Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ವರದಿ.ಕುಂದಾಪುರ: ಕುಂದಾಪ್ರ ಕನ್ನಡ ಅಧ್ಯಯನ ಪೀಠ ಆರಂಭಕ್ಕೆ ಆಸ್ಥೆ ವಹಿಸಿ ಮಂಗಳೂರು ವಿಶ್ವವಿದ್ಯಾನಿಲಯವು ಸರಕಾರಕ್ಕೆ ಸಲ್ಲಿಸಿದ್ದ ಪ್ರಸ್ತಾವನೆಗೆ ನಾಲ್ಕು ವರ್ಷಗಳ ಜೀವಕಳೆ ದೊರೆತಿದೆ. ಅನುದಾನ ಬಿಡುಗಡೆಗೆ ಮುಖ್ಯಮಂತ್ರಿ ಟಿಪ್ಪಣಿಯಾಗಿದ್ದು, ಶೀಘ್ರವೇ ಅನುದಾನ ಬಿಡುಗಡೆಗೊಂಡು ಅಧ್ಯಯನ ಪೀಠ ಸ್ಥಾಪನೆಯ ಹಾದಿ ಸುಗಮವಾಗಲಿದೆ. ನಾಲ್ಕು ವರ್ಷಗಳ ಹಿಂದೆ ಅಧ್ಯಯನ ಪೀಠ ಆರಂಭಿಸಲು ಮಂಗಳೂರು ವಿವಿ ಸಿಂಡಿಕೇಟ್ ಸಭೆಯಲ್ಲಿ ನಿರ್ಣಯಿಸಲಾಗಿತ್ತು. ಆರಂಭದಲ್ಲಿ ವಿಶ್ವ ವಿದ್ಯಾನಿಲಯದ ಆಂತರಿಕ ಸಂಪನ್ಮೂಲದಿಂದ ರೂ.25 ಲಕ್ಷ ಹಣವನ್ನು ಮೀಸಲಿರಿಸಿ, ಪೀಠದ ಸಮರ್ಪಕ ಹಾಗೂ ರಚನಾತ್ಮಕ ಕೆಲಸಗಳಿಗೆ ಸರಕಾರದಿಂದ 1.50 ಕೋಟಿ ಅನುದಾನವನ್ನು ನಿರೀಕ್ಷಿಸಿತ್ತು. ಅಂತಿಮವಾಗಿ ಸರಕಾರದ ಅನುದಾನ ಬಂದ ಬಳಿಕವಷ್ಟೇ ಅಧ್ಯಯನ ಪೀಠ ಸ್ಥಾಪಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿತ್ತು. ಫೆ.20ರಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಕೆ. ಜಯಪ್ರಕಾಶ್ ಹೆಗ್ಡೆ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಮತ್ತೆ ಪತ್ರ ಬರೆದು ವಿಶ್ವವಿದ್ಯಾನಿಲಯಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ ಮಾಡಿದ್ದು, ಅದಕ್ಕೆ ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿದ್ದರು. ದಶಕಗಳಿಂದ ಕುಂದಾಪ್ರ ಕನ್ನಡ ಅಕಾಡೆಮಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಷ್ಟ್ರ ಮಟ್ಟದಲ್ಲಿ ನಡೆದ ಜೆಇಇ ಮೈನ್ಸ್ B.Arch ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಲಕಾ ಹೆಬ್ಬಾರ್ 99.744 ಫಲಿತಾಂಶದೊಂದಿಗೆ ಅಗ್ರಗಣ್ಯ ಸಾಧನೆ ಮೆರೆದಿದ್ದಾಳೆ. ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ. ಕಾಲೇಜು ಪ್ರಾರಂಭದ ದ್ವಿತೀಯ ವರ್ಷದಲ್ಲೇ ಅಪ್ರತಿಮ ಸಾಧನೆ ಮೆರೆದ ವಿದ್ಯಾರ್ಥಿನಿ, ಗ್ರಾಮೀಣ ಭಾಗದ ಪರಿಸರದಲ್ಲಿ ಆರಂಭಗೊಂಡಿರುವ ಶಿಕ್ಷಣ ಸಂಸ್ಥೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಾ ಉತ್ತಮ ಶಿಕ್ಷಣ ನೀಡುತ್ತಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ದೈವಜ್ಞ ಬ್ರಾಹ್ಮಣ ಸಮಾಜದ ಆರಾಧಿಸಿ ಪೂಜಿಸಿಕೊಂಡು ಬಂದಿರುವ ದೈವಜ್ಞ ಕೇರಿಯಲ್ಲಿರುವ ಶ್ರೀ ನಾಗಜಟ್ಟಿಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮ ಕುಂಭಾಭಿಷೇಕ ಮತ್ತು ಸ್ವಪರಿವಾರ ನಾಗಶಿಲಾ ಪ್ರತಿಷ್ಠೆ, ಆಶ್ಲೇಷ ಬಲಿ, ಹಾಗೂ ಸಪರಿವಾರ ಜಟ್ಟಿಗೇಶ್ವರ ದೈವದ ಪುನಃ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕವು ಬುಧವಾರ ಜರುಗಿತು. ಜ್ಯೋತಿಷಿ ವಿದ್ವಾನ್ ಶ್ರೀ ವಾಸುದೇವ ಜೋಷಿ ಹಾಲಾಡಿ ಇವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಮಧ್ಯಾಹ್ನ ಮಹಾ ಅನ್ನಸಂತರ್ಪಣೆಗೆ ಸಹಸ್ರಾರು ಭಕ್ತರು ಭಾಗವಹಿಸಿ ಅನ್ನಪ್ರಸಾದ ಸ್ವೀಕರಿಸಿದರು. ಸಂಜೆ ನಡೆದ ಸಭಾ ಕಾರ್ಯಕ್ರಮದಲ್ಲಿ ರವೀಂದ್ರ ಶೇಟ್ ಮಂಗಳೂರು ಅಧ್ಯಕ್ಷತೆ ವಹಿಸಿದ್ದರು ,ಗೌರವಾಧ್ಯಕ್ಷರಾದ ಮುಖ್ಯ ಅತಿಥಿಗಳಾಗಿ ಶ್ರೀ ಮಂಜುನಾಥ್ ಶೇಟ್ ಶಂಕರನಾರಾಯ, ಣ ಯು. ನಾಗರಾಜ ಶೇಟ್ ಉಡುಪಿ, ಬಿ. ಎನ್ .ಸುಬ್ರಮಣ್ಯ ಶೇಟ್ ಬೆಂಗಳೂರು, ಪ್ರಶಾಂತ್ ಶೇಟ್ .ಮಂಗಳೂರು ಉಪಸ್ಥಿತರಿದ್ದರು, ಶ್ರೀ ನಾಗ ಜಟ್ಟಿಗೇಶ್ವರ ಟ್ರಸ್ಟ್ ನ ಅಧ್ಯಕ್ಷರಾದ ಶ್ರೀನಿವಾಸ್ ಶೇಟ್ ಸ್ವಾಗತ ಕೋರಿ,ಜೀರ್ಣೋದ್ಧಾರಕ್ಕೆ ಸಹಕರಿಸಿದ ದಾನಿಗಳನ್ನು ವೇದಿಕೆಯಲ್ಲಿ ಸ್ಮರಣಿಕೆ ನೀಡಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾಲೇಜಿನ ವೃತ್ತಿ ಮಾರ್ಗದರ್ಶನ ಘಟಕದ ನೇತೃತ್ವದಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಐಸಿಐಸಿಐ ಬ್ಯಾಂಕ್ ವತಿಯಿಂದ ಕಾಲೇಜಿನಲ್ಲಿ ಕ್ಯಾಂಪಸ್ ನೇಮಕಾತಿ ಡ್ರೆöÊವ್ ನೆರವೇರಿತು. ಎನ್.ಐ.ಟಿ.ಐ ಕನ್ಸ್ಲ್ಟೆಂಟ್ ಶ್ರೀನಿಧಿ ಮಾತನಾಡಿ ವಿದ್ಯಾರ್ಥಿಗಳಿಗೆ ಐಸಿಐಸಿಐ ಬ್ಯಾಂಕ್ ಒದಗಿಸಿಕೊಟ್ಟ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಅಧ್ಯಕ್ಷತೆ ವಹಿಸಿ, ಮಾತನಾಡಿ ವಿದ್ಯಾರ್ಥಿಗಳ ಆತ್ಮವಿಶ್ವಾಸ ಹಾಗೂ ತರಬೇತಿಯಲ್ಲಿನ ಸಕ್ರಿಯ ಭಾಗವಹಿಸುವಿಕೆ ಸಂದರ್ಶನದಲ್ಲಿ ಯಶಸ್ಸನ್ನು ತಂದುಕೊಡುತ್ತದೆ ಎಂದರು. ಈ ಸಂದರ್ಭ ಎನ್.ಐ.ಟಿ.ಐ ಕನ್ಸ್ಲ್ಟೆಂಟ್ ಅನನ್ಯ ಉಪಸ್ಥಿತರಿದ್ದರು. ವೃತ್ತಿ ಮಾರ್ಗದರ್ಶನ ಘಟಕದ ಅಧಿಕಾರಿ ಹರೀಶ್ ಕಾಂಚನ್ ವಂದಿಸಿದರು. ವಿದ್ಯಾರ್ಥಿಗಳಾದ ರಶ್ಮಿ ಪ್ರಾರ್ಥಿಸಿ, ಚೇತನ್ ಶೆಟ್ಟಿ ಸ್ವಾಗತಿಸಿ, ಸೌಭಾಗ್ಯ ಕಿಣಿ ಕಾರ್ಯಕ್ರಮ ನಿರೂಪಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಲಾಡ್ಜ್ನಲ್ಲಿ ತಂಗಿದ್ದ ಚಿನ್ನದ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ನಿಂದ ಕೆಲವು ತಿಂಗಳ ಹಿಂದೆ ಚಿನ್ನಾಭರಣ ಕಳವುಗೈದಿದ್ದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಕುಂದಾಪುರ ಪೊಲೀಸರು ಮುಂಬೈಯಲ್ಲಿ ಬಂಧಿಸಿ, ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ರಾಜಸ್ಥಾನದ ಪಾಲಿ ಜಿಲ್ಲೆಯ ಖೋರ್ ಗ್ರಾಮದ ರಾಮ್ ರಾಯಲ್ ಯಾನೆ ಬಾಳು ರಾಮ್(21) ಹಾಗೂ ಸೇವಾರಿ ಗ್ರಾಮ ಬರ್ಲಾಬೆರಾ ಗ್ರಾಮದ ಪ್ರವೀಣ್ ಕುಮಾರ್(25) ಬಂಧಿತ ಆರೋಪಿಗಳು. ಇವರಿಂದ 10ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮೊಹಮ್ಮದ್ ಶಾಹಬುದ್ದಿನ್ ಮಾಲಕತ್ವದ ಹಾಜಿ ಗೋಲ್ಡ್ ಆ್ಯಂಡ್ ಡೈಮಂಡ್ ಜುವೆಲರಿಯ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ರಮೇಶ್ ಕುಮಾರ್ ಅವರು ಚಿನ್ನಾ ಭರಣ ಮಾರಾಟಕ್ಕೆಂದು 2023ರ ಜೂ.10ರಂದು ಕುಂದಾಪುರ ಕಡೆಗೆ ಬಂದಿದ್ದರು. ಉಪ್ಪುಂದಕ್ಕೆ ತೆರಳಿ, ಅಲ್ಲಿಂದ ಸಂಜೆ ವಾಪಸಾಗಿ, ರಾತ್ರಿ ಕುಂದಾಪುರದ ಖಾಸಗಿ ಹೊಟೇಲೊಂದರಲ್ಲಿ ಸ್ನೇಹಿತ ರಾಜಸ್ಥಾನ ಮೂಲದ ರಾಮ್ ಎಂಬಾತನ ಜತೆ 421 ಗ್ರಾಂ. ತೂಕದ ಚಿನ್ನಾಭರಣವನ್ನು ಮಂಚದ ಕೆಳಗಿಟ್ಟು ಮಲಗಿದ್ದರು. ಬೆಳಗ್ಗಿನ ಜಾವ 3 ಗಂಟೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಸಂಜೀವಿನಿ ಸಂಘದ ಮೂಲಕ ಮಹಿಳೆಯರಿಗೆ ಸ್ವಾವಲಂಬಿ ಜೀವನ ನಡೆಸಲು ಸರಕಾರ ವಿವಿಧ ಯೋಜನೆಗಳ ಮೂಲಕ ಅನುದಾನ ಒದಗಿಸುತ್ತಿದೆ. ಊರಿನಲ್ಲಿದ್ದು ದುಡಿಮೆ ಮಾಡಲು ಸಂಜೀವಿನಿ ಸಂಘಗಳ ಸಹಕಾರಿಯಾಗುತ್ತದೆ. ಸಂಜೀವಿನಿ ಸಂಘದ ಸದಸ್ಯರು ವ್ಯವಹಾರ ಬಗ್ಗೆ ತರಬೇತಿ ಪಡೆದುಕೊಂಡು ವ್ಯವಹಾರದಲ್ಲಿ ಯಶಸ್ಸು ಗಳಿಸಲು ಪ್ರಯತ್ನಿಸಬೇಕು. ಸಂಜೀವಿನಿ ಘಟಕ ಯಶಸ್ಸು ಗಳಿಸುವುದರ ಮೂಲಕ ಇತರರಿಗೆ ಮಾದರಿಯಾಗಬೇಕು ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು. ಜಿಲ್ಲಾ ಪಂಚಾಯತ್ ಉಡುಪಿ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಕೃಷಿ ಇಲಾಖೆ ಉಡುಪಿ, ತಾಲೂಕು ಪಂಚಾಯತ್ ಕುಂದಾಪುರ ಹಾಗೂ ಗ್ರಾಮ ಪಂಚಾಯತ್ ಗುಜ್ಜಾಡಿ, ಸಮೃದ್ಧಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ವತಿಯಿಂದ ಕೊಡಪಾಡಿಯಲ್ಲಿ ನೂತನವಾಗಿ ಪ್ರಾರಂಭಿಸಲಾದ ಶ್ರೀ ದುರ್ಗಾ ಸಂಜೀವಿನಿ ಚಿಕ್ಕಿ ಘಟಕವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು. ಗುಜ್ಜಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ತಮ್ಮಯ್ಯ ದೇವಾಡಿಗ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ ನಾಯ್ಕ್, ಕುಂದಾಪುರ ತಾಪಂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರೋಟರಿ ಕ್ಲಬ್ ಬೈಂದೂರು ವತಿಯಿಂದ ಸಮುದಾಯ ಆರೋಗ್ಯ ಕೇಂದ್ರ, ಬೈಂದೂರು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ, ಶಿರೂರು ಇಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಜರುಗಿತು. ರೋಟರಿ ವತಿಯಿಂದ ಎರಡೂ ಕಡೆಗಳಲ್ಲಿ ಲಸಿಕೆಯ ಮನೆ ಮನೆ ವಿತರಣೆಗಾಗಿ ವಾಹನದ ವ್ಯವಸ್ಥೆ ಹಾಗೂ ಸಿಬಂದಿಗಳಿಗೆ ಉಪಹಾರದ ವ್ಯವಸ್ಥೆಯನ್ನು ವತಿಯಿಂದ ಮಾಡಲಾಯಿತು. ಕಾರ್ಯಕ್ರಮದಲ್ಲಿ ಅಧ್ಯಕ್ಷ ಪ್ರಸಾದ ಪ್ರಭು, ಕಾರ್ಯದರ್ಶಿ ಸುಬ್ರಹ್ಮಣ್ಯ ಜಿ., ಪೂರ್ವಾಧ್ಯಕ್ಷ ಐ ನಾರಾಯಣ ಹಾಗೂ ಹಿರಿಯ ಸದಸ್ಯರಾದ ಡಾ. ಎಮ್.ಎಸ್. ಶೆಟ್ಟಿ ಪಾಲ್ಗೊಂಡಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಭವಿಷ್ಯದಲ್ಲಿ ನೀರಿನ ಆಹಾಕಾರ ತಪ್ಪಿಸಲು ಪ್ರತಿಯೊಬ್ಬರೂ ತಮ್ಮ ಮನೆ ಹಾಗೂ ಜಮೀನುಗಳಲ್ಲಿ ಮಳೆ ನೀರಿನ ಕೊಯ್ಲು ಅಳವಡಿಸಿಕೊಳ್ಳುವುದು ಅತ್ಯಂತ ಸೂಕ್ತ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಅಟಲ್ ಬಿಹಾರಿ ವಾಜನೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಉದಯವಾಣಿ ಸಹಯೋಗದೊಂದಿಗೆ ನಡೆದ ಮಳೆ ನೀರು ಕೊಯ್ಲು ಕಾರ್ಯಗಾರವನ್ನು ಗಿಡಕ್ಕೆ ನೀರನ್ನು ಎರೆಯುವ ಮೂಲಕ ಉದ್ಘಾಟಿಸಿ ಮಾತನಾಡುತ್ತಿದ್ದರು. ಉಡುಪಿ ಜಿಲ್ಲೆಯು ಕರಾವಳಿ ಪ್ರದೇಶದಲ್ಲಿದ್ದು, ಸಮುದ್ರ ತೀರ ಒಂದೆಡೆಯಾದರೆ, 4000 ಮಿ.ಮೀ.ಕ್ಕೂ ಹೆಚ್ಚು ವಾಡಿಕೆ ಮಳೆ ಸುರಿದು , 16 ಕ್ಕೂ ಹೆಚ್ಚು ನದಿಗಳು ಹರಿಯುತ್ತಿದ್ದರೂ, ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುತ್ತಿದೆ ಎಂದರೆ ಇದಕ್ಕೆ ಅಂತರ್ಜಲ ಮಟ್ಟ ಕುಸಿಯುತ್ತಿರುವುದು ಮೂಲ ಕಾರಣ. ಇದನ್ನು ಗಂಭೀರವಾಗಿ ತೆಗೆದುಕೊಂಡು ಅಂತರ್ಜಲ ಮಟ್ಟ ಹೆಚ್ಚಿಸಲು ಮಳೆ ನೀರಿನ ಕೊಯ್ಲು ಅಳವಡಿಸಿಕೊಳ್ಳಬೇಕು ಎಂದರು. ಮಳೆ ನೀರಿನ ಕೊಯ್ಲು ಅಳವಡಿಸುವುದು ಅತ್ಯಂತ ಸರಳ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಚುನಾವಣಾ ಆಯೋಗ ಸೂಚಿಸಿರುವ ನಿಯಮಾನುಸಾರ ಚುನಾವಣೆಗೆ ಸಂಭಂದಿಸಿದ ಯಾವುದೇ ರೀತಿಯ ಕರಪತ್ರ ಹಾಗೂ ಜಾಹೀರಾತು ಮೂಲಕ ಚುನಾವಣೆ ಪ್ರಚಾರ ಪಡಿಸುವ ಮುನ್ನ ಎಂ.