Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಭೌತಿಕ, ಆದ್ಯಾತ್ಮಿಕವಾಗಿ ವಿಶೇಷ ಪರಿಣಾಮ ಬೀರುವ ಜತೆಗೆ ಸಾಮಾಜಿಕ ಸಾಮರಸ್ಯ, ನಮ್ಮ ಸಂಸ್ಕೃತಿ ಬಿಂಬಿಸುವ ಯಕ್ಷಗಾನದ ಪುರಾಣ ಕತೆಗಳ ಮೂಲಕ ಈಗಿನ ಯುವ ಪೀಳಿಗೆ ಧಾರ್ಮಿಕ ಶಿಕ್ಷಣವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಜೀವನದ ಸಾರ್ಥಕತೆ ಪಡೆಯಬೇಕಾಗಿದೆ ಎಂದು ಉದ್ಯಮಿ ಬೆಳ್ವೆ ಗಣೇಶ ಕಿಣಿ ಹೇಳಿದರು. ನಾಗೂರು ಒಡೆಯರಮಠ ಶ್ರೀ ಗೋಪಾಲಕೃಷ್ಣ ಕಲಾಮಂದಿರದ ಖ್ಯಾತ ಸ್ತ್ರೀ ವೇಷಧಾರಿ ರಾಮ ನಾರಿ ಸ್ಮರಣ ವೇದಿಕೆಯಲ್ಲಿ ಕಿರಿಮಂಜೇಶ್ವರ ಧಾರೇಶ್ವರ ಯಕ್ಷಬಳಗ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ ಸಹಕಾರದಲ್ಲಿ 9ನೇ ವರ್ಷದ ಯಕ್ಷಗಾನ ಜ್ಞಾನಯಜ್ಞ ತಾಳಮದ್ದಲೆ ಸಪ್ತಾಹ ಹಾಗೂ ತೆಕ್ಕಟ್ಟೆ ಆನಂದ ಮಾಸ್ತರರ ಸ್ಮರಣೆಯ ಕಲಾತಪಸ್ವಿ 2024ರ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡಿ, ಕಲಾಪೋಷಕರು ಹಾಗೂ ಪ್ರೇಕ್ಷಕರು ಕಲೆ ಮತ್ತು ಕಲಾವಿದರ ಹಿಂದಿರುವ ದೊಡ್ಡಶಕ್ತಿ. ಸಾಂಸ್ಕೃತಿಕ ಅಭಿರುಚಿ, ಅಭಿಮಾನ ಹಾಗೂ ಹಿರಿಯರ ಸನ್ನಡತೆಯ ಸಹಕಾರದಿಂದ ಸತತ ಎಂಟು ವರ್ಷಗಳಿಂದ ಆಚರಿಸುತ್ತಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಜೀವನದಲ್ಲಿ  ಅನುಭವಕ್ಕೆ ಬರುವ ಮೌಲ್ಯಗಳು ಜೀವನದ ಆಶಯ ನೆರವೇರಿಸಲು ಪ್ರೇರಣೆಯಾಗಲಿ ಎಂದು ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಸದಸ್ಯರಾದ ಕೆ. ದೇವದಾಸ ಕಾಮತ್ ಹೇಳಿದರು. ಅವರು ನವೆಂಬರ್ 4ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಪದವಿಪೂರ್ವ ಮತ್ತು ಪದವಿ ಕಾಲೇಜು, ಶ್ರೀ ಜನಾರ್ದನ ಮಹಾಕಾಳೀ ದೇವಸ್ಥಾನ ಅಂಬಲಪಾಡಿ ಮತ್ತು ಶ್ರೀ ಕುಂದೇಶ್ವರ ದೇವಸ್ಥಾನ ಕುಂದಾಪುರ ಇವರ ಸಹಯೋಗದಲ್ಲಿ “ಒಂದು ದಿನದ ಜೀವನ ಮೌಲ್ಯ ಶಿಕ್ಷಣ ಶಿಬಿರ” ಉದ್ಘಾಟಿಸಿ ಮಾತನಾಡಿದರು. ಮೌಲ್ಯಗಳು ನಮ್ಮ ಗುರಿಯನ್ನು ಮುಟ್ಟಲು ನೆರವಾಗಬೇಕು ಎಂದು ಅಭಿಪ್ರಾಯಪಟ್ಟರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಸದಸ್ಯರಾದ ರಾಜೇಂದ್ರ ತೋಳಾರ್, ಸದಾನಂದ ಚಾತ್ರ, ಅಭಿನಂದನ ಶೆಟ್ಟಿ, ಆಡಳಿತ ಮಂಡಳಿಯ ಸದಸ್ಯರಾದ ಯು.ಎಸ್.ಶೆಣೈ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ ಸತ್ಯನಾರಾಯಣ ಉಪಸ್ಥಿತರಿದ್ದರು. ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ ಸ್ವಾಗತಿಸಿದರು. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಮ್.ಗೊಂಡ ವಂದಿಸಿದರು. ಉಪನ್ಯಾಸಕಿ ಹರ್ಷಿತಾ ವಂದಿಸಿದರು. ನಂತರ ನಡೆದ ಶಿಬಿರದಲ್ಲಿ ಮೊದಲ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: 2024 ಸೆಪ್ಟೆಂಬರ್‌ನಲ್ಲಿ ನಡೆದ ಸಿ.ಎ ಇಂಟರ್ ಮೀಡಿಯೆಟ್ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಬಿ.ಕಾಂ. ವಿದ್ಯಾರ್ಥಿಯಾದ ಸುಶಾಂತ್ 380 ಅಂಕಗಳೊಂದಿಗೆ ರಾಷ್ತ್ರೀಯ ಮಟ್ಟದಲ್ಲಿ 36ನೇ ರ್ಯಾಕ್‌ ಗಳಿಸಿರುತ್ತಾರೆ. ಅವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ದತ್ತು ಶಿಕ್ಷಣ ಯೋಜನೆಯಡಿ ಪದವಿ ಶಿಕ್ಷಣವನ್ನು ಪಡೆಯುತ್ತಿದ್ದಾರೆ. ರಿತ್ವಿಕ್ ಜೆ. ಶೆಟ್ಟಿ (327), ಸ್ಮಿತಾ ಎಸ್. ಹೆಗ್ಡೆ (301) ಮತ್ತು ಜ್ಯೋತಿ (300) ಇವರು ಗ್ರೂಪ್ -01 ಮತ್ತು ಗ್ರೂಪ್ -02 ವಿಭಾಗದಲ್ಲಿ ಮೊದಲ ಪ್ರಯತ್ನದಲ್ಲಿ ಉತ್ತಮ ಫಲಿತಾಂಶದೊAದಿಗೆ ಉತ್ತೀರ್ಣರಾಗಿರುತ್ತಾರೆ. ಇಂಟರ್‌ಮೀಡಿಯಟ್ ಗ್ರೂಪ್ -01 ವಿಭಾಗದಲ್ಲಿ ಕಿರಣ್ (167), ಶ್ರೀರಕ್ಷಾ (165) ಮತ್ತು ಪ್ರೀತಮ್ ವಿ ನಾಯ್ಕ್ (150) ಇವರು ಉತ್ತಮ ಫಲಿತಾಂಶದೊAದಿಗೆ ಉತ್ತೀರ್ಣರಾಗಿರುತ್ತಾರೆ. ಇಂಟರ್ ಮೀಡಿಯಟ್ ಗ್ರೂಪ್ -02 ವಿಭಾಗದಲ್ಲಿ ಮಯೂರಿ (173), ಕಲ್ಪನಾ ಗಜಾನನಾ ಹೆಗ್ಡೆ (170), ಸಿ ಶ್ರೇಯಾಂಕ್ ನಾಯಕ್ (164), ಪಲ್ಲವಿ ಆರ್ (160), ವಿಕ್ರಾಂದ್ ಪುಂಡಲೀಕ್ (159), ಪಾಯಲ್ ಜೆ ಬಂಗೇರಾ (155),…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ವರುಣತೀರ್ಥ ವೇದಿಕೆ ವತಿಯಿಂದ ಆಯೋಜಿಸಲಾದ ನಿರಂತರ- 2024ರ ಸಮಾರಂಭದಲ್ಲಿ50 ವರ್ಷ ಪುರೈಸಿದ ಸಾಲಿಗ್ರಾಮ ಮಕ್ಕಳ ಮೇಳಕ್ಕೆ ಗೌರವ ಅಭಿನಂದನಾ ಪುರಸ್ಕಾರ ಪ್ರದಾನ ಮಾಡಲಾಯಿತು. ಸಾಲಿಗ್ರಾಮ ಮಕ್ಕಳ ಮೇಳದ ಪರವಾಗಿ ಸಂಸ್ಥೆಯ ಕಾರ್ಯದರ್ಶಿ ಎಚ್‌. ಸುಜಯೀಂದ್ರ ಹಂದೆ ಅವರು ಪುರಸ್ಕಾರ ಸ್ವೀಕರಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮಂಗಳೂರು ಕಂಕನಾಡಿ ರೋಷನಿ ನಿಲಯ ಕಾಲೇಜು ಆಯೋಜಿಸಲಾಗಿದ್ದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್‌ ಕಾಲೇಜು