ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜ್ವರಕ್ಕಾಗಿ ನೀಡಲಾದ ಇಂಜೆಕ್ಷನ್ ಅಡ್ಡ ಪರಿಣಾಮದಿಂದ ಯುವಕನೋರ್ವ ಮೃತಪಟ್ಟ ಘಟನೆ ಬೆಂಗಳೂರು ಕೆ.ಪಿ. ಅಗ್ರಹಾರದಲ್ಲಿ ನಡೆದಿದೆ. ಹೊಸಂಗಡಿ ಬೆದ್ರಳ್ಳಿ ನಿವಾಸಿ ದಿ. ಚಂದ್ರ ಶೆಟ್ಟಿ ಎಂಬುವವರ ಪುತ್ರ ಅಮರ್ ಶೆಟ್ಟಿ [31 ವರ್ಷ] ಮೃತ ದುರ್ದೈವಿ. ದುಬೈನಲ್ಲಿ ಎಸಿ ಮೆಕ್ಯಾನಿಕ್ ಆಗಿ ಕೆಲಸ ಮಾಡಿಕೊಂಡಿದ್ದ ಅಮರ್ ಶೆಟ್ಟಿ ಒಂದು ವರ್ಷದ ಹಿಂದಷ್ಟೇ ಊರಿಗೆ ಹಿಂದಿರುಗಿ ಬೆಂಗಳೂರಿನಲ್ಲಿ ಹೋಟೆಲ್ ವ್ಯವಹಾರ ಮಾಡಿಕೊಂಡಿದ್ದರು. ಆ.13ರಂದು ಕೆ.ಪಿ. ಅಗ್ರಹಾರದ ಸಂಬಂಧಿಯ ಮನೆಗೆ ತೆರಳಿದ್ದಾಗ ಮೈಬಿಸಿ ಇರುವುದನ್ನು ಗಮನಿಸಿ ಅಲ್ಲಿಯೇ ಸಮೀಪವಿದ್ದ ಖಾಸಗಿ ಕ್ಲಿನಿಕ್ಗೆ ತೆರಳಿದ್ದು ವೈದ್ಯರು ಪರೀಕ್ಷಿಸಿ ಜ್ವರವೆಂದು ಇಂಜೆಕ್ಷನ್ ಹಾಗೂ ಮಾತ್ರೆಗಳನ್ನು ನೀಡಿದ್ದರು. ಆದರೆ ಇಂಜೆಕ್ಷನ್ ನೀಡಿದ ಸೋಟದ ಭಾಗ ಇದ್ದಕ್ಕಿದ್ದಂತೆ ಊದಿಕೊಂಡಿದ್ದು, ಜೊತೆಗೆ ನೋವು ಕೂಡ ಕಾಣಿಸಿಕೊಂಡಿದೆ. ಹಾಗಾಗಿ ಆ.15ರಂದು ರಾಜಾಜಿನಗರದ ರೂಮಿಗೆ ಸಮೀಪದ ಖಾಸಗಿ ಕ್ಲಿನಿಕ್ಗೆ ತೆರಳಿದ್ದು, ವೈದ್ಯರು ಪರೀಕ್ಷಿಸಿ ಮಾತ್ರೆ ಹಾಗೂ ಗ್ಲೂಕೋಸ್ ನೀಡಿದ್ದರು. ಒಂದು ದಿನದ ಬಳಿಕ ನೋವು ಕಡಿಮೆಯಾಗದಿದ್ದರೆ ಚಿಕಿತ್ಸೆ ನೀಡುವುದಾಗಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ,ಅ.18: ಇಂದು ನಡೆದ ಅಂಪಾರು ವೃತ್ತ ಮಟ್ಟದ ಖೋ ಖೋ ಪಂದ್ಯಾಟದಲ್ಲಿ ಶಂಕರನಾರಾಯಣದ ಮದರ್ ತೆರೇಸಾ ಆಂಗ್ಲ ಮಾಧ್ಯಮ ಶಾಲೆ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಪ್ರಾಂಶುಪಾಲರು, ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ಸಭಾಭವನದಲ್ಲಿ ಮೂಕಾಂಬಿಕಾ ಪರಿಸರ ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ, ಗ್ರಾಪಂ ಕೊಲ್ಲೂರು, ಅರಣ್ಯ ಇಲಾಖೆ ವನ್ಯಜೀವಿ ವಿಭಾಗ, ಸ್ಥಳೀಯ ಪದವಿಪೂರ್ವ ಕಾಲೇಜು, ಪ್ರೌಢಶಾಲೆ, ಸನ್ಮನಸ್ ಸಮಿತಿ, ಟಿಪ್ ಸೆಷನ್ಸ್ ಎನ್ಜಿಓ ಹಾಗೂ ವಿಜಯವಾಣಿ ಆಶ್ರಯದಲ್ಲಿ ಶುಕ್ರವಾರ ಕೊಲ್ಲೂರು ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗಾಗಿ ಪ್ಲಾಸ್ಟಿಕ್ ನಿಷೇಧ ಅರಿವು