ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಉಡುಪಿ ಸೆನ್ ಪೊಲೀಸರು ಪುತ್ತೂರು ಗ್ರಾಮದ ನಾರಾಯಣ ನಗರ ರಸ್ತೆಯ ಬಳಿ ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ನರಿಂಗಾಣ ಗ್ರಾಮದ ಸಪಾಝ್ (29), ಉಡುಪಿ ಸಂತೆಕಟ್ಟೆಯ ಚರಣ್ ಯು. ಭಂಡಾರಿ (19) ಬಂಧಿತ ಆರೋಪಿಗಳು. ಇವರಿಂದ 53,300 ರೂ. ಮೌಲ್ಯದ 740 ಗ್ರಾಂ ತೂಕದ ಗಾಂಜಾ, 25 ಸಾವಿರ ರೂ. ಮೌಲ್ಯದ ಸ್ಕೂಟರ್, 2170ರೂ. ನಗದು, 2 ಮೊಬೈಲ್, ಚೂರಿಯನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಒಟ್ಟು ಮೌಲ್ಯ 98,770ರೂ. ಎಂದು ಅಂದಾಜಿಸಲಾಗಿದೆ. ಉಳಿದ ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಸೆನ್ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ರಾಮಚಂದ್ರನಾಯಕ್ ಮತ್ತು ಪ್ರೊಬೆಶನರಿ ಡಿ.ವೈ.ಎಸ್.ಪಿ. ಗೀತಾ ಪಾಟೀಲ್ ನೇತೃತ್ವದಲ್ಲಿ ಉಪನಿರೀಕ್ಷಕ ಪವನ್ ನಾಯಕ್, ಸೆನ್ ಪೊಲೀಸ್ ಠಾಣಾ ಸಿಬ್ಬಂದಿ ಪ್ರವೀಣ್ ಕುಮಾರ್, ಪ್ರವೀಣ್, ರಾಜೇಶ್, ವೆಂಕಟೇಶ್, ನಿಲೇಶ್, ರಾಘವೇಂದ್ರ, ಪ್ರಶಾಂತ್ ಮತ್ತು ಚರಣ್ರಾಜ್ ಅವರನ್ನು ಒಳಗೊಂಡ ತಂಡ ಈ ಕಾರ್ಯಾಚರಣೆ ನಡೆಸಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಯೋಜನ ಪ್ರಾಧಿಕಾರದ ಅಧ್ಯಕ್ಷರಾಗಿ ವಿನೋದ್ ಕ್ರಾಸ್ತಾ ನೇಮಕ ಗೊಂಡಿದ್ದಾರೆ. ಸದಸ್ಯರಾಗಿ ಚಂದ್ರಶೇಖರ ಶೆಟ್ಟಿ, ಚಂದ್ರ ಅಮೀನ್, ಮೊಹಮ್ಮದ್ ಅಲ್ಪಾಝ್ ಅವರನ್ನು ನೇಮಕ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಲತಾ ಕೆ. ನೇಮಕಗೊಳಿಸಿ ಆದೇಶಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪತ್ರಿಕೆ, ರೇಡಿಯೋ, ಟಿವಿ ಮಾಧ್ಯಮಗಳು ತಮ್ಮ ಇತಿಮಿತಿಯಲ್ಲಿ ಜವಾಬ್ದಾರಿ ಅರಿತು ಕೆಲಸ ಮಾಡುತ್ತಿರುವುದರಿಂದ ಪ್ರಜಾಪ್ರಭುತ್ವದ ರಕ್ಷಣೆ ಸಾಧ್ಯವಾಯಿತು. ಆದರೆ ಇತ್ತೀಚಿನ ವರ್ಷಗಳಲ್ಲಿ ನವ ಮಾಧ್ಯಮಗಳು ಲಂಗು ಲಗಾಮಿಲ್ಲದೇ ಮುನ್ನುಗ್ಗುತ್ತಿರುವುದು ಬಹಳ ಅಪಾಯಕಾರಿಯಾಗಿದೆ, ಸಮಾಜದ ಸ್ವಾಸ್ಥ್ಯ ಕಾಪಾಡುವ ನಿಟ್ಟಿನಲ್ಲಿ ಇವುಗಳಿಗೆ ಸ್ವಯಂ ನಿಯಂತ್ರಣ ಹೆಚ್ಚಿಸುವ ಅಗತ್ಯವಿದೆ ಎಂದು ಮಾಹೆ ಮಣಿಪಾಲದ ಗಾಂಯನ್ ಸೆಂಟರ್ ಫಾರ್ ಫಿಲೋಸೋಫಿಕಲ್ ಆರ್ಟ್ಸ್ ಮತ್ತು ಸೈನ್ಸ್ಸ್ ಮುಖ್ಯಸ್ಥ ವರದೇಶ್ ಹಿರೇಗಂಗೆ ಹೇಳಿದರು. ಇಲ್ಲಿನ ಗಾಂಧಿ ಮೈದಾನದಲ್ಲಿ ಬೈಂದೂರು ಉತ್ಸವದ ಅಂಗವಾಗಿ ಬೈಂದೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಅಭಿವೃದ್ದಿ ಪತ್ರಿಕೋಧ್ಯಮ – ವಾಸ್ತವ, ಸವಾಲು ಮತ್ತು ಸಾಧ್ಯತೆಗಳು ವಿಚಾರಗೋಷ್ಠಿಯಲ್ಲಿ ಉಪನ್ಯಾಸ ನೀಡಿ, ಇತರ ಕ್ಷೇತ್ರಗಳಂತೆ ಮಾಧ್ಯಮವೂ ಕೂಡ ಬದಲಾವಣೆಗೆ ಒಗ್ಗಿಕೊಂಡು ಮುನ್ನೆಡೆಯುತ್ತಿದೆ. ಪ್ರಚಲಿತ ಸವಾಲಿನೊಂದಿಗೆ ಪತ್ರಕರ್ತ ನಿತ್ಯ ಸೆಣಸಬೇಕಿದೆ ಎಂದರು. ಕುಂದಾಪುರ ಪತ್ರಕರ್ತ ಲಕ್ಷ್ಮೀಮಚ್ಚಿನ ಕರಾವಳಿ ಪತ್ರಿಕೋದ್ಯಮದ ಸವಾಲು ಎಂಬ ವಿಷಯದ ಬಗ್ಗೆ ಮಾತನಾಡಿ, ಇಂದಿನ ಡಿಜಿಟಲ್ ಯುಗದಲ್ಲಿ ಪತ್ರಿಕೆ ಓದುವವರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮನೆಯೊಂದರಲ್ಲಿ ಗಾಂಜಾವನ್ನು ದಾಸ್ತಾನು ಇಟ್ಟುಕೊಂಡು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ದಂಪತಿಯನ್ನು ಪೊಲೀಸರು ಬಂಧಿಸಿದ ಘಟನೆ ಗುಲ್ವಾಡಿಯಲ್ಲಿ ನಡೆದಿದೆ. ಗುಲ್ವಾಡಿ ಉದಯ ನಗರ ನಿವಾಸಿಗಳಾದ ನಜರುಲ್ಲಾ ಖಾನ್ (40) ಹಾಗೂ ಆತನ ಪತ್ನಿ ಫಾತಿಮಾ (33) ಬಂಧಿತರು. ಮನೆಯಲ್ಲಿದ್ದ 6.43 ಲಕ್ಷ ರೂ. ಮೌಲ್ಯದ 5 ಪ್ರತ್ಯೇಕ ಪ್ಯಾಕೆಟ್ಗಳಲ್ಲಿ ತುಂಬಿಸಿಟ್ಟಿದ್ದ 8.37 ಕೆ.ಜಿ. ಗಾಂಜಾ ಜೊತೆಗೆ ಟ್ರಾಲಿ ಸೂಟ್ಕೇಸ್, ಆರೋಪಿಗಳು ಗಾಂಜಾ ಮಾರಾಟ ಮಾಡಲು ಬಳಸುತ್ತಿದ್ದ ಮೊಬೈಲ್ ಫೋನ್ಗಳನ್ನು ಕುಂದಾಪುರ ಗ್ರಾಮಾಂತರ (ಕಂಡ್ಲೂರು) ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅವರಿಗೆ ಹಸೈನಾರ್ ಎಂಬಾತ ಗಾಂಜಾ ಪೂರೈಕೆ ಮಾಡಿದ್ದಾಗಿ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿಗೆ ಭಾಜನರಾದ ಅಭಿನಂದನ್ ಶೆಟ್ಟಿ ಮತ್ತು ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಆಯ್ಕೆಯಾಗಿರುವ ಯು.