Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ಭಾನುವಾರ ಚಾಲನೆ ನೀಡಲಾಯಿತು. ದೇವಸ್ಥಾನದ ಸೇವಾಸಮಿತಿ ಅಧ್ಯಕ್ಷರಾದ ಎನ್. ನಾಗರಾಜ ಶೆಟ್ಟಿ ಉತ್ಸವಕ್ಕೆ ಚಾಲನೆ ನೀಡಿದರು. ಪ್ರಧಾನ ಅರ್ಚಕರಾದ ಬಿ. ಕೃಷ್ಣಮೂರ್ತಿ ನಾವಡ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನಡೆಯಿತು. ಈ ಸಂದರ್ಭದಲ್ಲಿ ಸೇವಾಸಮಿತಿಯ ಗೌರವಾಧ್ಯಕ್ಷರಾದ ಎಸ್. ರಾಜು ಪೂಜಾರಿ, ಕಾರ್ಯದರ್ಶಿ ಎಸ್. ಶಿವರಾಮ ಪೂಜಾರಿ, ಸದಸ್ಯರಾದ ಶಂಕರ ಮೊಗವೀರ, ನಾಗರಾಜ ಗಾಣಿಗ, ಮಂಜುನಾಥ ಆಚಾರ್ಯ, ಸತ್ಯಪ್ರಸನ್ನ, ಪಾತ್ರಿಗಳಾದ ಅಣ್ಣಪ್ಪ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

Read More

ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗುವ ನೂರಾರು ಗೋವುಗಳಿಗೆ ಆಪತ್ಬಾಂದವರಂತೆ ಸೇವೆ ಸಲ್ಲಿಸುತ್ತಿದ್ದಾರೆ ಯಡ್ತರೆಯ ಈ ಬೈಕ್ ಮೆಕ್ಯಾನಿಕ್. ಬೈಂದೂರು ತಾಲೂಕಿನ ಯಡ್ತರೆಯಲ್ಲಿ ಶ್ರೀ ದುರ್ಗಾ ಆಟೋ ವರ್ಕ್ಸ್ ಎಂಬ ಹೆಸರಿನ ಸ್ವಂತ ಗ್ಯಾರೇಜ್ ನಡೆಸುತ್ತಿರುವ ಸಂಜೀವ ದೇವಾಡಿಗ ಅವರು ಮೂರು ದಶಕಗಳ ಅನುಭವ ಹೊಂದಿರುವ ಪರಿಣತ ಬೈಕ್ ಮೆಕ್ಯಾನಿಕ್. ತನ್ನ ವೃತ್ತಿಯ ಜೊತೆಗೆ ಪ್ರೌವೃತ್ತಿಯಾಗಿ ಆಯ್ದುಕೊಂಡದ್ದು ಅನಾಥ ಗೋವುಗಳ ಚಿಕಿತ್ಸೆ. ಕಳೆದ 15 ವರ್ಷದಿಂದ ಸದ್ದಿದ್ದಲೇ ಗೋಸೇವೆಯಲ್ಲಿ ತೊಡಗಿರುವ ಸಂಜೀವ ದೇವಾಡಿಗ ಅವರು, ನೂರಾರು ಗೋವುಗಳ ಪಾಲಿಗೆ ಆಪತ್ಬಾಂದವರಾಗಿದ್ದಾರೆ. ಅಪಘಾತಕ್ಕೀಡಾಗುವ ದನಗಳನ್ನು ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ವೈದ್ಯರ ಮಾರ್ಗದರ್ಶನದಲ್ಲಿ ತಿಂಗಳುಗಟ್ಟಲೇ ಸಲಹುತ್ತಿದ್ದಾರೆ. ತನ್ನ ವೈಯಕ್ತಿಕ ಬದುಕಿನ ನೋವುಗಳ ನಡುವೆಯೂ ಗೋಸೇವೆಯಲ್ಲಿ ಬದುಕಿನ ನೈಜ ಖುಷಿ ಕಾಣುತ್ತಿದ್ದಾರೆ.

Read More

ಬೆಳಗಾವಿ: ಬಹು ನಿರೀಕ್ಷಿತ ಇನಾಮ್ದಾರ ಚಿತ್ರ ಧ್ವನಿ ಸುರಳಿ ಬಿಡುಗಡೆ ಸಮಾರಂಭ ಬೆಳಗಾವಿ ನಗರದ ಸರ್ದಾರ ಮೈದಾನದಲ್ಲಿ ಅ.15ರಂದು ಭಾನುವಾರ ಸಂಜೆ 4ಗಂಟೆಗೆ ನಡೆಯಲಿದೆ. ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಅಧ್ಯಕ್ಷತೆ ವಹಿಸಲಿದ್ದು, ಸಚಿವರಾದ ಸತೀಶ್ ಜಾರಕಿಹೊಳಿ ಮತ್ತು ಲಕ್ಷ್ಮೀ ಹೆಬ್ಬಾಳಕರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಶಾಸಕರಾದ ರಾಜು ಸೇಠ್, ಬಾಲಚಂದ್ರ ಜಾರಕಿಹೊಳಿ, ನಿಖಿಲ್ ಕತ್ತಿ, ಅಭಯ ಪಾಟೀಲ್ ಮಾಜಿ ಶಾಸಕ ಮಾಜಿ ಶಾಸಕ ಅರವಿಂದ್ ಚ. ಪಾಟೀಲ್, ಸಾಮಾಜಿಕ ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗ್ನಟಿ, ಕಾರ್ಯಕರ್ತ ಸಂತೋಶ ಗುಬಚೆ, ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ವಿಠಲ್ ಗಡ್ಡಿ ಅತಿಥಿಗಳಾಗಿ ಆಗಮಿಸಲಿದ್ದಾರೆ. ಕುಂತಿಯಮ್ಮಾ ಮತ್ತು ತಸ್ಮಯ ಪ್ರೊಡಕ್ಷನ್ ನಲ್ಲಿ ನಿರ್ಮಾಣವಾಗುತ್ತಿರುವ ಚಿತ್ರಕ್ಕೆ ಪ್ರಮೋದ್ ಶೆಟ್ಟಿ ನಿರ್ಮಾಪಕರು. ಉತ್ತರ ಕರ್ನಾಟಕದ ಅದರಲ್ಲೂ ಮೂಲತಃ ಕುಂದಾನಗರಿ ಬೆಳಗಾವಿ ಜಿಲ್ಲೆಯ ನಟ ಖಡಕ್ ಸ್ಟಾರ್ ರಂಜನ್ ಛತ್ರಪತಿ, ಇನಾಮ್ದಾರ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಪ್ರವೇಶಿಸುತ್ತಿದ್ದಾರೆ. ಚಿರಶ್ರೀ ಅಂಚನ್ ಮತ್ತು ಎಸ್ತಾರ್ ನೆರೋನಾ ಈ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕ್ಯಾನ್ಸರ್ ಕಾಯಿಲೆಯ ಬಗ್ಗೆ ಆರಂಭ ಹಂತದಲ್ಲಿ ಭಯ ಮತ್ತು ಉಪೇಕ್ಷೆ ತಾಳದೆ, ಪರಿಣತರಿಂದ ಪರೀಕ್ಷೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡದರೆ ಅದು ವಾಸಿಯಾಗುತ್ತದೆ ಎಂದು ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಅಂಕಾಲಜಿಯ ತಜ್ಞ ವೈದ್ಯ ಡಾ. ಹೇಮಂತಕುಮಾರ್ ಹೇಳಿದರು. ಮರವಂತೆಯ ಸಾಧನಾ ವೇದಿಕೆ, ಪ್ರಾಥಮಿಕ ಆರೋಗ್ಯ ಕೇಂದ್ರ, ಆಸರೆ ಚಾರಿಟಬಲ್ ಟ್ರಸ್ಟ್, ಸ್ನೇಹಾ ಮಹಿಳಾ ಮಂಡಳ, ಹೋಲಿ ಫ್ಯಾಮಿಲಿ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಚೇತನಾ ಚಿಕಿತ್ಸಾಲಯದ ಸಂಯುಕ್ತ ಆಶ್ರಯದಲ್ಲಿ ಗುರುವಾರ ಅಲ್ಲಿನ ಸಾಧನಾ ಸಮುದಾಯ ಭವನದಲ್ಲಿ ನಡೆದ ಕ್ಯಾನ್ಸರ್ ಕಾಯಿಲೆ ಅರಿವು ಕಾರ್ಯಕ್ರಮದಲ್ಲಿ ಅವರು ಕಾಯಿಲೆ ಕುರಿತು ವಿಸ್ತೃತ ಮಾಹಿತಿ ನೀಡಿದರು. ಶರೀರದ ವಿವಿಧ ಅಂಗಗಳಿಗೆ ತಗಲುವ ಕ್ಯಾನ್ಸರ್ ಕಾಯಿಲೆ, ಆರಂಭದಲ್ಲೇ ಅದನ್ನು ಪತ್ತೆ ಮಾಡುವ ಕ್ರಮ, ಅದರ ಹಂತಗಳಲ್ಲಿ ಲಭ್ಯವಿರುವ ಚಿಕಿತ್ಸಾ ಕ್ರಮ, ಆರೈಕೆ ಕುರಿತು ದೃಕ್ ಸಾಧನ ಬಳಸಿ ವಿವರ ನೀಡಿದ ಡಾ. ಹೇಮಂತಕುಮಾರ್, ಈ ಕಾಯಿಲೆಯನ್ನು ದೂರವಿಡಲು ಸೇವಿಸಬೇಕಾದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಥ್ಲೆಟಿಕ್ ಫೆಡರೇಷನ್ ಆಫ್ ಇಂಡಿಯಾ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆಯುತ್ತಿರುವ 62ನೇ ರಾಷ್ಟ್ರೀಯ ಮುಕ್ತ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಸರ್ವಿಸಸ್ ತಂಡವನ್ನು ಪ್ರತಿನಿಧಿಸಿದ್ದ ಮಣಿಕಂಠ ಹೋಬಳಿದಾರ್ ಅವರು, 100ಮೀ ಓಟದಲ್ಲಿ ಭಾರತದ ಅತ್ಯಂತ ವೇಗದ ಓಟಗಾರರಾಗಿ ದಾಖಲೆ ಮಾಡಿ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ. 100ಮೀ. ಓಟದ ಸೆಮಿಫೈನಲ್‌ನಲ್ಲಿ 10.23 ಸೆಕೆಂಡುಗಳಲ್ಲಿ ಓಡಿ ರಾಷ್ಟ್ರೀಯ ದಾಖಲೆ ಬರೆದಿದ್ದ 21 ವರ್ಷದ ಮಣಿಕಂಠ, 2015ರಲ್ಲಿ ಒಡಿಶಾದ ಅಮಿಯಾ ಕುಮಾರ್ ಮಲ್ಲಿಕ್ 10.26 ಸೆಕೆಂಡುಗಳಲ್ಲಿ ಓಡಿದ್ದ ರಾಷ್ಟ್ರೀಯ ದಾಖಲೆ ಮುರಿದರು. ರಾಷ್ಟ್ರೀಯ ದಾಖಲೆಯೊಂದಿಗೆ ಗುರುವಾರ ನಡೆದ ಫೈನಲ್ನಲ್ಲಿಯೂ ಕೂಡ ಕೇವಲ 10.42 ಸೆಕೆಂಡ್ಗಳಲ್ಲಿ ಓಟ ಮುಗಿಸಿದ ಮಣಿಕಂಠ ಅಗ್ರಸ್ಥಾನದೊಂದಿಗೆ ಚಿನ್ನಕ್ಕೆ ಕೊರಳೊಡ್ಡಿದರು. ಬೈಂದೂರು ಪಡುವರಿಯ ಮಂಜುನಾಥ ಹೋಬಳಿದಾರ್ ಹಾಗೂ ದಿ. ಸುಂದರಿ ಅವರ ಪುತ್ರರಾದ ಮಣಿಕಂಠ ಅವರು 2020ರಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಅಥ್ಲೆಟಿಕ್ಸ್ನಲ್ಲಿ ವಿವಿಧ ಪದಕ ಗಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪ್ರಾಕೃತಿಕ ದುರಂತದ ಸಮಯದಲ್ಲಿ ಸಾರ್ವಜನಿಕರಿಗೆ ಪರಿಣಾಮಕಾರಿ ತುರ್ತು ಸಂದೇಶ ನೀಡುವ ಸಲುವಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೆಲ್ ಬ್ರಾಡ್ಕಾಸ್ಟ್ ಅಲರ್ಟ್ ಸಿಸ್ಟಮ್ ಪ್ರಯೋಗಾರ್ಥ ಪರೀಕ್ಷೆ ನಡೆಸಿದ್ದು, ಅ.12ರ ಬೆಳಿಗ್ಗೆ 11:45ರ ವೇಳೆಗೆ ಕರ್ನಾಟಕದ ಬಹುಪಾಲು ಸಾರ್ವಜನಿಕರಿಗೆ ಈ ಸಂದೇಶ ಸ್ವೀಕಾರವಾಗಿದೆ. ಇಂದು ಪ್ರಾಯೋಗಿಕವಾಗಿ ಪಾಪ್-ಅಪ್ ಅಧಿಸೂಚನೆಯು ಫ್ಲ್ಯಾಷ್ ಮೆಸೆರೂ ರೂಪದಲ್ಲಿ ಬಂದಿದ್ದು ವಿಭಿನ್ನ ಎಚ್ಚರಿಕೆಯ ಶಬ್ದವನ್ನೂ ಒಳಗೊಂಡಿತ್ತು. ಗೊಂದಲ ತಪ್ಪಿಸಲು ಮಾದರಿ ಪರೀಕ್ಷಾ ಸಂದೇಶ” ಎಂದು ಸ್ಪಷ್ಟವಾಗಿ ಲೇಬಲಿನಲ್ಲಿ ಸೂಚಿಸಲಾಗಿತ್ತು. ಪ್ರಾಕೃತಿಕ ವಿಪತ್ತುಗಳ ಸಮಯದಲ್ಲಿ ತುರ್ತು ಸಂವಹನವನ್ನು ಹೆಚ್ಚಿಸಲು ಮತ್ತು ನಮ್ಮ ನಾಗರಿಕರ ಸುರಕ್ಷತೆ ಮತ್ತು ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳುವ ಸಲುವಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಹಯೋಗದೊಂದಿಗೆ ದೂರಸಂಪರ್ಕ ಇಲಾಖೆಯು ಸೆಲ್ ಬ್ರಾಡ್ಕಾಸ್ಟ್ ಅಲರ್ಟ್ ಸಿಸ್ಟಮ್ ಪರೀಕ್ಷೆಯನ್ನು ನಡೆಸುತ್ತಿರುವುದನ್ನು ಖಚಿತಪಡಿಸಲಾಗಿದೆ. ಸೆಲ್ ಬ್ರಾಡ್ಕಾಸ್ಟ್ ಎಚ್ಚರಿಕೆ ವ್ಯವಸ್ಥೆಯು ಅತ್ಯಾಧುನಿಕ ತಂತ್ರಜ್ಞಾನವಾಗಿದ್ದು, ಗೊತ್ತುಪಡಿಸಿದ ಭೌಗೋಳಿಕ ಪ್ರದೇಶದ ಎಲ್ಲಾ ನಿವಾಸಿಗಳ ಮೊಬೈಲ್ ಸಾಧನಗಳಿಗೆ ವಿಪತ್ತಿಗೆ ಸಂಬಂಧಿಸಿದಂತೆ ನಿರ್ಣಾಯಕ ಮತ್ತು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸ್ವಚ್ಛತೆಗಾಗಿ ಒಂದೆಡೆ ನಿರಂತರ ಅಭಿಯಾನಗಳು ನಡೆಯುತ್ತಿದ್ದರೇ, ಇನ್ನೊಂದೆಡೆ ರಸ್ತೆಯ ಇಕ್ಕೆಲಗಳಲ್ಲಿ, ಹೊಳೆ, ಕೆರೆ ಹಾಗೂ ಸಮುದ್ರದ ಬದಿಯಲ್ಲಿ ಅಷ್ಟೇ ಪ್ರಮಾಣದಲ್ಲಿ ಕಸದ ರಾಶಿ ಬೀಳುತ್ತಿರುವುದನ್ನು ಕಾಣುತ್ತಿದ್ದೇವೆ. ಇದಕ್ಕೆ ಕಳವಾಡಿಯ ಈ ಕೆರೆಯೂ ಹೊರತಾಗಿಲ್ಲ. ಬೈಂದೂರು ಕೊಲ್ಲೂರು 766ಸಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ಕಳವಾಡಿ ಕೆರೆ ಪರಿಸರ ತ್ಯಾಜ್ಯದ ಸುರಿಯುವ ಅಡ್ಡವಾಗಿ ಪರಿಣಮಿಸಿದೆ. ವಾಹನಗಳಲ್ಲಿ ಬರುವ ಸಾರ್ವಜನಿಕರು ತಮ್ಮ ಮನೆಯ ತ್ಯಾಜ್ಯ ,ಕಸಗಳನ್ನ ರಸ್ತೆ ಪಕ್ಕದಲ್ಲಿ ಎಸೆದು ಹೋಗುತ್ತಿದ್ದಾರೆ, ಸ್ಥಳೀಯ ಸಂಘ ಸಂಸ್ಥೆಗಳು ಆಗಾಗ ಸ್ವಚ್ಛತಾ ಅಭಿಯಾನ ನಡೆಸಿ ಕಸವನ್ನು ವಿಲೇವಾರಿ ಮಾಡಿದರೂ ಮತ್ತೆ ಅಲ್ಲಿಯೇ ಕಸ ಎಸೆಯುವ ಪ್ರವೃತ್ತಿ ಹೆಚ್ಚುತ್ತಿದೆ. ರಾಷ್ಟ್ರೀಯ ಹೆದ್ದಾರಿ ರಸ್ತೆ ಬದಿಯಲ್ಲಿ ಕಸ ತುಂಬಿಕೊಂಡಿದ್ದು ಮಳೆಗೆ ಕೊಳೆತು ದುರ್ವಾಸನೆ ಬರುತ್ತಿದೆ. ಇದರಿಂದ ಸೊಳ್ಳೆಗಳ ಕಾಟ ಹೆಚ್ಚಾಗಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಹಲವು ವರ್ಷಗಳಿಂದ ಕಸದ ಸಮರ್ಪಕ ವಿಲೇವಾರಿ ಮಾಡಲಾಗಿಲ್ಲ ಎಂದು ಸಾರ್ವಜನಿಕರು ದೂರುತ್ತಿದ್ದಾರೆ. ಹೀಗೆ ನಿರಂತರವಾಗಿ ಕಸ ಎಸೆಯುವವರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮಂಗಳೂರು ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾಗಿದ್ದು, 2021 ರಲ್ಲಿ ವಲಯ ಅರಣ್ಯಾಧಿಕಾರಿ ವಿಭಾಗದಲ್ಲಿ ಅರಣ್ಯ ಸಂರಕ್ಷಣೆ ಮತ್ತು ಅಭಿವೃದ್ದಿ ಸಾಧನೆಗಳನ್ನು ಪರಿಗಣಿಸಿ, ಅರಣ್ಯ ಇಲಾಖೆಯು ನೀಡುವ ” ಮುಖ್ಯಮಂತ್ರಿಗಳ ಚಿನ್ನದ ಪದಕವನ್ನು ಸ್ವೀಕರಿಸಿರುವ ಪಿ. ಶ್ರೀಧರ ಅವರಿಗೆ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತ ಮಂಡಳಿ ಅಳ್ವೆಗದ್ದೆ ಶಿರೂರು