ಕರಾಟೆ ಸ್ಪರ್ಧೆಯಲ್ಲಿ ಬೈಂದೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು  ಭಾಗವಹಿಸಿ ವೈಯಕ್ತಿಕ  ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ವಿದ್ಯಾರ್ಥಿಗಳಾದ ಲಕ್ಷ್ಮಿಕಾಂತ, ನೀಲೇಶ್‍ ಮತ್ತು ಸುಶನ್ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕದೊಂದಿಗೆ ಸೌತ್ ವೆಸ್ಟ್‌ ಜೋನ್ ಮಧ್ಯಪ್ರದೇಶದಲ್ಲಿ ನಡೆಯುವ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.  ಟೀಮ್ ಚಾಂಪಿಯನ್ ಶಿಪ್‍ನಲ್ಲಿ ಲಕ್ಷ್ಮಿಕಾಂತ, ನೀಲೇಶ, ಆಯುಷ್ ಪುತ್ರನ್, ಸುಶನ್‌, ಮಹಮ್ಮದ್ ಶಮ್ಮಜ್, ಆಯುಷ್ ನಾಯಕ್ ಭಾಗವಹಿಸಿ, ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ಬೈಂದೂರು ಕಾಲೇಜಿನ ಇತಿಹಾಸದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಅಂತರ ಕಾಲೇಜು ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ಪಡೆದಿರುವುದು ವಿಶೇಷ ಸಾಧನೆಯಾಗಿದೆ. ಈ ಸಾಧನೆಯಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು ಹಾಗೂ ಬೈಂದೂರಿನ ಗೌರವವನ್ನು ಹೆಚ್ಚಿಸಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರಾದ ನಾಗರಾಜ ಶೆಟ್ಟಿ, ಕಾಲೇಜು ಅಭಿವೃಧ್ಧಿ ಸಮಿತಿ, ಕ್ರೀಡಾ ತರಬೇತುದಾರರಾದ ಪ್ರಭಾಕರ ಗೌಡ, ಕಾಲೇಜಿನ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆ ಅಂಗವಾಗಿ ನಗರದ ಬ್ರಹ್ಮಗಿರಿಯ ಜಿಲ್ಲಾ ಬಾಲಭವನದಲ್ಲಿ ನವೆಂಬರ್ 7 ರಂದು ಬೆಳಗ್ಗೆ 10 ಗಂಟೆಯಿಂದ 9 ರಿಂದ 16 ವರ್ಷದ ಒಳಗಿನ ಮಕ್ಕಳಿಗೆ ವಿವಿಧ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ಸ್ಫರ್ಧೆಗಳಲ್ಲಿ ವಿಜೇತರಾದ ಮಕ್ಕಳು ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು ಇಲ್ಲಿ ನಡೆಯುವ ರಾಜ್ಯ ಮಟ್ಟದ “ಕಲಾಶ್ರೀ” ಸ್ಪರ್ಧಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ. ಸ್ಪರ್ಧೆಯ ವಿವರ:ಸೃಜನಾತ್ಮಕ ಪ್ರದರ್ಶನ ಕಲೆ: ಶಾಸ್ರ್ತೀಯ ನೃತ್ಯ, ಜಾನಪದ ನೃತ್ಯ, ಕರ್ನಾಟಕ ಶಾಸ್ರ್ತೀಯ ಸಂಗೀತ, ಹಿಂದು ಶಾಸ್ರ್ತೀಯ ಸಂಗೀತ, ಸುಗಮ ಸಂಗೀತ (ವೈಯಕ್ತಿಕ)ವಿಜ್ಞಾನದಲ್ಲಿ ನೂತನ ಆವಿಷ್ಕಾರ: ವಿಜ್ಞಾನಕ್ಕೆ ಸಂಬಂಧಪಟ್ಟಂತೆ ಒಂದು ವಿಷಯದ ಬಗ್ಗೆ ಮಾದರಿ ಪ್ರದರ್ಶನ.