Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸರಕಾರಿ ಸೇವೆಯಲ್ಲಿ ತನ್ನ ನೈಜತೆಯನ್ನು ಪ್ರದರ್ಶಿಸಿದ ಜಾನಕಿ ಟೀಚರ್ ಜನಸ್ನೇಹಿ ಶಿಕ್ಷಕಿಯಾಗಿ ಗುರುತಿಸಿಕೊಂಡಿದ್ದಾರೆ ಎಂದು ಕೋಟದ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ. ಕುಂದರ್ ಹೇಳಿದರು. ಅವರು ಕೋಟತಟ್ಟು ಪಡುಕರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿ ತನ್ನ ಸೇವಾ ನಿವೃತ್ತಿ ಹೊಂದಿದ ಜಾನಕಿ ಟೀಚರ್ ಸಾರ್ವಜನಿಕ ಅಭಿನಂದನೆ, ಬಿಳ್ಕೋಡುಗೆ ಸಮಾರಂಭದಲ್ಲಿ ಮಾತನಾಡಿದರು. ಪ್ರಸ್ತುತ ಕಾಲಘಟ್ಟದಲ್ಲಿ ಸರಕಾರಿ ಸೇವೆಯಲ್ಲಿ ಜನಪರ ಕಾಳಜಿ ಅಪರೂಪ ಆದರೆ ಜಾನಕಿ ಟೀಚರ್ ಸೇವಾ ಅವಧಿಯಲ್ಲಿ ಸರಕಾರ ಶಾಲೆಯನ್ನು ಬಹು ಎತ್ತರಕ್ಕೆ ಕೊಂಡ್ಯೊಯ್ದಿದ್ದಾರೆ.ಇಂತಹ ಶಿಕ್ಷಕರು ಬೆರಳೆಣಿಕೆಯಲ್ಲಿ ಕಾಣಲು ಸಾಧ್ಯ,ಶಿಕ್ಷಕಿ ಅನ್ನುವುದಕ್ಕಿಂತ ಮಾತೃ ಹೃದಯಿಯಾಗಿ ನಗುಮೊಗದ ಶೈಕ್ಷಣಿಕ ಸೇವೆಯನ್ನು ನೀಡಿದ್ದಾರೆ ಎಂದರು. ಪ್ರಸಿದ್ಧ ಮನೋವೈದ್ಯ ಡಾ.ಪ್ರಕಾಶ್ ತೋಳಾರ್ ಮಾತನಾಡಿ ಶಿಕ್ಷಣ ವ್ಯವಸ್ಥೆಯಲ್ಲಿ ನಿಸ್ವಾರ್ಥ ಸೇವೆ ಅಪರೂಪ ಆದರೆ ಜಾನಕಿ ಟೀಚರ್ ಮಕ್ಕಳ ಮನಸ್ಸು ಗೆದ್ದ ಬಲು ಅಪರೂಪದ ಶಿಕ್ಷಕರಾಗಿದ್ದಾರೆ,ಸರಕಾರಿ ಕನ್ನಡ ಮಾಧ್ಯಮ ಕ್ಷೇತ್ರದಲ್ಲಿ ಇಂತಹ ಶಿಕ್ಷಕಿ ಮಾದರಿಯಾಗಿದ್ದಾರೆ ಎಂದರು. ಸನ್ಮಾನಗಳ ಮಹಾಪೂರಬಿಳ್ಕೋಡುಗೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಕ್ಷೇತ್ರ ಸಮನ್ವಯ ಕೇಂದ್ರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೈಂದೂರು ಇಲ್ಲಿ ಸುಮಾರು ಆರು ವರ್ಷಗಳ ಕಾಲ ಸಮೂಹ ಸಂಪನ್ಮೂಲ ವ್ಯಕ್ತಿಯಾಗಿ ವಂಡ್ಸೆ ಸಮೂಹ ಸಂಪನ್ಮೂಲ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸಿ ಈಗ ಮುಖ್ಯ ಶಿಕ್ಷಕರಾಗಿ ಭಡ್ತಿ ಹೊಂದಿ ಸ.ಹಿ.ಪ್ರಾಶಾಲೆ ಸೆಳ್ಕೋಡು, ಇಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಮ್. ನಾಗರಾಜ್ ಶೆಟ್ಟಿ ಅವರನ್ನು ಕ್ಷೇತ್ರ ಸಮನ್ವಯ ಕೇಂದ್ರ ಬೈಂದೂರು ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ನಿಯೋಜಿತ ಸಿ.ಆರ್.ಪಿಯಾಗಿ ಕಾರ್ಯ ನಿರ್ವಹಿಸಿದ ಚಂದ್ರ ನಾರಾಯಣ ಬಿಲ್ಲವ ಪಿ.ಎಂ.ಶ್ರೀ ಶಿರೂರು ಮತ್ತು ಲಕ್ಷ್ಮೀ ಸ.ಹಿ.ಪ್ರಾ ಶಾಲೆ ಅರೆಶಿರೂರು ಅವರನ್ನು ಸನ್ಮಾನಿಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕ್ಷೇತ್ರ ಸಮನ್ವಯಾಧಿಕಾರಿಗಳಾದ ಪ್ರದೀಪ ಕುಮಾರ್, ಪತ್ರಾಂಕಿತ ವ್ಯವಸ್ಥಾಪಕ ಅರುಣೇಶ್, ಅಧೀಕ್ಷಕ ಮನೋರಾಜ್ ಶೆಟ್ಟಿ, ಬೈಂದೂರು ವಲಯದ ಎಲ್ಲಾ ಸಮೂಹ ಸಂಪನ್ಮೂಲ ವ್ಯಕ್ತಿಗಳು, ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳು ಹಾಗೂ ಕಚೇರಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಬಿ.ಐ.ಆರ್.ಟಿ ನಾಗರತ್ನ ಪ್ರಾರ್ಥಿಸಿದರು. ಶಿರೂರು ಸಿ.ಆರ್.ಪಿ ಗಣೇಶ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಕುಂದಾಪುರ: ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸಿದ ಸಿ.ಎ. ಇಂಟರ್ ಮೀಡಿಯಟ್ ಮೇ. 2026ರ ಪರೀಕ್ಷೆಯಲ್ಲಿ ಕುಂಭಾಶಿಯ ಸುರೇಶ್ ಎಸ್.ಎ. ಮತ್ತು ಪುಷ್ಪ ದಂಪತಿಗಳ ಪುತ್ರ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಪ್ರಾಕ್ತನ ವಿದ್ಯಾರ್ಥಿ ಪನ್ನಗ ಅವರು ಗ್ರೂಪ್–2ರಲ್ಲಿ ಯಶಸ್ಸು ಸಾಧಿಸುವ ಮೂಲಕ, ಈಗಾಗಲೇ ಉತ್ತೀರ್ಣರಾಗಿದ್ದ ಗ್ರೂಪ್–1 ಜೊತೆಗೆ ಸಿ.ಎ. ಇಂಟರ್ ಮೀಡಿಯಟ್‌ನ ಎರಡೂ ಗ್ರೂಪ್‌ಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಅವರ ಈ ಸಾಧನೆಯು ಕಾಲೇಜಿನ ಕೀರ್ತಿಯನ್ನು ಮತ್ತಷ್ಟು ಹೆಚ್ಚಿಸಿದೆ. ದೇಶದ ಅತ್ಯಂತ ಪ್ರತಿಷ್ಠಿತ ಹಾಗೂ ಸವಾಲಿನ ವೃತ್ತಿಪರ ಪರೀಕ್ಷೆಗಳಲ್ಲಿ ಒಂದಾದ ಸಿ.ಎ. ಪರೀಕ್ಷೆಯಲ್ಲಿ ಈ ಸಾಧನೆ ಮಾಡಿರುವುದು ಪನ್ನಗ ಅವರ ನಿರಂತರ ಪರಿಶ್ರಮ, ಶಿಸ್ತು, ಸಮರ್ಪಣೆ ಹಾಗೂ ದೃಢ ಸಂಕಲ್ಪಕ್ಕೆ ಸಾಕ್ಷಿಯಾಗಿದೆ. ಅವರ ಈ ಯಶಸ್ಸು ವಾಣಿಜ್ಯ ವಿದ್ಯಾರ್ಥಿಗಳು ಹಾಗೂ ವೃತ್ತಿಪರ ಶಿಕ್ಷಣವನ್ನು ಆಯ್ಕೆ ಮಾಡಿರುವ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದೆ. ಪನ್ನಗ ಅವರ ಈ ಗಮನಾರ್ಹ ಸಾಧನೆಗಾಗಿ ಡಾ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿಉಡುಪಿ: ಜಿಲ್ಲೆಯ ಪ.ವರ್ಗದ ಕೊರಗ ಸಮುದಾಯದ 10ನೇ ತರಗತಿ ಹಾಗೂ ಮೇಲ್ಪಟ್ಟ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಯನ್ನು ಐಟಿಡಿಪಿ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ, ಕುಂದಾಪುರ, ಕಾರ್ಕಳ ತಾಲೂಕು ಕಚೇರಿ ಹಾಗೂ ಎಲ್ಲ ಗ್ರಾಮ ಪಂಚಾಯತ್‌ಗಳಿಂದ ಪಡೆಯಬಹುದು. ಅರ್ಜಿ ಹಾಗೂ ಸಂಬಂಧಿಸಿದ ದಾಖಲಾತಿಗಳನ್ನು ಶಾಲಾ ಮುಖ್ಯೋಪಾಧ್ಯಾಯರು/ಕಾಲೇಜಿನ ಪ್ರಾಂಶುಪಾಲರಿಂದ ಧೃಡೀಕರಿಸಿಕೊಂಡು ರಜತಾದ್ರಿಯಲ್ಲಿರುವ ಐಟಿಡಿಪಿ ಕಚೇರಿಗೆ ಸಲ್ಲಿಸುವಂತೆ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಭಾರತೀಯ ಜನತಾ ಪಾರ್ಟಿ ನೇತೃತ್ವದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ವಿವಿಧ ಭಾಗಗಳಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಮಾಹಿತಿ ಕಾರ್ಯಗಾರಗಳು ಸೋಮವಾರ ನಡೆದವು. ಕೆದೂರು, ಬಸ್ರೂರು, ಬಳ್ಕೂರು, ಕೋಣಿ, ಆನಗಳ್ಳಿ ಹಾಗೂ ಕುಂದಾಪುರ ನಗರದ ಬಿಜೆಪಿ ಕಚೇರಿಯಲ್ಲಿ ಈ ಕಾರ್ಯಗಾರಗಳನ್ನು ಆಯೋಜಿಸಲಾಗಿತ್ತು. ಕುಂದಾಪುರ ನಗರದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರು, “ಮತದಾರರ ಪಟ್ಟಿ ಪ್ರಜಾಪ್ರಭುತ್ವದ ಮೂಲ ಆಧಾರ. ಒಬ್ಬನೇ ಒಬ್ಬ ಅರ್ಹ ಮತದಾರನ ಹೆಸರು ಕೂಡ ಕೈಬಿಡಬಾರದು. ಬಿ.ಎಲ್.ಎ-2 ಕಾರ್ಯಕರ್ತರು ಮನೆ ಮನೆಗೆ ತೆರಳಿ ನಿಖರ ಮಾಹಿತಿ ಸಂಗ್ರಹಿಸಬೇಕು” ಎಂದು ಕರೆ ನೀಡಿದರು. ಬಿಜೆಪಿ ಕ್ಷೇತ್ರಾಧ್ಯಕ್ಷ ರಾದ ಸುರೇಶ್ ಶೆಟ್ಟಿ ಗೋಪಾಡಿ ಮಾತನಾಡಿ, “ಈ ಪರಿಷ್ಕರಣೆ ಕಾರ್ಯವನ್ನು ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಅಚ್ಚುಕಟ್ಟಾಗಿ ಮಾಡಬೇಕು. ಯುವ ಮತದಾರರ ನೋಂದಣಿಗೆ ಹೆಚ್ಚಿನ ಒತ್ತು ನೀಡೋಣ” ಎಂದರು. ಎಸ್‌ಐಆರ್ ಕುಂದಾಪುರ ಮಂಡಲ ಪ್ರಭಾರಿ ಶ್ಯಾಮಲ ಕುಂದರ್ ಅವರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೆಂಗಳೂರು: ಕತಾರ್‌ನ ನಿವಾಸಿ, ಸಮುದಾಯ ಮುಖಂಡರು ಹಾಗೂ ಕರ್ನಾಟಕ ಸಂಘ ಕತಾರ್‌ನ ಮಾಜಿ ಅಧ್ಯಕ್ಷರಾದ ಮಹೇಶ್ ಗೌಡ ಅವರಿಗೆ ಸಮಾಜಸೇವೆ, ಜನಕಲ್ಯಾಣ ಹಾಗೂ ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಉತ್ತೇಜನಕ್ಕೆ ನೀಡಿದ ಅಮೂಲ್ಯ ಕೊಡುಗೆಯನ್ನು ಪರಿಗಣಿಸಿ ಪ್ರತಿಷ್ಠಿತ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪ್ರದಾನ ಮಾಡಲಾಯಿತು. ನಾಡಪ್ರಭು ಕೆಂಪೇಗೌಡರ 517ನೇ ಜಯಂತಿ ಅಂಗವಾಗಿ ಕೆಂಪೇಗೌಡ ಪ್ರತಿಷ್ಠಾನ ಆಯೋಜಿಸಿದ್ದ ಸಮಾರಂಭದಲ್ಲಿ, ಬೆಂಗಳೂರಿನ ಸೆಂಟ್ರಲ್ ಕಾಲೇಜು ಸಭಾಂಗಣದಲ್ಲಿ, ಭಾರತದ ಉಪರಾಷ್ಟ್ರಪತಿ ಶ್ರೀ ರಾಧಾಕೃಷ್ಣನ್ ಅವರು ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಈ ಭವ್ಯ ಸಮಾರಂಭದಲ್ಲಿ ಪರಮಪೂಜ್ಯ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ, ಕರ್ನಾಟಕ ರಾಜ್ಯಪಾಲರು, ಕೇಂದ್ರ ಸಚಿವರು, ಸಂಸತ್ ಸದಸ್ಯರು, ಶಾಸಕರು, ಹಿರಿಯ ಸರ್ಕಾರಿ ಅಧಿಕಾರಿಗಳು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಉಪಸ್ಥಿತರಿದ್ದರು. ನಾಡಪ್ರಭು ಕೆಂಪೇಗೌಡರ ಆದರ್ಶಗಳು, ಮೌಲ್ಯಗಳು ಮತ್ತು ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸಮಾಜಕ್ಕೆ ವಿಶಿಷ್ಟ ಸೇವೆ ಸಲ್ಲಿಸಿದ ಸಾಧಕರಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಮಹೇಶ್ ಗೌಡ ಅವರು ಹಲವು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಕುಂದಾಪುರ: ತಾಲೂಕು ಯುವ బంಟರ ಸಂಘ ರಿ., ಕುಂದಾಪುರ ಇದರ 2026-26ನೇ ಅವಧಿಗೆ ನೂತನ ಅಧ್ಯಕ್ಷರಾಗಿ ಡಾ. ಚೇತನ್ ಶೆಟ್ಟಿ ಕೋವಾಡಿ ಆಯ್ಕೆಯಾಗಿದ್ದಾರೆ. ಜೂನ್‌ 27ರಂದು ಕುಂದಾಪುರದ ಆರ್. ಎನ್ ಶೆಟ್ಟಿ ಸಭಾಭವನದಲ್ಲಿ ನಡೆದ ಸಂಘದ ಸಾಮಾನ್ಯ ಸಭೆಯಲ್ಲಿ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಪ್ರಸ್ತುತ ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪಪ್ರಾಂಶುಪಾಲರಾಗಿ ಹಾಗೂ ಕನ್ನಡ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿರುವ ಅವರು ಕಾಲೇಜಿನ ರಾಷ್ಟ್ರೀಯ ಯೋಜನೆಯ ಸೇವಾ ಸಂಯೋಜನಾಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಕಾಲೇಜಿನ ವಾರ್ಷಿಕ ಸಂಚಿಕೆ ‘ಶಿಖರ’ ಅವರ ಸಂಪಾದಕತ್ವದ ಅವಧಿಯಲ್ಲಿ ಸತತ ಮೂರು ವರ್ಷಗಳ ಕಾಲ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದೆ. ಕರ್ನಾಟಕ ಕರಾವಳಿಯ ಪ್ರಾದೇಶಿಕ ಸಂಸ್ಕೃತಿ ಎಂಬ ವಿಷಯದ ಕುರಿತು ಹಿರಿಯ ಸಂಶೋಧಕ ಡಾ. ನರೇಂದ್ರ ರೈ ದೇರ್ಲ ಅವರ ಮಾರ್ಗದರ್ಶನದಲ್ಲಿ ಸಿದ್ದಪಡಿಸಿದ ಮಹಾಪ್ರಬಂಧಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾನಿಲಯದಿಂದ ಪಿಎಚ್‌ಡಿ ಪದವಿ ಪಡೆದಿದ್ದಾರೆ. ಸಂಘದ ನೂತನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ನಿ. ಇವರ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿ.ಇ.ಟಿ. ನೀಟ್ ಹಾಗೂ ಜೆ.ಇ.ಇ ಮೂಲಕ ಆಯ್ಕೆಯಾಗುವ ಎಂ.ಬಿ.ಬಿ.ಎಸ್, ಬಿ.ಡಿ.ಎಸ್, ಬಿ.ಇ/ ಬಿ.ಟೆಕ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಬಿ.ಆಯುಷ್, ಫಾರ್ಮಸಿ, ಕೃಷಿ ವಿಜ್ಞಾನ ಮತ್ತು ಪಶು ವೈದ್ಯಕೀಯ ಕೋರ್ಸುಗಳಿಗೆ ಸರ್ಕಾರಿ ಕಾಲೇಜು/ ಖಾಸಗಿ/ ಮ್ಯಾನೆಟ್‌ಮೆಂಟ್ ಕೋಟಾದಡಿ ಅರಿವು ಸಾಲ ಯೋಜನೆಯಡಿಯಲ್ಲಿ ಗರಿಷ್ಠ 5 ಲಕ್ಷ ರೂ. ವರೆಗೆ ಸಾಲ ಸೌಲಭ್ಯ ನೀಡಲಾಗುತ್ತಿದ್ದು, ಸಾಲ ಪಡೆಯಲು ಅಪೇಕ್ಷಿಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ನಿಗಮದ ವೆಬ್‌ಸೈಟ್ http://kccdclonline.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಸಂಬಂಧಿಸಿದ ಅಗತ್ಯ ದಾಖಲಾತಿಗಳನ್ನು ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿ., ಮೌಲಾನಾ ಆಜಾದ್ ಭವನ, ಒಂದನೇ ಮಹಡಿ, ಪಶು ಚಿಕಿತ್ಸಾಲಯದ ಹತ್ತಿರ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ, ಉಡುಪಿ ತಾಲೂಕು ಇಲ್ಲಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಸಮೃದ್ಧ ಬೈಂದೂರು ಪರಿಕಲ್ಪನೆಯಡಿ ಅರುಣಾಚಲಂ ಕಾಲುಸಂಕ ಯೋಜನೆಯ ಅಂಗವಾಗಿ, ಸಮ್ಯತ ಫೌಂಡೇಶನ್, ಬೆಂಗಳೂರು ಇವರ ಸಹಕಾರ ಹಾಗೂ ಚೆನ್ನೈನ ಇಂಡಸ್ 555 ಟಿಎಂಟಿ ಸಂಸ್ಥೆಯ ಸಿಎಸ್ಆರ್ ನಿಧಿಯಿಂದ ಆಜ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕ್ಯಾಕೋಡು ಗ್ರಾಮದಲ್ಲಿ ನಿರ್ಮಿಸಲಾದ ಎಸ್.ಆರ್. ಸದಾನಂದಮ್ ಕಾಲುಸಂಕವನ್ನು ಸೋಮವಾರ ಲೋಕಾರ್ಪಣೆ ಮಾಡಲಾಯಿತು. ಗ್ರಾಮೀಣ ಭಾಗದ ಜನರ ಬಹುಕಾಲದ ಬೇಡಿಕೆಯಾಗಿದ್ದ ಈ ಕಾಲುಸಂಕ ನಿರ್ಮಾಣದಿಂದ ಮಳೆಗಾಲದಲ್ಲಿ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗಲಿದ್ದು, ಸ್ಥಳೀಯ ನಿವಾಸಿಗಳ ದೈನಂದಿನ ಜೀವನಕ್ಕೆ ಮಹತ್ತರ ನೆರವಾಗಲಿದೆ. ಈ ಸಂದರ್ಭದಲ್ಲಿ ಮಾತನಾಡಿದ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು, “ಎಲ್ಲಿ ಚೆನ್ನೈ… ಎಲ್ಲಿಯ ಬೈಂದೂರು… ಆದರೆ ಅಭಿವೃದ್ಧಿಗೆ ದೂರ ಎಂಬುದಿಲ್ಲ. ಜನರ ಅಗತ್ಯಗಳನ್ನು ಮನಗಂಡು ಉತ್ತಮ ಕೆಲಸಗಳಿಗೆ ಕೈಜೋಡಿಸುವ ಸಂಸ್ಥೆಗಳ ಸಹಕಾರದಿಂದ ಗ್ರಾಮೀಣ ಅಭಿವೃದ್ಧಿಗೆ ಹೊಸ ವೇಗ ಸಿಗುತ್ತಿದೆ. ಜನಸೇವೆಯೇ ನಮ್ಮ ಪ್ರಮುಖ ಆದ್ಯತೆಯಾಗಿದ್ದು, ಇಂತಹ ಸಹಭಾಗಿತ್ವದ ಮೂಲಕ ಇನ್ನಷ್ಟು ಜನಪರ ಯೋಜನೆಗಳನ್ನು ಕ್ಷೇತ್ರದಲ್ಲಿ ಜಾರಿಗೊಳಿಸಲಾಗುವುದು” ಎಂದು ಹೇಳಿದರು. ಚೆನ್ನೈನ ಇಂಡಸ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಭಾರತೀಯ ಹವಾಮಾನ ಇಲಾಖೆ / ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 1 ವಾರ ಅಂದರೆ ಜೂನ್ 30 ರಿಂದ ಜುಲೈ 6ರ ವರೆಗೆ ಆರೆಂಜ್ ಅಲರ್ಟ್ ಮುನ್ಸೂಚನೆ ನೀಡಿದ್ದು, ಜಿಲ್ಲೆಯಲ್ಲಿ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ ಯೆಂದು ಸೂಚಿಸಿರುತ್ತಾರೆ. ಈ ಹಿನ್ನಲೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಈ ಕೆಳಕಂಡಂತೆ ಸೂಚನೆಗಳನ್ನು ನೀಡಿದ್ದಾರೆ. ಸಾರ್ವಜನಿಕರು, ಮಕ್ಕಳು ಹಾಗೂ ಕಾರ್ಮಿಕರು ಮಳೆ, ಗಾಳಿ, ಸಿಡಿಲು ಬೀಳುವ ಸಂದರ್ಭದಲ್ಲಿ ಹೊರಗೆ ತಿರುಗಾಡದೆ, ಸೂಕ್ತ ಕಟ್ಟಡದಲ್ಲಿ ಆಶ್ರಯ ಪಡೆಯಬೇಕು. ಕೃಷಿಕರು ಮಳೆ/ಸಿಡಿಲಿನಂತಹ ಸಂದರ್ಭದಲ್ಲಿ ಹೊರಗಿನ ಕೃಷಿ ಚಟುವಟಿಕೆಯಿಂದ ದೂರವಿರಬೇಕು ಮತ್ತು ಸಾರ್ವಜನಿಕರು, ಪ್ರವಾಸಿಗರು ಹಾಗೂ ಮೀನುಗಾರರು ನದಿ/ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯಬಾರದು. ಈ ಸಂದರ್ಭದಲ್ಲಿ ಮಕ್ಕಳು ಹಾಗೂ ಸಾರ್ವಜನಿಕರು ಅಪಾಯಕಾರಿ ಮರ, ವಿದ್ಯುತ್ ಕಂಬದ ಹತ್ತಿರ ಸುಳಿಯಬಾರದು ಮತ್ತು ತುಂಡಾದ…

Read More