ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಮೂಡ್ಲಕಟ್ಟೆಯ ಐ.ಎಂ.ಜೆ ಶಿಕ್ಷಣ ಸಂಸ್ಥೆಯ ವತಿಯಿಂದ ಜ.26ರಂದು 74ನೇ ಗಣರಾಜ್ಯೋತ್ಸವವನ್ನು ವಿಶಿಷ್ಟವಾಗಿ ಆಚರಿಸಲು ತೀರ್ಮಾನಿಸಲಾಗಿದ್ದು, ಆ ಪ್ರಯುಕ್ತ ದೇಶಭಕ್ತಿ ಓಟವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಿಗೆ ಮಹತ್ತರ ಸಂದೇಶವನ್ನು ನೀಡುವ ಆಶಯ ಹೊಂದಲಾಗಿದೆ ಎಂದು ಎಂ.ಐ.ಟಿ ಉಪ ಪ್ರಾಂಶುಪಾಲರಾದ ಮೆಲ್ವಿನ್ ಡಿಸೋಜ ಹೇಳಿದರು. ಅವರು ಸೋಮವಾರ ಕುಂದಾಪುರದ ಪ್ರೆಸ್ ಕ್ಲಬ್ನಲ್ಲಿ ಆಯೋಜಿಸಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜ.26ರ ಬೆಳಿಗ್ಗೆ 8.30ಕ್ಕೆ ಧ್ವಜಾರೋಹಣ ನೆರವೇರಲಿದೆ. ಈ ಸಂದರ್ಭದಲ್ಲಿ ಪವರ್ ಲಿಫ್ಟಿಂಗ್ ಕ್ಷೇತ್ರದಲ್ಲಿ ಅಂತರ್ ರಾಷ್ಟ್ರೀಯ ಪ್ರಶಸ್ತಿಗಳನ್ನು ಗಳಿಸಿರುವ ಸತೀಶ್ ಖಾರ್ವಿಯವರನ್ನು ಸನ್ಮಾನಿಸಲಾಗುವುದು. 9.15ಕ್ಕೆ ದೇಶಭಕ್ತಿಯ ಓಟಕ್ಕೆ ನಮ್ಮ ದೇಶದ ಗಡಿ ಭದ್ರತಾ ಪಡೆಯ ನಿವೃತ್ತ ಯೋಧರಾದ ಗಣಪತಿ ಖಾರ್ವಿಯವರು ಚಾಲನೆ ನೀಡಲಿದ್ದಾರೆ. ಈ ಓಟವು ಮೂಡ್ಲಕಟ್ಟೆ ಕಾಲೇಜಿನ ಆವರಣದಿಂದ ಆರಂಭಗೊಂಡು ಐ.ಎಂ. ಜಯರಾಮ್ ಶೆಟ್ಟಿ, ಸರ್ಕಲನ್ನು ಸುತ್ತುವರಿದು, ಕಾಲೇಜಿನ ಆವರಣಕ್ಕೆ ಮರು ಆಗಮಿಸಲಿದೆ. ಸುಮಾರು 500ಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದರು. ಯಶಸ್ವಿ ಉದ್ಯಮಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಚಿತ್ತೂರು ಸಮೀಪ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳೆಗೆ ಪ್ರಥಮ ಚಿಕಿತ್ಸೆ ನೀಡಿ, ಮಹಿಳೆಯನ್ನು ಮನೆಗೆ ಡ್ರಾಪ್ ಮಾಡುವ ಮೂಲಕ ಸಚಿವ ಸುನಿಲ್ ಕುಮಾರ್ ಅವರ ಪತ್ನಿ ಪ್ರಿಯಾಂಕಾ ಸುನಿಲ್ ಮಾನವೀಯತೆ ಮೆರೆದಿದ್ದಾರೆ. ಕೊಲ್ಲೂರು ದೇವಸ್ಥಾನಕ್ಕೆ ಅಮವಾಸ್ಯೆ ಪೂಜೆಗೆ ತೆರಳಿ ಕಾರ್ಕಳಕ್ಕೆ ಹಿಂದಿರುಗುತ್ತಿದ್ದ ಸಚಿವ ಸುನಿಲ್ ಕುಮಾರ್ ಹಾಗೂ ಪತ್ನಿ ಪ್ರಿಯಾಂಕಾ ಅವರು, ಯಾವುದೋ ವಾಹನ ಡಿಕ್ಕಿಯಾಗಿ ಬೈಕಿನಿಂದ ಮಹಿಳೆಯೋರ್ವರು ಬಿದ್ದು ಗಾಯಗೊಂಡಿರುವುದನ್ನು ಗಮನಿಸಿದ್ದಾರೆ. ತಕ್ಷಣ ಸಚಿವರು ಕಾರು ನಿಲ್ಲಿಸಿ ಮಹಿಳೆ ಆರೋಗ್ಯ ವಿಚಾರಿಸಿದರೆ, ಪ್ರಿಯಾಂಕಾ ಅವರು ಮಹಿಳೆಗೆ ಪ್ರಥಮ ಚಿಕಿತ್ಸೆ ಮಾಡಿ ಚೇತರಿಸಿಕೊಂಡ ನಂತರ ಮಹಿಳೆ ಪೂರ್ವಾಪರ ವಿಚಾರಿಸಿದ್ದಾರೆ. ಸುನಿಲ್ ಕುಮಾರ್ ಬೇರೆ ಕಾರ್ಯಕ್ರಮ ನಿಮಿತ್ತ ತಮ್ಮ ಪ್ರಯಾಣ ಮುಂದುವರಿಸಿದರೆ, ಅವರ ಪತ್ನಿ ಪ್ರಿಯಾಂಕಾ ಅವರು ಬೇರೊಂದು ಕಾರಿನಲ್ಲಿ ಗಾಯಗೊಂಡ ಮಹಿಳೆಯನ್ನು ಗಂಗೊಳ್ಳಿಯ ಅವರ ಮನೆಗೆ ಡ್ರಾಪ್ ಮಾಡಿ ಹೋಗಿದ್ದಾರೆ. ಪ್ರಿಯಾಂಕಾ ಗಾಯಗೊಂಡ ಮಹಿಳೆ ಉಪಚರಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮೆಚ್ಚುಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೊಗವೀರ ಸಮುದಾಯದಲ್ಲಿ ಜಾಗೃತಿಯನ್ನು ಬೆಳೆಸಿ, ಸಮುದಾಯ ಒಗ್ಗೂಡುವಂತೆ ಶ್ರಮಿಸುತ್ತಿರುವ ನಾಡೋಜ ಜಿ.ಶಂಕರ ಅವರ ನಾಯಕತ್ವವು ರಾಜಕೀಯ ನಾಯಕತ್ವದನ್ನು ಮೀರಿದ್ದಾಗಿದೆ. ಅವರ ಸೇವಾ ಪ್ರವೃತ್ತಿಯ ಕಾರಣದಿಂದ ಮೊಗವೀರ ಸಮುದಾಯ ಮುಂಚೂಣಿ ಸಾಧಿಸಲು ಸಾಧ್ಯವಾಗಿದೆ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ ಹೆಗ್ಡೆ ಹೇಳಿದರು. ಅವರು ಇಲ್ಲಿನ ಚಿಕ್ಕನ್ಸಾಲ್ ರಸ್ತೆಯಲ್ಲಿ ಮುಂಬೈಯ ಮೊಗವೀರ ಮಹಾಜನ ಸೇವಾ ಸಂಘ (ರಿ) ಬಗ್ವಾಡಿ ಹೋಬಳಿಯ ಕುಂದಾಪುರ ಶಾಖೆಯ ನೇತೃತ್ವದಲ್ಲಿ ನೂತನವಾಗಿ ನಿರ್ಮಿಸಲಾದ ‘ಮೊಗವೀರ ಭವನ’ ವನ್ನು ಭಾನುವಾರ ಲೋಕಾರ್ಪಣೆಗೊಳಿಸಿ ಮಾತನಾಡಿ ಮೀನುಗಾರಿಕಾ ಸಚಿವನಾಗುವ ತನಕವೂ ಮೀನುಗಾರಿಕೆಯ ಬಗ್ಗೆ ಹೆಚ್ಚಿನ ಮಾಹಿತಿ ಇದ್ದಿರಲಿಲ್ಲ. ಮೀನುಗಾರರ ಬಂಧುಗಳೊಂದಿಗಿನ ಒಡನಾಟದಿಂದ ಸಚಿವ ಸ್ಥಾನದ ಹೊಣೆಗಾರಿಕೆಯನ್ನು ಸಮರ್ಥವಾಗಿ ನಿರ್ವಹಿಸಲು ಸಾಧ್ಯವಾಯಿತು. ಮೀನುಗಾರರ ಸಹಕಾರವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದ ಅವರು, ಶಿಕ್ಷಣ, ಕಲೆ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಮೀನುಗಾರರು ಮುಂಚೂಣಿ ಸಾಧಿಸಿರುವ ಬಗ್ಗೆ ಮುಚ್ಚುಗೆ ವ್ಯಕ್ತಪಡಿಸಿದರು. ಉಡುಪಿಯ ಜಿ.ಶಂಕರ ಫ್ಯಾಮಿಲಿ ಟ್ರಸ್ಟ್ನ ಪ್ರವರ್ತಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ.ಜ.22: ಕೊಪ್ಪಳದಿಂದ ಮಂಗಳೂರಿಗೆ ತೆರಳುತ್ತಿದ್ದ ಲಾರಿಯೊಂದು ಡಿವೈಡರ್ ಗುದ್ದಿ ಹೆದ್ದಾರಿಯಲ್ಲಿ ಪಲ್ಟಿಯಾದ ಘಟನೆ ಕುಂದಾಪುರದ ಸಂಗಮ್ ಜಂಕ್ಷನ್ ಬಳಿ ಭಾನುವಾರ ಸಂಜೆ ನಡೆದಿದೆ. ಚಾಲಕ ಪಾನಮತ್ತನಾಗಿ ಲಾರಿ ಚಲಾಯಿಸಿರುವುದೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಸಿಮೆಂಟ್ ಲೋಡ್ ಆಗಿದ್ದ 14 ಚಕ್ರದ ಲಾರಿಯನ್ನು ಚಾಲಕ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿದ್ದಾನೆ. ಸಂಗಮ್ ಬಳಿ ಬರುತ್ತಿದ್ದಂತೆ ನಿಯಂತ್ರಣ ಕಳೆದುಕೊಂಡ ಲಾರಿ ಹೆದ್ದಾರಿ ಬಲಭಾಗದ ಡಿವೈಡರ್ ಡಿಕ್ಕಿಯಾಗಿ ರಸ್ತೆ ಮೇಲೆಯೇ ಉರುಳಿ ಬಿದ್ದಿದೆ. ಈ ವೇಳೆ ಕುಂದಾಪುರ ಕಡೆಯಿಂದ ತ್ರಾಸಿ ತೆರಳುತ್ತಿದ್ದ ಕಾರೊಂದು ಕೂದಲೆಳೆ ಅಂತರದಲ್ಲಿ ಪಾರಾಗಿದೆ. ಈ ಮೊದಲು ಲಾರಿ, ರಸ್ತೆ ಬದಿ ಅಳವಡಿಸಿದ್ದ ಸಿಸಿ ಟಿವಿ ಕ್ಯಾಮೆರಾಗಳಿಗೆ ಡಿಕ್ಕಿ ಹೊಡೆದಿದ್ದು ಹಾನಿಯುಂಟಾಗಿದೆ. ಅಪಘಾತದಿಂದ ಟ್ರಾಫಿಕ್ ಜಾಮ್ ಆಗಿತ್ತು. ಬಳಿಕ ವಾಹನಗಳಿಗೆಸರ್ವೀಸ್ ರಸ್ತೆ ಮೂಲಕ ತೆರಳಲು ಅನುವು ಸಂಚಾರಿ ಪೊಲೀಸರು ಅನುವು ಮಾಡಿಕೊಟ್ಟರು. ಮೂರು ಕ್ರೇನ್ ಸಹಾಯದಿಂದ ಲಾರಿಯನ್ನು ಮೇಲೆತ್ತಿ, ಹೆದ್ದಾರಿ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಲಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜ.21: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಜನವರಿ 24 ರಂದು ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. 110/11 ಕೆ.ವಿ ಹಾಲಾಡಿ ವಿದ್ಯುತ್ ಉಪಕೇಂದ್ರದಲ್ಲಿ 110/11 ಕೆವಿ 10 ಎಮ್.ವಿ.ಎ ಪರಿವರ್ತಕ-1 ಹಾಗೂ ಪರಿವರ್ತಕ-2 ಕ್ಕೆ ಬಣ್ಣ ಬಳಿಯುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ 110/11 ಕೆ.ವಿ ಹಾಲಾಡಿ ವಿದ್ಯುತ್ ಉಪಕೇಂದ್ರದಿAದ ಹೊರಡುವ 11ಕೆ.ವಿ ಶಂಕರನಾರಾಯಣ, ಆವರ್ಸೆ, ಬಿದ್ಕಲ್ಕಟ್ಟೆ, ಬೈಲೂರು, ಬೆಳ್ವೆ, ಹೈಕಾಡಿ, ವಾರಾಹಿ ಮತ್ತು ಕೆ.ಎನ್.ಎನ್.ಎಲ್ ಹಾಲಾಡಿ, ಅಮಾಸೆಬೈಲು, ಕುಳುಂಜೆ, ಶಂಕರನಾರಾಯಣ, ಹಾಲಾಡಿ-26, ಮಚ್ಚಟ್ಟು, ರಟ್ಟಾಡಿ, ತೊಂಬಟ್ಟು, ಕೆಳಸುಂಕ, ಜಡ್ಡಿನಗದ್ದೆ, ಹಾಲಾಡಿ, ಬಿದ್ಕಲ್ಕಟ್ಟೆ, ಗಾವಳಿ, ಹಾಲಾಡಿ-28, ಮಡಾಮಕ್ಕಿ, ಹಾಲಾಡಿ-76, ಸಿದ್ದಾಪುರ, ಉಳ್ಳೂರು-74, ಕಕ್ಕುಂಜೆ, ಹೆಸ್ಕತ್ತೂರು, ಯಡಾಡಿ-ಮತ್ಯಾಡಿ, ಹಳ್ಳಾಡಿ-ಹರ್ಕಾಡಿ, ಹಾರ್ದಳ್ಳಿ-ಮಂಡಳ್ಳಿ, ಮೊಳಹಳ್ಳಿ, ಬೈಲೂರು, ಕೊಂಡಳ್ಳಿ, ಬೆದ್ರಾಡಿ, ಕೋಣಿಹರ, ಬೆಳ್ವೆ, ಅಲ್ಬಾಡಿ, ಆರ್ಡಿ, ಹೆಂಗವಳ್ಳಿ, ಸೂರ್ಗೋಳಿ, ಶೇಡಿಮನೆ, ಹೈಕಾಡಿ ಮತ್ತು ಗೋಳಿಯಂಗಡಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಹೇರಂಜಾಲು, ಕಾಲ್ತೋಡು, ಕಂಬದಕೋಣೆ ಹಾಗೂ ಪರಿಸರದ ಜನತೆಯ ಆರ್ಥಿಕ ಸವಲತ್ತು ಮತ್ತು ಅಭಿವೃದ್ಧಿಗಾಗಿ ಶ್ರೀ ಗುಡೇ ಮಹಾಲಿಂಗೇಶ್ವರ ಸೌಹಾರ್ದ ಸಹಕಾರಿ ಸಂಘ ಸ್ಥಾಪಿಸಲಾಗಿದ್ದು, ಸಾಮಾಜಿಕ ಸೇವೆಯೇ ನಮ್ಮ ಧ್ಯೇಯ ಎಂಬ ಘೋಷ ವಾಕ್ಯದೊಂದಿಗೆ ಜ.26ರಂದು ಕಾರ್ಯಾರಂಭ ಮಾಡಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಹೆಚ್. ಜಯಶೀಲ ಶೆಟ್ಟಿ ಹೇಳಿದರು. ಜೆ.ಎನ್.