ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ನಿಗಮದ ವತಿಯಿಂದ 2024-25ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಸ್ವಾವಲಂಬಿ ಸಾರಥಿ, ಮೈಕ್ರೋ ಕ್ರೆಡಿಟ್ ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಗಳಿಗೆ ಪರಿಶಿಷ್ಟ ಪಂಗಡದ ಅರ್ಹ ಫಲಾನುಭವಿಗಳಿಂದ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳಲ್ಲಿ ಅಥವಾ ವೆಬ್‌ಸೈಟ್ https://sevasindhu.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 23 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ನಿಗಮಗಳ ವೆಬ್‌ಸೈಟ್ ಅಥವಾ ಕಲ್ಯಾಣ ಮಿತ್ರ ಏಕೀಕೃತ ಎಸ್.ಸಿ/ಎಸ್.ಟಿ ಸಹಾಯವಾಣಿ ಸಂಖ್ಯೆ: 9482300400, ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಬಿ ಬ್ಲಾಕ್, ರಜತಾದ್ರಿ ಮಣಿಪಾಲ ದೂ.ಸಂಖ್ಯೆ: 0820-2574884 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ತೆಕ್ಕಟ್ಟೆ (ಪ್ರೌಢ ಶಾಲಾ ವಿಭಾಗ) ಇವರ ಆಶ್ರಯದಲ್ಲಿ ಗಾಂಧಿ ಮೈದಾನ ಇಲ್ಲಿ ನಡೆದ ಕುಂದಾಪುರ ವಲಯ ಮಟ್ಟದ ಪ್ರೌಢ ಶಾಲಾ ಬಾಲಕ- ಬಾಲಕಿಯರ ಕ್ರೀಡಾಕೂಟದಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ಬಾಲಕರ ವಿಭಾಗದ ತಂಡ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತದೆ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ ’ಜೀವನದಲ್ಲಿ ಒಮ್ಮೆಯಾದರೂ ರಕ್ತದಾನಿಯಾಗಿ, ಅದು ನೀವು ಸಮಾಜಕ್ಕೆ ನೀಡುವ ಅತ್ಯುತ್ತಮ ಸೇವೆಯಾಗುತ್ತದೆ’ ಎಂದು ಲಯನ್ಸ್ 317ಡಿ ಜಿಲ್ಲಾ ಸಂಪುಟ ಕಾರ್ಯದರ್ಶಿ ಗೀತಾ ರಾವ್ ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಆಳ್ವಾಸ್ ಆರೋಗ್ಯ ಕೇಂದ್ರ, ಮಂಗಳೂರಿನ ಕೆಎಂಸಿ ಆಸ್ಪತ್ರೆ, ವೆನ್‌ಲಾಕ್ ಜಿಲ್ಲಾ ಸರ್ಕಾರಿ ಆಸ್ಪತ್ರೆ, ನಿಡ್ಡೋಡಿ ಲಯನ್ಸ್ ಕ್ಲಬ್, ಆಳ್ವಾಸ್ ಚಿಗುರು ವಿದ್ಯಾರ್ಥಿ ವೇದಿಕೆ, ಆಳ್ವಾಸ್ ಎನ್‌ಎಸ್‌ಎಸ್, ಆಳ್ವಾಸ್ ರೆಡ್‌ಕ್ರಾಸ್ ಸಹಯೋಗದಲ್ಲಿ ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಎ.ವಿ. ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಕ್ತದಾನವು ಶ್ರೇಷ್ಠ ದಾನವಾಗಿದ್ದು, ಅತ್ಯಂತ ಕಠಿಣ ಸಂದರ್ಭದಲ್ಲಿ ರಕ್ತದಾನ ಮಾಡಿ ನೆರವಾಗುವುದು ಅತ್ಯುತ್ತಮ ಸೇವೆಯಾಗಿದೆ ಎಂದರು. ಆಳ್ವಾಸ್ ಕಾಲೇಜು ಶಿಕ್ಷಣದ ಜೊತೆ ಸಂಸ್ಕೃತಿ ಮತ್ತು ಕ್ರೀಡೆಗೆ ಪ್ರೋತ್ಸಾಹ ನೀಡುತ್ತಿದ್ದು, ಮಾನವೀಯ ಮೌಲ್ಯಗಳಿಗೆ ಒತತ್ತು ನೀಡುತ್ತಿದೆ. ರಕ್ತದಾನದಂತಹ ಸಮಾಜ ಕಾರ್ಯಗಳ ಮೂಲಕ ನವ ಪೀಳಿಗೆಗೆ ಮಾದರಿಯಾಗಿದೆ ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ, ನಿಡ್ಡೋಡಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಸ್ಪೂರ್ತಿ, ಮನೋಭಾವನೆಯನ್ನು ಬೆಳೆಸುವ ನಿಟ್ಟಿನಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಸಂಸ್ಥೆಯ ವಿದ್ಯಾರ್ಥಿಗಳಿಗೆ ವಿವಿದ ರೀತಿಯ ಕ್ರೀಡಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ವಿದ್ಯುಕ್ತವಾಗಿ ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಕುರಿತು ಸಂಸ್ಥೆಯ ಸಹ ಸಂಸ್ಥಾಪಕರಾದ ಅಶ್ವತ್ ಎಸ್.ಎಲ್. ಅವರು ” ಕ್ರಿಯೇಟಿವ್ ಸಂಸ್ಥೆಯು ವಿದ್ಯಾರ್ಥಿಗಳಿಗೆ ಕೇವಲ ಕಲಿಕೆ ಮಾತ್ರವಲ್ಲದೆ ಕ್ರೀಡಾ ಚಟುವಟಿಕೆಗಳಿಗೂ ಪ್ರೋತ್ಸಾಹ ನೀಡುತ್ತಾ ಬಂದಿದ್ದು, ಪ್ರತಿ ವಿದ್ಯಾರ್ಥಿಗಳು ಕ್ರೀಡಾ ಮನೋಭಾವನೆಯಿಂದ ಇದರಲ್ಲಿ ಭಾಗವಹಿಸಬೇಕು. ಕ್ರೀಡೆಯಲ್ಲಿ ಗೆಲ್ಲುವುದಕ್ಕಿಂತ ಭಾಗವಹಿಸುವುದು ಮುಖ್ಯ”. ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಉಪನ್ಯಾಸಕ ವರ್ಗದವರು, ನಿಲಯ ಪಾಲಕರು, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳನ್ನು ವಿವಿಧ ತಂಡಗಳನ್ನಾಗಿ ವಿಂಗಡಿಸಿ ಕ್ರಿಕೆಟ್, ವಾಲಿಬಾಲ್, ತ್ರೋಬಾಲ್, ಮುಂತಾದ ಕ್ರೀಡಾ ಚಟುವಟಿಕೆಗಳನ್ನು ನಡೆಸಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕಾರ್ಮಿಕರ ಸೇವೆಯನ್ನು ಪಡೆಯಲು ಕೆಲಸಗಾರರನ್ನು ನಿಯೋಜಿಸಿಕೊಳ್ಳುವ ಪ್ರತಿಯೊಬ್ಬ ಮಾಲೀಕರು ಅವರ ಗುರುತಿನ ಚೀಟಿ, ಶಾಶ್ವತ ಹಾಗೂ ತಾತ್ಕಲಿಕ ವಾಸ ಸ್ಥಾನದ ವಿವರಗಳನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು. ಈ ವಿವರಗಳನ್ನು ಸಂಬಂಧಿಸಿದ ಸರ್ಕಾರಿ ಕಛೇರಿಗಳಿಗೆ ತಪ್ಪದೇ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅಕ್ರಮ ಬಾಂಗ್ಲಾದೇಶೀಯ ವಲಸೆ ಕಾರ್ಮಿಕರಿಗೆ ಹಾಗೂ ನಾಗರೀಕರಿಗೆ ಸಂಬಂಧಿಸಿದಂತೆ ವಿವಿಧ ಸಂಸ್ಥೆಗಳ ಮೂಲಕ ಜಿಲ್ಲೆಯ ಜನರನ್ನು ಜಾಗೃತಗೊಳಿಸುವ ಕುರಿತ ಸಭೆಯಲ್ಲಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಅಕ್ರಮವಾಗಿ ಬಾಂಗ್ಲಾ ದೇಶದ ನಾಗರಿಕರು ಜೀವನೋಪಾಯಕ್ಕಾಗಿ ಕಾರ್ಮಿಕರು ಜಿಲ್ಲೆಯಲ್ಲಿ ವಿವಿಧ ಕೆಲಸ ಕಾರ್ಯಗಳಲ್ಲಿ ತೊಡಗಿರುವ ಬಗ್ಗೆ ದೂರುಗಳು ಕೇಳಿಬರುತ್ತಿದೆ. ಅಲ್ಲದೇ ಸ್ಥಳೀಯವಾಗಿ ಕೆಲವು ದಾಖಲೆಗಳನ್ನು ಸೃಷ್ಠಿಸಿಕೊಂಡು ಕಾನೂನು ಬಾಹಿರವಾಗಿ ವಾಸವಿದ್ದರೆ, ಸರ್ಕಾರ ಈ ಬಗ್ಗೆ ಗಂಭೀರವಾಗಿ ಪರಿಗಣಿಸಿ ಎಚ್ಚರ ವಹಿಸಲು ನಿರ್ದೇಶನ ನೀಡಿದೆ. ಕಾರ್ಮಿಕ, ಕೈಗಾರಿಕೆ, ಮೀನುಗಾರಿಕೆ ಸೇರಿದಂತೆ ಮತ್ತಿತರ ಇಲಾಖೆಗಳ ಅಧಿಕಾರಿಗಳು ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಿಕ್ಷಣ ಸಂಸ್ಥೆಗಳು ದೇಶದ ಭವಿಷ್ಯದ ಭದ್ರ ಬುನಾದಿಗೆ ಕಾರಣವಾಗಿವೆ. ಹೆಚ್ಚು ಹೆಚ್ಚು ಉತ್ತಮ ಶಿಕ್ಷಣ ಸಂಸ್ಥೆಗಳು ಸ್ಥಾಪನೆಗೊಂಡು ಶಿಕ್ಷಣ ಸರ್ವರಿಗೂ ಸಿಗುವಂತಾಗಬೇಕು.ಇಂದಿನ ಆಧುನಿಕ ಯುಗದಲ್ಲಿ ಮಕ್ಕಳಿಗೆ ಪೋಷಕರು ಉತ್ತಮ ಶಿಕ್ಷಣ ನೀಡಿದರೆ ಅದುವೇ ಅಮೂಲ್ಯ ಆಸ್ತಿಯಾಗುತ್ತದೆ.ಇಂದಿನ ಯುವ ಪೀಳಿಗೆಗೆ ನಮ್ಮ ನಾಡಿನ ಶ್ರೀಮಂತ ಸಂಸ್ಕೃತಿಯನ್ನು ಪರಿಚಯಿಸುವುದು ಅತ್ಯಗತ್ಯ ಎಂದು ನಿವೃತ್ತ ಪ್ರಾಂಶುಪಾಲ ಪ್ರೊ.