ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಹಿಂದುಗಳಲ್ಲಿ ಒಗ್ಗಟ್ಟು ಮೂಡಿಸಲು ಹಾಗೂ ಧಾರ್ಮಿಕ ಪ್ರಜ್ಞೆ ಬೆಳೆಸುವ ಉದ್ದೇಶದಿಂದ ಗಂಗೊಳ್ಳಿಯ ಹಿಂದು ಸಮಾಜದ ಮುಖಂಡರು ಪ್ರಾರಂಭಿಸಿದ ಸೇವಾ ಸಂಘವು ಸ್ಥಾಪಕರ ಆಶಯದಂತೆ ಸತ್ಕಾರ್ಯ, ಸತ್ಕರ್ಮಗಳನ್ನು ನಡೆಸುತ್ತಿರುವುದು ಶ್ಲಾಘನೀಯ. ಸಾರ್ವಜನಿಕ ಶ್ರೀ ಶಾರದೋತ್ಸವದ ಮೂಲಕ ಎಲ್ಲಾ ಜಾತಿ ವರ್ಗದವರನ್ನು ಒಂದುಗೂಡಿಸಿ ಜನರಲ್ಲಿ ಸದಾಭಿಪ್ರಾಯವನ್ನು ಬೆಳೆಸುವ ಮೂಲಕ ಸಮಾಜದಲ್ಲಿ ಒಗ್ಗೂಟ್ಟು ಮೂಡಿಸುತ್ತಿರುದು ಅಭಿನಂದನೀಯ ಎಂದು ಸೇವಾ ಸಂಘದ ಸ್ಥಾಪಕ ಅಧ್ಯಕ್ಷ ಎಂ. ವಾಮನ ಪೈ ಹೇಳಿದರು. ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ಗಂಗೊಳ್ಳಿಯ ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಸುವರ್ಣ ಮಹೋತ್ಸವ – 2024 ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಶ್ರೀ ಶಾರದಾ ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ಸತೀಶ್ ಜಿ. ಧಾರ್ಮಿಕ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ಪ್ರಧಾನ ಅರ್ಚಕ ಎಸ್.ವೆಂಕಟರಮಣ ಆಚಾರ್ಯ, ಶ್ರೀ ಸೀತಾರಾಮಚಂದ್ರ ದೇವಸ್ಥಾನದ ಅಧ್ಯಕ್ಷ ರಾಜೇಶ ಎಂ.ಜಿ. ಮತ್ತು ಮಹಿಳಾ ಮಂಡಳಿ ಅಧ್ಯಕ್ಷೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: 2023-24ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು ಶೇ. 99.35 ಫಲಿತಾಂಶ ದಾಖಲಿಸಿದ್ದು, ವಿಜ್ಞಾನ ವಿಭಾಗದಲ್ಲಿ ಶೇಕಡ 100 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಕುಳಿತ 155 ವಿದ್ಯಾರ್ಥಿಗಳಲ್ಲಿ 154 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದು, 62 ವಿದ್ಯಾರ್ಥಿಗಳು ವಿಶಿಷ್ಠ ದರ್ಜೆಯಲ್ಲಿ, 83 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 8 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಮತ್ತು ಓರ್ವ ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಸಂಸ್ಕೃತ ವಿಷಯದಲ್ಲಿ 11 ವಿದ್ಯಾರ್ಥಿಗಳು 100 ಅಂಕಗಳನ್ನು ಪಡೆದಿದ್ದರೆ, ಗಣಿತಶಾಸ್ತçದಲ್ಲಿ 6 ವಿದ್ಯಾರ್ಥಿಗಳು 100 ಅಂಕಗಳನ್ನು ಪಡೆದುಕೊಂಡಿದ್ದಾರೆ. ರಸಾಯನಶಾಸ್ತç, ಜೀವಶಾಸ್ತçದಲ್ಲಿ, ಅರ್ಥಶಾಸ್ತçದಲ್ಲಿ ಹಾಗೂ ವ್ಯವಹಾರ ಅಧ್ಯಯನದಲ್ಲಿ ತಲಾ ಒಬ್ಬ ವಿದ್ಯಾರ್ಥಿ 100 ಅಂಕಗಳನ್ನು ಪಡೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ 590 ಅಂಕಗಳನ್ನು ಪಡೆದಿರುವ ನೇಹಾ ಎಸ್.