Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಸಂಸದ ಬಿ. ವೈ. ರಾಘವೇಂದ್ರ ಅವರು ಬೈಂದೂರು ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರೊಂದಿಗೆ ಕೇಂದ್ರ ವಿಮಾನಯಾನ ಸಚಿವರಾದ ಕಿಂಜರಾಪು ರಾಮ ಮೋಹನ ನಾಯ್ಡು ಅವರನ್ನು ಭೇಟಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯ ಒತ್ತಿನೆಣೆಯಲ್ಲಿ ಮೂಕಾಂಬಿಕಾ ವಿಮಾನ ನಿಲ್ದಾಣ ಮಂಜೂರು ಮಾಡಲು ಮನವಿ ಮಾಡಿದರು. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯ ಉಡುಪಿ ಜಿಲ್ಲೆಯ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನವು ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕೇಂದ್ರಗಳಲ್ಲಿ ಒಂದಾಗಿರುತ್ತದೆ. ಭಾರತದ ವಿವಿಧ ರಾಜ್ಯಗಳಿಂದ ಹಾಗೂ ಹೊರದೇಶಗಳಿಂದ ಪ್ರತಿದಿನ 10,000 ಕ್ಕೂ ಹೆಚ್ಚು ಯಾತ್ರಾರ್ಥಿಗಳು ಈ ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಬೈಂದೂರು ಮೂಕಾಂಬಿಕಾ ರೋಡ್ ರೈಲ್ವೆ ನಿಲ್ದಾಣ ಹಾಗೂ ಬಸ್ ನಿಲ್ದಾಣದ ಅತೀ ಸಮೀಪವಿರುವ ಒತ್ತಿನೆಣೆಯಲ್ಲಿ ಸುಮಾರು 500 ಎಕರೆಗೂ ಅಧಿಕ ಸ್ಥಳ ಲಭ್ಯವಿದ್ದು ಅಲ್ಲಿ ವಿಮಾನ ನಿಲ್ದಾಣ ನಿರ್ಮಿಸಿದರೆ ಭಕ್ತಾಧಿಗಳಿಗೆ ಸಾಕಷ್ಟು ಅನುಕೂಲವಾಗಲಿದೆ. ಆದ್ದರಿಂದ ಮೂಕಾಂಬಿಕಾ ವಿಮಾನ ನಿಲ್ದಾಣಕ್ಕೆ ಮಂಜೂರಾತಿ ನೀಡುವಂತೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: “ವಿದ್ಯಾರ್ಥಿಗಳು ರೆಡ್ ಕ್ರಾಸ್ ಘಟಕದ ತತ್ವಗಳ ಬಗ್ಗೆ ಸರಿಯಾದ ತಿಳುವಳಿಕೆ ಪಡೆದು ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ಮನೋಪ್ರವೃತ್ತಿ ಬೆಳೆಸಿಕೊಳ್ಳಬೇಕು. ಪ್ರಾಕೃತಿಕ ವಿಕೋಪಗಳಲ್ಲಿ ಸಂತ್ರಸ್ತರಿಗೆ ಸ್ವಯಂ ಪ್ರೇರಿತರಾಗಿ ನಿಸ್ವಾರ್ಥ ನೆರವು‌ ನೀಡಲು ಮುಂದಾಗಬೇಕು”  ಎಂದು ಕುಂದಾಪುರ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಇದರ ಅಧ್ಯಕ್ಷರಾದ ಜಯಕರ ಶೆಟ್ಟಿ ಅವರು ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಜ್ಯೂನಿಯರ್ ರೆಡ್ ಕ್ರಾಸ್ ಘಟಕವನ್ನು ದೀಪ ಬೆಳಗಿಸಿ ಉದ್ಘಾಟಿಸುವುದರ ಮೂಲಕ ಕರೆ ನೀಡಿದರು. ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಘಟಕದ ಖಜಾಂಚಿಯವರಾದ ಶಿವರಾಮ್ ಶೆಟ್ಟಿ ಅವರು ರೆಡ್‌ಕ್ರಾಸ್ ಸೇವಾತತ್ವಗಳ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನವೀನ್‌ ಕುಮಾರ ಶೆಟ್ಟಿ ಅವರು ಕುಂದಾಪುರದ ರೆಡ್ ಕ್ರಾಸ್ ಘಟಕದ ಉದಾರತೆ ಮತ್ತು ಸೇವಾಕಾರ್ಯಗಳನ್ನು ಸ್ಮರಿಸಿ ಶ್ಲಾಘಿಸಿದರು. ಈ ಸಂದರ್ಭದಲ್ಲಿ ಕುಂದಾಪುರ ರೆಡ್ ಕ್ರಾಸ್ ಸೊಸೈಟಿಯ ಅಧ್ಯಕ್ಷರು‌ ಮತ್ತು ಖಜಾಂಚಿಅವರು ಪ್ರಥಮ ಚಿಕಿತ್ಸಾ ಕಿಟ್‌ನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ವತಿಯಿಂದ 2023-24 ಮತ್ತು ಪ್ರಸಕ್ತ ಸಾಲಿನ ಶಿಷ್ಯವೇತನಕ್ಕಾಗಿ ಕರ್ನಾಟಕ ಸಂಗೀತ, ಹಿಂದೂಸ್ಥಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾಕೀರ್ತನ ಹಾಗೂ ಗಮಕ ಕಲಾಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವ 16 ರಿಂದ 24 ವರ್ಷ ವಯೋಮಾನದ ಒಳಗಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 12 ಕೊನೆಯ ದಿನ. ಅರ್ಜಿಯನ್ನು ಅಕಾಡೆಮಿಯ ಪೇಸ್ ಬುಕ್ (facebook.com/karnatakasangeeta1978) ಮೂಲಕ ಪಡೆದು ವೆಬ್‌ಸೈಟ್ Sangeetanrityaacademy.karnataka.gov.in ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಕಲಾಗ್ರಾಮ, ಪ್ರಗತಿನಗರ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 0820-2986168 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಗಂಗೊಳ್ಳಿ ಇದರ ಸುವರ್ಣ ಮಹೋತ್ಸವ – 2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಶೃಂಗೇರಿಯ ಶ್ರೀ ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನಂ ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠದಲ್ಲಿ ನಡೆಯಿತು. ದಕ್ಷಿಣಾಮ್ನಾಯ ಶೃಂಗೇರಿ ಶ್ರೀ ಶಾರದಾ ಪೀಠಾಧೀಶ್ವರ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳು ಸುವರ್ಣ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಆಶೀರ್ವಚನ ನೀಡಿದರು. ಪುರೋಹಿತರಾದ ಜಿ. ರಾಘವೇಂದ್ರ ಆಚಾರ್ಯ, ಸಮಿತಿ ಅಧ್ಯಕ್ಷ ಸತೀಶ ಜಿ., ಪ್ರಧಾನ ಕಾರ್ಯದರ್ಶಿ ನಿತಿನ್ ಖಾರ್ವಿ, ಕಾರ್ಯದರ್ಶಿ ಶ್ರೀಧರ ಸಕ್ಲಾತಿ, ಗೋಪಾಲ ಖಾರ್ವಿ ದಾವನಮನೆ, ಸುರೇಂದ್ರ ಖಾರ್ವಿ, ರಘುವೀರ ಕೆ., ಮಹಿಳಾ ಸಮಿತಿ ಕಾರ್ಯದರ್ಶಿ ಸುಜಾತ ಬಾಬು ಖಾರ್ವಿ, ಉಷಾ ದಿನಕರ, ಸ್ವಾತಿ ಮಡಿವಾಳ, ನಾಗಪ್ಪಯ್ಯ ಪಟೇಲ್, ಪುರುಷೋತ್ತಮ ಆರ್ಕಾಟಿ, ಸುವರ್ಣ ಮಹೋತ್ಸವ ಸಮಿತಿ ಸದಸ್ಯರು, ಮಹಿಳಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ದಕ್ಷಿಣಾಮ್ನಾಯ ಶೃಂಗೇರಿ ಶ್ರೀ ಶಾರದಾ ಪೀಠದ ಪ್ರಾಂತೀಯ ಧರ್ಮಾಧಿಕಾರಿ ಲೋಕೇಶ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿ. ಇವರ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಎನ್. ಎಂ. ಡಿ. ಎಫ್. ಸಿ ಮಾದರಿಯಲ್ಲಿ ಮಾನ್ಯತೆ ಪಡೆದಿರುವ ಯಾವುದೇ ವಿದೇಶ ವಿದ್ಯಾಲಯದಿಂದ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡಲು ಬಯಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆಯಡಿ ಸಾಲ ಪಡೆಯಲು ನಿಗಮದ ವೆಬ್‌ಸೈಟ್ kmdconline.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಛೇರಿ ದೂ. ಸಂ: 0820-2574990 ಅಥವಾ ಉಡುಪಿ ದೂ. ಸಂಖ್ಯೆ: 0820-2574596, ಕಾರ್ಕಳ ದೂ. ಸಂಖ್ಯೆ: 08258-231101 ಹಾಗೂ ಕುಂದಾಪುರ ದೂ. ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ ಆಫ್ ಇಂಡಿಯಾ ಸಂಸ್ಥೆಯವರು ನಡೆಸಿದ ಸಿಎ ಫೌಂಡೇಶನ್ ಫಲಿತಾಂಶವು 29 ಜುಲೈ 2024 ರಂದು ಪ್ರಕಟಗೊಂಡಿದ್ದು, ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು ಗಮನಾರ್ಹ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಕೆ. ವಿ ಮೌರ್ಯ ( 273) , ಭಕ್ತಿ ಕಾಮತ್ (253) , ಸುಪ್ರೀತ್ ಎಸ್. ಹೆಗ್ಡೆ (248) , ವಿನಯ್ ಪ್ರಶಾಂತ ಹಿರೇಮಠ (238) , ಸಾನ್ವಿ ರಾವ್ (223) ವಿದ್ಯಾರ್ಥಿಗಳು ಅಂಕಗಳನ್ನು ಗಳಿಸುವುದರ ಮೂಲಕ ಅರ್ಹತೆಯನ್ನು ಗಳಿಸಿಕೊಂಡಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಯನ್ನು ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಬೋಧಕೇತರ ವೃಂದದವರು, ಪರೀಕ್ಷಾ ಸಂಯೋಜಕರಾದ ರಾಘವೇಂದ್ರ ಬಿ. ರಾವ್ ಅವರು ಶ್ಲಾಘಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಬೈಂದೂರು: ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ನಾಗೂರಿನ ಖಾಸಗಿ ಬಾವಿಯೊಂದರಲ್ಲಿ ಮಂಗಳವಾರ ಬೃಹತ್‌ ಮೊಸಳೆ ಕಾಣಿಸಿಕೊಂಡಿದ್ದು, ಸುತ್ತಲಿನ ನಾಗರಿಕರು ಆತಂಕಕ್ಕೀಡಾದ ಘಟನೆ ನಡೆದಿದೆ. ನಾಗೂರು ಒಡೆಯರ ಮಠ ವಿಶ್ವನಾಥ ಉಡುಪರ ಮನೆಯ ಬಾವಿಯಲ್ಲಿ ಮೊಸಳೆ ಕಾಣಿಸಿಕೊಂಡಿದಿದೆ. ಬೈಂದೂರು ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮೊಸಳೆಯನ್ನು ಹಿಡಿಯಲು ಕೇಜ್ ಇರಿಸಿದ್ದು ಒಳಗಡೆ ಕೋಳಿ ಮಾಂಸ ಇರಿಸಲಾಗಿದೆ. ಅದರ ಚಲನವಲನಗಳ ಮೇಲೆ ಕಣ್ಗಾವಲಿರಿಸಲು ಸಿಸಿ ಟಿವಿ ಅಳವಡಿಕೆ ಮಾಡಲಾಗಿದೆ. ಮೊಸಳೆ ಬೇರೆ ಭಾಗಗಳಿಂದ ಮೇಲಕ್ಕೆ ಭಾರದಂತೆ ಸುತ್ತಲು ಬಲೆ ಅಳವಡಿಸಲಾಗಿದೆ. ಡಿಢೀರ್‌ ಪ್ರತ್ಯಕ್ಷವಾದ ಮೊಸಳೆಯನ್ನು ನೋಡಲು ನೂರಾರು ಜನರು ತೆರಳುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ಕರಾವಳಿಯಲ್ಲಿ ನಿರಂತರ ಮಳೆಯಾಗುತ್ತಿದ್ದು, ನೆರೆಯ ಸಂದರ್ಭದಲ್ಲಿ ಮೊಸಳೆ ಬೇರೆಡೆಯಿಂದ ಇಲ್ಲಿಗೆ ಬಂದಿರಬಹುದು ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಬೈಂದೂರು ತಹಶಿಲ್ದಾರ್‌ ಪ್ರದೀಪ್‌ ಆರ್.‌, ವಲಯ ಅರಣ್ಯಾಧಿಕಾರಿ ಸಂದೇಶ್‌, ಪಿಎಸೈ ತಿಮ್ಮೇಶ್‌ ಮೊದಲಾದವರು ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದರೆ: ಪ್ರಸಕ್ತ ವರ್ಷದಲ್ಲಿ ನಡೆದ ಸಿಎ ಫೌಂಡೇಶನ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಆಳ್ವಾಸ್ ಪದವಿಪೂರ್ವ ಹಾಗೂ ಪದವಿ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶ ದಾಖಲಿಸಿದ್ದಾರೆ ಎಂದು ಡಾ. ಎಂ. ಮೋಹನ ಆಳ್ವ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.  ಪರೀಕ್ಷೆಯಲ್ಲಿ ರಾಷ್ಟ್ರ ಮಟ್ಟದಲ್ಲಿ 14.96% ಫಲಿತಾಂಶ ದಾಖಲಾಗಿದ್ದರೆ, ಆಳ್ವಾಸ್ 68.03% ಫಲಿತಾಂಶಗಳಿಸಿದೆ. ಆಳ್ವಾಸ್ ಕಾಲೇಜಿನ 147 ವಿದ್ಯಾರ್ಥಿಗಳಲ್ಲಿ 100 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ವರ್ಷದಲ್ಲಿ ಆಳ್ವಾಸ್‌ನ 42 ವಿದ್ಯಾರ್ಥಿಗಳು ಸಿಎ ಫೈನಲ್‌ನಲ್ಲಿ, 30 ವಿದ್ಯಾರ್ಥಿಗಳು ಸಿಎ ಇಂಟರ್ ಮಿಡಿಯೇಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ಸಿಎ ಪ್ರತಿ ಹಂತದಲ್ಲೂ ಉತ್ತಮ ಫಲಿತಾಂಶ ಪ್ರಕಟವಾಗಿದೆ. ಸುಮೀತ್ ವರ್ಧಮಾನ್ ರೂಗೆ (̳304), ಶಿವಪ್ರಸಾದ್ (295), ಆರ‍್ಯನ್ ಕಾರ್ಯಪ್ಪ ಎ. (287), ಶಿವಶೇಷ್ ಕೆ. ಆರ್. (283), ಹರೀಶ್ ಕುಲಕರ್ಣಿ (283), ಕನ್ಯಾ ಪ್ರಭು (281), ಗಿರೀಶ್ ಚಂದ್ರಪ್ಪ (277), ಆಕಾಶ್ ಜೆ. ಭಟ್ (276), ಹಿತೇಶ್  