ಎಸ್ ಸಮೂಹ ಸಂಸ್ಥೆಗಳ ಅಂಗ ಸಂಸ್ಥೆಯಾಗಿ ನೂತನ ಉದ್ಯಮ ಆರಂಭಿಸುವ ಉದ್ದೇಶದಿಂದ ಹಿರಿಯ ಹಾಗೂ ಕಿರಿಯ ಉತ್ಸಾಹಿ ಯುವಕರ ತಂಡದೊಂದಿಗೆ ಕ್ರಿಯಾಯೋಜನೆಗಳನ್ನು ರೂಪಿಸಿಕೊಂಡು ಸಹಕಾರಿ ಸಂಸ್ಥೆಯನ್ನು ಹುಟ್ಟುಹಾಕಿ ವೃತ್ತಿಪರ, ಸಂಪೂರ್ಣ ಗಣಕೀಕೃತದಿಂದ ಕೂಡಿದ ಸುಸಜ್ಜಿತ ವ್ಯವಸ್ಥೆಯೊಂದಿಗೆ ಸಂಸ್ಥೆಯನ್ನು ಬಲಿಷ್ಠವಾಗಿ ಕಟ್ಟುವ ಕೆಲಸ ಆರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ವಿವಿಧೆಡೆ ಹತ್ತು ಶಾಖೆಗಳನ್ನು ತೆರೆಯುವ ಗುರಿ ಹೊಂದಲಾಗಿದೆ. ನೊಂದಣಿಗೊಂಡ ತಿಂಗಳ ಅವಧಿಯಲ್ಲಿ 500ಕ್ಕೂ ಮಿಕ್ಕಿ ಎ ತರಗತಿ ಸದಸ್ಯರು ಸೇರ್ಪಡೆಗೊಂಡು ಪಾಲು ಬಂಡವಾಳ ಹಾಗೂ ನಿರೀಕ್ಷೆಗೂ ಮೀರಿ ಠೇವಣಿ ಸಂಗ್ರಹಣೆಯಾಗುವಲ್ಲಿ ಸದಸ್ಯರು ಸಹಕಾರ ನೀಡಿದ್ದಾರೆ ಎಂದು ಅವರು ತಿಳಿಸಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜ.21: ಮಲ್ಪೆ ಅಭಿವೃದ್ಧಿ ಸಮಿತಿಯಿಂದ 2020ರ ಸಾಲಿನಲ್ಲಿ ಸೀವಾಕ್ ಪ್ರದೇಶ ಮತ್ತು ಸೈಂಟ್ಮೆರೀಸ್ ದ್ವೀಪ ಪ್ರದೇಶದ ನಿರ್ವಹಣೆ ಕುರಿತು ಕರೆಯಲಾದ ಟೆಂಡರಿನಲ್ಲಿ ದ್ವೀಪದಲ್ಲಿ ಕೈಗೊಳ್ಳುವ ಯಾವುದೇ ರೀತಿಯ ಚಿತ್ರೀಕರಣಕ್ಕೆ ಉಪಯೋಗಿಸುವಂತಹ (Commercial Activities like photo shoot) ಡಿ.ಎಸ್.ಎಲ್.ಆರ್ ಕ್ಯಾಮರಾಗಳಿಗೆ ಶುಲ್ಕ ವಿಧಿಸಿ ನಿರ್ವಹಣಾದಾರರಿಗೆ ಆದಾಯಗಳಿಸುವ ಬಗ್ಗೆ ಅವಕಾಶವಿರುತ್ತದೆ ಹಾಗೂ ಇತರೆ ರೀತಿಯ ಕ್ಯಾಮರಗಳಾದ ಸೋನಿ ಹ್ಯಾಂಡಿ ಕ್ಯಾಮ್, ಕ್ಯಾನೋನ್ ಇ.ಒ.ಎಸ್, ಡಿಜಿಟಲ್ ಕ್ಯಾಮರಾ, ಸೋನಿ ಹೆಚ್.ಡಿ.ಆರ್.ಸಿ.ಎಕ್ಸ್ ಕ್ಯಾಮರಾಗಳನ್ನು ಮತ್ತು ಮೊಬೈಲ್ಗಳನ್ನು ಸೈಂಟ್ಮೆರೀಸ್ ದ್ವೀಪದಲ್ಲಿ ಬಳಸಲು ಯಾವುದೇ ನಿರ್ಬಂಧ ಇರುವುದಿಲ್ಲ. ಸೈಂಟ್ಮೆರೀಸ್ ದ್ವೀಪದಲ್ಲಿ ಪ್ರವಾಸಿಗರೊಂದಿಗೆ ಅನುಚಿತವಾಗಿ ವರ್ತಿಸಿದ ಸಿಬ್ಬಂದಿಯ ಮೇಲೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಸೈಂಟ್ಮೆರೀಸ್ ದ್ವೀಪದಲ್ಲಿ ಪ್ರವಾಸಿಗರಿಂದ ಕ್ಯಾಮರಾಗಳಿಗೆ ಪಡೆಯುವ ಶುಲ್ಕವನ್ನು ರದ್ದುಗೊಳಿಸುವಂತೆ ಹಲವಾರು ಕಡೆಗಳಿಂದ ಹಾಗೂ ಜಾಲತಾಣದಲ್ಲಿ ಆಗ್ರಹಿಸುತ್ತಿದ್ದು, ದ್ವೀಪದಲ್ಲಿ ಯಾವುದೇ ರೀತಿಯ ಚಿತ್ರೀಕರಣಕ್ಕೆ ಉಪಯೋಗಿಸುವಂತಹ (Commercial Activities like photo shoot) ಡಿ.