ಕಾರ್ಯಕ್ರಮ ಆಯೋಜಿಸಲಾಗಿತ್ತು. ರಾಜ್ಯ ಸಂಪನ್ಮೂಲ ವ್ಯಕ್ತಿ ಜೋಸೆಫ್ ಜಿ. ಎಂ. ರೆಬೆಲ್ಲೊ ಅವರು ಪ್ರಾತ್ಯಕ್ಷಿಕೆ ಮೂಲಕ ಉಪನ್ಯಾಸ ನೀಡಿ, ನಾವುಗಳು ಬಳಸಿ ಎಸೆಯುವ ಪ್ಲಾಸ್ಟಿಕ್ ಕಪ್ನಲ್ಲಿ ಬಿಸಿ ಪಾನೀಯವನ್ನು ಸೇವಿಸಿದರೆ ನಮ್ಮ ದೇಹದೊಳಗೆ ಪ್ಲಾಸ್ಟಿಕ್ ಕಣಗಳು ಸೇರಿಕೊಳ್ಳುತ್ತವೆ. ಖರಗ್ಪುರ್ ಐಐಟಿ ನಡೆಸಿದ ಸಂಶೋಧನೆಯ ಪ್ರಕಾರ ಪ್ರತಿನಿತ್ಯ ಈ ಕಪ್ನಲ್ಲಿ ಬಿಸಿಪಾನೀಯ ಸೇವೆನೆಯಿಂದ ಸುಮಾರು ೭೫ ಸಾವಿರ ಸೂಕ್ಷ್ಮ ಪ್ಲಾಸ್ಟಿಕ್ ಕಣಗಳು ದೇಹಕ್ಕೆ ಹೋಗುತ್ತವೆ. ಅಲ್ಲದೇ ಪ್ಲಾಸ್ಟಿಕ್ ಬಿಸಿ ಮಾಡಿದರೆ ಅಥವಾ ಸುಟ್ಟರೆ ಕಾರ್ಸಿನೋಜನ್ ಮತ್ತು ವಿನೈಲ್ ಕ್ಲೋರೈಡ್ ಮಾನೋಮರ್ ಉತ್ಪತ್ತಿಯಾಗುತ್ತದೆ. ಇದು ಪಿವಿಸಿಕ್ಕಿಂತ ಹತ್ತು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾಳಾವರ ಗ್ರಾಮ ಪಂಚಾಯತ್ ಎರಡನೆಯ ಅವಧಿಗೆ ಅಧ್ಯಕ್ಷರಾಗಿ ಸಿಪಿಎಂ ಬೆಂಬಲಿತ ಮಂಜುನಾಥ್ ಶೆಟ್ಟಿಗಾರ್, ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಪಾರ್ವತಿ ಶೇರಿಗಾರ್ ಆಯ್ಕೆಯಾಗಿದ್ದಾರೆ. ಒಟ್ಟು 17 ಮಂದಿ ಸದಸ್ಯ ಬಲವಿರುವ ಕಾಳಾವರ ಪಂಚಾಯತಿಯಲ್ಲಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆಮಾಡಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಿಘಂಟು ಬ್ರಹ್ಮ ಜಿ. ವೆಂಕಟಸುಬ್ಬಯ್ಯ ಭಾಷಾ ಸಮ್ಮಾನ್ 2023ನೇ ಸಾಲಿನ ಈ ಪುರಸ್ಕಾರಕ್ಕೆ ‘ಕುಂದಾಪ್ರ ಕನ್ನಡ’ ನಿಘಂಟು ಸಂಪಾದಕ ಪಂಜು ಗಂಗೊಳ್ಳಿ ಅವರು ಆಯ್ಕೆಯಾಗಿದ್ದಾರೆ. ಸುಮಾರು 20 ವರ್ಷಗಳ ಅವಿರತ ಶ್ರಮ, ಅಧ್ಯಯನ, ಸಂಶೋಧನೆ ಮತ್ತು ಸಂಘಟನೆಯಿಂದ ಸಿದ್ಧವಾಗಿರುವ ಕುಂದಾಪ್ರ ಕನಡ ನಿಘಂಟು, ಕನ್ನಡ ಭಾಷೆಗೆ ಅತ್ಯುತ್ತಮ ಕೊಡುಗೆ. ಜಿ.ವಿ ಅವರ 111ನೇ ಹುಟ್ಟುಹಬ್ಬದ ದಿನವಾದ ಆ.23ರಂದು ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಕಥೆಕೂಟದ ಗೋಪಾಲಕೃಷ್ಣಕುಂಟನಿ ತಿಳಿಸಿದ್ದಾರೆ. ‘ಕಥೆಕೂಟ’ ಬಳಗವು ನಿಘಂಟು ಬ್ರಹ್ಮ ಜಿ. ವೆಂಕಟಸುಬ್ಬಯ್ಯ ಸ್ಮರಣಾರ್ಥ, ಭಾಷೆಯಲ್ಲಿ ವಿಶಿಷ್ಟ ಪ್ರಯೋಗಗಳನ್ನು ಮಾಡಿದ, ಭಾಷೆಗೆ ಸೃಜನಶೀಲ ಕೊಡುಗೆ ನೀಡಿದ ಮತ್ತು ಭಾಷೆಯ ಸಾಧ್ಯತೆಗಳನ್ನು ವಿಸ್ತರಿಸುವ ಕೆಲಸದಲ್ಲಿ ನಿರತರಾಗಿರುವ ಪ್ರತಿಭಾವಂತರಿಗೆ ಪ್ರತಿವರ್ಷ ಜಿ. ವೆಂಕಟಸುಬ್ಬಯ್ಯ ಭಾಷಾ ಸಮ್ಮಾನ್ ಪುರಸ್ಕಾರ ನೀಡಿ ಗೌರವಿಸಲು ನಿರ್ಧರಿಸಿದೆ. ಪ್ರಶಸ್ತಿಯು 10 ಸಾವಿರ ರೂ. ನಗದು, ಫಲಕವನ್ನು ಒಳಗೊಂಡಿರುತ್ತದೆ. ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ, ಗಿರೀಶ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಾವುಂದ ಗ್ರಾಮ ಪಂಚಾಯತ್ ಎರಡನೇ ಅವಧಿಯ ನೂತನ ಅಧ್ಯಕ್ಷರಾಗಿ ನರಸಿಂಹ ದೇವಾಡಿಗ ಹಾಗೂ ಉಪಾಧ್ಯಕ್ಷರಾಗಿ ಸುಲೋಚನಾ ಗಾಣಿಗ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಬೆಂಬಲಿತ 12 ಹಾಗೂ ಬಿಜೆಪಿ ಬೆಂಬಲಿತ 3 ಸದಸ್ಯ ಬಲವಿರುವ ನಾವುಂದ ಪಂಚಾಯತಿಯಲ್ಲಿ, ಎರಡನೇ ಅವಧಿಯ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಅ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮೀಸಲಾತಿ ಬಂದಿತ್ತು. ನರಸಿಂಹ ದೇವಾಡಿಗ ಅವರು 5ನೇ ಭಾರಿ ನಾವುಂದ ಗ್ರಾಮ ಪಂಚಾಯತ್ ಸದಸ್ಯರಾಗಿದ್ದು, 3ನೇ ಭಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗೋಳಿಹೊಳೆ ಗ್ರಾಮ ಪಂಚಾಯತಿಯ ಎರಡನೇ ಅವಧಿಯ ನೂತನ ಅಧ್ಯಕ್ಷರಾಗಿ ವಸಂತ ಹೆಗ್ಡೆ ಹಾಗೂ ಉಪಾಧ್ಯಕ್ಷರಾಗಿ ಇಂದಿರಾ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಬೆಂಬಲಿತ 9 ಹಾಗೂ ಬಿಜೆಪಿ ಬೆಂಬಲಿತ 7 ಸದಸ್ಯ ಬಲವಿರುವ ಗೋಳಿಹೊಳೆ ಪಂಚಾಯತಿಯಲ್ಲಿ, ಎರಡನೇ ಅವಧಿಯ ಅಧ್ಯಕ್ಷರ ಸ್ಥಾನಕ್ಕೆ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಅ ಮಹಿಳೆ ಮೀಸಲಾತಿ ಬಂದಿತ್ತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾಲ್ತೋಡು ಗ್ರಾಮ ಪಂಚಾಯತಿಯ ಅಧ್ಯಕ್ಷರಾಗಿ ಬಿ. ಅಣ್ಣಪ್ಪ ಶೆಟ್ಟಿ ಭಟ್ನಾಡಿ ಅವರು 3ನೇ ಭಾರಿಗೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷೆಯಗಿ ಗೌರಿ ಪೂಜಾರಿ ಅವಿರೋಧವಾಗಿ ಆಯ್ಕೆಯಾದರು..13 ಸದಸ್ಯ ಬಲದ ಕಾಲ್ತೋಡು ಗ್ರಾಪಂನಲ್ಲಿ 10ಕಾಂಗ್ರೇಸ್ ಬೆಂಬಲಿತ ಹಾಗೂ 3 ಬಿಜೆಪಿ ಬೆಂಬಲಿತ ಸದಸ್ಯರಿದ್ದಾರೆ ಅಣ್ಣಪ್ಪ ಶೆಟ್ಟಿ ಅವರು ನಾಲ್ಕು ಭಾರಿ ಕಾಲ್ತೋಡು ಗ್ರಾಮ ಪಂಚಾಯತಿಯ ಸದಸ್ಯರಾಗಿ ಆಯ್ಕೆಯಾಗಿದ್ದು ಈ ಅವಧಿಯಲ್ಲಿ ಒಂದು ಭಾರಿ ಉಪಾಧ್ಯಕ್ಷರಾಗಿ, ಮೂರು ಭಾರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. 