ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗ್ರಾಹಕರ ಸೇವೆ ಬ್ಯಾಂಕಿನ ಪ್ರಥಮ ಆದ್ಯತೆಯಾಗಿರಬೇಕು. ಡಿಜಿಟಲ್ ಪ್ರಾಡಕ್ಟ್ಸ್ ಸುಲಭವಾಗಿ ಗ್ರಾಹಕರು ಅರಿಯುವಂತಾಗಬೇಕು. ಬ್ಯಾಂಕಿನ ಎಲ್ಲಾ ಹುದ್ದೆಯವರು ಗ್ರಾಹಕರಿಗೆ ಸಿಗುವಂತಾಗಬೇಕು. ಬ್ಯಾಂಕಿನ ಆರ್ಥಿಕ ಸ್ಥಿತಿಗಳು ಸುದೃಢವಾಗಿರಬೇಕು. ಗ್ರಾಹಕರಿಗೆ ಅಪೇಕ್ಷೆಯಂತೆ ಹೆಚ್ಚಿನ ಸೌಲಭ್ಯ ನೀಡುವಂತಾಗಬೇಕು. ಆಗ ಗ್ರಾಹಕರಿಗೆ ನಮ್ಮ ಬ್ಯಾಂಕ್ ಎಂದು ವಿಶ್ವಾಸ ಬರುತ್ತದೆ. ದೃಢತೆ, ಸುದೃಢತೆಯಲ್ಲಿ ಕರ್ಣಾಟಕ ಬ್ಯಾಂಕ್ ಅಗ್ರ ಸ್ಥಾನಕ್ಕೆ ಮುಂದುವರೆಯುತ್ತಿದೆ. ಗ್ರಾಹಕ ಕೇಂದ್ರಿತ ಈ ಬ್ಯಾಂಕ್ ಇಂದು ಇತರ ಬ್ಯಾಂಕ್ಗಳೂ ಗಮನಹರಿಸುವಂತಾಗುತ್ತದೆ. ನೂರು ವರ್ಷ ದಾಟಿದ ಬ್ಯಾಂಕ್ಗಳಲ್ಲಿ ಕರ್ಣಾಟಕ ಬ್ಯಾಂಕ್ ಮಾತ್ರ ಎಲ್ಲ ವರ್ಷಗಳಲ್ಲಿ ಲಾಭದಾಯಕವಾಗಿ ಬೆಳೆದು ದಾಖಲಿಸಲ್ಪಟ್ಟಿದೆ ಎಂದು ಕರ್ಣಾಟಕ ಬ್ಯಾಂಕಿನ ನಿಕಟಪೂರ್ವ ಎಂ. ಡಿ. ಹಾಗೂ ಸಿ.ಇ.ಒ. ಮಹಾಬಲೇಶ್ವರ ಎಂ. ಎಸ್. ಕುಂದಾಪುರದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡುತ್ತಾ ಹೇಳಿದರು. ಕುಂದಾಪುರದ ಕರ್ಣಾಟಕ ಬ್ಯಾಂಕ್ ಗ್ರಾಹಕರು, ಅಭಿನಂದನಾ ಸಮಿತಿ ಹೆಸರಲ್ಲಿ ಕುಂದಾಪುರ ರೋಟರಿ ಲಕ್ಷ್ಮೀ ನರಸಿಂಹ ಕಲಾ ಮಂದಿರದಲ್ಲಿ ಏರ್ಪಡಿಸಿದ ಅಭಿನಂದನಾ ಸಮಾರಂಭದಲ್ಲಿ ಗೌರವ ಸ್ವೀಕರಿಸಿ ನುಡಿದರು. ಕರ್ಣಾಟಕ ಬ್ಯಾಂಕ್ನ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕುಟುಂಬ ಸಮೇತರಾಗಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ಹಾಗೂ ಹಟ್ಟಿಯಂಗಡಿ ಶ್ರೀ ವಿನಾಯಕ ದೇವಾಸ್ಥಾನಗಳಿಗೆ ಸೋಮವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಡಿ.ಕೆ. ಶಿವಕುಮಾರ್ ಅವರ ಆಪ್ತ ಯು.