ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನಾಯ್ಕನಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ 2024-25ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯು ಶ್ರೀ ಮಹಾಗಣಪತಿ ಸಭಾಭವನ ಮಟ್ನಕಟ್ಟೆಯಲ್ಲಿ ಜರಗಿತು. ಸಂಘದ ಅಧ್ಯಕ್ಷರಾದ ಸುಂದರ ಆರ್. ಕೊಠಾರಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಹಾಲುಗಳ ಗುಣಮಟ್ಟ ಹಾಗೂ ಸುಚಿತ್ವದ ಬಗ್ಗೆ ವಿವರವಾಗಿ ಹೇಳುವುದರೊಂದಿಗೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಹಾಲು ಪೂರೈಸುವಲ್ಲಿ ಸದಸ್ಯರು ಸಹಕರಿಸುವಂತೆ ತಿಳಿಸಿದ ಅವರು ವರದಿ ವರ್ಷದಲ್ಲಿ ಸಂಘವು ರೂ. 3.37ಲಕ್ಷ ನಿವ್ವಳ ಲಾಭಗಳಿಸಿದ್ದು, ಶೇ 15 ಡಿವಿಡೆಂಡು ಹಾಗೂ ಪ್ರತಿ ಲೀಟರ್ ಹಾಲಿಗೆ ರೂ.1.15ರಂತೆ ಬೋನಸ್ ಘೋಷಿಸಿದರು. ವಿಸ್ತರಣಾಧಿಕಾರಿಗಳಾದ ರಾಜಾರಾಮ ಅವರು ಮಾತನಾಡಿ, ಒಕ್ಕೂಟದಿಂದ ರೈತರಿಗೆ ದೊರೆಯುವ ಸೌಲಭ್ಯಗಳ ಬಗ್ಗೆ ತಿಳಿಸಿ, ಪ್ರಯೋಜನವನ್ನು ಹೆಚ್ಚು ಹೈನುಗಾರರು ಪಡೆಯಬೇಕು ಎಂದರು. ಸಂಘದ ನಿರ್ದೇಶಕರುಗಳಾದ ಗೋಪಾಲ ಗಾಣಿಗ, ರಾಮ ಪೂಜಾರಿ, ವಿಜಯಾ ಪ್ರಭು, ಸವಿತಾ ದೇವಡಿಗ, ಮುತ್ತು ದೇವಾಡಿಗ, ಕೃಷ್ಣಿ ದೇವಾಡಿಗ, ಸುಶೀಲ ದೇವಾಡಿಗ, ಭಾಗೀರಥಿ ಪೂಜಾರಿ, ಗೋವಿಂದು ಕೆ. ಸಭೆಯಲ್ಲಿ ಉಪಸ್ಥಿತರಿದ್ದರು.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ರಾಜ್ಯದ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ / ಸೇವಾ ಸಂಸ್ಥೆಗಳ ಕಟ್ಟಡಗಳ ಮೇಲೆ ಮಕ್ಕಳ ಸಹಾಯವಾಣಿ ಸಂಖ್ಯೆ 1098ನ್ನು ಕಡ್ಡಾಯವಾಗಿ ಬರೆಸಲು ಮುಖ್ಯ ಕಾರ್ಯದರ್ಶಿಗಳು ಸೂಚನೆ ನೀಡಿದ್ದಾರೆ. ಮಕ್ಕಳ ಹಕ್ಕುಗಳ ರಕ್ಷಣೆ ಇಂದಿನ ತುರ್ತು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಅನುಷ್ಠಾನಗೊಂಡಿರುವ ಮಿಷನ್ ವಾತ್ಸಲ್ಯ ಯೋಜನೆಯು ಮಕ್ಕಳ ಅಭಿವೃದ್ಧಿ ಮತ್ತು ರಕ್ಷಣೆಯ ಆದ್ಯತೆಯನ್ನು ಸಾಧಿಸುವ ಒಂದು ಮಾರ್ಗವಾಗಿದೆ. ಸಂಕಷ್ಟದಲ್ಲಿನ ಹಾಗೂ ಸವಾಲಿನಲ್ಲಿರುವ ಮಕ್ಕಳ ಹಿತರಕ್ಷಣೆಗೆ ಹೆಚ್ಚು ಒತ್ತು ನೀಡುತ್ತಿದೆ. ಇಂತಹ ಮಕ್ಕಳ ಗುರುತಿಸುವಿಕೆ, ಸಂಕಷ್ಟ ಸ್ಥಿತಿಯಲ್ಲಿ ಮಾಹಿತಿ ಹಂಚಿಕೊಳ್ಳಲು ಹಾಗೂ ಪುನರ್ ವಸತಿ ಸೇವೆ ಕಲ್ಪಿಸುವಲ್ಲಿ ಮಕ್ಕಳ ಸಹಾಯವಾಣಿ 1098 ಮಹತ್ವದ ಪಾತ್ರ ವಹಿಸುತ್ತದೆ. ಈ ಸಂಖ್ಯೆಯನ್ನು ವ್ಯಾಪಕವಾಗಿ ಪ್ರಚಾರ ಮಾಡಿದಲ್ಲಿ ಬಾಲ್ಯವಿವಾಹ, ಬಾಲಕಾರ್ಮಿಕತೆ ಸಂಕಷ್ಟದಲ್ಲಿನ ಮಕ್ಕಳ ರಕ್ಷಣೆ ಸೇರಿದಂತೆ ವಿವಿಧ ರೀತಿಯ ಮಕ್ಕಳ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಸಾಧ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರದ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ, ಶೈಕ್ಷಣಿಕ ಸಂಸ್ಥೆಗಳು, ಖಾಸಗಿ ಸೇವಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಖರೀದಿಸಲು ಅಗತ್ಯವಿರುವ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಸೂಚನೆ ನೀಡಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ನಡೆದ ಭತ್ತದ ಬೆಂಬಲ ಬೆಲೆಯ ಟಾಸ್ಕ್ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿಯ ನೋಂದಣಿ ಕಾರ್ಯ ಈಗಾಗಲೇ ಆರಂಭವಾಗಿದ್ದು, ರೈತರು ಅಕ್ಟೋಬರ್ 31ರ ವರೆಗೆ ನೋಂದಣಿ ಮಾಡಿಕೊಳ್ಳಬಹುದು. ಸಾಮಾನ್ಯ ಭತ್ತಕ್ಕೆ 2369 ಹಾಗೂ ಗ್ರೇಡ್ ಎ ಭತ್ತಕ್ಕೆ 2389 ರೂ. ನಿಗಧಿಪಡಿಸಲಾಗಿದ್ದು, ಉಡುಪಿ ಹಾಗೂ ಕಾರ್ಕಳದ ಎ.ಪಿ.ಎಂ.ಸಿ ಯಾರ್ಡ್ ಮತ್ತು ಕೋಟೇಶ್ವರದ ಕೆ.ಎಫ್.ಸಿ.ಎಸ್.ಸಿ ಗೋದಾಮಿನಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗುವುದು ಎಂದರು. ರೈತರು ಬೆಳೆದಿರುವ ಧಾನ್ಯಗಳಿಗೆ ಸಂಬಂಧಿಸಿದಂತೆ ಕೃಷಿ ಇಲಾಖೆಯಿಂದ ಜಾರಿಗೊಳಿಸಿರುವ ಫ್ರೂಟ್ಸ್ ದತ್ತಾಂಶದಿಂದ ಬೆಳೆ ಮಾಹಿತಿಯನ್ನು ನೇರವಾಗಿ ಪಡೆದು ಕೃಷಿ ಇಲಾಖೆ ಒದಗಿಸಿರುವ ಸರಾಸರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಸೆ.23: ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ವಿಧಾನಸಭಾ ಕ್ಷೇತ್ರ ಚುನಾವಣೆಯಿಂದ ಆರಂಭಗೊಂಡ ಶಾಸಕರಾದ ಗುರುರಾಜ ಗಂಟಿಹೊಳೆ ಹಾಗೂ ಅಂದಿನ ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷರಾಗಿದ್ದ ದೀಪಕ್ ಕುಮಾರ್ ಶೆಟ್ಟಿ ಅವರ ನಡುವಿನ ಮುಸುಕಿನ ಗುದ್ದಾಟ ಮುಂದುವರಿದಿದ್ದು, ಇಂದು ಉಡುಪಿಯಲ್ಲಿ ದಿಶಾ ಸಭೆಯಲ್ಲಿ ಭಾಗವಹಿಸಲು ಬಂದಿದ್ದ ಸಂಸದ ಬಿ.ವೈ. ರಾಘವೇಂದ್ರ ಅವರ ಎದುರೆ ಪರಸ್ಪರ ಮಾತಿನ ಚಕಮಕಿ – ತಳ್ಳಾಡಿಕೊಂಡ ಘಟನೆ ನಡೆದಿದೆ. ಬಿಜೆಪಿ ಪಕ್ಷದಲ್ಲಿ ಬಣ ರಾಜಕೀಯ ಇಲ್ಲ ಎನ್ನುತ್ತಲೇ ಪರಸ್ಪರ ಬಣಗಳಾಗಿ ಮುಂದುವರಿಯುತ್ತಿದ್ದ ಶಾಸಕರಾದ ಗುರುರಾಜ ಗಂಟಿಹೊಳೆ ಹಾಗೂ ಬೈಂದೂರು ಬಿಜೆಪಿ ಮಾಜಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಅವರು ನಡುವಿನ ಮಾತಿನ ಚಕಮಕಿ ಜೋರಾಗಿಯೇ ನಡೆದಿದೆ. ತೆರೆಮರೆಯಲ್ಲಿ ನಡೆಯುತ್ತಿದ್ದ ಪರಸ್ಪರರ ಕಸರತ್ತು ಇಂದು ಸಂಸದರು, ಬಿಜೆಪಿ ಜಿಲ್ಲಾಧ್ಯಕ್ಷರು ಹಾಗೂ ಕುಂದಾಪುರ ಕ್ಷೇತ್ರದ ಶಾಸಕರ ಎದುರೇ ಬಟಾಬಯಲಾಗಿದೆ. ದಿಶಾ ಸಭೆಯಲ್ಲಿ ಭಾಗವಹಿಸುವ ಮುನ್ನ ಉಡುಪಿಯ ಖಾಸಗಿ ಹೋಟೆಲ್‌ನಲ್ಲಿ ಬಿಜೆಪಿ ನಾಯಕರು ಮಾತನಾಡುತ್ತಾ ಕುಳಿತಿದ್ದ ವೇಳೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಸೆ.23: ಜನಸಾಮಾನ್ಯರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಜಲ್ ಜೀವನ್ ಮಿಷನ್ ಯೋಜನೆಯಡಿ ಜಿಲ್ಲೆಯ 19ಕ್ಕೂ ಹೆಚ್ಚು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಮಗಾರಿಗಳು ಸಮಾಧಾನಕರವಾಗಿಲ್ಲ ಎಂಬ ನಿರ್ಣಯವನ್ನು ಗ್ರಾಮ ಪಂಚಾಯತಿ ಮಟ್ಟದಲ್ಲಿ ತೆಗೆದುಕೊಳ್ಳಲಾಗಿದೆ ಈ ಬಗ್ಗೆ ವರದಿ ನೀಡಬೇಕೆಂದು ಅಭಿಯಂತರರಿಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಕೇಂದ್ರ ಸರ್ಕಾರ ಜನರಿಗೆ ಶುದ್ಧ ನೀರು ಕುಡಿಯಬೇಕೆಂಬ ಆಶಯದೊಂದಿಗೆ ಜಲ್ ಜೀವನ್ ಮಿಷನ್ ಯೋಜನೆಯಡಿ ಜಿಲ್ಲೆಯಲ್ಲಿ 687 ಕೋಟಿ ರೂ. ಮೊತ್ತದಲ್ಲಿ 525 ಕಾಮಗಾರಿಗಳನ್ನು ಕೈಗೊಂಡಿದ್ದು, ಅವುಗಳಲ್ಲಿ 487 ಪೂರ್ಣಗೊಂಡಿದ್ದು, 38 ಕಾಮಗಾರಿಗಳು ಪ್ರಗತಿಯಲ್ಲಿದ್ದು, ಶೇ.93 ರಷ್ಟು ಸಾಧನೆಯಾಗಿದೆ. ಆದರೆ ಉಡುಪಿ ತಾಲೂಕಿನ 19 ಗ್ರಾಮ ಪಂಚಾಯತ್‌ಗಳಲ್ಲಿ ಕಾಮಗಾರಿಗಳು ಸರಿಯಾಗಿ ಆಗಿಲ್ಲವೆಂದು ಗ್ರಾಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ಕುಟುಂಬ ಸಮೇತರಾಗಿ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ವೇಳೆ ದೇವಿಯ ದರ್ಶನ ಪಡೆದು ಚಂಡಿಕಾ ಯಾಗದಲ್ಲಿ ಭಾಗಿಯಾದರು. ಅರ್ಚಕ ಸುಬ್ರಹ್ಮಣ್ಯ ಅಡಿಗ ಅವರ ಮಾರ್ಗದರ್ಶನದಲ್ಲಿ ಪೂಜೆ ಸಲ್ಲಿಸಿದರು. ರಿಷಬ್ ಶೆಟ್ಟಿ ಹಾಗೂ ಪ್ರಗತಿ ರಿಷಬ್ ಶೆಟ್ಟಿ ದಂಪತಿಗಳನ್ನು ದೇವಳದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಶೆಟ್ಟಿ ಅವರು ಪ್ರಸಾದ ಗೌರವಿಸಿದರು. ಕಾಂತಾರ ಚಾಪ್ಟರ್ – 1 ಟ್ರೇಲರ್ ಬಿಡುಗಡೆಯ ಮರುದಿನವೇ ನವರಾತ್ರಿ ಅಂಗವಾಗಿ ರಿಷಬ್ ದಂಪತಿಗಳು ಕೊಲ್ಲೂರು ದೇಗುಲಕ್ಕೆ ಭೇಟಿ ನೀಡಿದ್ದಾರೆ. ಕೆರಾಡಿಯವರಾದ ರಿಷಬ್ ಅವರು ನಿರ್ದೇಶಿಸಿ ನಟಿಸಿರುವ ಬಹುನಿರೀಕ್ಷಿತ ಕಾಂತಾರ ಚಾಪ್ಟರ್ – 1 ಸಿನಿಮಾ ಅಕ್ಟೋಬರ್ 02ರಂದು ಬಿಡುಗಡೆಗೊಳ್ಳಲಿದ್ದು, ಚಿತ್ರತಂಡ ಅದರ ತಯಾರಿಯಲ್ಲಿಯೇ ಇದೆ. ಈ ನಡುವೆ ಪತ್ನಿಯ ಹರಕೆ ತೀರಿಸಲು ರಿಷಬ್ ಕೊಲ್ಲೂರು ದೇಗುಲಕ್ಕೆ ಭೇಟಿ ನೀಡಿದ್ದಾರೆ ಎನ್ನಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಸ್ನೇಹಕೂಟ ಮಣೂರು ಇದರ ದಶಮಾನೋತ್ಸವದ ಹಿನ್ನಲೆಯಲ್ಲಿ ವಿವಿಧ ಸರಣಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಇದರ ಭಾಗವಾಗಿ ಇತ್ತೀಚಿಗೆ ಸಾಲಿಗ್ರಾಮದ ತೊಡ್ಕಟ್ಟು ಹೊಸಬದುಕು ಆಶ್ರಮದಲ್ಲಿ ನಮ್ಮ ಸ್ನೇಹ ನೆರವು, ಸಾಂಸ್ಕೃತಿಕ ಕಾರ್ಯಕ್ರಮ ಸಂಪನ್ನಗೊಂಡಿತು. ಕಾರ್ಯಕ್ರಮವನ್ನು ಸ್ನೇಹಕೂಟ ಸಂಚಾಲಕಿ ಭಾರತಿ ವಿ. ಮಯ್ಯ ದೀಪ ಬೆಳಗಿಸಿ, ಉದ್ಘಾಟಿಸಿದರು. ಹೊಸಬದುಕು ಆಶ್ರಮದ ನಿವಾಸಿಗಳಿಗೆ ವಿವಿಧ ಪರಿಕರಗಳನ್ನು ಸ್ನೇಹಕೂಟದ ನಿರ್ದೇಶಕ ವಿಷ್ಣಮೂರ್ತಿ ಮಯ್ಯರು, ಆಶ್ರಮದ ಮುಖ್ಯಸ್ಥ ವಿನಯಚಂದ್ರ ಸಾಸ್ತಾನ ಅವರಿಗೆ ಹಸ್ತಾಂತರಿಸಿದರು. ಆಶ್ರಮದ ನಿವಾಸಿಗಳಿಗೆ ಹಾಗೂ ಉಪಹಾರದ ವ್ಯವಸ್ಥೆ ಕಲ್ಪಿಸಿದರು. ಮುಖ್ಯ ಅತಿಥಿಯಾಗಿ ಆಟ್೯ ಆಫ್ ಲಿವಿಂಗ್‌ನ ದಕ್ಷಿಣ ದಿವ್ಯ ಸಾಲಿಗ್ರಾಮ, ಪತ್ರಕರ್ತ ರವೀಂದ್ರ ಕೋಟ, ಆಶ್ರಮದ ನಿರ್ದೇಶಕಿ ರಾಜಶ್ರೀ ವಿನಯಚಂದ್ರ ಉಪಸ್ಥಿತರಿದ್ದರು. ಸ್ನೇಹಕೂಟದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜತೆಗೆ ಕ್ರೀಡೆ, ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸುಜಾತ ಬಾಯರಿ ಸ್ವಾಗತಿಸಿ, ಕಾರ್ಯಕ್ರನವನ್ನು ಸ್ನೇಹಕೂದ ಶ್ರೀದೇವಿ ಹಂದೆ ನಿರೂಪಿಸಿ, ಭಾರತಿ ಮಯ್ಯ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ರೇಬಿಸ್ ರೋಗವು ಪ್ರಾಣಕ್ಕೆ ಮಾರಕವಾಗಿರುವ ಕಾಯಿಲೆಯಾಗಿರುವುದರಿಂದ ಆ ಬಗೆಗೆ ಪ್ರತಿಯೊಬ್ಬರಲ್ಲೂ ಕೂಡ ಸಂಪೂರ್ಣ ಅರಿವು ಇರಬೇಕಾದದ್ದು ಅತಿ ಅವಶ್ಯಕ ಎಂದು ಗುಜ್ಜಾಡಿ ಪಶು ಚಿಕಿತ್ಸಾಲಯದ ಆರೋಗ್ಯ ಅಧಿಕಾರಿ ಡಾ. ಅರುಣ್ ಕೆಪಿ ಅಭಿಪ್ರಾಯ ಪಟ್ಟರು. ಅವರು ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಪಂಚಾಯತ್ ಉಡುಪಿ, ಪಶು ಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಡುಪಿ, ಎಸ್‌ವಿ ಕಾಮರ್ಸ್ ಕ್ಲಬ್ ಗಂಗೊಳ್ಳಿ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಸಂಯುಕ್ತ ಆಶ್ರಯದಲ್ಲಿ ವಿಶ್ವ ರೇಬಿಸ್ ದಿನಾಚರಣೆಯ ಅಂಗವಾಗಿ ನಡೆದ ಹುಚ್ಚು ನಾಯಿ ರೇಬಿಸ್ ರೋಗದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು. ಮನೆಯಲ್ಲಿನ ಸಾಕುಪ್ರಾಣಿಗಳಿಗೂ ಕೂಡ ಸಮಯಕ್ಕೆ ಸರಿಯಾಗಿ ವ್ಯಾಕ್ಸಿನೇಷನ್ ಮಾಡಿಸಬೇಕು. ಯಾವುದೇ ಕಾರಣಕ್ಕೂ ಈ ವಿಚಾರದಲ್ಲಿ ಅಜಾಗರುಕತೆಯಿಂದ ವರ್ತಿಸಬಾರದು ಎಂದರು. ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂಸಿ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ಪ್ರತಿನಿಧಿ ಮಾನ್ಯ ಖಾರ್ವಿ , ಎಸ್‌ವಿ ಕಾಮರ್ಸ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ತ್ರಾಸಿ ಗ್ರಾಮ ಪಂಚಾಯತ್, ಕರಾವಳಿ ಕಾವಲು ಪಡೆ ಪೊಲೀಸ್ ಠಾಣೆ ಗಂಗೊಳ್ಳಿ ಹಾಗೂ ಸಿಬ್ಬಂದಿ ವರ್ಗ, ಸ್ವಚ್ಛ ಕರಾವಳಿ ಮಿಷನ್ ಸದಸ್ಯರು, ಎಸ್.ವಿ. ಪದವಿ ಪೂರ್ವ ಕಾಲೇಜು, ಗಂಗೊಳ್ಳಿ ಎನ್.ಎಸ್.ಎಸ್. ಸ್ವಯಂಸೇವಕರು ಮತ್ತು ಖಾರ್ವಿ ಆನ್‌ಲೈನ್ ಕುಂದಾಪುರ ಇವುಗಳ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಸ್ವಚ್ಛತಾ ದಿನಾಚರಣೆಯ ಹಾಗೂ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದ ಭಾಗವಾಗಿ ತ್ರಾಸಿ ಬೀಚ್‌ನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ ನಡೆಯಿತು. ತ್ರಾಸಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಿಥುನ್ ಎಂ.ಡಿ. ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ತ್ರಾಸಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶೋಭಾ ಎಸ್. ಹಾಗೂ ಸಿಬ್ಬಂದಿ ವರ್ಗ, ಎನ್.ಎಸ್. ಎಸ್. ಯೋಜನಾಧಿಕಾರಿ ರಾಜೇಶ್ ವಕ್ವಾಡಿ ಮತ್ತು ಪೂಜಾ ಕುಂದರ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಬೈಂದೂರಿನ ಸುರಭಿಯ ಹಿರಿಯ ಹಾಗೂ ಕಿರಿಯ ಕಲಾವಿದ ಕೂಡುವಿಕೆಯಲ್ಲಿ ಪ್ರಥಮ ಬಾರಿಗೆ ಯಕ್ಷಗಾನ ವೈಭವ ನಡೆಯಲಿದೆ. ಸೆ.24 ಬುಧವಾರ ಸಂಜೆ 7.30ಕ್ಕೆ ಮೈಸೂರು ರಮಾ ಗೋವಿಂದ ರಂಗಮಂದಿರದಲ್ಲಿ ಸುರಭಿ ಕಲಾವಿದರಿಂದ ಸುಧನ್ವಾರ್ಜುನ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಯಕ್ಷಗಾನವನ್ನು ಸಂಸ್ಥೆಯ ಯಕ್ಷಗುರು ಪ್ರಶಾಂತ ಮಯ್ಯ ದಾರಿಮಕ್ಕಿ ಅವರು ನಿರ್ದೇಶನ ಮಾಡಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