ಕೊಡೇರಿ ಕಾಲೇಜಿನ ಅಗ್ರ ಸ್ಥಾನಿಯಾಗಿ ಮೂಡಿ ಬಂದಿದ್ದಾಳೆ. ವಾಣಿಜ್ಯ ವಿಭಾಗದಲ್ಲಿ ಸನ್ನಿಧಿ ಹೊಳ್ಳ 587 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ.ಎ.11: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಧವನ್ ಟಿ. ಪೂಜಾರಿ 544 (ಶೇ.90.66) ಅಂಕ ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾನೆ. ಈತ ಯಡ್ತರೆ ದುರ್ಗಾಂಬಾ ಪ್ರಿಂಟರ್ಸ್ ಮಾಲೀಕ, ಕಂಚಿಕಾನು ನಿವಾಸಿ ತಿಮ್ಮಪ್ಪ ಪೂಜಾರಿ ಹಾಗೂ ಅಂಬಿಕಾ ದಂಪತಿಗಳ ಪುತ್ರನಾಗಿದ್ದಾನೆ. ► ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಧವನ್ ಟಿ. ಪೂಜಾರಿಗೆ 92.8% ಫಲಿತಾಂಶ – https://kundapraa.com/?p=59373 .
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೋಟೇಶ್ವರ ಬಾಂಡ್ಯಾ ಎಜುಕೇಶನಲ್ ಟ್ರಸ್ಟ್ ವಕ್ವಾಡಿ ಗುರುಕುಲ ಪದವಿಪೂರ್ವ ಕಾಲೇಜಿನ 68 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 68 ವಿದ್ಯಾರ್ಥಿಗಳು ಉತೀರ್ಣರಾಗಿ ಶೇ.100 ಫಲಿತಾಂಶ ಬಂದಿದೆ. 43 ಮಂದಿ ವಿಶಿಷ್ಠ ಶ್ರೇಣಿ ಮತ್ತು 25 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತೀರ್ಣರಾಗಿದ್ದಾರೆಂದು ಕಾಲೇಜಿನ ಪ್ರಾಂಶುಪಾಲಅವಿನಾಶ್ ಅವರು ತಿಳಿಸಿದ್ದಾರೆ. ಕಾಲೇಜಿನ ವಿಜ್ಞಾನ ವಿಭಾಗದ ಗಗನ್ ಗಣೇಶ್ ನಾಯ್ಕ್ (581), ಲಿಖಿತ್ ಗಣೇಶ್ ಸಿ.ವಿ (578) ವಾಣಿಜ್ಯ ವಿಭಾಗದ ಪ್ರಥಮ್.ಎನ್.ಕಾಮತ್ (575), ಫ್ರೆನಿಟಾ ಡಿ ಕಾಸ್ಟಾ (572), ವರುಣ್ ಚಂದ್ ಸಿ (571), ಅಂಕ ಗಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ಶೇ.100 ಫಲಿತಾಂಶದೊಂದಿಗೆ ಸಾಧನೆ ಮೆರೆದಿದ್ದು, ವಿಜ್ಞಾನ ವಿಭಾಗದಲ್ಲಿ ವಿದ್ಯಾರ್ಥಿನಿ ಸಂಜನಾ ಎನ್ ಹಾಗೂ ಮಾನ್ಯ 592 ಅಂಕಗಳನ್ನು ಪಡೆಯುವುದರ ಮೂಲಕ ರಾಜ್ಯಕ್ಕೆ 7ನೇ ರ್ಯಾಂಕ್, ಸುಜಯಾ ಎಚ್ ಮತ್ತು ಅನಿರುದ್ದ್ ಶೇಟ್ 591 ಅಂಕಗಳೊಂದಿಗೆ 8ನೇ ರ್ಯಾಂಕ್, ಪೂಜಾ ಕಾರಂತ 590 ಅಂಕಗಳೊಂದಿಗೆ 9ನೇ ರ್ಯಾಂಕ್, ನಮ್ರತಾ 589 ಅಂಕಗಳೊಂದಿಗೆ 10ನೇ ರ್ಯಾಂಕ್ ಪಡೆದಿರುತ್ತಾರೆ. ವಾಣಿಜ್ಯ ವಿಭಾಗದಲ್ಲಿ ಸಿಂಚನಾ 590 ಅಂಕಗಳೊಂದಿಗೆ 8ನೇ ರ್ಯಾಂಕ್, ವಿನಯ ಶ್ಯಾನುಭಾಗ್ 589 ಅಂಕಗಳೊಂದಿಗೆ 9 ನೇ ರ್ಯಾಂಕ್, ಶ್ರದ್ಧಾ 588 ಅಂಕಗಳೊಂದಿಗೆ 10 ನೇ ರ್ಯಾಂಕ್ ಪಡೆದು ರಾಜ್ಯದ ಅಗ್ರ ಸ್ಥಾನಿಯರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. 229 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಡಿಸ್ಟಿಂಕ್ಷನ್ ನಲ್ಲಿ 182 ವಿದ್ಯಾರ್ಥಿಗಳು, ಪ್ರಥಮ ಶ್ರೇಣಿಯಲ್ಲಿ 47 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಕಂಪ್ಯೂಟರ್ ಸೈನ್ಸ ನಲ್ಲಿ 20, ಸಂಸ್ಕ್ರತದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಸಂದೀಪ್ ಗಾಣಿಗ ನೇಮಕಗೊಂಡಿದ್ದಾರೆ. ಸಿಇಟಿ, ನೀಟ್, ಜೆಇಇ ತರಬೇತುದಾರರಾಗಿರುವ ಸಂದೀಪ್ ಗಾಣಿಗ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಕಳೆದ 10 ವರ್ಷಗಳಿಂದ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ತನ್ನ ವಿಶಿಷ್ಟ ಬೋಧನಾ ಶೈಲಿಯಿಂದ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಛಾಪು ಮೂಡಿಸಿದ ಇವರು ಪ್ರಸ್ತುತ ವರ್ಷದಿಂದ ಕಾಲೇಜಿನ ಪ್ರಾಂಶುಪಾಲರಾಗಿ ನೇಮಕ ಗೊಂಡಿದ್ದಾರೆ. ಸಿಇಟಿ, ಜೆಇಇ ತರಬೇತುದಾರ ಹಾಗೂ ಗಣಿತಶಾಸ್ತ್ರವನ್ನು ಸರಳ ತಂತ್ರ ಗಳ ಮೂಲಕ ಬೋಧಿಸಿ ವಿದ್ಯಾರ್ಥಿಗಳ ಮನಗೆದ್ದಿರುವ ಉಪನ್ಯಾಸಕ ಸುಜಯ್ ಕೋಟೆಗಾರ್ ಉಪಪ್ರಾಂಶುಪಾಲರಾಗಿ ನೇಮಕ ಗೊಂಡಿದ್ದಾರೆ. ಸಂಸ್ಥೆಯ ಕಾರ್ಯದರ್ಶಿ ಕೆ ರಾಧಾಕೃಷ್ಣ ಶೆಣೈ ಅಭಿನಂದನೆ ಸಲ್ಲಿಸಿ, ಶುಭ ಹಾರೈಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಪರೀಕ್ಷೆಯಲ್ಲಿ ಮಂಗಳೂರು ಕೆನರಾ ವಿಕಾಸ ಕಾಲೇಜಿನ ವಿದ್ಯಾರ್ಥಿನಿ, ಬೈಂದೂರು ಬಾಡ ಮೂಲದ ವಿದ್ಯಾರ್ಥಿನಿ ಶ್ರೀಲಕ್ಷ್ಮೀ ಎಂ. ಶೇ. 91 ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾಳೆ. ಈಕೆ ಮಂಗಳೂರಿನ ಕಾವೂರು ಪೊಲೀಸ್ ಠಾಣೆಯಲ್ಲಿ ವೃತ್ತನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಬೈಂದೂರು ಬಾಡದ ರಾಘವೇಂದ್ರ ಎಂ ಹಾಗೂ ನೇತ್ರಾವತಿ ದಂಪತಿಗಳ ಪುತ್ರಿ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಶಂಕರನಾರಾಯಣ ಮದರ್ ತೆರೆಸಾ ಪದವಿ ಪೂರ್ವ ವಿದ್ಯಾರ್ಥಿಗಳು 2023-24ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿದ್ದಾರೆ. ವಾಣಿಜ್ಯ ವಿಭಾಗದ ಒಟ್ಟು 50 ವಿದ್ಯಾರ್ಥಿಗಳಲ್ಲಿ 33 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 17 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ವಿಜ್ಞಾನ ವಿಭಾಗದ 86 ವಿದ್ಯಾರ್ಥಿಗಳಲ್ಲಿ 59 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 27 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ವಾಣಿಜ್ಯ ವಿಭಾಗದಲ್ಲಿ 588 ಅಂಕಗಳನ್ನು ಗಳಿಸುವ ಮೂಲಕ ಸಾತ್ವಿಕ್ ವಿ ಶೆಟ್ಟಿ ರಾಜ್ಯಕ್ಕೆ ಹತ್ತನೇ ಸ್ಥಾನವನ್ನು ಮತ್ತು ಕಾಲೇಜಿಗೆ ಪ್ರಥಮ ಸ್ಥಾನವನ್ನು ಪಡೆದಿದ್ದಾನೆ. 