ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕನ್ನಡ ಕಟ್ಟುವ ಕಾಯಕದ ನಡುವೆ ಪರಿಸರ ಉಳಿಸುವ ಪಂಚವರ್ಣ ಸಂಸ್ಥೆ ಕಾರ್ಯವೈಕರಿ ನಿಜಕ್ಕೂ ಪ್ರಶಂಸನೀಯ ಎಂದು ಕೋಟ ಆರಕ್ಷಕ ಠಾಣಾಧಿಕಾರಿ ರಾಘವೇಂದ್ರ ಹೇಳಿದರು. ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ 27ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೆರಿಸಿ ಮಾತನಾಡಿ, ಸಂಘಟನೆಗಳು ಕ್ರೀಯಾಶೀಲತೆಯನ್ನು ಮೈಗೂಡಿಸಿಕೊಂಡಾಗ ಸಾಧನೆಯ ಮಜಲುಗಳನ್ನು ಕಾಣಲು ಸಾಧ್ಯ, 229 ವಾರಗಳ ಪರಿಸರ ಸಂರಕ್ಷಣೆ ಬರಿ ಮಾತಿನಲ್ಲಿ ಬಣ್ಣಿಸಲು ಸಾಧ್ಯವಿಲ್ಲ ಅದೊಂದು ದೊಡ್ಡ ಸಾಧನೆ ಅಂತಹ ಕೈಂಕರ್ಯದಲ್ಲಿ ತೊಡಗಿಕೊಂಡ ಸಂಘಟನೆ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದರಲ್ಲದೆ ಕನ್ನಡ ಭಾಷೆ ಅದರ ಉಳಿವು ರಾಜ್ಯೋತ್ಸವ ಕಾರ್ಯಕ್ರಮಗಳಿಗೆ ಸಿಮಿತಗೊಳ್ಳದೆ ಮನೆ ಮನಗಳಲ್ಲಿ ನಿತ್ಯನಿರಂತೆಯನ್ನು ಕಾಣುವಂತ್ತಾಗಲಿ ಎಂದು ಶುಭಹಾರೈಸಿದರು. ಕೋಟ ಗ್ರಾ.ಪಂ ಅಧ್ಯಕ್ಷೆ ಜ್ಯೋತಿ ಬಿ. ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಪಂಚವರ್ಣ ಯುವಕ ಮಂಡಲದ ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪರಿಸರವಾದಿ ಕೋ.ಗಿ.ನಾ,ಮಣೂರು ಫ್ರೆಂಡ್ಸ್ ಅಧ್ಯಕ್ಷ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಮ ಸುದ್ದಿ.ಬೈಂದೂರು: ಕಲೆ, ಸಾಹಿತ್ಯ, ಶಿಕ್ಷಣ, ಪ್ರವಾಸೋದ್ಯಮ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿನ ಶ್ರೀಮಂತಿಕೆಯನ್ನು ಹೊಂದಿರುವ ಬೈಂದೂರು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳುವಂತೆ ಮಾಡಲು ಆಯೋಜಿಸಿರುವ ಬೈಂದೂರು ಉತ್ಸವ ಊರಿನ ಸಮಗ್ರ ಅಭಿವೃದ್ಧಿಗೆ ಮುನ್ನುಡಿ ಬರೆಯಲಿದೆ ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಕನ್ನಡ ರಾಜ್ಯೋತ್ಸವದ ಅಂಗವಾಗಿ ಇಲ್ಲಿನ ಗಾಂಧಿ ಮೈದಾನದಲ್ಲಿ ಬೈಂದೂರು ಉತ್ಸವ – ಸಂಭ್ರಮದ ಗೆಜ್ಜೆ, ಸಮೃದ್ಧಿ ಹೆಜ್ಜೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ ಕರಾವಳಿ ಹಾಗೂ ಮಲೆನಾಡು ಪ್ರದೇಶವನ್ನೊಳಗೊಂಡಿರುವ ಬೈಂದೂರಿಗೆ ಸಂಪರ್ಕ ಕಲ್ಪಿಸುವ ಮೂರು ರಾಷ್ಟ್ರೀಯ ಹೆದ್ದಾರಿಗಳನ್ನು ಕಳೆದ 10 ವರ್ಷದೀಚೆಗೆ ಅಭಿವೃದ್ಧಿಪಡಿಸುವ ಕೆಲಸವಾಗುತ್ತಿದೆ. ಮುಂದಿನ ದಿನಗಳಲ್ಲಿ ಬೈಂದೂರನ್ನು ಪ್ರಮುಖ ಪ್ರವಾಸಿ ತಾಣವಾಗಿ ಹಾಗೂ ಆರಾಧನಾ ಕ್ಷೇತ್ರವಾಗಿ ಅಭಿವೃದ್ಧಿಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದ ಅವರು ಬೈಂದೂರು ಉತ್ಸವಕ್ಕೆ ರಾಜ್ಯ ಸರಕಾರ ಕೂಡ ಅನುದಾನ ಬಿಡುಗಡೆ ಮಾಡಿ ಪ್ರೋತ್ಸಾಹಿಸಿದೆ ಎಂದರು. ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಮಾತನಾಡಿ, ಬೈಂದೂರು ಅಭಿವೃದ್ಧಿಯ ಬಗ್ಗೆ ಕನಸು ಕಂಡ ಹಲವು…
