Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಶಟಲ್ ಬ್ಯಾಡ್ಮಿಂಟನ್‌ನಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರಾರ್ಥನಾ ಪೈ ಅವರನ್ನು ಗಂಗೊಳ್ಳಿಯ 6 ಎಎಮ್ ಬ್ಯಾಡ್ಮಿಂಟನ್ ಫ್ರೆಂಡ್ಸ್ ಇವರ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಒಳಾಂಗಣದಲ್ಲಿ ಭಾನುವಾರ ನಡೆದ ಸನ್ಮಾನ ಕಾರ್ಯಕ್ರಮ ಮತ್ತು ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದ ಸಮಾರೋಪ ಸಮಾರಂಭದಲ್ಲಿ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ರಾಘವೇಂದ್ರ ಶೇರುಗಾರ್ ಅವರು ಪ್ರಾರ್ಥನಾ ಪೈ ಅವರನ್ನು ಸನ್ಮಾನಿಸಿ ಗೌರವಿಸಿದರು. 6 ಎಎಮ್ ಬ್ಯಾಡ್ಮಿಂಟನ್ ಫ್ರೆಂಡ್ಸ್‌ನ ಮನೋಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತ ಬಿ. ರಾಘವೇಂದ್ರ ಪೈ, ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಸೂರಜ್ ಸಾರಂಗ್, ಎಸ್.ವಿ. ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ದೀಕ್ಷಿತ್ ಮೇಸ್ತ, ಸಂಘದ ಸದಸ್ಯರಾದ ಲಿಪ್ಟನ್ ಒಲಿವೇರಾ, ರಾಮ ಪೂಜಾರಿ, ನಿಶಾಕಾಂತ್, ಚೇತನ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: “12ನೇ ಶತಮಾನದಲ್ಲಿ ಬಸವಣ್ಣ ಕಂಡ ಸಮಾಜ ಸುಧಾರಣೆ ಕನಸು ಕುಂದಾಪುರ ತಾಲೂಕಿನ ಜನ್ನಾಡಿ ಮತ್ತು ಮಣಿಗೇರಿಯಲ್ಲಿ ಸಮಾಜಸೇವಕ ಎಚ್.ಎಸ್.ಶೆಟ್ಟಿ ಮೂಲಕ ಸಾಕಾರಗೊಂಡಿದೆ. ಕೊರಗ ಸಮಾಜದ 14 ಕುಟುಂಬಗಳಿಗೆ ತಲಾ 14 ಲಕ್ಷ ರೂ. ವೆಚ್ಚದಲ್ಲಿ ಅವರು ನಿರ್ಮಿಸಿರುವ 14 ಮನೆಗಳು ಕೊರಗ ಸಮಾಜದ ಪರಿವರ್ತನೆಗೆ ದಿಕ್ಯೂಚಿಯಾಗಲಿದೆ,” ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್‌. ಮುನಿಯಪ್ಪ ನುಡಿದರು. ಹಾರ್ದಳ್ಳಿ-ಮಂಡಳ್ಳಿ ಗ್ರಾಮದ ಜನ್ನಾಡಿ ಮತ್ತು ಮಣಿಗೇರಿ ಕೊರಗರ ಕಾಲೊನಿಯಲ್ಲಿ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕೊರಗ ಕುಟುಂಬಗಳಿಗೆ ನಿರ್ಮಿಸಿ ಕೊಟ್ಟಿರುವ ಮನೆಗಳ ಹಸ್ತಾಂತರ ಸಮಾರಂಭವನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದರು. “ಉಡುಪಿ ಪೇಜಾವರ ಮಠದ ಯತಿಗಳಮಾರ್ಗದರ್ಶನದಲ್ಲಿ ಮನೆ ನಿರ್ಮಾಣಗೊಂಡಿರುವುದು ಸಂತಸ ನೀಡಿದೆ. ಮಠದ ಹಿರಿಯ ಯತಿ ಶ್ರೀ ವಿಶ್ವೇಶತೀರ್ಥ ಶ್ರೀಪಾದರು 18 ವರ್ಷ ಹಿಂದೆ ಚನ್ನಪಟ್ಟಣದಲ್ಲಿ ದಲಿತ ಕೇರಿಯಲ್ಲಿ ಸಹಭೋಜನಕ್ಕೆ ಚಾಲನೆ ನೀಡಿ ಕ್ರಾಂತಿ ಮಾಡಿದ್ದರು. ಅವರ ಹೆಜ್ಜೆಯಲ್ಲೇ ಈಗಿನ ಯತಿಗಳು ಸಾಗುತ್ತಿದ್ದಾರೆ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ರಾಷ್ಟ್ರೀಯ ಸೇವಾ ಯೋಜನೆ ಘಟಕ ಸರಕಾರಿ ಪದವಿ ಪೂವ೯ ಕಾಲೇಜು ಬೈಂದೂರು, ಹಸ್ತ ಚಿತ್ರ ಫೌಂಡೇಶನ್ ವಕ್ವಾಡಿ, ಜನಸೇವಾ ಟ್ರಸ್ಟ್ ಮೂಡುಗಿಳಿಯಾರು, ಉಸಿರು ಕೋಟ, ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ ಬೈಂದೂರು ತಾಲೂಕು ಘಟಕ, ಸಮೃದ್ಥ ಜನಸೇವಾ ಚಾರಿಟೇಬಲ್ ಟ್ರಸ್ಟ್ ಬೈಂದೂರು ತಂಡದೊಂದಿಗೆ ಸ್ವರಾಜ್ಯ 75 ತಂಡದ 33ನೇ ಸ್ವಾತಂತ್ರ್ಯ ಹೋರಾಟಗಾರರ ಮನೆ ನಾಮಫಲಕ ಅನಾವರಣ ಕಾಯ೯ಕ್ರಮವು ನಡೆಯಿತು. ಪತ್ರಕರ್ತ ಅರುಣ ಶಿರೂರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗಣ್ಯರು ಪುಷ್ಪಾರ್ಚನೆ ಗೈದರು. ವಾಗ್ಮಿ ಆದಶ೯ ಕೆಲ ನಾಮಫಲಕ ಅನಾವರಣ ಮಾಡಿದರು. ಭಾರತ ಸ್ವಾತಂತ್ರ್ಯ ಸಂಗ್ರಾಮಕ್ಕೆ ಕರಾವಳಿಯರ ಕೊಡುಗೆಯೊಂದಿಗೆ ಉಪ್ಪುಂದ ವೆಂಕಟ ಖಾವಿ೯   ಸ್ವಾತಂತ್ರ್ಯ ಹೋರಾಟದ ವಿಚಾರವನ್ನು ಕವಿತಾ ಆಚಾಯ೯ ಮುದೂರು  ಪ್ರಸ್ತುತಪಡಿಸಿದರು. ಕಾಯ೯ಕ್ರಮ ದ ಅಧ್ಯಕ್ಷತೆಯನ್ನು ಕುಂದ ಅಧ್ಯಯನ ಕೇಂದ್ರದ ಉಪ್ಪುಂದ ಚಂದ್ರಶೇಖರ ಹೊಳ್ಳರು ವಹಿಸಿದ್ದರು. ಗಣ್ಯರಾಗಿ ಪ್ರಸನ್ನ ಮಯ್ಯ, ಅಕ್ಷತಾ ಗಿರೀಶ್ ಐತಾಳ್, ಆಶಾಲತಾ ಮರವಂತೆ, ಗಣೇಶ್ ಖಾವಿ೯ ಕಿರಿಮಂಜೇಶ್ವರ ಮಾತನಾಡಿದರು. ಕಾಯ೯ಕ್ರಮ ಸಂಚಾಲಕರಾದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಂದು ಬ್ಯಾಂಕಿಂಗ್ ಕ್ಷೇತ್ರ ದೊಡ್ಡ ಮಟ್ಟದಲ್ಲಿ ವಿಸ್ತರಣೆಗೊಂಡರು, ಅವುಗಳಿಗೆ ಸವಾಲೆಸುವ ರೀತಿಯಲ್ಲಿ ಸಹಕಾರಿ ಕ್ಷೇತ್ರ ಬೆಳೆದಿದೆ, ಸಹಕಾರಿರಂಗ ಗ್ರಾಮೀಣ ಜನರ ಒಡನಾಡಿಯಾಗಿ ಕೆಲಸಮಾಡುತ್ತಿದ್ದು ಇದು ಸಾಲಶೂಲಕ್ಕೆ ಬದಲಾಗಿ ಉದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಹೊಸತನ ತಂದು ಅದರ ಲಾಭದಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಜನರಿಗೆ ಸ್ಪಂದಿಸುವ ಕೆಲಸಮಾಡಬೇಕು ಎಂದು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಭಾನುವಾರ ನಾಗೂರು ಲಲಿತಾಕೃಷ್ಣ ಸಭಾಭವನದಲ್ಲಿ ಕರ್ನಾಟಕ ಸಹಕಾರಿ ಮಹಾಮಂಡಲ ರಿ. ಬೆಂಗಳೂರು, ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ ಕಂಬದಕೊಣೆ ರೈತರ ಸೇವಾ ಸಹಕಾರಿ ಸಂಘ ಉಪ್ಪುಂದ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಹಾಗೂ ಪ್ರತಿಭಾ ಪುರಸ್ಕಾರ, ಸನ್ಮಾನ, ಗೌರವಧನ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಹಕಾರಿರಂಗವು ಸಹಕಾರ ಮತ್ತು ನಂಬಿಕೆಯ ಮೇಲೆ ನಡೆಯುತ್ತಿದ್ದು, ಬ್ಯಾಂಕಿಂಗ್ ಕ್ಷೇತ್ರಕ್ಕಿಂತಲೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಬಿಗಿ ಕಾನೂನಿನ ಹಿಡಿತಕ್ಕೆ ಒಳಪಟ್ಟಿದೆ. ಸಂಘಗಳು ಬಡವರಿಗೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಕುಂದಾಪುರ ತಾಲೂಕು ಶಾಖೆಯ ನೂತನ ಅಧ್ಯಕ್ಷರಾಗಿ ಡಾ.ನಾಗೇಶ್ ಆಯ್ಕೆಯಾಗಿದ್ದಾರೆ. ಸರಕಾರಿ ನೌಕರರ ಸಂಘದ ತಾಲೂಕು ಶಾಖೆಯ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ಶನಿವಾರ ಚುನಾವಣೆ ನಡೆದಿದ್ದು, ಆರೋಗ್ಯ ಇಲಾಖೆಯಿಂದ ಪ್ರತಿನಿಧಿಸಿ ಆಯ್ಕೆಯಾಗಿದ್ದ ಕುಂದಾಪುರ ಉಪವಿಭಾಗೀಯ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿ ಡಾ. ನಾಗೇಶ್ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಖಜಾಂಚಿಯಾಗಿ ಕಂದಾಯ ಇಲಾಖೆಯ ಕಾಂತರಾಜ, ರಾಜ್ಯ ಪರಿಷತ್ ಸದಸ್ಯರಾಗಿ ಅಬಕಾರಿ ಇಲಾಖೆಯ ರಂಗನಾಥ ಎ ಆಯ್ಕೆಯಾದರು. ► ಬೈಂದೂರು ತಾಲೂಕು ಘಟಕದ ಅಧ್ಯಕ್ಷರಾಗಿ ಶೇಖರ ಪೂಜಾರಿ – https://kundapraa.com/?p=79172

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ಸಂದರ್ಭದಲ್ಲಿ ಹೊಸದಾಗಿ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಹೆಸರು ತೆಗೆದು ಹಾಕುವ ಕಾರ್ಯಗಳನ್ನು ಯಾವುದೇ ಲೋಪದೋಷಗಳಿಲ್ಲದಂತೆ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿ ರೇಜು ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ಮತದಾರರ ಪಟ್ಟಿಯ ವೀಕ್ಷಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಈಗಾಗಲೇ ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯವು ಚುನಾವಣೆ ಆಯೋಗದ ಸೂಚನೆ ಮೇರೆಗೆ ಪ್ರಕ್ರಿಯೆಯನ್ನು ಕೈಗೊಳ್ಳಲಾಗುತ್ತಿದೆ. ಒಂದು ತಿಂಗಳ ಕಾಲ ಬೂತ್ ಮಟ್ಟದ ಮತಗಟ್ಟೆ ಅಧಿಕಾರಿಗಳು ಸಾರ್ವಜನಿಕರಿಂದ ಹೆಸರು ಸೇರ್ಪಡೆ, ತಿದ್ದುಪಡಿ, ಹೆಸರನ್ನು ತೆಗೆದು ಹಾಕುವಂತಹ ಡೇಟಾವನ್ನು ಪರಿಶೀಲಿಸಲು ಮನೆಗಳಿಗೆ ಭೇಟಿ ನೀಡುತ್ತಾರೆ. ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟರುಗಳನ್ನು ನಿಯೋಜಿಸಿ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಬೇಕು ಎಂದು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಮನವಿ ಮಾಡಿದರು. ಜಿಲ್ಲೆಯ 5 ವಿಧಾನಸಭಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಪ್ರತಿಷ್ಠಿತ ಮದರ್‌ ತೆರೆಸಾಸ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳು ಎರಡು ಪ್ರತ್ಯೇಕ ಸ್ಪರ್ಧಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಎರಡರಲ್ಲಿಯೂ ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಕುಂದಾಪುರದ ಡಾ. ಬಿ.ಬಿ ಹೆಗ್ಡೆ ಪ್ರಥಮ‌ ದರ್ಜೆ ಕಾಲೇಜಿನಲ್ಲಿ ನ.15ರಂದು ಆಯೋಜಿಸಿದ ಅಂತರ್ಕಾಲೇಜು ಸ್ಪರ್ಧೆ “ಉಗಮ-2024″ರ ಸಮಗ್ರ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಶಂಕರನಾರಾಯಣದ ಮದರ್ ತೆರೆಸಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಮೋಘವಾದ ಸಾಧನೆಗೈದಿದ್ದಾರೆ. ಇಂಗ್ಲಿಷ್ ಭಾಷಣದಲ್ಲಿ ಸಾನ್ವಿ ಶೆಟ್ಟಿ ಪ್ರಥಮ, ಪಾತ್ರ ಪ್ರವೀಣ (ಅಣಕು ಸಂದರ್ಶನ)ದಲ್ಲಿ ಸುಮಂತ್ ಶೆಟ್ಟಿ ದ್ವಿತೀಯ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ ಮ್ಯಾಡ್ ಆಡ್ ನಲ್ಲಿ ಪ್ರಥಮ ಕ್ಯಾಂಪಸ್ ರೀಲ್ಸ್ ನಲ್ಲಿ ತೃತೀಯ ಸ್ಥಾನವನ್ನು ಪಡೆಯುವುದರ ಮೂಲಕ ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಕುಂದಾಪುರದ ಮೂಡ್ಲಕಟ್ಟೆಯ ಐ ಎಮ್ ಜೆ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಅಂಡ್ ಕಾಮರ್ಸ್ ಇಲ್ಲಿ ನ.16ರಂದು ನಡೆದ “NAVONMESH” ಅಂತರ್ಕಾಲೇಜು ಸ್ಫರ್ಧೆಯಲ್ಲಿ, ಮದರ್ ತೆರೆಸಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ತಮ್ಮ ಅತ್ಯುತ್ತಮ ಪ್ರತಿಭಾಭಿವ್ಯಕ್ತಿಯ ಮೂಲಕ ಸ್ಪರ್ಧೆಯ ಸಮಗ್ರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ, ಕರ್ನಾಟಕ ಪ್ರೌಢ ಶಾಲಾ ಸಹಶಿಕ್ಷಕರ ಸಂಘ ಕುಂದಾಪುರ ತಾಲೂಕು ಘಟಕ ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಯಡಾಡಿ- ಮತ್ಯಾಡಿ ಇವರ ಜಂಟಿ ಪ್ರಾಯೋಜಕತ್ವದಲ್ಲಿ ಉಚಿತ ಎನ್. ಎಂ.ಎಂ.ಎಸ್.ತರಬೇತಿ ಕಾರ್ಯಾಗಾರ ವಿದ್ಯಾರಣ್ಯ ಶಾಲೆಯಲ್ಲಿ ನಡೆಯಿತು. ಈ ಕಾರ್ಯಾಗಾರವು ವಿದ್ಯಾರಣ್ಯ ಶಾಲೆಯ ಸಹಕಾರದೊಂದಿಗೆ ಆರು ವಾರಗಳು ನಡೆಯಲಿದ್ದು, ಸಂಪನ್ಮೂಲ ವ್ಯಕ್ತಿಗಳು ಮಕ್ಕಳಿಗೆ ತರಬೇತಿ ನೀಡಲಿದ್ದಾರೆ. ಕಾರ್ಯಕ್ರಮದ ಉದ್ಘಾಟಿಸಿದ ಎನ್.ಎಂ.ಎಂ.ಎಸ್. ಜಿಲ್ಲಾ ನೋಡೆಲ್ ಆಗಿರುವ ಚಂದ್ರ ನಾಯ್ಕ್ ಮಾತನಾಡುತ್ತ, “ಮಕ್ಕಳು ಈ ಕಾರ್ಯಾಗಾರದ ಸದುಪಯೋಗವನ್ನು ಪಡೆದುಕೊಂಡು ಹೆಚ್ಚು ಮಕ್ಕಳು ಆಯ್ಕೆಯಾಗಿ ತಾಲೂಕಿಗೆ ಕೀರ್ತಿ ತರಬೇಕು. ಪ್ರಸ್ತುತ ವರ್ಷ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಆರ್ಥಿಕವಾಗಿ ಬಡತನವನ್ನು ಹೊಂದಿರುವ ಪ್ರತಿಭಾನ್ವಿತ ಮಕ್ಕಳು ಬಡತನದ ಕಾರಣವಾಗಿ ಶಿಕ್ಷಣವನ್ನು ಅರ್ಧಕ್ಕೆ ನಿಲ್ಲಿಸದೆ ಮುಂದುವರಿಸಬೇಕು ಎನ್ನುವ ಉದ್ದೇಶದಿಂದ ಸರ್ಕಾರ ಈ ಎನ್. ಎಂ.ಎಂ.ಎಸ್.ಯೋಜನೆಯನ್ನು ಜಾರಿಗೆ ತಂದಿದ್ದು,ಇಂದು ಈ ಯೋಜನೆಯಿಂದ ಹಲವಾರು ಪ್ರತಿಭಾನ್ವಿತ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲಿನ 7ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸಸ್ ಕಾಲೇಜಿನ ವೈದ್ಯರಿಂದ ಕಾರ್ಯಾಗಾರ ನಡೆಯಿತು. ಹಲವು ಪ್ರಾತ್ಯಕ್ಷಿಕೆಗಳಿಂದ ಡಾI ಶ್ರೀನಿಧಿ, ಡಾI ಸ್ಫೂರ್ತಿ ಮತ್ತು ಡಾI ರಚನ ಅವರು ವಿದ್ಯಾರ್ಥಿಗಳಿಗೆ ಡಯಟ್, ವ್ಯಾಯಾಮ, ಮಾಲಿಶ್, ನಿಯಮಿತ ಆಹಾರ ಸೇವನೆ, ಪ್ರಕೃತಿ ಚಿಕಿತ್ಸೆ ಮತ್ತು ಯೋಗ, ಉಪವಾಸ, ಸ್ಮರಣೆ,ಸಮತೋಲಿತ ದೈಹಿಕ ಮತ್ತು ಮಾನಸಿಕ ಆರೋಗ್ಯ ಕ್ಷೇಮ ಇತ್ಯಾದಿಗಳ ಕುರಿತು ಮೂರು ಹಂತಗಳಲ್ಲಿ ವಿವರಣೆ ನೀಡಿ, ನಂತರ ವಿದ್ಯಾರ್ಥಿಗಳೊಂದಿಗೆ ಪ್ರಶ್ನೋತ್ತರದಲ್ಲಿ ಪಾಲ್ಗೊಂಡು ಅವರ ಸಂಶಯವನ್ನು ನಿವಾರಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ರವಿದಾಸ್ ಶೆಟ್ಟಿ ಪ್ರಸ್ತಾವಿಸಿ, ಶಿಕ್ಷಕಿ ದೀಪಾ ನಿರೂಪಿಸಿ, ಸ್ವಾಗತಿಸಿದರು. ಶಿಕ್ಷಕಿ ಶಾಂತಿ ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ದೌರ್ಜನ್ಯ ಕುರಿತು ಕೇವಲ ನೊಂದ ಮಹಿಳೆ ಮಾತ್ರವಲ್ಲ, ಅವರ ಪರವಾಗಿ ಯಾರು ಬೇಕಾದರೂ ದೂರು ನೀಡಬಹುದು. ಮಹಿಳೆ ಮೇಲೆ ಮಹಿಳೆಯೇ ದೌರ್ಜನ್ಯ ಎಸಗಿದರೂ ಅಪರಾಧ ಎಂದು ಹೊಳ್ಳ ಆ್ಯಂಡ್ ಹೊಳ್ಳ ಅಸೋಸಿಯೇಟ್ಸ್‌ನ ಮೇಘನಾ ಆರ್. ಬಲ್ಲಾಳ್ ಹೇಳಿದರು. ಆಳ್ವಾಸ್ (ಸ್ವಾಯತ್ತ) ಕಾಲೇಜು ಆಂತರಿಕ ಗುಣಮಟ್ಟ  ಮೌಲ್ಯಮಾಪನ ಘಟಕ (ಐಕ್ಯೂಎಸಿ), ಲೈಂಗಿಕ ದೌರ್ಜನ್ಯ ತಡೆ ಘಟಕ, ಸಮಾಜಕಾರ್ಯ ವಿಭಾಗವು ಬೋಧನಾಂಗ ಅಭಿವೃದ್ಧಿ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡ ‘ಸಂಸ್ಥೆಯ ಆವರಣದಲ್ಲಿ ಜವಾಬ್ದಾರಿಯುತ ಸಂಸ್ಕೃತಿಯ ನಿರ್ಮಾಣ’ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.ಮೂಡುಬಿದಿರೆ ಮನೆತನದ ಅಬ್ಬಕ್ಕ ನಮ್ಮ ಹೆಮ್ಮೆ. ಆಕೆಯ ಸಾಧನೆ ಎಲ್ಲರಿಗೂ ಮಾದರಿಯಾಗಬೇಕು. ದೇಶದಲ್ಲಿ 1990 ಬಳಿಕ ಮಹಿಳೆಯರು ಕೆಲಸಕ್ಕೆ ಬರುವ ಸಂಖ್ಯೆ ಹೆಚ್ಚಾಯಿತು. ರಾಜಸ್ಥಾನದ ಭವಾರಿ ದೇವಿ ಅತ್ಯಾಚಾರಕ್ಕೆ ಒಳಗಾದ ಸಂದರ್ಭದಲ್ಲಿ  ವಿಶಾಖ ಸಂಸ್ಥೆಯ ಹೋರಾಟದ ಫಲವಾಗಿ ಕಾಯಿದೆ ರೂಪಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿತು. ಹೀಗಾಗಿ ‘ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ (ತಡೆ, ಮುಂಜಾಗ್ರತೆ…

Read More