ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಕಮಲಶಿಲೆ ಶ್ರೀ ಬ್ರಾಹ್ಮಿ ದುರ್ಗಾಪರಮೇಶ್ವರಿ ಅಮ್ಮನವರ ಭಕ್ತಾದಿಗಳೆಲ್ಲಾ ಸೇರಿ ಮಹಾನಗರಿ ಬೆಂಗಳೂರಿನಲ್ಲಿ ಸಂಯೋಜಿಸಿದ ನಾಲ್ಕನೇ ವರ್ಷದ ಯಶಸ್ವಿ ಯಕ್ಷಗಾನ ಬಯಲಾಟ ಶನಿವಾರ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಯಶಸ್ವಿ ಪ್ರದರ್ಶನ ಕಂಡಿತು. ಕಮಲಶಿಲೆ ಯಕ್ಷಗಾನ ಮೇಳದ ಸಾಂಪ್ರದಾಯಿಕ ರಂಗಸ್ಥಳ ಮತ್ತು ಪುಷ್ಪಾಲಂಕೃತ ಬೆಳ್ಳಿ ತೊಟ್ಟಿಲ ಸೊಬಗಿನಲ್ಲಿ ಕಮಲಶಿಲೆ ಯಕ್ಷೋತ್ಸವ 2024 ಮೇಳೈಸಿತು. ಹಿರಿಯ ಭಾಗವತ ಕಿಗ್ಗ ಹಿರಣ್ಣಯ್ಯ ಆಚಾರ್ ಮತ್ತು ಯುವ ಭಾಗವತ ಗಣೇಶ್ ಶೆಟ್ಟಿ ಬೆಪ್ಡಿ ಹಾಗೂ ಗಣೇಶ್ ಬಿಲ್ಯಾಡಿ ಯವರ ‘ಹಳಬೇರು-ಹೊಸ ಚಿಗುರು’ ಸಮಾಗಮಕ್ಕೆ ಮೆರುಗುತಂದ ಚಂಡೆ-ಮದ್ದಳೆ ಮತ್ತು ಕಾಡು ದೇವಡಿಗರ ಅದ್ಭುತ ನಾದಸ್ವರದ ಜೇಂಕಾರ. ಮಧು-ಕೈಟಭ, ಚಂಡ-ಮುಂಡ, ಶುಂಭ ಮತ್ತು ಕಲಿ ರಕ್ತಬೀಜರ ಸಾಂಪ್ರದಾಯಕ ಬಡಗು ತಿಟ್ಟಿನ ವೇಷ – ಕುಣಿತ ಮಹಾನಗರಿ ಪ್ರೇಕ್ಷಕರ ಮನಸೋರೆಗೊಳಿಸಿದೆ. ಉಪ್ಪುಂದ ನಾಗೇಂದ್ರರ ವಿದ್ಯುನ್ಮಾಲಿ, ಮಹಿಷಾಸುರ, ಶ್ರೀದೇವಿ ಮತ್ತು 65 ಹರೆಯದ ಕೊಚ್ಚಾಡಿ ರಾಮ ದೇವಾಡಿಗರ ರಕ್ತೇಶ್ವರಿ ಪಾತ್ರಗಳ ವೇಷಾಲಂಕಾರ ಮತ್ತು ಆಂಗೀಕ ಅಭಿನಯ ಯಶಸ್ವಿ ಪ್ರದರ್ಶನದ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ ಹಿರಿಯ ನಾಗರಿಕರ ಹಗಲು ಯೋಗಕ್ಷೇಮ ಕೇಂದ್ರವನ್ನು ಪ್ರಾರಂಭಿಸಲು ಸೊಸೈಟಿ ರಿಜಿಸ್ಟ್ರೇಷನ್ ಆ್ಯಕ್ಟ್/ ಟ್ರಸ್ಟ್ ಆ್ಯಕ್ಟ್ ಅಡಿ ನೋಂದಣಿಯಾದ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸಂಸ್ಥೆಯು ನೋಂದಣಿ ಹೊಂದಿ ಕನಿಷ್ಠ 02 ವರ್ಷಗಳಾಗಿರಬೇಕು, ಹಗಲು ಯೋಗಕ್ಷೇಮ ಕೇಂದ್ರದಲ್ಲಿ ಸರ್ಕಾರದ ಆದೇಶಗಳಲ್ಲಿ ನಿಗದಿಪಡಿಸಲಾದ ವಿದ್ಯಾರ್ಹತೆಯುಳ್ಳ ಸೇವಾ ಮನೋಭಾವದ ಸಿಬ್ಬಂದಿಗಳನ್ನು, ಹಿರಿಯ ನಾಗರಿಕರ ಅವಶ್ಯಕತೆಗಳನ್ನು ಪೂರೈಸುವ ಮೂಲಭೂತ ಸೌಕರ್ಯ ಒದಗಿಸುವ ಸೇವಾ ಮನೋಭಾವ ಹೊಂದಿರುವ ಆಡಳಿತ ಮಂಡಳಿಯನ್ನು ಹಾಗೂ ಸಂಸ್ಥೆಯು ಆಡಳಿತ ಮಂಡಳಿಯ ಕರ್ತವ್ಯಗಳನ್ನು ಮತ್ತು ಜವಾಬ್ದಾರಿಗಳನ್ನು ಸ್ಪಷ್ಟ ಹಾಗೂ ಖಚಿತವಾಗಿರುವ ಉಪನಿಯನಗಳನ್ನು ಹೊಂದಿರಬೇಕು. ಸಂಸ್ಥೆಯು ಆರ್ಥಿಕ ಸ್ಥಿತಿಗತಿಯು ಸಧೃಡವಾಗಿರಬೇಕು. ಯಾವುದೇ ಓರ್ವ ವ್ಯಕ್ತಿ ಹಾಗೂ ಜನಾಂಗದ ಲಾಭಕ್ಕಾಗಿ ಸಂಸ್ಥೆಯನ್ನು ನಡೆಸುತ್ತಿರಬಾರದು ಹಾಗೂ ಯಾವುದೇ ಜಾತಿ, ಪಂಥ, ಮತ ಮತ್ತು ಭಾಷೆಗಳನ್ನು ಪರಿಗಣಿಸದೇ ಎಲ್ಲರಿಗೂ ಸೌಲಭ್ಯ ಒದಗಿಸಬೇಕು. ಅರ್ಜಿ ಸಲ್ಲಿಸಲು ನವೆಂಬರ್ 20 ಕೊನೆಯ ದಿನ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕಾರ್ಮಿಕರ ಕಲ್ಯಾಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಹಲವಾರು ಕಾನೂನುಗಳನ್ನು ಜಾರಿಗೆ ತರುವುದರ ಜೊತೆಗೆ ಅನೇಕ ಸೌಲಭ್ಯಗಳನ್ನು ನೀಡುತ್ತಿದ್ದು, ಇವುಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಕಾರ್ಖಾನೆಗಳು, ಬಾಯ್ಲರುಗಳು ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ, ಕಾರ್ಮಿಕರ ರಾಜ್ಯ ವಿಮಾ ಯೋಜನೆ ವೈದ್ಯಕೀಯ ಸೇವೆ ಹಾಗೂ ಕಾರ್ಮಿಕರ ಭವಿಷ್ಯ ಶಿಧಿ ಸಂಘಟನೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲೆಯ ಉದ್ಯೋಗದಾತರಿಗೆ, ಗುತ್ತಿಗೆದಾರರಿಗೆ, ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳಿಗೆ ಹಾಗೂ ಕಾರ್ಮಿಕರಿಗೆ, ಕಾರ್ಮಿಕ ಇಲಾಖೆಯಿಂದ ಹಾಗೂ ಇತರೆ ಇಲಾಖೆಯಿಂದ ಅನುಷ್ಠಾನಗೊಳಿಸುತ್ತಿರುವ ವಿವಿಧ ಕಾರ್ಮಿಕ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತ ಜಿಲ್ಲಾ ಮಟ್ಟದ ಕಾರ್ಯಾಗಾರವುವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಕಾರ್ಮಿಕ ಕಾಯಿದೆಗಳು ಬಲಿಷ್ಠವಾಗಿದ್ದು, ಇವುಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಂತಿವನ ಟ್ರಸ್ಟ್‌ನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯಡಿಯಲ್ಲಿ ಹೊರತಂದ ಜ್ಞಾನ ವರ್ಷಿಣಿ ಮತ್ತು ಜ್ಞಾನ ದರ್ಶಿನಿ ಪುಸ್ತಕಗಳ ಕುರಿತ ತಾಲ್ಲೂಕು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ, ಪ್ರಶಸ್ತಿಗಳನ್ನು ಪಡೆದರು. ಪ್ರೌಢಶಾಲಾ ವಿಭಾಗದ ಶ್ಲೋಕ ಕಂಠಪಾಠ ಸ್ಪರ್ಧೆಯಲ್ಲಿ ಪೂರ್ವಿ ಜೆ. ಎಮ್. ಪ್ರಥಮ ಸ್ಥಾನ, ಕನ್ನಡ ಭಾಷಣ ಸ್ಪರ್ಧೆಯಲ್ಲಿ ರಿಷಿಕಾ ದೇವಾಡಿಗ ದ್ವಿತೀಯ ಸ್ಥಾನ ಹಾಗೂ ಚಿತ್ರಕಲಾ ವಿಭಾಗದಲ್ಲಿ ಅನನ್ಯ ವಿ. ತೃತೀಯ ಸ್ಥಾನವನ್ನು ಪಡೆದು ಸಂಸ್ಥೆಗೆ ಕೀರ್ತಿ ತಂದರು. ವಿದ್ಯಾರ್ಥಿಗಳ ಈ ಅಮೋಘ ಸಾಧನೆಗೆ ಶಾಲಾ ಪ್ರಾಂಶುಪಾಲರು ಹಾಗೂ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳಾದ ಶರಣ ಕುಮಾರ ಮೆಚ್ಚುಗೆ ವ್ಯಕ್ತಪಡಿಸಿ, ವಿದ್ಯಾರ್ಥಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೋಟ ಅಮೃತೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ ಸೇವೆಯಾಟದಂದು ಶ್ರೀ ಕ್ಷೇತ್ರದ ವತಿಯಿಂದ ನೀಡುವ ಪ್ರಾಚಾರ್ಯ ನಾರ್ಣಪ್ಪ ಉಪ್ಪೂರ ಪ್ರಶಸ್ತಿಗೆ ಸಾಲಿಗ್ರಾಮ ಮಕ್ಕಳ ಮೇಳದ ಸ್ಥಾಪಕ ನಿರ್ದೇಶಕ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಎಚ್. ಶ್ರೀಧರ ಹಂದೆ ಅವರು ಭಾಜನರಾಗಿದ್ದಾರೆ. ನ.17ರಂದು ಶ್ರೀ ಕ್ಷೇತ್ರದಲ್ಲಿ ನಡೆಯುವ ಪ್ರಥಮ ಸೇವೆಯಾಟದಂದು ರಾತ್ರಿ ಗಣ್ಯರ ಸಮಕ್ಷಮದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿರುವುದು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಸರಕಾರ ರಾಜ್ಯ ಶಿಕ್ಷಣ ಇಲಾಖೆ, ಜಿಲ್ಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಕಾಲೇಜು ಉಡುಪಿ, ಇಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ ಇತ್ತೀಚೆಗೆ ನಡೆಯಿತು. ಈ ಸ್ಪರ್ಧೆಯಲ್ಲಿ ಕೋಟೇಶ್ವರ ಯಡಾಡಿ-ಮತ್ಯಾಡಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿ ಈಶಾನ್ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾನೆ. ವಿದ್ಯಾರಣ್ಯ ಸಂಸ್ಥೆಯಲ್ಲಿ ಪ್ರಾಥಮಿಕ ತರಗತಿಯಿಂದಲೇ ವಿಜ್ಞಾನ ವಿಷಯಕ್ಕೆ ಸಂಬಂಧಿಸಿದ ಚಟುವಟಿಕೆ ಆಧಾರಿತ ಬೋಧನೆಯು ಮಕ್ಕಳ ವೈಜ್ಞಾನಿಕ ಜ್ಞಾನವನ್ನು ಹೆಚ್ಚಿಸಲು ಸಹಕಾರಿಯಾಗಿದೆ ಮತ್ತು ಶಾಲೆಯಲ್ಲಿನ ವಿವಿಧ ರೀತಿಯ ಪಠ್ಯೇತರ ಚಟುವಟಿಕೆಗಳು ಮತ್ತು ಶಾಲೆಯಲ್ಲಿ ಆಯೋಜಿಸುವ ಶಾಲಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನಗಳು ಮಕ್ಕಳು ಕಲಿಕೆಯಲ್ಲಿ ಸ್ರಜನಶೀಲವಾಗಿ ಮತ್ತು ಆಸಕ್ತಿದಾಯಕವಾಗಿ ಕಲಿಕೆಯಲ್ಲಿ ಪಾಲ್ಗೊಳ್ಳಲು ಸಹಕಾರಿಯಾಗಿದೆ. ಈಗಾಗಲೇ ಸಂಸ್ಥೆಯ ಹಲವಾರು ವಿದ್ಯಾರ್ಥಿಗಳು ಕ್ರೀಡೆ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಜಿಲ್ಲಾ ಮತ್ತು ರಾಜ್ಯ ಮಟ್ಟವನ್ನು ಪ್ರತಿನಿಧಿಸಿ ಬಹುಮಾನಗಳನ್ನು ಪಡೆದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ನಿವಾಸಿ ರೈನಿಶ್ ರಿಹಾನ್ (33) ಮದ್ಯಪಾನಕ್ಕೆ ತಾಯಿ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಮೃತಪಟ್ಟಿದ್ದಾನೆ. ಅವನು ಮದ್ಯಪಾನದ ಚಟ ಹೊಂದಿದ್ದು, ತಾಯಿಯಲ್ಲಿ ಆಗಾಗ ಹಣ ಕೇಳಿ ಗಲಾಟೆ ಮಾಡುತ್ತಿದ್ದ. ಅ.29ರಂದು ತಲ್ಲೂರಿನ ಪಾರ್ತಿಕಟ್ಟೆ ಎಂಬಲ್ಲಿರುವ ಮನೆಯಿಂದ ಗಲಾಟೆ ಮಾಡಿ ಹೋಗಿದ್ದ. ನ.8ರಂದು ಕುಂದಾಪುರ ಸರಕಾರಿ ಆಸ್ಪತ್ರೆಯಿಂದ ತಾಯಿಗೆ ಕರೆ ಬಂದಿದ್ದು ಇಲಿ ಪಾಷಾಣ ಸೇವಿಸಿರುವುದಾಗಿ ವೈದ್ಯರು ತಿಳಿಸಿದ್ದರು. ನಂತರ ಆತನನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ವೆನ್ಸಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಮೃತಪಟ್ಟಿದ್ದಾರೆ. ಮೃತನ ತಾಯಿ ಸ್ಟೆಲ್ಲಾ ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ವೈದ್ಯಕೀಯ, ಶಿಕ್ಷಣ ಮತ್ತು ಕೈಗಾರಿಕಾ ಕ್ಷೇತ್ರದಲ್ಲಿ ಮಹತ್ತರ ಸಾಧನೆಗೈದ ಪ್ರಮುಖರಲ್ಲಿ ಡಾ| ಬಿ. ಬಿ. ಹೆಗ್ಡೆ ಅವರು ಅಗ್ರಪಂಕ್ತಿಯಲ್ಲಿದ್ದಾರೆ. ಸಾವಿರಾರು ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆ ಮಾಡುವುದರ ಜೊತೆಗೆ ನೂರಾರು ಜನರಿಗೆ ಬದುಕನ್ನು ಕಟ್ಟಿಕೊಳ್ಳಲು ಡಾ| ಬಿ. ಬಿ. ಹೆಗ್ಡೆಯವರ ಹೆಸರಿನಲ್ಲಿ ಸ್ಥಾಪಿಸಲ್ಪಟ್ಟ ಈ ಸಂಸ್ಥೆಯಲ್ಲಿ ಡಾ| ಬಿ. ಬಿ. ಹೆಗ್ಡೆಯವರನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಮತ್ತು ಕರ್ತವ್ಯ ಎಂದು ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ ಶೆಟ್ಟಿ ಹೇಳಿದರು. ಅವರು ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಆಯೋಜಿಸಿದ ಡಾ| ಬಿ. ಬಿ. ಹೆಗ್ಡೆ ಅವರ ಸಂಸ್ಮರಣ ಕಾರ್ಯಕ್ರಮದಲ್ಲಿ ಮಾತನಾಡಿದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಸಿ, ಕನ್ನಡ ವಿಭಾಗದ ಪ್ರಾಧ್ಯಾಪಕರಾದ ರೇಷ್ಮಾ ಶೆಟ್ಟಿ ಸ್ವಾಗತಿಸಿ, ಸುಕುಮಾರ್ ಶೆಟ್ಟಿ ಕಮಲಶಿಲೆ ವಂದಿಸಿ, ಪ್ರವೀಣಾ ಎಮ್. ಪೂಜಾರಿ ಕಾರ್ಯಕ್ರಮವನ್ನು ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಡೇರಹೋಬಳಿ ಕಾರಂತರ ಮನೆ ಎದುರು ರಾಜ್ಯ ಹೆದ್ದಾರಿಯಲ್ಲಿ ಬಸ್ರೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ 407 ಟೆಂಪೊ ಅತಿ ವೇಗ ಮತ್ತು ಅಜಾಗರೂಕತೆಯಿಂದ ಸ್ಕೂಟರ್‌ಗೆ ಡಿಕ್ಕಿ ಹೊಡೆದು ನಂತರ ಟಿಪ್ಪರ್‌ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಸ್ಕೂಟರ್ ಸವಾರ ಪ್ರಸಾದ(47) ಹಾಗೂ ಸಹಸವಾರ ಶಿಶಿಮೀಂದ್ರ(13) ಗಾಯಗೊಂಡಿದ್ದಾರೆ. 407 ಟೆಂಪೊ ಚಾಲಕ ನೀಲಕಂಠ ಎಂಬಾತನ ವಿರುದ್ಧ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಗ್ರಾಮ ಪಂಚಾಯತ್‌ಗಳ ಸಾರ್ವತ್ರಿಕ ಉಪ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯ ಗ್ರಾಮ ಪಂಚಾಯತ್‌ಗಳಲ್ಲಿ ಸದಸ್ಯರ ರಾಜೀನಾಮೆ, ನಿಧನ ಮುಂತಾದ ಕಾರಣಗಳಿಂದ ಆಕಸ್ಮಿಕವಾಗಿ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮೂಲಕ ಭರ್ತಿ ಮಾಡಲು ಕುಂದಾಪುರ ತಾಲೂಕಿನ ಅಮಾಸೆಬೈಲು, ಬ್ರಹ್ಮಾವರ ತಾಲೂಕಿನ ಕೋಟ, ಉಡುಪಿ ತಾಲೂಕಿನ ಬೊಮ್ಮಾರಬೆಟ್ಟು ಹಾಗೂ ಕೊಡಿಬೆಟ್ಟು ಹಾಗೂ ಕಾರ್ಕಳ ತಾಲೂಕಿನ ಈದು, ನಲ್ಲೂರು, ನಿಟ್ಟೆ, ನೀರೆ, 5-ಕೆರ್ವಾಶೆ ಹಾಗೂ ಕಡ್ತಲ ಗ್ರಾಮ ಪಂಚಾಯತಿಗಳ ಖಾಲಿ ಇರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ವೇಳಾಪಟ್ಟಿಯನ್ನು ನಿಗಧಿಪಡಿಸಿ, ನವೆಂಬರ್ 23 ರಂದು ಮತದಾನ ನಡೆಸಲು ರಾಜ್ಯ ಚುನಾವಣಾ ಆಯೋಗವು ಆದೇಶಿಸಿರುತ್ತದೆ. ಈ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಮುಕ್ತ ಮತ್ತು ನ್ಯಾಯಯುತ ಹಾಗೂ ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸುವ ನಿಟ್ಟಿನಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಕಲಂ 163 ಮತ್ತು ಕರ್ನಾಟಕ ಪೊಲೀಸ್ ಕಾಯ್ದೆ 1963 ರ ಕಲಂ 35 ರಡಿ ಪ್ರದತ್ತವಾದ…
