Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕರಾವಳಿ ಕಡಲ ತಡಿಯ ಭಾರ್ಗವ ರಾಮರ ಸುಂದರ ಹಸಿರು ನಾಡಿನ ಸುಣ್ಣಾರಿ ಎನ್ನುವ ಸುಂದರ ಊರಿನಲ್ಲಿ ಸ್ಥಾಪಿತಗೊಂಡಿರುವ ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಅಧ್ಯಾಯವನ್ನು ಸಾಧಿಸಿರುವ ಅಗ್ರಗಣ್ಯ ಸಂಸ್ಥೆಯೇ ಎಕ್ಸಲೆಂಟ್ ವಿದ್ಯಾಸಂಸ್ಥೆಯಾಗಿದೆ. ಈ ಸಂಸ್ಥೆಗೆ ಪ್ರತಿ ವರ್ಷವು ವಿವಿಧ ರಾಜ್ಯದ ಹಾಗೂ ಜಿಲ್ಲೆಗಳ ನಾನಾ ಭಾಗದ ವಿದ್ಯಾರ್ಥಿಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಸೇರ್ಪಡೆಗೊಂಡು ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯದಲ್ಲಿಯೇ ಹೊಸ ಕ್ರಾಂತಿಯನ್ನು ಸೃಷ್ಠಿಸಿದೆ. ಪ್ರತಿ ವರ್ಷವು ಸಿಇಟಿ, ಜೆಇಇ, ನೀಟ್, ಸಿಎ, ಸಿಎಸ್ ಹಾಗೂ ಬೋರ್ಡ್‌ಗಳಲ್ಲಿ ಹಲವಾರು ರ್ಯಾಕ್‌ಗಳನ್ನು ಗಳಿಸಿ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡ ಹೆಗ್ಗಳಿಕೆಯ ಸಂಸ್ಥೆಯಾಗಿದೆ. ಕೇವಲ ಶಿಕ್ಷಣ ಕ್ಷೇತ್ರದಲ್ಲಿ ಮಾತ್ರವಲ್ಲದೇ ಕ್ರೀಡಾ ಕ್ಷೇತ್ರದಲ್ಲಿ ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿಯೂ ಭಾಗವಹಿಸಿ ಅದೆಷ್ಟೋ ಪ್ರಶಸ್ತಿಗಳನ್ನುತನ್ನ ತೆಕ್ಕೆಗೆ ಹಾಕಿಕೊಂಡಿದ್ದು ಸಂಸ್ಥಗೆ ಹೆಮ್ಮೆಯ ವಿಚಾರವಾಗಿದೆ. ಹೀಗೆ ಶಿಕ್ಷಣ, ಕ್ರೀಡಾ ಕ್ಷೇತ್ರದಲ್ಲಿ ಮಾತ್ರವಲ್ಲದೇ ಸಾಂಸ್ಕ್ರತಿಕ ಕ್ರೇತ್ರದಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮಕ್ಕಳಿಗೆ ಬದುಕಿಗೆ ಬಹುಮುಖ್ಯ ಅಂಗವಾಗಿರುವ ಸಂಸ್ಕಾರಯುತ ಶಿಕ್ಷಣ ಮನೆಯಲ್ಲಿಯೇ ಆರಂಭವಾಗಬೇಕು. ಮಾನವೀಯತೆಗೆ ಮಿಡಿಯುವ ಮನಸ್ಸುಗಳು ಕಡಿಮೆಯಾಗುತ್ತಿರುವುದು ದುರದೃಷ್ಠಕರ ಸಂಗತಿ. ನೋವಿಗೆ ಸ್ಪಂದಿಸುವ ಪ್ರವೃತ್ತಿ ಎಲ್ಲ ಕಾರ್ಯಗಳಿಗಿಂತ ಶ್ರೇಷ್ಠವಾದುದು ಎಂದು ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರು ಹೇಳಿದರು. ಅವರು ಶ್ರೀ ವಿನಾಯಕ ಯುವಕ ಮಂಡಲ ಸಾಬ್ರಕಟ್ಟೆ ಯಡ್ತಾಡಿ ಇವರ ಆಶ್ರಯದಲ್ಲಿ ನಡೆದ 13 ನೇ ವರ್ಷದ ಶ್ರೀ ಶಾರದ ಮಹೋತ್ಸವ ನಮ್ಮೂರ ದಸರಾ-2024 ( ಭಾವ ಭಕ್ತಿಯ ಸಂಗಮ) ಕಾರ್ಯಕ್ರಮದಲ್ಲಿ ಶ್ರೀ ವಿನಾಯಕ ಸಾಧನ ಶ್ರೀ ಪುರಸ್ಕಾರ ಸ್ವೀಕರಿಸಿ ಮಾತನಾಡಿದರು. ಕುಂದಾಪುರ ವಿಧಾನ ಸಭಾ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ವಿನಾಯಕ ಯುವಕ ಮಂಡಲ ವಿಶಿಷ್ಟ ಕಾರ್ಯಕ್ರಮಗಳ ಆಯೋಜನೆ ಮೂಲಕ ಯುವಕ ಮಂಡಲದ ಸ್ಥಾಪನೆಯ ಸಾರ್ಥಕತೆಯನ್ನು ಕಂಡುಕೊಳ್ಳುತ್ತಿದ್ದೆ. ವಿಶು ಶೆಟ್ಟಿ ಯುವ ಜನಾಂಗಕ್ಕೆ ಮಾದರಿ ಎಂದರು. ವಿದ್ವಾನ್ ಟಿ, ವಾಸುದೇವ ಜೋಯಿಷ್‍, ತಟ್ಟುವಟ್ಟು ಆಶೀರ್ವಚನ ಮಾತುಗಳನ್ನಾಡಿ ಭವ್ಯ ಭಾರತದಲ್ಲಿ ನಮ್ಮ ಜನ್ಮ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತುಂತುರು ನೀರಾವರಿ ಘಟಕಗಳು ಲಭ್ಯವಿದ್ದು, ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ರೈತರು ಜಮೀನಿನ ಆರ್.ಟಿ.ಸಿ, ಆಧಾರ್ ಪ್ರತಿ, 2 ಪಾಸ್ ಪೋರ್ಟ್ ಸೈಜಿನ ಭಾವಚಿತ್ರ, ಬ್ಯಾಂಕ್ ಖಾತೆ ಪುಸ್ತಕದ ಪ್ರತಿ, ನೀರಿನ ಮೂಲ ದೃಢೀಕರಣ ಪತ್ರ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಇದ್ದಲ್ಲಿ ಪ್ರಮಾಣ ಪತ್ರ ಹಾಗೂ ಛಾಪಾ ಕಾಗದಗಳೊಂದಿಗೆ, ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಸೌಲಭ್ಯದ ಪ್ರಯೋಜನ ಪಡೆಯಲು ರೈತರು ಕಡ್ಡಾಯವಾಗಿ ಪ್ರೂಟ್ಸ್ ಐಡಿಯನ್ನು ಹೊಂದಿರಬೇಕು. ರೈತರು ಈಗಾಗಲೇ ಪ್ರೂಟ್ಸ್ ಐಡಿಯನ್ನು ಹೊಂದಿದ್ದಲ್ಲಿ ಅಥವಾ ಹೊಂದಿರದೆ ಇದ್ದಲ್ಲಿ ತಮ್ಮ ಎಲ್ಲಾ ಆರ್.ಟಿ.ಸಿಗಳನ್ನು ಪ್ರೂಟ್ಸ್ ಐಡಿಗೆ ಜೋಡಣೆ ಮಾಡಿಕೊಳ್ಳಬೇಕು ಎಂದು ಕುಂದಾಪುರ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ರಾಷ್ಟ್ರೀಯ ಹೆದ್ದಾರಿ 169 ಎ ಇಂದ್ರಾಳಿ ಮೇಲ್ಸೇತುವೆ ನಿರ್ಲಕ್ಷ್ಯ  ವಹಿಸಿ ಕಾಮಗಾರಿ ನಡೆಸುತ್ತಿರುವ ಕಾರಣ ಅನೇಕ ಅಪಘಾತಗಳಾಗಿ ಸಾವು-ನೋವುಗಳು ಸಂಭವಿಸುತ್ತಿವೆ. ಇದಕ್ಕೆ ಸಂಬಂಧಿಸಿದಂತೆ ಅಪಘಾತಕ್ಕೆ ಕಾರಣಕರ್ತರಾದ ಗುತ್ತಿಗೆದಾರರು, ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯ  ಸೇರಿದಂತೆ ಮತ್ತಿತರ ಪ್ರಕರಣಗಳನ್ನು ದಾಖಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ 169 ಎ ಇಂದ್ರಾಳಿ ಮೇಲ್ಸೇತುವೆ ಕಾಮಗಾರಿ ಪ್ರಗತಿ ಪರಿಶೀಲನೆ ಕುರಿತು ಚರ್ಚಿಸುವ ಸಲುವಾಗಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಷ್ಟ್ರೀಯ ಹೆದ್ದಾರಿ 169 ಎ ಇಂದ್ರಾಳಿ ಮೇಲ್ಸೇತುವೆ ರಸ್ತೆ ಕಾಮಗಾರಿ ವಿಳಂಬದಿಂದಾಗಿ ರಸ್ತೆ ಇಕ್ಕಟ್ಟಿನಿಂದಾಗಿ ಕಳೆದ ಎರಡು ವರ್ಷಗಳಿಂದ ಮಾರಣಾಂತಿಕ ರಸ್ತೆ ಅಪಘಾತಗಳು ಸಂಭವಿಸಿ, ಮರಣ ಹೊಂದಿರುತ್ತಾರೆ. ಇದಕ್ಕೆಲ್ಲಾ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಕಾರಣವಾಗಿದ್ದು, ರಸ್ತೆ ಅಪಘಾತ ಸಂಬಂಧ ಕಾರಣಕರ್ತರಾದ ರೈಲ್ವೆ ಅಧಿಕಾರಿಗಳು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಭಿಯಂತರರು ಹಾಗೂ ಗುತ್ತಿಗೆದಾರರುಗಳ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕು ಮಣಿಪಾಲದಲ್ಲಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯದ ಪ್ರವೇಶಾತಿಗೆ, ನವೀಕರಣ ವಿದ್ಯಾರ್ಥಿಗಳ ಸೀಟು ಹಂಚಿಕೆಯಾಗಿ ಉಳಿಕೆ ಸೀಟುಗಳಿಗೆ ಸ್ಟೇಟ್ ಹಾಸ್ಟೆಲ್ ಪೋರ್ಟಲ್ ತಂತ್ರಾಂಶದ ಮೂಲಕ ಪಿ.ಯು.ಸಿ ಮತ್ತು ಪಿ.ಯು.ಸಿ ಸಮನಾಂತರ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ವರ್ಗದ ವಿದ್ಯಾರ್ಥಿಗಳಿಂದ ವೆಬ್‌ಸೈಟ್  https://shp.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 11 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಕಚೇರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2573596, ಸಹಾಯವಾಣಿ ಸಂಖ್ಯೆ 8277799990, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಅಜಾದ್ ಭವನ, ಪಶು ಚಿಕಿತ್ಸಾಲಯದ ಹತ್ತಿರ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ ದೂರವಾಣಿ : 0820-2574596 ಅಥವಾ ಕಾರ್ಕಳ ದೂರವಾಣಿ : 08258-231101 ಹಾಗೂ ಕುಂದಾಪುರ ದೂರವಾಣಿ :…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಢೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಜೇಸಿಐ ಕುಂದಾಪುರ ಸಿಟಿ ಮತ್ತು ಕಿಯೋನಿಕ್ಸ್, ಚರ್ಚ್ ರಸ್ತೆ ಕುಂದಾಪುರ ಇವರ ಸಹಕಾರದೊಂದಿಗೆ ಚೌಡೇಶ್ವರಿ ಟೈಗರ್ಸ್ ಟಿ.ಟಿ. ರಸ್ತೆ ಕುಂದಾಪುರ ಇವರಿಂದ ಹುಲಿವೇಷ ಕುಣಿತ ಪ್ರದರ್ಶನವು ಗುರುವಾರದಂದು ನಡೆಯಿತು. ಕಾಲೇಜಿನ ಪ್ರಾಚಾರ್ಯರಾದ ಕೆ. ಉಮೇಶ್ ಶೆಟ್ಟಿ, ಜೇಸಿಐ ಸಿಟಿ ಕುಂದಾಪುರದ ಅಧ್ಯಕ್ಷ ರಾಘವೇಂದ್ರ ಕುಲಾಲ್ ಹೆಮ್ಮಾಡಿ, ಸ್ಥಾಪಕಾಧ್ಯಕ್ಷ ಹುಸೇನ್ ಹೈಕಾಡಿ, ಕಾರ್ಯಕ್ರಮ ಪ್ರಾಯೋಜಕರಾದ ಹರ್ಷವರ್ಧನ್ ಶೆಟ್ಟಿ, ಮಾಲಕರು ಕಿಯೋನಿಕ್ಸ್, ಚರ್ಚ್ ರಸ್ತೆ ಕುಂದಾಪುರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಡಾ| ಸೋನಿ, ಜೇಸಿ ವಿಜಯ ಭಂಡಾರಿ, ಜೇಸಿ ರಾಜು ಪೂಜಾರಿ, ಉಪ-ಪ್ರಾಂಶುಪಾಲ ಡಾ| ಚೇತನ್ ಶೆಟ್ಟಿ ಕೋವಾಡಿ ಕಾರ್ಯಕ್ರಮವನ್ನು ಸಂಘಟಿಸಿದ ಲಲಿತಾಕಲಾ ಸಂಘದ ಸಂಯೋಜಕಿ ದೀಪಿಕಾ. ಜಿ. ರವಿನಾ ಸಿ, ಪೂಜಾರಿ, ನಿರ್ಮಲಾ ಬಿ. ಉಪಸ್ಥಿತರಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ ನಿರೂಪಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೂರ್ಯ ಫೌಂಡೇಶನ್  ಬೆಂಗಳೂರು,  ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ ಮೈಸೂರು ಮತ್ತು ಸ್ಪಾರ್ಕ್ ಅಕಾಡೆಮಿ ಬೆಂಗಳೂರು ವತಿಯಿಂದ ನಿರೂಪಕರಿಗೆ ನೀಡಲಾಗುವ ರಾಜ್ಯ ಮಟ್ಟದ  “ಅಪರ್ಣಾ ನಿರೂಪಣಾ ರತ್ನ” ಪ್ರಶಸ್ತಿಗೆ  ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಉಪ ಪ್ರಾಂಶುಪಾಲರಾದ ರಾಮ ದೇವಾಡಿಗ ಅವರು ಆಯ್ಕೆಯಾಗಿದ್ದಾರೆ. ಅವರಿಗೆ ಅ.15ರಂದು ಬೆಂಗಳೂರಿನ ಇಂಡೋ ಗ್ಲೋಬೋ ಕಾಲೇಜ್, ಹೆಸರಘಟ್ಟದಲ್ಲಿ ನಡೆಯುವ ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮಳನ ಈ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸೂರ್ಯ ಫೌಂಡೇಶನ್ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್, ಪ್ರಾಥಮಿಕ ಆರೋಗ್ಯ ಕೇಂದ್ರ ಕೊರ್ಗ್ಗಿ, ಗ್ರಾಮ ಪಂಚಾಯತ್ ಕಾಳಾವರ, ಪಾರ್ವತಿ ಮಹಾಬಲ ಶೆಟ್ಟಿ ಕಣ್ಣಿನ ಆಸ್ಪತ್ರೆ ಶಿರೂರು ಮುದ್ದುಮನೆ ಇವರ ಸಹಯೋಗದೊಂದಿಗೆ, ಉಪಕೇಂದ್ರ ವಕ್ವಾಡಿ ಇಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ, ರಕ್ತದೊತ್ತಡ, ಮಧುಮೇಹ ಪರೀಕ್ಷೆ ಶಿಬಿರಗಳನ್ನು ಆಯೋಜಿಸಲಾಯಿತು. ಹಲವಾರು ಮಂದಿ ಸಾರ್ವಜನಿಕರು ಇದರ ಪ್ರಯೋಜನವನ್ನು ಪಡೆದುಕೊಂಡರು. ಈ ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಅಧ್ಯಕ್ಷ ಶೇಖರ್ ಏನ್‌ ಶೆಟ್ಟಿ, ಪ್ರಾಥಮಿಕ ಆರೋಗ್ಯ ಕೇಂದ್ರ ಕೊರ್ಗ್ಗಿ ವೈದ್ಯಾಧಿಕಾರಿ ಡಾ। ರೋಶನಿ ಶೆಟ್ಟಿ, ನೇತ್ರತಜ್ಞೆ ಡಾ. ರಶ್ಶಿ ಶೆಟ್ಟಿ, ಗ್ರಾಮ ಪಂಚಾಯತ್‌ ಸದಸ್ಯ ರಮೇಶ್‌ ಶೆಟ್ಟಿ, ಶಂಕರ್ ಶೆಟ್ಟಿ, ರಂಜಿತ್‌ ಕುಮಾರ್ ಶೆಟ್ಟಿ, ಪಿ.ಎಚ್‍.ಎಫ್‍ ರವಿರಾಜ್‌ ಶೆಟ್ಟಿ, ಶ್ರೀಕಾಂತ್‌ ಶೆಟ್ಟಿ, ಸತೀಶ್‌ ಶೆಟ್ಟಿ, ಉದಯ್ ಶೆಟ್ಟಿ ಆಜ್ರಿ ಹಾಗೂ ಊರಿನ ಗಣ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಧರ್ಮದ ಆಚರಣೆಯಲ್ಲಿ ವೈವಿಧ್ಯತೆ, ವ್ಯತ್ಯಾಸ ಇದ್ದರೂ ಧರ್ಮ ಎಂದೂ ಒಂದೇ. ಧರ್ಮದ ಆಚರಣೆ ಮಾಡದಿದ್ದವರು ನಾಸ್ತಿಕರು. ಜಗತ್ತಿನ ಸಾಮರಸ್ಯಕ್ಕೆ ಧರ್ಮ ಅವಶ್ಯಕ. ಧರ್ಮದ ಆಧಾರದಲ್ಲಿ ಇರುವುದರಿಂದಲೇ ಜಗತ್ತಿನಲ್ಲಿ ಸಹಬಾಳ್ವೆ, ವಿಶೇಷ ಬಾಂಧವ್ಯ, ಅಹಿಂಸೆ ನೋಡಬಹುದು. ಧರ್ಮದ ಅಡಿಯಲ್ಲಿ ನಡೆದಾಗ ಸಾರ್ಥಕ ಜೀವನ ನಡೆಸಲು ಸಾಧ್ಯವಾಗುತ್ತದೆ. ಹೀಗಾಗಿ ಧರ್ಮದ ಜಾಗೃತಿ ಆಗಬೇಕು, ಚಿಂತನೆಗಳು ನಡೆಯಬೇಕಿದೆ. ಧರ್ಮದ ಅರಿವು ಆಗಬೇಕು, ಹಿಂದು ಧರ್ಮದ ಪರಂಪರೆ, ಸಂಸ್ಕೃತಿಯನ್ನು ಬೆಳೆಸುವ ಕೈಂಕರ್ಯ ಆಗಬೇಕು. ಎಲ್ಲರೂ ಧರ್ಮದ ಆಚರಣೆ ಮಾಡುತ್ತಿರಬೇಕು ಎಂದು ಉಡುಪಿ ಶ್ರೀ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ಸ್ವಾಮಿಗಳು ಹೇಳಿದರು. ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಗಂಗೊಳ್ಳಿ ಇದರ ಸುವರ್ಣ ಮಹೋತ್ಸವ-2024ಅಂಗವಾಗಿ ಗಂಗೊಳ್ಳಿಯ ಸ. ವಿ. ಪದವಿಪೂರ್ವ ಕಾಲೇಜಿನ ವಠಾರದಲ್ಲಿ ಬುಧವಾರ ಸಂಜೆ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಅವರು ಮಾತನಾಡಿದರು. ವಿದ್ಯಾದೇವತೆಯಾಗಿರುವ ಶ್ರೀ ಶಾರದಾ ಮಾತೆಯ ವಿಶೇಷ ಉಪಾಸನೆಯನ್ನು ನವರಾತ್ರಿಯ ಪರ್ವಕಾಲದಲ್ಲಿ ಮಾಡುತ್ತಿರಬೇಕು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: 14 ವರ್ಷದೊಳಗಿನ ಬಾಲ ಕಾರ್ಮಿಕರುಗಳು ಮಲ್ಪೆಯ ಮೀನುಗಾರಿಕಾ ಬಂದರಿನಲ್ಲಿ ಮೀನು ಹೆಕ್ಕುವ ಕಾರ್ಯಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಕಾರ್ಯಪಡೆಯ ಅಧಿಕಾರಿಗಳು ಇದಕ್ಕೆ ಕಡಿವಾಣ ಹಾಕಲು ಮುಂದಾಗಬೇಕು  ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಲ್ಪೆ ಬಂದರಿನಲ್ಲಿ ಬೆಳಗಿನ ಜಾವ ನಡೆಯುವ ಮೀನಿನ ಹರಾಜು ಕೇಂದ್ರಗಳಲ್ಲಿ ಮಕ್ಕಳು ಮೀನು ಹೆಕ್ಕುವ ಕಾರ್ಯದಲ್ಲಿ ತೊಡಗುತ್ತಿದ್ದಾರೆ. ಈ ಹಿಂದೆ ದಾಳಿ ನಡೆಸಿದರೂ ಕಡಿವಾಣ ಹಾಕಲು ಸಾಧ್ಯವಾಗಿಲ್ಲ. ಕಾರ್ಯಪಡೆಯ ಸದಸ್ಯರುಗಳು ಆಗಿಂದಾಗ್ಗೆ ನಿರಂತರ ಅನಿರೀಕ್ಷಿತ ದಾಳಿ ಹಾಗೂ ಭೇಟಿಗಳನ್ನು ಮಾಡುವುದರೊಂದಿಗೆ ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು ಎಂದು ಸೂಚನೆ ನೀಡಿದರು. ಬಾಲ ಕಾರ್ಮಿಕತೆ ಮಕ್ಕಳ ಬಾಲ್ಯ, ಅವರ ಸಾಮರ್ಥ್ಯ, ಘನತೆ ಕಸಿದುಕೊಳ್ಳುವ ಹಾಗೂ ಮಕ್ಕಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ನೈತಿಕವಾಗಿ…

Read More