ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಯುವ ಮತ್ತು ಪ್ರತಿಭಾವಂತ ಬರಹಗಾರರನ್ನು ಪ್ರೋತ್ಸಾಹಿಸಲು ಕ್ರಿಯೇಟಿವ್ ಪುಸ್ತಕ ಮನೆ ಹಾಗೂ ವಿಕಾಸ ಸೇವಾ ಸಂಸ್ಥೆ ಕಾರ್ಕಳ ಇದರ ಸಹಯೋಗದಲ್ಲಿ ಕಾರ್ಕಳ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ ಯುವ ಬರಹಗಾರರ ಸಮ್ಮೇಳನ “ಅಕ್ಷರಯಾನ – ಬರವಣಿಗೆಯ ಮೆರವಣಿಗೆ” ಕಾರ್ಯಕ್ರಮವು ಬುಧವಾರ ದಂದು ಜರುಗಿತು. ಸಮಾರಂಭದ ಉದ್ಘಾಟಕರಾಗಿ ಆಗಮಿಸಿದ ವಿ. ಸುನಿಲ್ ಕುಮಾರ್ ಶಾಸಕರು, ಕಾರ್ಕಳ ವಿಧಾನಸಭಾ ಕ್ಷೇತ್ರ, ಮಾಜಿ ಸಚಿವರು ಕರ್ನಾಟಕ ಸರ್ಕಾರ ಇವರು ತಮ್ಮ ಉದ್ಘಾಟನಾ ಭಾಷಣದಲ್ಲಿ ಯುವ ಲೇಖಕರು ತಮ್ಮಲ್ಲಿನ ಪ್ರತಿಭೆ, ಸೃಜನಶೀಲತೆಗಳನ್ನು ಬಳಸಿಕೊಂಡು ತಮ್ಮ ಆಸಕ್ತಿಯ ಸಾಹಿತ್ಯ ಪ್ರಕಾರಗಳಲ್ಲಿ ಸಾಹಿತ್ಯ ಸೃಷ್ಟಿಸಲು ಅಣಿಗೊಳ್ಳಬೇಕು ಎಂದರು. ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಅಶ್ವತ್ ಎಸ್. ಎಲ್. ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಪ್ರಕಾಶ್ ಬೆಳವಾಡಿ, ಲೇಖಕರು, ನಟ ಮತ್ತು ನಿರ್ದೇಶಕರು ಬೆಂಗಳೂರು ಇವರು ಮಾತನಾಡಿ, ಯುವ ಸಾಹಿತಿಗಳು ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡರೆ ಸಾಹಿತ್ಯ ಕ್ಷೇತ್ರ ಸಮೃದ್ಧವಾಗಿ ಬೆಳೆಯಲು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಅ.30: ಮಣ್ಣು ತುಂಬಿದ ಮಿನಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಇದೆ ವೇಳೆ ಎದುರಿನಿಂದ ಸ್ಕೂಟಿ ಚಲಾಯಿಸಿಕೊಂಡು ಬರುತ್ತಿದ್ದ ಮಹಿಳೆಯು ವಾಹನ ಸಹಿತ ಲಾರಿಯಿಂದ ಬಿದ್ದ ಮಣ್ಣಿನಡಿ ಸಿಲುಕಿಕೊಂಡ ಘಟನೆ ಕಿರಿಮಂಜೇಶ್ವರ ಗ್ರಾಮದ ನಾಗೂರು – ಉಪ್ರಳ್ಳಿ ರಸ್ತೆಯಲ್ಲಿನ ತಿರುವಿನಲ್ಲಿ ಬುಧವಾರ ನಡೆದಿದೆ. ಮಣ್ಣಿನಲ್ಲಿ ಸಿಲುಕಿಕೊಂಡಿದ್ದ ಮಹಿಳೆ ಆರತಿ ಶೆಟ್ಟಿ ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೇರೂರು ಕಡೆಯಿಂದ ನಾಗೂರಿಗೆ ತೆರಳುತ್ತಿದ್ದ ಮಣ್ಣು