ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳಲ್ಲಿ ಗುರಿ, ತಾಳ್ಮೆ ಹಾಗೂ ನಿರಂತರ ಪರಿಶ್ರಮ ಇದ್ದಲ್ಲಿ ಮಾತ್ರ ಸರಿಯಾದ ಬದುಕು ರೂಪಿಸಿಕೊಳ್ಳಲು ಸಾಧ್ಯ ಎಂದು ಬೆಂಗಳೂರಿನ ಟೊಯೊಟೊ ಕಿರ್ಲೋಸ್ಕರ್ ಮೋಟಾರ್‌ನ ಉಪ ಪ್ರಧಾನ ವ್ಯವಸ್ಥಾಪಕ ಡಾ. ದೀಪಕ್ ಶೆಟ್ಟಿ ಬಾರ್ಕೂರು ನುಡಿದರು. ವಕ್ವಾಡಿಯ ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ ನಡೆದ ಗುರುಕುಲ ಸಮೂಹ ಶಿಕ್ಷಣ ಸಂಸ್ಥೆಗಳ 19ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮದ ಅಂಗವಾಗಿ ನಡೆದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಹಿರಿಯರು ಹಾಗೂ ತಮ್ಮೂರಿನ ಮೇಲೆ ಇರಿಸಿಕೊಳ್ಳುವ ಗೌರವ, ನಂಬಿಕೆ ಮತ್ತು ಅರಿವು ಭವಿಷ್ಯದ ವೃತ್ತಿ ಜೀವನವನ್ನು ರೂಪಿಸಿಕೊಳ್ಳುವಲ್ಲಿ ಸಹಕಾರಿಯಾಗುತ್ತದೆ. ಮಕ್ಕಳ ಜೀವನವನ್ನು ವ್ಯವಸ್ಥಿತವಾಗಿ ರೂಪಿಸುವ ಸಂಪೂರ್ಣ ಜವಾಬ್ದಾರಿ ಪೋಷಕರದ್ದಾಗಿರುವುದರಿಂದಾಗಿ ಅದನ್ನು ಅರ್ಥೈಸಿಕೊಂಡು ನಡೆಯಬೇಕು. ಗುರು ಎನ್ನುವ ಸ್ಥಾನವೇ ದೊಡ್ಡದು. ಸಮಾಜದಲ್ಲಿ ಮಕ್ಕಳನ್ನು ತಿದ್ದುವ ಮೂಲಕ ಒಂದು ಸ್ವಸ್ಥ ಸಮಾಜದ ನಿರ್ಮಾಣದಲ್ಲಿ ಗುರುಗಳ ಪಾತ್ರ ಹಿರಿದಾಗಿದೆ. ಮಕ್ಕಳಲ್ಲಿ ಅಡಗಿರುವ ಸೂಪ್ತ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ವೇದಿಕೆ ಕಲ್ಪಿಸಿ ಕೊಡುವುದೇ ಗುರುವಿನ ಜವಾಬ್ದಾರಿ ಎಂದು ಅಭಿಪ್ರಾಯ…
Author: ನ್ಯೂಸ್ ಬ್ಯೂರೋ
ಕುಂದಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗೋಪಾಡಿ ಪರಿಸರದಲ್ಲಿ ಮುಸುಕುಧಾರಿ ಕಳ್ಳನೊಬ್ಬ ಶೋರೂಮ್ ಒಂದರ ಬಾಗಿಲು ಒಡೆಯಲು ಯತ್ನಿಸಿದ ಘಟನೆ ಶನಿವಾರದಂದು ನಡೆದಿದೆ. ಮುಂಜಾನೆ 3 ಗಂಟೆಯ ಹೊತ್ತಿನಲ್ಲಿ ಮುಸುಕುದಾರಿ ವ್ಯಕ್ತಿಯೊಬ್ಬ ಶೋರೂಮ್ ಶೆಟರ್ ಒಡೆಯಲು ಪ್ರಯತ್ನಿಸುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಸ್ಥಳೀಯರೊಡನೆ ಕಳ್ಳನಿಗಾಗಿ ಹುಡುಕಾಡಿದ್ದರು.