Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮಂಡ್ಯದಲ್ಲಿ ಡಿ.20ರಿಂದ 3 ದಿನಗಳ ಕಾಲ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಂಗವಾಗಿ ರಾಜ್ಯಾದ್ಯಂತ ತೆರಳುವ ಕನ್ನಡ ಜ್ಯೋತಿ ಹೊತ್ತ ಕನ್ನಡದ ರಥಯಾತ್ರೆಯನ್ನು ಕುಂದಾಪುರದಲ್ಲಿ ಸ್ವಾಗತಿಸಿಕೊಳ್ಳಲಾಯಿತು. ಈ ವೇಳೆ ಶಾಸಕ ಕಿರಣ್ ಕುಮಾರ್ ಕೊಡ್ಲಿ ಸಾಹಿತ್ಯ ಸಮ್ಮೇಳನ ಅಂಗವಾಗಿ ಜ್ಯೋತಿ ಎಲ್ಲ ಕಡೆಗೆ ಸಂಚಾರ ಮಾಡುತ್ತಿದೆ. ಕನ್ನಡ ಭಾಷೆಯ ಮಹತ್ವದ ದೃಷ್ಟಿಯಿಂದ ಸಮ್ಮೇಳನ ಅವಶ್ಯವಾಗಿದೆ ಎಂದರು. ಭುವನೇಶ್ವರಿಗೆ ಪುಷ್ಪಮಾಲಾರ್ಚನೆ ಮಾಡಲಾಯಿತು. “ಶಾಸ್ತ್ರಿ ಸರ್ಕಲ್‌ನಿಂದ ಪಾರಿಜಾತ ಮೂಲಕ ಮೆರವಣಿಗೆ ನಡೆಸಲಾಯಿತು. ಬಿಸಿಎಂ ಹಾಸ್ಟೆಲ್ ವಿದ್ಯಾರ್ಥಿಗಳಿಂದ ಗಾನ, ನೃತ್ಯ ನಡೆಯಿತು. ಸಹಾಯಕ ಕಮಿಷನರ್ ಮಹೇಶ್ಚಂದ್ರ ಕೆ., ತಹಶೀಲ್ದಾರ್ ಮಲ್ಲಿಕಾರ್ಜುನ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಡಾ|ರವಿ, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ , ಕಸಾಪ ಜಿಲ್ಲಾ ಸ್ಥಾಪಕಾಧ್ಯಕ್ಷ ಎ.ಎಸ್.ಎನ್. ಹೆಬ್ಬಾರ್, ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ತಾಲೂಕು ಗೌರವ ಕಾರ್ಯದರ್ಶಿ ದಿನಕರ ಆರ್. ಶೆಟ್ಟಿ ಬಸೂರು, ತಾಲೂಕು ಆರೋಗ್ಯಾಧಿಕಾರಿ ಡಾ। ಪ್ರೇಮಾನಂದ್ ಕೆ., ಕ್ಷೇತ್ರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರೋಟರಿ ಕ್ಲಬ್‌ ಗಂಗೊಳ್ಳಿ ಆತಿಥ್ಯದಲ್ಲಿ ತಾಲೂಕಿನ ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ರಂಗಮಂಟಪದಲ್ಲಿ ಭಾನುವಾರ ಆಯೋಜಿಸಲಾದ ರೋಟರಿ ವಲಯ – 1ರ ವಲಯ ಮಟ್ಟದ ಸಾಂಸ್ಕೃತಿಕ ಉತ್ಸವ – 2024 ʼಗಂಗಾತರಂಗʼದ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿದ ರೋಟರಿ ಕ್ಲಬ್‌ ಬೈಂದೂರು ತಂಡ ವಲಯ ಚಾಂಪಿಯನ್‌ ಆಗಿ ಹೊರಹೊಮ್ಮಿತು. ಭಾವಗೀತೆಯಲ್ಲಿ ಪೂರ್ಣಿಮಾ ವಿಷ್ಣು ಪೈ ಪ್ರಥಮ, ಚಿತ್ರಗೀತೆಯಲ್ಲಿ ಜತೀಂದ್ರ ಮರವಂತೆ ತೃತೀಯ, ಯುಗಳ ಗೀತೆಯಲ್ಲಿ ಪೂರ್ಣಿಮಾ ವಿಷ್ಣು ಪೈ ಹಾಗೂ ರಾಘವೇಂದ್ರ ಪ್ರಥಮ, ಏಕಪಾತ್ರಾಭಿನಯದಲ್ಲಿ ನಾಗೇಂದ್ರ ಬಂಕೇಶ್ವರ ತೃತೀಯ, ಏಕವ್ಯಕ್ತಿ ನೃತ್ಯದಲ್ಲಿ ನಿಧಿ ನಾಗೇಂದ್ರ ದ್ವಿತೀಯ, ಗುಂಪು ನೃತ್ಯದಲ್ಲಿ ಪ್ರಥಮ, ಪ್ರಹಸನದಲ್ಲಿ ತೃತೀಯ, ಚಿತ್ರಕಲೆಯಲ್ಲಿ ಸ್ಕಂದರಾಮ್‌ ಪ್ರಥಮ ಬಹುಮಾನ ಪಡೆದು ಒಟ್ಟು ಎಂಟು ಸ್ಪರ್ಧೆಗಳಲ್ಲಿ ಹೆಚ್ಚು ಅಂಕ ಪಡೆದು ಬೈಂದೂರು ಕ್ಲಬ್‌ ಚಾಂಪಿಯನ್‌ ಪಟ್ಟ ಗಳಿಸಿಕೊಂಡಿತು. ಗಂಗೊಳ್ಳಿ ರೋಟರಿ ಕ್ಲಬ್‌ ಅಧ್ಯಕ್ಷ ಚಂದ್ರಕಲಾ ತಾಂಡೇಲ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ ಉದ್ಯಮಿ ಆನಂದ್‌…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಟ್ವಾಡಿಯಲ್ಲಿ ನಿರ್ಮಾಣ ಮಾಡಿದ ಸಟ್ವಾಡಿ ಸುಂದರ್‌ ಶೆಟ್ಟಿ ಬಸ್ ತಂಗುದಾಣವನ್ನು ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ, ಮಾಜಿ ಶಾಸಕ ಬಿ. ಅಪ್ಪಣ್ಣ ಹೆಗ್ಡೆ ಹಾಗೂ ಲಯನ್ಸ್ ಜಿಲ್ಲಾ ಗವರ್ನರ್ ಮೊಹಮ್ಮದ್ ಹನೀಫ್ ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಕುಂದಾಪುರ ಲಯನ್ಸ್ ಕ್ಲಬ್ ಅಧ್ಯಕ್ಷ ಪ್ರಜ್ಞೇಶ್ ಪ್ರಭು ವಹಿಸಿದ್ದರು. ಲಯನ್ಸ್ ಕ್ಲಬ್ ಕುಂದಾಪುರದ ಸ್ಥಾಪಕ ಸದಸ್ಯರಾಗಿದ್ದು, ತನ್ನ ಉತ್ತಮ ವ್ಯಕ್ತಿತ್ವದಿಂದ ಎಲ್ಲರ ಪ್ರೀತಿ, ವಿಶ್ವಾಸಕ್ಕೆ ಪಾತ್ರರಾಗಿದ್ದ ಸುಂದರ ಶೆಟ್ಟಿ ಅವರ ಸ್ಮರಣಾರ್ಥ ಅವರ ಕುಟುಂಬ ಸದಸ್ಯರು, ಸಾರ್ವಜನಿಕರ ಅನುಕೂಲಕ್ಕಾಗಿ ಸುಂದರ ಬಸ್ ತಂಗುದಾಣ ಕಟ್ಟಿಸಿಕೊಟ್ಟಿರುವುದುದ ಅಭಿನಂದನೀಯ. ಈ ಉತ್ತಮ ಯೋಜನೆ ಅನುಷ್ಠಾನಕ್ಕೆ ಕಾರಣರಾದ ಸಟ್ವಾಡಿ ಸುಂದರ ಶೆಟ್ಟಿ ಅವರ ಸಹೋದರ ವಿಜಯ ಶೆಟ್ಟಿ, ಪುತ್ರ ಪ್ರಕಾಶ್ಚಂದ್ರ ಶೆಟ್ಟಿ ಹಾಗೂ ಕುಟುಂಬ ಸದಸ್ಯರಿಗೆ ಪ್ರೇರಣೆ ನೀಡಿದ ಲಯನ್ಸ್ ಕ್ಲಬ್ ಕುಂದಾಪುರದ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಎಂದು ಲಯನ್ಸ್ ಜಿಲ್ಲಾ ಗವರ್ನರ್ ಮೊಹಮ್ಮದ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳು ಕೋಡಿ ಇದರ ಆಶ್ರಯದಲ್ಲಿ”ದೀಪಾವಳಿ ಆಚರಣೆ” ವಿಶೇಷವಾಗಿ ಜರುಗಿತು. ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವಿಶ್ವಸ್ಥ ಮಂಡಳಿ ಸದಸ್ಯರಾದ ಸಿದ್ದೀಕ್ ಬ್ಯಾರಿ ಇವರು ಕಾರ್ಯಕ್ರಮವನ್ನುದ್ದೇಶಿಸಿ “ಹಬ್ಬಗಳು ಸೌಹಾರ್ದತೆಯ ಮೂಲ ಸಂಕೇತಗಳು, ನಮ್ಮ ಮನದಲ್ಲಿಯ ಅಜ್ಞಾನ ಹಾಗೂ ಅಂಧಕಾರಗಳು ದೂರವಾಗಿ ವಿಶ್ವಕುಟುಂಬಿಯಾಗಬೇಕು ಇದರ ಮೂಲಕ ನಾವು ವಿಶ್ವಶಾಂತಿಯನ್ನು ಕಾಣುವಂತಾಗಬೇಕು ಎಂದು ನುಡಿದರು”. ಬ್ಯಾರೀಸ್ ವಿಶ್ವಸ್ಥ ಮಂಡಳಿ ಸದಸ್ಯರಾದ ಡಾ. ಆಸೀಫ್ ಬ್ಯಾರಿ ಇವರು “ಕವಿ ಬೇಂದ್ರೆ ಅವರ ಅಮೃತವಾಣಿಯಂತೆ ನಾವು ಮನುಷ್ಯರಾಗಿ ಹುಟ್ಟಿಲ್ಲ, ಮನುಷ್ಯರಾಗಲು ಹುಟ್ಟಿರುವ ಕಾರಣ ಸೌಹಾರ್ದ ಗುಣಗಳನ್ನು ಬೆಳೆಸಿಕೊಳ್ಳಬೇಕು ಅದು ನಮ್ಮೆಲ್ಲಾ ಹಬ್ಬಗಳಿಂದ ಮಾತ್ರ ಸಾಧ್ಯ” ಎಂದು ಶುಭ ಹಾರೈಸಿದರು. ಕಾರ್ಯಕ್ರಮದ ಹಾಗೂ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಹಾಜಿ ಕೆ. ಎಂ ಅಬ್ದುಲ್ ರೆಹಮಾನ್ ಇವರು ದೀಪಾವಳಿ ಹಾಗೂ ಕನ್ನಡ ರಾಜ್ಯೋತ್ಸವ ಆಚರಣೆಯ ಶುಭಾಶಯ ಕೋರಿದರು. ಬ್ಯಾರೀಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರು ಡಿ. ಎಸ್. ಕರ್ಕಿಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಭೌತಿಕ, ಆದ್ಯಾತ್ಮಿಕವಾಗಿ ವಿಶೇಷ ಪರಿಣಾಮ ಬೀರುವ ಜತೆಗೆ ಸಾಮಾಜಿಕ ಸಾಮರಸ್ಯ, ನಮ್ಮ ಸಂಸ್ಕೃತಿ ಬಿಂಬಿಸುವ ಯಕ್ಷಗಾನದ ಪುರಾಣ ಕತೆಗಳ ಮೂಲಕ ಈಗಿನ ಯುವ ಪೀಳಿಗೆ ಧಾರ್ಮಿಕ ಶಿಕ್ಷಣವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಜೀವನದ ಸಾರ್ಥಕತೆ ಪಡೆಯಬೇಕಾಗಿದೆ ಎಂದು ಉದ್ಯಮಿ ಬೆಳ್ವೆ ಗಣೇಶ ಕಿಣಿ ಹೇಳಿದರು. ನಾಗೂರು ಒಡೆಯರಮಠ ಶ್ರೀ ಗೋಪಾಲಕೃಷ್ಣ ಕಲಾಮಂದಿರದ ಖ್ಯಾತ ಸ್ತ್ರೀ ವೇಷಧಾರಿ ರಾಮ ನಾರಿ ಸ್ಮರಣ ವೇದಿಕೆಯಲ್ಲಿ ಕಿರಿಮಂಜೇಶ್ವರ ಧಾರೇಶ್ವರ ಯಕ್ಷಬಳಗ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ ಸಹಕಾರದಲ್ಲಿ 9ನೇ ವರ್ಷದ ಯಕ್ಷಗಾನ ಜ್ಞಾನಯಜ್ಞ ತಾಳಮದ್ದಲೆ ಸಪ್ತಾಹ ಹಾಗೂ ತೆಕ್ಕಟ್ಟೆ ಆನಂದ ಮಾಸ್ತರರ ಸ್ಮರಣೆಯ ಕಲಾತಪಸ್ವಿ 2024ರ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡಿ, ಕಲಾಪೋಷಕರು ಹಾಗೂ ಪ್ರೇಕ್ಷಕರು ಕಲೆ ಮತ್ತು ಕಲಾವಿದರ ಹಿಂದಿರುವ ದೊಡ್ಡಶಕ್ತಿ. ಸಾಂಸ್ಕೃತಿಕ ಅಭಿರುಚಿ, ಅಭಿಮಾನ ಹಾಗೂ ಹಿರಿಯರ ಸನ್ನಡತೆಯ ಸಹಕಾರದಿಂದ ಸತತ ಎಂಟು ವರ್ಷಗಳಿಂದ ಆಚರಿಸುತ್ತಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಜೀವನದಲ್ಲಿ  ಅನುಭವಕ್ಕೆ ಬರುವ ಮೌಲ್ಯಗಳು ಜೀವನದ ಆಶಯ ನೆರವೇರಿಸಲು ಪ್ರೇರಣೆಯಾಗಲಿ ಎಂದು ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಸದಸ್ಯರಾದ ಕೆ. ದೇವದಾಸ ಕಾಮತ್ ಹೇಳಿದರು. ಅವರು ನವೆಂಬರ್ 4ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಪದವಿಪೂರ್ವ ಮತ್ತು ಪದವಿ ಕಾಲೇಜು, ಶ್ರೀ ಜನಾರ್ದನ ಮಹಾಕಾಳೀ ದೇವಸ್ಥಾನ ಅಂಬಲಪಾಡಿ ಮತ್ತು ಶ್ರೀ ಕುಂದೇಶ್ವರ ದೇವಸ್ಥಾನ ಕುಂದಾಪುರ ಇವರ ಸಹಯೋಗದಲ್ಲಿ “ಒಂದು ದಿನದ ಜೀವನ ಮೌಲ್ಯ ಶಿಕ್ಷಣ ಶಿಬಿರ” ಉದ್ಘಾಟಿಸಿ ಮಾತನಾಡಿದರು. ಮೌಲ್ಯಗಳು ನಮ್ಮ ಗುರಿಯನ್ನು ಮುಟ್ಟಲು ನೆರವಾಗಬೇಕು ಎಂದು ಅಭಿಪ್ರಾಯಪಟ್ಟರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಸದಸ್ಯರಾದ ರಾಜೇಂದ್ರ ತೋಳಾರ್, ಸದಾನಂದ ಚಾತ್ರ, ಅಭಿನಂದನ ಶೆಟ್ಟಿ, ಆಡಳಿತ ಮಂಡಳಿಯ ಸದಸ್ಯರಾದ ಯು.ಎಸ್.ಶೆಣೈ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ ಸತ್ಯನಾರಾಯಣ ಉಪಸ್ಥಿತರಿದ್ದರು. ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ ಸ್ವಾಗತಿಸಿದರು. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಮ್.ಗೊಂಡ ವಂದಿಸಿದರು. ಉಪನ್ಯಾಸಕಿ ಹರ್ಷಿತಾ ವಂದಿಸಿದರು. ನಂತರ ನಡೆದ ಶಿಬಿರದಲ್ಲಿ ಮೊದಲ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: 2024 ಸೆಪ್ಟೆಂಬರ್‌ನಲ್ಲಿ ನಡೆದ ಸಿ.ಎ ಇಂಟರ್ ಮೀಡಿಯೆಟ್ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಬಿ.ಕಾಂ. ವಿದ್ಯಾರ್ಥಿಯಾದ ಸುಶಾಂತ್ 380 ಅಂಕಗಳೊಂದಿಗೆ ರಾಷ್ತ್ರೀಯ ಮಟ್ಟದಲ್ಲಿ 36ನೇ ರ್ಯಾಕ್‌ ಗಳಿಸಿರುತ್ತಾರೆ. ಅವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ದತ್ತು ಶಿಕ್ಷಣ ಯೋಜನೆಯಡಿ ಪದವಿ ಶಿಕ್ಷಣವನ್ನು ಪಡೆಯುತ್ತಿದ್ದಾರೆ. ರಿತ್ವಿಕ್ ಜೆ. ಶೆಟ್ಟಿ (327), ಸ್ಮಿತಾ ಎಸ್. ಹೆಗ್ಡೆ (301) ಮತ್ತು ಜ್ಯೋತಿ (300) ಇವರು ಗ್ರೂಪ್ -01 ಮತ್ತು ಗ್ರೂಪ್ -02 ವಿಭಾಗದಲ್ಲಿ ಮೊದಲ ಪ್ರಯತ್ನದಲ್ಲಿ ಉತ್ತಮ ಫಲಿತಾಂಶದೊAದಿಗೆ ಉತ್ತೀರ್ಣರಾಗಿರುತ್ತಾರೆ. ಇಂಟರ್‌ಮೀಡಿಯಟ್ ಗ್ರೂಪ್ -01 ವಿಭಾಗದಲ್ಲಿ ಕಿರಣ್ (167), ಶ್ರೀರಕ್ಷಾ (165) ಮತ್ತು ಪ್ರೀತಮ್ ವಿ ನಾಯ್ಕ್ (150) ಇವರು ಉತ್ತಮ ಫಲಿತಾಂಶದೊAದಿಗೆ ಉತ್ತೀರ್ಣರಾಗಿರುತ್ತಾರೆ. ಇಂಟರ್ ಮೀಡಿಯಟ್ ಗ್ರೂಪ್ -02 ವಿಭಾಗದಲ್ಲಿ ಮಯೂರಿ (173), ಕಲ್ಪನಾ ಗಜಾನನಾ ಹೆಗ್ಡೆ (170), ಸಿ ಶ್ರೇಯಾಂಕ್ ನಾಯಕ್ (164), ಪಲ್ಲವಿ ಆರ್ (160), ವಿಕ್ರಾಂದ್ ಪುಂಡಲೀಕ್ (159), ಪಾಯಲ್ ಜೆ ಬಂಗೇರಾ (155),…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ವರುಣತೀರ್ಥ ವೇದಿಕೆ ವತಿಯಿಂದ ಆಯೋಜಿಸಲಾದ ನಿರಂತರ- 2024ರ ಸಮಾರಂಭದಲ್ಲಿ50 ವರ್ಷ ಪುರೈಸಿದ ಸಾಲಿಗ್ರಾಮ ಮಕ್ಕಳ ಮೇಳಕ್ಕೆ ಗೌರವ ಅಭಿನಂದನಾ ಪುರಸ್ಕಾರ ಪ್ರದಾನ ಮಾಡಲಾಯಿತು. ಸಾಲಿಗ್ರಾಮ ಮಕ್ಕಳ ಮೇಳದ ಪರವಾಗಿ ಸಂಸ್ಥೆಯ ಕಾರ್ಯದರ್ಶಿ ಎಚ್‌. ಸುಜಯೀಂದ್ರ ಹಂದೆ ಅವರು ಪುರಸ್ಕಾರ ಸ್ವೀಕರಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮಂಗಳೂರು ಕಂಕನಾಡಿ ರೋಷನಿ ನಿಲಯ ಕಾಲೇಜು ಆಯೋಜಿಸಲಾಗಿದ್ದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್‌ ಕಾಲೇಜು ಕರಾಟೆ ಸ್ಪರ್ಧೆಯಲ್ಲಿ ಬೈಂದೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು  ಭಾಗವಹಿಸಿ ವೈಯಕ್ತಿಕ  ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ವಿದ್ಯಾರ್ಥಿಗಳಾದ ಲಕ್ಷ್ಮಿಕಾಂತ, ನೀಲೇಶ್‍ ಮತ್ತು ಸುಶನ್ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕದೊಂದಿಗೆ ಸೌತ್ ವೆಸ್ಟ್‌ ಜೋನ್ ಮಧ್ಯಪ್ರದೇಶದಲ್ಲಿ ನಡೆಯುವ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.  