Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಂವಿಧಾನ ದೇಶದ ಸರ್ವಶ್ರೇಷ್ಠ ಕಾನೂನಾಗಿದ್ದು, ಇಡೀ ದೇಶದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತದೆ. ಯುವ ಸಮುದಾಯ ಸಂವಿಧಾನದ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಹಕ್ಕುಗಳನ್ನು ನಕಾರಾತ್ಮಕವಾಗಿ ಬಳಸಿಕೊಳ್ಳದೆ ಧನಾತ್ಮಕವಾಗಿ ಬಳಸಿಕೊಂಡು ಸತ್ಪ್ರಜೆಗಳಾಗಬೇಕು  ಎಂದು ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ  ಹೇಳಿದರು. ಅವರು ಕಾಲೇಜಿನಲ್ಲಿ ನಡೆದ  ಸಂವಿಧಾನ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾಲೇಜಿನ ಉಪ ಪ್ರಾಂಶುಪಾಲರಾದ  ಡಾ| ಚೇತನ್ ಶೆಟ್ಟಿ ಕೋವಾಡಿ  ಪ್ರಾಸ್ತಾವಿಕ ಮಾತುಗಳನ್ನಾಡಿ, ಸ್ವಾಗತಿಸಿದರು. ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಸಹ ಪ್ರಾಧ್ಯಾಪಕರಾದ ಪ್ರವೀಣ್ ಮೊಗವೀರ ಗಂಗೊಳ್ಳಿ ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು. ಕಾಲೇಜಿನ ವಾಣಿಜ್ಯ ವಿಭಾಗದ ಸಹ ಪ್ರಾಧ್ಯಾಪಕರಾದ ರಾಜೇಶ್ ಶೆಟ್ಟಿ ವಕ್ವಾಡಿ, ಸಹಾಯಕ ಪ್ರಾಧ್ಯಪಕರಾದ ಜೋಸ್ಲಿನ್ ಆರ್. ಅಲ್ಮೆಡಾ, ಪ್ಲೇಸ್ಮೆಂಟ್ ಆಫೀಸರ್ ಸುರೇಶ ಕಾಮತ್, ಕಛೇರಿ ಸಿಬ್ಬಂದಿ ರಮೇಶ್ ಮೊಗವೀರ ಉಪಸ್ಥಿತರಿದ್ದರು. ರೇಂಜರ್ಸ್ ಘಟಕದ  ಸಂಯೋಜಕರಾದ ಪೂಜಾ ಕುಂದರ್ ವಂದಿಸಿದರು. ಕಾಲೇಜಿನ ಎನ್ಎಸ್ಎಸ್ ಘಟಕ-2ರ  ಸಂಯೋಜಕರಾದ ದೀಪಾ ಪೂಜಾರಿ ನಿರೂಪಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ “ಯುವನಿಧಿ” ಯೋಜನೆಗೆ 2022-23 ಹಾಗೂ 2023-24 ರಲ್ಲಿ ಉತ್ತೀರ್ಣರಾದ ಪದವಿ, ಸ್ನಾತಕೋತರ ಪದವಿ ಮತ್ತು ಡಿಪ್ಲೋಮಾಗಳ ವಿಧ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಪ್ರತಿ ತಿಂಗಳು ಪದವೀಧರರಿಗೆ 3,000 ರೂ. ಹಾಗೂ ಡಿಪ್ಲೋಮಾದವರರಿಗೆ 1500 ರೂ. ಗಳ ನಿರುದ್ಯೋಗ ಭತ್ಯೆಯನ್ನು ನೀಡಲಾಗುವುದು. ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿವಸಗಳು ಪೊರೈಸಿದ ಅಭ್ಯರ್ಥಿಗಳು ಕೂಡ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಪ್ರತಿ ತಿಂಗಳು ಈ ಪ್ರಯೋಜನ ಪಡೆಯಬೇಕಿದ್ದರೆ, ಪ್ರತಿ ತಿಂಗಳಲ್ಲಿ ತಾನು ನಿರುದ್ಯೋಗಿಯೆಂದು, ವ್ಯಾಸಂಗ ಮುಂದುವರೆಸುತ್ತಿಲ್ಲವೆಂದು ಹಾಗೂ ಸ್ವಯಂ ಉದ್ಯೋಗಿಯಲ್ಲ ವೆಂದು ಸ್ವಯಂ ಘೋಷಣೆ ಮಾಡುವುದು ಕಡ್ಡಾಯವಾಗಿರುತ್ತದೆ. ಪ್ರಸಕ್ತ ಪ್ರತೀ ಗ್ರಾಮದಲ್ಲಿ ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅಭ್ಯರ್ಥಿಗಳು ನೋಂದಣಿಯನ್ನು ಮಾಡಿಕೊಳ್ಳಬಹುದು ಹಾಗೂ ಸ್ವಯಂ ಘೋಷಣೆಯನ್ನು ಪ್ರತೀ ತಿಂಗಳು 25 ನೇ ತಾರೀಕಿನ ಒಳಗಾಗಿ ಸಲ್ಲಿಸಬೇಕು. ಪ್ರಯೋಜನ ಪಡೆಯುತ್ತಿರುವ ಅಭ್ಯರ್ಥಿಗಳು ಪ್ರತೀ ತಿಂಗಳು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನಗಳು ಸುಗಮವಾಗಿ ಸಂಚರಿಸಲು ಅನುಕೂಲವಾಗುವಂತೆ ರಸ್ತೆಯ ನಿರ್ವಹಣೆಯನ್ನು ಕಾಲಕಾಲಕ್ಕೆ ಮಾಡಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ಗುತ್ತಿಗೆದಾರರ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಎಚ್ಚರವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಳೆಯಿಂದಾಗಿ ಉಂಟಾದ ಹೊಂಡ ಗುಂಡಿಗಳನ್ನು ದುರಸ್ಥಿ ಮಾಡುವ ಬಗ್ಗೆ ಹಾಗೂ ಇತರೆ ಸಮಸ್ಯೆಗಳ ಬಗ್ಗೆ ಚರ್ಚಿಸುವ ಸಲುವಾಗಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ವಾಹನಗಳು ಶುಲ್ಕವನ್ನು ಕಟ್ಟಿ ಸಂಚರಿಸುತ್ತವೆ. ಸದರಿ ವಾಹನಗಳು ಸರಾಗವಾಗಿ ಸಂಚರಿಸಲು ಅನುಕೂಲವಾಗುವಂತೆ ಹೆದ್ದಾರಿ ನಿರ್ವಹಣೆಯನ್ನು ಮಾಡಬೇಕು. ಮಾನ್ಸೂನ್ ಮಳೆಯಿಂದಾಗಿ ರಸ್ತೆಯಲ್ಲಿ ಹೊಂಡಗಳು ಬಿದ್ದಿವೆ ಹಾಗೂ ರಸ್ತೆ ಬದಿಯ ಬೀದಿದೀಪಗಳು ನಿರ್ವಹಣೆ ಸರಿಯಿಲ್ಲ ಎನ್ನುವ ದೂರುಗಳು ಸಾರ್ವಜನಿಕವಾಗಿ ಕೇಳಿ ಬರುತ್ತಿವೆ. ಕೂಡಲೇ ಈ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ತಿಳಿಸಿದರು. ಸ್ಥಳೀಯ ಜನರು ರಸ್ತೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಯಡಾಡಿ- ಮತ್ಯಾಡಿ ಇದರ ವಾರ್ಷಿಕ ಕ್ರೀಡಾಕೂಟವು ಕುಂದಾಪುರ ಗಾಂಧಿ ಮೈದಾನದಲ್ಲಿ ನಡೆಯಿತು. ಉಡುಪಿ ಲೋಕಸಭಾ ಕ್ಷೇತ್ರ ಸಂಸದ ಕೋಟ ಶ್ರೀನಿವಾಸ್‌ ಪೂಜಾರಿ ಅವರು ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ, ” ಸಾಧನೆಯಲ್ಲಿ ಛಲವಿದ್ದವರಿಗೆ ಯಾವುದೂ ಹಿನ್ನಡೆಯಾಗುವುದಿಲ್ಲ. ನಿರ್ದಿಷ್ಟವಾದ ಗುರಿ ಉದ್ದೇಶದಿಂದ ಸ್ಪಷ್ಟವಾದ ದಾರಿಯಲ್ಲಿ ಸಾಗಿದಾಗ ಯಶಸ್ಸು ಖಂಡಿತ ಸಿಗುತ್ತದೆ. ಕ್ರೀಡಾ ಕ್ಷೇತ್ರದಲ್ಲಿ ಸೋಲು ಮತ್ತು ಗೆಲುವು ಸಾಮಾನ್ಯ. ಅವೆರಡನ್ನೂ ಸಮಾನವಾಗಿ ಸ್ವೀಕರಿಸಿ ನಿರಂತರ ಪ್ರಯತ್ನ ಮಾಡಬೇಕು.