Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸೈಂಟ್ ಥಾಮಸ್ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶನಿವಾರ ಅತ್ಯಂತ ಸಂಭ್ರಮ, ಸಡಗರ ಹಾಗೂ ದೇಶಭಕ್ತಿಯ ವಾತಾವರಣದಲ್ಲಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಭಾರತೀಯ ಸೇನೆಯ ನಿವೃತ್ತ ಯೋಧರಾದ ಜಾನ್ ಸಿ. ಥಾಮಸ್ ಅವರು ಆಗಮಿಸಿ, ಧ್ವಜಾರೋಹಣ ನೆರವೇರಿಸಿ, ಮಾತನಾಡಿ, ದೇಶದ ಭದ್ರತೆ ಮತ್ತು ಸ್ವಾತಂತ್ರ್ಯಕ್ಕಾಗಿ ಸೈನಿಕರು ಸಲ್ಲಿಸುವ ಸೇವೆಯನ್ನು ವಿವರಿಸಿದರು. ವಿದ್ಯಾರ್ಥಿಗಳು ದೇಶದ ಉತ್ತಮ ನಾಗರಿಕರಾಗಿ ಬೆಳೆಯಬೇಕು, ಶಿಸ್ತು, ಪ್ರಾಮಾಣಿಕತೆ ಮತ್ತು ದೇಶಪ್ರೇಮವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಪ್ರಾಂಶುಪಾಲರಾದ ವಂದನೀಯ ಫಾದರ್ ಫಿಲಿಪ್ ನೆಲ್ಲಿವಿಳಾ ಅವರು ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯದ ಮಹತ್ವವನ್ನು ತಿಳಿಸಿ, ದೇಶದ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು. ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು. ದೇಶಭಕ್ತಿ ಗೀತೆಗಳು, ನೃತ್ಯಗಳು, ದೇಶಭಕ್ತಿಯ ನಾಟಕಗಳು, ಭಾಷಣಗಳು ಹಾಗೂ ವಿವಿಧ ಕಲಾ ಪ್ರದರ್ಶನಗಳ ಮೂಲಕ ವಿದ್ಯಾರ್ಥಿಗಳು ಭಾರತದ ವೈವಿಧ್ಯತೆ, ಸಂಸ್ಕೃತಿ ಮತ್ತು ದೇಶಪ್ರೇಮವನ್ನು ಮನೋಜ್ಞವಾಗಿ ಅನಾವರಣಗೊಳಿಸಿದರು. ವಿದ್ಯಾರ್ಥಿಗಳ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷರು ಹಾಗೂ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಧ್ವಜಾರೋಹಣಗೈದು ಮಾತನಾಡಿ,ಇಂದು ಜಾಗತಿಕ ಮಟ್ಟದಲ್ಲಿ ಭಾರತ ದೇಶದ ಖ್ಯಾತಿ ಹೆಚ್ಚುತ್ತಿದೆ. ಸ್ವಾತಂತ್ರ್ಯ ಸಂಪಾದನೆ ಎಂಬುದು ಸುಲಭಕ್ಕೆ ಸಿಕ್ಕ ಫಲವಾಗಿರಲಿಲ್ಲ. ಅನೇಕ ಮಹನೀಯರು, ಸ್ವಾತಂತ್ರ್ಯ ಸಿಂಹಗಳು ತಮ್ಮ ಇಡೀ ಬದುಕನ್ನು ಸ್ವಾತಂತ್ರ್ಯಕ್ಕಾಗಿ ತ್ಯಾಗ ಮಾಡಿದ್ದಾರೆ. ಹಿರಿಯರ ಶ್ರಮದ ಫಲದಿಂದ ಈ ಸ್ವಾತಂತ್ರ್ಯವನ್ನು ನಾವೆಲ್ಲರೂ ಒಗ್ಗೂಡಿ ರಾಷ್ಟ್ರ ಕಟ್ಟುವ ಕೆಲಸ ಮಾಡುವ ಮೂಲಕ ಸಾರ್ಥಕಗೊಳಿಸಬೇಕೆಂದು ಕರೆ ಕೊಟ್ಟರು. ಸಂಸ್ಥೆಯ ಸಹಶಿಕ್ಷಕರಾದ ರಾಘವೇಂದ್ರ ದುರ್ಗ ಬಿಲ್ಲವ ಸ್ವಾತಂತ್ರ್ಯ ಸಂಭ್ರಮದ ಬಗ್ಗೆ ಮಾತನಾಡಿ, “ಇಂದಿನ ದಿನ ಸಮಸ್ತ ಭಾರತೀಯರಿಗೂ ಹೆಮ್ಮೆಯ ದಿನವಾಗಿದೆ. ಸ್ವಾತಂತ್ರ್ಯ ದೊರಕಿ 80 ವರ್ಷಗಳೇ ಉರುಳಿ ಹೋಗಿವೆ, ಇಷ್ಟು ವರ್ಷಗಳ ಇತಿಹಾಸದಲ್ಲಿ ಈ ದೇಶ ಬಹಳಷ್ಟನ್ನು ಸಾಧಿಸಿದೆ. ಆರ್ಥಿಕತೆ, ಕ್ರೀಡೆ, ಸಾಂಸ್ಕೃತಿಕ ಮತ್ತು ಬಾಹ್ಯಾಕಾಶ ಕ್ಷೇತ್ರದಲ್ಲಿ ಅನುಪಮವಾದ ಸಾಧನೆಗಳು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ನವದೆಹಲಿ: ಶ್ರೀಕ್ಷೇತ್ರ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ನಿತ್ಯ ಆಗಮಿಸುವ ಲಕ್ಷಾಂತರ ಭಕ್ತರ ಪ್ರಯಾಣವನ್ನು ಮತ್ತಷ್ಟು ಸುಗಮ ಹಾಗೂ ಅನುಕೂಲಕರಗೊಳಿಸುವ ನಿಟ್ಟಿನಲ್ಲಿ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರು ಮಂಗಳವಾರ ನವದೆಹಲಿಯಲ್ಲಿ ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣನವರನ್ನು ಭೇಟಿ ಮಾಡಿ, ಮೂಕಾಂಬಿಕಾ ರಸ್ತೆ (ಬೈಂದೂರು) ರೈಲು ನಿಲ್ದಾಣವನ್ನು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಕ್ಕೆ ರೈಲು ನಿಲ್ದಾಣವಾಗಿ ಅಧಿಕೃತವಾಗಿ ಗುರುತಿಸುವಂತೆ ಮನವಿ ಸಲ್ಲಿಸಿದರು. ಮೂಕಾಂಬಿಕಾ ರಸ್ತೆ (ಬೈಂದೂರು) ರೈಲು ನಿಲ್ದಾಣ ದೇವಾಲಯದಿಂದ ಕೇವಲ 27 ಕಿ.ಮೀ. ದೂರದಲ್ಲಿದ್ದು, ಬೈಂದೂರಿನಿಂದ ಕೊಲ್ಲೂರಿಗೆ NH-766C ಮೂಲಕ ನೇರ ರಸ್ತೆ ಸಂಪರ್ಕ, ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್‌ಗಳ ಸುಲಭ ಸೇವೆಯೂ ಲಭ್ಯವಿದೆ. ಹೀಗಾಗಿ ಕರ್ನಾಟಕ ಸೇರಿದಂತೆ ಕೇರಳ, ತಮಿಳುನಾಡು, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ ಹಾಗೂ ಗೋವಾ ಮತ್ತಿತರ ರಾಜ್ಯಗಳಿಂದ ರೈಲಿನ ಮೂಲಕ ಆಗಮಿಸುವ ಭಕ್ತರಿಗೆ ಬೈಂದೂರು ಹೆಚ್ಚು ಅನುಕೂಲಕರ ಮತ್ತು ಹತ್ತಿರದ ನಿಲ್ದಾಣವಾಗಿದೆ. ಬೈಂದೂರನ್ನು ಆದ್ಯತೆಯ ರೈಲು ನಿಲ್ದಾಣವಾಗಿ ಗುರುತಿಸುವುದರಿಂದ ಭಕ್ತರಿಗೆ ಕಡಿಮೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳಿಗೆ  ಕಲಿಯುವ ಛಲ ಇರಬೇಕು, ತಂದೆ- ತಾಯಿ ಅವರಿಗೆ ಸಪೋರ್ಟ್ ಮಾಡಬೇಕು. ಮಕ್ಕಳ ಒಳ್ಳೆಯ ಹವ್ಯಾಸಗಳಿಗೆ ಸಕರಾತ್ಮಕವಾದ ಅವಕಾಶ ಕಲ್ಪಿಸಿಕೊಡಬೇಕು ಆಗ ಮಾತ್ರ ಮಕ್ಕಳು ಉತ್ತಮ ವ್ಯಕ್ತಿಗಳಾಗಿ ರೂಪುಗೊಳುತ್ತಾರೆ ಎಂದು ಕನ್ನಡದ ಜನಪ್ರಿಯ ಪ್ರೇರಕ ಭಾಷಣಕಾರರಾದ ಡಾ. ರಾಹುಲ್ ದೇವರಾಜ್ ಹೇಳಿದರು. ಅವರು ಶುಕ್ರವಾರ ಜನತಾ ಪದವಿ ಪೂರ್ವ ಕಾಲೇಜ್ ಹೆಮ್ಮಾಡಿಯ ಪ್ರಥಮ ಪಿಯು ಮತ್ತು ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳ ಪೋಷಕರ ಸಭೆ ಜನತಾ ದಿಕ್ಸೂಚಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿರು. ಮಕ್ಕಳ ಜೀವನ ರಥ ಮುನ್ನೆಡೆಯಲು ಪೋಷಕರು ಶಿಕ್ಷಕರು ಇಬ್ಬರ ಪಾತ್ರ ಮುಖ್ಯವಾದುದು.ಪೋಷಕರು ಮನೆಯಲ್ಲಿ ತಮ್ಮ ಮಕ್ಕಳಿಗೆ ಓದುವ ವಾತಾವರಣ ಕಲ್ಪಿಸಿಕೊಡಬೇಕು, ಇಂದು ಮಕ್ಕಳು ಮತ್ತು ಹೆತ್ತವರ ಸಂಬಂಧದ ಮೌಲ್ಯ ಕಡಿಮೆಯಾಗುತ್ತಿದೆ . ಪೋಷಕರು ಮತ್ತು ಮಕ್ಕಳ ಸಂಬಂಧದ ಮೌಲ್ಯ ಜಾಸ್ತಿಯಾದಾಗ ಕಲಿಕೆ ಇನ್ನಷ್ಟು ಗಟ್ಟಿಯಾಗುತ್ತದೆ.