581 ಅಂಕಗಳನ್ನು ಗಳಿಸುವ ಮೂಲಕ ಅನನ್ಯ ಶೆಟ್ಟಿ ಹಾಗೂ ಆಯೇಷ ಸಮನ್ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 2023-24 ಶೈಕ್ಷಣಿಕ ವರ್ಷದ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಕುಂದಾಪುರದ ಎಕ್ಸಲೆಂಟ್ ಪ.ಪೂ. ಕಾಲೇಜಿಗೆ ರಾಜ್ಯಮಟ್ಟದಲ್ಲಿ 13 ಸ್ಥಾನಗಳು ಬಂದಿದ್ದು, ಶೇ.100 ಫಲಿತಾಂಶ ಲಭಿಸಿದೆ. ಅತೀ ಹೆಚ್ಚು ರ್ಯಾಂಕ್ಗಳನ್ನು ಪಡೆದ ಕುಂದಾಪುರದ ಏಕೈಕ ಕಾಲೇಜು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಸಂಸ್ಥೆಯಲ್ಲಿ ವಾಣಿಜ್ಯ ಹಾಗೂ ವಿಜ್ಞಾನ ವಿಭಾಗಗಳಿದ್ದು ಒಟ್ಟು 404 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಗೊಂಡು ಶೇ.100 ಫಲಿತಾಂಶ ಬರುವುದರೊಂದಿಗೆ ವಿಜ್ಞಾನ ವಿಭಾಗದಲ್ಲಿ 08 ಸ್ಥಾನಗಳು ಹಾಗೂ ವಾಣಿಜ್ಯ ವಿಭಾಗದಲ್ಲಿ 05 ಸ್ಥಾನಗಳನ್ನು ರಾಜ್ಯಮಟ್ಟದಲ್ಲಿ ಗಳಿಸುವುದರ ಮೂಲಕ ಸಂಸ್ಥೆಯ ಕೀರ್ತಿ ಕಳಶಕ್ಕೆ ಇನ್ನು ಹೊಳಪು ನೀಡಿದ್ದಾರೆ. ಸಂಸ್ಥೆಯ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಚಿರಾಗ್ 592 ಅಂಕಗಳೊAದಿಗೆ ರಾಜ್ಯಮಟ್ಟದಲ್ಲಿ 7 ನೇ ಸ್ಥಾನ, ಅನನ್ಯ ಉಡುಪ 590 ಅಂಕಗಳೊAದಿಗೆ 9 ನೇ ಸ್ಥಾನ, ನಾಗರಾಜ ಉಪ್ಪಾರ್ 590 ಅಂಕಗಳೊAದಿಗೆ 9 ನೇ ಸ್ಥಾನ, ರಕ್ಷಾ ಆರ್ ಪೂಜಾರಿ 590 ಅಂಕಗಳೊAದಿಗೆ 9 ನೇ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೆಮ್ಮಾಡಿಯ ಜನತಾ ಪದವಿ ಪೂರ್ವ ಕಾಲೇಜು 2023-24ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ ದಾಖಲಿಸಿದೆ. ಸಂಸ್ಥೆಯ 386 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು,226 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ(distinction) ಉತ್ತೀರ್ಣರಾಗಿದ್ದಾರೆ. ಪ್ರತೀಕ್ಷಾ 589 (ವಾಣಿಜ್ಯ ವಿಭಾಗ), ಪ್ರಜ್ವಲ್ ಪೂಜಾರಿ 588 (ವಿಜ್ಞಾನ ವಿಭಾಗ), ಪವಿತ್ರಾ 588(ವಿಜ್ಞಾನ ವಿಭಾಗ),ಲಾವಣ್ಯ 588 (ವಾಣಿಜ್ಯ ವಿಭಾಗ) ಐಶ್ವರ್ಯ ವೈದ್ಯ 587(ವಿಜ್ಞಾನ ವಿಭಾಗ) ಅತಿ ಹೆಚ್ಚು ಅಂಕ ಗಳಿಸಿದ್ದಾರೆ. 155 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ,ಹಾಗೂ 5 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.
