ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗ್ರಾಮೀಣ ಬದುಕಿನ ಸೊಗಡು, ಕೃಷಿ ಸಂಸ್ಕೃತಿ ಹಾಗೂ ಸಾಂಪ್ರದಾಯಿಕ ಕ್ರೀಡೆಗಳನ್ನು ಪರಿಚಯಿಸುವ ಮತ್ತು ಉಳಿಸಿ ಬೆಳೆಸುವ ಉದ್ದೇಶದಿಂದ ಕಾಲೇಜು ಅಭಿವೃದ್ಧಿ ಸಮಿತಿ, ಹಳೆ ವಿದ್ಯಾರ್ಥಿ ಸಂಘ ಹಾಗೂ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಹೊಸಂಗಡಿ ಇವರ ಸಹಭಾಗಿತ್ವದಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ವತಿಯಿಂದ ಹೊಸಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರದಂದು ʼಹೂಂಟಿ ಗದ್ದೆಗೆ ಆಟ’ ಎಂಬ ವಿಶಿಷ್ಟ ಗ್ರಾಮೀಣ ಕ್ರೀಡಾಕೂಟವು ಸಂಭ್ರಮ ಸಡಗರದಿಂದ ನಡೆಯಿತು ʼಮಣ್ಣಿನ ಮಡಿಲಲ್ಲಿ ಒಂದ್ ದಿನʼ ಎಂಬ ಆಶಯದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು, ಉಪನ್ಯಾಸಕರು, ಶಿಕ್ಷಕರು ಹಾಗೂ ಸಾರ್ವಜನಿಕರು ಉತ್ಸಾಹದಿಂದ ಪಾಲ್ಗೊಂಡರು. ಕೆಸರಿನ ಗದ್ದೆಯಲ್ಲಿ ನಡೆದ ವಿವಿಧ ಗ್ರಾಮೀಣ ಆಟಗಳಲ್ಲಿ ಸ್ಪರ್ಧಾಳುಗಳು ಕ್ರೀಡಾಸ್ಫೂರ್ತಿಯಿಂದ ಭಾಗವಹಿಸಿ ಸಂಭ್ರಮಿಸಿದರು. ಆಧುನಿಕ ಜೀವನಶೈಲಿಯ ನಡುವೆ ಮರೆಯಾಗುತ್ತಿರುವ ಗ್ರಾಮೀಣ ಕ್ರೀಡೆಗಳು ಮತ್ತು ಕೃಷಿ ಸಂಸ್ಕೃತಿಯನ್ನು ಯುವಜನರಿಗೆ ಪರಿಚಯಿಸುವಲ್ಲಿ ಕಾರ್ಯಕ್ರಮ ವಿಶೇಷ ಗಮನ ಸೆಳೆಯಿತು. ಮಣ್ಣಿನೊಂದಿಗೆ ಬೆರೆತು, ನಗುತ್ತಾ, ಆಟವಾಡುತ್ತಾ ಪಾಲ್ಗೊಂಡ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಲಾವಣ್ಯ ರಿ. ಬೈಂದೂರು ಇದರ ಸುವರ್ಣ ಮಹೋತ್ಸವದ ಮಹಾಸಭೆ ಲಾವಣ್ಯ ರಂಗಮನೆಯಲ್ಲಿ ನಡೆಯಿತು. ಮುಂದಿನ ಎರಡು ವರ್ಷಗಳ ಅವಧಿಗೆ ಹಾಗೂ ಸುವರ್ಣ ಮಹೋತ್ಸವ ಆಚರಣೆಗಾಗಿ ನೂತನ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು. ನೂತನ ಅಧ್ಯಕ್ಷರಾಗಿ ಬಿ. ಗಣೇಶ ಕಾರಂತ್, ಪ್ರಧಾನ ಕಾರ್ಯದರ್ಶಿ ಎಚ್. ಉದಯ ಆಚಾರ್ಯ ಆಯ್ಕಾಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಬಾಲಚಂದ್ರ ವಿ.