ಸುರೇಂದ್ರ ಶೆಣೈ ಅವರಿಗೆ ಇಂದು ಸನ್ಮಾನ ಕಾರ್ಯಕ್ರಮ ನಡೆಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಸದಸ್ಯರಾದ ಅಭಿನಂದನ್ ಶೆಟ್ಟಿ, ಯಶಸ್ಸು, ಹಣ ಸ್ಥಾನ ಮಾನ ಮತ್ತು ಸಂಪತ್ತಿಗಿಂತ ಮೊದಲು ಬದುಕಲು ಕಲಿಯಬೇಕು. ನಿಮ್ಮ ಮುಂದಿನ ಭವಿಷ್ಯ ರೂಪಿಸುವ ಅಂಶಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಜೀವನವನ್ನು ಸಾರ್ಥಕ್ಯಗೊಳಿಸುವತ್ತ ಗಮನ ಇರಬೇಕು. ನಕಾರಾತ್ಮಕವಾದ ಡ್ರಗ್ಸ್ ಮತ್ತು ಮಾದಕ ಜಗತ್ತಿನ ಕುರಿತು ಜಾಗೃತರಾಗಿರಬೇಕು. ಅವುಗಳಿಂದ ದೂರವಿದ್ದು ನಿಮ್ಮ ಹಿರಿಯರು ಪೋಷಕರು ಮತ್ತು ಶಿಕ್ಷಕರ ಒಳ್ಳೆಯ ಆಶಯವನ್ನು ಪರಿಪೂರ್ಣವಾಗಿ ಪೂರ್ಣಗೊಳಿಸಿ. ಶಿಕ್ಷಣ ಎಲ್ಲವನ್ನೂ ಕೊಡುತ್ತದೆ. ನೀವು ಈ ಶಿಕ್ಷಣದ ಮೂಲಕ ಶಿಸ್ತು ಮತ್ತು ಸಂಯಮ ಬೆಳೆಸಿಕೊಳ್ಳಬೇಕು ಎಂದು ಹೇಳಿದರು. ಆಡಳಿತ ಮಂಡಳಿಯ ಸದಸ್ಯರಾದ ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಆಯ್ಕೆಯಾಗಿರುವ ಯು. ಎಸ್ ಶೆಣೈ ಮಾತನಾಡಿ, ನೀತಿವಂತರಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗ ಗಂಗೊಳ್ಳಿ ಮತ್ತು ಇಂದುಶ್ರೀ ಮಹಿಳಾ ಸಂಘ ಗಂಗೊಳ್ಳಿ ಇವರ ಆಶ್ರಯದಲ್ಲಿ ದೀಪಾವಳಿ ಪ್ರಯುಕ್ತ ದೀಪದಿಂದ ಜ್ಯೋತಿ ಹಚ್ಚುವ ಕಾರ್ಯಕ್ರಮ ಗಂಗೊಳ್ಳಿಯ ಎಸ್.ವಿ. ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ಭಾನುವಾರ ನಡೆಯಿತು. ನಿವೃತ್ತ ಮುಖ್ಯೋಪಾಧ್ಯಾಯ ಮುಡೂರ ಅಂಬಾಗಿಲು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅಂಗನವಾಡಿ ಕಾರ್ಯಕರ್ತೆ ರೇಖಾ ಖಾರ್ವಿ ಕಾರ್ಯಕ್ರಮ ಉದ್ಘಾಟಿಸಿದರು. ದೇವಸ್ಥಾನದಲ್ಲಿ ಪ್ರತಿನಿತ್ಯ ಸ್ವಚ್ಛತಾ ಕಾರ್ಯವನ್ನು ನಡೆಸುತ್ತಿರುವ ಮಹಿಳೆಯರಿಗೆ ಸೀರೆಯನ್ನು ವಿತರಿಸಲಾಯಿತು. ಮುಖ್ಯ ಅತಿಥಿಯಾಗಿ ಮಾಜಿ ಮಂಡಲ ಪ್ರಧಾನ ಬಿ. ಸದಾನಂದ ಶೆಣೈ, ಗಂಗೊಳ್ಳಿ ಬಿಲ್ಲವ ಯುವ ಮುಖಂಡ ಗೋಪಾಲ ಪೂಜಾರಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಒಕ್ಕೂಟದ ಮಾಜಿ ಅಧ್ಯಕ್ಷೆ ಸುಮಿತ್ರಾ ಗಂಗೊಳ್ಳಿ, ಮಹಿಳಾ ಮಂಡಳಿಯ ಗೌರವಾಧ್ಯಕ್ಷೆ ಸರೋಜ ಜಿ.ಟಿ., ಸುಶೀಲಾ, ಕುಸುಮ, ಶಕುಂತಲಾ, ಗಂಗಾ ಜಿ.ಟಿ., ಜಿ. ಈಶ್ವರ, ನರಸಿಂಹ ಕೆ. ಮೊದಲಾದವರು ಉಪಸ್ಥಿತರಿದ್ದರು. ಸುಶೀಲಾ ಜಿ.ಟಿ ಸ್ವಾಗತಿಸಿದರು. ಸುಮಿತ್ರಾ ಜಿ. ಕಾರ್ಯಕ್ರಮ ನಿರ್ವಹಿಸಿದರು. ಕುಸುಮ ಜಿ.ಟಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೀಪಾವಳಿ ಹಬ್ಬದ ವಿಶೇಷದಲ್ಲೊಂದಾದ ಗೋಪೂಜೆ ಕಾರ್ಯಕ್ರಮವನ್ನು ವಕ್ವಾಡಿ ಗುರುಕುಲ ವಿದ್ಯಾಸಂಸ್ಥೆಯ ಪುಣ್ಯಕೋಟಿಯಲ್ಲಿ ವಿಶೇಷವಾಗಿ ಆಚರಿಸಲಾಯಿತು. ಪುಣ್ಯಕೋಟಿ ಕೊಟ್ಟಿಗೆಯನ್ನು ಮಾವಿನ ತಳಿರು ತೋರಣದಿಂದ ಅಲಂಕರಿಸಲಾಗಿತ್ತು. ಗೋಮಾತೆಯರನ್ನು ಬಣ್ಣದ ಚಿತ್ತಾರದಿಂದ ಸಿಂಗರಿಸಿ, ಹೂವಿನ ಮಾಲೆಗಳನ್ನು ಹಾಕಲಾಗಿತ್ತು. ಬಾಂಡ್ಯ ಎಜುಕೇಷನಲ್ ಟ್ರಸ್ಟನ ಕಾರ್ಯ ನಿರ್ವಾಹಕರಾದ ಅನುಪಮ ಎಸ್. ಶೆಟ್ಟಿ ಗೋವಿನ ಪಾದ ತೊಳೆದು ಅರಿಶಿನ ಕುಂಕುಮವಿಟ್ಟು ಆರತಿ ಬೆಳಗಿ ಅಕ್ಕಿ ಬಾಳೆಹಣ್ಣು, ಅರಿಸಿನ ಎಲೆಯ ಕಡುಬು ನೀಡಿ ಪೂಜೆ ನೆರವೇರಿಸಿದರು. ಈ ಸುಂದರ ಕ್ಷಣದಲ್ಲಿ ಪಂಚವಟಿ ವಸತಿ ನಿಲಯದ ವಿದ್ಯಾರ್ಥಿಗಳು ಭಾಗಿಯಾಗಿದ್ದು ಗೋ ಪೂಜೆ ನೋಡಿ ಸಂಭ್ರಮಿಸುದರ ಜೊತೆಗೆ ತಾವು ಗೋಮಾತೆಗೆ ಅಕ್ಕಿ, ಹಣ್ಣುಗಳನ್ನು ನೀಡಿ ಕಾಮಧೇನುವಿನ ಪೂಜೆಯ ಮಹತ್ವವನ್ನು ಅರಿತರು . ಈ ಸಂದರ್ಭದಲ್ಲಿ ಶಾಲಾ ವಸತಿ ನಿಲಯದ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಮದರ್ ತೆರೇಸಾ ಎಜುಕೇಶನ್ ಟ್ರಸ್ಟ್ ಪ್ರವರ್ತಿತ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್ ಮತ್ತು