ಬಾಲಕೃಷ್ಣ ಶೆಟ್ಟಿ ಹೇಳಿದರು. ಅವರು ಕೋಟೇಶ್ವರ ಯಡಾಡಿ- ಮತ್ಯಾಡಿ ಸುಜ್ಞಾನ ಪದವಿಪೂರ್ವ ಕಾಲೇಜು ಹಾಗೂ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ದೀಪಾವಳಿ ಸಂಭ್ರಮದಲ್ಲಿ ಮುಖ್ಯ ಅಭ್ಯಾಗತರಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಹೆಗ್ಗದ್ದೆ ಸ್ಟುಡಿಯೋ ಯೂಟ್ಯೂಬ್ ಚಾನಲ್ ಮುಖ್ಯಸ್ಥ ಸಂದೀಪ್ ಶೆಟ್ಟಿ ಹೆಗ್ಗದ್ದೆ ಮಾತನಾಡಿ ” ಮಕ್ಕಳು ಎಳವೆಯಲ್ಲಿಯೇ ಕನಸು ಕಾಣಬೇಕು ಮತ್ತು ನನಸಾಗಿಸಲು ಪ್ರಯತ್ನಿಸಬೇಕು”ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಆಡಳಿತ ಮಂಡಳಿ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಡಾ.ರಮೇಶ್ ಶೆಟ್ಟಿ ಮಾತನಾಡಿ ಮಕ್ಕಳಿಗೆ ನಮ್ಮ ನಾಡಿನ ಆಚಾರ ವಿಚಾರಗಳನ್ನು ತಿಳಿಸುವುದು ಇಂತಹ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವೃತ್ತಿ ಬದುಕಿನ ಜಂಜಾಟದ ನಡುವೆ ಪ್ರತಿಭಾ ಪ್ರದರ್ಶನಕ್ಕೆ ಅವಕಾಶ ದೊರೆತಾಗ ಸದಸ್ಯರಿಗೆ ಸ್ಪೂರ್ತಿ, ಪರಸ್ಪರ ಪರಿಚಯ, ಹೊಸ ಸದಸ್ಯರ ಪಾಲ್ಗೊಳ್ಳುವಿಕೆ ಹೆಚ್ಚುವ ಜೊತೆಗೆ ಸಮಾಜಸೇವೆಯಲ್ಲಿ ಇನ್ನಷ್ಟು ತೊಡಗಿಸಿಕೊಳ್ಳಲು ಪ್ರೇರಣೆ ದೊರೆಯುತ್ತದೆ ಎಂದು ವಲಯ 1ರ ಮಾಜಿ ಸಹಾಯಕ ಗವರ್ನರ್ ಎಚ್. ಗಣೇಶ್ ಕಾಮತ್ ಹೇಳಿದರು. ಅವರು ರೋಟರಿ ಕ್ಲಬ್ ಗಂಗೊಳ್ಳಿ ಆತಿಥ್ಯದಲ್ಲಿ ತಾಲೂಕಿನ ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೊಡ್ಮನೆ ನಂದ ಪೂಜಾರಿ ರಂಗಮಂಟಪದಲ್ಲಿ ಭಾನುವಾರ ಆಯೋಜಿಸಲಾದ ರೋಟರಿ ವಲಯ – 1ರ ವಲಯ ಮಟ್ಟದ ಸಾಂಸ್ಕೃತಿಕ ಉತ್ಸವ – 2024 ಗಂಗಾತರಂಗ ಉದ್ಘಾಟಿಸಿ ಮಾತನಾಡಿದರು. ಯಾವುದೇ ಸ್ಪರ್ಧೆಯಲ್ಲಿ ಒಬ್ಬರು ಮಾತ್ರ ಗೆಲ್ಲವು ಸಾಧ್ಯ ಎಂಬುದನ್ನು ಪಾಲ್ಗೊಳ್ಳುವವರು ಅರಿತುಕೊಂಡರೆ ಯಾವುದೇ ಗೊಂದಲಗಳು ಉಂಟಾಗುವುದಿಲ್ಲ. ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆಯಿಂದ ರೋಟರಿ ಮತ್ತಷ್ಟು ಚೈತನ್ಯಪೂರ್ಣವಾಗುತ್ತದೆ ಎಂದರು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಚಂದ್ರಕಲಾ ತಾಂಡೇಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಹಾಯಕ ಗವರ್ನರ್ ಡಾ. ಬಿ. ರಾಜೇಂದ್ರ ಶೆಟ್ಟಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ನ.06: ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ಧೋರಣೆ ಹಾಗೂ ವಕ್ಫ್ ಬೋರ್ಡ್ ನ ಧೋರಣೆ ಖಂಡಿಸಿ ಕುಂದಾಪುರ ಮಂಡಲ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಿತು. ಈ ವೇಳೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರು ಮಾತನಾಡಿ, ವಕ್ಫ್ ನೋಟೀಸ್ ಮೂಲಕ ರೈತರಿಗೆ, ಸಾರ್ವಜನಿಕರಿಗೆ ಸಮಸ್ಯೆ ನೀಡುವುದನ್ನು ತಕ್ಷಣ ನಿಲ್ಲಿಸಬೇಕು. ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ ತೆಗೆದುಕೊಂಡು ರೈತರಿಗೆ ಜನಸಾಮಾನ್ಯರಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದರು. ಕಾಂಗ್ರೆಸ್ ಸರಕಾರ ಒಂದೇ ಧರ್ಮದ ಪರವಾಗಿ ಕಾರ್ಯಾಚರಣೆ ಮಾಡುತ್ತಿದೆ. ರೈತರ ಕೃಷಿ ಭೂಮಿಯನ್ನು ವಕ್ಸ್ ಭೂಮಿ ಎಂದು ನೋಟಿಸ್ ಕೊಟ್ಟು ಕೃಷಿಕರನ್ನು ಅತಂತ್ರರನ್ನಾಗಿಸಿದೆ ಎಂದರು. ಬಿಜೆಪಿ ಮುಖಂಡ ಬೈಕಾಡಿ ಸುಪ್ರಸಾದ ಶೆಟ್ಟಿ ಮಾತನಾಡಿ, ತುಷ್ಟಿಕರಣಕ್ಕಾಗಿ ರೈತರ, ಭೂಮಾಲಕರ, ಕುಂದಾಪುರ ದೇಹಾಲಯಗಳ, ಮಠ ಮಂದಿರಗಳ ಭೂಮಿಯನ್ನು ವಕ್ಸ್ ಭೂಮಿ ಎಂದು ಪಹಣಿಯಲ್ಲಿ ನಮೂದಿಸಿ ನೋಟಿಸ್ ನೀಡಿರುವುದು ರಾಜ್ಯದ ಕಾಂಗ್ರೆಸ್ ಸರಕಾರ ಎತ್ತ ಸಾಗುತ್ತಿದೆ ಎನ್ನುವುದಕ್ಕೆ ನಿದರ್ಶನ ಎಂದರು. ಕುಂದಾಪುರ ಮಂಡಲ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಂಡ್ಯದಲ್ಲಿ ಡಿ.20ರಿಂದ 3 ದಿನಗಳ ಕಾಲ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಂಗವಾಗಿ ರಾಜ್ಯಾದ್ಯಂತ ತೆರಳುವ ಕನ್ನಡ ಜ್ಯೋತಿ ಹೊತ್ತ ಕನ್ನಡದ ರಥಯಾತ್ರೆಯನ್ನು ಕುಂದಾಪುರದಲ್ಲಿ ಸ್ವಾಗತಿಸಿಕೊಳ್ಳಲಾಯಿತು. ಈ ವೇಳೆ ಶಾಸಕ ಕಿರಣ್ ಕುಮಾರ್ ಕೊಡ್ಲಿ ಸಾಹಿತ್ಯ ಸಮ್ಮೇಳನ ಅಂಗವಾಗಿ ಜ್ಯೋತಿ ಎಲ್ಲ ಕಡೆಗೆ ಸಂಚಾರ ಮಾಡುತ್ತಿದೆ. ಕನ್ನಡ ಭಾಷೆಯ ಮಹತ್ವದ ದೃಷ್ಟಿಯಿಂದ ಸಮ್ಮೇಳನ ಅವಶ್ಯವಾಗಿದೆ ಎಂದರು. ಭುವನೇಶ್ವರಿಗೆ ಪುಷ್ಪಮಾಲಾರ್ಚನೆ ಮಾಡಲಾಯಿತು. “ಶಾಸ್ತ್ರಿ ಸರ್ಕಲ್‌ನಿಂದ ಪಾರಿಜಾತ ಮೂಲಕ ಮೆರವಣಿಗೆ ನಡೆಸಲಾಯಿತು. ಬಿಸಿಎಂ ಹಾಸ್ಟೆಲ್ ವಿದ್ಯಾರ್ಥಿಗಳಿಂದ ಗಾನ, ನೃತ್ಯ ನಡೆಯಿತು. ಸಹಾಯಕ ಕಮಿಷನರ್ ಮಹೇಶ್ಚಂದ್ರ ಕೆ., ತಹಶೀಲ್ದಾರ್ ಮಲ್ಲಿಕಾರ್ಜುನ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಡಾ|ರವಿ, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ , ಕಸಾಪ ಜಿಲ್ಲಾ ಸ್ಥಾಪಕಾಧ್ಯಕ್ಷ ಎ.ಎಸ್.ಎನ್. ಹೆಬ್ಬಾರ್, ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ತಾಲೂಕು ಗೌರವ ಕಾರ್ಯದರ್ಶಿ ದಿನಕರ ಆರ್. ಶೆಟ್ಟಿ ಬಸೂರು, ತಾಲೂಕು ಆರೋಗ್ಯಾಧಿಕಾರಿ ಡಾ। ಪ್ರೇಮಾನಂದ್ ಕೆ., ಕ್ಷೇತ್ರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೋಟರಿ ಕ್ಲಬ್ ಗಂಗೊಳ್ಳಿ ಆತಿಥ್ಯದಲ್ಲಿ ತಾಲೂಕಿನ ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ರಂಗಮಂಟಪದಲ್ಲಿ ಭಾನುವಾರ ಆಯೋಜಿಸಲಾದ ರೋಟರಿ ವಲಯ – 1ರ ವಲಯ ಮಟ್ಟದ ಸಾಂಸ್ಕೃತಿಕ ಉತ್ಸವ – 2024 ʼಗಂಗಾತರಂಗʼದ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿದ ರೋಟರಿ ಕ್ಲಬ್ ಬೈಂದೂರು ತಂಡ ವಲಯ ಚಾಂಪಿಯನ್ ಆಗಿ ಹೊರಹೊಮ್ಮಿತು. ಭಾವಗೀತೆಯಲ್ಲಿ ಪೂರ್ಣಿಮಾ ವಿಷ್ಣು ಪೈ ಪ್ರಥಮ, ಚಿತ್ರಗೀತೆಯಲ್ಲಿ ಜತೀಂದ್ರ ಮರವಂತೆ ತೃತೀಯ, ಯುಗಳ ಗೀತೆಯಲ್ಲಿ ಪೂರ್ಣಿಮಾ ವಿಷ್ಣು ಪೈ ಹಾಗೂ ರಾಘವೇಂದ್ರ ಪ್ರಥಮ, ಏಕಪಾತ್ರಾಭಿನಯದಲ್ಲಿ ನಾಗೇಂದ್ರ ಬಂಕೇಶ್ವರ ತೃತೀಯ, ಏಕವ್ಯಕ್ತಿ ನೃತ್ಯದಲ್ಲಿ ನಿಧಿ ನಾಗೇಂದ್ರ ದ್ವಿತೀಯ, ಗುಂಪು ನೃತ್ಯದಲ್ಲಿ ಪ್ರಥಮ, ಪ್ರಹಸನದಲ್ಲಿ ತೃತೀಯ, ಚಿತ್ರಕಲೆಯಲ್ಲಿ ಸ್ಕಂದರಾಮ್ ಪ್ರಥಮ ಬಹುಮಾನ ಪಡೆದು ಒಟ್ಟು ಎಂಟು ಸ್ಪರ್ಧೆಗಳಲ್ಲಿ ಹೆಚ್ಚು ಅಂಕ ಪಡೆದು ಬೈಂದೂರು ಕ್ಲಬ್ ಚಾಂಪಿಯನ್ ಪಟ್ಟ ಗಳಿಸಿಕೊಂಡಿತು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಚಂದ್ರಕಲಾ ತಾಂಡೇಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ ಉದ್ಯಮಿ ಆನಂದ್…
