ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸ್ವಚ್ಛತೆಯಲ್ಲಿ ಉಡುಪಿಯು ರಾಷ್ಟ್ರಮಟ್ಟದಲ್ಲಿ ಗುರುತಿಸಲು ಕಾರಣ ಜಿಲ್ಲೆಯ ಪೌರಕಾರ್ಮಿಕರು. ಅವರುಗಳು ತಮ್ಮ ಕರ್ತವ್ಯದ ಜವಾಬ್ದಾರಿಯನ್ನು ಅರಿತು ನಗರದ ಸ್ವಚ್ಛತೆಗೆ ಅಮೂಲ್ಯವಾದ ಕೊಡುಗೆ ನೀಡುತ್ತಿದ್ದಾರೆ ಎಂದು ಶಾಸಕ ಯಶ್‌ಪಾಲ್ ಎ ಸುವರ್ಣ ಹೇಳಿದರು. ಅವರು ಅಂದು ನಗರಸಭೆ ವತಿಯಿಂದ ನಗರದ ಅಜ್ಜರಕಾಡುವಿನ ಪುರಭವನದಲ್ಲಿ ನಡೆದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪೌರಕಾರ್ಮಿಕರು ಉಡುಪಿಯ ಆಸ್ತಿ. ತಮ್ಮ ವೃತ್ತಿಗೆ ನ್ಯಾಯ ಕೊಡಿಸುವ ಮೂಲಕ ಜಿಲ್ಲೆಯ ಗೌರವವನ್ನು ಎತ್ತಿ ಹಿಡಿಯುವ ಕೆಲಸ ಮಾಡಿದ್ದಾರೆ. ಉಡುಪಿ ನಗರಸಭೆಯು ಇತರೆ ಸ್ಥಳೀಯಾಡಳಿತ ಸಂಸ್ಥೆಗಳಿಗೆ ಮಾದರಿಯಾಗಿ ಕರ್ತವ್ಯನಿರ್ವಹಿಸುತ್ತಿದ್ದು, ಪೌರಕಾರ್ಮಿಕರ ಪ್ರಾಮಾಣಿಕ ಸೇವೆಯಿಂದಾಗಿ ನಗರದ ಸ್ವಚ್ಛತೆ ಕಾಪಾಡಿಕೊಳ್ಳಲು ಸಾಧ್ಯವಾಯಿತು ಎಂದರು. ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣೆ, ಮನೆ ನಿರ್ಮಾಣ, ಮಕ್ಕಳ ವಿಧ್ಯಾಬ್ಯಾಸ ಸೇರಿದಂತೆ ಮತ್ತಿತರ ಸವಲತ್ತುಗಳನ್ನು ತಲುಪಿಸಲು ಗರಿಷ್ಠ ಮಟ್ಟದಲ್ಲಿ ನಗರಸಭೆ ವತಿಯಿಂದ ಸಹಕಾರ ನೀಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿಯೂ ಸಹ ಹೆಚ್ಚಿನ ಸಹಕಾರ ನೀಡಲಾಗುವುದು ಎಂದರು. ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಮಾತನಾಡಿ, ನಗರದ ಸ್ವಚ್ಛತೆಗೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬುಡೋಕೋನ್ ಕರಾಟೆ ಮತ್ತು ಸ್ಪೋರ್ಟ್ಸ್ ಅಸೋಸಿಯೇಷನ್ ಕರ್ನಾಟಕ ಇವರ ವತಿಯಿಂದ ಶ್ರೀ ಕೃಷ್ಣ ಮಠ ಉಡುಪಿಯಲ್ಲಿ ನಡೆದ ಉಡುಪಿ ಮುಕ್ತ ಕರಾಟೆ ಚಾಂಪಿಯನ್ ಶಿಪ್ ರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿ 2024ರಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ವಿದ್ಯಾರ್ಥಿಗಳು ಟ್ರೋಪಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳು ಕ್ರಮವಾಗಿ ಅಶ್ವಿನ್ ಪೂಜಾರಿ (6ನೇ ತರಗತಿ) ಕುಮಿಟೆ ವಿಭಾಗದಲ್ಲಿ ಚಿನ್ನ ಮತ್ತು ಕಟಾ ವಿಭಾಗದಲ್ಲಿ ಕಂಚಿನ ಪದಕ , ಅನ್ವೇಷಣ್ (7ನೇ ತರಗತಿ) ಕುಮಿಟೆ ವಿಭಾಗದಲ್ಲಿ ಚಿನ್ನ ಮತ್ತು ಕಟಾ ವಿಭಾಗದಲ್ಲಿ ಬೆಳ್ಳಿ, ಹರ್ಷಿತಾ ಎ. ಖಾರ್ವಿ (3ನೇ ತರಗತಿ) ಕುಮಿಟೆ ವಿಭಾಗದಲ್ಲಿ ಚಿನ್ನ ಮತ್ತು ಕಟಾ ವಿಭಾಗದಲ್ಲಿ ಬೆಳ್ಳಿ , ರಿಷಿಕ್ (7ನೇ ತರಗತಿ) ಕಟಾ ವಿಭಾಗದಲ್ಲಿ ಚಿನ್ನ ಮತ್ತು ಕುಮಿಟೆ ವಿಭಾಗದಲ್ಲಿ ಬೆಳ್ಳಿ, ಆರ್ಯನ್ ವಿ. (7ನೇ ತರಗತಿ) ಕಟಾ ವಿಭಾಗದಲ್ಲಿ ಚಿನ್ನ ಮತ್ತು ಕುಮಿಟೆಯಲ್ಲಿ ಬೆಳ್ಳಿ, ರಜತ್ (7ನೇ ತರಗತಿ) ಕಟಾ ವಿಭಾಗದಲ್ಲಿ ಚಿನ್ನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಕುಂದಾಪುರದ ಪ್ರತಿಷ್ಟಿತ ವಿದ್ಯಾಸಂಸ್ಥೆಗಳಲ್ಲಿ ಮಂಚೂಣಿಯಲ್ಲಿರುವ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ಪ್ರಾಥಮಿಕ (6&7ನೇ) ತರಗತಿ ಮಕ್ಕಳಿಗೆ ಅರ್ಧದಿನದ ವೇದಿಕ್ ಮಾಥ್ಸ್ ಸ್ಪರ್ಧೆ ಆಯೋಜಿಸಲಾಯಿತು. ಆಡಳಿತಾಧಿಕಾರಿ ರೆನಿಟಾ ಲೋಬೊ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅತಿಕಡಿಮೆ ಸಮಯದಲ್ಲಿ ವಿವಿಧ ರೀತಿಯ ಗಣಿತದ ಲೆಕ್ಕಗಳನ್ನು ಮಾಡುವ ಮೂಲಕ ಸುಮಾರು 100 ವಿದ್ಯಾರ್ಥಿಗಳು ತಮ್ಮ ಪಾಲಕರ ಉಪಸ್ಥಿತಿಯಲ್ಲಿ ತಮ್ಮತಮ್ಮ ಚಾಣಾಕ್ಷತೆಯನ್ನು ಪ್ರದರ್ಶಿಸಿ ಎಲ್ಲರಿಂದ ಪ್ರಶಂಸೆಗೆ ಒಳಗಾದರೂ ಅತ್ಯಂತ ಚುರುಕುತನದಿಂದ ಆರಂಭಗೊಂಡ ಈ ಸ್ಪರ್ಧೆಯು ಪಾಲಕರ ಪೋಷಕರಿಂದ ಮೆಚ್ಚುಗೆ ಗಳಿಸಿತು. ಶಿಕ್ಷಣದಲ್ಲಿ ಸದಾ ನಾವಿನ್ಯತೆಯನ್ನು ಪರಿಚಯಿಸುತ್ತಿರುವ ಆಡಳಿತಮಂಡಳಿಯ ಉತ್ಸುಕತೆಯನ್ನು ಪೋಷಕರು ಕೊಂಡಾಡಿದರು . ತಮ್ಮ ಮಕ್ಕಳ ಗಣಿತದ ಕೌಶಲ್ಯವನ್ನು ಕಣ್ಣಾರೆ ಕಂಡ ಎಲ್ಲಾ ಪಾಲಕರು ಅತೀವ ಸಂತಸಪಟ್ಟು ಸಂಭ್ರವಿಸಿದರು ವೇದಿಕ್ ಮಾಥ್ಸ್ ತರಬೇತುದಾರರಾದ ಗೀತಾ (ಉಪನ್ಯಾಸಕರು ಮದರ್ ತೆರೇಸಾಸ್ ಪಿ ಯು ಕಾಲೇಜು, ವೇದಿಕ್ ಮಾಥ್ಸ್ ಮತ್ತು ಅಬಾಕಸ್ ತರಬೇತುದಾರರು ಹಾಗೂ ರಾಜ್ಯ ಮತ್ತು ರಾಷ್ಟ್ರಮಟ್ಟದ ಪ್ರಶಸ್ತಿ ವಿಜೇತರು)…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಜಿ.ಎಸ್.ಬಿ ಸಮಾಜಬಾಂಧವರಿಗೆ ತಪ್ತ ಮುದ್ರಾಧಾರಣೆ ಕಾರ್ಯಕ್ರಮ ಮಂಗಳವಾರ ಜರಗಿತು. ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧೀಶ ಶ್ರೀಪಾದ ವಡೇರ ಸ್ವಾಮೀಜಿ ಅವರು ಜಿ.ಎಸ್.ಬಿ. ಸಮಾಜ ಬಾಂಧವರಿಗೆ ಮುದ್ರಧಾರಣೆ ನೀಡಿ ಆಶೀರ್ವದಿಸಿದರು. ದೇವಳದ ಆಡಳಿತ ಮಂಡಳಿ ಸದಸ್ಯರು, ಪುರೋಹಿತರು, ಅರ್ಚಕರು, ಊರಿನ ಹತ್ತು ಸಮಸ್ತರು, ಸಮಾಜಬಾಂಧವರು ಹಾಗೂ ಭಾಜಕರು ಮದ್ರಾಧಾರಣೆ ಸ್ವೀಕರಿಸಿ ಕೃತಾತ್ರರಾದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ 22 ವರ್ಷಗಳ ಬಳಿಕ ಡಿ. 2ರಿಂದ 5ರವರೆಗೆ ಉಡುಪಿ ಜಿಲ್ಲಾಡಳಿತದ ಸಹಯೋಗದಲ್ಲಿ ‘ಬೃಹತ್ ವಿಜ್ಞಾನ, ವಾಣಿಜ್ಯ, ಕಲೆ, ಪರಿಸರ ಸಾಮಾನ್ಯ ಜ್ಞಾನ ಮತ್ತು ಶೈಕ್ಷಣಿಕ ವಸ್ತು ಪ್ರದರ್ಶನ-2024’ ನಡೆಯಲಿದೆ ಎಂದು ಕಾಲೇಜಿನ ವಿಶ್ವಸ್ತ್ರ ಮಂಡಳಿ ಹಿರಿಯ ಸದಸ್ಯ ಶಾಂತಾರಾಮ ಪ್ರಭು ತಿಳಿಸಿದ್ದಾರೆ. ಅವರು ಸೋಮವಾರ ಕಾಲೇಜಿನಲ್ಲಿ ಸುದ್ದಿಗೋಷ್ಟಿ ನಡೆಸಿ, ಡಿ.2ರಂದು ಬೆಳಗ್ಗೆ 10 ಗಂಟೆಗೆ ಪುರಮೆರವಣಿಗೆಯನ್ನು ತಹಶೀಲ್ದಾರ್ ಶೋಭಾಲಕ್ಷ್ಮಿ, ಡಿ.3ರಂದು ಶೈಕ್ಷಣಿಕ ಮಾಹಿತಿ ವಸ್ತು ಪ್ರದರ್ಶನವನ್ನು ಶಾಸಕ ಕಿರಣ್ ಕುಮಾರ್ ಕೊಡ್ಗಿ, ತಾಲೂಕು ಆರೋಗ್ಯ ಇಲಾಖೆಯ ಸಹಕಾರದೊಂದಿಗೆ ಬೃಹತ್ ಆರೋಗ್ಯ ಮೇಳವನ್ನು ಶಾಸಕ ಗುರುರಾಜ ಗಂಟಿಹೊಳೆ ಸರಕಾರಿ ಇಲಾಖೆಗಳ ಬೃಹತ್ ವಸ್ತು ಪ್ರದರ್ಶನವನ್ನು ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಉದ್ಘಾಟಿಸಲಿದ್ದು, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಡಾ| ಕೆ. ಅರುಣ್, ಪ.ಪೂ. ಉಪನಿರ್ದೇಶಕ ಮಾರುತಿ, ಶಿಕ್ಷಣ ಇಲಾಖೆ ಉಪನಿರ್ದೇಶಕ ಗಣಪತಿ ಕೆ. ಆಗಮಿಸಲಿದ್ದಾರೆ ಎಂದರು. ಕಾಲೇಜಿನ ಟ್ರಸ್ಟಿ ಯು.ಎಸ್.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೇಕೋಡು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ, ದ.ಕ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ನಿರ್ದೇಶಕ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರು ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ನೀಡುವ ರಾಜ್ಯ ಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಹೈನುಗಾರಿಕೆಯಲ್ಲಿ ತೊಡಗಿಕೊಂಡಿರುವ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರು 2023-24ನೇ ಸಾಲಿನಲ್ಲಿ ಒಟ್ಟು 1.06 ಲಕ್ಷ ಲೀಟರ್ ಹಾಲು ಪೂರೈಕೆ ಮಾಡಿದ್ದಾರೆ. ಪ್ರತಿವರ್ಷ ಹಾಲು ಪೂರೈಕೆಯ ಪ್ರಮಾಣವನ್ನೂ ಹೆಚ್ಚಿಸಿದ್ದಾರೆ. ಮೇಕೋಡು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ 2022ರಲ್ಲಿ ನೂತನ ಕಟ್ಟಡ, ಸಾಂದ್ರಶಿತಲೀಕರಣ ಘಟಕವನ್ನು ಆರಂಭಿಸುವಲ್ಲಿ ಶ್ರಮಿಸಿದ್ದಾರೆ. ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿರುವ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರು ಇತ್ತೀಚಿಗಷ್ಟೇ ರಾಜ್ಯ ಮಟ್ಟದ ಸಹಕಾರ ರತ್ನ ಪ್ರಶಸ್ತಿಗೆ ಭಾಜನರಾಗಿದ್ದರು. ಇದನ್ನೂ ಓದಿ ► ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರಿಗೆ ಸಹಕಾರಿ ರತ್ನ ಪ್ರಶಸ್ತಿ – https://kundapraa.com/?p=79132 . ಕರ್ನಾಟಕ ರಾಜ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಕಾರು ಬೈಕ್‌ಗೆ ಢಿಕ್ಕಿಯಾಗಿ ಬೈಕ್ ಸವಾರ ಶಿರೂರಿನ ಶೋಯೆಬ್ ಹಾಗೂ ಬೈಕ್ ಢಿಕ್ಕಿಯಾಗಿ ಪಾದಚಾರಿ ಥಾಮಸ್ ಗಾಯಗೊಂಡ ಘಟನೆ ಸೋಮವಾರದಂದು ಬೆಳಗ್ಗೆ ಮರವಂತೆಯ ನಿರೋಣಿ ಶಾಲೆ ಬಳಿಯ ಹೆದ್ದಾರಿಯಲ್ಲಿ ಸಂಭವಿಸಿದೆ. ಗಾಯಗೊಂಡ ಶೋಯೆಬ್ ಅವರನ್ನು ಕಾರು ಚಾಲಕ ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಥಾಮಸ್ ಅವರ ಎಡ ಕಾಲಿಗೆ ಗಾಯವಾಗಿದೆ. ಈ ಬಗ್ಗೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಳಕ್ಕೆ ತಮಿಳು ಚಿತ್ರರಂಗದ ಖ್ಯಾತ ಸ್ಟಾರ್ ದಂಪತಿ ಸೂರ್ಯ ಹಾಗೂ ಜ್ಯೋತಿಕಾ ಭೇಟಿ ನೀಡಿ ದೇವರ ದರ್ಶನ ಪಡೆದರು. ಕಾಲಿವುಡ್‌ನಲ್ಲಿ ಸಾಕಷ್ಟು ಹೆಸರು ಮಾಡಿರೋ ಸೂರ್ಯ ಹಾಗೂ ಜ್ಯೋತಿಕಾ ಅವರು ದೇವಳಕ್ಕೆ ಭೇಟಿ ನೀಡಿ ಚಂಡಿಕಾಯಾಗದಲ್ಲಿ ಭಾಗಿಯಾಗಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ. ಸೆಲೆಬ್ರಿಟಿ ದಂಪತಿಯನ್ನು ನೋಡಲು ಅಭಿಮಾನಿಗಳು ಮುಗಿ ಬಿದ್ದಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರತಿಯೊಬ್ಬರ ದೈಹಿಕ ಸದೃಢತೆಗೆ ಕ್ರೀಡಾ ಚಟುವಟಿಕೆಗಳು ಪೂರಕವಾಗಿವೆ. ಸದಾ ಕೆಲಸದ ಒತ್ತಡವನ್ನು ಅನುಭವಿಸುವ ಪೊಲೀಸರ ದೈಹಿಕ ಸಾಮರ್ಥ್ಯ ಹಾಗೂ ಸಾಮಾಜಿಕ ಒಲವು ಹೆಚ್ಚಿಸುವ ನಿಟ್ಟಿನಲ್ಲಿ ಕ್ರೀಡಾಕೂಟವನ್ನು ಆಯೋಜಿಸಲಾಗಿದ್ದು, ಯಾವುದೇ ಒತ್ತಡವಿಲ್ಲದೇ ಪೂರ್ಣವಾಗಿ ಕ್ರೀಡೆಗಳಲ್ಲಿ ಭಾಗವಹಿಸಿ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಅಜ್ಜರಕಾಡುವಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಪೊಲೀಸರ ವಾರ್ಷಿಕ ಕ್ರೀಡಾಕೂಟಕ್ಕೆ ಬಲೂನು ಹಾರಿ ಬಿಡುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು. ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಪೊಲೀಸ್ ಇಲಾಖೆಯ ಸೇವೆ ಅಪಾರ. ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ದೈನಂದಿನ ಕರ್ತವ್ಯವನ್ನು ನಿಭಾಯಿಸಿಕೊಂಡು ಹೋಗುವುದರ ಜೊತೆಗೆ ಕ್ರೀಡಾ ಅಭಿರುಚಿ ಬೆಳೆಸಿಕೊಂಡಿರುವುದು ಉತ್ತಮ ವಿಚಾರ. ಕ್ರೀಡೆಗಳಲ್ಲಿ ಸೋಲು-ಗೆಲುವು ಸಹಜವಾಗಿದ್ದು, ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ಆರೋಗ್ಯವನ್ನು ಸದೃಢವಾಗಿರಿಸಿಕೊಳ್ಳಿ ಎಂದರು. ಕರಾವಳಿ ಕಾವಲು ಪಡೆಯ ಪೊಲೀಸ್ ಅಧೀಕ್ಷಕ ಮಿಥುನ್ ಹೆಚ್.ಎನ್ ಮಾತನಾಡಿ, ಪೊಲೀಸರು ಹಾಗೂ ಸಿಬ್ಬಂದಿಗಳು ಕ್ರೀಡೆಗಳಲ್ಲಿ ಸಕ್ರೀಯವಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಶ್ರುತಿಕಾ ಶೆಟ್ಟಿ ಕನ್ನಡ ಆಶುಭಾಷಣ ಸ್ಪರ್ಧೆಯಲ್ಲಿ ಪ್ರಥಮ, ಜಯಶ್ರೀ ಭಾವಗೀತೆ ಸ್ಪರ್ಧೆಯಲ್ಲಿ ಪ್ರಥಮ, ನಿಶಾಂತ್ ಕಿಣಿ ಭಕ್ತಿಗೀತೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ ಪ್ರಾಂಶುಪಾಲರು ಬೋಧಕ ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