ಬಿ ಶೆಟ್ಟಿ ಸೇರಿದಂತೆ ಬೈಂದೂರು ಕಾಂಗ್ರೆಸ್ ಪಕ್ಷದ ಹಲವು ನಾಯಕರು ಜೊತೆಗಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಷ್ಟ್ರೀಯ ಹೆದ್ದಾರಿ 66ರ ಕುಂಭಸಿಯ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನ ಎದುರುಗಡೆ ಜೀಪು, ಸ್ಕೂಟಿ, ಬೈಕ್ ಹಾಗೂ ಸೈಕಲ್ ನಡುವೆ ಸರಣಿ ಅಪಘಾತದಿಂದ ಸ್ಕೂಟಿ ಸವಾರ ಮೃತಪಟ್ಟ ಘಟನೆ ಭಾನುವಾರ ಸಂಜೆ ನಡೆದಿದೆ. ಮೃತಪಟ್ಟ ವ್ಯಕ್ತಿ ತೆಕ್ಕಟೆ ನಾಗರಾಜ್ ದೇವಾಡಿಗ ಎಂದು ಗುರುತಿಸಲಾಗಿದೆ. ಉಡುಪಿಯಿಂದ ಕುಂದಾಪುರ ಕಡೆಗೆ ಅತೀ ವೇಗ ಅಜಾಗೃತೆಯಿಂದ ಬಂದ ಜೀಪು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಹೋಗುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದು ಮುಂದೆ ಸಾಗಿ ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ನಂತರ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ ಬೈಕ್ ಗೆ ಡಿಕ್ಕಿ ಹೊಡೆದು ಚಾಲಕನ ನಿಯಂತ್ರಣ ತಪ್ಪಿ ಮನೆಯೊಂದಕ್ಕೆ ನುಗ್ಗಿದೆ. ಅಪಘಾತದಲ್ಲಿ ಸ್ಕೂಟಿ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಗಾಯಗೊಂಡ ಬೈಕ್ ಸವಾರ ಮತ್ತು ಸೈಕಲ್ ಸವಾರನನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಹಿಂದೂತ್ವ ಎಂಬುದು ಯಾರ ಮನೆಯ ಆಸ್ತಿಯೂ ಅಲ್ಲ. ನಾನೂ ಹಿಂದೂನೇ. ಬಿಜೆಪಿ ಬದುಕಿನ ಬಗ್ಗೆ ಚಿಂತನೆ ಮಾಡದೇ, ಭಾವನೆ ಜೊತೆಗೆ ಆಟವಾಡುತ್ತಿದೆ. ಬೆಲೆ ಏರಿಕೆ, ಉದ್ಯೋಗ, ಭವಿಷ್ಯದ ಬಗ್ಗೆ ಅವರಿಗೆ ಚಿಂತೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಅವರು ಇಲ್ಲಿನ ಯಡ್ತರೆ ಜೆ.ಎನ್.ಆರ್. ಸಭಾಭವನದಲ್ಲಿ ಜರುಗಿದ ಬೈಂದೂರು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಹತ್ತಾರು ಸರಕಾರಿ ಉದ್ದಿಮೆ ಸ್ಥಾಪನೆ, ಜನರ ಸಶಕ್ತಿಕರಣಕ್ಕೆ ನೂರಾರು ಯೋಜನೆಗಳನ್ನು ತಂದಿತ್ತು. ಹಾಗಾಗಿಯೇ ಇಂದು ದೇಶ ಪ್ರಗತಿಯ ಹಾದಿಯಲ್ಲಿದೆ. ಆದರೆ ಬಿಜೆಪಿ ಸರಕಾರ ಜನರಿಗೆ ಉಪಯೋಗ ಆಗುವ ಯಾವ ಯೋಜನೆಯನ್ನೂ ಜಾರಿ ಮಾಡಿಲ್ಲ. ಬದಲಿಗೆ ಭಾವನೆ ಜೊತೆಗೆ ಆಟವಾಡುತ್ತಿದೆ. ಅವರು ಹಿಂದೂಗಳು ಮುಂದು ಎಂದರೆ, ನಾವೆಲ್ಲರೂ ಸೇರಿ ಒಂದು ಎಂದು ಕಾಂಗ್ರೆಸ್ ಹೇಳುತ್ತದೆ. ಎಲ್ಲಾ ಧರ್ಮ, ಜನಾಂಗ, ಜಾತಿ ಸೇರಿಯೇ ಒಂದು ದೇಶವಾಗಿದೆ ಎಂದರು. ಕಷ್ಟಕಾಲದಲ್ಲಿ ಜೊತೆಗಿರುವವರೆಲ್ಲ ನಮ್ಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಎ23: ಬೈಂದೂರು ಬಿಜೆಪಿಯ ಹಿರಿಯ ನಾಯಕ, ಜಿ.ಪಂ ಮಾಜಿ ಸದಸ್ಯ ಕೆ. ಬಾಬು ಶೆಟ್ಟಿ, ಜಿಪಂ ಮಾಜಿ ಸದಸ್ಯ ಶಂಕರ ಪೂಜಾರಿ ಸೇರಿದಂತೆ ಬೈಂದೂರು ಮಂಡಲ ಬಿಜೆಪಿಯ ಹಲವು ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಬೈಂದೂರು ಜೆ.ಎಸ್.ಆರ್ ಕಲಾಮಂದಿರದಲ್ಲಿ ಭಾನುವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷದ ಬಾವುಟ ಸ್ವೀಕರಿಸುವ ಮೂಲಕ ಅವರು ಪಕ್ಷಕ್ಕೆ ಸೇರ್ಪಡೆಗೊಂಡರು. ಕೆ. ಬಾಬು ಶೆಟ್ಟಿ ಅವರು ಕಳೆದ ಮುರು ದಶಕಗಳಿಂದ ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿದ್ದು, 4 ಭಾರಿ ಬಿಜೆಪಿ ಟಿಕೆಟ್ ವಂಚಿತರಾಗಿದ್ದರು. ಶಂಕರ ಪೂಜಾರಿ ಅವರು ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿದ್ದರೂ ಬಿ.ಎಂ. ಸುಕುಮಾರ ಶೆಟ್ಟಿ ಅವರು, ಬಿಜೆಪಿಗೆ ಕರೆತಂದಿದ್ದರು. ಆ ಬಳಿಕ ಜಿ.ಪಂ ಸದಸ್ಯರಾಗಿದ್ದಲ್ಲದೇ ಪಕ್ಷ ಸಂಘಟನೆಯಲ್ಲಿಯೂ ತೊಡಗಿಕೊಂಡಿದ್ದರು. ಸದಾಶಿವ ಪಡುವರಿ ಅವರು ಪಡುವರಿ ಪಂಚಾಯತ್ ಉಪಾಧ್ಯರಾಗಿ ಸೇವೆ ಸಲ್ಲಿಸಿದವರು. ವೆಂಕಟ ಪೂಜಾರಿ ತಾಪಂ ಸದಸ್ಯರೂ ಆಗಿದ್ದರು. ವಂಡ್ಸೆ ದೀಪಕ್ ಶೆಟ್ಟಿ ಬಿಜೆಪಿ ನಾಯಕರಾಗಿದ್ದರು. ಬದಲಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಾಧಿಸುವ ಛಲವಿದ್ದರೆ ಸಾಧನೆ ಸಾಧ್ಯವಾಗುವುದು. ನಮ್ಮ ಗುರಿ ಕಡೆಗೆ ಎಷ್ಟು ಸಾಧ್ಯವೊ ಅಷ್ಟು ಪ್ರಾಮಾಣಿಕವಾಗಿ ಶ್ರಮ ವಹಿಸಿ ಕರ್ತವ್ಯ ನಿರ್ವಹಿಸದಾಗ ಖಂಡಿತವಾಗಿಯೂ ಯಶಸ್ಸು ದೊರೆಯುತ್ತದೆ. ಮಕ್ಕಳು ಚಿಕ್ಕ ವಯಸ್ಸಿನಲ್ಲಿಯೇ ಕನಸು ನನಸು ಮಾಡಿಕೊಳ್ಳಲು ಬೇಕಾದ ತಯಾರಿ ಆರಂಭಿಸಬೇಕು ಎಂದು ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಅವರು ಹೇಳಿದರು. ಅವರು ಡಾ|| ಶಿವರಾಮ ಕಾರಂತ ಪ್ರತಿಷ್ಠಾನ(ರಿ)ಕೋಟ, ಡಾ|| ಶಿವರಾಮ ಕಾರಂತ ಟ್ರಸ್ಟ್ (ರಿ) ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್, ಗೀತಾನಂದ ಫೌಂಡೇಶನ್ ಮಣೂರು-ಪಡುಕೆರೆ, ಜೆ.ಸಿ.ಐ ಕಲ್ಯಾಣಪುರ, ಉಸಿರು ತರಬೇತಿ-ಅಧ್ಯಯನ ಕೇಂದ್ರ ಕೋಟ ಇವರ ಆಶ್ರಯದಲ್ಲಿ ದಿ.ಕೆ.ಸಿ. ಕುಂದರ್ ಸ್ಮರಣಾರ್ಥ ಕೋಟದ ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ನಡೆಯುತ್ತಿರುವ ಮಕ್ಕಳ ಬೇಸಿಗೆ ಶಿಬಿರ ವಿಕಸನ-೨೦೨೩ (ಪರಿವರ್ತನೆಯ ತಂಗಾಳಿ) ಕಾರ್ಯಕ್ರಮದ ಸಮಾರೋಪ ಸಮಾರಂಭ ಹಾಗೂ ದಿ.ಕೆ.ಸಿ ಕುಂದರ್ ಸ್ಮಾರಕ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು. ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಸವಣ್ಣನವರು ಜಾತ್ಯಾತೀತ ಸಮಾಜ ನಿರ್ಮಿಸಲು ಹೊರಟ ಮಹಾನ್ ದಾರ್ಶನಿಕ. ಸಾಮಾಜಿಕ ನ್ಯಾಯ, ವ್ಯಕ್ತಿ ಸ್ವಾತಂತ್ರ್ಯ, ಮಾನವ ಹಕ್ಕುಗಳ ಸಮಾನತೆ ಮತ್ತು ವಿಶ್ವ ಬಂಧುತ್ವದ ವಿಚಾರಗಳನ್ನು ಪ್ರತಿಪಾದಿಸಿದ ಬಸವಣ್ಣನವರ ವಿಚಾರಗಳು ಎಲ್ಲಾ ಕಾಲಕ್ಕೂ ಪ್ರಸ್ತುತವಾಗಿದೆ ಎಂದು ಗಂಗೊಳ್ಳಿಯ ಮಾಜಿ ಮಂಡಲ ಪ್ರಧಾನ ಬಿ. ಸದಾನಂದ ಶೆಣೈ ಹೇಳಿದರು. ಗಂಗೊಳ್ಳಿಯ ಶ್ರೀ ಇಂದುಧರ ದೇವಸ್ಥಾನದ ವತಿಯಿಂದ ದೇವಸ್ಥಾನದ ಸಮುದಾಯ ಭವನದಲ್ಲಿ ಭಾನುವಾರ ಜರುಗಿದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು. ದೇವಸ್ಥಾನದ ಪ್ರಧಾನ ಅರ್ಚಕ ಶಿವಾನಂದ ಜಿ.ಟಿ., ಮಾಜಿ ಅಧ್ಯಕ್ಷ ನರಸಿಂಹ ಕೆ., ವೆಂಕಟೇಶ ಖಾರ್ವಿ, ಜಗದೀಶ ಎಂ.ಜಿ., ಜಿ.ಈಶ್ವರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಒಕ್ಕೂಟದ ಅಧ್ಯಕ್ಷೆ ಸುಮಿತ್ರ ಜಿ., ಸುಶೀಲಾ ಜಿ.ಟಿ., ನೇತ್ರಾವತಿ, ಸರೋಜ ಮೊದಲಾದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ ಆಶ್ರಯದಲ್ಲಿ ಮಾತಾ ಪಿತೃ ವಂದನಾ ಕಾರ್ಯಕ್ರಮ ಗಂಗೊಳ್ಳಿಯ ಶ್ರೀ ವೀರ ವಿಠಲ ಸಭಾಗೃಹದಲ್ಲಿ ಶುಕ್ರವಾರ ನಡೆಯಿತು. ಶಿಶು ಮಂದಿರದ ಅಧ್ಯಕ್ಷೆ ಸವಿತಾ ಯು. ದೇವಾಡಿಗ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಪುರೋಹಿತರಾದ ಜಿ.ರಾಘವೇಂದ್ರ ಆಚಾರ್ಯ ಮಾತನಾಡಿ, ಇಂದಿನ ದಿನಗಳಲ್ಲಿ ಮಕ್ಕಳಿಗೆ ತಂದೆ ತಾಯಿಯ ಮೇಲೆ ಪ್ರೀತಿ, ವಿಶ್ವಾಸ, ಗೌರವ ಕಡಿಮೆಯಾಗುತ್ತಿದೆ. ಬಾಲ್ಯದಲ್ಲಿ ಅವರಿಗೆ ಸರಿಯಾದ ಶಿಕ್ಷಣ, ಸೂಕ್ತ ಮಾರ್ಗದರ್ಶನ ನೀಡುವುದು ಅವಶ್ಯಕ. ಹಿಂದಿನ ಕಾಲದಲ್ಲಿ ತಂದೆ ತಾಯಿಯನ್ನು ದೇವರಿಗೆ ಸಮ ಎನ್ನುತ್ತಿದ್ದರು. ಆದರೆ ಕಾಲ ಬದಲಾದಂತೆ ತಂದೆ ತಾಯಿಯರನ್ನು ನೋಡುವ ಶೈಲಿ ಕೂಡ ಬದಲಾಗುತ್ತಿದೆ. ಶಿಶು ಮಂದಿರದ ಶಿಕ್ಷಣದಲ್ಲಿ ಮಾತಾ ಪಿತೃ ವಂದನ ಕಾರ್ಯಕ್ರಮದ ಮೂಲಕ ಮಕ್ಕಳಲ್ಲಿ ತಂದೆ ತಾಯಿಯ ಬಗ್ಗೆ ಪೂಜ್ಯ ಭಾವನೆಯನ್ನು ಬೆಳೆಸಿ ತನ್ಮೂಲಕ ತಂದೆ ತಾಯಿಯನ್ನು ಗೌರವದಿಂದ ಕಾಣುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು. ಶಿಶು ಮಂದಿರದ ಸಂಚಾಲಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಹನಾ ಅಕ್ವಾಟಿಕ್ ಮತ್ತು ಸ್ಪೋರ್ಟ್ಸ್ ಕ್ಲಬ್ ಅಂಕದಕಟ್ಟೆ,ಕೋಟೇಶ್ವರ ಮತ್ತು ಕಶ್ವಿ ಚೆಸ್ ಸ್ಕೂಲ್ (ರಿ.) ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ,ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಷನ್,ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್, ಅಖಿಲ ಭಾರತ ಚೆಸ್ ಫೆಡರೇಶನ್ ಮತ್ತು ಅಂತರಾಷ್ಟ್ರೀಯ ಚೆಸ್ ಫೆಡರೇಶನ್ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ( ಬಿಲೋ 2000)ಅಮೆಚೂರ್ ಫಿಡೆ ರೇಟೆಡ್ ಚೆಸ್ ಚಾಂಪಿಯನ್ ಶಿಪ್-2023 ಕೋಟೇಶ್ವರದ ಸಹನಾ ಆರ್ಕಿಡ್ ಹೋಟೆಲ್ ನಲ್ಲಿ ಆರಂಭಗೊಂಡಿತು. ಸರಳವಾಗಿ ನಡೆದ ಉಧ್ಘಾಟನಾ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಮೈಸೂರಿನ ಪ್ರಸಿದ್ಧಿ ಭಟ್ ದೀಪ ಬೆಳಗಿಸಿ ಚಾಲನೆ ನೀಡಿದರು. ಸಹನಾ ಗ್ರೂಪಿನ ಅಧ್ಯಕ್ಷೆ ಸಹನಾ ಎಸ್ ಶೆಟ್ಟಿ, ಕಶ್ವಿ ಚೆಸ್ ಸ್ಕೂಲ್ ನ ಅಧ್ಯಕ್ಷ ನರೇಶ್ ಬಿ, ಕಾರ್ಯದರ್ಶಿ ಪುರುಷೋತ್ತಮ ಕಾಮತ್, ಮುಖ್ಯ ತೀರ್ಮಾನಕಾರ ಅನಿಲ್ ಎನ್ ಜೆ ಉಪಸ್ಥಿತರಿದ್ದರು. ಎಪ್ರಿಲ್ 23ರ ತನಕ ನಡೆಯುವ ಚಾಂಪಿಯನ್ ಶಿಪ್ ನಲ್ಲಿ ಅಗ್ರಸ್ಥಾನದಲ್ಲಿರುವ 4 ಆಟಗಾರರನ್ನು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ ಮಾಡಲಾಗುತ್ತದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 2022-2023ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟದ 11 ರ್ಯಾಂಕ್ಗಳನ್ನು ಪಡೆಯುವುದರೊಂದಿಗೆ ಅಭೂತ ಪೂರ್ವ ಸಾಧನೆ ಮೆರೆದ ಕುಂದಾಪುರದ ಏಕೈಕ ಕಾಲೇಜಾಗಿ ಹೊರಹೊಮ್ಮಿದೆ. ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ. ವಾಣಿಜ್ಯ ವಿಭಾಗದಲ್ಲಿ 141 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 96 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ನಲ್ಲಿ, 44 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, ಓರ್ವ ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಈ ಬಾರಿಯ ವಿಜ್ಞಾನ ವಿಭಾಗದಲ್ಲಿ 238 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 135 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ನಲ್ಲಿ, 102 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಭೌತಶಾಸ್ತ್ರ 03, ರಸಾಯನಶಾಸ್ತç 05, ಗಣಿತಶಾಸ್ತ್ರ 09, ಜೀವಶಾಸ್ತ್ರ 03, ಗಣಕ ವಿಜ್ಞಾನ 30, ಬೇಸಿಕ್ ಮ್ಯಾಥ್ಸ 03, ಲೆಕ್ಕಶಾಸ್ತ್ರ 11, ವ್ಯವಹಾರ ಅಧ್ಯಯನ 05, ಸಂಖ್ಯಾಶಾಸ್ತ್ರ 04, ಕನ್ನಡ 03, ಸಂಸ್ಕೃತ 12 ವಿಷಯವಾರು 100ಕ್ಕೆ 100 ಅಂಕಗಳನ್ನು…