ಎಂ. ಎಸ್. (273), ದಿನೇಶ್ ಎನ್ (268), ಸಾಹುನ್ ಪಿಂಟೋ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಿಎ, ಸಿಎಸ್‌ಇಇಟಿ ವೃತ್ತಿ ಪರ ಕೋರ್ಸ್‌ಗಳಿಗೆ ಹನ್ನೆರಡು ವರ್ಷಗಳ ತರಬೇತಿ ನೀಡುತ್ತಿರುವ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಇನ್ಸ್ಟಿಟೂಟ್ ಆಫ್ ಚಾರ್ಟಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಸಂಸ್ಥೆಗಳು ನಡೆಸಿದ ಸಿಎ ಮತ್ತು ಸಿಎಸ್‌ಇಇಟಿ ಪರೀಕ್ಷೆಗಳಲ್ಲಿ ಉನ್ನತ ಸಾಧನೆ ಮಾಡಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳಾದ ಸಿಂಚನಾ ಎಸ್‌. ಶೆಟ್ಟಿ (270) ಅಭಿಷೇಕ ಅಡಿಗ (269) ಸಿಂಚನ ಎಸ್. ಬಸ್ರೂರ್ (255) ಪ್ರಣವ್ (249) ಹರ್ಷಿತಾ ಡಿ. ಎಸ್ (208) ಮಾನ್ಯ (200) ಹಾಗೆ ಸಿಎಸ್ ಫೌಂಡೇಶನ್‌ನಲ್ಲಿ ಶ್ರೇಯಾ (104) ಸಿದ್ದಾಂತ್ (100) ಅಂಕಗಳನ್ನು ಪಡೆಯುವುದರೊಂದಿಗೆ ಉತ್ತೀರ್ಣರಾಗುವ ಮೂಲಕ ಮುಂದಿನ ಹಂತಕ್ಕೆ ಅರ್ಹತೆಯನ್ನು ಪಡೆದಿದ್ದಾರೆ. ಸಿಎ ಫೌಂಡೇಶನ್ ಫಲಿತಾಂಶದಲ್ಲಿ ಉಡುಪಿ ಜಿಲ್ಲೆಯಲ್ಲೆ ಪ್ರಥಮ ಸ್ಥಾನ ಪಡೆದಿದ್ದು, ಎಲ್ಲಾ ವಿದ್ಯಾರ್ಥಿಗಳ ಸಾಧನೆಯನ್ನು ಎಂ. ಎಂ. ಹೆಗ್ಡೆ ಎಜುಕೇಶನಲ್ & ಚಾರೀಟೆಬಲ್ ಟ್ರಸ್ಟ್ನ ಅಧ್ಯಕ್ಷರಾದ ಎಂ. ಮಹೇಶ್ ಹೆಗ್ಡೆ, ಪ್ರಾಂಶುಪಾಲರಾದ ನಾಗರಾಜ್ ಶೆಟ್ಟಿ ಹಾಗೂ ಬೋಧಕ ಮತ್ತು ಬೋಧಕೇತರ ವೃಂದದವರು ಶ್ಲಾಘಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕೊಲ್ಲೂರು ಪಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ 2 ವರ್ಷಗಳಿಂದ ಆಂಬ್ಯುಲೆನ್ಸ್‌ ಸೇವೆ ಇಲ್ಲದ್ದರಿಂದ ರೋಗಿಗಳು ಸಮಸ್ಯೆ ಎದುರಿಸುತ್ತಿದ್ದು, ಇದೀಗ ನೂತನ ಆಂಬ್ಯುಲೆನ್ಸ್‌ ಒದಗಿಸಲಾಗಿದೆ. ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ನೂತನ ಅಂಬ್ಯುಲೆನ್ಸ್‌ ಹಸಿರು ನಿಶಾನೆ ತೋರುವ ಮೂಲಕ ಓಡಾಟಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಐ.ಪಿ.ಗಡಾದ್‌, ತಾಲೂಕು ಆರೋಗ್ಯ ಅಧಿಕಾರಿ ಡಾ. ಪ್ರೇಮಾನಂದ, ಕೇದ್ರದ ವೈದ್ಯಾಧಿಕಾರಿ ಡಾ. ಶೈಲೇಶ್‌, 108 ಉಡುಪಿ ಜಿಲ್ಲಾ ವ್ಯವಸ್ಥಾಪಕ ಮಹಾಬಲ, ಗ್ರಾಪಂ ಅಧ್ಯಕ್ಷೆ ವನಿತಾ, ಇಎಂಟಿ ನಾಗರಾಜ್‌, ರಾಘವೇಂದ್ರ, ಪೈಲೆಟ್‌ ಚಂದ್ರಪ್ಪ, ಪಿಐ ಬಸವರಾಜ್‌ ಪವಾರ್‌ ಉಪಸ್ಥಿತರಿದ್ದರು.

Read More