10 ಕಾಂಗ್ರೆಸ್ ಹಾಗೂ 3 ಬಿಜೆಪಿ ಬೆಂಬಲಿತ ಸದಸ್ಯ ಬಲವಿರುವ ಕಾಲ್ತೋಡು ಪಂಚಾಯತಿಯಲ್ಲಿ, ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮೀಸಲಾತಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮೀಸಲಾತಿ ಬಂದಿತ್ತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಂಕರನಾರಾಯಣ ಗ್ರಾಮ ಪಂಚಾಯತಿಯ ಎರಡನೇ ಅವಧಿಯ ಅಧ್ಯಕ್ಷರಾಗಿ ಉಮೇಶ್ ಶೆಟ್ಟಿ ಕಲ್ಗದ್ದೆ ಹಾಗೂ ಉಪಾಧ್ಯಕ್ಷರಾಗಿ ವತ್ಸಲಾ ಆಯ್ಕೆಯಾಗಿದ್ದಾರೆ ಬಿಜೆಪಿ ಬೆಂಬಲಿತ 16 ಹಾಗೂ ಕಾಂಗ್ರೆಸ್ ಬೆಂಬಲಿತ 2 ಸದಸ್ಯ ಬಲವಿರುವ ಶಂಕರನಾರಾಯಣ ಪಂಚಾಯತಿಯಲ್ಲಿ, ಎರಡನೇ ಅವಧಿಯಲ್ಲಿ ಅಧ್ಯಕ್ಷರ ಸ್ಥಾನಕ್ಕೆ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಬಿ ಮಹಿಳೆ ಮೀಸಲಾತಿ ಬಂದಿತ್ತು. ಶಂಕರನಾರಾಯಣ ಪ್ರ.ದ. ಕಾಲೇಜು ಗಂಗರಾಜು ಚುನಾವಣಾಧಿಕಾರಿಯಾಗಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮೂರ್ತೆದಾರರ ಸೇವಾ ಸಹಕಾರಿ ಸಂಘ ನಿ, ಉಪ್ಪುಂದ ಇದರ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಆಯ್ಕೆ ಪ್ರಕ್ರಿಯೆ ಆ.17ರಂದು ಸಂಘದ ಆಡಳಿತ ಕಛೇರಿಯಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾಗಿ ಮೋಹನ್ ಪೂಜಾರಿ ಉಪ್ಪುಂದ ಹಾಗೂ ಉಪಾಧ್ಯಕ್ಷರಾಗಿ ತಿಮ್ಮಪ್ಪ ಪೂಜಾರಿ ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ. ಆಡಳಿತ ಮಂಡಳಿಯ ಹತ್ತು ಸ್ಥಾನಗಳಿಗೆ ನಿರ್ದೇಶಕರ ಅವಿರೋಧ ಆಯ್ಕೆಯಾಗಿತ್ತು. ಅಧ್ಯಕ್ಷ ಉಪಾಧ್ಯಕ್ಷ ಸ್ಥಾನ ಆಯ್ಕೆ ಪ್ರಕ್ರಿಯೆ ವೇಳೆ ನಿರ್ದೇಶಕರುಗಳಾದ ಸುರೇಶ್ ಪೂಜಾರಿ, ಬಿ. ನಾರಾಯಣ ಪೂಜಾರಿ, ಹೆಚ್. ನರಸಿಂಹ ಪೂಜಾರಿ, ರಾಜು ಪೂಜಾರಿ, ಸಂತೋಷ್, ಮಂಜ ಪೂಜಾರಿ, ಶಾರದಾ, ಲಕ್ಷ್ಮೀ ಹಾಗೂ ಸಂಘದ ಪ್ರಧಾನ ವ್ಯವಸ್ಥಾಪಕ ಮಹೇಶ್ ಹೆಚ್. ಉಪಸ್ಥಿತರಿದ್ದರು. ಚುನಾವಣಾ ಪ್ರಕ್ರಿಯೆಯನ್ನು ಕಿರಣ್ ಕುಮಾರ್ ಅವರು ನಡೆಸಿಕೊಟ್ಟರು.
