Author: ನ್ಯೂಸ್ ಬ್ಯೂರೋ

ಕುಂದಾಪ್ರ  ಡಾಟ್ ಕಾಂ ಸುದ್ದಿ.ಮೂಡುಬಿದರೆ: ಶಿಕ್ಷಣ ಕ್ಷೇತ್ರದಲ್ಲಿ ನಾಟಕ ಮತ್ತು ಕಲೆ ಕೇವಲ ಪಠ್ಯೇತರ ಚಟುವಟಿಕೆಗಳಲ್ಲ. ಬದಲಾಗಿ ಅವು ಸೃಜನಶೀಲತೆ, ಬೌದ್ಧಿಕ ಬೆಳವಣಿಗೆಯನ್ನು ಅಭಿವೃದ್ಧಿ ಪಡಿಸಲಿರುವ ಪ್ರಬಲ ಸಾಧನಗಳಾಗಿವೆ  ಎಂದು ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ ಜೀವನ್‌ರಾಮ್ ಸುಳ್ಯು ತಿಳಿಸಿದರು.  ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯ ಶಿವರಾಮ ಕಾರಂತ ಸಭಾಭವನದಲ್ಲಿ ಹಮ್ಮಿಕೊಂಡ ’ಶಿಕ್ಷಣದಲ್ಲಿ ಕಲೆ ಹಾಗೂ ನಾಟಕದ ಪಾತ್ರ’ದ ಕುರಿತು ಕಾರ‍್ಯಗಾರದಲ್ಲಿ ಮಾತನಾಡಿದರು. ಶಿಕ್ಷಣದಲ್ಲಿ ಕಲೆಯನ್ನು ರೂಢಿಸಿಕೊಳ್ಳುವುದರಿಂದ ವಿದ್ಯಾರ್ಥಿಗಳನ್ನು ಸೃಜನಶೀಲರನ್ನಾಗಿ ಮಾಡಲು ಸಾಧ್ಯವಾಗುತ್ತದೆ. ಇದರಿಂದ ವಿದ್ಯಾರ್ಥಿಗಳಲ್ಲಿ ಸ್ವಯಂ ಅಭಿವ್ಯಕ್ತಿ ಮತ್ತು ಸಂವಹನಕ್ಕಾಗಿ ಮೌಲ್ಯಯುತವಾದ ಕೌಶಲ್ಯಗಳನ್ನು ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ. ಶಿಕ್ಷಣದಲ್ಲಿ ನೃತ್ಯ, ಸಂಗೀತ, ನಾಟಕ, ಸೃಜನಶೀಲ ಬರವಣಿಗೆ, ರಂಗಭೂಮಿ ಇತ್ಯಾದಿಗಳನ್ನು ಒಳಗೊಂಡಿರಬೇಕು. ನಾಟಕಗಳು ನಮ್ಮ ಸುತ್ತಮುತ್ತಲಿನ ಸುಂದರ ದೃಶ್ಯಗಳನ್ನು ನಮ್ಮ ಕಣ್ಣ ಮುಂದೆ ಸೃಷ್ಟಿಸುವುದರಿಂದ ವಿದ್ಯಾರ್ಥಿಗಳಿಗೆ ಬಹುಬೇಗನೆ ಅರ್ಥೈಸಿಕೊಳ್ಳಲು ಸಾಧ್ಯವಾಗುತ್ತದೆ. ಕಲೆಗಳು ವಿದ್ಯಾರ್ಥಿಗಳ ಬೌದ್ಧಿಕ ಮಟ್ಟವನ್ನು ಸುಧಾರಿಸಲು ಸಹಾಯಕ. ಪ್ರದರ್ಶನದ ಕಲೆಗಳು ಮಕ್ಕಳಲ್ಲಿ ತಮ್ಮ ಭಾವನೆ ಮತ್ತು ಕಲ್ಪನೆಗಳನ್ನು ಹಾಗೂ ತಮ್ಮದೇ ಆದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಪ್ರಕಟಿಸುತ್ತಾ ಬಂದಿದ್ದು, ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಇದುವರೆಗೆ ಸುಮಾರು 704 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ. ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶ ಕನ್ನಡ ಪುಸ್ತಕ ಪ್ರಾಧಿಕಾರದ್ದಾಗಿದೆ. ಸ್ವಾತಂತ್ರ‍ ದಿನಾಚರಣೆಯ ಅಂಗವಾಗಿ ಪ್ರಸಕ್ತ ಆಗಸ್ಟ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ.50 ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ, ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ, ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಮೀನುಗಾರಿಕೆ ಇಲಾಖೆಯ ವತಿಯಿಂದ ಜಿಲ್ಲಾ ವಲಯ ಯೋಜನೆಯಡಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬಾವಿ ಮತ್ತು ಹೊಂಡಗಳಲ್ಲಿ ಮೀನು ಕೃಷಿಗೆ ಸಹಾಯ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಮೀನುಗಾರರಿಗೆ ಉಚಿತವಾಗಿ ಮೀನುಗಾರಿಕಾ ಸಲಕರಣೆ ಕಿಟ್ಟುಗಳ ವಿತರಣೆ ಮತ್ತು ಮೀನುಗಾರಿಕೆಯಲ್ಲಿ ಅನುಭವ ಹೊಂದಿರುವ ಅರ್ಹ ಸಾಮಾನ್ಯ ವರ್ಗ, ಮಹಿಳೆಯರಿಗೆ, ಅಲ್ಪಸಂಖ್ಯಾತರಿಗೆ ಮತ್ತು ಅಂಗವಿಕಲರಿಗೆ ಮೀನು ಮಾರಾಟಕ್ಕೆ ದ್ವಿಚಕ್ರ ಮತ್ತು ತ್ರಿಚಕ್ರ ವಾಹನ ಖರೀದಿಗೆ ಸಹಾಯ ಮತ್ತು ರಾಜ್ಯ ವಲಯ ಯೋಜನೆಯಡಿ ಕರಾವಳಿ ತಾಲೂಕುಗಳ ಅರ್ಹ ಫಲಾನುಭವಿಗಳಿಗೆ ಜೀವರಕ್ಷಕ ಸಾಧನ, ಹೆಬ್ರಿ ಮತ್ತು ಕಾರ್ಕಳ ತಾಲೂಕುಗಳ ಫಲಾನುಭವಿಗಳಿಗೆ ಮೀನುಗಾರಿಕೆ ಹಾಗೂ ಮೀನು ಮಾರಾಟ ಸಾಮಗ್ರಿಗಳನ್ನು ಉಚಿತವಾಗಿ ವಿತರಿಸುವುದು, ಸಿಗಡಿ ಮತ್ತು ಹಿನ್ನೀರು ಮೀನು ಕೃಷಿಗೆ ಪ್ರೋತ್ಸಾಹ, ಪರಿಶಿಷ್ಟ ಜಾತಿಯ ಅರ್ಹ ಫಲಾನುಭವಿಗಳಿಗೆ ಎಫ್. ಆರ್. ಪಿ ಪಾತಿದೋಣಿ ಮತ್ತು ಜೀವ ರಕ್ಷಕ ಸಾಧನಗಳನ್ನು ಉಚಿತವಾಗಿ ನೀಡುವ ಯೋಜನೆಗಳನ್ನು ಪಾರದರ್ಶಕವಾಗಿ ಹಾಗೂ ಯಶಸ್ವಿಯಾಗಿ ಅನುಷ್ಠಾನಗೊಳಿಸಲು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮಗುವಿನ ಜನನದ ಕೆಲವು ಗಂಟೆಗಳು ಗೊಲ್ಡನ್ ಅವರ್ ಆಗಿದ್ದು ಈ ವೇಳೆ ತಾಯಂದಿರು ಸ್ತನಪಾನ ಮಾಡುವುದು ಬಹಳ ಮುಖ್ಯ ಎಂದು ಬೈಂದೂರು ಸಮುದಾಯ ಆರೋಗ್ಯ ಕೇಂದ್ರದ ವೈದ್ಯೆ, ಮಕ್ಕಳ ತಜ್ಞೆ ಡಾ. ನಂದಿನಿ ಹೇಳಿದರು. ಅವರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಮುದಾಯ ಆರೋಗ್ಯ ಕೇಂದ್ರ ಬೈಂದೂರು‌ ನೇತೃತ್ವದಲ್ಲಿ, ರೋಟರಿ ಕ್ಲಬ್ ಬೈಂದೂರು, ಇನ್ನರ್ ವೀಲ್ ಕ್ಲಬ್ ಬೈಂದೂರು ‌ಸಹಯೋಗದೊಂದಿಗೆ ಆಯೋಜಿಸಲಾದ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಗುವಿನ ಜನನದ ದಿನದಿಂದ ನಿಯಮಿತವಾಗಿ ಸ್ತನಪಾನ ಮಾಡುವುದರಿಂದ ತಾಯಿಯೊಂದಿಗೆ ಮಗುವಿನ ಭಾಂದವ್ಯ ವೃದ್ಧಿಯ ಜೊತೆಗೆ ಆರೋಗ್ಯವೂ ವೃದ್ಧಿಯಾಗುತ್ತದೆ. ಎದೆಹಾಲು ಕುಡಿದ ಮಕ್ಕಳು ಆರೋಗ್ಯವಂತರಾಗಿರುವುದಲ್ಲದೇ ಬುದ್ಧಿವಂತರು, ಮನೋಸ್ಥೈರ್ಯ ಹೊಂದಿರುವವರು ಆಗಿರುತ್ತಾರೆ ಎಂದು ಸಂಶೋಧನೆಗಳು ಹೇಳುತ್ತವೆ. ಮಹಿಳೆ ಗರ್ಭಿಣಿಯಾದ ದಿನದಿಂದ ಹೆರಿಗೆಯ ತನಕವೂ ಸರಕಾರಿ ಆಸ್ಪತ್ರೆಗಳಲ್ಲಿ ವೈದ್ಯರಿಂದ ಸೂಕ್ತ ಮಾರ್ಗದರ್ಶನ ಪಡೆಯಲು ಅವಕಾಶವಿದೆ ಎಂದರು. ಕಾರ್ಯಕ್ರಮದಲ್ಲಿ ಬೈಂದೂರು ರೋಟರಿ ಕ್ಲಬ್ ಪೂರ್ವಾಧ್ಯಕ್ಷರಾದ ಐ.‌…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಚುನಾವಣೆಯಲ್ಲಿ ಅಭಿವೃದ್ಧಿ ಕನಸಿನ ಗೋಪುರ ಕಟ್ಟಿದ ಶಾಸಕ ಗುರುರಾಜ್ ಗಂಟಿಹೊಳೆಯವರು ಚುನಾವಣೆ ನಂತರ ಕ್ಷೇತ್ರದ ಅಭಿವೃದ್ಧಿಯನ್ನು ಸಂಪೂರ್ಣ ಮರೆತಿದ್ದಾರೆ. ಈಗ ಜನತೆ ಅಭಿವೃದ್ಧಿಯ ಬಗ್ಗೆ ಮಾತನಾಡಿದರೆ ರಾಜ್ಯ ಸರ್ಕಾರ ಅನುದಾನ ನೀಡುವುದಿಲ್ಲ ಎನ್ನುವುದು ಜನಪ್ರತಿನಿಧಿಯ ವೈಫಲ್ಯವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ವಿಕಾಸ್ ಹೆಗ್ಡೆ ಆರೋಪಿಸಿದ್ದಾರೆ. ಶಾಸಕರಾದ ಗುರುರಾಜ ಗಂಟಿಹೊಳೆ ಹಾಗೂ ಸಂಸದರಾದ ಬಿ.ವೈ. ರಾಘವೇಂದ್ರ ಅವರಿಗೆ ಅಭಿವೃದ್ಧಿಯ ಬಗ್ಗೆ ಚಿಂತನೆ ಇದ್ದಿದ್ದರೆ ಮೂರು ಅವಧಿಯಿಂದ ಕೇಂದ್ರದಲ್ಲಿ ಇವರದ್ದೇ ಸರ್ಕಾರವಿದೆ. ಸತತವಾಗಿ ಶಿವಮೊಗ್ಗ ಕ್ಷೇತ್ರದ ಸಂಸದರಾಗಿ ಬಿ. ವೈ ರಾಘವೇಂದ್ರ ಆಯ್ಕೆಯಾಗುತ್ತಿದ್ದಾರೆ. ಆದರೆ ಇವರಿಬ್ಬರು ಅಭಿವೃದ್ಧಿಯ ಕೇವಲ ಮನವಿ ಕೊಟ್ಟು ಅದರ ಫೋಟೋ ಹಾಕಿ ಪ್ರಚಾರ ಪಡೆಯಲು ಮಾತ್ರ ಸೀಮಿತವಾಗಿದ್ದಾರೆ ಎಂದು ಟೀಕಿಸಿದ್ದಾರೆ. ಕೇಂದ್ರ ಬಜೆಟ್ನಲ್ಲಿ ರಾಜ್ಯಕ್ಕೆ ಆದ ಘೋರ ಅನ್ಯಾಯದ ಬಗ್ಗೆ ಇವರು ಮಾತನಾಡುತ್ತಿಲ್ಲ. ನೆರೆಯಿಂದ ಸಂಪೂರ್ಣ ಬೈಂದೂರು ಕ್ಷೇತ್ರದ ಜನತೆ ತತ್ತರಿಸಿ ಹೋಗಿದ್ದಾರೆ. ಕೃಷಿ ಸಂಪೂರ್ಣ ಹಾಳಾಗಿದೆ, ಮೀನುಗರಾರು, ಮೂರ್ತೆದಾರರು ದಿಕ್ಕು ತೋಚದೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನಾಯಕತ್ವ ಹಾಗೂ ಸೇವೆ ಮನೋಭಾವನೆಯನ್ನು ವಿದ್ಯಾರ್ಥಿ ದೆಸೆಯಿಂದಲೇ ಅಳವಡಿಸಿಕೊಳ್ಳಲು ಇಂಟರ್ಯಾಕ್ಟ್ ಕ್ಲಬ್ ಉತ್ತಮ ವೇದಿಕೆಯಾಗಿದ್ದು, ವಿದ್ಯಾರ್ಥಿಗಳ ತೊಡಗಿಸಿಕೊಳ್ಳುವಿಕೆಯ ಆಧಾರದ ಮೇಲೆ ಗುಣಾತ್ಮಕ ಬದಲಾವಣೆಯೂ ಸಾಧ್ಯವಿದೆ ಎಂದು ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷ ಮೋಹನ್ ರೇವಣ್ಕರ್ ಹೇಳಿದರು. ಅವರು ಇಲ್ಲಿನ ರತ್ತೂಬಾಯಿ ಜನತಾ ಪ್ರೌಢಶಾಲೆಯಲ್ಲಿ ಬೈಂದೂರು ರೋಟರಿ ಕ್ಲಬ್ ಪ್ರಾಯೋಜಿತ ಇಂಟರ್ಯಾಕ್ಟ್ ಕ್ಲಬ್ ಇದರ ನೂತನ ಅಧ್ಯಕ್ಷರಿಗೆ ಪದಪ್ರದಾನ ನೆರವೇರಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ರತ್ತೂಬಾಯಿ ಜನತಾ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಆನಂದ ಮದ್ದೋಡಿ, ರೋಟರಿಯ ಮಾಜಿ ಸಹಾಯಕ ಗವರ್ನರ್ ಸೋಮನಾಥನ್ ಆರ್., ಪೂರ್ವಾಧ್ಯಕ್ಷರುಗಳಾದ ಐ. ನಾರಾಯಣ್, ಮಂಜುನಾಥ ಮಹಾಲೆ, ಡಾ. ಪ್ರವೀಣ್ ಶೆಟ್ಟಿ, ಪ್ರಸಾದ್ ಪ್ರಭು, ಇನ್ನರ್ವೀಲ್ ಅಧ್ಯಕ್ಷರಾದ ಗುಲಾಬಿ ಮರವಂತೆ, ಬೈಂದೂರು ರೋಟರಿ ಇಂಟರ್ಯಾಕ್ಟ್ ಸಂಯೋಜಕ ರಾಘವೇಂದ್ರ ಉಪ್ಪುಂದ, ಇಂಟರ್ಯಾಕ್ಟ್‌ ಕ್ಲಬ್‌ ಅಧ್ಯಕ್ಷ ಅಮ್ಜದ್‌, ಕಾರ್ಯದರ್ಶಿ ಪ್ರಕೃತಿ ಉಪಸ್ಥಿತರಿದ್ದರು. ರತ್ತೂಬಾಯಿ ಜನತಾ ಪ್ರೌಢಶಾಲೆಯ ಇಂಟರ್ಯಾಕ್ಟ್ ಸಂಯೋಜಕ ಪ್ರಕಾಶ್ ಮಾಕೋಡಿ ಕಾರ್ಯಕ್ರಮ ನಿರೂಪಿಸಿ, ಬೈಂದೂರು ರೋಟರಿ ಕಾರ್ಯದರ್ಶಿ ಸುನಿಲ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಣ್ಣಿಗೆ ಕಾಣುವ ಕಲ್ಲು ಎಲ್ಲರಿಗೂ ಸಾಮಾನ್ಯವಾಗಿ ಕಂಡರೂ ಶಿಲ್ಪಿಗೆ ಮಾತ್ರ ಅದರೊಳಗಿನ ಅದಮ್ಯ ಶಕ್ತಿ ಎದ್ದು ಕಾಣುತ್ತದೆ. ಶಿಲ್ಪಿ ಕಲ್ಲಿನಲ್ಲಿರುವ ಬೇಡದಿರುವ ಅಂಶಗಳನ್ನು ಕೆತ್ತಿ ತೆಗೆದು ಸುಂದರ ಶಿಲ್ಪಕ್ಕೆ ರೂಪು ನೀಡುವಂತೆ ಶಿಕ್ಷಕರು ಕೂಡ ವಿದ್ಯಾರ್ಥಿಗಳನ್ನು ಆದರ್ಶ ವ್ಯಕ್ತಿಗಳನ್ನಾಗಿ ರೂಪಿಸುತ್ತಾರೆ .