ತುಂಬಿದ ಮಿನಿ ಲಾರಿಯೊಂದು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿದೆ. ಇದೇ ವೇಳೆ ನಾಗೂರಿನಿಂದ ನೂಜಾಡಿಗೆ ತೆರಳುತ್ತಿದ್ದ ಮಹಿಳೆಯ ಮೇಲೆ ಲಾರಿಯಲ್ಲಿದ್ದ ಮಣ್ಣು ಬಿದ್ದಿದೆ. ಲಾರಿ ಬೀಳುವ ವೇಳೆ ಸ್ಕೂಟಿಯನ್ನು ಸಾಕಷ್ಟು ಎಡಬದಿಗೇ ತಿರುಗಿಸಿದ್ದರಿಂದ ಲಾರಿ ಮೈಮೇಲೆ ಬಿಳುವ ದೊಡ್ಡ ಅಪಾಯದಿಂದ ಮಹಿಳೆ ಪಾರಾದರು. ಘಟನೆಯ ಪ್ರತ್ಯಕ್ಷದರ್ಶಿ ಇನ್ನೊಂದು ವಾಹನದಲ್ಲಿದ್ದ ಕೋಡಿ ಅಶೋಕ ಪೂಜಾರಿ ಎಂಬುವವರು ತಕ್ಷಣ ಮಹಿಳೆಯ ಮೇಲೆ ಬಿದ್ದಿದ್ದ ಮಣ್ಣನ್ನು ಸರಿಸಿ ಅವರ ಮುಖವನ್ನು ಮೇಲಕ್ಕೆತ್ತಿದ್ದಾರೆ. ಅಷ್ಟರಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಸಂಸ್ಥೆಗಳು ಆಧುನಿಕ ನಲಂದಾ ವಿಶ್ವವಿದ್ಯಾಲಯ ಎಂದು ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ ಬಣ್ಣಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಕಾನೂನು ಕಾಲೇಜಿನ ’ಕಾನೂನು ಕಾರ್ಯಕ್ರಮ’ವನ್ನು ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಆವರಣದ ಡಾ. ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು. ಆಳ್ವಾಸ್ ಆವರಣ ಕಂಡಾಗ ನಲಂದಾ ವಿಶ್ವವಿದ್ಯಾಲಯದ ನೆನಪು ಅನುರಣಿಸಿತು. ಆಳ್ವಾಸ್ ನಲ್ಲಿ ನಡೆಸುವ ಪ್ರತಿ ಕಾರ್ಯಕ್ರಮ ಅಭೂತಪೂರ್ವ, ಅದ್ವಿತೀಯ ಎಂದು ಶ್ಲಾಘಿಸಿದರು. ದೀಪಾವಳಿ ಸನಿಹದಲ್ಲಿ ಸಂಕ್ರಾಂತಿ ಬಂದ ಹಾಗೆ, ಈ ಕಾರ್ಯಕ್ರಮ ಉದ್ಘಾಟನೆಗೆ ಅವಕಾಶವನ್ನು ನೀಡಿದ್ದಾರೆ. ಇದು ನನ್ನ ಬದುಕಿನ ಅನನ್ಯ ಅವಕಾಶ, ಆನಂದ ಭರಿತ ಸಂಭ್ರಮ ಎಂದರು. ಕಾನೂನು ಕಾಲೇಜು ಸ್ಥಾಪನೆಯಿಂದ ಕಾನೂನು ಜ್ಯೋತಿ ಬೆಳಗಲಿ, ಸರ್ವರಿಗೂ ಕೀರ್ತಿ ತರಲಿ. ಎಲ್ಲರಿಗೂ ಭರವಸೆ ಮತ್ತು ಅವಕಾಶ ಹೆಚ್ಚಿದೆ ಎಂದರು. ಯಶಸ್ಸು ಆಕಸ್ಮಿಕ ಅಲ್ಲ. ಅಧ್ಯಯನ, ಶ್ರದ್ಧೆ, ತಪಸ್ಸಿನ ಕಾಯಕದ ಫಲಶ್ರುತಿ. ಗುರಿ ಸಾಧಿಸಲು ಏಕಾಗ್ರತೆ ಮುಖ್ಯ ಎಂದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಬದುಕಿನ ಆಯಾಮದಲ್ಲಿ ಪುನೀತ್ ರಾಜ್ಕುಮಾರ್ರಂತೆ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಆ ಮೂಲಕ ಜೀವನದಲ್ಲಿ ಸಾರ್ಥಕ ಕಾಣಲು ಸಾಧ್ಯ ಎಂದು ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಮಾಜಿ ಅಧ್ಯಕ್ಷ ಸೀತಾರಾಮ ಆಚಾರ್ ಹೇಳಿದರು. ಕೋಟದ ಪಂಚವರ್ಣ ಕಛೇರಿಯಲ್ಲಿ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ಇವರ ನೇತೃತ್ವದಲ್ಲಿ ಸಾಮಾಜಿಕ ಹರಿಕಾರ ಚಿತ್ರನಟ ಪುನೀತ್ ರಾಜ್ಕುಮಾರ್ರವರ ಮೂರನೇ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಸಮಾಜದಲ್ಲಿ ತೆರೆಯ ಮರೆಯಲ್ಲಿ ಸೇವೆಗೈದು ನಮ್ಮೆಲ್ಲರಿಗೂ ಮಾದರಿ ಬದುಕಿನ ಸಂದೇಶ ನೀಡಿದ ರಾಜ್ಕುಮಾರ್ ಜೀವನ ಚರಿತ್ರೆ ಇತಿಹಾಸ ಪುಟದಲ್ಲಿ ಸೇರಿಕೊಂಡಿದೆ ಅಂತಹ ವ್ಯಕ್ತಿಯ ಹೆಸರಿನಲ್ಲಿ ವಿದ್ಯಾನಿಧಿ ಯೋಜನೆ ರೂಪಿಸಿದ ಪಂಚವರ್ಣ ಸಂಸ್ಥೆಯ ಕಾರ್ಯ ನಿಜಕ್ಕೂ ಶ್ಲಾಘನೀಯ, ಅವರ ಅಭಿಮಾನ ಹೊಂದಿದ ಸಂಸ್ಥೆಯ ಸದಸ್ಯ ದಿನೇಶ್ ಆಚಾರ್ ರವರ ಅಭಿಮಾನ ಎಲ್ಲರಿಗೂ ಮಾದರಿಯಾಗಿದೆ ಎಂದರು. ಇದೇ ಸಂದರ್ಭದಲ್ಲಿ ಪಂಚವರ್ಣ ಯುವಕ ಮಂಡಲದ ಗೌರವಾಧ್ಯಕ್ಷ ಸತೀಶ್ ಹೆಚ್ ಕುಂದರ್ ಪುನೀತ್ ರಾಜ್ಕುಮಾರ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಅಪಘಾತಗಳ ನಡೆದಾಗ ಯಾರನ್ನೋ ಹೊಣೆಯಾಗಿಸುವ ಬದಲು ರಸ್ತೆ ಸಂಚಾರ ನಿಯಮಗಳನ್ನು ಅರಿತು ಅದನ್ನು ಕಡ್ಡಾಯವಾಗಿ ಪಾಲಿಸುವುದು ಮುಖ್ಯ. ಬೈಂದೂರು ವಲಯದಲ್ಲಿ 26,000 ವಿದ್ಯಾರ್ಥಿಗಳ ವ್ಯಾಸಂಗ ಮಾಡುತ್ತಿದ್ದು ಅವರೆಲ್ಲರ ರಕ್ಷಣೆ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ ಎಂದು ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ್ ಹೇಳಿದರು. ಅವರು ರೋಟರಿ ಕ್ಲಬ್ ಬೈಂದೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು ವತಿಯಿಂದ ಕಂಬದಕೋಣೆ ಸರಕಾರಿ ಜ್ಯೂನಿಯರ್ ಕಾಲೇಜಿನಲ್ಲಿ ಸೋಮವಾರ ರಸ್ತೆ ಸುರಕ್ಷತಾ ಕಾರ್ಯಕ್ರಮದ ಅಂಗವಾಗಿ ಶಾಲಾ ವಾಹನಗಳ ಚಾಲಕರು ಹಾಗೂ ಮುಖ್ಯಸ್ಥರಿಗೆ ಹಮ್ಮಿಕೊಂಡ ʼವಿದ್ಯಾರ್ಥಿ ಸುರಕ್ಷತಾ ತರಬೇತಿ ಕಾರ್ಯಾಗಾರʼ ಉದ್ಘಾಟಿಸಿ ಮಾತನಾಡಿದರು. ಬೈಂದೂರು ಪೊಲೀಸ್ ಉಪನಿರೀಕ್ಷಕ ನವೀನ್ ಬೋರ್ಕರ್ ಅವರು ಮಾತನಾಡಿ, ಸಂಚಾರಿ ಅಪಘಾತಗಳು ನಮ್ಮಿಂದಲೇ ನಿಯಂತ್ರಣ ಆಗಬೇಕು. ಸಾಮಾನ್ಯ ಸಂಚಾರಿ ನಿಯಮಗಳ ಅರಿವು ಅಗತ್ಯ. ಅವುಗಳನ್ನು ಪಾಲಿಸಿ ಅವಘಡ ಆಗದಂತೆ ಎಚ್ಚರ ವಹಿಸೋಣ. ಅಪಘಾತ ಆದ ಬಳಿಕದ ಪರಿಣಾಮಗಳು ಭಯಾನಕವಾಗಿರುತ್ತದೆ ಎಂದರು. ರೋಟರಿ ಕ್ಲಬ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಆಸಕ್ತಿಯನ್ನೇ ಶಕ್ತಿಯನ್ನಾಗಿಸಿ ತೊಡಗಿಸಿಕೊಂಡು ಉಪ್ಪಿನಕುದ್ರು ಊರಿನ ಅಂತರಾಷ್ಟ್ರೀಯ ಮಟ್ಟದ ಮನ್ನಣೆ ತಂದುಕೊಟ್ಟ ಕೀರ್ತಿ ಯಕ್ಷಗಾನ ಗೊಂಬೆಯಾಟ ಅಕಾಡೆಮಿಗೆ ಸಲ್ಲುತ್ತದೆ ಎಂದು ಸಾಲಿಗ್ರಾಮ ಯಕ್ಷಗಾನ ಮೇಳದ ಯಜಮಾನ ಪಳ್ಳಿ ಕಿಶನ್ ಹೆಗ್ಡೆ ಹೇಳಿದರು. ಅವರು ಉಪ್ಪಿನಕುದ್ರು ಶ್ರೀ ದೇವಣ್ಣ ಪದ್ಮನಾಭ ಕಾಮತ್ ಮೆಮೋರಿಯಲ್ ಯಕ್ಷಗಾನ ಗೊಂಬೆಯಾಟ ಟ್ರಸ್ಟ್ & ಶ್ರೀ ಗಣೇಶ ಯಕ್ಷಗಾನ ಗೊಂಬೆಯಾಟ ಮಂಡಳಿ ಉಪ್ಪಿನಕುದ್ರು ಗೊಂಬೆಮನೆಯಲ್ಲಿ ಪ್ರತಿತಿಂಗಳು ಆಯೋಜಿಸುವ ಪ್ರತಿಭೆ ನಿಮ್ಮದು ವೇದಿಕೆ ನಮ್ಮದು ಕಾರ್ಯಕ್ರಮದ ಅಂಗವಾಗಿ ಭಾನುವಾರ ಜರುಗಿದ 100ನೇ ತಿಂಗಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಲೆ, ಸಂಸ್ಕಾರ, ಸಂಸ್ಕೃತಿಯನ್ನು ವೇದಿಕೆಗೆ ಮಾತ್ರ ಸೀಮಿತವಾಗಿಸದೇ ಅದರಂತೆ ಬದುಕುವುದು ಮುಖ್ಯ. ಗೊಂಬೆಯಾಟ ಅಕಾಡೆಮಿ ಮೂಲಕ ನಿರಂತರವಾಗಿ ಕಲೆಯನ್ನು ಉಳಿಸುವ ಕಾರ್ಯ ಮಾಡುತ್ತಿರುವುದು ಶ್ಲಾಘನಾರ್ಹ ಎಂದರು. ಹಳ್ಳಿಹೊಳೆಯ ಉದ್ಯಮಿ ವಿಠೋಭ ಶ್ರೀನಿವಾಸ ಶೆಣೈ ಅವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅತಿಥಿಗಳಾಗಿ ನಿವೃತ್ತ ಉಪನ್ಯಾಸಕ ವೆಂಕಟೇಶ ಪೈ, ಕೊಮೆ ಯಶಸ್ವಿ ಕಲಾವೃಂದದ ವೆಂಕಟೇಶ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಅರ್ಹ ಭಾರತೀಯ ನಾಗರಿಕರು ಮತದಾರರ ಪಟ್ಟಿಯಲ್ಲಿ ಹೆಸರನ್ನು ಸೇರಿಸಲು ಅವಕಾಶವಿದ್ದು, ಅರ್ಹ ದಾಖಲೆಗಳನ್ನು