Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬ್ಯಾರೀಸ್  ಪ್ರಥಮ ದರ್ಜೆ ಕಾಲೇಜಿನ ಕ್ರೀಡಾ ಘಟಕದ ವತಿಯಿಂದ ವಾರ್ಷಿಕ ಕ್ರೀಡಾ ಚಟುವಟಿಕೆಯ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.  ಸಂಪನ್ಮೂಲ ವ್ಯಕ್ತಿಯಾಗಿ ಕಾಮನ್ ವೆಲ್ತ್ ನ ಅಂತರಾಷ್ಟ್ರೀಯ ಪವರ್ ಲಿಫ್ಟಿಂಗ್ ಕ್ರೀಡಾಪಟು ಸತೀಶ್ ಖಾರ್ವಿ ಅವರು ‘ಪ್ರತಿಯೊಬ್ಬ ವಿದ್ಯಾರ್ಥಿಯು ಮೊಬೈಲ್ ಬಳಕೆಯಿಂದ ದೂರ ಸರಿದು ಹೆಚ್ಚು ಸಮಯವನ್ನು ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ರಾಷ್ಟ್ರಧ್ವಜವನ್ನು ರಾಷ್ಟ್ರಗೀತೆಯೊಂದಿಗೆ ತನ್ನ ಹೆಗಲಿನ ಮೇಲೆ ಹೊದಿಸಿಕೊಂಡು ವಿಜಯ ವೇದಿಕೆ ಏರಬೇಕು’ ಎಂದು ತಿಳಿಸಿದರು. ಪ್ರಾಂಶುಪಾಲೆ ಶಬೀನಾ. ಹೆಚ್ ಅವರು ತಮ್ಮ ಅಧ್ಯಕ್ಷೀಯ ನುಡಿಯಲ್ಲಿ ‘ವಿದ್ಯಾರ್ಥಿಗಳು ಪಾಠದ ಜೊತೆಗೆ ಆಟೋಟಗಳಲ್ಲಿಯೂ ಭಾಗವಹಿಸುವುದು ಬಹಳ ಮುಖ್ಯ’ ಹಾಗೂ ಪ್ರಸ್ತುತ ದಿನಗಳಲ್ಲಿನ ಕ್ರೀಡೆಯ ಮಹತ್ವದ ಕುರಿತು ತಿಳಿಸಿದರು. ವೇದಿಕೆಯಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾದ ಸೌರಭ ಹಾಗೂ ವಿದ್ಯಾರ್ಥಿ ಕ್ರೀಡಾ ಮುಖಂಡ ಮನಾಜ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿಯರಾದ ರಿದಾ ನಿರೂಪಿಸಿದರು. ಅನಿಷಾ ಸ್ವಾಗತಿಸಿದರು. ಮುಝಮ್ಮಿಲ್ ಗಣ್ಯರನ್ನು ಪರಿಚಯಿಸಿದರು. ಬುಶ್ರಾ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಿಬಿಐ ಆಫೀಸರ್ ಎಂದು ಹೇಳಿಕೊಂಡು ವ್ಯಕ್ತಿಯನ್ನು ವಂಚಿಸಿದ ಪ್ರಕರಣ ಕುಂದಾಪುರದಲ್ಲಿ ನಡೆದಿದೆ. ಕುಂದಾಪುರದ ನಿವಾಸಿ ಪ್ರವೀಣ್  ಕುಮಾರ್ ವಂಚನೆಗೊಳಗಾದವರು. ಅವರ ದೂರಿನನ್ವಯ ಪ್ರಕರಣ ದಾಖಲಾಗಿದೆ. ಪ್ರಕರಣದ ವಿವರ: ಅ.19ರಂದು ಇವರ ಸಂಚಾರಿ ದೂರವಾಣಿಗೆ ಕರೆ ಬಂದಿದ್ದು ನಿಮ್ಮ ಸಂಚಾರಿ ದೂರವಾಣಿ ಸಂಖ್ಯೆಯನ್ನು 2 ಗಂಟೆಯೊಳಗೆ ಸ್ಥಗಿತಗೊಳ್ಳುತ್ತದೆ. ಹೆಚ್ಚಿನ ಮಾಹಿತಿಗಾಗಿ 9 ಪ್ರೆಸ್ ಮಾಡುವಂತೆ ತಿಳಿಸಿದ ಮೇರೆಗೆ ಪ್ರೆಸ್ ಮಾಡಿದ್ದಾರೆ. ಕೂಡಲೇ ಅದು ಬೇರೆಯವರಿಗೆ ಕನೆಕ್ಟ್ ಆಗಿದೆ. ಅವರು ನಿಮ್ಮ ಆಧಾರ್ ಕಾರ್ಡ್ ಪ್ರಾಡ್ ಆಗಿದೆ ಎಂದು ತಿಳಿಸಿ ಕೂಡಲೇ ಸಿಬಿಐ ಲೋಗೊ ನಂಬರ್‌ನಿಂದ ಕರೆಮಾಡಿ ಸಿಬಿಐ ಆಫೀಸರ್ ಎಂದು ಹೇಳಿಕೊಂಡು ಮನಿ ಲ್ಯಾಂಡರಿಂಗ್‌ನಲ್ಲಿ ನಿಮ್ಮ ಮೇಲೆ ಕೇಸ್ ಆಗಿದ್ದು ನಿಮ್ಮ ದಾಖಲೆ ತೋರಿಸಿ ಎಂದಿದ್ದಾರೆ. ಅದರಂತೆ ಆಧಾರ್ ಕಾರ್ಡ್, ಪಾಸ್‌ ಪುಸ್ತಕ, ಪಾನ್‌ ಕಾರ್ಡ್ ಗಳನ್ನು ಇವರು ತೋರಿಸಿದ್ದಾರೆ. ಅರ್ಧಗಂಟೆಯ ನಂತರ ಕೆನರಾ ಬ್ಯಾಂಕ್‌ನ ಖಾತೆಯಿಂದ ಹಣ ವರ್ಗಾವಣೆಯಾಗಿರುವುದು ಸಾಬೀತಾಗಿದೆ. ಇದರ ಬಗ್ಗೆ ನಿಮ್ಮ ಮೇಲಿನ…

Read More

ಕುಂದಾಪ್ರ ಡಾಟ್ ಕಾ ಸುದ್ದಿ.ಉಡುಪಿ: ಜಿಲ್ಲೆಯ ಎಲ್ಲಾ ಹೈನುಗಾರರು ತಮ್ಮ ಜಾನುವಾರುಗಳಿಗೆ ಪ್ರತಿಶತ ನೂರರಷ್ಟು ಕಾಲು ಬಾಯಿ ಜ್ವರ ರೋಗ ಲಸಿಕೆಯನ್ನು ಹಾಕಿಸುವ ಮೂಲಕ ಜಿಲ್ಲೆಯನ್ನು ಕಾಲುಬಾಯಿ ರೋಗದಿಂದ ಮುಕ್ತಗೊಳಿಸಲು ಸಹಕರಿಸುವಂತೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಸೋಮವಾರ ನೀಲಾವರ ಗೋಶಾಲೆಯಲ್ಲಿ ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿ ಮಾತನಾಡಿದರು. ಕಾಲು ಬಾಯಿ ರೋಗವು ಜಾನುವಾರುಗಳಿಗೆ ಮಾರಣಾಂತಿಕ ಕಾಯಿಲೆಯಾಗಿದ್ದು, ಈ ರೋಗ ನಿಯಂತ್ರಣಕ್ಕಾಗಿ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ 6 ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಅ. 21 ರಿಂದ ನ. 20 ರ ವರೆಗೆ ಹಮ್ಮಿಕೊಳ್ಳಲಾಗುತ್ತಿದೆ ಎಂದರು. ಜಿಲ್ಲೆಯ ಎಲ್ಲಾ ಹೈನುಗಾರರು ಪಶು ಸಂಗೋಪನಾ ಇಲಾಖೆಯ ಅಧಿಕಾರಿ / ಸಿಬ್ಬಂದಿಗಳು ಮತ್ತು ಕೆ.ಎಂ.ಎಫ್. ಸಿಬ್ಬಂದಿಗಳು ಹಾಗೂ ಗ್ರಾಮ ಮಟ್ಟದಲ್ಲಿ ಪಶು ಸಖಿಯರು ಜಾನುವಾರುಗಳಿಗೆ ಲಸಿಕೆ ನೀಡಲು ಮನೆ ಭೇಟಿ ಮಾಡಿದ ಸಂದರ್ಭದಲ್ಲಿ ಅವರುಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸುವ ಮೂಲಕ ಅವರುಗಳಿಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯು 2024 – 25ನೇ ಶೈಕ್ಷಣಿಕ ವರ್ಷದ ರಾಷ್ಟ್ರಮಟ್ಟದ ಅತ್ಯುನ್ನತ ಗೌರವವಾದ “ಎಜ್ಯುಕೇಶನ್ ವರ್ಲ್ಡ್ ಇಂಡಿಯಾ ಸ್ಕೂಲ್ ರ‍್ಯಾಂಕಿಂಗ್” ಪ್ರಶಸ್ತಿಗೆ ಪಾತ್ರವಾಗಿದೆ.   