ಈ ಹಿನ್ನಲೆಯಲ್ಲಿ ಶಿಕ್ಷಕರ ಕಾರ್ಯ ಮಹತ್ವದಾಗಿದೆ ಎಂದು ಕರ್ನಾಟಕ ಬ್ಯಾಂಕ್, ಪ್ರಾದೇಶಿಕ ಕಛೇರಿ ಉಡುಪಿ ಇಲ್ಲಿಯ ಸಹಾಯಕ ಮಹಾ ಪ್ರಬಂಧಕ ವಾದಿರಾಜ.ಕೆ ಹೇಳಿದರು. ಅವರು ಗುರುವಾರ ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜು ಕನ್ನಡ ಉಪನ್ಯಾಸಕರ ಸಂಘದ ಆಸರೆಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು, ಕುಂದಾಪುರದಲ್ಲಿ ನಡೆದ ಕನ್ನಡ ಕಾರ್ಯಗಾರವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಾರುತಿ ಅವರು ಮಾತನಾಡಿ ಉಪನ್ಯಾಸಕರಿಗೆ ಪಾಠವನ್ನು ಮಾಡುವ ಮೊದಲು ಅದರ ಹಿಂದಿನ ತಯಾರಿ ಮುಖ್ಯವಾದುದು. ಹೆಚ್ಚು ಪುಸ್ತಕಗಳನ್ನು ಓದಿ ಹೊಸತನವನ್ನು ರೂಪಿಸಿಕೊಂಡು ಮಕ್ಕಳಲ್ಲೂ ಆ ಗುಣಗಳನ್ನು ಬೆಳೆಸಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಇವರ ಸಹಯೋಗದೊಂದಿಗೆ ಸೈಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿ ನಡೆದ ಕುಂದಾಪುರ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕರ ಚೆಸ್ ಪಂದ್ಯಾಟದಲ್ಲಿ ಎಕ್ಸಲೆಂಟ್ ಪ್ರೌಢ ಶಾಲಾ ವಿಭಾಗದ 10ನೇ ತರಗತಿಯ ವಿದ್ಯಾರ್ಥಿ ಸನತ್ ಆರ್. ಸಿರಿಯಾನ್ ವಿಜಯಶಾಲಿಯಾಗುವುದರ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಈತನ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರು ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಂಸದ ಬಿ. ವೈ.ರಾಘವೇಂದ್ರ ಅವರು ಬೈಂದೂರು ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರೊಂದಿಗೆ ಕೇಂದ್ರ ಹಣಕಾಸು ಸಚಿವರಾದ ನಿರ್ಮಲ ಸೀತಾರಾಮನ್ ಅವರನ್ನು ಭೇಟಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯಲ್ಲಿ ಕೊಲ್ಲೂರು ಮೂಕಾಂಬಿಕಾ ಕಾರಿಡಾರ್ ನಿರ್ಮಾಣ ಮಾಡಲು ಮನವಿ ಮಾಡಿದರು. ಸುಮಾರು 1200 ವರ್ಷಗಳ ಇತಿಹಾಸವಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯ ಉಡುಪಿ ಜಿಲ್ಲೆಯ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನವು ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕೇಂದ್ರಗಳಲ್ಲಿ ಒಂದಾಗಿರುತ್ತದೆ. ಭಾರತದ ವಿವಿಧ ರಾಜ್ಯಗಳಿಂದ ಹಾಗೂ ಹೊರದೇಶಗಳಿಂದ ಪ್ರತಿದಿನ 10,000ಕ್ಕೂ ಹೆಚ್ಚು ಯಾತ್ರಾರ್ಥಿಗಳು ಈ ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಕ್ಷೇತ್ರದಲ್ಲಿ ಮೂಲಸೌಕರ್ಯದ ಜೊತೆಗೆ ಸೌಪರ್ಣಿಕಾ ನದಿ ಸ್ವಚ್ಛತೆ, ಶಂಕರಾಚಾರ್ಯ ಥೀಮ್ ಪಾರ್ಕ್, ಮಲ್ಟಿಲೆವೆಲ್ ಪಾರ್ಕಿಂಗ್, ವಿಮಾನ, ರೈಲ್ವೆ, ಬಸ್ ಹಾಗೂ ಬಂದರು ಸಂಪರ್ಕ, ಕೇಬಲ್ ಕಾರ್, ಬೈಂದೂರಿನ ಇತಿಹಾಸ ಪ್ರಸಿದ್ಧ ದೇವಸ್ಥಾಗಳ ರಸ್ತೆ ಸಂಪರ್ಕ, ಕಡಲ ತೀರ ಹಾಗೂ ಜಲಪಾತಗಳ ಅಭಿವೃದ್ಧಿ, ಪಂಚಗಂಗಾವಳಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಯುವನಿಧಿ ಯೋಜನೆಯ ಬಗ್ಗೆ ಹೆಚ್ಚು ಪ್ರಚಾರಪಡಿಸುವುದರೊಂದಿಗೆ ನಿರುದ್ಯೋಗ ಹೊಂದಿದ ಯುವಜನರು ಇದರ ಫಲಾನುಭವಿಗಳಾನ್ನಾಗಿಸಲು ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯಲ್ಲಿ ಯುವನಿಧಿ ಯೋಜನೆ ಅನುಷ್ಠಾನ ಹಾಗೂ ಐ. ಟಿ. ಐ ಪ್ರವೇಶಾತಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರಕಾರ ಪದವಿ, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೋಮಾ ಪಡೆದ ನಿರುದ್ಯೋಗಿಗಳಾದ ಅರ್ಹ ಯುವಜನರಿಗೆ ಯುವನಿಧಿ ಯೋಜನೆಯಡಿ ಪ್ರತೀ ತಿಂಗಳು ಪದವಿ ಹೊಂದಿದವರಿಗೆ 3,000ರೂ. ಹಾಗೂ ಡಿಪ್ಲೋಮಾ ಹೊಂದಿದವರಿಗೆ 1,500 ರೂ. ಗಳನ್ನು ನೇರ ನಗದು ಹಣವನ್ನು ನಿರುದ್ಯೋಗ ಭತ್ಯೆ ರೀತಿಯಲ್ಲಿ ನೀಡುತ್ತಿದೆ. ಈ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದರೊಂದಿಗೆ ಇದರ ಲಾಭ ಪಡೆದುಕೊಳ್ಳುವಂತೆ ನೋಡಿಕೊಳ್ಳಬೇಕು ಎಂದರು. ಪ್ರಸಕ್ತ ಸಾಲಿನಲ್ಲಿ ಪದವಿ ಅಥವಾ ಡಿಪ್ಲೋಮಾ ಹೊಂದಿದವರು ಹಾಗೂ ಈ…

Read More