ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಶ್ರೀ ರಾಮಕ್ಷತ್ರಿಯ ಯುವಕ ಸಮಾಜ ಶ್ರೀ ಸೀತಾರಾಮಚಂದ್ರ ದೇವಸ್ಥಾನದ 38ನೇ ವರ್ಷದ ಶ್ರೀ ಶಾರದೋತ್ಸವ ಸಮಾರಂಭ ಅ.09ರಿಂದ 12ರ ತನಕ ವಿಜೃಂಭಣೆಯಿಂದ ಜರುಗಲಿದೆ. ಅ.09ರಂದು ಬೆಳಿಗ್ಗೆ ಶ್ರೀ ಶಾರದಾಂಬೆಯನ್ನು ಮೂರ್ತಿಯನ್ನು ಮೆರವಣಿಗೆಯಲ್ಲಿ ತಂದು ಪ್ರತಿಷ್ಠಾಪಿಸಿದ ಬಳಿಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಭಜನಾ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಲಿದೆ. ಅ.10ರಂದು ನವಚಂಡಿಕಾ ಯಾಗ ಹಾಗೂ ಅ.11ರಂದು ನವಚಂಡಿಕಾಯಾಗದ ಅಂಗವಾಗಿ ಅನ್ನಸಂತರ್ಪಣೆ ನಡೆಯಲಿದ್ದು, ಅ.12ರಂದು ಶ್ರೀ ಶಾರದಾ ಮೂರ್ತಿಯ ವೈಭವದ ವಿಸರ್ಜನಾ ಮೆರವಣಿಗೆ ಜರುಗಲಿದೆ. ಶಾರದೋತ್ಸವದ ಅಂಗವಾಗಿ ವಿವಿಧ ಸ್ಪರ್ಧೆಗಳ ಜರುಗಲಿದ್ದು, ಅ.09ರ ಬುಧವಾರ ಮಧ್ಯಾಹ್ನ 2:30ರಿಂದ ಭಕ್ತಿಗೀತೆ, ರಂಗೋಲಿ, ಹೂಮಾಲೆ ಕಟ್ಟುವ ಸ್ಪರ್ಧೆ, ಭಗವದ್ಗೀತಾ ಪಠಣ ಸ್ಪರ್ಧೆ ನಡೆಯಲಿದೆ. ಅಂದು ಸಂಜೆ 5ರಿಂದ ಕುಣಿತ ಭಜನಾ ಸ್ಪರ್ಧೆ ನಡೆಯಲಿದೆ. ಅ.11ರಂದು ರಾಮಕ್ಷತ್ರಿಯ ಸಾಂಸ್ಕೃತಿಕ ವೈಭವ ಸ್ಪರ್ಧೆ ಜರುಗಲಿದೆ. ಅ.10ರಂದು ಸಾಂಸ್ಕೃತಿಕ ಕಾರ್ಯಕ್ರಮವಾಗಿ ಅರೆಹೊಳೆ ಪ್ರತಿಷ್ಠಾನದ ಬಿಡುವನೇ ಬ್ರಹ್ಮಲಿಂಗ ನೃತ್ಯರೂಪಕ ಪ್ರದರ್ಶನಗೊಳ್ಳಲಿದೆ. ಅ.10 ಹಾಗೂ 11ರ ಸಂಜೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸ್ಥಳೀಯಾಡಳಿತಕ್ಕೆ ಶಕ್ತಿ ನೀಡಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮತ್ತು ಸ್ಥಳೀಯಾಡಳಿತದ ಮೂರು ಸ್ಥರಗಳಲ್ಲಿ ಕೆಲಸ ಮಾಡಿ ಅಪಾರ ಅನುಭವ ಹೊಂದಿರುವ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿಯವರನ್ನು ಗೆಲ್ಲಿಸಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಕರೆ ನೀಡಿದರು . ತೆಕ್ಕಟ್ಟೆ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸ್ಥಳೀಯಾಡಳಿತದಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಸಭೆಯ ಅಧ್ಯಕ್ಷತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ವಹಿಸಿದ್ದರು. ಸಭೆಯಲ್ಲಿ ಮಾಜಿ ಸಚಿವರಾದ ಕೆ. ಜಯಪ್ರಕಾಶ ಹೆಗ್ಡೆ , ವಿನಯಕುಮಾರ ಸೊರಕೆ, ಅಭ್ಯರ್ಥಿ ರಾಜು ಪೂಜಾರಿ, ಕೆಪಿಸಿಸಿ ಉಸ್ತುವಾರಿ ಮಿಥುನ್ ರೈ, ಎಂ . ಎಸ್. ಮಹಮದ್, ಕಿಶನ್ ಹೆಗ್ಡೆ ಎಂ. ದಿನೇಶ್ ಹೆಗ್ಡೆ, ಮಲ್ಯಾಡಿ ಶಿವರಾಮ ಶೆಟ್ಟಿ, ಬಿ ಹಿರಿಯಣ್ಣ , ದೇವಾನಂದ ಶೆಟ್ಟಿ, ಪ್ರಸನ್ನ ಶೆಟ್ಟಿ ಕೆರಾಡಿ, ವಿಕಾಸ ಹೆಗ್ಡೆ, ರೇಖಾ ಪೂಜಾರಿ, ದೇವಕಿ ಸಣ್ಣಯ್ಯ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪಿ.ಎಸ್.ಇ.ಎಂ.ಆರ್ ಶಾಲೆ ಮತ್ತು ಪಿಯು ಕಾಲೇಜು ದಾವಣಗೆರೆ ಆಯೋಜಿಸಿದ ಸಿಬಿಎಸ್. ಸಿ ಕ್ಲಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್ಶಿಫ್ ನಲ್ಲಿ ಕುಂದಾಪುರದ ಪ್ರತಿಷ್ಠಿತ ಕ್ರೀಡಾ ತರಬೇತಿ ಸಂಸ್ಥೆಯಾದ ಕುಂದಾಪುರ ಟ್ರ್ಯಾಕ್ ಮತ್ತು ಫೀಲ್ಡ್ನ ಅಥ್ಲೀಟ್ ಆಶಿತ್ ಸಂಜಯ್ ಕುಮಾರ್ ಬಾಲಕರ ಲಾಂಗ್ ಜಂಪ್ನಲ್ಲಿ ಚಿನ್ನದ ಪದಕ ಪಡೆದು ಸಿ.ಬಿ.ಎಸ್.ಸಿ ರಾಷ್ಟ್ರೀಯ ಚಾಂಪಿಯನ್ಶಿಪ್ -2024 ಗೆ ಅರ್ಹತೆ ಪಡೆದಿದ್ದಾರೆ. ಅವರಿಗೆ ಕುಂದಾಪುರ ಟ್ರ್ಯಾಕ್ ಮತ್ತು ಫೀಲ್ಡ್ನ ಮುಖ್ಯಸ್ಥರು ಹಾಗೂ ತರಬೇತಿದರರಾದ ಪ್ರಶಾಂತ ಶೆಟ್ಟಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಅಕ್ಟೋಬರ್ 9 ರಂದು ಬೆಳಗ್ಗೆ 10.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ, 8105618291, 9945856670, 9901472710 ಹಾಗೂ 8105774936 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಕ್ಟೋಬರ್ 6 ರಂದು ಕರಾವಳಿ ಸ್ಪೋಟ್ಸ್ ಕ್ಲಬ್ ಮರವಂತೆ – ನಾವುಂದ ಇವರ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾವುಂದದಲ್ಲಿ ನಡೆದ ಅಂತರ್ ಜಿಲ್ಲೆಗಳ 8 ಬಲಿಷ್ಠ ಪದವಿ ಪೂರ್ವ ಕಾಲೇಜುಗಳ ವಾಲಿಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ಚಾಂಪಿಯನ್ ಪಟ್ಟ ತನ್ನದಾಗಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳೊಂದಿಗೆ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ವಿದ್ಯಾರ್ಥಿಗಳನ್ನು ಅತ್ಯುತ್ತಮವಾಗಿ ತರಬೇತಿಗೊಳಿಸಿದ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ರಾಘವೇಂದ್ರ ಗಾಣಿಗ ಉಪಸ್ಥಿತರಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ- ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಸರಸ್ವತಿ ವಿದ್ಯಾಲಯ ಸಮೂಹ ಸಂಸ್ಥೆಗಳು ಮತ್ತು ಸ.ವಿ ಹಳೆ ವಿದ್ಯಾರ್ಥಿ ಸಂಘ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ನಡೆದ ಸರಸ್ವತಿ ವಿದ್ಯಾಲಯ ಹಳೆ ವಿದ್ಯಾರ್ಥಿಗಳ ಪುರುಷ ಮತ್ತು ಮಹಿಳಾ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟವನ್ನು ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿಯಾಗಿರುವ ಭಾಸ್ಕರ್ ಎಚ್.