ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಬಂದರು ನಿವಾಸಿ ಉದ್ಯಮಿ ಜಗದೀಶ ಭಂಡಾರ್‌ಕಾರ್ ಅವರ ಪತ್ನಿ ಜಯಾ ಭಂಡಾರ್‌ಕಾರ್ (68) ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ನಿಧನರಾದರು. ಗಂಗೊಳ್ಳಿ ಜಿ.ಎಸ್.ಬಿ. ಮಹಿಳಾ ಮಂಡಳಿ ಸದಸ್ಯೆಯಾಗಿದ್ದ ಇವರು ಧಾರ್ಮಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ಅವರಿಗೆ ಪತಿ, ಪುತ್ರ ಹಾಗೂ ಪುತ್ರಿ ಇದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೇಂದ್ರ ಸರ್ಕಾರದ ಯೋಜನೆಗಳು ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳ ಸಾಲ ಸೌಲಭ್ಯಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಅಂದು ನಗರದ ನಗರದ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಕೆನರಾ ಬ್ಯಾಂಕ್ ಉಡುಪಿ ಇವರ ವತಿಯಿಂದ ಕೇಂದ್ರ ಸರಕಾರದ ಸಾಲ ಯೋಜನೆಗಳಾದ ಪಿ.ಎಂ ವಿಶ್ವಕರ್ಮ ಯೋಜನೆ, ಸ್ವನಿಧಿ ಯೋಜನೆ, ಮುದ್ರಾ ಯೋಜನೆ ಮತ್ತು ಇತರ ಸಾಲ ಯೋಜನೆಗಳ ಸಂಪರ್ಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಭಾರತ ದೇಶದಲ್ಲಿರುವ ಪರಂಪರೆಯುತವಾದ ಕುಲಕಸುಬುಗಳಿಗೆ ಶಕ್ತಿ ನೀಡುವ ಉದ್ದೇಶದಿಂದ ಪ್ರಧಾನ ಮಂತ್ರಿಗಳು ಪಿ.ಎಂ. ವಿಶ್ವಕರ್ಮ ಯೋಜನೆಯನ್ನು ರೂಪಿಸಿದ್ದು, ಈ ಯೋಜನೆಯಡಿ ಬಡಗಿಗಳು, ಅಕ್ಕಸಾಲಿಗರು, ಕುಂಬಾರಿಕೆ, ಗಾರೆ ಕೆಲಸದವರು ಸೇರಿದಂತೆ ಸುಮಾರು 18 ಪಾರಂಪರಿಕ ವೃತ್ತಿ ನಡೆಸುವವರಿಗೆ ಕೌಶಲ್ಯಾಭಿವೃದ್ಧಿ ಹಾಗೂ ಆರ್ಥಿಕ ಸೌಲಭ್ಯಗಳೊಂದಿಗೆ ಉಪಕರಣಗಳನ್ನು ನೀಡಲಾಗುತ್ತಿದ್ದು, ಸಾಮಾನ್ಯ ಬಡಜನರು ಇದರ ಸದುಪಯೋಗ ಪಡೆದುಕೊಳ್ಳುವಂತೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನ.6 ರಂದು ಆನಂದತೀರ್ಥ ವಿದ್ಯಾಲಯ ಪಾಜಕದಲ್ಲಿ ನಡೆದ ಎ.ಐ.ಸಿ.ಎಸ್. ಮಟ್ಟದ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ, ಉತ್ತಮ ಪ್ರದರ್ಶನವನ್ನು ನೀಡಿರುತ್ತಾರೆ. ಹಿಂದಿ ಕಥಾ ಲೇಖನ ಸ್ಪರ್ಧೆಯಲ್ಲಿ 8ನೇ ತರಗತಿಯ ಸಾನ್ವಿಸಾಗರ್ ಬಿಜಾಪುರದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಶಾಲೆಗೆ ಕೀರ್ತಿಯನ್ನು ತಂದಿರುತ್ತಾಳೆ. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ ಆಕೆಯನ್ನು ಅಭಿನಂದಿಸುತ್ತಾ, ಸಾನ್ವಿಯು ನಮ್ಮ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದು, ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಸದಾ ಕ್ರಿಯಾಶೀಲಳಾಗಿದ್ದಾಳೆ. ಅಂದದ ಬರವಣಿಗೆ, ಸ್ವತಂತ್ರ ಕಲ್ಪನಾಶಕ್ತಿ ಹಾಗೂ ವಿಚಾರವಿಮರ್ಶೆಯ ಗುಣಗಳನ್ನು ಹೊಂದಿರುತ್ತಾಳೆ. ಹಿಂದಿಭಾಷೆಯಲ್ಲಿ ಕಥಾಲೇಖನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆಯುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದು ನಮ್ಮೆಲ್ಲರಿಗೂ ಹೆಮ್ಮೆಯಾಗಿದೆ ಎಂದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ತಾಲೂಕು ಪಂಚಾಯತ್ ಕಛೇರಿಯಲ್ಲಿ ಕುಂದಾಪುರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕಛೇರಿಯನ್ನು ಶುಕ್ರವಾರ ಉದ್ಘಾಟನೆಗೊಂಡಿತು. ಈ ವೇಳೆ ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ದಿನೇಶ ಹೆಗ್ಡೆ ಅವರು ಮಾತನಾಡಿ, ರಾಜ್ಯ ಸರಕಾರದ ಐದು ಗ್ಯಾರಂಟಿಗಳಿಂದ ಜನರಿಗೆ ಬಹಳಷ್ಟು ಪ್ರಯೋಜವಾಗಿದೆ. ಇದನ್ನು ಸಹಿಸಿಕೊಳ್ಳಲಾಗದ ವಿರೋಧ ಪಕ್ಷದವರು ಸರಕಾರದ ಗ್ಯಾರಂಟಿಗಳ ಬಗ್ಗೆ ಲೇವಡಿ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಐದು ವರ್ಷ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇರುವವರೆಗೆ ಸರಕಾರದ ಐದೂ ಗ್ಯಾರಂಟಿಗಳು ನಿರಂತರವಾಗಿ ನಡೆಯುತ್ತದೆ ಎಂದರು. ಕುಂದಾಪುರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಹರಿಪ್ರಸಾದ ಶೆಟ್ಟಿ ಮಾತನಾಡಿ, ರಾಜ್ಯ ಸರಕಾರ ಗ್ಯಾರೆಂಟಿ ಯೋಜನೆಯನ್ನು ಉತ್ತಮವಾಗಿ ಅನುಷ್ಠಾನಗೊಳಿಸಿದೆ. ಯೋಜನೆಯಿಂದ ವಂಚಿತರಾಗಿರುವ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಗ್ಯಾರಂಟಿ ಯೋಜನೆಗಳ ಪ್ರಯೋಜನ ದೊರೆಕಿಸಿಕೊಡಲು ಶ್ರಮಿಸುವುದಾಗಿ ತಿಳಿಸಿದರು. ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಕುಂದಾಪುರ ತಾಲೂಕು ಗ್ಯಾರಂಟಿ ಯೋಜನೆಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ತಾಲೂಕು ಪಂಚಾಯತ್ ಆವರಣದಲ್ಲಿ ಆರಂಭಿಸಲಾದ ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿಯ ಕಚೇರಿಯನ್ನು ಶುಕ್ರವಾರ ಪ್ರಗತಿಪರ ಕೃಷಿಕ ಹಾಗೂ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಉದ್ಘಾಟಿಸಿದರು. ಈ ವೇಳೆ ಅವರು ಮಾತನಾಡಿ, ರಾಜ್ಯ ಸರ್ಕಾರ ಅಶಕ್ತರಿಗೆ, ದುರ್ಬಲರಿಗೆ ಆರ್ಥಿಕ ಶಕ್ತಿ ಕಲ್ಪಿಸುವ ನಿಟ್ಟಿನಲ್ಲಿ ಪಂಚಗ್ಯಾರಂಟಿ ಯೋಜನೆ ಜಾರಿಗೊಳಿಸಿ, ವಾರ್ಷಿಕವಾಗಿ ಸುಮಾರು 53 ಸಾವಿರ ಕೋಟಿ ರೂ. ಅನುದಾನ ಒದಗಿಸುತ್ತಿದೆ. ರಾಜ್ಯದ ಸುಮಾರು ಶೇ.90ರಷ್ಟು ಜನರು ಒಂದಿಲ್ಲೊದು ರೀತಿಯಲ್ಲಿ ಇದರ ಪ್ರಯೋಜನ ಪಡೆಯುತ್ತಿದ್ದಾರೆ, ಆದರೆ ಕೆಲವು ಫಲಾನುಭವಿಗಳೇ ಈ ಯೋಜನೆಯ ಬಗ್ಗೆ ಅಪಪ್ರಚಾರ ನಡೆಸುತ್ತಿದ್ದಾರೆ, ಇದು ವಿಷಾಧನೀಯ ಸಂಗತಿಯಾಗಿದೆ. ರಾಜ್ಯ ಸರ್ಕಾರ ಪಂಚಗ್ಯಾರಂಟಿ ಯೋಜನೆ ಸಮರ್ಪಕ ಅನುಷ್ಠಾನಕ್ಕಾಗಿ ಪ್ರತಿ ತಾಲ್ಲೂಕಿನಲ್ಲಿಯೂ ಅನುಷ್ಠಾನ ಸಮಿತಿ ರಚಿಸಿರುವುದು ಶ್ಲಾಘನೀಯವಾಗಿದ್ದು, ಸರ್ಕಾರದ ಗ್ಯಾರಂಟಿ ಅರ್ಹರಿಗೆ ತಲುಪಿಸುವ ಬಹಳ ದೊಡ್ಡ ಜವಾಬ್ದಾರಿ ಅನುಷ್ಠಾನ ಸಮಿತಿ ಮೇಲಿದೆ ಎಂದರು. ಬೈಂದೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲ್ಲೂಕಿನ ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಶ್ರೀ ಮನ್ಮಹಾ ರಥೋತ್ಸವದ ಅಂಗವಾಗಿ ಶ್ರೀ ದೇವರಿಗೆ ವಿಶೇಷ ಪೂಜೆ ನೆರವೇರಿಸಿ ರಥ ಪೂಜೆ ಮಾಡುವುದರ ಮೂಲಕ ರಥ ಕಟ್ಟುವ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಪ್ರದಾನ ಅರ್ಚಕರಾದ ವೇದಮೂರ್ತಿ ಪ್ರಕಾಶ್ ಉಡುಪ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಸತೀಶ್ ಶೆಟ್ಟಿ,ವ್ಯವಸ್ಥಾಪನಾ ಸಮಿತಿಯ ಸದಸ್ಯರು ಇನ್ನಿತರರು ಉಪಸ್ಥಿತರಿದ್ದರು. ನವೆಂಬರ್ 16ರ ಶನಿವಾರ ಶ್ರೀ ಮನ್ಮಹಾ ರಥೋತ್ಸವ ಜರುಗಲಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೂಡುಬಿದಿರೆ ವಿದ್ಯಾಗಿರಿಯಲ್ಲಿ ನ.10ರಂದು ನಡೆಯಲಿರುವ ಗದ್ದಿಗೆ ಕರಾವಳಿ ಮರಾಟಿ ಸಮಾವೇಶ-2024ನ್ನು ಬೈಂದೂರು – ಕುಂದಾಪುರ ಮರಾಟಿ ಸಂಘ ಬಹಿಷ್ಕರಿಸಿ ಸಮಾವೇಶದಲ್ಲಿ ಪಾಲ್ಗೊಳ್ಳದಿರುವ ನಿರ್ಣಯ ಕೈಗೊಂಡಿದೆ. ಗದ್ದಿಗೆ ಕರಾವಳಿ ಮರಾಟಿ ಸಮಾವೇಶ ಆಯೋಜಿಸುವವರು ಮರಾಠಿ ಸಮುದಾಯದ ಆರಾಧ್ಯ ದೇವಿ ತುಲಾಜಾ ಭವಾನಿಯ ಭಾವಚಿತ್ರ, ಸಮುದಾಯದ ಆದರ್ಶ ಪುರುಷ ಶಿವಾಜಿ ಮಹಾರಾಜರ ಕಡೆಗಣನೆ ಮರಾಠಿ ಸಮುದಾಯದ ಆಚಾರ ವಿಚಾರ ಸಂಸ್ಕೃತಿ ಸಂಸ್ಕಾರಗ ಗಾಳಿಗೆ ತೂರಿ ಸರ್ವಾಧಿಕಾರದ ಧೋರಣೆಯಿಂದ ಕಾರ್ಯಕ್ರಮ ಮಾಡುತ್ತಿರುವುದು ನಮಗೆ ನೋವು ತಂದಿದೆ. ಇದು ನೇತೃತ್ವ ವಹಿಸಿರುವ ಕೆಲವೇ ಕೆಲವು ಮುಖಂಡರು ತಮ್ಮ ಉದ್ದೇಶ ಈಡೇರಿಸಿಕೊಳ್ಳುವ ನಿಟ್ಟಿನಲ್ಲಿ ಸಮಾವೇಶ ಆಯೋಜಿಸಿದಂತೆ ಕಾಣುತ್ತಿದೆ. ಅವಿಭಜಿತ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯ ಮರಾಟಿಗರನ್ನು ಒಗ್ಗಟ್ಟಾಗಿಸಿಕೊಂಡು ಕಾರ್ಯಕ್ರಮವನ್ನು ಮಾಡಿಲ್ಲ. ಇದು ಮರಾಟಿಗರ ಏಳಿಗೆಗೆ ಪೂರಕವಾಗಿ ಇಲ್ಲದೆ ಇರುವುದರಿಂದ ಗದ್ದಿಗೆ ಕರಾವಳಿ ಮರಾಟಿ ಸಮಾವೇಶ-2024 ಈ ಕಾರ್ಯಕ್ರಮವನ್ನು ಬಹಿಷ್ಕರಿಸುವುದಾಗಿ ಬೈಂದೂರು ಮರಾಟಿ ಸಂಘದ ಅಧ್ಯಕ್ಷ ಭೋಜ ನಾಯ್ಕ್ ಹಾಗೂ ಕಾರ್ಯಕಾರಿ ಸಮಿತಿ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ ಉಡುಪಿ ಹಾಗೂ ವಿದ್ಯಾ ಸಮುದ್ರತೀರ್ಥ ಪ್ರೌಢ ಶಾಲೆ ಕಿದಿಯೂರು ಉಡುಪಿ ಇವರ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ಮಾನ್ಯ ಜಾವಲಿನ್ ಎಸೆತದಲ್ಲಿ ಪ್ರಥಮ, 200ಮೀ ಓಟದಲ್ಲಿ ದ್ವಿತೀಯ ಹಾಗೂ 100ಮೀ ಓಟದಲ್ಲಿ ತೃತೀಯ ಸ್ಥಾನ ಪಡೆಯುದರೊಂದಿಗೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕೇಳುವ ಕಿವಿ, ನೋಡುವ ಕಣ್ಣುಗಳಿಲ್ಲದಿದ್ದರೆ ಕಲಾವಿದ ಏನು ಮಾಡಿದರೂ ಪ್ರಯೋಜನವಾಗದು. ಇಂದಿನ ಯುವಜನರು ಯಕ್ಷಗಾನ ಕಲೆಗೆ ಒಲವು ತೋರಿಸದ ಹಿನ್ನೆಲೆಯಲ್ಲಿ ಯಕ್ಷಗಾನಕ್ಕೆ ಪ್ರೇಕ್ಷಕರ ಒಗ್ಗೂಡಿಸುವಿಕೆ ಕಷ್ಟಸಾಧ್ಯವಾಗಿದೆ. ಫಿಲ್ಮಿಡಾನ್ಸ್ ಸುದ್ದಿ ತಿಳಿದಾಕ್ಷಣ ಅಸಂಖ್ಯಾತ ಪ್ರೇಕ್ಷಕರು ಜಮಾಯಿಸುವ ಹಾಗೆ ಕರಾವಳಿಯ ಗಂಡುಕಲೆ ಯಕ್ಷಗಾನಕ್ಕೂ ನೋಡುಗರ ಸಂಖ್ಯೆ ಹೆಚ್ಚಾಗಬೇಕು ಎಂದು ಉಪ್ಪುಂದ ಗ್ರಾಪಂ ಅಧ್ಯಕ್ಷ ಮೋಹನಚಂದ್ರ ಹೇಳಿದರು. ಉಪ್ಪುಂದ ಮಾತೃಶ್ರೀ ಸಭಾಭವನದಲ್ಲಿ ಇಲ್ಲಿನ ವೃತ್ತಿಪರ ಕಲಾವಿದರ ಶ್ರೀ ದುರ್ಗಾಪರಮೇಶ್ವರೀ ಯಕ್ಷಕಲಾ ಟ್ರಸ್ಟ್‌ನ 8ನೇ ವರ್ಷದ ವಾರ್ಷಿಕ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಆಧುನಿಕ ಮಾಧ್ಯಮಗಳಿಂದ ನೈಜ ಯಕ್ಷಗಾನ ಕಲಾವಿದರ ಬದುಕು ಹೈರಾಣಾಗಿಸಿದೆ. ಕೆಲವು ದೇವಸ್ಥಾನಗಳು ನಡೆಸುತ್ತಿರುವ ಹರಕೆ ಬಯಲಾಟದ ಕಲಾವಿದರಿಗೆ ಉತ್ತಮ ಸೌಲಭ್ಯವಿದ್ದು, ಇತರೇ ಬಯಲಾಟ ಕಲಾವಿದರಿಗೆ ಜೀವನ ನಡೆಸುವುದು ಕಷ್ಟಕರ ಸ್ಥಿತಿಯಿದೆ. ಈ ನಿಟ್ಟಿನಲ್ಲಿ ಸರ್ಕಾರ ಬಡ ಕಲಾವಿದರ ನೆರವಿಗೆ ಧಾವಿಸುವ ಮೂಲಕ ಅವರ ಜೀವನಾಧಾರಕ್ಕಾಗಿ ಹೆಚ್ಚಿನ ಸವಲತ್ತುಗಳನ್ನು ನೀಡುವಂತಾಬೇಕು ಎಂದರು. ಉದ್ಯಮಿ ಯು. ಎ. ಮಂಜು ದೇವಾಡಿಗ ಅಧ್ಯಕ್ಷತೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಗುರುತಿಸುವುದರೊಂದಿಗೆ ಅದನ್ನು ಹೊರತರಲು ಇಂತಹ ಕಾರ್ಯಕ್ರಮಗಳು ಸೂಕ್ತ ವೇದಿಕೆ ಕಲ್ಪಿಸಿಕೊಡುತ್ತವೆ. ವಿದ್ಯಾರ್ಥಿಗಳು ಉತ್ಸಾಹದಿಂದ ಸ್ಪರ್ಧೆಗಳಲ್ಲಿ ಪಾಲ್ಗೊಂಡು ಅವಕಾಶದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಬ್ರಹ್ಮಗಿರಿಯ ಜಿಲ್ಲಾ ಬಾಲಭವನದಲ್ಲಿ ರಾಜ್ಯ ಬಾಲಭನವ ಸೊಸೈಟಿ ಬೆಂಗಳೂರು, ಜಿಲ್ಲಾ ಬಾಲಭವನ ಸಮಿತಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಪ್ರಸಕ್ತ ಸಾಲಿನ ಮಕ್ಕಳ ದಿನಾಚರಣೆ ಹಾಗೂ ಮಕ್ಕಳಿಗೆ ನಡೆದ ವಿವಿಧ ಸ್ಪರ್ಧಾ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದರು. ಪ್ರಕೃತಿಯ ಅಸಮತೋಲನಕ್ಕೆ ಮುಖ್ಯ ಕಾರಣ ಮನುಷ್ಯ. ಆತನ ಅಭಿವೃದ್ಧಿಯ ವೇಗದಿಂದಾಗಿ ಪ್ರಕೃತಿ ನಲುಗಿಹೋಗುತ್ತಿದೆ. ಪರಿಸರ ಸ್ವಚ್ಛವಾಗಿಡುವುದು ಪ್ರತಿಯೊಬ್ಬ ನಾಗರಿಕರರ ಜವಾಬ್ದಾರಿಯಾಗಿದ್ದು, ಪರಿಸರ ಉಳಿಸುವುದರೊಂದಿಗೆ ಸಕಲ ಜೀವಿಗಳ ಉಳಿವಿಗೆ ಕಾರಣರಾಗಿ ಎಂದ ಅವರು, ಮಕ್ಕಳು ಓದಿನ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಬೇಕು. ಮಕ್ಕಳು…
