Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದಲ್ಲಿ ಗೌರವಧನ ಆಧಾರದಲ್ಲಿ ಆಪ್ತ ಸಮಾಲೋಚಕರಾಗಿ ಕಾರ್ಯನಿರ್ವಹಿಸಲು ಎಮ್.ಎಸ್.ಡಬ್ಲೂಯ ವಿದ್ಯಾರ್ಹತೆ ಹೊಂದಿದ ಆಸಕ್ತ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 02 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ, ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ, ಬನ್ನಂಜೆ, ಉಡುಪಿ ದೂ.ಸಂಖ್ಯೆ: 0820-2526394 ಅಥವಾ ಇ-ಮೇಲ್ udupis1090@gmail.com ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಸರ್ವೋಚ್ಛ ನ್ಯಾಯಾಲಯ, ಉಚ್ಛ ನ್ಯಾಯಾಲಯ ಹಾಗೂ ಇತರೇ ನ್ಯಾಯಾಲಯಗಳಲ್ಲಿ ದಾಖಲಾಗಿ ಬಾಕಿಯಿರುವ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸಲು ಕಂದಾಯ ಆಯುಕ್ತಾಲಯದಲ್ಲಿ ಕಾನೂನು ಕೋಶವನ್ನು ಸ್ಥಾಪಿಸಲು ಕಾನೂನು ಅಧಿಕಾರಿ (ರಾಜ್ಯದ ನಾಲ್ಕು ಕಂದಾಯ ವಿಭಾಗಗಳಿಗೆ ತಲಾ ಒಂದರಂತೆ)- 04 ಹುದ್ದೆಗಳು ಹಾಗೂ ಸಹಾಯಕ ಕಾನೂನು ಅಧಿಕಾರಿ -04 ಹುದ್ದೆಗಳನ್ನು ತಾತ್ಕಾಲಿಕವಾಗಿ ಒಪ್ಪಂದದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕಾನೂನು ಅಧಿಕಾರಿ ಹುದ್ದೆಗೆ ನಿವೃತ್ತ ಸರ್ಕಾರಿ ಕಾನೂನು ಅಧಿಕಾರಿ ಅಥವಾ ಕಂದಾಯ ಇಲಾಖೆಯಲ್ಲಿ ಸೇವೆ ಸಲ್ಲಿಸಿ ಎಲ್.ಎಲ್.ಬಿ ವಿದ್ಯಾರ್ಹತೆ ಹೊಂದಿರುವ ನಿವೃತ್ತ ಕಂದಾಯ ಅಧಿಕಾರಿ/ ನಿವೃತ್ತ ಕೆ.ಎ.ಎಸ್ ಅಧಿಕಾರಿ ಅಥವಾ ಕನಿಷ್ಠ 10 ವರ್ಷಗಳ ಕಾಲ ಭೂ ಕಂದಾಯ ವ್ಯಾಜ್ಯಗಳ ನಿರ್ವಹಣೆಯಲ್ಲಿ ಅನುಭವ ಹೊಂದಿರುವ ವಕೀಲರು ಮತ್ತು ಸಹಾಯಕ ಕಾನೂನು ಅಧಿಕಾರಿ ಹುದ್ದೆಗೆ ಇಂಟರ್ನ್ಶಿಪ್‌ನಲ್ಲಿರುವ ಕಾನೂನು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯಲ್ಲಿ ವೈಯಕ್ತಿತ ಮಾಹಿತಿ, ವಿದ್ಯಾರ್ಹತೆ ಹಾಗೂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಭಾಗವಹಿಸಿ ದಕ್ಷಿಣ ಕನ್ನಡ ಜಿಲ್ಲಾ ವುಶು ಅಸೋಸಿಯೇಷನ್‌ನ ಪದಕ ವಿಜೇತ ವಿರ್ದ್ಯಾರ್ಥಿಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ವಿದ್ಯಾಗಿರಿಯಲ್ಲಿ ಅಭಿನಂದಿಸಲಾಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ವುಶು ಅಸೋಸಿಯೇಷನ್‌ನ ಗೌರವಾಧ್ಯಕ್ಷ ಡಾ. ಎಂ ಮೋಹನ್ ಆಳ್ವ ಮಾತನಾಡಿ, ನಮ್ಮ ದೇಶದಲ್ಲಿ ಪರಿಚಿತ ಆಟವಾಗಿ, ಆದರೆ ಈ ಭಾಗದಲ್ಲಿ ಅಷ್ಟೊಂದು ಖ್ಯಾತಿಗೆ ಬಾರದ ಕ್ರೀಡೆಯನ್ನು, ದಕ್ಷಿಣ ಕನ್ನಡ ಜಿಲ್ಲಾ ವುಶು ಅಸೋಸಿಯೇಷನ್, ಕಳೆದ ಐದು ವರ್ಷಗಳ ಸತತ ಪರಿಶ್ರಮದಿಂದಾಗಿ, ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳನ್ನು ನಿರ್ಮಾಣ ಮಾಡಿದೆ ಎಂದು ಹರ್ಷ ವ್ಯಕ್ತ ಪಡಿಸಿದರು. ಮಾನವ ಸಂಪತ್ತಿನ ಸರಿಯಾದ ಬಳಕೆಯಿಂದ ದೇಶದ ಸಮೃದ್ಧಿ ಸಾಧ್ಯ. ಮುಂದುವರಿದ ಯಾವ ದೇಶದಲ್ಲೂ ನಮ್ಮಲ್ಲಿರುವಷ್ಟು ಯುವ ಶಕ್ತಿಯಿಲ್ಲ. ಈ ಯುವ ಶಕ್ತಿಯ ಸರಿಯಾದ ಸದ್ಭಳಕೆ ಮುಖ್ಯ. ನಮ್ಮನ್ನಾಳುವ ಸರ್ಕಾರಗಳು ಇದರೆಡೆಗೆ ಗಮನವಹಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಪಠ್ಯೇತರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಾರ್ಕೂರು ರುಕ್ಕಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರ ಮತ್ತು ಕಾಲೇಜಿನ ಉಪನ್ಯಾಸಕ ಸಂಘದ ಆಶ್ರಯದ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆದ ಅಂತರ್-ಕಾಲೇಜು ಮಟ್ಟದ ಕ್ರಿಕೆಟ್ ಲೀಗ್ ಪಂದ್ಯಾಟದಲ್ಲಿ ಕುಂದಾಪುರದ ಪ್ರತಿಷ್ಠಿತ ಡಾ| ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜು ತಂಡ ಬ್ರಹ್ಮಾವರದ ಎಸ್.ಎಮ್.ಎಸ್. ಕಾಲೇಜು ತಂಡದ ಎದುರು ಗೆಲುವು ಸಾಧಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇವರಿಗೆ ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ಬಿ.ಎಮ್. ಸುಕುಮಾರ್ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಬೋಧಕ-ಬೋಧಕೇತರ ವೃಂದ ತಂಡವನ್ನು ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಈ ಬಾರಿ ನಡೆಯಲಿರುವ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ಕುಂದಾಪ್ರ ಕನ್ನಡ ಪ್ರತಿಷ್ಠಾನ (ರಿ.) ಇದರ ಪ್ರಾಯೋಜಕತ್ವದಲ್ಲಿ ‘ ನಿಂದೊಳ್ಳೆ ಕತಿಯಾಯ್ತಲ್ಲ ಮಾರಾಯ್ತಿ! ‘ ಎನ್ನುವ ಶೀರ್ಷಿಕೆಯಲ್ಲಿ ಕುಂದಾಪ್ರ ಕನ್ನಡದ ಸಣ್ಣ ಕಥಾ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಬಾರ್ಕೂರು ದೀಪಕ್ಕುಮಾರ ಶೆಟ್ಟಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಥಾ ಸ್ಪರ್ಧೆಯಲ್ಲಿ ಮೊದಲ ಬಹುಮಾನವಾಗಿ ₹10,000, ಎರಡನೆಯ ಬಹುಮಾನವಾಗಿ ₹7,000, ಮೂರನೆಯ ಬಹುಮಾನವಾಗಿ ₹4,000 ಹಾಗೂ 7 ಸಮಾಧಾನಕರ ಬಹುಮಾನಗಳು ನೀಡಲಾಗುವುದು. ಕಥೆ ಸಂಪೂರ್ಣವಾಗಿ ಕುಂದಾಪ್ರ ಕನ್ನಡದಲ್ಲಿಯೇ ಇರಬೇಕು. ಈ ಮೊದಲು ಕಥೆ ಯಾವುದೇ ಸಾಮಾಜಿಕ ಜಾಲತಾಣಗಳೂ ಸೇರಿದಂತೆ ಎಲ್ಲಿಯೂ ಪ್ರಕಟಗೊಂಡಿರಬಾರದು. ಒಬ್ಬರು ಒಂದೇ ಕಥೆಯನ್ನು ಕಳುಹಿಸಬೇಕು. ಕಥೆ 600 ಪದಗಳ ( ಎ4 ಗಾತ್ರದ ಎರಡು ಪುಟ) ಮಿತಿಯೊಳಗಿರಬೇಕು. ಕಥೆಯ ಜೊತೆ ಸ್ಪರ್ಧಿಗಳು ತಮ್ಮ ಹೆಸರು, ಸಂಪೂರ್ಣ ಅಂಚೆ ವಿಳಾಸ ಹಾಗೂ ಸಂಪರ್ಕ ಸಂಖ್ಯೆಗಳನ್ನು ನಮೂದಿಸಬೇಕು. ಜುಲೈ20 ರ ಮೊದಲು ಸ್ವರ್ಣರೇಖಾ ಇಂಟೀರಿಯರ್ಸ್,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಯಿಯ ಎದೆ ಹಾಲು ಕುಡಿದು ಕೆಲವೇ ಹೊತ್ತಿನಲ್ಲಿ 43 ದಿನದ ಹಸುಗೂಸು ಸಾವನ್ನಪ್ಪಿದ ಘಟನೆ ಗುಜ್ಜಾಡಿಯಲ್ಲಿ ನಡೆದಿದೆ. ಗುಜ್ಜಾಡಿ ಗ್ರಾಮದ ಲಕ್ಷ್ಮಣ ಎಂಬುವರ ಪುತ್ರಿ ನೇತ್ರಾವತಿ ಎಂಬುವರ ಮಗುವೇ ಸಾವನ್ನಪ್ಪಿದ ಮಗು. ಮಂಗಳವಾರ ಬೆಳಿಗ್ಗೆ ಎಂಟು ಗಂಟೆಯ ಸುಮಾರಿಗೆ ತಾಯಿ ಎದೆಹಾಲು ಕುಡಿಸಿ ರೂಮಿನಿಂದ ಹೊರಗೆ ಬಂದಾಗ ಅಜ್ಜ ಲಕ್ಷ್ಮಣ ಮಗುವನ್ನು ನೋಡಲು ಒಳಗೆ ಹೋಗಿದ್ದಾರೆ. ಆಗ ಮಗು ಉಸಿರಾಡುತ್ತಿಲ್ಲ ಎನ್ನುವ ಅನುಮಾನ ಬಂದಿದೆ. ತಕ್ಷಣ ಮಗುವನ್ನು ಮುಟ್ಟಿದಾಗಲೂ ಯಾವುದೇ ಪ್ರತಿಕ್ರಿಯೆ ಇಲ್ಲದೇ ಇದ್ದು ಮಗುವಿನ ಮೈ ತಣ್ಣಗಾಗಿದ್ದು ನಂತರ ಮಗುವನ್ನು ಕರೆದುಕೊಂಡು ಕುಂದಾಪುರದ ವಿನಯ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಮಗು ಮೃತಪಟ್ಟಿದೆ ಎಂದು ವೈದ್ಯರು ದೃಢಪಡಿಸಿದ್ದಾರೆ ಎಂದು ಗಂಗೊಳ್ಳಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ► ಬಿಜಾಡಿ: ಸಮುದ್ರದಲ್ಲಿ ಕೊಚ್ಚಿಹೋದ ಐಟಿಐ ವಿದ್ಯಾರ್ಥಿ- https://kundapraa.com/?p=73305 .