ಮಕ್ಕಳು ನಾವು ಹೇಳಿದನ್ನು ಕೇಳುವುದಿಲ್ಲ ನಾವು ಮಾಡುದನ್ನು ಮಾಡುತ್ತಾರೆ ಎಂದು ಅವರು ಪ್ರೇರಣದಾಯಕ ಕಥೆಗಳ ಮೂಲಕ ತಿಳಿ ಹೇಳಿದರು. ಜನತಾ ಸಮೂಹ ಸಂಸ್ಥೆಯ ಅಧ್ಯಕ್ಷರಾದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ರಾಜಧಾನಿ ಬೆಂಗಳೂರಿನ ʼಕುಂದಾಪ್ರ ಕನ್ನಡ ಪ್ರತಿಷ್ಠಾನ (ರಿ.)ʼ ಪ್ರತಿ ವರ್ಷ ಆಚರಿಸುತ್ತಿರುವ ʼವಿಶ್ವ ಕುಂದಾಪ್ರ ಕನ್ನಡ ದಿನʼ ಬೆಂಗಳೂರಿನಲ್ಲಿ ಈ ಸಲ ಆಗಸ್ಟ್ 15ರ ಶನಿವಾರ ನಡೆಯಲಿದೆ. ʼವಿಶ್ವ ಕುಂದಾಪ್ರ ಕನ್ನಡ ದಿನ’ದ ಪ್ರಯುಕ್ತ ಬೆಂಗಳೂರಿನ ವಿಜಯನಗರದ ಬಂಟರ ಸಂಘದ ಸಭಾಂಗಣದಲ್ಲಿ ಶನಿವಾರ ಮಧ್ಯಾಹ್ನ 2 ಗಂಟೆಯಿಂದ ವಿವಿಧ ಕಾರ್ಯಕ್ರಮಗಳು ನಡೆಯಲಿವೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ.ದೀಪಕ್ ಶೆಟ್ಟಿ ಬಾರ್ಕೂರು ತಿಳಿಸಿದ್ದಾರೆ. ಕಾರ್ಯಕ್ರಮಗಳು: ಸಮಾರಂಭದಲ್ಲಿ ಕೆ.ಜಯಪ್ರಕಾಶ್ ಹೆಗ್ಡೆ, ಕುಂದಾಪ್ರ ಕನ್ನಡ ಅಧ್ಯಯನ ಪೀಠದ ಅಧ್ಯಕ್ಷ, ಕೋಟ ಶ್ರೀನಿವಾಸ ಪೂಜಾರಿ, ಉಡುಪಿ-ಚಿಕ್ಕಮಗಳೂರು ಸಂಸದ, ಪ್ರಮೋದ್ ಶೆಟ್ಟಿ: ಖ್ಯಾತ ಚಿತ್ರನಟ ಭಾಗವಹಿಸಲಿದ್ದಾರೆ. ವಿಶ್ವ ಕುಂದಾಪ್ರ ಕನ್ನಡ ದಿನ:ಆಸಾಡಿ ಅಮಾಸಿ/ ಆಟಿ ಅಮಾವಾಸ್ಯೆ (ಕರ್ಕಾಟಕ ಅಮಾವಾಸ್ಯೆ) ದಿನ ಕರಾವಳಿಗರಿಗೆ ಅತ್ಯಂತ ವಿಶೇಷವಾದದ್ದು. ಕಳೆದ ಏಳು ವರ್ಷಗಳಿಂದ ಪ್ರತಿ ವರ್ಷ ಈ ಕರ್ಕಾಟಕ ಅಮಾವಾಸ್ಯೆ ದಿನವನ್ನು ʼವಿಶ್ವ ಕುಂದಾಪ್ರ ಕನ್ನಡ ದಿನʼ ಎಂದು ಆಚರಣೆ ಮಾಡಲಾಗುತ್ತಿದ್ದು, ಈ ಸಲ ಆಗಸ್ಟ್ 12ರಂದು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ಗಳಿಗೆ ಸೇರಿದ ಕಾನೂನು ಪದವೀಧರರಿಗೆ ವಕೀಲಿ ವೃತ್ತಿಯಲ್ಲಿ ತರಬೇತಿ ನೀಡಿ, ಶಿಷ್ಯವೇತನ ಮಂಜೂರು ಮಾಡಲು ಅರ್ಹ ಮತ್ತು ಆಸಕ್ತ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 10 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಜಿಲ್ಲಾ ಕಚೇರಿಗಳ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574881, 2573881 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಭಾರತೀಯ ಅಂಚೆ ಇಲಾಖೆಯಲ್ಲಿ ಕಳೆದ 44 ವರ್ಷಗಳಿಂದ ಡಾಕ್ ಸೇವಕ್ ಆಗಿ ಕರ್ತವ್ಯ ನಿರ್ವಹಿಸಿ ವಯೋನಿವೃತ್ತಿ ಹೊಂದಿದ ಗಂಗೊಳ್ಳಿ ಅಂಚೆ ಕಚೇರಿಯ ಇಮ್ತಿಯಾಜ್ ಅಹಮ್ಮದ್ ಅವರನ್ನು ಸಮ್ಮಾನಿಸಿ ಬೀಳ್ಕೊಡಲಾಯಿತು. ಕುಂದಾಪುರ ಅಂಚೆ ಉಪವಿಭಾಗದ ಎಎಸ್ಪಿ ಮಹೇಶ್ ಮತ್ತು ಗಂಗೊಳ್ಳಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ತಬ್ರೇಜ್ ಅವರು ಇಮ್ತಿಯಾಜ್ ಅಹಮ್ಮದ್ ಸಮ್ಮಾನಿಸಿ ಬೀಳ್ಕೊಟ್ಟರು. ಗಂಗೊಳ್ಳಿ ಅಂಚೆ ಕಚೇರಿಯ ಪೋಸ್ಟ್ ಮಾಸ್ಟರ್ ವೀಣಾ, ತ್ರಾಸಿ ಅಂಚೆ ಕಚೇರಿಯ ಪೋಸ್ಟ್ ಮಾಸ್ಟರ್ ಚೆನ್ನಯ್ಯ ಪೂಜಾರಿ, ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ಸೊಸೈಟಿ ಮುಖ್ಯ ಕಾರ್ಯನಿರ್ವಾಹಕ ಗಣೇಶ ನಾಯಕ್, ಅಂಜುಮಾನ್ ಉರ್ದು ಘೋಷಾ ಶಾಲೆಯ ಕಾರ್ಯದರ್ಶಿ ಉಮ್ಮರ್ ಬಾಷಾ ಸಾಹೇಬ್, ನಿವೃತ್ತ ಪೋಸ್ಟ್ ಮಾಸ್ಟರ್‌ಗಳಾದ ದೇವರಾಯ ಶೇರುಗಾರ್, ಉದಯ ಕುಮಾರ್ ಶೆಟ್ಟಿ, ಅಂಚೆ ಕಚೇರಿಯ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು. ಅಂಚೆಪೇದೆ ಶ್ವೇತಾ ಸ್ವಾಗತಿಸಿದರು. ನಿವೃತ್ತ ಪೋಸ್ಟ್ ಮಾಸ್ಟರ್ ಸೀತಾರಾಮ ಗಾಣಿಗ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಈ ಸಮಾಜದಲ್ಲಿ ಯಾವುದೇ ವಸ್ತು ಕಳೆದುಕೊಂಡಾಗ ವೇಗವಾಗಿ ಮರೆತು ಬಿಡುವ ಕಾಲದಲ್ಲಿ ಸಂತೋಷ್ ಮೇಷ್ಟ್ರ್ ಹೆಸರನ್ನು ಸದಾಕಾಲ ನೆನಪುಳಿಯುವಂತೆ ಮಾಡುವ ಪಂಚವರ್ಣ ಕಾರ್ಯವೈಕರಿಗೆ ಮೆಚ್ಚುಗೆ ಸೂಚಿಸುತ್ತೇನೆ ಎಂದು ಸಾಹಿತಿ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ನರೇಂದ್ರ ಕುಮಾರ್ ಕೋಟ ಹೇಳಿದರು. ಅವರು ಬುಧವಾರ ಕೋಟದ ಪಂಚವರ್ಣ ಕಛೇರಿಯಲ್ಲಿ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಇಂಡಿಕಾ ಕಲಾಬಳಗ ಪಡುಕರೆ, ಜೈ ಹಿಂದ್ ಕ್ರಿಕೆಟಸ್೯ ಪಡುಕರೆ ಇವರ ಸಹಯೋಗದೊಂದಿಗೆ ನೆನಪಿನಂಗಳದಿ ಸಂತೋಷ್ ಮೇಷ್ಟ್ರು ಸಂಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಅವರ ಸಾಹಿತ್ಯಿಕ ಬದುಕು ಸೇರಿದಂತೆ ಅವರ ವಿವಿಧ ಕ್ಷೇತ್ರಗಳ ಆಯಾಮಗಳ ಕಾರ್ಯವೈಕರಿಯನ್ನು ನೆನಪಿಸುವ ಅಥವಾ ಅದರ ಬಗ್ಗೆ ಅಧ್ಯಯನದ ಮೂಲಕ ಒಂದೆಡೆ ರೂಪುಗೊಳಿಸಿ ಅವರ ಹೆಸರಿನಲ್ಲಿ ಉದಯೋನ್ಮುಖ ಸಾಹಿತಿಗಳ ಗುರುತಿಸುವ ಯೋಚನೆಗೆ ಬಣ್ಣ ಬಡಿಯುವ ಕಾರ್ಯ ಮಾಡೋಣ ಎಂದರಲ್ಲದೆ ಸಾಹಿತ್ಯಿಕ ಕ್ಷೇತ್ರದ ದಿನಗಳಲ್ಲಿ ನನ್ನ ಅವರ ಒಡನಾಟವನ್ನು ಸಂಸ್ಮರಣೆಯಲ್ಲಿ ತಿಳಿಯ ಪಡಿಸಿದರು. ಸಭೆಯಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಈ ಜೀವಜಗತ್ತಿಗೆ ಚೈತನ್ಯ ತುಂಬುವ ಶಕ್ತಿ ಸಾಹಿತ್ಯಕ್ಕಿದೆ. ಸಾಹಿತ್ಯವು ಸಮುದಾಯದ ಸಂವೇದನೆಯನ್ನು ಅರ್ಥ ಮಾಡಿಕೊಂಡು ಸ್ಪಂದಿಸುತ್ತಾ ಬಂದಿದೆ ಎಂದು ಕಲಬುರಗಿಯ ಕೇಂದ್ರೀಯ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಪ್ರಾಧ್ಯಾಪಕ ಮತ್ತು ಡೀನ್ ಆಗಿರುವ ವಿಕ್ರಮ ವಿಸಾಜಿ  ಹೇಳಿದರು. ಅವರು ಗುರುವಾರ ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ನಡೆದ ಡಾ. ಹೆಚ್. ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಆಯ್ಕೆದಾರರ ಅನಿಸಿಕೆ ನೆಲೆಯಲ್ಲಿ ಮಾತನಾಡಿದರು. ಸಾಹಿತ್ಯವು ಸಾಮಾಜಿಕ ಮತ್ತು ಸಾಂಸ್ಕೃತಿಕ ಜನಜೀವನ, ಸ್ಥಿತಿ -ಗತಿ, ನಿಸರ್ಗ, ಜೀವನವನ್ನು ಕುರಿತು ಆಳವಾಗಿ ಸಂಯಮದಿಂದ ಗಮನಿಸುತ್ತದೆ. ಸಾಹಿತ್ಯವು