Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಆಸಕ್ತಿಯನ್ನೇ ಶಕ್ತಿಯನ್ನಾಗಿಸಿ ತೊಡಗಿಸಿಕೊಂಡು ಉಪ್ಪಿನಕುದ್ರು ಊರಿನ ಅಂತರಾಷ್ಟ್ರೀಯ ಮಟ್ಟದ ಮನ್ನಣೆ ತಂದುಕೊಟ್ಟ ಕೀರ್ತಿ ಯಕ್ಷಗಾನ ಗೊಂಬೆಯಾಟ ಅಕಾಡೆಮಿಗೆ ಸಲ್ಲುತ್ತದೆ ಎಂದು ಸಾಲಿಗ್ರಾಮ ಯಕ್ಷಗಾನ ಮೇಳದ ಯಜಮಾನ ಪಳ್ಳಿ ಕಿಶನ್ ಹೆಗ್ಡೆ ಹೇಳಿದರು. ಅವರು ಉಪ್ಪಿನಕುದ್ರು ಶ್ರೀ ದೇವಣ್ಣ ಪದ್ಮನಾಭ ಕಾಮತ್‌ ಮೆಮೋರಿಯಲ್‌ ಯಕ್ಷಗಾನ ಗೊಂಬೆಯಾಟ ಟ್ರಸ್ಟ್‌ & ಶ್ರೀ ಗಣೇಶ ಯಕ್ಷಗಾನ ಗೊಂಬೆಯಾಟ ಮಂಡಳಿ ಉಪ್ಪಿನಕುದ್ರು ಗೊಂಬೆಮನೆಯಲ್ಲಿ ಪ್ರತಿತಿಂಗಳು ಆಯೋಜಿಸುವ ಪ್ರತಿಭೆ ನಿಮ್ಮದು ವೇದಿಕೆ ನಮ್ಮದು ಕಾರ್ಯಕ್ರಮದ ಅಂಗವಾಗಿ ಭಾನುವಾರ ಜರುಗಿದ 100ನೇ ತಿಂಗಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಲೆ, ಸಂಸ್ಕಾರ, ಸಂಸ್ಕೃತಿಯನ್ನು ವೇದಿಕೆಗೆ ಮಾತ್ರ ಸೀಮಿತವಾಗಿಸದೇ ಅದರಂತೆ ಬದುಕುವುದು ಮುಖ್ಯ. ಗೊಂಬೆಯಾಟ ಅಕಾಡೆಮಿ ಮೂಲಕ ನಿರಂತರವಾಗಿ ಕಲೆಯನ್ನು ಉಳಿಸುವ ಕಾರ್ಯ ಮಾಡುತ್ತಿರುವುದು ಶ್ಲಾಘನಾರ್ಹ ಎಂದರು. ಹಳ್ಳಿಹೊಳೆಯ ಉದ್ಯಮಿ ವಿಠೋಭ ಶ್ರೀನಿವಾಸ ಶೆಣೈ ಅವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅತಿಥಿಗಳಾಗಿ ನಿವೃತ್ತ ಉಪನ್ಯಾಸಕ ವೆಂಕಟೇಶ ಪೈ, ಕೊಮೆ ಯಶಸ್ವಿ ಕಲಾವೃಂದದ ವೆಂಕಟೇಶ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಅರ್ಹ ಭಾರತೀಯ ನಾಗರಿಕರು ಮತದಾರರ ಪಟ್ಟಿಯಲ್ಲಿ ಹೆಸರನ್ನು ಸೇರಿಸಲು ಅವಕಾಶವಿದ್ದು, ಅರ್ಹ ದಾಖಲೆಗಳನ್ನು ನೀಡುವುದರೊಂದಿಗೆ ತಮ್ಮ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ತಮ್ಮ ಕಚೇರಿ ಸಭಾಂಗಣದಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ – ಕರಡು ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿ ಮಾತನಾಡುತ್ತಿದ್ದರು. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಉಡುಪಿ ಜಿಲ್ಲಾ ವ್ಯಾಪ್ತಿಯ ಬೈಂದೂರು, ಕುಂದಾಪುರ, ಉಡುಪಿ, ಕಾಪು ಹಾಗೂ ಕಾರ್ಕಳ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಕರಡು ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗದ ವೆಬ್‌ಸೈಟ್ www.ceokarnataka.kar.nic.in ಮತ್ತು ಜಿಲ್ಲಾಧಿಕಾರಿಯವರ ಕಚೇರಿಯ ವೆಬ್‌ಸೈಟ್ www.udupi.nic.in ನಲ್ಲಿ ಹಾಗೂ ಜಿಲ್ಲೆಯ ಎಲ್ಲಾ ಮತಗಟ್ಟೆ ಮಟ್ಟದಲ್ಲಿ ನೇಮಕ ಮಾಡಿರುವ ಮತಗಟ್ಟೆ ಮಟ್ಟದ ಅಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿದೆ. ಯಾವುದೇ ಆಕ್ಷೇಪಣೆ ಹಾಗೂ ಕ್ಲೇಮ್‌ಗಳನ್ನು ನವೆಂಬರ್ 28 ರ ಒಳಗೆ ಸಲ್ಲಿಸಬಹುದಾಗಿದ್ದು, ಇವುಗಳನ್ನು ಡಿಸೆಂಬರ್ 24…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಬದುಕಿನ ಮಾನಸಿಕ ಒತ್ತಡಕ್ಕೆ ಸಂಗೀತ ಔಷಧವಿದ್ದಂತೆ, ಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲಿ ಸಂಗೀತ ಅಭ್ಯಾಸ ಮಾಡಿಸುವುದರಿಂದ ಉತ್ತಮ ಹಾಡುಗಾರರನ್ನಾಗಿ ಮಾಡಲು ಸಾಧ್ಯ. ಸಂಗೀತ ಸ್ಪರ್ಧೆಯ ಆಯೋಜನೆಯಿಂದ ಹೊಸ ಪ್ರತಿಭೆಗಳು ಮುಖ್ಯವಾಹಿನಿಗೆ ಬರಲು ಸಹಕಾರಿ ಎಂದು ಸಂಗೀತಗಾರ, ಉಪನ್ಯಾಸಕ ರವಿ ಕಾರಂತ ಅವರು ಹೇಳಿದರು. ಅವರು ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್‌ನಲ್ಲಿ ಡಾ. ಶಿವರಾಮ ಕಾರಂತ ಪ್ರತಿಷ್ಠಾನ ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ಸಾರಥ್ಯದಲ್ಲಿ ಯು ಚಾನೆಲ್ ಸಾದರಪಡಿಸಿದ ರಾಜ್ಯೋತ್ಸವ ಅಂಗವಾಗಿ ಕರಾವಳಿ ಕರ್ನಾಟಕ ಕನ್ನಡ ಕರವೊಕೆ ಗೀತಗಾಯನ ಸ್ಪರ್ಧೆ ಹಚ್ಚೇವು ಕನ್ನಡದ ದೀಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಸಾಂಸ್ಕೃತಿಕ ಚಿಂತಕ ವೆಂಕಟೇಶ್ ಭಟ್, ಯು ಚಾನೆಲ್ ಸಂಚಾಲಕ ಪ್ರಸಾದ್ ರಾವ್, ಹಾಡುಗಾರರಾದ ಮಾಲಿನಿ ರಮೇಶ್, ಸುರೇಶ್ ಕಾರ್ಕಡ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕಾರಂತ ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ನಿರೂಪಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಆಧುನಿಕ ಕಾಲದಲ್ಲಿ ಅನುಸರಿಸುವ ಆಹಾರ ಪದ್ಧತಿ ಹಾಗೂ ಕಲಬೆರಕೆಯ ಆಹಾರ ಸೇವನೆಯಿಂದ ಎದುರಿಸುತ್ತಿರುವ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಆಯುರ್ವೇದ ವೈದ್ಯ ಪದ್ಧತಿಯು ಸೂಕ್ತ ಪರಿಹಾರವಾಗಿದ್ದು, ಅದನ್ನು ಹೆಚ್ಚು ಬಳಸುವ ಮೂಲಕ ಇನ್ನಷ್ಟು ಪ್ರಚುರಪಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಅಜ್ಜರಕಾಡು ಜಿಲ್ಲಾ ಆಯುಷ್ ಆಸ್ಪತ್ರೆಯಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ಹಾಗೂ ಆಯುಷ್ ಫೆಡರೇಶನ್ ಆಫ್ ಇಂಡಿಯಾ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಧನ್ವಂತರಿ ಜಯಂತಿಯ ಅಂಗವಾಗಿ ನಡೆದ 9 ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಆಯುರ್ವೇದವು ನಮ್ಮ ಪೂರ್ವಜರ ಆಶೀರ್ವಾದವಾಗಿದ್ದು, ಸಾಂಪ್ರದಾಯಿಕ ವೈದ್ಯ ಪದ್ಧತಿ ಆಯುರ್ವೇದವು ರೋಗ ತಡೆಗಟ್ಟುವಿಕೆ ಮತ್ತು ಅರೋಗ್ಯವನ್ನು ಉತ್ತೇಜಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಈ ವ್ಯೆದ್ಯ ಪದ್ಧತಿ ಬಗ್ಗೆ ನಿರ್ಲಕ್ಷ್ಯ ತೋರದೆ ಅವುಗಳಿಂದ ದೊರಕುವ ಆರೋಗ್ಯ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಜಿಲ್ಲಾ ಪಂಚಾಯತ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೈಂದೂರು ಇದರ 2024- 29ರ ಸಾಲಿನ  ಕಾರ್ಯಕಾರಿ ಸಮಿತಿ ನಡೆದ ಶಿಕ್ಷಣ ಇಲಾಖೆಯ ಪ್ರತಿನಿಧಿಗಳ ಚುನಾವಣೆಯಲ್ಲಿ ಉಪ್ಪುಂದ ಸರ್ಕಾರಿ ಫ್ರೌಢಶಾಲೆಯ ಶಿಕ್ಷಕ ಬಿ. ಕೇಶವ ನಾಯಕ್‌ ಜಯಗಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಐಡಿಯಲ್ ಪ್ಲೇ ಅಬಾಕಸ್ ಅಂಡ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಚಿತ್ರದುರ್ಗದ ಮುರುಗಾ ಮಠದಲ್ಲಿ ನಡೆದ 19ನೇ ರಾಜ್ಯ ಮಟ್ಟದ ಅಬಾಕಸ್ ಮತ್ತು 7ನೇ ರಾಜ್ಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆಯಲ್ಲಿ ಪ್ರಥ್ವಿಕ್ ಸಿ. ಪೂಜಾರಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಗ್ರೀನ್ ವ್ಯಾಲಿ ಇಂಟರ್ನ್ಯಾಷನಲ್ ಸ್ಕೂಲಿನಲ್ಲಿ 2ನೇ ತರಗತಿ ವಿದ್ಯಾರ್ಥಿಯಾಗಿರುವ ಪ್ರಥ್ವಿಕ್, ನಾಯ್ಕನಕಟ್ಟೆ ಚೇತನ್ ಪೂಜಾರಿ ಮತ್ತು ಕವಿತಾ ಅವರ ಪುತ್ರ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: STAIRS YOUTH STATE GAMES 2024 -25  ಧಾರವಾಡದಲ್ಲಿ ನಡೆದ ರಾಜ್ಯ ಮಟ್ಟದ ಪುಟ್ಬಾಲ್ ಪಂದ್ಯಾಟದಲ್ಲಿ ಪ್ರತಿನಿಧಿಸಿದ ಶ್ರೀ ವೆಂಕಟರಮಣ  ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಹಿಮೇಶ್ ರಾಷ್ಟ್ರ ಮಟ್ಟದಲ್ಲಿ ನಡೆಯುವ ಪುಟ್ಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾನೆ. ವಿದ್ಯಾರ್ಥಿಯ ಯಶಸ್ಸಿನ ಪಯಣಕ್ಕೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಹೃದಯಸ್ಪರ್ಶಿ ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕುಂದಾಪುರ ಕಡೆಗೆ ಸಾಗುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಮಗುಚಿಬಿದ್ದು ಚಾಲಕ ಮೃತಪಟ್ಟ ಘಟನೆ ಒತ್ತಿನಣೆ ರಾ.ಹೆ-66ರಲ್ಲಿ ನಡೆದಿದೆ. ಜಾರ್ಖಂಡ್ ಮೂಲದ ಲಾರಿ ಚಾಲಕ ದಾಮೋದರ್ ಯಾದವ್ ಮೃತ ದುರ್ದೈವಿ. ಲೋಕಾಪುರದಿಂದ ಮಂಗಳೂರಿಗೆ ತೆರಳುತ್ತಿದ್ದ ಗಣಪತಿ ಲಾಜಿಸ್ಟಿಕ್ಸ್ ಸಂಸ್ಥೆಗೆ ಸೇರಿದ ಲಾರಿ‌ ಒತ್ತಿನಣೆ ಹೇನಬೇರು ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ರಸ್ತೆಗೆ ಮಗುಚಿ ಬಿದ್ದಿದೆ. ಘಟನೆಯಲ್ಲಿ ಚಾಲಕ‌ ಮೃತಪಟ್ಟಿದ್ದಾರೆ. ಲಾರಿಯಲ್ಲಿ ಲೋಡ್ ಆಗಿದ್ದ ಜೆಕೆ ಸಿಮೆಂಟ್ ಚೀಲಗಳು ರಸ್ತೆಯುದ್ದಕ್ಕೂ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಘಟನೆಯಿಂದಾಗಿ ಕೆಲಕಾಲ ಸಂಚಾರ ಅಸ್ತವ್ಯಸ್ಥಗೊಂಡಿತ್ತು. ಬೈಂದೂರು ಪೊಲೀಸರು ಸ್ಥಳಕ್ಕೆ ತೆರಳಿ ಸಂಚಾರಕ್ಕೆ ಅನುವುಮಾಡಿಕೊಟ್ಟರು. ಅಗ್ನಿಶಾಮಕದಳದ ಸಿಬ್ಬಂದಿಗಳು ಲಾರಿ ಮೇಲಕ್ಕೆತ್ತುವಲ್ಲಿ ಶ್ರಮಿಸಿದರು. ಕ್ರೇನ್ ಮೂಲಕ‌‌ ಮಗುಚಿದ ಲಾರಿಯನ್ನು ಮೇಲಕ್ಕೆತ್ತಲಾಯಿತು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ಮೂರು ಮತ್ತು ನಾಲ್ಕನೇ ವಿದ್ಯಾರ್ಥಿಗಳಿಗೆ  ಒಂದು ದಿನದ ಅಬಾಕಸ್ ಸ್ಪರ್ಧೆ ಆಯೋಜಿಸಲಾಗಿತ್ತು. ಆಡಳಿತಮಂಡಳಿಯ ಅಧಿಕಾರಿಯಾದ ಶಮಿತಾ ರಾವ್ ಮತ್ತು ರೆನಿಟಾ ಲೋಬೊ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಚಾಲನೆ ನೀಡಿದರು. ಅತಿಕಡಿಮೆ ಸಮಯದಲ್ಲಿ ವಿವಿಧ ರೀತಿಯ ಮನೋಗಣಿತ ಲೆಕ್ಕಗಳನ್ನು ಮಾಡುವ ಮೂಲಕ ಸುಮಾರು 150 ಮಕ್ಕಳು ತಮ್ಮ ಪಾಲಕರ ಉಪಸ್ಥಿತಿಯಲ್ಲಿ ಎಲ್ಲರಿಂದ ಪ್ರಶಂಸೆಗೆ ಒಳಗಾದರೂ ಅತ್ಯಂತ ಕ್ರಿಯಾಶೀಲತೆಯಿಂದ ಆರಂಭಗೊಂಡ ಈ ಸ್ಪರ್ಧೆಯು ಎಲ್ಲರಿಂದ ಮೆಚ್ಚುಗೆಗಳಿಸಿತು. ಶಿಕ್ಷಣದಲ್ಲಿ ಸದಾ ನವೀನತೆಯನ್ನು ಪರಿಚಯಿಸುತ್ತಿರುವ ಆಡಳಿತಮಂಡಳಿಯ ಕ್ರಿಯಾಶೀಲತೆಯನ್ನು ಪೋಷಕರು ಕೊಂಡಾಡಿದರು. ತಮ್ಮ ಮಕ್ಕಳ ಮನೋಗಣಿತದ ಬುದ್ಧಿಮತ್ತೆಯನ್ನು ಕಣ್ಣಾರೆ ಕಂಡ ಎಲ್ಲಾ ಪಾಲಕರು ಅತೀವ ಸಂತಸಪಟ್ಟರು. ಅಬಾಕಸ್ ತರಬೇತುದಾರರಾದ ಗೀತಾ (ಉಪನ್ಯಾಸಕರು ಮದರ್ ತೆರೇಸಾಸ್ ಪಿ ಯು ಕಾಲೇಜು, ವೇದಗಣಿತ ಮತ್ತು ಅಬಾಕಸ್ ತರಬೇತುದಾರರು ಹಾಗೂ ರಾಜ್ಯ ಮತ್ತು ರಾಷ್ಟ್ರಮಟ್ಟದ ಪ್ರಶಸ್ತಿ ವಿಜೇತರು) ಇವರು ಪೂರ್ಣದಿನ ವಿದ್ಯಾರ್ಥಿಗಳಿಗೆ ಮನೋಗಣಿತದ ವಿವಿಧ ಹಂತದ ಲೆಕ್ಕಗಳನ್ನು ಲಿಖಿತ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿರುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2024-25ನೇ ಸಾಲಿಗೆ ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ “ಮೀಡಿಯಾ ಕಿಟ್” ವಿತರಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮಾಧ್ಯಮ ಮಾನ್ಯತೆ ಪಡೆದ ಪತ್ರಕರ್ತರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸುದ್ದಿ ಮತ್ತು ಪತ್ರಿಕಾ ವಿಭಾಗದಿಂದ ಅಥವಾ ಆಯಾ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕಾರಿಗಳಿಂದ ಅರ್ಜಿ ನಮೂನೆಯನ್ನು ಪಡೆದುಕೊಂಡು, ಇಲಾಖೆಯ ಮಾನ್ಯತಾ ಕಾರ್ಡು ((Accriditation Card), ಜನ್ಮ ದಿನಾಂಕ, ಖಾಯಂ ವಿಳಾಸ, ವಿದ್ಯಾರ್ಹತೆ, ಜಾತಿ (ಉಪಜಾತಿ), ಪತ್ರಿಕಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸೇವಾನುಭವ, ವೇತನ ವಿವರಗಳನ್ನೊಳಗೊಂಡ ಮಾಹಿತಿಯನ್ನು ಭರ್ತಿ ಮಾಡಿ ಸ್ವ-ವಿಳಾಸವಿರುವ ಲಕೋಟೆಯೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಬಯಸುವವರು ಅರ್ಜಿಯೊಂದಿಗೆ ವಾರ್ತಾ ಮತ್ತು ಸಾರ್ವಜನಿಕ…

Read More