ಅತಿಥಿಗಳ ನೆಲೆಯಲ್ಲಿ ಉಪಸ್ಥಿತರಿದ್ದ ಹಟ್ಟಿಅಂಗಡಿ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ ಪ್ರತಾಪ್ ಶೆಟ್ಟಿ ಅವರು ಉದ್ಘಾಟನೆಗೈದು ವಿದ್ಯಾರ್ಥಿಗಳಿಗೆ ” ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿಶಾಲೆಯು ಸಾಂಸ್ಕೃತಿಕ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ಗಣನೀಯ ಪ್ರಗತಿಯನ್ನು ಸಾಧಿಸುತ್ತಿರುವುದು ಇಡೀ ಊರಿಗೆ ಒಂದು ಹೆಮ್ಮೆಯ ಸಂಗತಿಯಾಗಿದೆ. ವಿಶ್ವದಾಖಲೆಗಳು ಕೂಡ ಇಲ್ಲಿ ಸೃಷ್ಟಿಯಾಗುತ್ತಿವೆ ಎಂದರೆ ಶಾಲೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಅವರ ತಂಡ ಮಕ್ಕಳ ಬೆಳವಣಿಗೆ ಮತ್ತು ಸಾಧನೆಗೆ ಅದೆಷ್ಟು ಮಹತ್ವವನ್ನು ನೀಡುತ್ತಾರೆಂಬುದಕ್ಕೆ ನೈಜ ಸಾಕ್ಷಿಯಾಗಿದೆ. ನಿತ್ಯದ ಪಾಠ ಪ್ರವಚನಗಳನ್ನು ತನ್ಮಯತೆಯಿಂದ ಕಲಿತು, ಆಟೋಟಗಳಲ್ಲಿ ವಿದ್ಯಾರ್ಥಿಗಳು ಮುಕ್ತವಾಗಿ ಪಾಲ್ಗೊಂಡರೆ ಭವಿಷ್ಯದಲ್ಲಿ ಯಶಸ್ವಿ ಜೀವನವನ್ನು ನಡೆಸಲು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಜೆಸಿಐ ಸಿಟಿಯ 2025ನೇ ಸಾಲಿನ ಅಧ್ಯಕ್ಷರಾಗಿ ರಾಜು ಮೊಗವೀರ ಹಾಗೂ ಕಾರ್ಯದರ್ಶಿಯಾಗಿ ರಾಘವೇಂದ್ರ ಸೂರ್ಕುಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅವರಿಗೆ ಬೈಂದೂರು ಜೆಸಿಐ ಸಿಟಿಯ ಅಧ್ಯಕ್ಷರು, ಸ್ಥಾಪಕಾಧ್ಯಕ್ಷರು, ಪೂರ್ವಾಧ್ಯಕ್ಷರು, ಪದಾಧಿಕಾರಿಗಳು ಮತ್ತು ಸರ್ವಸದಸ್ಯರು ಅಭಿನಂದನೆಯನ್ನು ಸಲ್ಲಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಪ್ರಕೃತಿ ಚಿಕಿತ್ಸಾ ಪದ್ಧತಿಯು ಅತ್ಯುತ್ತಮ ಜೀವನವನ್ನು ನಡೆಸಲು ರಹದಾರಿಯಾಗಿದ್ದು ಇದರ ಮೂಲ ತತ್ವಗಳನ್ನು ಪಾಲಿಸುವುದರಿಂದ ಜೀವನ ಶೈಲಿ ಬದಲಾವಣೆಯಾಗುವುದಲ್ಲದೇ ಯೋಗಭ್ಯಾಸಗಳಿಂದ ಆಯುಷ್ಯ ವೃದ್ಧಿಯಾಗುತ್ತದೆ ಎಂದು ಪ್ರಕೃತಿ ಚಿಕಿತ್ಸಾ ತಜ್ಞ ಡಾ. ಮಹಮ್ಮದ್ ರಫೀಕ್ ತಿಳಿಸಿದರು. ಅವರು ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಕಾಲೇಜು ಆಯೋಜಿಸಿದ್ದ 