Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಂಘಸಂಸ್ಥೆಗಳು ನಿತ್ಯನಿರಂರರವಾಗಿ ಸಾಮಾಜಿಕ ಕಳಕಳಿಯೊಂದಿಗೆ ಪರಿಸರವನ್ನು ಪ್ರೀತಿಸಿ ಸಾಮಾಜಿಕ ಬದ್ಧತೆಯನ್ನು ಪ್ರದರ್ಶಿಸುತ್ತಿರಬೇಕು ಈ ದಿಸೆಯಲ್ಲಿ ಪಂಚವರ್ಣದ ಸಮಾಜಮುಖಿ ಕಾರ್ಯ ಮಾದರಿಯಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ನುಡಿದರು. ಉಡುಪಿ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಇದೇ ಬರುವ ನವೆಂಬರ್ 16ರಂದು ಕೋಟದ ಗಾಂಧಿ ಮೈದಾನದಲ್ಲಿ ನಡೆಯಲಿರುವ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿ, ಪಂಚವರ್ಣದ ಪರಿಸರ ಸಂಬಂಧಿಸಿದ ಕಾರ್ಯಕ್ರಮ, ವಿದ್ಯಾರ್ಥಿಗಳನ್ನು ದತ್ತು ಪಡೆಯುವ ವಿವಿಧ ವಿಶೇಷ ಕಾರ್ಯಕ್ರಮಗಳು ಜನಸಾಮಾನ್ಯರ ಮನಮುಟ್ಟುವಂತ್ತಾಗಿದೆ. ಜಿಲ್ಲಾಡಳಿತ ಹಮ್ಮಿಕೊಂಡ ಹೆಚ್ಚಿನ ಕಾರ್ಯಕ್ರಮಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದೆ ಇಂತಹ ಸಂಸ್ಥೆಯ ರಾಜ್ಯೋತ್ಸವ ಕಾರ್ಯಕ್ರಮಗಳು ಹೊಸತನ ಹೊಸತೇರಾಗಿ ಸಂಭ್ರಮಿಸಲಿ ಎಂದು ಹಾರೈಸಿದರು. ಮುಖ್ಯ ಅಭ್ಯಾಗತರಾಗಿ ಉಡುಪಿಯ ಪ್ರಸಿದ್ಧ ಸೃಷ್ಠಿ ಇಂಜಿನಿಯರ್ ಮುಖ್ಯಸ್ಥ ಜಯರಾಜ್ ವಿ. ಶೆಟ್ಟಿ, ಪಂಚವರ್ಣದ ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಪಂಚವರ್ಣ ಯುವಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿ ಮೀನುಗಾರಿಕೆ ಬಂದರಿನಲ್ಲಿ ಹಾಗೂ ಅಳಿವೆಯಲ್ಲಿ ತುರ್ತು ಹೂಳೆತ್ತುವ ಕಾರ್ಯ ನಡೆಸಬೇಕೆಂದು ಗಂಗೊಳ್ಳಿಯ ಹಸಿ ಮೀನು ವ್ಯಾಪರಸ್ಥರ ಮತ್ತು ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ನಿಯೋಗ ರಾಜ್ಯದ ಮೀನುಗಾರಿಕೆ ಇಲಾಖೆ ಸಚಿವ ಮಂಕಾಳು ವೈದ್ಯ ಅವರನ್ನು ಗುರುವಾರ ಭೇಟಿ ಮಾಡಿ ಮನವಿ ಸಲ್ಲಿಸಿತು. ಮೀನುಗಾರರ ಬೇಡಿಕೆಗಳಿಗೆ ಸ್ಪಂದಿಸಿದ ಸಚಿವ ಮಂಕಾಳು ವೈದ್ಯ ಅವರು, ಹೂಳೆತ್ತುವ ಬಗ್ಗೆ ಇಲಾಖೆ ಅಧಿಕಾರಿಗಳ ಮೂಲಕ ವರದಿ ತರಿಸಿಕೊಂಡು ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು. ಸಚಿವರ ಸೂಚನೆ ಮೇರೆಗೆ ಗಂಗೊಳ್ಳಿ ಮೀನುಗಾರಿಕೆ ಬಂದರು ಪ್ರದೇಶಕ್ಕೆ ಶುಕ್ರವಾರ ಭೇಟಿ ನೀಡಿ, ಬಂದರು ಮತ್ತು ಮೀನುಗಾರಿಕೆ ಇಲಾಖೆಯ ಜೆಇ ಭಾನುಪ್ರಕಾಶ್ ಅವರು ಬಂದರು ಹಾಗೂ ಅಳಿವೆ ಪ್ರದೇಶವನ್ನು ವೀಕ್ಷಿಸಿ ಅಳಿವೆಯಲ್ಲಿ ತುರ್ತು ಹೂಳೆತ್ತುವ ಕಾಮಗಾರಿ ಪ್ರಾರಂಭಿಸುವ ಬಗ್ಗೆ ಇಲಾಖೆ ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು. ಕಳೆದ ನವೆಂಬರ್ ತಿಂಗಳಿನಲ್ಲಿ ಸುಮಾರು 4.6 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾದ ಅಳಿವೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: 14 ವಯೋಮಾನದ ಬಾಲಕರ ಕಬಡ್ಡಿಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಾಬ್ರಕಟ್ಟೆ ತಂಡ ಹೋಬಳಿ, ತಾಲೂಕು ಜಿಲ್ಲೆಯಲ್ಲಿ ತನ್ನ ತಂಡದ ಬಲಿಷ್ಠತೆಯನ್ನು ಪ್ರಚುರ ಪಡಿಸುತ್ತಾ ದೊಡ್ಡ ಅಂತರದೊಂದಿಗೆ ಉಳಿದ ತಂಡಗಳನ್ನು ಮಣಿಸಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿತ್ತು. ಅ.15ರಿಂದ 17ರ ವರೆಗೆ ಚಿಕ್ಕಮಗಳೂರಿನ ಕಡೂರಿನಲ್ಲಿ ನಡೆದ ಮೈಸೂರು ವಿಭಾಗ ಮಟ್ಟದಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿದ್ದ ತಂಡ ತೃತೀಯ ಸ್ಥಾನ ಪಡೆಯುವುದರೊಂದಿಗೆ ಶಾಲೆ ಹಾಗೂ ಉಡುಪಿ ಜಿಲ್ಲೆಗೆ ಕೀರ್ತಿಯನ್ನು ತಂದಿರುತ್ತದೆ. ಕ್ರೀಡಾ ಸ್ಪೂರ್ತಿ, ಸಮರ್ಪಣ ಮನೋಭಾವ ಮತ್ತು ಕಠಿಣ ಪರಿಶ್ರಮದಿಂದ ದೈಹಿಕ ಶಿಕ್ಷಕರಾದ ಗಜೇಂದ್ರ ಶೆಟ್ಟಿ ಅವರ ಗರಡಿಯಲ್ಲಿ ತಯಾರಾದ ಕುಮಾರ ರೋಹಿತ್ ನಾಯಕತ್ವದ ತಂಡ ಪ್ರಥಮ ಪಂದ್ಯಾಟದಲ್ಲಿ ಮೈಸೂರಿನ ವಿರುದ್ಧ 40-08ರ ದೊಡ್ಡ ಅಂತರದಲ್ಲಿ ಜಯಶಾಲಿಯಾಗಿ ಸೆಮಿಫೈನಲ್ ಹಂತ ತಲುಪಿತ್ತು. ಸೆಮಿಫೈನಲ್‌ನಲ್ಲಿ ಮಂಡ್ಯದ ವಿರುದ್ಧ ಕೇವಲ 08 ಅಂಕಗಳ ಅಂತರದಲ್ಲಿ ವಿರೋಚಿತ ಸೋಲನ್ನು ಅನುಭವಿಸಿತು. ಮೂರನೇ ಸ್ಥಾನಕ್ಕಾಗಿ ಹಾಸನ ತಂಡದ ವಿರುದ್ಧ ನಡೆದ ಪಂದ್ಯಾಟದಲ್ಲಿ 45-21ರ ಅಂತರದಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ದಕ್ಷಿಣ ಕನ್ನಡ – ಉಡುಪಿ ಸ್ಥಳೀಯ ಸಂಸ್ಥೆಗಳ ಕರ್ನಾಟಕ ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಗೆಲುವು ಶತಸಿದ್ಧ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿಶ್ವಾಸ ವ್ಯಕ್ತಪಡಿಸಿದ್ಧಾರೆ.  ಉಡುಪಿಯ ಕಾಂಗ್ರೆಸ್ ಭವನದಲ್ಲಿ ನಡೆದ ಚುನಾವಣಾ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಗೆಲುವು ನಿಶ್ಚಿತ. ಕರಾವಳಿಯಲ್ಲಿ ಪಕ್ಷದ ಅಭ್ಯರ್ಥಿ ರಾಜು ಪೂಜಾರಿ ಪರ ಒಲವು ಇದೆ. ಗೆಲುವಿಗೆ ಉತ್ತಮ ವಾತಾವರಣವಿದೆ. ಅದಕ್ಕಾಗಿ ಪಕ್ಷದ ನಾಯಕರು ಶ್ರಮಿಸುತ್ತಿದ್ದಾರೆ ಎಂದು ಹೇಳಿದರು. ಜನಪರ ಕಾರ್ಯಕ್ರಮಗಳನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತಿದ್ದೇವೆ. ಮತದಾರರು ಕೂಡ ಕಾಂಗ್ರೆಸ್‌ ಪಕ್ಷದ ಯೋಜನೆಗಳ ಬಗ್ಗೆ ವಿಶ್ವಾಸವಿಟ್ಟಿದ್ದಾರೆ. ಪಂಚ ಗ್ಯಾರಂಟಿ ಯೋಜನೆಗಳು ನಮ್ಮನ್ನು ಕೈ ಬಿಡುವುದಿಲ್ಲ. ಪ್ರತಿ ಪಂಚಾಯತಿಗೆ ಎರಡು ಕೋಟಿ ಅನುದಾನ ತರಲು ಉದ್ಯೋಗ ಖಾತ್ರಿ ಸಹಕಾರಿಯಾಗಿದೆ. ಇದನ್ನು ಜಾರಿಗೆ ತಂದ ಶ್ರೇಯಸ್ಸು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಇಂಡಿಯನ್ ರೆಡ್ ಕ್ರಾಸ್, ಲಯನ್ಸ್  ಕ್ಲಬ್ , ಹೆಚ್.ಡಿ.ಎಫ್.ಸಿ. ಬ್ಯಾಂಕ್ ಲಿಮಿಟೆಡ್, ರೆಡ್ ರಿಬ್ಬನ್ ಕ್ಲಬ್‌ ಕುಂದಾಪುರ, ಭಂಡಾರ್ಕಾರ್ಸ್ ಕಾಲೇಜಿನ ಎನ್.ಸಿ.ಸಿ ನೌಕಾದಳ ಮತ್ತು ಭೂದಳ, ರಾಷ್ಟ್ರೀಯ ಸೇವಾ ಯೋಜನೆ ಘಟಕ, ಯುಥ್ ರೆಡ್ ಕ್ರಾಸ್ ಘಟಕ, ರೇಂಜರ್ಸ್ ಮತ್ತು ರೋವರ್ಸ್ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವು ಶನಿವಾರದಂದು ನಡೆಯಿತು. ಕುಂದಾಪುರ ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರೇಮಾನಂದ ಅವರು ಉದ್ಘಾಟಿಸಿ ಮಾತನಾಡಿ, ವ್ಯಕ್ತಿಯ ಆರೋಗ್ಯದ ನೆಲೆಯಲ್ಲಿ ರಕ್ತದಾನ ಒಳ್ಳೆಯದು. ನಾಲ್ಕು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು. ಅಲ್ಲದೆ ರಕ್ತದಾನ ಪ್ರಕ್ರಿಯೆ ಯಲ್ಲಿ ನಿಮ್ಮ ರಕ್ತದಲ್ಲಿ ಮಲೇರಿಯಾ, ಹೆಪಾಟೈಟಿಸ್ ಹೀಗೆ ಬೇರೆ ಬೇರೆ ಪರೀಕ್ಷೆ ನಡೆಯುತ್ತದೆ. ಇದರಿಂದ ನಿಮಗೆ ಸಹಕಾರಿಯಾಗುತ್ತದೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ವಹಿಸಿದ್ದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಕುಂದಾಪುರದ ಭಾರತೀಯ ರೆಡ್ ಕ್ರಾಸ್ ಸಭಾಪತಿಗಳಾದ ಜಯಕರ ಶೆಟ್ಟಿ ಕೋಶಾಧಿಕಾರಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ಮತ್ತು ವಿಜ್ಞಾನ ವಿಭಾಗದ ಆಶ್ರಯದಲ್ಲಿ ವಿಭಾಗದ ಅಂತಿಮ ವರ್ಷದ ಬಿಸಿಎ ಹಾಗೂ ಬಿಎಸ್ಸಿ ವಿದ್ಯಾರ್ಥಿಗಳಿಗೆ ಮಣಿಪಾಲದ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ಗೆ ಅಧ್ಯಯನ ಭೇಟಿಯನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ರೋಬೋಟಿಕ್ಸ್, ಕೃತಕ ಬುದ್ಧಿಮತ್ತೆ, ಮತ್ತಿತರ ಆಧುನಿಕ ತಂತ್ರಜ್ಞಾನಗಳ ಕುರಿತು ಮಾಹಿತಿಯನ್ನು ನೀಡಲಾಯಿತು.  ಈ ಸಂದರ್ಭದಲ್ಲಿ ವಿಭಾಗದ ಪ್ರಾಧ್ಯಾಪಕರುಗಳಾದ ವಿಲ್ಮಾ, ಹರೀಶ್ ಕಾಂಚನ್, ಶ್ರೀಕಾಂತ್, ಮೇಘಾ ಮತ್ತು ನಿರ್ಮಲಾ ವಿದ್ಯಾರ್ಥಿಗಳೊಂದಿಗೆ ಪಾಲ್ಗೊಂಡಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಹಾಗೂ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ಸಹಯೋಗದೊಂದಿಗೆ ನಡೆಯುತ್ತಿರುವ ಲೇಕ್ 2024 – 14ನೇ ದ್ವೈವಾರ್ಷಿಕ  ವಿಚಾರ ಸಂಕಿರಣ ಎರಡನೇ  ದಿನ ಒಟ್ಟು ತಾಂತ್ರಿಕ ಅವಧಿಯಲ್ಲಿ ನಗರ ವಿಭಾಗದ ಆರರಿಂದ ಒಂಬತ್ತನೇ ತರಗತಿಯ  83 ವಿದ್ಯಾರ್ಥಿಗಳು ಹಾಗೂ ಗ್ರಾಮೀಣ ವಿಭಾಗದಿಂದ 45 ವಿದ್ಯಾರ್ಥಿಗಳ ಪ್ರಸ್ತುತಿ, 21 ಸಂಶೋಧಕರು ಮತ್ತು ಅಧ್ಯಾಪಕರಿಂದ ಪ್ರಸ್ತುತಿ, ಹತ್ತರಿಂದ ಹನ್ನೆರಡನೇ ತರಗತಿಯ 32 ವಿದ್ಯಾರ್ಥಿಗಳ ಪ್ರಸ್ತುತಿ, ಪದವಿ, ಸ್ನಾತಕೋತ್ತರ ಪದವಿ, ಸಂಶೋಧನಾ ವಿದ್ಯಾರ್ಥಿಗಳಿಂದ  ಒಟ್ಟು  38  ಜನರ ವಿಚಾರ ಮಂಡನೆ ಕಾಲೇಜಿನ ವಿವಿಧ ಸಭಾಂಗಣದಲ್ಲಿ ನಡೆಯಿತು. ಜೊತೆಯಲ್ಲಿ, ಎಲ್ಲಾ ವರ್ಗಗಳಲ್ಲಿ  ಒಟ್ಟು  63 ಸಂಶೋಧನಾ ಆಸಕ್ತರು  ಪೋಸ್ಟರ್ ಪ್ರಸ್ತುತಿಯಲ್ಲಿ ಭಾಗಿಯಾದರು. ಮೈಕ್ರೋ ಪ್ಲಾಸ್ಟಿಕ್ ಕಾರಣಅಂತರರಾಷ್ಟ್ರೀಯ ಸಂಶೋಧನಾ ಪ್ರಸ್ತುತಿಯಲ್ಲಿ ರಷ್ಯಾದ ನಿಕೋಲಾಯ್ ಫಿಲೆಟೊವ್- ಹವಾಮಾನ ತಾಪಮಾನ ಮತ್ತು ಮಾನವಜನ್ಯ ಪರಿಣಾಮಗಳು: ರಷ್ಯಾದ ಕೆರೆಗಳ ಆಧುನಿಕ ಸ್ಥಿತಿ ಮತ್ತು ಬದಲಾವಣೆಗಳಲ್ಲಿ ಪರಿಸರ ಮತ್ತು ಸಾಮಾಜಿಕ, ಆರ್ಥಿಕ ಅಂಶಗಳ ಕುರಿತು ಮಾತನಾಡಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಎಳವೆಯಲ್ಲಿಯೇ ಮಕ್ಕಳಿಗೆ ಸಮರ್ಪಕ ವೇದಿಕೆ ಕಲ್ಪಿಸಿಕೊಡಬೇಕು, ಮಕ್ಕಳ ಪ್ರಥಮ ಪ್ರತಿಭೆ ಅನಾವರಣಕ್ಕೆ ಕೃಷ್ಣ ವೇಷ ಸ್ಪರ್ಧೆಗಳೇ ಬುನಾದಿ. ಕಾರಂತರಿಗೆ ಮಕ್ಕಳೆಂದರೆ ಅಚ್ಚುಮೆಚ್ಚು ಅವರ ನೆನಪಿನಲ್ಲಿ ನಿರ್ಮಾಣವಾದ ಈ ಸ್ಥಳದಲ್ಲಿ ಮಕ್ಕಳಿಗಾಗಿಯೇ ಹೆಚ್ಚೆಚ್ಚು ಕಾರ್ಯಕ್ರಮ ಆಯೋಜಿಸುತ್ತಿರುವುದು ಶ್ಲಾಘನೀಯ ಎಂದು ಸಾಂಸ್ಕೃತಿಕ ಚಿಂತಕಿ ಗೀತಾ ಆನಂದ್ ಸಿ. ಕುಂದರ್ ಅವರು ಹೇಳಿದರು. ಅವರು ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್‌ನಲ್ಲಿ ನಡೆದ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರತಿಷ್ಠಾನ ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ಕೋಟತಟ್ಟು ಮಹಿಳಾ ಮಂಡಲ ಕೋಟ, ರೋಟರಿ ಕ್ಲಬ್ ಹಂಗಾರಕಟ್ಟೆ – ಸಾಸ್ತಾನ ಸಹಯೋಗದಲ್ಲಿ ಕಾರಂತ ಹುಟ್ಟೂರ ಪುರಸ್ಕಾರದ ವಿಂಶತಿ ಅಂಗವಾಗಿ, ಕಾರಂತ ಜನುಮದಿನದಂದು ಮುದ್ದು ಕೃಷ್ಣ ವೇಷ  ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಕಾರಂತ ಪ್ರತಿಷ್ಠಾನದ ಟ್ರಸ್ಟಿ ಸುಶೀಲಾ ಸೋಮಶೇಖರ್, ರೋಟರಿ ಕ್ಲಬ್ ಹಂಗಾರಕಟ್ಟೆ – ಸಾಸ್ತಾನದ ಅಧ್ಯಕ್ಷೆಯಾದ ಲೀಲಾವತಿ ಗಂಗಾಧರ, ಸಾಂಸ್ಕೃತಿಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಬೆಳಗಾವಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪದವಿಪೂರ್ವ ವಿಭಾಗ) ಬೆಳಗಾವಿ, ಶಾಂತಿನಿಕೇತನ ಪದವಿಪೂರ್ವ ಕಾಲೇಜು ಖಾನಾಪುರ ಇವರ ಸಂಯುಕ್ತ ಆಶ್ರಯದಲ್ಲಿ  ನಡೆದ ರಾಜ್ಯ ಮಟ್ಟದ ಪದವಿಪೂರ್ವ ಬಾಲಕ/ಬಾಲಕಿಯರ ಕುಸ್ತಿ ‌ಪಂದ್ಯಾಟದಲ್ಲಿ, ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಪಂದ್ಯಕ್ಕೆ ಆಯ್ಕೆಯಾದ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ಒಟ್ಟು 7 ವಿದ್ಯಾರ್ಥಿಗಳು ಪದಕಗಳನ್ನು ಪಡೆದು ಅದ್ವಿತೀಯ ಸಾಧನೆ ಮಾಡಿರುತ್ತಾರೆ. ಬಾಲಕಿಯರ 70ಕೆ.ಜಿ. ವಿಭಾಗದಲ್ಲಿ ವಿದ್ಯಾರ್ಥಿನಿ ಗಾಯತ್ರಿ ಚಿನ್ನದ ಪದಕ ಹಾಗೂ ಬಾಲಕರ 97+ಕೆ.ಜಿ. ವಿಭಾಗದಲ್ಲಿ ವಿದ್ಯಾರ್ಥಿ ಋತ್ವಿಕ್ ಚಿನ್ನದ ಪದಕ.ಈ ಮೂಲಕ ಈರ್ವರು ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಉಳಿದಂತೆ ಉತ್ತಮ ಪ್ರದರ್ಶನ ನೀಡಿದ ವಿದ್ಯಾರ್ಥಿಗಳು ಕ್ರಮವಾಗಿ, 50 ಕೆ.ಜಿ. ವಿಭಾಗದಲ್ಲಿ ಅನನ್ಯ ಬೆಳ್ಳಿಯ ಪದಕ, 97ಕೆ.ಜಿ.ವಿಭಾಗದಲ್ಲಿ ಪನ್ನಗ ಬೆಳ್ಳಿಯ ಪದಕ 72ಕೆ.ಜಿ. ವಿಭಾಗದಲ್ಲಿ ಅನುಷಾ ಕಂಚಿನ ಪದಕ, 68 ಕೆ.ಜಿ. ವಿಭಾಗದಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ, ವಿಜಯ ಗ್ರಾಮೀಣ ಪ್ರತಿಷ್ಠಾನ ಮಂಗಳೂರು ಇವರ ಸಹಯೋಗದಲ್ಲಿ ಕಳೆದ ತಿಂಗಳು ಗಂಗೊಳ್ಳಿಯಲ್ಲಿ 10 ದಿನಗಳ ಕಾಲ ನಡೆಸಲಾದ ಆರಿ ಎಂಬ್ರಾಯ್ಡರಿ ತರಬೇತಿಯ ಫಲಾನುಭವಿಗಳು ಗಂಗೊಳ್ಳಿಯಲ್ಲಿ ಆರಂಭಿಸಿದ ಆಶ್ರಯ ಆರಿ ಎಂಬ್ರಾಯ್ಡರಿ ತರಬೇತಿ ಕೇಂದ್ರ ಎಂಬ ಸ್ವ ಉದ್ಯಮವನ್ನು ಮಣಿಪಾಲದ ಭಾರತೀಯ ವಿಕಾಸ ಟ್ರಸ್ಟ್‌ನ ರಾಘವೇಂದ್ರ ಆಚಾರ್ಯ ಕೆದೂರು ಗುರುವಾರ ಉದ್ಘಾಟಿಸಿ ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಫಲಾನುಭವಿಗಳು ರಚಿಸಿಕೊಂಡಿರುವ ನೂತನ ಸ್ವಸಹಾಯ ಸಂಘಕ್ಕೆ ಚಾಲನೆ ನೀಡಲಾಯಿತು. ತರಬೇತುದಾರೆ ಆರತಿ ರಾಜ್, ತರಬೇತಿ ಕೇಂದ್ರದ ಮುಖ್ಯಸ್ಥರಾದ ರೇಖಾ ಖಾರ್ವಿ ಮತ್ತು ಶಾಂತಿ ಖಾರ್ವಿ ಮತ್ತು ಸದಸ್ಯರು ಉಪಸ್ಥಿತರಿದ್ದರು.

Read More