ಇವರ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಅಧ್ಯಕ್ಷರಾದ ಗಣಪತಿ ಮೊಗವೀರ, ಗೌರವ ಅಧ್ಯಕ್ಷರಾದ ನಾರಾಯಣ ಟಿ. ಅಳ್ವೆಗದ್ದೆ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ರಾಮ ಎನ್ ಅಳ್ವೆಗದ್ದೆ, ಕೋಶಾಧಿಕಾರಿ ವಿಶ್ವನಾಥ ಮೊಗವೀರ, ಬೈಂದೂರು ವಲಯ ಭಜನಾ ಒಕ್ಕೂಟದ ಅಧ್ಯಕ್ಷರಾದ ಅಶ್ವತ್ ನಾರಾಯಣ, ಉಡುಪಿ ಜಿಲ್ಲಾ ಭಜನಾ ಒಕ್ಕೂಟದ ಪದಾಧಿಕಾರಿ ಪಾಂಡುರಂಗ ಅಳ್ವೆಗದ್ದೆ ಹಾಗೂ ಪಿ. ಶ್ರೀಧರ ಅವರ ಕುಟುಂಬದವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ತಾಲೂಕು ಯುವ ಬಂಟರ ಸಂಘ ರಿ., ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ ರಕ್ತ ನಿಧಿ ಕೇಂದ್ರ ಕುಂದಾಪುರ, ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್, ರಾಷ್ಟ್ರೀಯ ಸೇವಾ ಯೋಜನಾ ಘಟಕ ಡಾ.ಬಿ.ಬಿ ಹೆಗ್ಡೆ ಕಾಲೇಜು, ಭಂಡಾಕಾರ್ಸ್ ಆರ್ಟ್ಸ್ ಮತ್ತು ಸಾಯನ್ಸ್ ಕಾಲೇಜು, ಶ್ರೀ ವರದರಾಜ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೋಟೇಶ್ವರ ಇವರ ಸಹಯೋಗದೊಂದಿಗೆ ಅಕ್ಟೋಬರ್ 21ರ ಶನಿವಾರ ಆರ್. ಎನ್ .ಶೆಟ್ಟಿ ಸಭಾಂಗಣದಲ್ಲಿ ಬೃಹತ್ ಮಟ್ಟದ ರಕ್ತದಾನ ಶಿಬಿರ ನೆತ್ತರ ನೆರವು ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದ ಸಂಯೋಜಕರಾಗಿ ಕುಂದಾಪುರ ತಾಲೂಕು ಯುವ ಬಂಟರ ಸಂಘದ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿಗಳು, ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ಕಾರ್ಯದರ್ಶಿ ಉದಯ್ ಕುಮಾರ್ ಶೆಟ್ಟಿ ಮಚ್ಚಟ್ಟು ಸರ್ವಾನುಮತದಿಂದ ಆಯ್ಕೆಯಾಗಿರುತ್ತಾರೆ ಎಂದು ಕುಂದಾಪುರ ತಾಲೂಕು ಯುವ ಬಂಟರ ಸಂಘದ ಗೌರವಾಧ್ಯಕ್ಷರಾದ ಬಿ ಉದಯ್ ಕುಮಾರ್ ಶೆಟ್ಟಿ ಹಾಗೂ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ…

Read More