ವ್ಯವಸ್ಥೆಯ ಆಂತರ್ಯವನ್ನು ಅರ್ಥ ಮಾಡಿಕೊಳ್ಳುತ್ತದೆ. ಅಂತಹ ಸೃಜನಾತ್ಮಕ ಅರ್ಥೈಸುವಿಕೆಯನ್ನು ಶ್ರೀಧರ ಬಳಗಾರ ಅವರ ‘ಮಾರ ಮಿಂದನು’ ಕಥಾ ಸಂಕಲನದ ಕಥಾವಸ್ತುವಿನಲ್ಲಿ ಕಾಣಬಹುದು. ಕಥಾಸಂಕಲನದಲ್ಲಿರುವ ಹಲವು ಕಥೆಗಳು ಈ ಸಾಮಾಜಿಕ ಬದುಕಿನ ಸ್ಥಿತ್ಯಂತರಗಳನ್ನು ಬಹಳ ಪ್ರಬುದ್ಧವಾಗಿ ಮನಸ್ಸಿಗೆ ತಟ್ಟುತ್ತದೆ. ಕಥೆಯ ಸೃಷ್ಟಿಯಲ್ಲಿ ಅಂತರಂಗವು ಸಮುದಾಯಕ್ಕೆ ಮತ್ತು ಅದರ ಬದಲಾವಣೆಗೆ ತೆರೆದುಕೊಳ್ಳುವ ಪರಿ ನಿಜಕ್ಕೂ ಬರಹಗಾರನ ಸಂವೇದನೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಾಳಾವರ ವರದರಾಜ ಎಂ. ಶೆಟ್ಟಿ ಪದವಿ ಕಾಲೇಜಿನಲ್ಲಿ ಐಕ್ಯೂಎಸಿ ಘಟಕ ಮತ್ತು ಮಾದಕ ದ್ರವ್ಯ ವಿರೋಧಿ ಘಟಕದ ಆಶ್ರಯದಲ್ಲಿ ಮಾದಕ ಪದಾರ್ಥಗಳ ಬಳಕೆಯಿಂದ ಆರೋಗ್ಯ ಮತ್ತು ಸಮಾಜದ ಮೇಲಾಗುವ ದುಷ್ಪರಿಣಾಮಗಳನ್ನು ತಿಳಿಸಿ ಜಾಗೃತಿಯನ್ನು ಮೂಡಿಸುವ ಕಾರ್ಯಾಗಾರ ಹಮ್ಮಿಕೊಳ್ಳಲಾಯಿತು. ಕುಂದಾಪುರ ಆರಕ್ಷಕ ಠಾಣೆಯ ಎ.ಎಸ್.ಐ ಶಾಂತರಾಜ ಬಿ.ಕೆ. ಯವರು ಮಾದಕ ಪದಾರ್ಥಗಳ ಬಳಕೆಯಿಂದ ತಾನು ಕೆಡುವುದಲ್ಲದೆ ತನ್ನ ಕುಟುಂಬ ಮತ್ತು ಸಮಾಜದ ಮೇಲೆ ಅನೇಕ ಕೆಟ್ಟ ಪರಿಣಾಮಗಳಾಗಿ ಬದುಕು ದುರ್ಲಭವಾಗುತ್ತದೆ. ಅದರಿಂದ ದೂರವಿರುವುದಲ್ಲದೆ ನಮಗೆ ಮಾಹಿತಿ ನೀಡಿ ಸಹಕರಿಸಬೇಕೆಂದು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ನಾಗರಾಜ ವೈದ್ಯ ಎಂ. ವಹಿಸಿದ್ಧರು. ಮಾದಕ ದ್ರವ್ಯ ವಿರೋಧಿ ಘಟಕದ ಆಶ್ರಯದಲ್ಲಿ ಹಮ್ಮಿಕೊಂಡ ಈ ಕಾರ್ಯಕ್ರಮವನ್ನು ವಾಣಿಜ್ಯಶಾಸ್ತ್ರ ಸಹಾಯಕ ಪ್ರಾದ್ಯಾಪಕರಾದ ತಂಗಮ್ಮ ಎ.ಎ. ನಿರೂಪಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಸುಬ್ರಹ್ಮಣ್ಯ ಎ. ಸ್ವಾಗತಿಸಿ, ಶೃತಿ ಆಚಾರ್ಯ ಎನ್. ಕೊನೆಯಲ್ಲಿ ವಂದಿಸಿದರು.

Read More