ಮದರ್ ತೆರೇಸಾಸ್ ಪಿ ಯು ಕಾಲೇಜಿನಲ್ಲಿ 69ನೇ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಧ್ವಜಾರೋಹಣ ಗೈದು ಕನ್ನಡಾಂಭೆಯ ಭಾವಚಿತ್ರಕ್ಕೆ ದೀಪಬೆಳಗಿಸಿ ಪುಷ್ಪನಮನ ಸಲ್ಲಿಸಲಾಯಿತು. ಮುಖ್ಯಶಿಕ್ಷಕ ರವಿದಾಸ್ ಶೆಟ್ಟಿ ಧ್ವಜಾರೋಹಣ ಗೈದು ಮಾತನಾಡಿ, ಕನ್ನಡ ಭಾಷೆ ಕಲಿಯಲು ಸುಲಭ, ಮಾತನಾಡಲು ಸರಳ, ಕನ್ನಡ ಲಿಪಿ ನೋಡಲು ಅಂದ, ಕನ್ನಡ ಮಾತು ಕೇಳಲು ಚೆಂದ, ಪಂಚದ್ರಾವಿಡ ಭಾಷೆಗಳಲ್ಲಿ ಒಂದಾದ ಕನ್ನಡ ಭಾಷೆ ತನ್ನದೇ ಆದ ಇತಿಹಾಸವನ್ನು ಹೊಂದಿದ್ದು ಕನ್ನಡ ಭಾಷೆಯ ನೆಲೆಗಟ್ಟಿನಲ್ಲಿ ಏಕೀಕರಣಗೊಂಡ ಕನ್ನಡನಾಡು ಅತ್ಯಂತ ವಿಶಿಷ್ಟವಾದ ಸಂಸ್ಕೃತಿ ಕಲೆ ಮತ್ತು ಪರಂಪರೆಗೆ ನೆಲೆಯಾಗಿದೆ ಕರುನಾಡಿಗೆ ಕರ್ನಾಟಕ ಎಂದು ನಾಮಕರಣಗೊಂಡು ಐವತ್ತು ವರ್ಷ ಪುರ್ಣಗೊಂಡಿದ್ದು ಈ ಸುವರ್ಣ ಸಂಭ್ರಮ ಇಡೀ ನಾಡು ಅದ್ದೂರಿಯಾಗಿ ಆಚರಿಸುತ್ತಿದೆ. ಕಳೆದ ಐವತ್ತು ವರ್ಷಗಳಲ್ಲಿ ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿವೆ ಈ ಅವಧಿಯಲ್ಲಿ ಕರ್ನಾಟಕ ತನ್ನದೇ ಆದ ಅಚ್ಚಳಿಯದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕನ್ನಡ ಕಟ್ಟುವ ಕಾಯಕದ ನಡುವೆ ಪರಿಸರ ಉಳಿಸುವ ಪಂಚವರ್ಣ ಸಂಸ್ಥೆ ಕಾರ್ಯವೈಕರಿ ನಿಜಕ್ಕೂ ಪ್ರಶಂಸನೀಯ ಎಂದು ಕೋಟ ಆರಕ್ಷಕ ಠಾಣಾಧಿಕಾರಿ ರಾಘವೇಂದ್ರ ಹೇಳಿದರು. ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ 27ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೆರಿಸಿ ಮಾತನಾಡಿ, ಸಂಘಟನೆಗಳು ಕ್ರೀಯಾಶೀಲತೆಯನ್ನು ಮೈಗೂಡಿಸಿಕೊಂಡಾಗ ಸಾಧನೆಯ ಮಜಲುಗಳನ್ನು ಕಾಣಲು ಸಾಧ್ಯ, 229 ವಾರಗಳ ಪರಿಸರ ಸಂರಕ್ಷಣೆ ಬರಿ ಮಾತಿನಲ್ಲಿ ಬಣ್ಣಿಸಲು ಸಾಧ್ಯವಿಲ್ಲ ಅದೊಂದು ದೊಡ್ಡ ಸಾಧನೆ ಅಂತಹ ಕೈಂಕರ್ಯದಲ್ಲಿ ತೊಡಗಿಕೊಂಡ ಸಂಘಟನೆ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದರಲ್ಲದೆ ಕನ್ನಡ ಭಾಷೆ ಅದರ ಉಳಿವು ರಾಜ್ಯೋತ್ಸವ ಕಾರ್ಯಕ್ರಮಗಳಿಗೆ ಸಿಮಿತಗೊಳ್ಳದೆ ಮನೆ ಮನಗಳಲ್ಲಿ ನಿತ್ಯನಿರಂತೆಯನ್ನು ಕಾಣುವಂತ್ತಾಗಲಿ ಎಂದು ಶುಭಹಾರೈಸಿದರು. ಕೋಟ ಗ್ರಾ.