ಸಿ.ಎಂ.ಸಿ ಪ್ರಾಧಿಕಾರದ ಪೂರ್ವಾನುಮತಿ ಪಡೆಯುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದAತೆ ತಡೆಯುವುದಕ್ಕಾಗಿ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥರು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸ್ಥಳೀಯ ಕೇಬಲ್ ಆಪರೇರ್ಸ್ ಮತ್ತು ನೆಟ್ವರ್ಕ್ ಸರ್ವೀಸ್ ಪ್ರೋವೈರ್ಸ್ ಗಳಿಗೆ ಸೂಕ್ತ ನಿರ್ದೇಶನ ನೀಡಲು ಏರ್ಪಡಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. 2024ರ ಸಾರ್ವತ್ರಿಕ ಲೋಕಸಭಾ ಚುನಾವಣೆಯು ಕೆಲವೇ ದಿನಗಳಲ್ಲಿ ಘೋಷಣೆಯಾಗಿ ನೀತಿ ಸಂಹಿತೆ ಜಾರಿಗೆ ಬರಲಿದೆ. ಚುನಾವಣಾ ಪ್ರಕ್ರಿಯೆಗೆ ಸಂಭ್ರಮದಿಂದ ಚಟುವಟಿಕೆಗಳಲ್ಲಿ ಭಾಗಿದರರಾಗಿರುವ ಪ್ರತಿಯೊಬ್ಬರೂ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಅಗದ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದರು. ಪ್ರಿಂಟಿಂಗ್ ಪ್ರೆಸ್ ಮಾಲೀಕರು ಕರ ಪತ್ರವನ್ನು ಮುದ್ರಿಸುವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅತ್ಯುತ್ತಮ ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಸೈಂಟ್ ಮೇರಿಸ್ ಪ್ರೌಢ ಶಾಲೆ, ಕುಂದಾಪುರ ಇಲ್ಲಿಯ ಮುಖ್ಯೋಪಾಧ್ಯಾಯಿನಿ ಅಸುಂತಾ ಲೋಬೊರವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಶೇ. 85ಕ್ಕಿಂತಲೂ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಫಲಕ ನೀಡಿ, ವಿದ್ಯಾರ್ಥಿಗಳ ಮುಂದಿನ ಜೀವನಕ್ಕೆ ಶುಭ ಹಾರೈಸಿದರು. ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ರೇಷ್ಮಾ ಡಿಸೋಜಾ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಪ್ರಮೀಳಾ ಡಿಸೋಜಾರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರೌಢ ಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗರವರು ಸ್ವಾಗತಿಸಿ, ಸಹಶಿಕ್ಷಕಿ ರಕ್ಷಿತಾ ನಿರೂಪಿಸಿ, ವಿದ್ಯಾರ್ಥಿನಿ ಮನ್ವಿತಾ ವಂದಿಸಿದರು.

Read More