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕಲಾವಿದರ ವಿವರಗಳನ್ನು ಕ್ರೋಢಿಕರಿಸುವ ದೃಷ್ಟಿಯಿಂದ ಜಿಲ್ಲೆಯಲ್ಲಿನ ಕಲಾವಿದರ, ಕಲಾತಂಡಗಳ ಪಟ್ಟಿಯನ್ನು ತಯಾರಿಸಿ ಅವರಿಗೆ ಸೂಕ್ತ ಕಾರ್ಯಕ್ರಮಗಳನ್ನು ನೀಡಲು ಹಾಗೂ ನೈಜ ಕಲಾವಿದರ ಪಟ್ಟಿಯನ್ನು ತಯಾರಿಸಿ ಗುರುತಿನ ಚೀಟಿ ನೀಡಲು ಅರ್ಹ ಕಲಾವಿದರು, ಕಲಾತಂಡದವರು ಹಾಗೂ ಸಾಹಿತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಛೇರಿಯನ್ನು ಸಂಪರ್ಕಿಸಬಹುದಾಗಿದ್ದು, ಅರ್ಜಿಯಲ್ಲಿ ಸ್ವ ವಿವರದ ಮಾಹಿತಿಯೊಂದಿಗೆ ಆಧಾರ್ ಗುರುತಿನ ಚೀಟಿ, ಪಡಿತರ ಚೀಟಿ, ಚುನಾವಣಾ ಗುರುತಿನ ಚೀಟಿ, ಪ್ರತಿಷ್ಠ ಸಂಘ ಸಂಸ್ಥೆಗಳಿಂದ ಪಡೆದ ಪ್ರಶಸ್ತಿ ಪುರಸ್ಕಾರಗಳ ವಿವರ, ಪ್ರಮುಖ ಪ್ರದರ್ಶನಗಳ ವಿವರ, ಶಿಲ್ಪ ಚಿತ್ರಕಲೆಗಳ ಕಲಾ ಪ್ರದರ್ಶನಗಳು ಹಾಗೂ ಛಾಯಾಚಿತ್ರಗಳನ್ನು ಲಗತ್ತಿಸಬೇಕು. ಭರ್ತಿ ಮಾಡಿದ ಅರ್ಜಿಗಳನ್ನು ಜೂನ್ 27ರ ಒಳಗಾಗಿ ಸಹಾಯಕ ನಿರ್ದೇಶಕರ ಕಛೇರಿ, ಡಾ. ಶಿವರಾಮ ಕಾರಂತ ಕಲಾಗ್ರಾಮ, ಪ್ರಗತಿನಗರ, ಅಲೆವೂರು ಗ್ರಾಮ, ಮಣಿಪಾಲ ಅಂಚೆ, ಉಡುಪಿ ದೂ.ಸಂಖ್ಯೆ: 0820-2986168 ಇಲ್ಲಿಗೆ ಸಲ್ಲಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಕಾಲೇಜು ಮಟ್ಟದಲ್ಲಿ ಕ್ರೀಡೆಗೆ ಪ್ರಾಮುಖ್ಯತೆಯನ್ನು ನೀಡಿದರೆ ಮಾತ್ರ ದೇಶದಲ್ಲಿ ಕ್ರೀಡೆ ಬೆಳೆಯಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಅಮೆಚ್ಯೂರ್ ಕಬಡ್ಡಿ ಅಸೋಸಿಯೇಷನ್ ಅಧ್ಯಕ್ಷ ರಾಕೇಶ್ ಮಲ್ಲಿ ಹೇಳಿದರು. ಇಲ್ಲಿರುವ ಆಳ್ವಾಸ್ ಕಾಲೇಜಿನ ಮುಂಡ್ರೆದಗುತ್ತು ಕೆ. ಅಮರನಾಥ ಶೆಟ್ಟಿ ಸ್ಮಾರಕ ಶೆಟ್ಟಿ ಸಭಾಂಗಣದಲ್ಲಿ ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ಆತಿಥ್ಯದಲ್ಲಿ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (ರಾಜ್ಯ) ಮಟ್ಟದ ಪುರುಷರ ಮತ್ತು ಮಹಿಳಾ ಕಬಡ್ಡಿ ಚಾಂಪಿಯನ್‌ಶಿಪ್‌ನಲ್ಲಿ ಅವರು ಮಾತನಾಡಿದರು. ಕ್ರೀಡೆಯನ್ನು ಬೆಳೆಸುವಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠನದ ಕೊಡುಗೆ ಅಪಾರ. ಸರ್ಕಾರದ ನೆರವಿಲ್ಲದೆಯೂ ಆಳ್ವಾಸ್ ಸಂಸ್ಥೆ ಕ್ರೀಡಾಪಟುಗಳ ಬೆಳವಣಿಗೆಗೆ ಶ್ರಮ ಪಡುತ್ತಿದೆ. ಈ ಮಾದರಿ ದೇಶದಲ್ಲೇ ಮೊದಲು ಎಂದರು. ಮುಂದಿನ ದಿನಗಳಲ್ಲಿ ನಮ್ಮ ಫೆಡರೇಶನ್ ಕಪ್ ಅನ್ನು ಆಳ್ವಾಸ್‌ನಲ್ಲೆ ನಡೆಸಲಾಗುವುದು ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ವೈದ್ಯಕೀಯ ವಿದ್ಯಾರ್ಥಿಗಳು ದೇಶಿಯ ಕ್ರೀಡೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ 15 ಡಾ. ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯ ಹಾಗೂ 8 ಡಾ. ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯ ಸೇರಿದಂತೆ ಒಟ್ಟು 23 ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಹೆಚ್.ಎಂ.ಐ.ಎಸ್ ತಂತ್ರಾಂಶದ ಮೂಲಕ ಇಲಾಖಾ ವೆಬ್‌ಸೈಟ್ www.sw.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574892 ಹಾಗೂ ಉಡುಪಿ ದೂ.ಸಂಖ್ಯೆ: 0820-2528884, ಕುಂದಾಪುರ ದೂ.ಸಂಖ್ಯೆ: 08254-230609/ 298089 ಹಾಗೂ ಕಾರ್ಕಳ ದೂ.ಸಂಖ್ಯೆ: 08258-232133/ 298134 ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 2025-26 ಜಿ.ಎಸ್.ಬಿ ಸಮಾಜದ ಶ್ರೀ ಕಾಶೀ ಮಠದ ಪರಮಪೂಜ್ಯ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮ ಶತಮಾನೋತ್ಸವ ವರ್ಷ ಆಚರಣೆಯ ಕುರಿತು ಜಿ.ಎಸ್.ಬಿ ಸರ್ವ ದೇವಾಲಯ ಒಕ್ಕೂಟದ  ಕುಂದಾಪುರ ವಲಯದ ಪೂರ್ವಭಾವಿ ಮಾಹಿತಿ ಸಭೆ ಕೋಟೇಶ್ವರ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನದಲ್ಲಿ ನಡೆಯಿತು. ಕಾಶೀ ಮಠಾಧೀಶ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಯಿತು. ಸರ್ವ ದೇವಾಲಯ ಒಕ್ಕೂಟದ ಅಧ್ಯಕ್ಷ ಅತುಲ್ ಕುಡ್ವ ವಿಸ್ತೃತ ಮಾಹಿತಿ ನೀಡಿದರು. ಗುರುಗಳ ಜನ್ಮ ಶತಮಾನೋತ್ಸವ ಆಚರಿಸುವುದು ನಮ್ಮೆಲ್ಲರ ಸೌಭಾಗ್ಯ ಎಂದರು. ಸುಧೀಂದ್ರ ಫಲೋದ್ಯಾನಸುಮಾರು 1 ಲಕ್ಷಕ್ಕೂ ಹೆಚ್ಚು ವಿವಿಧ ಬಗೆಯ ಹಣ್ಣುಗಳ ಸಸಿಯನ್ನು ನೆಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಊರಿನ ಸಮಾಜ ಬಾಂಧವರು ಮನೆ, ಕಛೇರಿ, ಉದ್ಯಮ ಹಾಗೂ ಇನ್ನಿತರ ಕಡೆಗಳಲ್ಲಿ ಈ ಕಾರ್ಯಕ್ರಮವನ್ನು ಏರ್ಪಡಿಸಬಹುದು ಎಂದರು. ಶ್ರೀ ಸುಧೀಂದ್ರ ಸ್ವಾಮೀಜಿ ಪಾದುಕೆ ರಥಯಾತ್ರೆಗುರುವರ್ಯರ ಪಾದುಕೆಯ ರಥಯಾತ್ರೆ ಜುಲೈ 7 ರಂದು ಶ್ರೀಮದ್ ವರದೇಂದ್ರ ತೀರ್ಥ ಸ್ವಾಮೀಜಿಯವರ ಆರಾಧನಾ…

Read More