ಆರ್. ರಾಮ ಟೈಲರ್, ಉಪಾಧ್ಯಕ್ಷರಾಗಿ ನಾರಾಯಣ ಕೆ., ಪಾಂಡುರಂಗ ಪಡಿಯಾರ್, ಸುಬ್ರಹ್ಮಣ್ಯ ಜಿ. ಉಪ್ಪುಂದ, ಜೊತೆ ಕಾರ್ಯದರ್ಶಿಯಾಗಿ ಗಣೇಶ ಪರಮಾನಂದ, ರೋಶನ್ ಕುಮಾರ್, ಶಶಿಧರ ಕಾರಂತ್ ಬಿ., ಕೋಶಾಧಿಕಾರಿಯಾಗಿ ಸುರೇಶ್ ಹುದಾರ್, ಸಂಘಟನಾ ಕಾರ್ಯದರ್ಶಿಯಾಗಿ ನಾಗರಾಜ ಯಡ್ತರೆ, ರಾಜೇಶ್ ನಾಯ್ಕ, ಸುಮಂತ ಆಚಾರ್ಯ, ವ್ಯವಸ್ಥಾಪಕರಾಗಿ ಗಣಪತಿ ಎಸ್., ನರಸಿಂಹ ನಾಯಕ್, ಸತ್ಯ ಪ್ರಸನ್ನ ಗೌರವ ಸಲಹೆಗಾರರಾಗಿ ನಾಗರಾಜ ಶೆಟ್ಟಿ, ಸದಾಶಿವ ಡಿ., ಗಿರೀಶ್ ಬೈಂದೂರು, ದಿನೇಶ ಕೆ, ಉದಯ ಪಡಿಯಾರ್ ಆಯ್ಕೆಯಾಗಿದ್ದಾರೆ. ಕಾರ್ಯಕಾರಿ ಸಮಿತಿ ಸದಸ್ಯರಾಗಿ ಮೋಹನ್ ಕಾರಂತ್, ನಾಗಪ್ಪ ಬಿ., ಜನಾರ್ದನ ಪಟವಾಲ್, ಗುರುರಾಜ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ಶಿಸ್ತು, ವೈಯಕ್ತಿಕ ಬೆಳವಣಿಗೆ ಹಾಗೂ ಭವಿಷ್ಯದ ಗುರಿಗಳ ಕುರಿತು ಚರ್ಚಿಸುವ ಮಹತ್ವದ ಉದ್ದೇಶದೊಂದಿಗೆ ಬಾರ್ಕೂರಿನ ಸುಜ್ಞಾನ ನ್ಯಾಷನಲ್ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ಪೋಷಕ-ಶಿಕ್ಷಕರ ಸಭೆಯು ಅತ್ಯಂತ ಯಶಸ್ವಿಯಾಗಿ ನೆರವೇರಿತು. ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ನಡೆದ ಸಭೆಯಲ್ಲಿ ವಿದ್ಯಾರ್ಥಿಗಳ ಹಾಜರಾತಿ, ಕಲಿಕಾ ಪ್ರಗತಿ, ವೈಯಕ್ತಿಕ ಸಾಮರ್ಥ್ಯ ಹಾಗೂ ಶೈಕ್ಷಣಿಕ ಗುರಿಗಳ ಕುರಿತು ಪೋಷಕರು ಮತ್ತು ಶಿಕ್ಷಕರ ನಡುವೆ ಅರ್ಥಪೂರ್ಣ ವಿಚಾರ ವಿನಿಮಯ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, “ಶಿಸ್ತು ಜೀವನಕ್ಕೆ ಸರಿಯಾದ ದಾರಿ ತೋರಿಸಿದರೆ, ಹೊಂದಾಣಿಕೆಯು ಜೀವನವನ್ನು ಸುಂದರಗೊಳಿಸುತ್ತದೆ. ಶಿಸ್ತು ಮತ್ತು ಹೊಂದಾಣಿಕೆಗಳು ಉತ್ತಮ ಸಂಬಂಧಗಳನ್ನು ಕಟ್ಟುವ ಸೇತುವೆಯಾಗಿದ್ದು, ವಿದ್ಯಾರ್ಥಿಗಳು ಸ್ಪಷ್ಟ ಗುರಿ ರೂಪಿಸಿಕೊಂಡು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗಬೇಕು,” ಎಂದು ಕರೆ ನೀಡಿದರು. ಮುಖ್ಯ ಅತಿಥಿಯಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸೈಂಟ್ ಥಾಮಸ್ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶನಿವಾರ ಅತ್ಯಂತ ಸಂಭ್ರಮ, ಸಡಗರ ಹಾಗೂ ದೇಶಭಕ್ತಿಯ ವಾತಾವರಣದಲ್ಲಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಭಾರತೀಯ ಸೇನೆಯ ನಿವೃತ್ತ ಯೋಧರಾದ ಜಾನ್ ಸಿ. ಥಾಮಸ್ ಅವರು ಆಗಮಿಸಿ, ಧ್ವಜಾರೋಹಣ ನೆರವೇರಿಸಿ, ಮಾತನಾಡಿ, ದೇಶದ ಭದ್ರತೆ ಮತ್ತು ಸ್ವಾತಂತ್ರ್ಯಕ್ಕಾಗಿ ಸೈನಿಕರು ಸಲ್ಲಿಸುವ ಸೇವೆಯನ್ನು ವಿವರಿಸಿದರು. ವಿದ್ಯಾರ್ಥಿಗಳು ದೇಶದ ಉತ್ತಮ ನಾಗರಿಕರಾಗಿ ಬೆಳೆಯಬೇಕು, ಶಿಸ್ತು, ಪ್ರಾಮಾಣಿಕತೆ ಮತ್ತು ದೇಶಪ್ರೇಮವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಪ್ರಾಂಶುಪಾಲರಾದ ವಂದನೀಯ ಫಾದರ್ ಫಿಲಿಪ್ ನೆಲ್ಲಿವಿಳಾ ಅವರು ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯದ ಮಹತ್ವವನ್ನು ತಿಳಿಸಿ, ದೇಶದ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು. ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು. ದೇಶಭಕ್ತಿ ಗೀತೆಗಳು, ನೃತ್ಯಗಳು, ದೇಶಭಕ್ತಿಯ ನಾಟಕಗಳು, ಭಾಷಣಗಳು ಹಾಗೂ ವಿವಿಧ ಕಲಾ ಪ್ರದರ್ಶನಗಳ ಮೂಲಕ ವಿದ್ಯಾರ್ಥಿಗಳು ಭಾರತದ ವೈವಿಧ್ಯತೆ, ಸಂಸ್ಕೃತಿ ಮತ್ತು ದೇಶಪ್ರೇಮವನ್ನು ಮನೋಜ್ಞವಾಗಿ ಅನಾವರಣಗೊಳಿಸಿದರು. ವಿದ್ಯಾರ್ಥಿಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷರು ಹಾಗೂ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಧ್ವಜಾರೋಹಣಗೈದು ಮಾತನಾಡಿ,ಇಂದು ಜಾಗತಿಕ ಮಟ್ಟದಲ್ಲಿ ಭಾರತ ದೇಶದ ಖ್ಯಾತಿ ಹೆಚ್ಚುತ್ತಿದೆ. ಸ್ವಾತಂತ್ರ್ಯ ಸಂಪಾದನೆ ಎಂಬುದು ಸುಲಭಕ್ಕೆ ಸಿಕ್ಕ ಫಲವಾಗಿರಲಿಲ್ಲ. ಅನೇಕ ಮಹನೀಯರು, ಸ್ವಾತಂತ್ರ್ಯ ಸಿಂಹಗಳು ತಮ್ಮ ಇಡೀ ಬದುಕನ್ನು ಸ್ವಾತಂತ್ರ್ಯಕ್ಕಾಗಿ ತ್ಯಾಗ ಮಾಡಿದ್ದಾರೆ. ಹಿರಿಯರ ಶ್ರಮದ ಫಲದಿಂದ ಈ ಸ್ವಾತಂತ್ರ್ಯವನ್ನು ನಾವೆಲ್ಲರೂ ಒಗ್ಗೂಡಿ ರಾಷ್ಟ್ರ ಕಟ್ಟುವ ಕೆಲಸ ಮಾಡುವ ಮೂಲಕ ಸಾರ್ಥಕಗೊಳಿಸಬೇಕೆಂದು ಕರೆ ಕೊಟ್ಟರು. ಸಂಸ್ಥೆಯ ಸಹಶಿಕ್ಷಕರಾದ ರಾಘವೇಂದ್ರ ದುರ್ಗ ಬಿಲ್ಲವ ಸ್ವಾತಂತ್ರ್ಯ ಸಂಭ್ರಮದ ಬಗ್ಗೆ ಮಾತನಾಡಿ, “ಇಂದಿನ ದಿನ ಸಮಸ್ತ ಭಾರತೀಯರಿಗೂ ಹೆಮ್ಮೆಯ ದಿನವಾಗಿದೆ. ಸ್ವಾತಂತ್ರ್ಯ ದೊರಕಿ 80 ವರ್ಷಗಳೇ ಉರುಳಿ ಹೋಗಿವೆ, ಇಷ್ಟು ವರ್ಷಗಳ ಇತಿಹಾಸದಲ್ಲಿ ಈ ದೇಶ ಬಹಳಷ್ಟನ್ನು ಸಾಧಿಸಿದೆ. ಆರ್ಥಿಕತೆ, ಕ್ರೀಡೆ, ಸಾಂಸ್ಕೃತಿಕ ಮತ್ತು ಬಾಹ್ಯಾಕಾಶ ಕ್ಷೇತ್ರದಲ್ಲಿ ಅನುಪಮವಾದ ಸಾಧನೆಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ.ನವದೆಹಲಿ: ಶ್ರೀಕ್ಷೇತ್ರ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ನಿತ್ಯ ಆಗಮಿಸುವ ಲಕ್ಷಾಂತರ ಭಕ್ತರ ಪ್ರಯಾಣವನ್ನು ಮತ್ತಷ್ಟು ಸುಗಮ ಹಾಗೂ ಅನುಕೂಲಕರಗೊಳಿಸುವ ನಿಟ್ಟಿನಲ್ಲಿ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರು ಮಂಗಳವಾರ ನವದೆಹಲಿಯಲ್ಲಿ ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣನವರನ್ನು ಭೇಟಿ ಮಾಡಿ, ಮೂಕಾಂಬಿಕಾ ರಸ್ತೆ (ಬೈಂದೂರು) ರೈಲು ನಿಲ್ದಾಣವನ್ನು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಕ್ಕೆ ರೈಲು ನಿಲ್ದಾಣವಾಗಿ ಅಧಿಕೃತವಾಗಿ ಗುರುತಿಸುವಂತೆ ಮನವಿ ಸಲ್ಲಿಸಿದರು. ಮೂಕಾಂಬಿಕಾ ರಸ್ತೆ (ಬೈಂದೂರು) ರೈಲು ನಿಲ್ದಾಣ ದೇವಾಲಯದಿಂದ ಕೇವಲ 27 ಕಿ.ಮೀ. ದೂರದಲ್ಲಿದ್ದು, ಬೈಂದೂರಿನಿಂದ ಕೊಲ್ಲೂರಿಗೆ NH-766C ಮೂಲಕ ನೇರ ರಸ್ತೆ ಸಂಪರ್ಕ, ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್‌ಗಳ ಸುಲಭ ಸೇವೆಯೂ ಲಭ್ಯವಿದೆ. ಹೀಗಾಗಿ ಕರ್ನಾಟಕ ಸೇರಿದಂತೆ ಕೇರಳ, ತಮಿಳುನಾಡು, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ ಹಾಗೂ ಗೋವಾ ಮತ್ತಿತರ ರಾಜ್ಯಗಳಿಂದ ರೈಲಿನ ಮೂಲಕ ಆಗಮಿಸುವ ಭಕ್ತರಿಗೆ ಬೈಂದೂರು ಹೆಚ್ಚು ಅನುಕೂಲಕರ ಮತ್ತು ಹತ್ತಿರದ ನಿಲ್ದಾಣವಾಗಿದೆ. ಬೈಂದೂರನ್ನು ಆದ್ಯತೆಯ ರೈಲು ನಿಲ್ದಾಣವಾಗಿ ಗುರುತಿಸುವುದರಿಂದ ಭಕ್ತರಿಗೆ ಕಡಿಮೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳಿಗೆ ಕಲಿಯುವ ಛಲ ಇರಬೇಕು, ತಂದೆ- ತಾಯಿ ಅವರಿಗೆ ಸಪೋರ್ಟ್ ಮಾಡಬೇಕು. ಮಕ್ಕಳ ಒಳ್ಳೆಯ ಹವ್ಯಾಸಗಳಿಗೆ ಸಕರಾತ್ಮಕವಾದ ಅವಕಾಶ ಕಲ್ಪಿಸಿಕೊಡಬೇಕು ಆಗ ಮಾತ್ರ ಮಕ್ಕಳು ಉತ್ತಮ ವ್ಯಕ್ತಿಗಳಾಗಿ ರೂಪುಗೊಳುತ್ತಾರೆ ಎಂದು ಕನ್ನಡದ ಜನಪ್ರಿಯ ಪ್ರೇರಕ ಭಾಷಣಕಾರರಾದ ಡಾ. ರಾಹುಲ್ ದೇವರಾಜ್ ಹೇಳಿದರು. ಅವರು ಶುಕ್ರವಾರ ಜನತಾ ಪದವಿ ಪೂರ್ವ ಕಾಲೇಜ್ ಹೆಮ್ಮಾಡಿಯ ಪ್ರಥಮ ಪಿಯು ಮತ್ತು ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳ ಪೋಷಕರ ಸಭೆ ಜನತಾ ದಿಕ್ಸೂಚಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿರು. ಮಕ್ಕಳ ಜೀವನ ರಥ ಮುನ್ನೆಡೆಯಲು ಪೋಷಕರು ಶಿಕ್ಷಕರು ಇಬ್ಬರ ಪಾತ್ರ ಮುಖ್ಯವಾದುದು.ಪೋಷಕರು ಮನೆಯಲ್ಲಿ ತಮ್ಮ ಮಕ್ಕಳಿಗೆ ಓದುವ ವಾತಾವರಣ ಕಲ್ಪಿಸಿಕೊಡಬೇಕು, ಇಂದು ಮಕ್ಕಳು ಮತ್ತು ಹೆತ್ತವರ ಸಂಬಂಧದ ಮೌಲ್ಯ ಕಡಿಮೆಯಾಗುತ್ತಿದೆ . ಪೋಷಕರು ಮತ್ತು ಮಕ್ಕಳ ಸಂಬಂಧದ ಮೌಲ್ಯ ಜಾಸ್ತಿಯಾದಾಗ ಕಲಿಕೆ ಇನ್ನಷ್ಟು ಗಟ್ಟಿಯಾಗುತ್ತದೆ.ಮಕ್ಕಳು ನಾವು ಹೇಳಿದನ್ನು ಕೇಳುವುದಿಲ್ಲ ನಾವು ಮಾಡುದನ್ನು ಮಾಡುತ್ತಾರೆ ಎಂದು ಅವರು ಪ್ರೇರಣದಾಯಕ ಕಥೆಗಳ ಮೂಲಕ ತಿಳಿ ಹೇಳಿದರು. ಜನತಾ ಸಮೂಹ ಸಂಸ್ಥೆಯ ಅಧ್ಯಕ್ಷರಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ರಾಜಧಾನಿ ಬೆಂಗಳೂರಿನ ʼಕುಂದಾಪ್ರ ಕನ್ನಡ ಪ್ರತಿಷ್ಠಾನ (ರಿ.)ʼ ಪ್ರತಿ ವರ್ಷ ಆಚರಿಸುತ್ತಿರುವ ʼವಿಶ್ವ ಕುಂದಾಪ್ರ ಕನ್ನಡ ದಿನʼ ಬೆಂಗಳೂರಿನಲ್ಲಿ ಈ ಸಲ ಆಗಸ್ಟ್ 15ರ ಶನಿವಾರ ನಡೆಯಲಿದೆ. ʼವಿಶ್ವ ಕುಂದಾಪ್ರ ಕನ್ನಡ ದಿನ’ದ ಪ್ರಯುಕ್ತ ಬೆಂಗಳೂರಿನ ವಿಜಯನಗರದ ಬಂಟರ ಸಂಘದ ಸಭಾಂಗಣದಲ್ಲಿ ಶನಿವಾರ ಮಧ್ಯಾಹ್ನ 2 ಗಂಟೆಯಿಂದ ವಿವಿಧ ಕಾರ್ಯಕ್ರಮಗಳು ನಡೆಯಲಿವೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ.ದೀಪಕ್ ಶೆಟ್ಟಿ ಬಾರ್ಕೂರು ತಿಳಿಸಿದ್ದಾರೆ. ಕಾರ್ಯಕ್ರಮಗಳು: ಸಮಾರಂಭದಲ್ಲಿ ಕೆ.ಜಯಪ್ರಕಾಶ್ ಹೆಗ್ಡೆ, ಕುಂದಾಪ್ರ ಕನ್ನಡ ಅಧ್ಯಯನ ಪೀಠದ ಅಧ್ಯಕ್ಷ, ಕೋಟ ಶ್ರೀನಿವಾಸ ಪೂಜಾರಿ, ಉಡುಪಿ-ಚಿಕ್ಕಮಗಳೂರು ಸಂಸದ, ಪ್ರಮೋದ್ ಶೆಟ್ಟಿ: ಖ್ಯಾತ ಚಿತ್ರನಟ ಭಾಗವಹಿಸಲಿದ್ದಾರೆ. ವಿಶ್ವ ಕುಂದಾಪ್ರ ಕನ್ನಡ ದಿನ:ಆಸಾಡಿ ಅಮಾಸಿ/ ಆಟಿ ಅಮಾವಾಸ್ಯೆ (ಕರ್ಕಾಟಕ ಅಮಾವಾಸ್ಯೆ) ದಿನ ಕರಾವಳಿಗರಿಗೆ ಅತ್ಯಂತ ವಿಶೇಷವಾದದ್ದು. ಕಳೆದ ಏಳು ವರ್ಷಗಳಿಂದ ಪ್ರತಿ ವರ್ಷ ಈ ಕರ್ಕಾಟಕ ಅಮಾವಾಸ್ಯೆ ದಿನವನ್ನು ʼವಿಶ್ವ ಕುಂದಾಪ್ರ ಕನ್ನಡ ದಿನʼ ಎಂದು ಆಚರಣೆ ಮಾಡಲಾಗುತ್ತಿದ್ದು, ಈ ಸಲ ಆಗಸ್ಟ್ 12ರಂದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ಗಳಿಗೆ ಸೇರಿದ ಕಾನೂನು ಪದವೀಧರರಿಗೆ ವಕೀಲಿ ವೃತ್ತಿಯಲ್ಲಿ ತರಬೇತಿ ನೀಡಿ, ಶಿಷ್ಯವೇತನ ಮಂಜೂರು ಮಾಡಲು ಅರ್ಹ ಮತ್ತು ಆಸಕ್ತ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 10 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಜಿಲ್ಲಾ ಕಚೇರಿಗಳ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574881, 2573881 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಭಾರತೀಯ ಅಂಚೆ ಇಲಾಖೆಯಲ್ಲಿ ಕಳೆದ 44 ವರ್ಷಗಳಿಂದ ಡಾಕ್ ಸೇವಕ್ ಆಗಿ ಕರ್ತವ್ಯ ನಿರ್ವಹಿಸಿ ವಯೋನಿವೃತ್ತಿ ಹೊಂದಿದ ಗಂಗೊಳ್ಳಿ ಅಂಚೆ ಕಚೇರಿಯ ಇಮ್ತಿಯಾಜ್ ಅಹಮ್ಮದ್ ಅವರನ್ನು ಸಮ್ಮಾನಿಸಿ ಬೀಳ್ಕೊಡಲಾಯಿತು. ಕುಂದಾಪುರ ಅಂಚೆ ಉಪವಿಭಾಗದ ಎಎಸ್ಪಿ ಮಹೇಶ್ ಮತ್ತು ಗಂಗೊಳ್ಳಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ತಬ್ರೇಜ್ ಅವರು ಇಮ್ತಿಯಾಜ್ ಅಹಮ್ಮದ್ ಸಮ್ಮಾನಿಸಿ ಬೀಳ್ಕೊಟ್ಟರು. ಗಂಗೊಳ್ಳಿ ಅಂಚೆ ಕಚೇರಿಯ ಪೋಸ್ಟ್ ಮಾಸ್ಟರ್ ವೀಣಾ, ತ್ರಾಸಿ ಅಂಚೆ ಕಚೇರಿಯ ಪೋಸ್ಟ್ ಮಾಸ್ಟರ್ ಚೆನ್ನಯ್ಯ ಪೂಜಾರಿ, ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ಸೊಸೈಟಿ ಮುಖ್ಯ ಕಾರ್ಯನಿರ್ವಾಹಕ ಗಣೇಶ ನಾಯಕ್, ಅಂಜುಮಾನ್ ಉರ್ದು ಘೋಷಾ ಶಾಲೆಯ ಕಾರ್ಯದರ್ಶಿ ಉಮ್ಮರ್ ಬಾಷಾ ಸಾಹೇಬ್, ನಿವೃತ್ತ ಪೋಸ್ಟ್ ಮಾಸ್ಟರ್‌ಗಳಾದ ದೇವರಾಯ ಶೇರುಗಾರ್, ಉದಯ ಕುಮಾರ್ ಶೆಟ್ಟಿ, ಅಂಚೆ ಕಚೇರಿಯ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು. ಅಂಚೆಪೇದೆ ಶ್ವೇತಾ ಸ್ವಾಗತಿಸಿದರು. ನಿವೃತ್ತ ಪೋಸ್ಟ್ ಮಾಸ್ಟರ್ ಸೀತಾರಾಮ ಗಾಣಿಗ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.