ಪಂ ಅಧ್ಯಕ್ಷೆ ಜ್ಯೋತಿ ಬಿ. ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಪಂಚವರ್ಣ ಯುವಕ ಮಂಡಲದ ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪರಿಸರವಾದಿ ಕೋ.ಗಿ.ನಾ,ಮಣೂರು ಫ್ರೆಂಡ್ಸ್ ಅಧ್ಯಕ್ಷ…
ಕುಂದಾಪ್ರ ಡಾಟ್ ಕಾಮ ಸುದ್ದಿ.ಬೈಂದೂರು: ಕಲೆ, ಸಾಹಿತ್ಯ, ಶಿಕ್ಷಣ, ಪ್ರವಾಸೋದ್ಯಮ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿನ ಶ್ರೀಮಂತಿಕೆಯನ್ನು ಹೊಂದಿರುವ ಬೈಂದೂರು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳುವಂತೆ ಮಾಡಲು ಆಯೋಜಿಸಿರುವ ಬೈಂದೂರು ಉತ್ಸವ ಊರಿನ ಸಮಗ್ರ ಅಭಿವೃದ್ಧಿಗೆ ಮುನ್ನುಡಿ ಬರೆಯಲಿದೆ ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಕನ್ನಡ ರಾಜ್ಯೋತ್ಸವದ ಅಂಗವಾಗಿ ಇಲ್ಲಿನ ಗಾಂಧಿ ಮೈದಾನದಲ್ಲಿ ಬೈಂದೂರು ಉತ್ಸವ – ಸಂಭ್ರಮದ ಗೆಜ್ಜೆ, ಸಮೃದ್ಧಿ ಹೆಜ್ಜೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ ಕರಾವಳಿ ಹಾಗೂ ಮಲೆನಾಡು ಪ್ರದೇಶವನ್ನೊಳಗೊಂಡಿರುವ ಬೈಂದೂರಿಗೆ ಸಂಪರ್ಕ ಕಲ್ಪಿಸುವ ಮೂರು ರಾಷ್ಟ್ರೀಯ ಹೆದ್ದಾರಿಗಳನ್ನು ಕಳೆದ 10 ವರ್ಷದೀಚೆಗೆ ಅಭಿವೃದ್ಧಿಪಡಿಸುವ ಕೆಲಸವಾಗುತ್ತಿದೆ. ಮುಂದಿನ ದಿನಗಳಲ್ಲಿ ಬೈಂದೂರನ್ನು ಪ್ರಮುಖ ಪ್ರವಾಸಿ ತಾಣವಾಗಿ ಹಾಗೂ ಆರಾಧನಾ ಕ್ಷೇತ್ರವಾಗಿ ಅಭಿವೃದ್ಧಿಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದ ಅವರು ಬೈಂದೂರು ಉತ್ಸವಕ್ಕೆ ರಾಜ್ಯ ಸರಕಾರ ಕೂಡ ಅನುದಾನ ಬಿಡುಗಡೆ ಮಾಡಿ ಪ್ರೋತ್ಸಾಹಿಸಿದೆ ಎಂದರು. ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಮಾತನಾಡಿ, ಬೈಂದೂರು ಅಭಿವೃದ್ಧಿಯ ಬಗ್ಗೆ ಕನಸು ಕಂಡ ಹಲವು…
