ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಮಂಗಳೂರು ವಿವಿ ಮತ್ತು ಬೆಸೆಂಟ್ ಮಹಿಳೆಯರ ಕಾಲೇಜು ಇವುಗಳ ಸಂಯುಕ್ರಾಶ್ರಯದಲ್ಲಿ ನಡೆದ ಅಂತರ್ ಕಾಲೇಜು ಮಹಿಳೆಯರ ಕಬಡ್ಡಿ ಚಾಂಪಿಯನ್ಶಿಪ್ನಲ್ಲಿ ಆಳ್ವಾಸ್ ಕಾಲೇಜಿನ ಮಹಿಳೆಯರ ತಂಡ ಸತತ 4ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿತು. ಆಳ್ವಾಸ್ ಕಾಲೇಜು ತಂಡವು ವಾಮದಪದವಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತಂಡವನ್ನು ಹಾಗೂ ಉಜಿರೆಯ ಎಸ್.ಡಿ.ಎಂ ಕಾಲೇಜು ತಂಡವು ಅಜ್ಜರಕಾಡಿನ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ತಂಡವನ್ನು ಸೋಲಿಸಿ ಫೈನಲ್ ಹಂತಕ್ಕೆ ತೇರ್ಗಡೆಗೊಂಡವು. ಫೈನಲ್ಸ್ನಲ್ಲಿ ಆಳ್ವಾಸ್ ತಂಡವು ಎಸ್.ಡಿ.ಎಂ ಕಾಲೇಜು ತಂಡವನ್ನು 39-14 ಅಂತರದಲ್ಲಿ ಸೋಲಿಸಿ ವೆರಿ ರೆವೆರೆಂಡ್ ಮೆಸೆಂಜರ್ ಎ. ಪತ್ರಾವೋ ಮೆಮೋರಿಯಲ್ ರೋಲಿಂಗ್ ಟ್ರೋಫಿ ಹಾಗೂ ಶಾಶ್ವತ ಫಲಕವನ್ನು ಪಡೆದುಕೊಂಡಿತು. ಆಳ್ವಾಸ್ ತಂಡದ ಸುಶ್ಮಿತಾ ಸರ್ವಾಂಗೀಣ ಆಟಗಾರ್ತಿ ಪ್ರಶಸ್ತಿ ಪಡೆದರೆ, ಧನಲಕ್ಷ್ಮಿ ಉತ್ತಮ ದಾಳಿಗಾರ್ತಿ ಮತ್ತು ಎಸ್.ಡಿ.ಎಂ ತಂಡದ ಸುಮಯ್ಯ ಉತ್ತಮ ಹಿಡಿತಗಾರ್ತಿ ಪ್ರಶಸ್ತಿ ಪಡೆದುಕೊಂಡರು. ವಿಜೇತ ತಂಡವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕನ್ನಡ ಸಾಹಿತ್ಯ ಸಂಘ ಮತ್ತು ಐಕ್ಯೂಎಸಿ ಇದರ ಆಶ್ರಯದಲ್ಲಿ ಕಲ್ಪತರು-2024 ಅಂತರ್ ತರಗತಿ ನೃತ್ಯ ರೂಪಕ ಕಾರ್ಯಕ್ರಮ ಕಾಲೇಜಿನ ಶ್ರೀ ವೀರರಾಜೇಂದ್ರ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ, ಕನ್ನಡಾಂಬೆಗೆ ಪುಷ್ಪ ನಮನ ಸಲ್ಲಿಸಿ, ಮಾತನಾಡಿದ ಉಡುಪಿ ಜಿಲ್ಲಾ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಬಿದ್ಕಲ್ ಕಟ್ಟೆ ಸರಕಾರಿ ಪದವಿಪೂರ್ವ ಕಾಲೇಜಿನ ಉಪ- ಪ್ರಾಂಶುಪಾಲರಾದ ಕರುಣಾಕರ ಶೆಟ್ಟಿ ಮೊಗೆಬೆಟ್ಟು ‘ಕನ್ನಡ ಭಾಷೆ ಉಳಿಯಬೇಕಾದರೆ ಕನ್ನಡ ಭಾಷೆಯನ್ನು