ಜಿ ಉದ್ಘಾಟಿಸಿದರು. ಎಸ್.ವಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕವಿತಾ ಎಮ್. ಸಿ , ಸ.ವಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋ ಪಾಧ್ಯಾಯರಾದ ರಾಘವೇಂದ್ರ ಶೇರುಗಾರ್, ಎಸ್.ವಿ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕರಾದ ದೀಕ್ಷಿತ್ ಮೇಸ್ತ ,ಎಸ್ ವಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಸೂರಜ್ ಸಾರಂಗ್ ಉಪಸ್ಥಿತರಿದ್ದರು. ಬಹುಮಾನ ವಿತರಣೆಯನ್ನು ಜಿ.ಎಸ್.ವಿ.ಎಸ್.ಎ ಅಸೋಸಿಯೇಶನ್ (ಆರ್) ಗಂಗೊಳ್ಳಿಯ ಖಜಾಂಚಿ ಅಶ್ವಿನ್ ಮತ್ತು ಸದಸ್ಯ ರಾಮನಾಥ್ ನಾಯಕ್, ಎಸ್.ವಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋ ಪಾಧ್ಯಾಯರಾದ ರಾಘವೇಂದ್ರ ಶೇರುಗಾರ್ ,ಎಸ್.ವಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿಯಾದ ಸುಗುಣ ನೆರವೇರಿಸಿಕೊಟ್ಟರು. ಬಾಲಕರ ವಿಭಾಗದಲ್ಲಿ ಪ್ರಥಮ ಬಹುಮಾನವನ್ನು …
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ (ಲಿಡ್ಕರ್)ದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸಲಾದ ಕಾಯಕ ಸ್ಪೂರ್ತಿ (ಮಹಿಳೆಯರಿಗೆ) ಯೋಜನೆ, ಪಾದುಕೆ ಕುಟೀರ ಯೋಜನೆ, ಮಾರುಕಟ್ಟೆ ಸಹಾಯ ಯೋಜನೆ, ಕೌಶಲ್ಯ ಉನ್ನತೀಕರಣ ಯೋಜನೆ, ಚರ್ಮಶಿಲ್ಪಿ ಯೋಜನೆ, ಚರ್ಮಕಾರರ ವಸತಿ ಯೋಜನೆ, ಚರ್ಮಕಾರರ ಕಿರು ಆರ್ಥಿಕ ಚಟುವಟಿಕೆಗಳಿಗಾಗಿ ನೇರ ಸಾಲ ಯೋಜನೆ ಹಾಗೂ ಸ್ವಾವಲಂಬಿ / ಸಂಚಾರಿ ಮಾರಾಟ ಮಳಿಗೆ ಯೋಜನೆಯ ಸೌಲಭ್ಯ ಪಡೆಯಲು ಅರ್ಹ ಪರಿಶಿಷ್ಟ ಜಾತಿಯ ಚರ್ಮ ಕುಶಲ ಕರ್ಮಿಗಳಿಂದ ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ಗ್ರಾಮ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಂಯೋಜಕರು ಮೊ.ನಂ: 6362891017 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕನ್ನಡ ಭಾಷೆ ನಮ್ಮ ಮಾತೃ ಭಾಷೆಯಾಗಿದ್ದು, ಮುಂದಿನ ಪೀಳಿಗೆಗೆ ಮಾತೃಭಾಷೆಯ ಮಹತ್ವದ ಕುರಿತು ಮನದಟ್ಟು ಮಾಡುವ ಮೂಲಕ ಕನ್ನಡವನ್ನು ನಮ್ಮ ಉಸಿರಾಗಿಸುವುದರ ಜೊತೆಗೆ ಕನ್ನಡ ಭಾಷೆ ಹಾಗೂ ಸಂಸ್ಕೃತಿಯನ್ನು ಉಳಿಸಿ – ಬೆಳೆಸುವಲ್ಲಿ ಪ್ರತಿಯೊಬ್ಬರು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಕರ್ನಾಟಕ ಸಂಭ್ರಮ-50ರ ಅಂಗವಾಗಿ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಕಾರ್ಯಕ್ರಮದಡಿ ರಾಜ್ಯಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ರಥಯಾತ್ರೆಗೆ ಸ್ವಾಗತ ಕೋರಿ, ಕನ್ನಡ ತಾಯಿ ಭುನೇಶ್ವರಿಯ ಪುತ್ಥಳಿಗೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣಗೊಂಡು 50 ವರ್ಷ ತುಂಬಿದ ಹಿನ್ನೆಲೆ, ರಾಜ್ಯ ಸರ್ಕಾರವು ಕರ್ನಾಟಕ ಸಂಭ್ರಮ-50 ಅನ್ನು ಆಚರಿಸುತ್ತಿದ್ದು, ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಕಾರ್ಯಕ್ರಮದಡಿ ರಾಜ್ಯಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ರಥಯಾತ್ರೆಯು ಕರ್ನಾಟಕದ ಇತಿಹಾಸ, ಪರಂಪರೆ, ಸಂಸ್ಕೃತಿ ಮತ್ತು ಸಂಪ್ರದಾಯಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಿದೆ ಎಂದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಪ್ರತಿಷ್ಠಿತ ಹಣಕಾಸು ಸಂಸ್ಥೆಯಾಗಿದ್ದ ಬಿವಿಎಸ್ ಫೈನಾನ್ಸ್ ನಿರ್ದೇಶಕ, ಪಾಲುದಾರ, ಕುಂದಾಪುರ ಸ್ಪೋರ್ಟ್ಸ್ ಪೆವಿಲಿಯನ್ ಮಾಜಿ ಕೋಶಾಧಿಕಾರಿ, ಪಿಯುಸ್ ನಗರ ಚರ್ಚಿನ ಹಿರಿಯ ಕ್ರಿಯಾಶೀಲ , ಕುಂದಾಪುರ ಲಯನ್ಸ್ ಕ್ಲಬ್ನ ಮಾಜಿ ಅಧ್ಯಕ್ಷ ಆಲ್ಫ್ರೆಡ್ ಡಿ’ ಸೋಜಾ (74) ಸೋಮವಾರದಂದು ಅಸ್ವಸ್ಥತೆಯಿಂದ ಹಳೆ ಅಳ್ವೆಯ ಸ್ವಗ್ರಹದಲ್ಲಿ ನಿಧನ ಹೊಂದಿದ್ದಾರೆ. ಅವರು ಗಲ್ಫ್ ರಾಷ್ಟ್ರದಲ್ಲಿ ಉದ್ಯೋಗದಲ್ಲಿ ಇದ್ದರು. ಅವರಿಗೆ ಪತ್ನಿ , ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ .
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿನೋದ್ಕುಮಾರ್ ಪಿ. ಇವರ ಪರಿಕಲ್ಪನೆಯಲ್ಲಿ ಮೂಡಿಬಂದಿರುವ, ಶಯದೇವಿಸುತೆ ಮರವಂತೆ (ಜ್ಯೋತಿ ಜೀವನ್ಸ್ವರೂಪ್)ಅವರ ಹೊಸ ಮಹಾ ಕಾದಂಬರಿ, “ಕೆಂದಾವರೆ” ಕಾದಂಬರಿಯನ್ನು ಬೆಳ್ಳಿ ತೆರೆಗೆ ಬರಲು ಸಿದ್ದತೆ ನಡೆದಿದೆ. “ಕೆಂದಾವರೆ” ಸಿನಿಮಾದ ಟೈಟಲ್ ಹಾಗೂ ಫಸ್ಟ್ ಲುಕ್ ಪೋಸ್ಟರ್ನ್ನು ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಲೋಕಾರ್ಪಣೆಗೊಳಿಸಿ ಚಿತ್ರತಂಡಕ್ಕೆ ಶುಭಹಾರೈಸಿದರು. ಹುಬ್ಬಳ್ಳಿ, ಬೆಂಗಳೂರು, ಮಲೆನಾಡು ಹಾಗೂ ದಕ್ಷಿಣಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ಚಿತ್ರೀಕರಣವು ಆರಂಭಗೊಂಡಿದ್ದು, ಚಿತ್ರ ನಿರ್ದೇಶಕ ಪನ್ನಗ ಹಾಗೂ ಕಲಾವಿದ ಜಗನ್ರವರು ಕೆಲ ಆ್ಕಕ್ಷನ್ ಕಟ್ ಹಾಗೂ ಕಾಮಿಡಿ ಪಂಚ್ನಲ್ಲಿ ಸಹ ಬರಹಗಾರರಾಗಿ ಇವರಿಗೆ ಬಲು ವಿಶೇಷವಾಗಿ ಕೈಜೋಡಿಸಿರುತ್ತಾರೆ.