ದೇಶದಲ್ಲಿಯೇ ಅತ್ಯುತ್ತಮ ಸಹಶಿಕ್ಷಣದ ಜೊತೆಗೆ ಶೈಕ್ಷಣಿಕ ಹಾಗೂ ಸಹಪಠ್ಯ ಕ್ಷೇತ್ರಗಳಲ್ಲಿ ಮಾಡಿರುವ ಅಪರೂಪದ ಸಾಧನೆಗಳು ಮತ್ತು ಸಮಗ್ರ ಶಿಕ್ಷಣವನ್ನು ಒದಗಿಸುವಲ್ಲಿ ಶಾಲೆ ತೋರಿರುವ ಕಾಳಜಿ ಹಾಗೂ ಡೇ ಸ್ಕೂಲ್ ಶಾಲೆಗಳ ವಿಭಾಗದಲ್ಲಿ ಉತ್ತಮ ಶ್ರೇಯಾಂಕವನ್ನು ಹೊಂದಿರುವ ನೆಲೆಯಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಈ ಪ್ರಶಸ್ತಿಯನ್ನು ಮೂರನೇ ಬಾರಿಗೆ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ ಪಡೆದುಕೊಳ್ಳುತ್ತಿರುವುದು ಗಮನಾರ್ಹವಾಗಿದೆ. ಅಕ್ಟೋಬರ್ 17 ರಂದು ನವದೆಹಲಿಯ ಗುರುಗ್ರಾಮ್‍ನ “ಲೀಲಾ ಅಂಬಿಯೆನ್ಸ್” ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ, ಶಾಲೆಯ ಸಂಯೋಜಕರಾದ ಮಧು ಕೆ. ಎಲ್ ಅವರು ಶಾಲೆಯ ಪರವಾಗಿ ಪ್ರಶಸ್ತಿಯನ್ನು ಸ್ವೀಕರಿಸಿದರು. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಪ್ರಾಂಶುಪಾಲರೂ ಆದ ಶರಣ ಕುಮಾರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬಿಜೆಪಿ ಹಿರಿಯ ಮುಖಂಡ, ಮಾಜಿ ತಾಲೂಕು ಪಂಚಾಯತ್ ಸದಸ್ಯ, ಆಲೂರು ಗ್ರಾಮ ಪಂಚಾಯತ್ ಹಾಲಿ ಸದಸ್ಯ ನಾರ್ಕಳಿ ಸುಧಾಕರ್ ಶೆಟ್ಟಿ ಅವರು ಇಂದು ನಿಧನರಾಗಿದ್ದರು. ಅವರು ನಾರ್ಕಳಿಯ ಮಹಿಷಮರ್ದಿನೀ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಹಾಲಿ ಅಧ್ಯಕ್ಷರಾಗಿ, ರಾಮೇಶ್ವರ ಯಕ್ಷಗಾನ ಸಂಘ ಸದಸ್ಯರಾಗಿ, ಆಲೂರು ಅರಣ್ಯ ಸಮಿತಿಯ ಮಾಜಿ ಅಧ್ಯಕ್ಷರಾಗಿ ಗುರುತಿಸಿಕೊಂಡರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಮುದ್ಯತಾ ಚದುರಂಗೋತ್ಸವ ಅಂತರ್ ಜಿಲ್ಲಾ ಪುರುಷರು ಮತ್ತು ಮಹಿಳೆಯರ ರ‍್ಯಾಪಿಡ್ ಚೆಸ್ ಪಂದ್ಯಾವಳಿ 2024ರ ಸಮಾರೋಪ ಸಮಾರಂಭದಲ್ಲಿ ತೆಕ್ಕಟ್ಟೆಯ ಸಮುದ್ಯತಾ ಸಭಾಂಗಣದಲ್ಲಿ ಜರುಗಿತು. ಈ ವೇಳೆ ಸಮುದ್ಯತಾ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಯೋಗೇಂದ್ರ ತಿಂಗಳಾಯ, ಪ್ರೆಸಿಡೆಂಟ್ ಗ್ರೂಪ್ ಬಹರೈನ್‌ನ ಸಿಇಒ ಅಬ್ದುಲ್ ಸತ್ತಾರ್, ಶಂಕರನಾರಾಯಣ ಸಬ್ ಇನ್ಸ್ಪೆಕ್ಟರ್ ನಾಸಿರ್ ಹುಸೇನ್, ಕಟೀಲೇಶ್ವರಿ ಡೆವಲಪರ್ಸ್‌ನ ವ್ಯವಸ್ಥಾಪಕ ನಿರ್ದೇಶಕ ಎಚ್. ಪ್ರಕಾಶ್ ಶೆಟ್ಟಿ, ಸಲೀಮ್ ಬೇಗಿ, ಇಂಟರ್ನ್ಯಾಷನಲ್ ಆರ್ಬಿರ್ಟರ್ ಬೆಂಗಳೂರು ಉಪಸ್ಥಿತರಿದ್ದರು. ಪಂದ್ಯಾವಳಿಯಲ್ಲಿ ಸುಮಾರು 220 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಶ್ವಿ ಚೆಸ್ ಸ್ಕೂಲ್‌ನ ವ್ಯವಸ್ಥಾಪಕರಾದ ನರೇಶ್ ರಾವ್, ಕಶ್ವಿ ಚೆಸ್ ಸ್ಕೂಲ್ ನ ಸಲಹೆಗಾರರಾದ ಅರುಣ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಕಶ್ವಿ ಚೆಸ್ ಸ್ಕೂಲ್ ಕಾರ್ಯದರ್ಶಿಯಾದ ಪುರುಷೋತ್ತಮ್ ಕಾಮಾತ್ ಅವರು ಕಾರ್ಯಕ್ರಮ ನಿರೂಪಿಸಿದರು. ಮಹಿಳೆಯರ ವಿಭಾಗದಲ್ಲಿ ಪ್ರಸಿದ್ಧಿ ಭಟ್ ಮೈಸೂರು ಪ್ರಥಮ ಸ್ಥಾನವನ್ನು ಪಡೆದಿದ್ದು ಹಾಗೆ ಪುರುಷರ ವಿಭಾಗದಲ್ಲಿ ಅಜಿತ್ ಎಂ. ಪಿ. ಮೈಸೂರು ಇವರು ಪ್ರಥಮ ಸ್ಥಾನವನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬಿಜೂರು ಸರಕಾರಿ ಪ್ರೌಢಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂಗನವಾಡಿ ಸಹಾಯಕಿ ದಾರು ದೇವಾಡಿಗ ಅವರನ್ನು ಸನ್ಮಾನಿಸಲಾಯಿತು ಹಾಗೂ ಅಂಗನವಾಡಿ ಮಕ್ಕಳಿಗೆ ಬಹುಮಾನ ಕಾರ್ಯಕ್ರಮ ನಡೆಸಲಾಯಿತು. ಮುಖ್ಯ ಅತಿಥಿಯಾಗಿ ಬಾಲ ವಿಕಾಸ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು, ಗಿರೀಶ್ ಶ್ಯಾನುಭಾಗ, ಸಂದೇಶ್ ಭಟ್, ಸುಬ್ರಹ್ಮಣ್ಯ ಖಾರ್ವಿ, ನಾಗಪ್ಪ ದೇವಾಡಿಗ, ಮಹಾಬಲೇಶ್ವರ, ಮಹಾಲಕ್ಷ್ಮಿ, ಪಾರ್ವತಿ ಕೆ. ಪೂಜಾರಿ, ದೀಪಾ, ಆಶಾ ಕಾರ್ಯಕರ್ತೆ ಗುಲಾಬಿ, ಅಂಗನವಾಡಿ ಕಾರ್ಯಕರ್ತೆ ಸುಶೀಲಾ ಬಿ. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಕ್ಕಳ ಪೋಷಕರು, ಸ್ತ್ರೀ ಶಕ್ತಿ ಸದಸ್ಯರು, ಊರ ನಾಗರಿಕರು ಕಾರ್ಯಕ್ರಮ ನೆರವೇರಿಸಿಕೊಟ್ಟರು. ಸತ್ಯನಾರಾಯಣ್ ಶೇಟ್ ಕಾರ್ಯಕ್ರಮಕ್ಕೆ ಪುಷ್ಪವನ್ನು ಒದಗಿಸಿದರು. ಶ್ರೀರಾಮ್ ಹೋಟೆಲ್ ಮಾಲಕರಾದ ನಂದೀಶ್ ದೇವಾಡಿಗ ಅವರು ಕಾರ್ಯಕ್ರಮಕ್ಕೆ ಲಘು ಉಪಹಾರ ಒದಗಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಿದ್ದಾಪುರ ಗ್ರಾಮದ ಹರ್ಕೆಬಾಳು ಸಾದಮ್ಮ(62) ಅವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಇದರಿಂದ ಜೀವನದಲ್ಲಿ ಜೀಗುಪ್ಪೆಗೊಂಡು, ಮನೆಯಲ್ಲಿ ಅ.12ರಂದು ಇಲಿ ಪಾಷಣ ಸೇವಿಸಿದ್ದರು. ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಿಸದೇ ಅ.21ರಂದು ನಿಧನ ಹೊಂದಿದರು ಎಂದು ಪುತ್ರಿ ಶ್ಯಾಮಲ ಅವರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಕ್ಟೋಬರ್ 17 ರಿಂದ 19ರ ತನಕ ಆಂಧ್ರ ಪ್ರದೇಶದ ಗುಂಟೂರಿನಲ್ಲಿನಡೆದ ರಾಷ್ಟ್ರ ಮಟ್ಟದ 35ನೇ ದಕ್ಷಿಣ ವಲಯ ಕಿರಿಯರ ಅಥ್ಲೆಟಿಕ್ ಚಾಂಪಿಯನ್ ಶಿಪ್‌ನ ಎತ್ತರ ಜಿಗಿತದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಿನಾನ್ ಬೆಳ್ಳಿ ಪದಕ ಪಡೆದು ಅಪೂರ್ವ ಸಾಧನೆಗೆ ಸಾಕ್ಷಿಯಾಗಿದ್ದಾನೆ. ವಿದ್ಯಾರ್ಥಿಗೆ  ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಔಷಧಾಲಯ ಅಥವಾ ಔಷಧ ವಿಜ್ಞಾನ ಎಂಬುದು ಕೇವಲ ಕುಳಿತು ಮಾಡುವ ವ್ಯಾಪಾರಿ ವೃತ್ತಿಯಲ್ಲ, ಅದು ವೈದ್ಯರು ಮತ್ತು ರೋಗಿಗಳ ಮಧ್ಯದ ಸೇತು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ ಆಳ್ವ ಹೇಳಿದರು. ಆಳ್ವಾಸ್ ಕಾಲೇಜಿನ ಧನ್ವಂತರಿ ಸಭಾಭವನದಲ್ಲಿ ಸೋಮವಾರ ನಡೆದ ಆಳ್ವಾಸ್ ಫಾರ್ಮಸಿ ಕಾಲೇಜು ಉದ್ಘಾಟನೆ ಮತ್ತು ಅಭಿವಿನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಔಷಧಾಲಯ ಪರಿಣಿತರು ವೈದ್ಯರು ಸೂಚಿಸಿ ಬರೆದ ಔಷಧಗಳ ಸಂಪೂರ್ಣ ಜ್ಞಾನ ಹೊಂದಿರಬೇಕು. ಔಷಧಾಲಯ ಪರಿಣತರಿಗೆ ಜಗತ್ತಿನಾದ್ಯಂತ ಬೇಡಿಕೆ ಹೆಚ್ಚಿದೆ. ಆಳ್ವಾಸ್‌ನಲ್ಲಿ ’ಫಾರ್ಮಸಿ’ಎಲ್ಲ ಅಗತ್ಯ ಸೌಲಭ್ಯಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಗುವುದು. ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು, ಅತ್ಯುನ್ನತ ಹುದ್ದೆಗಳಿಗೆ ತೆರಳಬೇಕು ಎಂದರು. ಭಾರತವು ಜಗತ್ತಿನ ಔಷಧ ಶಾಲೆ. ಕೋವಿಡ್‌ನಂತಹ ಸಂದರ್ಭದಲ್ಲಿ ವಿವಿಧ ದೇಶಗಳ ಔಷಧಗಳ ಬೇಡಿಕೆ ಪೂರೈಸಿದೆ ಎಂದರು. ಮೂಡುಬಿದಿರೆ ಸಿ.ಎಚ್ ಮೆಡಿಕಲ್ ಮಾಲಕ ಸಿ.ಎಚ್. ಅಬ್ದುಲ್ ಗಫೂರ್ ಮಾತನಾಡಿ, ಆಳ್ವಾಸ್ ಕಾಲೇಜು ಧನಾತ್ಮಕ ಯೋಚನೆಗಳಿಗೆ ಸಹಕಾರಿಯಾಗಿದೆ. ಫಾರ್ಮಸಿಯ ವಿಷಯಯಗಳು…

Read More