7ನೇ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನದ ಆಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಪ್ರಕೃತಿ ಚಿಕಿತ್ಸೆ ಮತ್ತು ಯೋಗವನ್ನು ಸರಿಯಾಗಿ ಪಾಲಿಸುವುದರಿಂದ ಮಾನಸಿಕ ಸ್ಥಿತಿಗತಿಗಳನ್ನು ಸಮತೋಲನದಲ್ಲಿಟ್ಟುಕೊಳ್ಳಬಹುದು. ಆ ಮೂಲಕ ಎಲ್ಲಾ ವರ್ಗದ ಮತ್ತು ವಯೋಮಾನದವರಿಗೂ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಡಾ. ಗ್ರೀಷ್ಮಾ ವಿವೇಕ್ ಆಳ್ವ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಶಿಕ್ಷಣವನ್ನು ಪ್ರತಿಯೊಬ್ಬರು ಅಳವಡಿಸಿಕೊಂಡಲ್ಲಿ ಜೀವನವನ್ನು ಅನುಭವಿಸಲು ಮತ್ತು ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಪ್ರಥಮ ವರ್ಷದ ವಿದ್ಯಾರ್ಥಿ ಯೋಗೀಶ್ವರನ್ ಕಾರ್ಯಕ್ರಮ ನಿರೂಪಿಸಿ, ಯೋಗ ವಿಭಾಗದ ಮುಖ್ಯಸ್ಥೆ ಡಾ. ಅರ್ಚನಾ ಸ್ವಾಗತಿಸಿ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಮೊಳಹಳ್ಳಿ ಗ್ರಾಮದ ನಿವಾಸಿ ವಿಶ್ವನಾಥ್ (53) ಅವರು ಭಾನುವಾರದಂದು ಎದೆನೋವಿಗೊಳಗಾಗಿ ಮೃತಪಟ್ಟಿದ್ದಾರೆ. ಅವರು ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದು ಮಧ್ಯಾಹ್ನದ ವೇಳೆ ಎದೆನೋವು ಕಾಣಿಸಿದ್ದು, ಕೂಡಲೇ ಸ್ಥಳೀಯ ಕ್ಲಿನಿಕ್‌ಗೆ ಕರೆದುಕೊಂಡು ಹೋಗಲಾಗಿದ್ದು, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಕೋಟ ಪೋಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಕಾರ್ತಿಕ ಸಂಕಷ್ಟಹರ ಚತುರ್ಥಿ ದೀಪೋತ್ಸವವು ನ.18ರಂದು ನಡೆಯಿತು. ಬೆಳಗ್ಗೆ ಪ್ರಾತಃಪೂಜೆ, ಪಂಚಾಮೃತಾಭಿಷೇಕ ಪೂರ್ವಕ ಉಪನಿಷತ್ ಕಲಶಾಭಿಷೇಕ, 1008 ತೆಂಗಿನಕಾಯಿ ಗಣಪತಿ ಹೋಮ, ಮಧ್ಯಾಹ್ನ ಮಹಾಪೂಜೆ, ಅನ್ನ ಸಂತರ್ಪಣೆ ಹಾಗೂ ಸಂಜೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರದರ್ಶನಗೊಂಡಿತು. ರಾತ್ರಿ ಮಹಾರಂಗ ಪೂಜೆ, ರಜತ ರಥೋತ್ಸವ, ದೀಪೋತ್ಸವ ಹಾಗೂ ಸುಡುಮದ್ದು ಪ್ರದರ್ಶನ ನಡೆಯಿತು. ಈ ಸಂದರ್ಭದಲ್ಲಿ ಆಡಳಿತ ಧರ್ಮದರ್ಶಿ ಕೆ. ಶ್ರೀರಮಣ ಉಪಾಧ್ಯಾಯ, ವಿಶ್ರಾಂತ ಆಡಳಿತ ಧರ್ಮದರ್ಶಿ ಕೆ. ಸೂರ್ಯನಾರಾಯಣ ಉಪಾಧ್ಯಾಯ, ಧರ್ಮದರ್ಶಿ ಕೆ. ನಿರಂಜನ ಉಪಾಧ್ಯಾಯ, ಪರ್ಯಾಯ ಅರ್ಚಕ ಕೆ. ಕೃಷ್ಣಾನಂದ ಉಪಾಧ್ಯಾಯ, ಸಹೋದರರು, ವ್ಯವಸ್ಥಾಪಕ ನಟೇಶ್ ಕಾರಂತ್ ತೆಕ್ಕಟ್ಟೆ ಇನ್ನಿತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಶಿಕ್ಷಣ ಕ್ಷೇತ್ರದಲ್ಲಿ ಸದಾ ನಾವಿನ್ಯತೆಯನ್ನು ಅಳವಡಿಸಿ ಶಿಕ್ಷಕರಲ್ಲಿ ವೃತ್ತಿಪರ ಮನೋಸ್ಥೈರ್ಯವನ್ನು ಬಲಪಡಿಸಿ ವಿದ್ಯಾರ್ಥಿಗಳ ಸರ್ವತೋಮುಖ ಏಳಿಗೆಗೆ ಶ್ರಮಿಸುತ್ತಿರುವ ಶಂಕರನಾರಾಯಣ ಮದರ್ ತೆರೇಸಾ ಎಜುಕೇಶನ್ ಟ್ರಸ್ಟ್ ಸೋಮವಾರದಂದು ಎಲ್ ಕೆಜಿ ಯಿಂದ ಹತ್ತನೇ ತರಗತಿ ಶಿಕ್ಷಕರಿಗೆ ಒಂದು ದಿನದ ವ್ಯಕ್ತಿತ್ವ ವಿಕಸನ ಮತ್ತು ವೃತ್ತಿಪರ ಬೆಳವಣಿಗೆ ಕಾರ್ಯಾಗಾರವನ್ನು ಆಯೋಜಿಸಿತು. ಸಂಸ್ಥೆಯ ಆಡಳಿತಾಧಿಕಾರಿ ಶಮಿತಾ ರಾವ್ ದೀಪ ಬೆಳಗಿಸುವುದರ ಮೂಲಕ ಕಾರ್ಯಾಗಾರಕ್ಕೆ ಚಾಲನೆ ನೀಡಿದರು. ರಾಷ್ಟ್ರಮಟ್ಟದ ಸಂಪನ್ಮೂಲ ವ್ಯಕ್ತಿಗಳಾದ ಮನೋಜ್ ಎಮ್. ಭಟ್ (ಪ್ರಾಂಶುಪಾಲರು ಎನ್ಆಯ್ಈಎಸ್ ರೋಟರಿ ಪಬ್ಲಿಕ್ ಸ್ಕೂಲ್ ಹುಬ್ಬಳ್ಳಿ ) ಹಲವು ಪ್ರಾತ್ಯಕ್ಷಿಕೆಗಳ ಮೂಲಕ ಶಿಕ್ಷಕರಿಗೆ ಚಟುವಟಿಕೆಗಳನ್ನು ನಡೆಸಿದರು. ವಿದ್ಯಾರ್ಥಿಗಳಲ್ಲಿ ಹೇಗೆ ಸಾಮಾಜಿಕ ಜವಾಬ್ದಾರಿ ಮತ್ತು ಸಾಮಾಜಿಕ ಸವಾಲುಗಳನ್ನು ಎದುರಿಸಲು ನೈತಿಕ  ಪ್ರಜ್ಞೆಯನ್ನು ಬೆಳೆಸಬಹುದು. ಸಂಕೇತ, ಮಾರ್ಗದರ್ಶನ, ನಾಯಕತ್ವದ ಕೌಶಲ್ಯ, ಹೊಸ ಹೊಸ ಆಲೋಚನೆ, ಆತ್ಮವಿಶ್ವಾಸ, ದೇಹಭಾಷೆ, ವಿಷಯಜ್ಞಾನ, ಚರ್ಚೆ, ಕೀಳರಿಮೆ, ಕಲಿಕೆಯ ಆಸಕ್ತಿ ಮುಂತಾದ ವಿಷಯಗಳ ಕುರಿತು ಸುಧೀರ್ಘ ಚರ್ಚೆ ನಡೆಸಿದರು. ಎಲ್ಲಾ ಶಿಕ್ಷಕರಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಶಟಲ್ ಬ್ಯಾಡ್ಮಿಂಟನ್‌ನಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರಾರ್ಥನಾ ಪೈ ಅವರನ್ನು ಗಂಗೊಳ್ಳಿಯ 6 ಎಎಮ್ ಬ್ಯಾಡ್ಮಿಂಟನ್ ಫ್ರೆಂಡ್ಸ್ ಇವರ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಒಳಾಂಗಣದಲ್ಲಿ ಭಾನುವಾರ ನಡೆದ ಸನ್ಮಾನ ಕಾರ್ಯಕ್ರಮ ಮತ್ತು ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದ ಸಮಾರೋಪ ಸಮಾರಂಭದಲ್ಲಿ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ರಾಘವೇಂದ್ರ ಶೇರುಗಾರ್ ಅವರು ಪ್ರಾರ್ಥನಾ ಪೈ ಅವರನ್ನು ಸನ್ಮಾನಿಸಿ ಗೌರವಿಸಿದರು. 6 ಎಎಮ್ ಬ್ಯಾಡ್ಮಿಂಟನ್ ಫ್ರೆಂಡ್ಸ್‌ನ ಮನೋಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತ ಬಿ. ರಾಘವೇಂದ್ರ ಪೈ, ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಸೂರಜ್ ಸಾರಂಗ್, ಎಸ್.ವಿ. ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ದೀಕ್ಷಿತ್ ಮೇಸ್ತ, ಸಂಘದ ಸದಸ್ಯರಾದ ಲಿಪ್ಟನ್ ಒಲಿವೇರಾ, ರಾಮ ಪೂಜಾರಿ, ನಿಶಾಕಾಂತ್, ಚೇತನ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: “12ನೇ ಶತಮಾನದಲ್ಲಿ ಬಸವಣ್ಣ ಕಂಡ ಸಮಾಜ ಸುಧಾರಣೆ ಕನಸು ಕುಂದಾಪುರ ತಾಲೂಕಿನ ಜನ್ನಾಡಿ ಮತ್ತು ಮಣಿಗೇರಿಯಲ್ಲಿ ಸಮಾಜಸೇವಕ ಎಚ್.ಎಸ್.ಶೆಟ್ಟಿ ಮೂಲಕ ಸಾಕಾರಗೊಂಡಿದೆ. ಕೊರಗ ಸಮಾಜದ 14 ಕುಟುಂಬಗಳಿಗೆ ತಲಾ 14 ಲಕ್ಷ ರೂ. ವೆಚ್ಚದಲ್ಲಿ ಅವರು ನಿರ್ಮಿಸಿರುವ 14 ಮನೆಗಳು ಕೊರಗ ಸಮಾಜದ ಪರಿವರ್ತನೆಗೆ ದಿಕ್ಯೂಚಿಯಾಗಲಿದೆ,” ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್‌. ಮುನಿಯಪ್ಪ ನುಡಿದರು. ಹಾರ್ದಳ್ಳಿ-ಮಂಡಳ್ಳಿ ಗ್ರಾಮದ ಜನ್ನಾಡಿ ಮತ್ತು ಮಣಿಗೇರಿ ಕೊರಗರ ಕಾಲೊನಿಯಲ್ಲಿ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕೊರಗ ಕುಟುಂಬಗಳಿಗೆ ನಿರ್ಮಿಸಿ ಕೊಟ್ಟಿರುವ ಮನೆಗಳ ಹಸ್ತಾಂತರ ಸಮಾರಂಭವನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದರು. “ಉಡುಪಿ ಪೇಜಾವರ ಮಠದ ಯತಿಗಳಮಾರ್ಗದರ್ಶನದಲ್ಲಿ ಮನೆ ನಿರ್ಮಾಣಗೊಂಡಿರುವುದು ಸಂತಸ ನೀಡಿದೆ. ಮಠದ ಹಿರಿಯ ಯತಿ ಶ್ರೀ ವಿಶ್ವೇಶತೀರ್ಥ ಶ್ರೀಪಾದರು 18 ವರ್ಷ ಹಿಂದೆ ಚನ್ನಪಟ್ಟಣದಲ್ಲಿ ದಲಿತ ಕೇರಿಯಲ್ಲಿ ಸಹಭೋಜನಕ್ಕೆ ಚಾಲನೆ ನೀಡಿ ಕ್ರಾಂತಿ ಮಾಡಿದ್ದರು. ಅವರ ಹೆಜ್ಜೆಯಲ್ಲೇ ಈಗಿನ ಯತಿಗಳು ಸಾಗುತ್ತಿದ್ದಾರೆ.…

Read More