Author: ನ್ಯೂಸ್ ಬ್ಯೂರೋ

ಕುಂದಾಫ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ನವೆಂಬರ್ 13 ರಂದು ಬೆಳಗ್ಗೆ 10.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.  ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಗ್ರಾಫಿಕ್ ಡಿಸೈನ್, (ಕಂಪ್ಲಿಟೇಡ್ ಪೋಟೋ ಶ್ಯಾಪ್ ಕೋರ್ಸ್) ಮತ್ತು ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ, 8105618291, 9945856670, 9901472710 ಹಾಗೂ 8105774936 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ನವೆಂಬರ್ 08 ರಿಂದ 10ರವರೆಗೆ ನಡೆದ ಶಾಲಾ ಶಿಕ್ಷಣ ಇಲಾಖೆ, ಕೋಲಾರ ಜಿಲ್ಲೆ, ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ಕೋಲಾರ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ 17 ವರ್ಷ ವಯೋಮಿತಿಯ ಪ್ರೌಢಶಾಲಾ ಬಾಲಕ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಶಾಲೆಯ ಕ್ರೀಡಾಪಟುಗಳು ಒಟ್ಟು 14 ಚಿನ್ನ, 08 ಬೆಳ್ಳಿ ಮತ್ತು 05 ಕಂಚಿನ ಪದಕಗಳೊಂದಿಗೆ 27 ಪದಕ ಪಡೆದುಕೊಂಡಿದೆ. ಅದರಲ್ಲಿ ನಾಗಿಣಿ 800ಮೀ, 1500ಮೀ ನಲ್ಲಿ ನೂತನ ದಾಖಲೆ, ಜಾಸ್ಮಿನ ಹ್ಯಾಮರ್ ತ್ರೋನಲ್ಲಿ ಕ್ರೀಡಾಕೂಟದ ನೂತನ ಕೂಟ ದಾಖಲೆಯೊಂದಿಗೆ 17 ವರ್ಷ ವಯೋಮಿತಿಯ ಬಾಲಕ ಬಾಲಕಿಯರ ತಂಡ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ.ಪ್ರೌಢ ಶಾಲಾ 17 ವರ್ಷ ವಯೋಮಿತಿಯ ಬಾಲಕಿಯರ ವೈಯಕ್ತಿಕ ಚಾಂಪಿಯನ್ ಪ್ರಶಸ್ತಿ:ಬಾಲಕಿಯರ ವಿಭಾಗ: ನಾಗಿಣಿ – 10 ಅಂಕಫಲಿತಾಂಶ:ಪ್ರೌಢ ಶಾಲಾ 17 ವರ್ಷ ವಯೋಮಿತಿಯ ಬಾಲಕ ಮತ್ತು ಬಾಲಕಿಯರ ಫಲಿತಾಂಶ : ಇಶಾನಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಒನಕೆ ಓಬವ್ವಳ ನಿಸ್ವಾರ್ಥ ನಾಡಪ್ರೇಮ, ವೀರ ನಾಡೆನಿಸಿದ ಚಿತ್ರದುರ್ಗದ ಉಕ್ಕಿನ ಕೋಟೆಯನ್ನು ಶತ್ರುಗಳ ಆಕ್ರಮಣದಿಂದ ರಕ್ಷಿಸಲು ಒನಕೆಯನ್ನು ಆಯುಧವಾಗಿ ಹಿಡಿದು ಶತ್ರುಗಳನ್ನು ಸಂಹಾರ ಮಾಡಿದ್ದರಿಂದ ಚರಿತ್ರೆಯಲ್ಲಿ ಅಜರಾಮರಳಾಗಿ, ಸ್ತ್ರೀ ಶಕ್ತಿಯ ಸಂಕೇತವಾಗಿ ಜನಮಾನಸದಲ್ಲಿ ಇಂದಿಗೂ ಅಚ್ಚಳಿಯದೇ ಉಳಿದಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ವೀರ ವನಿತೆ ಒನಕೆ ಓಬವ್ವ ಜಯಂತಿ ಆಚರಣೆಯನ್ನು ಉದ್ಘಾಟಿಸಿ, ಒನಕೆ ಓಬವ್ವ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ಒನಕೆ ಓಬವ್ವ 18 ನೇ ಶತಮಾನದ ಓರ್ವ ವೀರ ವನಿತೆ ಮಹಿಳೆ. ಹೈದರಾಲಿಯ ಸೈನಿಕರು ಕೋಟೆಯನ್ನು ಮುತ್ತಿಗೆ ಹಾಕಿದ ಸಂದರ್ಭದಲ್ಲಿ, ಒಬ್ಬ ಸಾಮಾನ್ಯ ಹೆಣ್ಣುಮಗಳು, ಅಸಾಮಾನ್ಯವಾಗಿ ಯುದ್ಧಕಲೆಯ ಆಳ, ಅಗಲದ ಅರಿವಿಲ್ಲದೆ, ಊಟ ಮಾಡುತ್ತಿರುವ ಗಂಡನನ್ನು ಎಬ್ಬಿಸದೇ, ಶತ್ರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮಳೆಯಾಶ್ರಿತ ಕೃಷಿಯನ್ನು ಸುಸ್ಥಿರ ಕೃಷಿಯನ್ನಾಗಿ ರೂಪಾಂತರಗೊಳಿಸುವ ನಿಟ್ಟಿನಲ್ಲಿ, ಸಮರ್ಪಕ ಮಳೆ ನೀರಿನ ಸಂಗ್ರಹಣೆ ಹಾಗೂ ಉಪಯುಕ್ತ ಬಳಕೆ ಪದ್ಧತಿಯಿಂದ ಕೃಷಿ ಉತ್ಪಾದಕತೆಯನ್ನು ಉತ್ತಮ ಪಡಿಸಿ ಆದಾಯವನ್ನು ಹೆಚ್ಚಿಸುವ ಸಲುವಾಗಿ ಮತ್ತು ಮಳೆ ನೀರನ್ನು ವ್ಯರ್ಥ ಮಾಡದೆ ಆಯ್ದ ಸ್ಥಳದಲ್ಲಿ ಕೃಷಿ ಹೊಂಡ ತೆಗೆದು ಜಲ ಸಂಗ್ರಹಿಸಿ, ಬೆಳೆಗಳ ಸಂದಿಗ್ಧ ಹಂತಗಳಲ್ಲಿ ರಕ್ಷಣಾತ್ಮಕ ನೀರಾವರಿ ಒದಗಿಸುವ ಸಲುವಾಗಿ ಕೃಷಿ ಭಾಗ್ಯ ಯೋಜನೆಯನ್ನು ತಾಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಕೃಷಿ ಭಾಗ್ಯ ಯೋಜನೆಯಡಿ ಕ್ಷೇತ್ರ ಬದು ನಿರ್ಮಾಣ, ಕೃಷಿ ಹೊಂಡ, ನೀರು ಇಂಗದಂತೆ ತಡೆಯಲು ಪಾಲಿಥೀನ್ ಹೊದಿಕೆ, ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ, ಹೊಂಡದಿಂದ ನೀರು ಎತ್ತಲು ಡೀಸೆಲ್/ ಪೆಟ್ರೋಲ್/ ಸೋಲಾರ್ ಪಂಪ್ ಸೆಟ್ ಹಾಗೂ ಸೂಕ್ಷ್ಮ (ತುಂತುರು/ ಹನಿ) ನೀರಾವರಿ ಘಟಕಗಳ ಅನುಷ್ಠಾನಕ್ಕೆ ಸಾಮಾನ್ಯ ವರ್ಗದ ರೈತರಿಗೆ ಶೇ. 80 ರಷ್ಟು ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ಶೇ. 90 ರಷ್ಟು ಸಹಾಯಧನ ನೀಡಲಾಗುವುದು. ರೈತರುಗಳು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಡುಪಿಯ ಶಾರದಾ ವಸತಿ ಶಾಲೆಯಲ್ಲಿ ನಡೆದ ಉಡುಪಿ ಜಿಲ್ಲಾ ಅಂತರ್ ಶಾಲಾ ಬಾಸ್ಕೆಟ್ ಬಾಲ್ ಪಂದ್ಯಾವಳಿಯಲ್ಲಿ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯು ಅವಳಿ ರನ್ನರ್ ಅಪ್ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿತು. 14 ವರ್ಷದೊಳಗಿನ ಬಾಲಕ ಮತ್ತು 17 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸ್ಥಾನದೊಂದಿಗೆ ರನ್ನರ್ ಅಪ್ ಪ್ರಶಸ್ತಿ ಹಾಗೂ 17 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಮೂರನೇ ಸ್ಥಾನ ಪಡೆದು ಸಂಭ್ರಮಿಸಿತು. 14 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಪ್ರಕಾಶ್ ಬೆಸ್ಟ್ ಶೂಟರ್ ಹಾಗೂ 17 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಅಪೂರ್ವ ಶಿಂದೆ ಬೆಸ್ಟ್ ಡಿಫೆಂಡರ್ ಗೌರವಕ್ಕೆ ಪಾತ್ರರಾದರು. ವಿದ್ಯಾರ್ಥಿಗಳ ಈ ಅಭೂತಪೂರ್ವ ಸಾಧನೆಗೆ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳೂ ಹಾಗೂ ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ ಅಭಿನಂದನೆಗಳನ್ನು ಸಲ್ಲಿಸುತ್ತಾ “ಕಳೆದ ಹಲವಾರು ವರ್ಷಗಳಿಂದ ನಮ್ಮ ಸಂಸ್ಥೆಯು ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆಗೈಯುತ್ತಿದೆ. ನಮ್ಮ ವಿದ್ಯಾರ್ಥಿಗಳು ದೈಹಿಕ ಮತ್ತು ಮಾನಸಿಕ ಸದೃಢತೆಯನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪತ್ನಿ ಮನೆಗೆ ಬಾರದೆ ಇರುವುದರಿಂದ ಮನ ನೊಂದು ವಿವಾಹಿತ ಆತ್ಮಹತ್ಯೆ ಮಾಡಿಕೊಂಡ ಘಟನೆ ತೆಕ್ಕಟ್ಟೆಯ ಬೇಳೂರಿನಲ್ಲಿ ನಡೆದಿದೆ. ಕುಮಟಾ ಮೂಲದ ತಾಲೂಕಿನ ಲೀಲಾ ಅವರ ಪುತ್ರ ಆನಂದ (30) ಆತ್ಮಹತ್ಯೆ ಮಾಡಿಕೊಂಡವರು. ಆತನ ಪತ್ನಿ ಮನೆಗೆ ಬಾರದಿರುವುದರಿಂದ ಮನ ನೊಂದು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೋಟ ಪೋಲೀಸ್‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಇಲ್ಲಿನ ಶ್ಯಾಮಲಾ ಅವರ ಪುತ್ರ ಸುಧೀರ್ (41) ಅವರು ತ್ರಾಸಿ- ಗಂಗೊಳ್ಳಿ ರಸ್ತೆಯ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ನಿಂತಿದ್ದಾಗ ಖಾಸಗಿ ಬಸ್ ಢಿಕ್ಕಿಯಾಗಿದೆ. ಚಾಲಕ ಫಜಲ್ ತ್ರಾಸಿ ಕಡೆಯಿಂದ ಗಂಗೊಳ್ಳಿ ಬಂದರ್ ಕಡೆಗೆ ಚಲಾಯಿಸಿಕೊಂಡು ಬರುವಾಗ ಅಪಘಾತ ಸಂಭವಿಸಿದ್ದು ಸುಧೀರ್ ಅವರ ತಲೆಗೆ ಗಂಭೀರ ಗಾಯವಾಗಿದೆ. ಪ್ರಕರಣ ದಾಖಲಾಗಿದೆ

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಮಂಗಳೂರು ವಿವಿ ಮತ್ತು ಬೆಸೆಂಟ್ ಮಹಿಳೆಯರ ಕಾಲೇಜು ಇವುಗಳ ಸಂಯುಕ್ರಾಶ್ರಯದಲ್ಲಿ ನಡೆದ ಅಂತರ್ ಕಾಲೇಜು ಮಹಿಳೆಯರ  ಕಬಡ್ಡಿ ಚಾಂಪಿಯನ್‌ಶಿಪ್‌ನಲ್ಲಿ ಆಳ್ವಾಸ್ ಕಾಲೇಜಿನ ಮಹಿಳೆಯರ ತಂಡ ಸತತ 4ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿತು. ಆಳ್ವಾಸ್ ಕಾಲೇಜು ತಂಡವು ವಾಮದಪದವಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತಂಡವನ್ನು ಹಾಗೂ ಉಜಿರೆಯ ಎಸ್.ಡಿ.ಎಂ ಕಾಲೇಜು ತಂಡವು ಅಜ್ಜರಕಾಡಿನ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ತಂಡವನ್ನು ಸೋಲಿಸಿ ಫೈನಲ್ ಹಂತಕ್ಕೆ ತೇರ್ಗಡೆಗೊಂಡವು. ಫೈನಲ್ಸ್‌ನಲ್ಲಿ ಆಳ್ವಾಸ್ ತಂಡವು ಎಸ್.ಡಿ.ಎಂ ಕಾಲೇಜು ತಂಡವನ್ನು 39-14 ಅಂತರದಲ್ಲಿ ಸೋಲಿಸಿ ವೆರಿ ರೆವೆರೆಂಡ್ ಮೆಸೆಂಜರ್ ಎ. ಪತ್ರಾವೋ ಮೆಮೋರಿಯಲ್ ರೋಲಿಂಗ್ ಟ್ರೋಫಿ ಹಾಗೂ ಶಾಶ್ವತ ಫಲಕವನ್ನು ಪಡೆದುಕೊಂಡಿತು. ಆಳ್ವಾಸ್ ತಂಡದ ಸುಶ್ಮಿತಾ ಸರ್ವಾಂಗೀಣ ಆಟಗಾರ್ತಿ ಪ್ರಶಸ್ತಿ ಪಡೆದರೆ, ಧನಲಕ್ಷ್ಮಿ ಉತ್ತಮ ದಾಳಿಗಾರ್ತಿ ಮತ್ತು ಎಸ್.ಡಿ.ಎಂ ತಂಡದ ಸುಮಯ್ಯ ಉತ್ತಮ ಹಿಡಿತಗಾರ್ತಿ ಪ್ರಶಸ್ತಿ ಪಡೆದುಕೊಂಡರು. ವಿಜೇತ ತಂಡವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕನ್ನಡ ಸಾಹಿತ್ಯ ಸಂಘ ಮತ್ತು ಐಕ್ಯೂಎಸಿ ಇದರ ಆಶ್ರಯದಲ್ಲಿ ಕಲ್ಪತರು-2024 ಅಂತರ್ ತರಗತಿ ನೃತ್ಯ ರೂಪಕ ಕಾರ್ಯಕ್ರಮ ಕಾಲೇಜಿನ ಶ್ರೀ ವೀರರಾಜೇಂದ್ರ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ, ಕನ್ನಡಾಂಬೆಗೆ ಪುಷ್ಪ ನಮನ ಸಲ್ಲಿಸಿ, ಮಾತನಾಡಿದ ಉಡುಪಿ ಜಿಲ್ಲಾ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಬಿದ್ಕಲ್ ಕಟ್ಟೆ ಸರಕಾರಿ ಪದವಿಪೂರ್ವ ಕಾಲೇಜಿನ ಉಪ- ಪ್ರಾಂಶುಪಾಲರಾದ ಕರುಣಾಕರ ಶೆಟ್ಟಿ ಮೊಗೆಬೆಟ್ಟು ‘ಕನ್ನಡ ಭಾಷೆ ಉಳಿಯಬೇಕಾದರೆ ಕನ್ನಡ ಭಾಷೆಯನ್ನು ಜಗತ್ತಿನಾದ್ಯಂತ ಪಸರಿಸುವ ಕಾರ್ಯ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಮಾತ್ರ ಸಾಧ್ಯ ಎಂದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಉಪನ್ಯಾಸಕ ಸುಧಾಕರ್‌ ವಕ್ವಾಡಿ, ವಿದ್ಯಾರ್ಥಿಗಳು ಕನ್ನಡ ಭಾಷೆಯನ್ನು ಹೆಚ್ಚು ಮಾತನಾಡುವ ಮೂಲಕ ಮುಂದಿನ ಜನಾಂಗಕ್ಕೆ ಕನ್ನಡ ಭಾಷೆಯ ಬಗ್ಗೆ ಅಭಿಮಾನ ಬೆಳೆಸುವ ಕಾರ್ಯ ಆಗಬೇಕಾಗಿದೆ ಎಂದರು. ಕಾಲೇಜಿನ ಪ್ರಾಂಶುಪಾಲರಾದ ಚಂದ್ರಾವತಿ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ನಾವೆಲ್ಲ ಜಾಗತೀಕರಣ, ತಂತ್ರಜ್ಞಾನ ಯುಗದಲ್ಲಿದ್ದೇವೆ ಇದರಿಂದ ಕನ್ನಡಕ್ಕೆ ಸವಾಲುಗಳು ಜಾಸ್ತಿ ಆಗುತ್ತಲೇ ಇದೆ. ಸುದೀರ್ಘ ಇತಿಹಾಸ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟತಟ್ಟು ಕಾರಂತ ಥೀಂ ಪಾರ್ಕನಲ್ಲಿ ಕೋಟತಟ್ಟು ಗ್ರಾಮಪಂಚಾಯತ್, ಡಾ.ಕೋಟ ಶಿವರಾಮ ಕಾರಂತ ಟ್ರಸ್ಟ್ ಉಡುಪಿ, ಡಾ. ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಇವರುಗಳ ಆಶ್ರಯದಲ್ಲಿ ಡಾ. ಕೋಟ ಶಿವರಾಮ ಕಾರಂತ ಜನ್ಮದಿನೋತ್ಸವ ಮತ್ತು 20ನೇ ವರ್ಷದ ಹುಟ್ಟೂರ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಿತು. ಕಾರ್ಯಕ್ರಮದಲ್ಲಿ ಕಾರಂತ ಹುಟ್ಟೂರ ಪ್ರಶಸ್ತಿ ಸ್ವೀಕರಿಸಿ ಸಾಹಿತಿ ಪ್ರೋ. ಕೃಷ್ಣೆ ಗೌಡ ಮೈಸೂರು ಅವರು ಮಾತನಾಡಿ, ಕಾರಂತರೆಂದರೆ ಬಹು ವ್ಯಕ್ತಿತ್ವದ ಚಿಂತನಾಶೀಲ, ಪ್ರಯೋಗಶೀಲ ವಿವಿಧ ಸ್ತರದಲ್ಲಿ ಬೆಳಕ ಚೆಲ್ಲುವ ಅಪರೂಪದ ಶಕ್ತಿಯಾಗಿದ್ದರು, ಅವರಂತೆ ಎಲ್ಲರನ್ನು ಕಾಣಲು ಸಾಧ್ಯವಿಲ್ಲ ಅವರಿಗೆ ಅವರೇ ಸಾಟಿ ಎಂಬಂತೆ ತಮ್ಮ ಜೀವಿತ ಅವಧಿಯಲ್ಲಿ ಬದುಕಿ ತೊರಿಸಿದ್ದಾರೆ. ತನ್ನ ಕಾದಂಬರಿಯ ಮೂಲಕ ಪ್ರಪಂಚಕ್ಕೆ ನೈಜ ಚಿತ್ರಣದ ಚಿತ್ತಾರವನ್ನು ಪ್ರಯೋಗಿಸಿದ್ದಾರೆ. ಇಂಥಹ ಕಾರಂತರ ಪ್ರಶಸ್ತಿ ಪಡೆಯುವ ಸಾಲಿನಲ್ಲಿ ನನ್ನಂತವರ ಹೆಸರು ಮುಂಚೂಣಿಗೆ ನಿಲ್ಲಿಸಿದ್ದು ಸಾರ್ಥಕ್ಯ ಕಂಡ ಅನುಭವ ಸಿಕ್ಕಿದೆ. ಓರ್ವ ಶ್ರೇಷ್ಠ ಸಾಹಿತಿ ಈ ಮಣ್ಣಿನಲ್ಲಿ…

Read More