ಕುಂದಾಫ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ತಾಲೂಕಿನ ಪಂಚಾಯತ್ ಮಾಜಿ ಸದಸ್ಯ, ಕಾಳಾವರ ಗ್ರಾಮ ಪಂಚಾಯತ್ ಮಾಜಿ ಸದಸ್ಯರು, ಕಾಂಗ್ರೆಸ್ ಪಕ್ಷದ ಕಾಳಾವರ ಪಂಚಾಯತ್ ವ್ಯಾಪ್ತಿಯ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ನಿಧನವಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ನವೆಂಬರ್ 1 ರಂದು ಭಂಡಾರ್ಕಾರ್ಸ್ ಕಾಲೇಜಿನ ಆವರ್ತ ವೇದಿಕೆ ಮತ್ತು ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮಣಿಪಾಲ ಇವರ ಸಹಯೋಗದಲ್ಲಿ 69ನೇ ರಾಜ್ಯೋತ್ಸವ ತಾಳಮದ್ದಳೆ ಹಾಗೂ ಈ ವರ್ಷದ “ಡಾ. ಹೆಚ್. ಶಾಂತಾರಾಮ್ ಯಕ್ಷಗಾನ ಪುರಸ್ಕಾರ” ಪುರಸ್ಕೃತ ಬಡಗುತಿಟ್ಟು ಯಕ್ಷಗಾನದ ಯುವ ಕಲಾವಿದರಾದ ಚಂದ್ರಕಾಂತ ರಾವ್, ಮೂಡುಬೆಳ್ಳೆ ಅವರಿಗೆ ಪ್ರದಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ.ಹೆಚ್. ಶಾಂತಾರಾಮ್ ಮಾತನಾಡಿ, ಇದು ಯಕ್ಷಗಾನ ಪುರಸ್ಕಾರ ಇದು ಪ್ರಶಸ್ತಿ ಅಲ್ಲ. ಅವರ ಸಾಧನೆ ದೊಡ್ಡದು. ಅವರ ಸಾಧನೆ ವಿಶ್ವದ ಉದ್ದಗಲಕ್ಕೂ ಬೆಳೆಯಲಿ. ಈ ಯಕ್ಷಗಾನ ಪುರಸ್ಕಾರವು ಅವರ ಸಾಧನಾಪೂರ್ಣ ಯಶಸ್ಸಿಗೆ ಪ್ರೇರಣೆಯಾಗಲಿ. ಅವರು ಕೀರ್ತಿಶಾಲಿಯಾಗಲಿ ಎಂದು ಹೇಳಿದರು. ಸಾಲಿಗ್ರಾಮ ಮೇಳದ ಯಜಮಾನರಾದ ಕಿಶನ್ ಹೆಗ್ಡೆ ಅಭಿನಂದನಾ ಭಾಷಣವನ್ನು ಮಾಡಿದರು. ಈ ವರ್ಷದ “ಡಾ. ಹೆಚ್.ಶಾಂತಾರಾಮ್ ಯಕ್ಷಗಾನ ಪುರಸ್ಕಾರ” ಪುರಸ್ಕೃತ ಬಡಗುತಿಟ್ಟು ಯಕ್ಷಗಾನದ ಯುವ ಕಲಾವಿದರಾದ ಚಂದ್ರಕಾಂತ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನ ಮಂತ್ರಿ ಮತ್ಸ್ಯಾ ಸಂಪದ ಯೋಜನೆಯಡಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಮೂಲಕ ಚಲಿಸಬಲ್ಲ ಇ-ತ್ರಿಚಕ್ರ ವಿದ್ಯುತ್ ಚಾಲಿತ ಸುಸಜ್ಜಿತ ಪರಿಸರ ಸ್ನೇಹಿ ಕಿಯಾಸ್ಕ್ “ಮತ್ಸ್ಯಾವಾಹಿನಿ” ವಾಹನಗಳಲ್ಲಿ ತಾಜಾ ಮೀನು ಮಾರಾಟಕ್ಕೆ ಹಾಗೂ ಮೀನು ಉತ್ಪನ್ನಗಳ ಮಾರಾಟಕ್ಕಾಗಿ ಪರವಾನಗಿ ಆಧಾರದಲ್ಲಿ ಪಡೆಯುವ ಬಗ್ಗೆ ಜಿಲ್ಲೆಯ ಆಸಕ್ತ ಮೀನು ಮಾರಾಟಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಸಾಮಾನ್ಯ ವರ್ಗದವರಿಗೆ 1 ಲಕ್ಷ ರೂ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಮಹಿಳಾ ವರ್ಗದವರಿಗೆ 50 ಸಾವಿರ ಭದ್ರತಾ ಠೇವಣಿ ನಿಗದಿಪಡಿಸಲಾಗಿದ್ದು, ಆಯ್ಕೆಯಾದ ಪರವಾನಗಿದಾರರಿಗೆ ಪ್ರತಿ ವಾಹನಕ್ಕೆ 3000 ರೂ ಮಾಸಿಕ ಶುಲ್ಕ ನಿಗದಿಪಡಿಸಲಾಗುವುದು. ಮಾಹಿತಿಗಾಗಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಕ್ವಾಡಿ ಗುರುಕುಲ ವಿದ್ಯಾ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಆಡಳಿತ ಮಂಡಳಿಯ ಕಾರ್ಯನಿರ್ವಾಹಕರಾದ ಸುಭಾಶ್ಚಂದ್ರ ಶೆಟ್ಟಿ ಧ್ವಜಾರೋಹಣ ಮಾಡಿ ಮಾತನಾಡಿ, ನಮ್ಮ ಮಾತೃಭಾಷೆಯ ಮೇಲೆ ನಮಗೆ ಸಂಪೂರ್ಣ ಹಿಡಿತ ಮತ್ತು ಹೆಮ್ಮೆ ಜೊತೆಗೆ ಇತರ ಭಾಷೆಗಳ ಮೇಲೆ ಗೌರವ ಇರಬೇಕು ,ನಮ್ಮ ನಾಡು ನುಡಿಯನ್ನು ಗೌರವಿಸುವುದು ಕೇವಲ ಈ ತಿಂಗಳಿಗೆ ಸೀಮಿತವಾಗದೆ ಪ್ರತಿ ದಿನವೂ ಅದರ ಸವಿಯನ್ನು ಸವಿಯಬೇಕು ಎಂದು ತಿಳಿಸಿ ವಿದ್ಯಾರ್ಥಿಗಳಿಗೆ ರಾಜ್ಯೋತ್ಸವದ ಶುಭಾಶಯ ತಿಳಿಸಿದರು. ಈ ಸಂದರ್ಭದಲ್ಲಿ ಶಾಲಾ ಪ್ರಾಂಶುಪಾಲರಾದ ಸುನಿಲ್ ಪ್ಯಾಟ್ರಿಕ್, ಕಾಲೇಜು ಪ್ರಾಂಶುಪಾಲರಾದ ಅವಿನಾಶ್, ಉಪಾನ್ಯಾಸಕರು ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಉಪನ್ಯಾಸಕ ಪ್ರಶಾಂತ್ ನಿರೂಪಿಸಿ, ಉಪನ್ಯಾಸಕಿ ದೀಪಾ ಕಾಮತ್ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಉಡುಪಿ ಜಿಲ್ಲೆ ಇವರ ವತಿಯಿಂದ 69 ನೇ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವು ಇಂದು ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳಕರ್ ಧ್ವಜಾರೋಹಣ ನೆರವೇರಿಸಿ, ಕರ್ನಾಟಕ ರಾಜ್ಯೋತ್ಸವದ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಯಶ್‌ಪಾಲ್ ಎ ಸುವರ್ಣ, ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಿನಕರ್ ಹೇರೂರು, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾರು ಹಿಂದಿನಿಂದ ಡಿಕ್ಕಿಯಾಗಿ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿ ಗಂಭೀರ ಗಾಯಗೊಂಡು ಸಾವನಪ್ಪಿದ ಘಟನೆ ಗುರುವಾರ ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿ 66ರ ತ್ರಾಸಿ ಬೀಚ್ ಬಳಿ ನಡೆದಿದೆ. ತ್ರಾಸಿ ಕುಪ್ಪ ಮೊಗವೀರ (80) ಸಾವನ್ನಪ್ಪಿದವರು. ಅವರು ಮನೆಯಿಂದ ತ್ರಾಸಿಯ ಪೇಟೆಗೆ ಹೋಗಿ ವಾಪಾಸು ನಡೆದುಕೊಂಡು ಬರುವಾಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದೆ. ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ಸಂಚರಿಸುತ್ತಿದ್ದ ಕಾರು ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಕುಪ್ಪ ಮೊಗವೀರ ಅವರನ್ನು ಆಂಬುಲೆನ್ಸ್ ಮೂಲಕ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆತರಲಾಯಿತು. ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಅಪಘಾತದ ಕುರಿತಂತೆ ಕಾರು ಚಾಲಕನ ವಿರುದ್ಧ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ವೆಂಕಟರಮಣ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ 69ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಸಂಸ್ಥೆಯ ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿಸೋಜ ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಧ್ವಜಾರೋಹಣಗೈದು, ರಾಜ್ಯೋತ್ಸವದ ಶುಭ ಸಂದೇಶವನ್ನು ನೀಡಿದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಪ್ರೌಢ ಶಾಲಾ ಮುಖ್ಯ ಶಿಕ್ಷಕರಾದ ಕೃಷ್ಣ ಅಡಿಗ, ಪ್ರಾಥಮಿಕ ಶಾಲಾ ಮುಖ್ಯಸ್ಥೆ ರೇಷ್ಮಾ ಡಿಸೋಜ ಅವರು ಕನ್ನಡಾಂಬೆ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಗೈದರು. ವಿದ್ಯಾರ್ಥಿಗಳಾದ ಅಂಕಿತಾ, ರಜತ್. ಆರ್ ಪೂಜಾರಿ ರಾಜ್ಯೋತ್ಸವದ ಕುರಿತು ಮಾತನಾಡಿದರು. ಶಾಲಾ ವಿದ್ಯಾರ್ಥಿನಿಯರು ಕನ್ನಡ ಹಾಡುಗಳನ್ನು ಹಾಡಿದರು. ಸಮಾರಂಭದಲ್ಲಿ ಸಂಸ್ಥೆಯ ಬೋಧಕ, ಬೋಧಕೇತರ ಸಿಬ್ಬಂದಿ, ಎನ್.ಸಿ.ಸಿ, ಸ್ಕೌಟ್ಸ್, ಗೈಡ್ಸ್ ಮತ್ತು ಶಾಲಾ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಪ್ರೌಢ ಶಾಲಾ ಶಿಕ್ಷಕಿ ರೇಖಾ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು. ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ವಿಕಾಸ್ ಮೇಟಿ ಅವರು ಸರ್ವರನ್ನು ಸ್ವಾಗತಿಸಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕನ್ನಡ ರಾಜ್ಯೋತ್ಸವದ ಪ್ರಯುಕ್ತ ವಿಶ್ವ ವಿನಾಯಕ ಸಿ.ಬಿ.ಎಸ್.ಇ. ಶಾಲೆ ತೆಕ್ಕಟ್ಟೆಯಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ನಡೆಸಿ ಕನ್ನಡ ರಾಜ್ಯೋತ್ಸವಕ್ಕೆ ಚಾಲನೆಯನ್ನು ನೀಡಲಾಯಿತು. ಕನ್ನಡ ನಾಡು-ನುಡಿ, ಸಂಸ್ಕೃತಿಯನ್ನು ಉಳಿಸಿ ಬೆಳಸುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಅಕಾಡೆಮಿಕ್ ಡೈರೆಕ್ಟರ್ ದಿವಾಕರ ಶೆಟ್ಟಿ ಹೆಚ್, ಪ್ರಾಂಶುಪಾಲ ನಿತಿನ್ ಡಿ. ಆಲ್ಮೇಡಾ, ವಿದ್ಯಾರ್ಥಿಗಳು, ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಯವರು ಉಪಸ್ಥಿತರಿದ್ದರು.