ಕ್ರೀಡಾ ಕ್ಷೇತ್ರದಲ್ಲಿ ಅಸಕ್ತಿಯುಳ್ಳ ಮಕ್ಕಳಿಗೆ ಹಿಮಾಲಯ ಪರ್ವತ ಏರಿದ ತೇನ್ ಸಿಂಗ್ ಮಾದರಿಯಾಗಬೇಕು. ಗ್ರಾಮೀಣ ಪ್ರದೇಶದ ಮಕ್ಕಳು ಕೂಡ ಕ್ರೀಡಾ ವಿಭಾಗದಲ್ಲಿ ಹೆಚ್ಚಿನ ಸಾಧನೆ ಮಾಡುವಂತಾಗಬೇಕು. ಡಾ. ರಮೇಶ್ ಶೆಟ್ಟಿ ಅವರ ಸಮರ್ಥವಾದ ನೇತೃತ್ವದಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಮತ್ತು ಸುಜ್ಞಾನ ಪದವಿ ಪೂರ್ವ ಕಾಲೇಜು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡುತ್ತಿದ್ದು,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್ ಆಯೋಜನೆಯಲ್ಲಿ ರೋಟರಿ ಜಿಲ್ಲೆ 3182 ಇದರ ಜಿಲ್ಲಾ ಸಾಂಸ್ಕೃತಿಕ ಉತ್ಸವ ದಿಗಣ ಕಾರ್ಯಕ್ರಮ ಇತ್ತೀಚಿಗೆ ಜರುಗಿತು. ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ರೋಟರಿ ಕ್ಲಬ್ ಬೈಂದೂರು ಚಾಂಪಿಯನ್ ಆಗಿ ಹೊರಹೊಮ್ಮಿತು. ಭಾವಗೀತೆ, ಯುಗಳ ಗೀತೆ ಹಾಗೂ ಸಮೂಹ ನೃತ್ಯ ವಿಭಾಗದಲ್ಲಿ ಬೈಂದೂರು ರೋಟರಿ ಪ್ರಥಮ ಸ್ಥಾನ ಪಡೆದುಕೊಂಡಿತ್ತು. ರೋಟರಿ ಕ್ಲಬ್ ಕುಂದಾಪುರ ರನ್ನರ್‌ಅಪ್ ಆಯಿತು. ಪ್ರಶಸ್ತಿ ಸ್ವೀಕರಿಸುವ ವೇಳೆ ರೋಟರಿ ಕ್ಲಬ್ ಬೈಂದೂರು ಅಧ್ಯಕ್ಷರಾದ ಮೋಹನ್ ರೇವಣ್ಕರ್, ಪೂರ್ವಾಧ್ಯಕ್ಷರುಗಳಾದ ಐ. ನಾರಾಯಣ, ಡಾ. ಪ್ರವೀಣ್ ಶೆಟ್ಟಿ, ಪ್ರಸಾದ್ ಪ್ರಭು, ಸುಧಾಕರ ಪಿ, ಮಂಜುನಾಥ ಮಹಾಲೆ, ಉದಯ್ ಆಚಾರ್, ಕಾರ್ಯದರ್ಶಿ ಸುನಿಲ್ ಹೆಚ್. ಜಿ., ವಿವಿಧ ಸ್ಪರ್ಧಿಗಳು ಹಾಗೂ ಬೈಂದೂರು ರೋಟರಿ ಕುಟುಂಬದ ಸದಸ್ಯರುಗಳು ಉಪಸ್ಥಿತರಿದ್ದರು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್ ಅಧ್ಯಕ್ಷ ಶೇಖರ್ ಎನ್. ಶೆಟ್ಟಿ ವಹಿಸಿದ್ದರು. ರೋಟರಿ ಜಿಲ್ಲಾ ಗವರ್ನರ್ ದೇವ್ ಆನಂದ್, ಮಾಜಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಅಂಪಾರು ಗ್ರಾಮದ ಹೆಬ್ರಿಯ ನೆಲ್ಲಿಕಟ್ಟೆಯ ನಿವಾಸಿ ಮನೋಜ್‌ (48) ಅವರು ತಲಕಲ್‌ಗುಡ್ಡೆಯ ರಾಜ್ಯ ಹೆದ್ದಾರಿಯಲ್ಲಿ ಬೈಕ್‌ ಸ್ಕಿಡ್‌ ಆಗಿ ಬಿದ್ದು ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನ. 26ರಂದು ಮೃತಪಟ್ಟರು. ಈ ಬಗ್ಗೆ ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ನಿವೃತ್ತ ಇತಿಹಾಸ ಉಪನ್ಯಾಸಕ ಮತ್ತು ಉತ್ತಮ ಕೃಷಿಕರು ಆಗಿರುವ ಹೊಸಾಡು ಭಾಸ್ಕರ ಶೆಟ್ಟಿ ಅವರಿಗೆ ಗಂಗೊಳ್ಳಿಯ ಸ್ನೇಹಿತರ ಬಳಗದಿಂದ ಅಭಿಮಾನದ ಸನ್ಮಾನ ಕಾರ್ಯಕ್ರಮವು ಗಂಗೊಳ್ಳಿಯ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ನಮೆಂಬರ್ 28ರ ಗುರುವಾರ ಸಂಜೆ ನಡೆಯಲಿರುವುದು. ಜಿ ಎಸ್ ವಿ ಎಸ್ ಅಸೋಸಿಯೇಷನ್ ಅಧ್ಯಕ್ಷರಾದ ಡಾ. ಕಾಶಿನಾಥ್ ಪಿ ಪೈ ಸಭೆಯ ಅಧ್ಯಕ್ಷತೆಯನ್ನು ವಹಿಸಲಿದ್ದು, ಕುಂದಾಪುರದ ಚಿನ್ಮಯಿ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾ. ಉಮೇಶ್ ಪುತ್ರನ್, ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಮಾಜಿ ಪ್ರಾಂಶುಪಾಲ ಕೆ. ಎನ್ ಟಿ ನಂಬಿಯಾರ್, ಉಡುಪಿಯ ಖ್ಯಾತ ವಕೀಲರಾದ ಹೆಚ್ ರಾಘವೇಂದ್ರ ಶೆಟ್ಟಿ, ಸಮಾಜ ಸೇವಕಿ ಮಂಜುಳ ದೇವಾಡಿಗ ಮತ್ತು ಖ್ಯಾತ ಉದ್ಯಮಿ ಇಮ್ತಿಯಾಜ್ ಖಲೀಫೆ ಇವರು ಪಾಲ್ಗೊಳ್ಳಲಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಏಷ್ಯನೆಟ್ ಸುವರ್ಣ ಹಾಗೂ ಕನ್ನಡ ಪ್ರಭ ಪತ್ರಿಕೆ ಕೊಡಮಾಡುವ ಅಂತರಾಷ್ಟ್ರೀಯ ಮಟ್ಟದ ಪ್ರಶಸ್ತಿಗೆ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾಗಿರುವ ಗಣೇಶ್‌ ಮೊಗವೀರ ಅವರನ್ನು ಆಯ್ಕೆ ಮಾಡಲಾಗಿದೆ. ಅವರು ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ವಿಶೇಷ ಕೊಡುಗೆಗಳನ್ನು ಪರಿಗಣಿಸಿ ಆಯ್ಕೆ ಪ್ರಕ್ರಿಯೆಯ ಮೂಲಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ನ.28ರಂದು ವಿಯೆಟ್ನಾಂ ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಗಣ್ಯಾತಿಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ನಮ್ಮ ಸಂವಿಧಾನದ ಮೂಲತತ್ವಗಳ ಬೇರು ದೇಶದ ಇತಿಹಾಸ, ನಾಗರಿಕತೆ, ಸಂಸ್ಕೃತಿಯಲ್ಲಿದೆ. ನಮ್ಮದು ಅಪ್ಪಟ ದೇಶೀಯ, ಅಸಮಾನತೆ ನಿರ್ಮೂಲನೆಯ ಪರಿವರ್ತನಾಶೀಲ ಸಂವಿಧಾನ ಎಂದು ದೆಹಲಿ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ಕಾನೂನು ಪೀಠದ ಪ್ರಾಧ್ಯಾಪಕ ಡಾ. ಪಿ. ಪುನೀತ್ ಹೇಳಿದರು. ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಮಂಗಳವಾರ ಮಾನವಿಕ ವಿಭಾಗಗಳು ಹಮ್ಮಿಕೊಂಡ ‘ರಾಷ್ಟ್ರೀಯ ಸಂವಿಧಾನ ದಿನ’ ಆಚರಣೆಯಲ್ಲಿ ಅವರು ಮಾತನಾಡಿದರು. ಸಂವಿಧಾನ ಕುರಿತು ಅದರ ರಚನೆ ಸಂದರ್ಭದಲ್ಲಿಯೇ ಆರೋಪಗಳು ಬಂದಿದ್ದವು. ಆದರೆ, ಅದಕ್ಕೆ ರಚನಾ ಸಮಿತಿ ವಿಸ್ತೃತವಾಗಿ ಉತ್ತರಿಸಿತ್ತು ಎಂದರು. ಇತರರ ತಪ್ಪಿನಿಂದ ನೀವು ತಿದ್ದಿಕೊಳ್ಳಿ ಎಂದು ಚಾಣಕ್ಯ ಹೇಳಿದ್ದರು. ಜ್ಞಾನ ಎಲ್ಲೆಡೆಯಿಂದ ಬರಲಿ ಎಂದು ಋಗ್ವೇದ ಹೇಳಿದೆ. ಇದನ್ನು ಉಲ್ಲೇಖಿಸಿದ ಅಂಬೇಡ್ಕರ್, ಯಾವುದೇ ಉನ್ನತ ಮೌಲ್ಯಗಳನ್ನು ಅನುಕರಿಸುವುದು ಅಥವಾ ಅನುಸರಿಸುವುದು ತಪ್ಪಲ್ಲ ಎಂದು ಹೇಳಿದ್ದರು. ಸಂವಿಧಾನ ರಚನಾ ಸಮಿತಿಯಲ್ಲಿ ನಡೆದ ಚರ್ಚೆಯು ದೇಶದಲ್ಲಿ ನಡೆದ ಅತ್ಯುತ್ತಮ ಚರ್ಚೆ ಎಂದು ವಿವರಿಸಿದರು. ಸಂವಿಧಾನಗಳ ಸರಾಸರಿ ಜೀವಿತಾವಧಿ 17…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ಕುಂದೇಶ್ವರ ದೇವರ ಸನ್ನಿದಿಯಲ್ಲಿ ನ.30ರ ಶನಿವಾರ ಕಾರ್ತಿಕ ಬಹುಳ ಅಮಾವಾಸ್ಯೆಯಂದು ಲಕ್ಷದೀಪೋತ್ಸವ ಹಾಗೂ ರಥೋತ್ಸವ ನಡೆಯಲಿದೆ. ಬೆಳಿಗ್ಗೆ ಶ್ರೀ ಕುಂದೇಶ್ವರ ದೇವರ ಸನ್ನಿಧಿಯಲ್ಲಿ ಬ್ರಹ್ಮಕಲಶ ಸ್ಥಾಪನೆ – ಕಲಾಭಿವೃದ್ಧಿ ಹೋಮ – ಶತರುದ್ರಾಭಿಷೇಕ – ಕಲಶಾಭಿಷೇಕ ಮಹಾಪೂಜೆ- ಅನ್ನಸಂತರ್ಪಣೆ – ಪ್ರಸಾದ ವಿತರಣೆ ಹಾಗೂ ಸೂರ್ಯೋದಯದಿಂದ ಸೂರ್ಯಾಸ್ತಮಾನದವರೆಗೆ ಕುಂದಾಪುರ ತಾಲೂಕಿನ ಭಜನಾ ಮಂಡಳಿಗಳ ಒಕ್ಕೂಟ ಅವರಿಂದ ಶ್ರೀ ದೇವರ ನಾಮ ಸಂಕೀರ್ತನೆ ಮತ್ತು ಕುಣಿತ ಭಜನೆ ನಡೆಯಲಿದೆ. ಸಂಜೆ ರಂಗಪೂಜೆ – ಮಹಾಮಂಗಳಾರತಿ ಪ್ರಸಾದ ವಿನಿಯೋಗ – ಲಕ್ಷ ದೀಪೋತ್ಸವ – ಪುಷ್ಪಕ ರಥದಲ್ಲಿ ಶ್ರೀ ದೇವರ ಪುರ ಮೆರವಣಿಗೆ – ಕಟ್ಟೆ ಪೂಜೆ – ಕೆರೆದೀಪ ಇತ್ಯಾದಿ ನಡೆಯಲಿದೆ. ಶ್ರೀ ದೇವರ ಪುಷ್ಪಕ ರಥೋತ್ಸವದುದ್ದಕ್ಕೂ ಜಾನಪದ ಮತ್ತು ಸಾಂಸ್ರೃತಿಕ ವೈಭವ ಪ್ರದರ್ಶನಗೊಳ್ಳಲಿದೆ. ಸಂಜೆ 7.00ರಿಂದ ನೃತ್ಯವಿದುಷಿ ಪ್ರವಿತಾ ಅಶೋಕ ಅವರ ನಿರ್ದೇಶನದಲ್ಲಿ ನೃತ್ಯವಸಂತ ನಾಟ್ಯಾಲಯದ ಕಲಾವಿದೆಯರಿಂದ ನೃತ್ಯ ಸಿಂಚನ ಕಾರ್ಯಕ್ರಮ ನಡೆಯಲಿದೆ…

Read More