ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಾವೀನ್ಯತೆ, ತಾರ್ಕಿಕ ಸಾಧನೆ, ಕ್ರೀಡೆ, ಕಲೆ, ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿರುವಂತಹ 5 ವರ್ಷದಿಂದ 18 ವರ್ಷದೊಳಗಿನ ಮಕ್ಕಳಿಂದ ಜಿಲ್ಲಾ ಮಟ್ಟದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸೂಕ್ತ ದಾಖಲೆಗಳೊಂದಿಗೆ ಪ್ರಸ್ತಾವನೆ ಸಲ್ಲಿಸಲು ಡಿಸೆಂಬರ್ 2 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ 204, ಮೊದಲನೇ ಮಹಡಿ, ರಜತಾದ್ರಿ, ಮಣಿಪಾಲ ದೂ.ಸಂಖ್ಯೆ: 0820-2574978 ಅನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ನವಜಾತ ಶಿಶುವಿನ ಅವಧಿಯು ಮಕ್ಕಳ ಜೀವನದಲ್ಲಿ ಅತ್ಯಂತ ನಿರ್ಣಾಯಕ ಅವಧಿಯಾಗಿದ್ದು, ಮಗುವಿಗೆ ಎದೆಹಾಲು, ಪೌಷ್ಠಿಕ ಆಹಾರ, ಒಂದು ವರ್ಷದ ಅವಧಿಯೊಳಗೆ ನೀಡುವುದರೊಂದಿಗೆ ಉತ್ತಮವಾಗಿ ಆರೈಕೆ ಮಾಡಿದ್ದಲ್ಲಿ ಮಗುವಿನ ಭವಿಷ್ಯದ ಬೆಳವಣಿಗೆ ಸಹ ಉತ್ತಮವಾಗಿರುತ್ತದೆ. ತಾಯಂದಿರು ಇದಕ್ಕೆ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಸರಕಾರಿ ಕೂಸಮ್ಮ ಶಂಭು ಶೆಟ್ಟಿ ಹಾಗೂ ಹಾಜಿ ಅಬ್ದುಲ್ಲಾ ಮೆಮೋರಿಯಲ್ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ ಉಡುಪಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ನ್ಯೂಮೋನಿಯಾವನ್ನು ಯಶಸ್ವಿಯಾಗಿ ಕೊನೆಗೊಳಿಸಲು ಸಾಮಾಜಿಕ ಜಾಗೃತಿ ಹಾಗೂ ಕ್ರಿಯಾ ಅಭಿಯಾನ ಮತ್ತು ರಾಷ್ಟ್ರೀಯ ನವಜಾತ ಶಿಶು ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಗು ಜನಿಸಿದ ಆರಂಭ ಹಂತದಲ್ಲಿ ಹೆಚ್ಚಿನ ಕಾಳಜಿ ಅತ್ಯವಶ್ಯಕವಾಗಿದ್ದು, ಹುಟ್ಟಿನಿಂದ ಮಕ್ಕಳಿಗೆ ನೀಡಬೇಕಾದ ಲಸಿಕೆಯ ಕುರಿತು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆ ಹಾಗೂ ಅನುಕೂಲತೆಗಳನ್ನು ಹೆಚ್ಚಿಸುವ ಮೂಲಕ ಸ್ವಾಗತಾರ್ಹ ವಾತಾವರಣವನ್ನು ಕಲ್ಪಿಸಿ, ಮತ್ತಷ್ಟು ಪ್ರವಾಸೋದ್ಯಮ ಚಟುವಟಿಕೆಗಳನ್ನು ಜಿಲ್ಲೆಯಲ್ಲಿ ಹೆಚ್ಚಿಸಬೇಕು ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಗೆ ಕಳೆದ ಸಾಲಿನಲ್ಲಿ 4 ಕೋಟಿ ರೂ. ಗೂ ಹೆಚ್ಚು ಪ್ರವಾಸಿಗರು ಬಂದು ಹೋಗಿದ್ದಾರೆ. ಈ ಸಂಖ್ಯೆ ದಿನೇದಿನೇ ಹೆಚ್ಚುತ್ತಿದೆ. ಹೊರಗಿನಿಂದ ಬರುವ ಪ್ರವಾಸಿಗರಿಗೆ ಅನುಕೂಲವಾಗುವ ಎಲ್ಲಾ ರೀತಿಯ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದರ ಜೊತೆಗೆ ಪ್ರವಾಸಿ ತಾಣಗಳ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಸೂಚನೆ ನೀಡಿದರು. ಕುಂದಾಪುರ ತಾಲೂಕಿನ ಪ್ರವಾಸಿ ತಾಣಗಳಲ್ಲಿ ಒಂದಾದ ಕೋಡಿ ಕಡಲ ತೀರದ ಸರ್ವೇ ನಂಬರ್ 310 ರಲ್ಲಿ 26.50 ಎಕರೆ ಜಾಗವನ್ನು ಪ್ರವಾಸೋದ್ಯಮ ಇಲಾಖೆಗೆ ಹಸ್ತಾಂತರಿಸಬೇಕು. ಈ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಎಂಪ್ರೆಸ್ ಕಾಲೇಜು ಆಡಿಟೋರಿಯಂ ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಟಿ. ಸಿ. ಎಸ್. ಗ್ರಾಮೀಣ ಮಾಹಿತಿ ತಂತ್ರಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಮದರ್ ತೆರೇಸಾಸ್ ಪದವಿ ಪೂರ್ವ ಕಾಲೇಜು ಶಂಕರನಾರಾಯಣ ಇಲ್ಲಿನ ದ್ವಿತೀಯ ಪಿ. ಯು. ಸಿ ವಿಜ್ಞಾನ ವಿಭಾಗದ ಸುಜನ್ ಶೆಟ್ಟಿ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿರುತ್ತಾನೆ. ವಿದ್ಯಾರ್ಥಿಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ & ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಶುಭ ಹಾರೈಸಿರುತ್ತಾರೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪಾರ್ಶ್ವವಾಯು ರೋಗದಿಂದ ಬಳಲುತ್ತಿದ್ದ ಬೈಂದೂರು ತಾಲೂಕು ಮುದೂರು ಗ್ರಾಮದ ಶಂಕರಮುಖ ಎಂಬಲ್ಲಿಯ ತೆಲಾಯಿಲ್ ಮನೆಯ ನಿವಾಸಿ ಜಯಕುಮಾರ್ (58) ಎಂಬ ವ್ಯಕ್ತಿಯು ನವೆಂಬರ್ 7 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. ಅವರು 5 ಅಡಿ 4 ಇಂಚು ಎತ್ತರ, ಬಿಳಿ ಮೈಬಣ್ಣ ಕೋಲು ಮುಖ, ಸಾಧಾರಣ ದೃಢಕಾಯ ಶರೀರ ಹೊಂದಿದ್ದು, ತಮಿಳು, ಹಿಂದಿ ಹಾಗೂ ಮಳೆಯಾಳಂ ಭಾಷೆ ಮಾತನಾಡುತ್ತಾರೆ. ಅವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-258233, 9480805460, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ:08254-251031, 9480805434 ಹಾಗೂ ಕಂಟ್ರೋಲ್ ರೂಂ : 100 ಅಥವಾ 0820- 2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೊಲ್ಲೂರು ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 17 ತಿಂಗಳಲ್ಲಿ ಕುಂದಾಪುರ ತಾಲೂಕಿನಲ್ಲಿ ಐದು ಗ್ಯಾರಂಟಿ ಯೋಜನೆಯ ಫಲಾನುಭವಿಗಳಿಗೆ ಒಟ್ಟು 248 ಕೋಟಿ ರೂಪಾಯಿ ಸರಕಾರದಿಂದ ಬಿಡುಗಡೆಯಾಗಿರುತ್ತದೆ ಎಂದು ಗ್ಯಾರಂಟಿ ಯೋಜನೆಗಳ ತಾಲೂಕು ಮಟ್ಟದ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿದರು. ಇಲ್ಲಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ ಅವರು ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗ್ಯಾರೆಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು. ಕುಂದಾಪುರ ತಾಲೂಕಿನಲ್ಲಿ 17 ತಿಂಗಳಲ್ಲಿ ಶಕ್ತಿ ಯೋಜನೆಯಡಿ 97,99 , 147 ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದು 33,81,95,617 ರೂಪಾಯಿ ರಿಯಾಯಿತಿ ಪಡೆದಿರುತ್ತಾರೆ. ಗೃಹ ಜ್ಯೋತಿ ಯೋಜನೆಯಡಿ 15 ತಿಂಗಳಲ್ಲಿ ತಿಂಗಳ ಸರಾಸರಿ 63,860 ಫಲಾನುಭವಿಗಳು 41,23,22,559 ರೂಪಾಯಿ ಲಾಭ ಪಡೆದಿರುತ್ತಾರೆ. ಗೃಹಲಕ್ಷ್ಮಿ ಯೋಜನೆಯಡಿ 50485 ಫಲಾನುಭವಿಗಳ ಖಾತೆಗೆ ನೇರವಾಗಿ 131,26,10,000 ರೂಪಾಯಿ ಜಮೆಯಾಗಿರುತ್ತದೆ. ಅನ್ನಭಾಗ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಆರ್ಯನ್ ಎ. ಖಾರ್ವಿ ಗೋಕಾಕ್‌ನಲ್ಲಿ ನಡೆದ ರಾಜ್ಯಮಟ್ಟದ 17ರ ವಯೋಮಾನದ ಕ್ರೀಕೆಟ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ಜಮ್ಮು ಕಾಶ್ಮಿರದಲ್ಲಿ ನಡೆಯುವ ರಾಷ್ಟ್ರಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಮಣೂರು ಗ್ರಾಮದ ನಿವಾಸಿ ಚಂದ್ರ (63) ಅವರು ಬುಧವಾದಂದು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ ಬಿಪಿ, ಶುಗರ್ ಹಾಗೂ ದಮ್ಮಿನ ಕಾಯಿಲೆಯಿಂದ ಬಳಲುತ್ತಿದ್ದು, ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಟಾರ್ಜ್ ಆಗಿ ಮನೆಗೆ ಬಂದಿದ್ದರು. ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರ ಪುತ್ರ ಗಣೇಶ್ ನೀಡಿದ ದೂರಿನಂತೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಂಗಳೂರಿನಿಂದ ಬಳ್ಳಾರಿಗೆ ಕಲ್ಲಿದ್ದಲು ತುಂಬಿಸಿಕೊಂಡು ಸಾಗುತ್ತಿದ್ದ ಲಾರಿಯ ಚಾಲಕ ಮಂಗಳೂರಿನ ವಿಶ್ರಾಂತ್ (29) ಎದೆನೋವಿನಿಂದ ಮೃತಪಟ್ಟ ಘಟನೆ ಬುಧವಾರದಂದು ನಡೆದಿದೆ. ನಡುರಾತ್ರಿ 12.30ಗಂಟೆ ಸುಮಾರಿಗೆ ತಾಲೂಕಿನ ಅಂಪಾರು ಗ್ರಾಮದ ನೆಲ್ಲಿಕಟ್ಟೆ ಸಮೀಪ ಅವರು ಹೋಗುತ್ತಿರುವಾಗ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಲಾರಿಯಲ್ಲಿದ್ದ ಸ್ನೇಹಿತ ನಾಗೇಂದ್ರ ಕೂಡಲೆ ಲಾರಿ ನಿಲ್ಲಿಸಿ 108 ಅಂಬ್ಯುಲೆನ್ಸ್ ಗೆ ಕರೆ ಮಾಡಿ ಚಿಕಿತ್ಸೆಗಾಗಿ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದು, ಪರೀಕ್ಷಿಸಿದ ವೈದ್ಯರು ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಮೂಡಿಸುವ ಸಲುವಾಗಿ ‘ವಿಧಿಕ್ತ – 2024’ ಅಂತರ್ ತರಗತಿ ಸ್ಪರ್ಧೆ ನಡೆಯಿತು. ಮೂಟ್ ಕೋರ್ಟ್ ಮಾದರಿ ಆಧಾರಿತ ಈ ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಅವರು ನ್ಯಾಯದೇವತೆಯ ಕಣ್ಣಿಗೆ ಕಟ್ಟಿದ ಕಪ್ಪು ಪಟ್ಟಿಯನ್ನು ಬಿಡಿಸುವ ಮೂಲಕ ಚಾಲನೆ ನೀಡಿದರು. ಇದೇ ಸಂದರ್ಭ ಕಾನೂನಿನ ಅರಿವು ಕೇವಲ ನ್ಯಾಯಾಲಯಕ್ಕೆ ಮಾತ್ರ ಸೀಮಿತವಲ್ಲದೆ, ಅದು ದೈನಂದಿನ ಪರಿಸ್ಥಿತಿಗಳಲ್ಲಿಯೂ ಅನ್ವಯವಾಗುತ್ತದೆ ಮತ್ತು ವಿದ್ಯಾರ್ಥಿಗಳು ಜೀವನಕ್ಕೆ ಅಮೂಲ್ಯವಾದ ಮತ್ತು ಅಳಿಸಲಾಗದ ಪಾಠಗಳನ್ನು ಕಲಿಯುವಾಗ ಕಾನೂನು ಶಿಕ್ಷಣದ ಅರಿವು ಮಹತ್ವದ್ದಾಗಿರುತ್ತದೆ ಎಂದು ಹೇಳಿದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು. ವಾಣಿಜ್ಯ ವಿಭಾಗದ ಮುಖ್ಯಸ್ಥೆ ವೀಣಾ ವಿ. ಭಟ್ ಪ್ರಾಸ್ತಾವಿಸಿ, ಸಂಯೋಜಕ ಸತೀಶ್ ಶೆಟ್ಟಿ ಹೆಸ್ಕತ್ತೂರು ಸ್ವಾಗತಿಸಿ, ವಿದ್ಯಾರ್ಥಿ ಆದಿತ್ಯ ಪ್ರಾರ್ಥಿಸಿ, ಸಂಯೋಜಕ ಸುಹಾಸ್ ಜೆ.ಜಿ. ವಂದಿಸಿ, ವಾಣಿಜ್ಯ ವಿಭಾಗದ ಪ್ರಾಧ್ಯಾಪಕ ಯೋಗೀಶ್…