ಟೀಮ್ ಚಾಂಪಿಯನ್ ಶಿಪ್‍ನಲ್ಲಿ ಲಕ್ಷ್ಮಿಕಾಂತ, ನೀಲೇಶ, ಆಯುಷ್ ಪುತ್ರನ್, ಸುಶನ್‌, ಮಹಮ್ಮದ್ ಶಮ್ಮಜ್, ಆಯುಷ್ ನಾಯಕ್ ಭಾಗವಹಿಸಿ, ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ಬೈಂದೂರು ಕಾಲೇಜಿನ ಇತಿಹಾಸದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಅಂತರ ಕಾಲೇಜು ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ಪಡೆದಿರುವುದು ವಿಶೇಷ ಸಾಧನೆಯಾಗಿದೆ. ಈ ಸಾಧನೆಯಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು ಹಾಗೂ ಬೈಂದೂರಿನ ಗೌರವವನ್ನು ಹೆಚ್ಚಿಸಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರಾದ ನಾಗರಾಜ ಶೆಟ್ಟಿ, ಕಾಲೇಜು ಅಭಿವೃಧ್ಧಿ ಸಮಿತಿ, ಕ್ರೀಡಾ ತರಬೇತುದಾರರಾದ ಪ್ರಭಾಕರ ಗೌಡ, ಕಾಲೇಜಿನ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆ ಅಂಗವಾಗಿ ನಗರದ ಬ್ರಹ್ಮಗಿರಿಯ ಜಿಲ್ಲಾ ಬಾಲಭವನದಲ್ಲಿ ನವೆಂಬರ್ 7 ರಂದು ಬೆಳಗ್ಗೆ 10 ಗಂಟೆಯಿಂದ 9 ರಿಂದ 16 ವರ್ಷದ ಒಳಗಿನ ಮಕ್ಕಳಿಗೆ ವಿವಿಧ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ಸ್ಫರ್ಧೆಗಳಲ್ಲಿ ವಿಜೇತರಾದ ಮಕ್ಕಳು ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು ಇಲ್ಲಿ ನಡೆಯುವ ರಾಜ್ಯ ಮಟ್ಟದ “ಕಲಾಶ್ರೀ” ಸ್ಪರ್ಧಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ. ಸ್ಪರ್ಧೆಯ ವಿವರ:ಸೃಜನಾತ್ಮಕ ಪ್ರದರ್ಶನ ಕಲೆ: ಶಾಸ್ರ್ತೀಯ ನೃತ್ಯ, ಜಾನಪದ ನೃತ್ಯ, ಕರ್ನಾಟಕ ಶಾಸ್ರ್ತೀಯ ಸಂಗೀತ, ಹಿಂದು ಶಾಸ್ರ್ತೀಯ ಸಂಗೀತ, ಸುಗಮ ಸಂಗೀತ (ವೈಯಕ್ತಿಕ)ವಿಜ್ಞಾನದಲ್ಲಿ ನೂತನ ಆವಿಷ್ಕಾರ: ವಿಜ್ಞಾನಕ್ಕೆ ಸಂಬಂಧಪಟ್ಟಂತೆ ಒಂದು ವಿಷಯದ ಬಗ್ಗೆ ಮಾದರಿ ಪ್ರದರ್ಶನ.ಸೃಜನಾತ್ಮಕ ಕಲೆ: ಚಿತ್ರಕಲಾ ಸ್ಫರ್ಧೆ.ವಾದ್ಯ ಸಂಗೀತ: ತಬಲಾ, ಮೃದಂಗ, ಕೀಬೋರ್ಡ್, ಕೊಳಲು, ಡೊಳ್ಳು ಮತ್ತು ನಗಾರಿ ಹಾಗೂ ಅಂಗವಿಕಲ, ಬುಡಕಟ್ಟು ಪ್ರದೇಶದ ಮಕ್ಕಳಿಗಾಗಿ (ಯಾವುದೇ ಪ್ರಕಾರ). ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ದೂರವಾಣಿ ಸಂಖ್ಯೆ: 0820-2574978 ಅನ್ನು ಸಂಪರ್ಕಿಸಬಹುದಾಗಿದೆ…

Read More