ಕಳ್ಳ ಅಲ್ಲಿಂದ ಪರಾರಿ ಆಗಿದ್ದಾನೆ ಎಂದು ತಿಳಿದುಬಂದಿದೆ. ಇತ್ತೀಚಿಗೆ ಈ ಪರಿಸರದಲ್ಲಿ ಮುಸುಕುಧಾರಿ ಕಳ್ಳರ ಸಂಚಾರದಿಂದ ಜನರಲ್ಲಿ ನಡುಕ ಹುಟ್ಟಿಸಿದೆ. ಕಳ್ಳ ಸ್ಥಳಿಯನಾಗಿರಬಹುದು ಆತ ಅಂತರ್ ರಾಜ್ಯ ಕಳ್ಳರ ಸಂಪರ್ಕದಲ್ಲಿರಬಹುದೆಂದು ಸ್ಥಳೀಯರು ಸಂಶಯ ವ್ಯಕ್ತಪಡಿಸಿದ್ದಾರೆ. ರಾತ್ರಿ ಹೊತ್ತು ವಕ್ವಾಡಿ ಮಾರ್ಗದ ರಸ್ತೆಯ ಅಕ್ಕ ಪಕ್ಕ ಮೂಡು ಗೋಪಾಡಿ, ಕುಂಭಾಸಿ, ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿರುವ ಕಾರಿನ ಬಗ್ಗೆಯೂ ಸಂಶಯವಿರುವುದರಿಂದ ಪೊಲೀಸ್ ಬಂದೋಬಸ್ತ್ ಹೆಚ್ಚಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನವೆಂಬರ್ 21 ರಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಅವರು 2024- 25 ನೇ ಸಾಲಿನಲ್ಲಿ ಪದವಿ ಪೂರ್ವ ಶಿಕ್ಷಣ ಹಂತದ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ನಡೆಸಿದ ಉಡುಪಿ ಜಿಲ್ಲಾ ಮಟ್ಟದ ಆಶುಭಾಷಣ ಸ್ಪರ್ಧೆಯಲ್ಲಿ ವಿಭಾ ಪ್ರಥಮ ಸ್ಥಾನ, ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಚೈತ್ರಾ ದ್ವಿತೀಯ ಸ್ಥಾನ, ಏಕಪಾತ್ರ ಅಭಿನಯದಲ್ಲಿ ಯುಕ್ತಾ ಹೊಳ್ಳ ದ್ವಿತೀಯ ಸ್ಥಾನ ಪಡೆದುಕೊಂಡು ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿಗೆ ಮುಖ್ಯ ಬೆಳೆಯಾದ ಭತ್ತವನ್ನು ಗ್ರಾಮ ಪಂಚಾಯತ್ ಮಟ್ಟದಲ್ಲಿ ಹಾಗೂ ಉದ್ದು ಮತ್ತು ನೆಲಗಡಲೆ ಬೆಳೆಗಳನ್ನು ಹೋಬಳಿ ಮಟ್ಟದಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಹಿಂಗಾರು ಮತ್ತು ಬೇಸಿಗೆ ಹಂಗಾಮು 2024-25 ಯೋಜನೆಯ ಬೆಳೆ ವಿಮೆ ಯೋಜನೆಯಡಿ ನೋಂದಣಿಗಾಗಿ ಅಧಿಸೂಚಿಸಲಾಗಿದೆ. ಹಿಂಗಾರು ಮತ್ತು ಬೇಸಿಗೆ ಹಂಗಾಮಿಗೆ ಅಧಿಸೂಚಿತ ಬೆಳೆಗಳ ವಿವರ ಹೀಗಿದೆ:ಭತ್ತದ ಬೆಳೆಗೆ ಉಡುಪಿ ಹಾಗೂ ಕಾಪು ತಾಲೂಕಿನ ತಲಾ 2 ಗ್ರಾ.ಪಂಚಾಯತ್, ಬ್ರಹ್ಮಾವರ ತಾಲೂಕಿನ 7 ಗ್ರಾ.ಪಂಚಾಯತ್, ಕುಂದಾಪುರ ತಾಲೂಕಿನ 13 ಗ್ರಾ.ಪಂಚಾಯತ್, ಬೈಂದೂರು ತಾಲೂಕಿನ 1 ಗ್ರಾ.ಪಂ, ಕಾರ್ಕಳ ತಾಲೂಕಿನ 19 ಗ್ರಾ.ಪಂಚಾಯತ್ ಹಾಗೂ ಹೆಬ್ರಿ ತಾಲೂಕಿನ 3 ಗ್ರಾ.ಪಂಚಾಯತ್ ಸೇರಿದಂತೆ ಒಟ್ಟು 47 ಗ್ರಾಮ ಪಂಚಾಯತ್‌ಗಳನ್ನು ಬೆಳೆ ವಿಮೆ ಯೋಜನೆಯಡಿ ನೋಂದಣಿಗಾಗಿ ಅಧಿಸೂಚಿಸಲಾಗಿದ್ದು, ವಿಮಾ ಮೊತ್ತ ಪ್ರತೀ ಹೆಕ್ಟೇರ್‌ಗೆ 93,250 ರೂ.ಗೆ, ವಿಮಾ ಕಂತಿನ ದರ ಪ್ರತೀ ಹೆ.ಗೆ 1,398.75 ರೂ.ಗಳಾಗಿದ್ದು, ನೋಂದಣಿಗೆ ಡಿಸೆಂಬರ್ 31…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ ಇವರು ನಡೆಸುವ ಸಿಎಸ್‌ಇಇಟಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಜನತಾ ಪದವಿಪೂರ್ವ ಕಾಲೇಜಿನ 9 ವಿದ್ಯಾರ್ಥಿಗಳು ಅದ್ವಿತೀಯ ಸಾಧನೆ ಮಾಡಿರುತ್ತಾರೆ.ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಪರವಾಗಿ ಅಭಿನಂದಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರು ಮಾತನಾಡಿ, ‘ವಿಜ್ಞಾನ ವಿಭಾಗದಂತೆ ವಾಣಿಜ್ಯ ವಿಭಾಗವು ಬಹಳಷ್ಟು ಪ್ರಮುಖವಾದದ್ದು,ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಸಿಎ/ಸಿಎಸ್ ಸ್ಪರ್ಧಾತ್ಮಕ ಪರೀಕ್ಷೆಗೆ ಅನುಭವಿಶಾಲಿ ಉಪನ್ಯಾಸಕರಿಂದ ತರಬೇತಿ ನೀಡಲಾಗುತ್ತಿದ್ದು ಅವೆಲ್ಲದರ ಫಲಶ್ರುತಿಯೇ ಈ ಫಲಿತಾಂಶ ಎಂದು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ ಶುಭ ಹಾರೈಸಿದರು’. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ಉತ್ತಮ ವಾಗ್ಮಿಗಳಾಗಿರುವ ದಾಮೋದರ ಶರ್ಮಾ ಅವರು ಮಾತನಾಡಿ,’ಕಲಿತ ಸಂಸ್ಥೆಯ ಮೇಲೆ ನಿಮಗಿರುವ ಅಭಿಮಾನ, ಗುರುಗಳ ಆಶೀರ್ವಾದ ಸದಾ ನಿಮ್ಮೊಂದಿಗಿದ್ದಾಗ ನೀವು ಅಂದುಕೊಂಡಿದ್ದು ಈಡೇರಲು ಸಾಧ್ಯವಿದೆ.ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಿ,ಉತ್ತಮ ವ್ಯಕ್ತಿತ್ವ ನಿಮ್ಮದಾಗಲಿ,ಜೀವನದಲ್ಲಿ ಕಷ್ಟ ಪಟ್ಟಷ್ಟು ಸುಖ ನಿಮ್ಮದಾಗುತ್ತದೆ ಎಂದು ಶುಭ ಹಾರೈಸಿದರು’.ಕಾರ್ಯಕ್ರಮದಲ್ಲಿ ಕಾಲೇಜಿನ ಉಪ-ಪ್ರಾಂಶುಪಾಲರಾದ ರಮೇಶ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ವಿಕಲಚೇತನರ ದಿನಾಚರಣೆಯನ್ನು ಜಿಲ್ಲಾಮಟ್ಟದಲ್ಲಿ ಡಿಸೆಂಬರ್ 3 ರಂದು ಆಚರಿಸಲಾಗುತ್ತಿದ್ದು, ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯವಿರುವ ವ್ಯವಸ್ಥಿತ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಕೆಸ್ವಾನ್ ವೀಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ನಡೆದ ವಿಕಲಚೇತನರ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾಮಟ್ಟದಲ್ಲಿ ಡಿಸೆಂಬರ್ 3 ರಂದು ಬೆಳಗ್ಗೆ 10 ಗಂಟೆಗೆ ನಗರದ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಸಮಗ್ರ ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ವಿಕಲಚೇತನ ವ್ಯಕ್ತಿಗಳಲ್ಲಿ ನಾಯಕತ್ವಕ್ಕೆ ಉತ್ತೇಜನ ಎಂಬ ಘೋಷವಾಕ್ಯದೊಂದಿಗೆ ಪ್ರಸಕ್ತ ಸಾಲಿನ ವಿಶ್ವ ವಿಕಲಚೇತನರ ದಿನಾಚರಣೆಯನ್ನು ಆಚರಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ವಿಶೇಷ ಮಕ್ಕಳನ್ನು ಹಾಗೂ ವ್ಯಕ್ತಿಗಳನ್ನು ಗೌರವಿಸಿ, ಸನ್ಮಾನಿಸಲಾಗುವುದು ಹಾಗೂ ವಿಕಲಚೇತನರಿಗಾಗಿ ಆಯೋಜಿಸಲಾದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಗುವುದು ಎಂದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ 2 ದಿನಗಳ ಯೋಗ ಶಿಬಿರವು ಇತ್ತೀಚಿಗೆ ನಡೆಯಿತು. ಇಶಾ ಫೌಂಡೇಶನ್ ಸದ್ಗುರು ಗುರುಕುಲಂನ ಶಾಸ್ತ್ರೀಯ ಹಟ ಯೋಗದ ಶಿಕ್ಷಕರಾದ ಪ್ರವೀಣ್ ಕುಮಾರ್ ಯೋಗ ನಮಸ್ಕಾರ, ನಾದಯೋಗ, ವೃತ್ತಾಕಾರ ಕೈ ಚಲನೆ, ಸ್ಕ್ವಾಟಿಂಗ್, ಓಂಕಾರ ಪಠಣ ಇತ್ಯಾದಿಗಳ ಕುರಿತಾಗಿ ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕೆಗಳ ಮೂಲಕ ತಿಳಿಸಿಕೊಟ್ಟರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ, ಅವರು ನಿತ್ಯದ ಯೋಗಾಭ್ಯಾಸದಿಂದ ದೇಹ ಮತ್ತು ಮನಸ್ಸುಗಳು ಪ್ರಶಾಂತಗೊಳ್ಳುತ್ತವೆ. ಶಸ್ತ್ರಚಿಕಿತ್ಸೆಗಳಿಗೆ ಒಳಗಾಗುವ ಬದಲು ಸರಳ ಆಸನಗಳನ್ನು ಅಭ್ಯಸಿಸುವ ಮೂಲಕ ಆರೋಗ್ಯಪೂರ್ಣ ಜೀವನವನ್ನು ಹೊಂದಬಹುದು. ಮೂಳೆ, ಕೀಲು, ಗಂಟು, ಬಾಹುಗಳಲ್ಲಿನ ನೋವುಗಳು ಯೋಗಭ್ಯಾಸದಿಂದಾಗಿ ನಿವಾರಣೆಗೊಳ್ಳುತ್ತವೆ. ದೇಹದ ರಕ್ತಸಂಚಾರ ಸುಗಮಗೊಂಡು ದೇಹವು ಚೈತನ್ಯವನ್ನು ಪಡೆದುಕೊಳ್ಳುತ್ತದೆ. ಹಾಗಾಗಿ ಯೋಗಾಭ್ಯಾಸವನ್ನು ನಮ್ಮ ನಿತ್ಯಜೀವನದ ಮಂತ್ರವನ್ನಾಗಿಸಿಕೊಳ್ಳಬೇಕು ಎಂದರು. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿ ಹಾಗೂ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಪ್ರಾಂಶುಪಾಲರಾದ ಶರಣ ಕುಮಾರ ವಿದ್ಯಾರ್ಥಿಗಳಿಗೆ ನಮ್ಮ ಸಂಸ್ಥೆಯು ವಿದ್ಯಾರ್ಥಿಗಳಿಗೆ ಉತ್ತಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತೆಕ್ಕೆಟ್ಟೆಯ ವಿಶ್ವವಿನಾಯಕ ನ್ಯಾಷನಲ್ ಇಂಗ್ಲೀಷ್ ಮೀಡಿಯಮ್ ಸ್ಕೂಲ್‌ನ 18 ನೇ ವಾರ್ಷಿಕ ಕ್ರೀಡಾಕೂಟ ಇತ್ತೀಚಿಗೆ ಜರುಗಿತು. ನಾವುಂದ ಸರ್ಕಾರಿ ಪದವಿ ಪೂರ್ವ ಕಾಲೇಜು ಇದರ ದೈಹಿಕ ಶಿಕ್ಷಕರಾದ ಜೀವನ್ ಕುಮಾರ್ ಶೆಟ್ಟಿ ಕ್ರೀಡೋತ್ಸವವನ್ನು ಉದ್ಗಾಟಿಸಿ ಮಾತನಾಡಿ ಕ್ರೀಡೆ ಶಾರೀರಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗುವುದರೊಂದಿಗೆ ಉತ್ತಮ ಸಾಧನೆ ಮಾಡಿದರೆ ಬದುಕನ್ನು ಕಟ್ಟಿಕೊಳ್ಳಬಹುದು. ಪ್ರತಿ ಕ್ರೀಡೆಗಳನ್ನು ವೈಜ್ಞಾನಿಕ ಸೂತ್ರಗಳೊಂದಿಗೆ ಅಭ್ಯಾಸ ಮಾಡಿದರೆ ಗೆಲುವು ನಿಶ್ಚಿತ ಎಂದು ಹೇಳಿದರು. ಸಮಾರೋಪ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಬೈಂದೂರು ವಲಯದ ರೇಂಜ್ ಪೋರೆಸ್ಟ್ ಆಫಿಸರ್ ಸಂದೇಶ್ ಕುಮಾರ್ ಅವರು ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವನೆ ಇದ್ದು ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಬೇಕೆಂದು ತಿಳಿಸಿದರು. ಶರೀರವನ್ನು ಸಧೃಢಗೊಳಿಸಲು ಶಾರೀರಿಕ ವ್ಯಾಯಾಮ ಬಹು ಮುಖ್ಯ ಎಂದು ತಿಳಿಸಿದರು. ಕ್ರೀಡೆಯಲ್ಲಿ ಕಲೆ ಮತ್ತು ಸಂಸ್ಕ್ರತಿಯನ್ನು ಉಳಿಸಿ ಬೆಳೆಸುವ ಅಂಶಗಳು ಒಳಗೊಂಡಿರುವುದು ಉತ್ತಮ ಬೆಳವಣಿಗೆ ಎಂದು ತಿಳಿಸಿದರು. ಶಾಲಾ ಅಕಾಡೆಮಿಕ್ ಡೈರೆಕ್ಟರ್ ದಿವಾಕರ ಶೆಟ್ಟಿ ಹೆಚ್.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕ್ಯಾಸನೂರು ಅರಣ್ಯ ರೋಗವು ಅಥವಾ ಮಂಗನ ಜ್ವರ ಕಾಯಿಲೆಯು ಸಾಮಾನ್ಯವಾಗಿ ನವೆಂಬರ್‌ನಿಂದ ಜೂನ್‌ವರೆಗೆ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆ, ಇವುಗಳ ನಿಯಂತ್ರಣಕ್ಕೆ ಇಲಾಖೆಗಳ ಸಮಾನ್ವಯದೊಂದಿಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೆ.ಎಫ್.ಡಿ ಹಾಗೂ ಇತರ ಪ್ರಾಣಿ ಜನ್ಯ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚಿಸಲು ಆಯೋಜಿಸಲಾದ ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾಮಾನ್ಯವಾಗಿ ಪಶ್ಚಿಮ ಘಟ್ಟ ಪ್ರದೇಶಗಳು ಹಾಗೂ ಮಲೆನಾಡು ಭಾಗದಲ್ಲಿ ಕ್ಯಾಸನೂರು ಅರಣ್ಯ ರೋಗವು ಹಲವು ವರ್ಷಗಳಿಂದ ಕಂಡು ಬರುತ್ತಿದೆ. ನಮ್ಮ ಜಿಲ್ಲೆಯಲ್ಲಿಯೂ ಸಹ ಕಾಡಂಚಿನ ಪ್ರದೇಶಗಳಲ್ಲಿ ಈ ಹಿಂದೆ ಆಗಿರುವುದು ಕಂಡು ಬಂದಿದೆ. ಆದರೆ ಪ್ರಸ್ತುತ ಯಾವುದೇ ಪ್ರಕರಣಗಳು ಇರುವುದಿಲ್ಲ ಎಂದರು. ಉಷ್ಣಾಂಶ ಹೆಚ್ಚಿರುವ ನವೆಂಬರ್‌ನಿಂದ ಜೂನ್‌ವರೆಗೆ ಈ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಹಾಗೂ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಮೂಕಾಂಬಿಕಾ ಕ್ರೀಡಾಂಗಣದಲ್ಲಿ ಕಾಲೇಜು ಬಾಲಕ – ಬಾಲಕಿಯರ ರಾಜ್ಯಮಟ್ಟದ ಹೊನಲು ಬೆಳಕಿನ ನೆಟ್ ಬಾಲ್ ಪಂದ್ಯಾಟದ ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣಾ ಸಮಾರಂಭ ಶನಿವಾರ ನಡೆಯಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ದೇವಳದ ವ್ಯವಸ್ಥಾಪನ ಸಮಿತಿಯ ಸದಸ್ಯ ಮಾಹಾಲಿಂಗ ನಾಯ್ಕ್ ವಹಿಸಿದರು. ದೇವಳದ ಕಾರ್ಯನಿರ್ವಾಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ಬಹುಮಾನ ವಿತರಿಸಿದರು. ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನ ರಹಿತ ಪ್ರಾಂಶುಪಾಲರ ಸಂಘದ ಅಧ್ಯಕ್ಷ ದಿನೇಶ್ ಎಂ. ಕೊಡವೂರು, ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಚಂದ್ರಶೇಖರ್ ಶೆಟ್ಟಿ, ಉಡುಪಿ ಜಿಲ್ಲಾ ಉಪ ನಿರ್ದೇಶಕರಾದ ಮಾರುತಿ, ಉಡುಪಿ ಜಿಲ್ಲಾ ಕ್ರೀಡಾ ಸಂಯೋಜಕರಾದ ದಿನೇಶ್ ಕುಮಾರ್ ಎ., ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಗೌರವ ಅಧ್ಯಕ್ಷೆ ಜೀವನ್ ಕುಮಾರ್…