ಎಸ್.ಎಲ್.ಆರ್ ಕ್ಯಾಮರಾಗಳಿಗೆ ಪ್ರವಾಸಿಗರಿಂದ ಶುಲ್ಕ ವಸೂಲಿ ಮಾಡುವ ಕುರಿತು ಮರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗ್ರಾಮೀಣ ಪ್ರದೇಶದ ಜನರಿಗೆ ಸರ್ಕಾರಿ ಯೋಜನೆಗಳ ಮಾಹಿತಿ ಹಾಗೂ ತಿಳುವಳಿಕೆ ನೀಡುವ ಉದ್ದೇಶದಿಂದ ಮಾಡುತ್ತಿರುವ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಅತ್ಯಂತ ಮಹತ್ವದಾಗಿದ್ದು, ಜಿಲ್ಲೆಯಾದ್ಯಂತ ಜನಸಾಮಾನ್ಯರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಹೇಳಿದರು. ನಾಗೂರು ಶ್ರೀ ಲಲಿತ ಕೃಷ್ಣ ಕಲಾಮಂದಿರದಲ್ಲಿ ಶನಿವಾರ ನಡೆದ ಕಿರಿಮಂಜೇಶ್ವರ ಗ್ರಾಮ ವ್ಯಾಪ್ತಿಯ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು. ಎಲ್ಲಾ ಇಲಾಖೆಯ ಅಧಿಕಾರಿಗಳನ್ನು ಒಂದೇ ಸೂರಿನಡಿಯಲ್ಲಿ ತರುವ ಮೂಲಕ ಸಾರ್ವಜನಿಕರ ಆವಹಾಲುಗಳನ್ನು ಪಡೆದು ಸ್ಥಳೀಯ ಸಮಸ್ಯೆಗಳಿಗೆ ಸಾಧ್ಯವಾದಷ್ಟರ ಮಟ್ಟಿಗೆ ಪ್ರಾಮಾಣಿಕವಾಗಿ ಸ್ಥಳದಲ್ಲಿಯೇ ಪರಿಹಾರ ದೊರಕಿಸಿಕೊಡುವ ಪ್ರಯತ್ನ ಮಾಡಲಾಗುತ್ತದೆ. ಇನ್ನು ಕೆಲವು ಅರ್ಜಿಗಳು ತಾಂತ್ರಿಕ ಹಾಗೂ ಕಾನೂನಾತ್ಮಕ ತೊಡಕಿದ್ದರೆ ಅವುಗಳನ್ನು ಹಂತ ಹಂತವಾಗಿ ಮುಂದಿನ ದಿನಗಳಲ್ಲಿ ಫಾಲೋಅಪ್ ಮಾಡಿ ಇಥ್ಯರ್ತಗೊಳಿಸಲು ಪ್ರಯತ್ನಿಸಲಾಗುವುದು. ಈ ನಿಟ್ಟಿನಲ್ಲಿ ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಶಾಂತಿ ಹಾಗೂ ಸಹನೆಯಿಂದ ಸಹಕರಿಸಬೇಕು ಎಂದರು. ವಿವಿಧ ಫಲಾನುಭವಿಗಳಿಗೆ ಸವಲತ್ತು, ಆದೇಶ ಪ್ರತ್ರವನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಈಶ ಫೌಂಡೇಶನ್ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್ ಅವರು ತಮ್ಮ ಪ್ರವಾಸದ ಮಧ್ಯೆ ಕೋಟೇಶ್ವರ ಯುವ ಮೆರಿಡಿಯನ್ ಹೋಟೆಲ್’ನಲ್ಲಿ ಶುಕ್ರವಾರ ತಂಗಿದ್ದು, ಶನಿವಾರ ಬೆಳಿಗ್ಗೆ ಪ್ರವಾಸ ಮುಂದುವರಿಸಿದ್ದಾರೆ. ‘ಮಣ್ಣು ಉಳಿಸಿ ಅಭಿಯಾನ’ದ ಭಾಗವಾಗಿ ಬೈಕ್ ಮೂಲಕ ಪ್ರವಾಸ ಕೈಗೊಂಡಿರುವ ಸದ್ಗುರು ಅವರು ಯುವ ಮೆರಿಡಿಯನ್ ಗೆ ಭೇಟಿ ನೀಡುತ್ತಿದ್ದಂತೆ ಸಂಸ್ಥೆಯ ಪಾಲುದಾರರಾದ ಉದಯ ಕುಮಾರ್ ಶೆಟ್ಟಿ ಹಾಗೂ ವಿನಯ ಕುಮಾರ್ ಶೆಟ್ಟಿ ಸ್ವಾಗತಿಸಿಕೊಂಡರು. ಈಶ ಫೌಂಡೇಶನ್ ವತಿಯಿಂದ ಇತ್ತೀಚಿಗಷ್ಟೇ ಚಿಕ್ಕಬಳ್ಳಾಪುರದಲ್ಲಿ ಈಶ ಯೋಗ ಕೇಂದ್ರ ಉದ್ಘಾಟನೆಗೊಳಿಸಲಾಗಿತ್ತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಏಳಜಿತ ಶ್ರೀ ರಾಮಕೃಷ್ಣ ಕುಟೀರಕ್ಕೆ ಶುಕ್ರವಾರ ಭೇಟಿ ನೀಡಿದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟೀ, ಉದ್ಯಮಿ ಡಾ. ಗೋವಿಂದ ಬಾಬು ಪೂಜಾರಿ ಅವರು ಕುಟೀರದ ವಿದ್ಯಾರ್ಥಿಗಳ ಸಂಗೀತ ಕಲಿಕೆಗಾಗಿ ಅಂದಾಜು ರೂ.50,000 ಮೌಲ್ಯದ ಕೀಬೋರ್ಡ್ ಹಾಗೂ ಇನ್ನಿತರ ಸಂಗೀತ ಪರಿಕರಗಳನ್ನು ಕೊಡುಗೆಯಾಗಿ ನೀಡಿದರು. ಈ ವೇಳೆ ಅವರು ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ವಿದ್ಯಾರ್ಥಿಗಳಿಗೆ ಧಾರ್ಮಿಕ ಮಂತ್ರ ಪಠಣ, ಸಂಗೀತ ಅಭ್ಯಾಸ ಮೊದಲಾದವುಗಳನ್ನು ಕಲಿಸುವ ಮೂಲಕ ಅವರನ್ನು ಸಂಸ್ಕಾರವಂತರನ್ನಾಗಿ ಮಾಡುವ ಕಾರ್ಯವನ್ನು ಹಲವಾರು ವರ್ಷಗಳಿಂದ ಮಾಡುತ್ತಾ, ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಸೇವಾ ಕಾರ್ಯವನ್ನು ಕೈಗೊಂಡಿರುವುದು ಸಂತಸದ ಸಂಗತಿಯಾಗಿದೆ. ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಇನ್ನಷ್ಟು ಉತ್ತಮ ಕಾರ್ಯಗಳು ನಡೆಯುವಂತಾಗಲಿ ಎಂದು ಶುಭಕೋರಿದರು. ಶ್ರೀ ರಾಮಕೃಷ್ಣ ಕುಟೀರದ ಶ್ರೀ ಸತ್ಯಸ್ವರೂಪಾನಂದ ಸ್ವಾಮೀಜಿ ಅವರು ಸ್ವಾಗತಿಸಿ, ವಂದಿಸಿದರು. ಈ ವೇಳೆ ವಿದ್ಯಾರ್ಥಿಗಳು ವಿವಿಧ ಸ್ತೋತ್ರ ಪಠಣ ಮಾಡಿದರು.