ಸೃಜನಾತ್ಮಕ ಕಲೆ: ಚಿತ್ರಕಲಾ ಸ್ಫರ್ಧೆ.ವಾದ್ಯ ಸಂಗೀತ: ತಬಲಾ, ಮೃದಂಗ, ಕೀಬೋರ್ಡ್, ಕೊಳಲು, ಡೊಳ್ಳು ಮತ್ತು ನಗಾರಿ ಹಾಗೂ ಅಂಗವಿಕಲ, ಬುಡಕಟ್ಟು ಪ್ರದೇಶದ ಮಕ್ಕಳಿಗಾಗಿ (ಯಾವುದೇ ಪ್ರಕಾರ). ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ದೂರವಾಣಿ ಸಂಖ್ಯೆ: 0820-2574978 ಅನ್ನು ಸಂಪರ್ಕಿಸಬಹುದಾಗಿದೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: “ಕನ್ನಡ ನಾಡು ತನ್ನದೇ ಆದ ಇತಿಹಾಸ ಪರಂಪರೆಯನ್ನು ಹೊಂದಿದ್ದು, ಈ ನಾಡನ್ನು ಕಟ್ಟುವಲ್ಲಿ ಅನೇಕ ಮಹನೀಯರ ತ್ಯಾಗ, ಹೋರಾಟ, ಬಲಿದಾನಗಳು ನಮ್ಮೆಲ್ಲರಿಗೂ ಸ್ಪೂರ್ತಿದಾಯಕ. ಕನ್ನಡ ನಾಡಿನ ನೆಲ, ಜಲ, ಭಾಷೆಯನ್ನು ಉಳಿಸಿ ಬೆಳೆಸಬೇಕು. ಈ ನಿಟ್ಟಿನಲ್ಲಿ ಕ್ರಿಯೇಟಿವ್ ಸಂಸ್ಥೆಯು ಸಾಹಿತ್ಯ ಕ್ಷೇತ್ರದಲ್ಲಿನ ಮಹನೀಯರನ್ನು ಗುರುತಿಸಿ ಗೌರವಿಸಿ ಅವರ ಸಾಧನೆ ಚಿಂತನೆಗಳನ್ನು ವಿದ್ಯಾರ್ಥಿಗಳಿಗೆ ತಿಳಿಸುವಲ್ಲಿ ಕಾರ್ಯೋನ್ಮುಖವಾಗಿದೆ”. ಎಂದು ಕ್ರಿಯೇಟಿವ್ ಸಂಸ್ಥೆಯ ಸಹ ಸಂಸ್ಥಾಪಕರಾದ ಅಶ್ವತ್ ಎಸ್.ಎಲ್. ಅವರು ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪರ್ಚನೆ ಮಾಡಿ ನಮನಗಳನ್ನು ಸಲ್ಲಿಸುತ್ತಾ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತುಗಳನ್ನಾಡಿದರು. ಈ ಸಂದರ್ಭದಲ್ಲಿ ಕನ್ನಡ ಉಪನ್ಯಾಸಕರಾದ ಶಿವಕುಮಾರ್, ಸಂತೋಷ್‍ ಹಾಗೂ ವಾಣಿಜ್ಯ ಶಾಸ್ತ್ರದ ಉಪನ್ಯಾಸಕರಾದ ರಾಘವೇಂದ್ರ ಮತ್ತು ನಿಲಯ ಪಾಲಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕ್ರಿಯೇಟಿವ್ ಸಂಸ್ಥೆಯ ವಿದ್ಯಾರ್ಥಿನಿಯರಿಂದ ಕನ್ನಡ ಗೀತ ಗಾಯನ ನೆರವೇರಿತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತೋಟಗಾರಿಕೆ ಇಲಾಖೆಯ ವತಿಯಿಂದ ತೋಟಗಾರಿಕೆ ಕ್ಷೇತ್ರಗಳಲ್ಲಿ ರೈತರು ಹಾಗೂ ಸಾರ್ವಜನಿಕರ ಬೇಡಿಕೆ ಆಧಾರದ ಮೇಲೆ ಉತ್ತಮ ಗುಣಮಟ್ಟದ ಅಡಿಕೆ (ರೂ.25)  ಹಾಗೂ ತೆಂಗು (ರೂ.75) ಗಿಡಗಳನ್ನು ಉತ್ಪಾದಿಸಿ ಇಲಾಖಾ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ ತೋಟಗಾರಿಕೆ ಕ್ಷೇತ್ರದಲ್ಲಿ ಅಡಿಕೆ ಹಾಗೂ ತೆಂಗು ಗಿಡಗಳು ಲಭ್ಯವಿದ್ದು ಗಿಡಗಳನ್ನು ಖರೀದಿಸಲು ಮೊ.ನಂ: 8527225123, ಕುಂದಾಪುರ ತಾಲೂಕಿನ ಕೆದೂರು ತೋಟಗಾರಿಕೆ ಕ್ಷೇತ್ರದಲ್ಲಿ ಅಡಿಕೆ ಗಿಡಗಳು ಲಭ್ಯವಿದ್ದು, ಗಿಡಗಳನ್ನು ಖರೀದಿಸಲು ಮೊ.