ನೀಡುವುದರೊಂದಿಗೆ ತಮ್ಮ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ತಮ್ಮ ಕಚೇರಿ ಸಭಾಂಗಣದಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ – ಕರಡು ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿ ಮಾತನಾಡುತ್ತಿದ್ದರು. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಉಡುಪಿ ಜಿಲ್ಲಾ ವ್ಯಾಪ್ತಿಯ ಬೈಂದೂರು, ಕುಂದಾಪುರ, ಉಡುಪಿ, ಕಾಪು ಹಾಗೂ ಕಾರ್ಕಳ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಕರಡು ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗದ ವೆಬ್ಸೈಟ್ www.ceokarnataka.kar.nic.in ಮತ್ತು ಜಿಲ್ಲಾಧಿಕಾರಿಯವರ ಕಚೇರಿಯ ವೆಬ್ಸೈಟ್ www.udupi.nic.in ನಲ್ಲಿ ಹಾಗೂ ಜಿಲ್ಲೆಯ ಎಲ್ಲಾ ಮತಗಟ್ಟೆ ಮಟ್ಟದಲ್ಲಿ ನೇಮಕ ಮಾಡಿರುವ ಮತಗಟ್ಟೆ ಮಟ್ಟದ ಅಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿದೆ. ಯಾವುದೇ ಆಕ್ಷೇಪಣೆ ಹಾಗೂ ಕ್ಲೇಮ್ಗಳನ್ನು ನವೆಂಬರ್ 28 ರ ಒಳಗೆ ಸಲ್ಲಿಸಬಹುದಾಗಿದ್ದು, ಇವುಗಳನ್ನು ಡಿಸೆಂಬರ್ 24…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಬದುಕಿನ ಮಾನಸಿಕ ಒತ್ತಡಕ್ಕೆ ಸಂಗೀತ ಔಷಧವಿದ್ದಂತೆ, ಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲಿ ಸಂಗೀತ ಅಭ್ಯಾಸ ಮಾಡಿಸುವುದರಿಂದ ಉತ್ತಮ ಹಾಡುಗಾರರನ್ನಾಗಿ ಮಾಡಲು ಸಾಧ್ಯ. ಸಂಗೀತ ಸ್ಪರ್ಧೆಯ ಆಯೋಜನೆಯಿಂದ ಹೊಸ ಪ್ರತಿಭೆಗಳು ಮುಖ್ಯವಾಹಿನಿಗೆ ಬರಲು ಸಹಕಾರಿ ಎಂದು ಸಂಗೀತಗಾರ, ಉಪನ್ಯಾಸಕ ರವಿ ಕಾರಂತ ಅವರು ಹೇಳಿದರು. ಅವರು ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ಡಾ. ಶಿವರಾಮ ಕಾರಂತ ಪ್ರತಿಷ್ಠಾನ ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ಸಾರಥ್ಯದಲ್ಲಿ ಯು ಚಾನೆಲ್ ಸಾದರಪಡಿಸಿದ ರಾಜ್ಯೋತ್ಸವ ಅಂಗವಾಗಿ ಕರಾವಳಿ ಕರ್ನಾಟಕ ಕನ್ನಡ ಕರವೊಕೆ ಗೀತಗಾಯನ ಸ್ಪರ್ಧೆ ಹಚ್ಚೇವು ಕನ್ನಡದ ದೀಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಸಾಂಸ್ಕೃತಿಕ ಚಿಂತಕ ವೆಂಕಟೇಶ್ ಭಟ್, ಯು ಚಾನೆಲ್ ಸಂಚಾಲಕ ಪ್ರಸಾದ್ ರಾವ್, ಹಾಡುಗಾರರಾದ ಮಾಲಿನಿ ರಮೇಶ್, ಸುರೇಶ್ ಕಾರ್ಕಡ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕಾರಂತ ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಆಧುನಿಕ ಕಾಲದಲ್ಲಿ ಅನುಸರಿಸುವ ಆಹಾರ ಪದ್ಧತಿ ಹಾಗೂ ಕಲಬೆರಕೆಯ ಆಹಾರ ಸೇವನೆಯಿಂದ ಎದುರಿಸುತ್ತಿರುವ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಆಯುರ್ವೇದ ವೈದ್ಯ ಪದ್ಧತಿಯು ಸೂಕ್ತ ಪರಿಹಾರವಾಗಿದ್ದು, ಅದನ್ನು ಹೆಚ್ಚು ಬಳಸುವ ಮೂಲಕ ಇನ್ನಷ್ಟು ಪ್ರಚುರಪಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಅಜ್ಜರಕಾಡು ಜಿಲ್ಲಾ ಆಯುಷ್ ಆಸ್ಪತ್ರೆಯಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ಹಾಗೂ ಆಯುಷ್ ಫೆಡರೇಶನ್ ಆಫ್ ಇಂಡಿಯಾ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಧನ್ವಂತರಿ ಜಯಂತಿಯ ಅಂಗವಾಗಿ ನಡೆದ 9 ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಆಯುರ್ವೇದವು ನಮ್ಮ ಪೂರ್ವಜರ ಆಶೀರ್ವಾದವಾಗಿದ್ದು, ಸಾಂಪ್ರದಾಯಿಕ ವೈದ್ಯ ಪದ್ಧತಿ ಆಯುರ್ವೇದವು ರೋಗ ತಡೆಗಟ್ಟುವಿಕೆ ಮತ್ತು ಅರೋಗ್ಯವನ್ನು ಉತ್ತೇಜಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಈ ವ್ಯೆದ್ಯ ಪದ್ಧತಿ ಬಗ್ಗೆ ನಿರ್ಲಕ್ಷ್ಯ ತೋರದೆ ಅವುಗಳಿಂದ ದೊರಕುವ ಆರೋಗ್ಯ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಜಿಲ್ಲಾ ಪಂಚಾಯತ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೈಂದೂರು ಇದರ 2024- 29ರ ಸಾಲಿನ ಕಾರ್ಯಕಾರಿ ಸಮಿತಿ ನಡೆದ ಶಿಕ್ಷಣ ಇಲಾಖೆಯ ಪ್ರತಿನಿಧಿಗಳ ಚುನಾವಣೆಯಲ್ಲಿ ಉಪ್ಪುಂದ ಸರ್ಕಾರಿ ಫ್ರೌಢಶಾಲೆಯ ಶಿಕ್ಷಕ ಬಿ. ಕೇಶವ ನಾಯಕ್ ಜಯಗಳಿಸಿದ್ದಾರೆ.
