ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಕ್ಟೋಬರ್ 17 ರಿಂದ 19ರ ತನಕ ಆಂಧ್ರ ಪ್ರದೇಶದ ಗುಂಟೂರಿನಲ್ಲಿನಡೆದ ರಾಷ್ಟ್ರ ಮಟ್ಟದ 35ನೇ ದಕ್ಷಿಣ ವಲಯ ಕಿರಿಯರ ಅಥ್ಲೆಟಿಕ್ ಚಾಂಪಿಯನ್ ಶಿಪ್ನ ಎತ್ತರ ಜಿಗಿತದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಿನಾನ್ ಬೆಳ್ಳಿ ಪದಕ ಪಡೆದು ಅಪೂರ್ವ ಸಾಧನೆಗೆ ಸಾಕ್ಷಿಯಾಗಿದ್ದಾನೆ. ವಿದ್ಯಾರ್ಥಿಗೆ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಔಷಧಾಲಯ ಅಥವಾ ಔಷಧ ವಿಜ್ಞಾನ ಎಂಬುದು ಕೇವಲ ಕುಳಿತು ಮಾಡುವ ವ್ಯಾಪಾರಿ ವೃತ್ತಿಯಲ್ಲ, ಅದು ವೈದ್ಯರು ಮತ್ತು ರೋಗಿಗಳ ಮಧ್ಯದ ಸೇತು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ ಆಳ್ವ ಹೇಳಿದರು. ಆಳ್ವಾಸ್ ಕಾಲೇಜಿನ ಧನ್ವಂತರಿ ಸಭಾಭವನದಲ್ಲಿ ಸೋಮವಾರ ನಡೆದ ಆಳ್ವಾಸ್ ಫಾರ್ಮಸಿ ಕಾಲೇಜು ಉದ್ಘಾಟನೆ ಮತ್ತು ಅಭಿವಿನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಔಷಧಾಲಯ ಪರಿಣಿತರು ವೈದ್ಯರು ಸೂಚಿಸಿ ಬರೆದ ಔಷಧಗಳ ಸಂಪೂರ್ಣ ಜ್ಞಾನ ಹೊಂದಿರಬೇಕು. ಔಷಧಾಲಯ ಪರಿಣತರಿಗೆ ಜಗತ್ತಿನಾದ್ಯಂತ ಬೇಡಿಕೆ ಹೆಚ್ಚಿದೆ. ಆಳ್ವಾಸ್ನಲ್ಲಿ ’ಫಾರ್ಮಸಿ’ಎಲ್ಲ ಅಗತ್ಯ ಸೌಲಭ್ಯಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಗುವುದು. ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು, ಅತ್ಯುನ್ನತ ಹುದ್ದೆಗಳಿಗೆ ತೆರಳಬೇಕು ಎಂದರು. ಭಾರತವು ಜಗತ್ತಿನ ಔಷಧ ಶಾಲೆ. ಕೋವಿಡ್ನಂತಹ ಸಂದರ್ಭದಲ್ಲಿ ವಿವಿಧ ದೇಶಗಳ ಔಷಧಗಳ ಬೇಡಿಕೆ ಪೂರೈಸಿದೆ ಎಂದರು. ಮೂಡುಬಿದಿರೆ ಸಿ.ಎಚ್ ಮೆಡಿಕಲ್ ಮಾಲಕ ಸಿ.ಎಚ್. ಅಬ್ದುಲ್ ಗಫೂರ್ ಮಾತನಾಡಿ, ಆಳ್ವಾಸ್ ಕಾಲೇಜು ಧನಾತ್ಮಕ ಯೋಚನೆಗಳಿಗೆ ಸಹಕಾರಿಯಾಗಿದೆ. ಫಾರ್ಮಸಿಯ ವಿಷಯಯಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಹಳಗೇರಿ ಗ್ರಾಮದ ನಿವಾಸಿ ಹೊನ್ನಾವರ ತಾಲೂಕು ಸರ್ಕಾರಿ ಆಸ್ಪತ್ರೆಯ ತಜ್ಞ ವೈದ್ಯ ಡಾ. ಮಂಜುನಾಥ ಶೆಟ್ಟಿ (58) ಅವರು ಅಲ್ಪಕಾಲದ ಅಸೌಖ್ಯದಿಂದ ಭಾನುವಾರ ನಿಧನರಾದರು. ಡಾ. ಮಂಜುನಾಥ ಶೆಟ್ಟಿ ಭಟ್ಕಳ ಸೇರಿದಂತೆ ವಿವಿಧ ತಾಲೂಕು ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಕಳೆದ 6 ವರ್ಷಗಳಿಂದ ಹೊನ್ನಾವರದ ತಾಲೂಕು ಆಸ್ಪತ್ರೆಯಲ್ಲಿ ಸೇವೆಯಲ್ಲಿದ್ದರು. ಅವರು ಯಕ್ಷಗಾನ ಹವ್ಯಾಸಿ ಕಲಾವಿದರಾಗಿಯೂ ಗಮನ ಸೆಳೆದಿದ್ದರು. ಅವರು ಪತ್ನಿ, ಒಬ್ಬ ಪುತ್ರ ಹಾಗೂ ಇಬ್ಬರು ಪುತ್ರಿಯರು ಹಾಗೂ ಬಂದುಗಳನ್ನು ಅಗಲಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇತ್ತೀಚಿಗೆ ಬೆಂಗಳೂರಿನ ಇಂಡೋ ಗ್ಲೋಬ್ ಪಿಯು ಕಾಲೇಜಿನಲ್ಲಿ ನಡೆದ ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮೇಳನ -2024ರಲ್ಲಿ ಶಿಕ್ಷಕ ಗಣೇಶ ಪೂಜಾರಿ ಅವರಿಗೆ ಶಿಕ್ಷಣ ಸೇವಾರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸೂರ್ಯ ಫೌಂಡೇಶನ್ ಬೆಂಗಳೂರು, ಸ್ಪಾರ್ಕ್ ಅಕಾಡೆಮಿ ಬೆಂಗಳೂರು ವತಿಯಿಂದ ಇಂಡೋಗ್ಲೋಬ್ ಇನ್ಸಿಟ್ಯೂಷನ್ಸ್ ಬೆಂಗಳೂರು ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ ಮೈಸೂರು ಸಹಕಾರದೊಂದಿಗೆ ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮೇಳನ ಆಯೋಜಿಸಲಾಗಿತ್ತು. ಈ ವೇಳೆ ಕರ್ನಾಟಕ ಶಿಕ್ಷಕರ ಪ್ರತಿಭಾ ಪರಿಷತ್ ಸಂಸ್ಥಾಪಕ ಅಧ್ಯಕ್ಷರಾದ ಪಿ. ಮಹೇಶ್, ಬೆಂಗಳೂರು ಇಂಡೋಗ್ಲೋಬ್ ಇನ್ಸಿಟ್ಯೂಷನ್ಸ್ ಕಾರ್ಯದರ್ಶಿಯಾದ ಸಂಗೀತ, ಇಂಡೋಗ್ಲೋಬ್ ಇನ್ಸಿಟ್ಯೂಷನ್ಸ್ ಹೆಸರುಘಟ್ಟ ಚೇರ್ಮನ್ ಟಿ.ಎಂ ಗೌಡ ಮತ್ತು ಬೆಂಗಳೂರು ಸೂರ್ಯ ಫೌಂಡೇಶನ್ ಅಧ್ಯಕ್ಷರಾದ ಸೋಮೇಶ್ ನವೋದಯ ಇನ್ನಿತರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮದ್ದುಗುಡ್ಡೆಯ ಶ್ರೀ ಗುರು ರಾಘವೇಂದ್ರ ಭಜನ ಮಂದಿರದಲ್ಲಿ ಚಿನ್ನಾಭರಣ ಕಳ್ಳತನ ನಡೆದ ಬಗ್ಗೆ ವರದಿಯಾಗಿದೆ. ಅ.18ರ ಮಧ್ಯಾಹ್ನ 1.30 ರಿಂದ ಸಂಜೆ 6 ಗಂಟೆಯ ಮಧ್ಯದ ಅವಧಿಯಲ್ಲಿ ಕಳವು ಮಾಡಲಾಗಿರುವ ಬಗ್ಗೆ ದೂರು ದಾಖಲಾಗಿದೆ. ಸುಮಾರು 75 ಸಾವಿರ ರೂ. ಮೌಲ್ಯದ 12 ಗ್ರಾಂ ತೂಕದ ಚಿನ್ನದ ತಿಲಕವನ್ನು ಕಳವು ಮಾಡಲಾಗಿದೆ. ಶ್ರೀ ಗುರು ರಾಘವೇಂದ್ರ ಭಜನ ಮಂದಿರದ ಅಧ್ಯಕ್ಷ ರಮೇಶ್ ಮದ್ದುಗುಡ್ಡೆ ಅವರು ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ವಿದ್ಯಾರ್ಥಿನಿ ದ್ವಿತೀಯ ಪಿ.ಯು.ಸಿ.ಯ ಸತ್ಯವತಿ ಅವಳಿಗೆ ಕುಂದಾಪುರ ತಾಲೂಕಿನ ಕೋಟೇಶ್ವರದ ಮೇಲ್ಕಟ್ಕೆರೆಯಲ್ಲಿ ವಿದ್ವಾನ್ ಪಂಜ ಭಾಸ್ಕರ ಭಟ್ ಅವರ ಪ್ರಾಯೋಜಕತ್ವದಲ್ಲಿ ರೂ.6 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ನೂತನ ಮನೆ ಚಂದ್ರಿಕಾ ನಿಲಯ ಉದ್ಘಾಟನೆಗೊಂಡಿತು. ವೇ. ಮೂ ಕಡಂದಲೆ ಕೆ.ವಿ. ಕೃಷ್ಣ ಭಟ್ ಉದ್ಘಾಟಿಸಿದರು. ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಕಲಾರಂಗದ ಕಾರ್ಯಕರ್ತರ ನಿಸ್ವಾರ್ಥ ಸಾಮಾಜಿಕ ಕಾರ್ಯ ಎಲ್ಲರಿಗೆ ಮಾದರಿಯಾಗಿದೆ. ಭಾಸ್ಕರ ಭಟ್ ಅಭಿಪ್ರಾಯ ವ್ಯಕ್ತಪಡಿಸಿ ಕಲಾರಂಗದ ಸಮಾಜ ಸೇವೆಯೆಂಬ ಬ್ರಹ್ಮರಥದ ಹಗ್ಗ ಹಿಡಿಯುವ ಅವಕಾಶ ನಮ್ಮ ಕುಟುಂಬಕ್ಕೊದಗಿದ ಭಾಗ್ಯ. ನಾನು ಕಲಾರಂಗದ ಸದಸ್ಯ ಎನ್ನಲು ಹೆಮ್ಮೆಪಡುತ್ತೇನೆ ಎಂದರು. ವೇ. ಮೂ. ಸೀತಾರಾಮ ಭಟ್ ಮಾತನಾಡಿ, ವಿದ್ವಾಂಸರಾದ ಭಾಸ್ಕರ್ ಭಟ್ಟರ ಸಾಮಾಜಿಕ ಸ್ಪಂದನೆ ನಮ್ಮಂತ ವೈದಿಕರಿಗೆ ಆದರ್ಶಪ್ರಾಯವಾದುದು ಎಂದರು. ಆನೆಗುಡ್ಡೆ ದೇವಳದ ನಿಕಟಪೂರ್ವ ಆಡಳಿತ ಮುಕ್ತೇಸರ ಸೂರ್ಯನಾರಾಯಣ ಉಪಾಧ್ಯಾಯರು ಶುಭ ಹಾರೈಸಿದರು. ವಿದ್ವಾನ್ ಪಂಜ ಭಾಸ್ಕರ ಭಟ್ ಪತ್ನಿ ಚಂದ್ರಿಕಾ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ, ಪ್ರಥಮ ವರ್ಷದ ಪದವಿಯ ವಿದ್ಯಾರ್ಥಿಗಳಿಗಾಗಿ ರಕ್ಷಕ – ಶಿಕ್ಷಕ ಸಭೆಯನ್ನು ಆಯೋಜಿಸಲಾಯಿತು. ಸ್ಥಳೀಯ ಪ್ರಸಿದ್ಧ ಶಿಕ್ಷಣ ಸಂಸ್ಥೆಯಾದ, ಕುಂದಾಪುರ ಎಜುಕೇಶನ್ ಸೊಸೈಟಿಯ ಅಧ್ಯಕ್ಷರಾದ ಬಿ. ಎಮ್. ಸುಕುಮಾರ ಶೆಟ್ಟಿ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕುಂದಾಪುರ ಎಜುಕೇಶನ್ ಸೊಸೈಟಿ ಸುವರ್ಣ ಸಂಭ್ರಮದ ಹೊಸ್ತಿಲಿನಲ್ಲಿದೆ. ಈ ಸಂಸ್ಥೆಯ ಆಡಳಿತಕ್ಕೆ ಒಳಪಟ್ಟ ನಾಲ್ಕು ಶಿಕ್ಷಣ ಸಂಸ್ಥೆಗಳು ಕನ್ನಡ ಕರಾವಳಿ ಭಾಗದಲ್ಲಿ ಗಮನಾರ್ಹ ಸಾಧನೆ ಮಾಡುತ್ತಿರುವುದು ಸಂತೋಷದ ಸಂಗತಿ. ಕಾಲೇಜಿನ ಎಲ್ಲಾ ಕ್ರೀಯಾ ಚಟುವಟಿಕೆಗಳಿಗೆ ಬೆಂಬಲ ಮತ್ತು ಪ್ರೋತ್ಸಾಹ ನೀಡುತ್ತಿರುವ ಹೆತ್ತವರಿಗೆ ಹಾಗೂ ಪೋಷಕರಿಗೆ ಈ ಮೂಲಕ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಮೊಳಹಳ್ಳಿ ಶಾಲೆಯ ಹಿರಿಯ ಶಿಕ್ಷಕಿ ಶೋಭಾ ಸಿ. ಶೆಟ್ಟಿ ಅವರು ಮುಖ್ಯ ಅತಿಥಿ ನೆಲೆಯಲ್ಲಿ ಮಾತನಾಡಿ, ಕಾಲೇಜು ಅತ್ಯಂತ ಕಿರು ಅವಧಿಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಜಿಲ್ಲೆಯ ಸ್ತುತ್ಯಾರ್ಹ ಸಾಧನೆ ಮಾಡುತ್ತಿರುವುದು ಉಲ್ಲೇಖನೀಯ. ಈ ಸಂಸ್ಥೆಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ವಿಜ್ಞಾನಿ ಇದ್ದಲ್ಲಿ ಜ್ಞಾನ, ಜ್ಞಾನ ಇದ್ದಲ್ಲಿ ಕಲೆ ಇರುತ್ತದೆ. ಅಂತೆಯೇ, ಕಲೆ ಇದ್ದಲ್ಲಿ ಪರಿಸರ ರಕ್ಷಣೆ ಮತ್ತು ಕಾಳಜಿಯೂ ಇರುತ್ತದೆ ಎಂದು ಮೂಡುಬಿದಿರೆಯ ಶ್ರೀ ಜೈನಮಠದ ಡಾ. ಸ್ವಸ್ತಿ ಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯಮಹಾಸ್ವಾಮೀಜಿ ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದಿರೆ, ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್ಸಿ) ಎನರ್ಜಿ ಮತ್ತು ವೆಟ್ ಲಾಂಡ್ಸ್ ರಿಸರ್ಚ್ ಗ್ರೂಪ್ ಇವುಗಳ ಆಶ್ರಯದಲ್ಲಿ ವಿದ್ಯಾಗಿರಿಯ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆದ 4ದಿನಗಳ ಲೇಕ್ ಅಂತಾರಾಷ್ಟ್ರೀಯ ದ್ವೈವಾರ್ಷಿಕ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಪ್ರಸ್ತುತದಲ್ಲಿ ಪ್ರಕೃತಿಯ ಮೇಲೆ ನಡೆಯುತ್ತಿರುವ ಅತಿವೃಷ್ಟಿ ಮತ್ತು ಅನಾವೃಷ್ಟಿಯ ಕಾರಣವನ್ನು ಅರ್ಥೈಸಿಕೊಳ್ಳುವುದು ಬಹಳ ಅಗತ್ಯವಿದೆ. ಮನುಷ್ಯನ ಅನೇಕ ಪರಿಸರ ವಿರೋಧಿ ಚಟುವಟಿಕೆಗಳಿಂದ ನೆಲ, ಜಲ ವಾತಾವರಣ, ಪಶು ಪಕ್ಷಿಗಳಿಗೆ ಉತ್ತಮ ವಾತಾವರಣವನ್ನು ರೂಪಿಸಿಕೊಡುವಲ್ಲಿ ಹಾನಿಯುಂಟಾಗುತ್ತಿವೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ ಆಳ್ವರ ಪರಿಸರ ಕಾಳಜಿಯನ್ನು ಪ್ರಶಂಸಿದರು. ಕಾರ್ಯಕ್ರಮದಲ್ಲಿ ಮಂಗಳೂರಿನ ಸಂತ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ 12 ತಿಂಗಳ ಅಪ್ರೆಂಟಿಸ್ ತರಬೇತಿಗೆ ಅರ್ಹ ಪತ್ರಿಕೋಧ್ಯಮ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಉಡುಪಿ ಜಿಲ್ಲಾ ಕಚೇರಿಗೆ 2024 – 25 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯ ಇಬ್ಬರು ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಆಯ್ಕೆಯಾದ ಪ್ರತಿ ಅಪ್ರೆಂಟಿಸ್ಗೆ ತರಬೇತಿ ಅವಧಿಯಲ್ಲಿ ತಿಂಗಳಿಗೆ 15 ಸಾವಿರ ರೂ.ಗಳ ಸ್ಟೈಪಂಡ್ ನೀಡಲಾಗುವುದು. ಅಭ್ಯರ್ಥಿಯು ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರುವುದು ಕಡ್ಡಾಯ. ಕನ್ನಡ ಭಾಷೆ ಬಳಕೆಯಲ್ಲಿ ಪ್ರಬುದ್ಧತೆ ಇರಬೇಕು. ಅಭ್ಯರ್ಥಿಗಳ ವಯಸ್ಸು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದಂದು 35 ವರ್ಷದೊಳಗಿರಬೇಕು. ಅರ್ಜಿ ಸಲ್ಲಿಸಲು ನವೆಂಬರ್ 12 ಕೊನೆಯ ದಿನ. ಆಸಕ್ತರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಂಘಸಂಸ್ಥೆಗಳು ನಿತ್ಯನಿರಂರರವಾಗಿ ಸಾಮಾಜಿಕ ಕಳಕಳಿಯೊಂದಿಗೆ ಪರಿಸರವನ್ನು ಪ್ರೀತಿಸಿ ಸಾಮಾಜಿಕ ಬದ್ಧತೆಯನ್ನು ಪ್ರದರ್ಶಿಸುತ್ತಿರಬೇಕು ಈ ದಿಸೆಯಲ್ಲಿ ಪಂಚವರ್ಣದ ಸಮಾಜಮುಖಿ ಕಾರ್ಯ ಮಾದರಿಯಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ನುಡಿದರು. ಉಡುಪಿ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಇದೇ ಬರುವ ನವೆಂಬರ್ 16ರಂದು ಕೋಟದ ಗಾಂಧಿ ಮೈದಾನದಲ್ಲಿ ನಡೆಯಲಿರುವ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿ, ಪಂಚವರ್ಣದ ಪರಿಸರ ಸಂಬಂಧಿಸಿದ ಕಾರ್ಯಕ್ರಮ, ವಿದ್ಯಾರ್ಥಿಗಳನ್ನು ದತ್ತು ಪಡೆಯುವ ವಿವಿಧ ವಿಶೇಷ ಕಾರ್ಯಕ್ರಮಗಳು ಜನಸಾಮಾನ್ಯರ ಮನಮುಟ್ಟುವಂತ್ತಾಗಿದೆ. ಜಿಲ್ಲಾಡಳಿತ ಹಮ್ಮಿಕೊಂಡ ಹೆಚ್ಚಿನ ಕಾರ್ಯಕ್ರಮಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದೆ ಇಂತಹ ಸಂಸ್ಥೆಯ ರಾಜ್ಯೋತ್ಸವ ಕಾರ್ಯಕ್ರಮಗಳು ಹೊಸತನ ಹೊಸತೇರಾಗಿ ಸಂಭ್ರಮಿಸಲಿ ಎಂದು ಹಾರೈಸಿದರು. ಮುಖ್ಯ ಅಭ್ಯಾಗತರಾಗಿ ಉಡುಪಿಯ ಪ್ರಸಿದ್ಧ ಸೃಷ್ಠಿ ಇಂಜಿನಿಯರ್ ಮುಖ್ಯಸ್ಥ ಜಯರಾಜ್ ವಿ. ಶೆಟ್ಟಿ, ಪಂಚವರ್ಣದ ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಪಂಚವರ್ಣ ಯುವಕ…