ನಂ: 9482166313, ಕುಂದಾಪುರ ತಾಲೂಕಿನ ಕುಂಭಾಶಿ ತೋಟಗಾರಿಕೆ ಕ್ಷೇತ್ರದಲ್ಲಿ ಅಡಿಕೆ ಹಾಗು ತೆಂಗು ಗಿಡಗಳು ಲಭ್ಯವಿದ್ದು ಗಿಡಗಳನ್ನು ಖರೀದಿಸಲು ಮೊ.ನಂ:8792644127 ಹಾಗೂ ಕಾರ್ಕಳ ತಾಲೂಕಿನ ಕುಕ್ಕಂದೂರು ತೋಟಗಾರಿಕೆ ಕ್ಷೇತ್ರದಲ್ಲಿ ಅಡಿಕೆ ಹಾಗೂ ತೆಂಗು ಗಿಡಗಳು ಲಭ್ಯವಿದ್ದು, ಗಿಡಗಳನ್ನು ಖರೀದಿಸಲು ಮೊ.ನಂ: 7996394553 ಅನ್ನು ಸಂಪರ್ಕಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ತಾಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ ಎಂದು ತೋಟಗಾರಿಕೆ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಉಡುಪಿ ಸೆನ್ ಪೊಲೀಸರು ಪುತ್ತೂರು ಗ್ರಾಮದ ನಾರಾಯಣ ನಗರ ರಸ್ತೆಯ ಬಳಿ ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ನರಿಂಗಾಣ ಗ್ರಾಮದ ಸಪಾಝ್ (29), ಉಡುಪಿ ಸಂತೆಕಟ್ಟೆಯ ಚರಣ್ ಯು. ಭಂಡಾರಿ (19) ಬಂಧಿತ ಆರೋಪಿಗಳು. ಇವರಿಂದ 53,300 ರೂ. ಮೌಲ್ಯದ 740 ಗ್ರಾಂ ತೂಕದ ಗಾಂಜಾ, 25 ಸಾವಿರ ರೂ. ಮೌಲ್ಯದ ಸ್ಕೂಟರ್, 2170ರೂ. ನಗದು, 2 ಮೊಬೈಲ್‌, ಚೂರಿಯನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಒಟ್ಟು ಮೌಲ್ಯ 98,770ರೂ. ಎಂದು ಅಂದಾಜಿಸಲಾಗಿದೆ. ಉಳಿದ ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಸೆನ್ ಪೊಲೀಸ್ ಠಾಣಾ ಪೊಲೀಸ್‌ ನಿರೀಕ್ಷಕ ರಾಮಚಂದ್ರನಾಯಕ್ ಮತ್ತು ಪ್ರೊಬೆಶನರಿ ಡಿ.ವೈ.ಎಸ್.ಪಿ. ಗೀತಾ ಪಾಟೀಲ್‌ ನೇತೃತ್ವದಲ್ಲಿ ಉಪನಿರೀಕ್ಷಕ ಪವನ್ ನಾಯಕ್, ಸೆನ್ ಪೊಲೀಸ್‌ ಠಾಣಾ ಸಿಬ್ಬಂದಿ ಪ್ರವೀಣ್ ಕುಮಾರ್, ಪ್ರವೀಣ್‌, ರಾಜೇಶ್, ವೆಂಕಟೇಶ್, ನಿಲೇಶ್, ರಾಘವೇಂದ್ರ, ಪ್ರಶಾಂತ್ ಮತ್ತು ಚರಣ್‌ರಾಜ್‌ ಅವರನ್ನು ಒಳಗೊಂಡ ತಂಡ ಈ ಕಾರ್ಯಾಚರಣೆ ನಡೆಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಯೋಜನ ಪ್ರಾಧಿಕಾರದ ಅಧ್ಯಕ್ಷರಾಗಿ ವಿನೋದ್ ಕ್ರಾಸ್ತಾ ನೇಮಕ ಗೊಂಡಿದ್ದಾರೆ. ಸದಸ್ಯರಾಗಿ ಚಂದ್ರಶೇಖರ ಶೆಟ್ಟಿ, ಚಂದ್ರ ಅಮೀನ್, ಮೊಹಮ್ಮದ್ ಅಲ್ಪಾಝ್ ಅವರನ್ನು ನೇಮಕ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಲತಾ ಕೆ. ನೇಮಕಗೊಳಿಸಿ ಆದೇಶಿಸಿದ್ದಾರೆ.

Read More