ಜಗತ್ತಿನಾದ್ಯಂತ ಪಸರಿಸುವ ಕಾರ್ಯ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಮಾತ್ರ ಸಾಧ್ಯ ಎಂದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಉಪನ್ಯಾಸಕ ಸುಧಾಕರ್ ವಕ್ವಾಡಿ, ವಿದ್ಯಾರ್ಥಿಗಳು ಕನ್ನಡ ಭಾಷೆಯನ್ನು ಹೆಚ್ಚು ಮಾತನಾಡುವ ಮೂಲಕ ಮುಂದಿನ ಜನಾಂಗಕ್ಕೆ ಕನ್ನಡ ಭಾಷೆಯ ಬಗ್ಗೆ ಅಭಿಮಾನ ಬೆಳೆಸುವ ಕಾರ್ಯ ಆಗಬೇಕಾಗಿದೆ ಎಂದರು. ಕಾಲೇಜಿನ ಪ್ರಾಂಶುಪಾಲರಾದ ಚಂದ್ರಾವತಿ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ನಾವೆಲ್ಲ ಜಾಗತೀಕರಣ, ತಂತ್ರಜ್ಞಾನ ಯುಗದಲ್ಲಿದ್ದೇವೆ ಇದರಿಂದ ಕನ್ನಡಕ್ಕೆ ಸವಾಲುಗಳು ಜಾಸ್ತಿ ಆಗುತ್ತಲೇ ಇದೆ. ಸುದೀರ್ಘ ಇತಿಹಾಸ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟತಟ್ಟು ಕಾರಂತ ಥೀಂ ಪಾರ್ಕನಲ್ಲಿ ಕೋಟತಟ್ಟು ಗ್ರಾಮಪಂಚಾಯತ್, ಡಾ.ಕೋಟ ಶಿವರಾಮ ಕಾರಂತ ಟ್ರಸ್ಟ್ ಉಡುಪಿ, ಡಾ. ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಇವರುಗಳ ಆಶ್ರಯದಲ್ಲಿ ಡಾ. ಕೋಟ ಶಿವರಾಮ ಕಾರಂತ ಜನ್ಮದಿನೋತ್ಸವ ಮತ್ತು 20ನೇ ವರ್ಷದ ಹುಟ್ಟೂರ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಿತು. ಕಾರ್ಯಕ್ರಮದಲ್ಲಿ ಕಾರಂತ ಹುಟ್ಟೂರ ಪ್ರಶಸ್ತಿ ಸ್ವೀಕರಿಸಿ ಸಾಹಿತಿ ಪ್ರೋ. ಕೃಷ್ಣೆ ಗೌಡ ಮೈಸೂರು ಅವರು ಮಾತನಾಡಿ, ಕಾರಂತರೆಂದರೆ ಬಹು ವ್ಯಕ್ತಿತ್ವದ ಚಿಂತನಾಶೀಲ, ಪ್ರಯೋಗಶೀಲ ವಿವಿಧ ಸ್ತರದಲ್ಲಿ ಬೆಳಕ ಚೆಲ್ಲುವ ಅಪರೂಪದ ಶಕ್ತಿಯಾಗಿದ್ದರು, ಅವರಂತೆ ಎಲ್ಲರನ್ನು ಕಾಣಲು ಸಾಧ್ಯವಿಲ್ಲ ಅವರಿಗೆ ಅವರೇ ಸಾಟಿ ಎಂಬಂತೆ ತಮ್ಮ ಜೀವಿತ ಅವಧಿಯಲ್ಲಿ ಬದುಕಿ ತೊರಿಸಿದ್ದಾರೆ. ತನ್ನ ಕಾದಂಬರಿಯ ಮೂಲಕ ಪ್ರಪಂಚಕ್ಕೆ ನೈಜ ಚಿತ್ರಣದ ಚಿತ್ತಾರವನ್ನು ಪ್ರಯೋಗಿಸಿದ್ದಾರೆ. ಇಂಥಹ ಕಾರಂತರ ಪ್ರಶಸ್ತಿ ಪಡೆಯುವ ಸಾಲಿನಲ್ಲಿ ನನ್ನಂತವರ ಹೆಸರು ಮುಂಚೂಣಿಗೆ ನಿಲ್ಲಿಸಿದ್ದು ಸಾರ್ಥಕ್ಯ ಕಂಡ ಅನುಭವ ಸಿಕ್ಕಿದೆ. ಓರ್ವ ಶ್ರೇಷ್ಠ ಸಾಹಿತಿ ಈ ಮಣ್ಣಿನಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ) ತುಮಕೂರು ಜಿಲ್ಲೆ, ವಿದ್ಯಾನಿಧಿ ಪದವಿ ಪೂರ್ವ ಕಾಲೇಜು ತುಮಕೂರು, ಪ್ರೆಸಿಡೆನ್ಸಿ ಪದವಿ ಪೂರ್ವ ಕಾಲೇಜು ಶಿರಾ, ಅರವಿಂದ ಪದವಿ ಪೂರ್ವ ಕಾಲೇಜು ಕುಣಿಗಲ್ ಇವರ ಸಂಯುಕ್ತ ಆಶಯದಲ್ಲಿ ಮಹಾತ್ಮಗಾಂಧಿ ಕ್ರೀಡಾಂಗಣ ತುಮಕೂರಿನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ 2024- 25ರಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಸಿನಾನ್ ಎತ್ತರ ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಕ್ರೀಡಾ ಕ್ಷೇತ್ರದಲ್ಲಿ ವಿದ್ಯಾರ್ಥಿ ಹಂತ ಹಂತವಾಗಿ ಅಭಿವೃದ್ಧಿ ಪಥದಲ್ಲಿ ಹೆಜ್ಜೆಯಿರಿಸುವಂತಾಗಲಿ ಎಂದು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಶುಭ ಹಾರೈಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೇಶ ಹಾಗೂ ವ್ಯಕ್ತಿಯ ಆರ್ಥಿಕ, ದೈಹಿಕ ಹಾಗೂ ಮಾನಸಿಕ ಆರೋಗ್ಯ ಚೆನ್ನಾಗಿದ್ದಾಗ ಮಾತ್ರ ವಾಸ್ತಾವಿಕ ಪರಿಸ್ಥಿತಿಗಳು ಆರೋಗ್ಯಕರವಾಗಿರುತ್ತದೆ ಎಂದು ಉಡುಪಿ ಜಿಲ್ಲಾ ಹೆಚ್ಚುವರಿ ಎಸ್.ಪಿ ಸಿದ್ದಲಿಂಗಪ್ಪ ಎಸ್.ಟಿ ಅಭಿಪ್ರಾಯ ವ್ಯಕ್ತಪಡಿಸಿದರು. ವಕ್ವಾಡಿಯ ಗುರುಕುಲ ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆದ ಗುರುಕುಲ ಪಬ್ಲಿಕ್ ಸ್ಕೂಲ್ ಹಾಗೂ ಪದವಿ ಪೂರ್ವ ಕಾಲೇಜಿನ 19 ವರ್ಷದ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಗುರಿ, ತಾಳ್ಮೆ ಹಾಗೂ ನಿರಂತರ ಪರಿಶ್ರಮ ಇರಬೇಕು. ವಿದ್ಯಾರ್ಥಿಗಳಿಗೆ ಪಠ್ಯ ಅಭ್ಯಾಸಗಳ ಜೊತೆಯಲ್ಲಿ ದೈಹಿಕ ಹಾಗೂ ಮಾನಸಿಕ ಆರೋಗ್ಯವರ್ಧನೆಗೆ ಪೂರಕವಾಗಿರುವ ಪಠ್ಯೇತರ ಚಟುವಟಿಕೆಗಳು ಅಗತ್ಯವಾಗಿದೆ. ನಿರಂತರ ಕ್ರೀಡಾ ಅಭ್ಯಾಸಗಳನ್ನು ಹೊಂದಿರುವ ಕ್ರೀಡಾಪಟುಗಳು ಜೀವನದಲ್ಲಿ ಯಶಸ್ಸು ಸಾಧಿಸುತ್ತಾರೆ. ಗೆಲ್ಲುವ ಗುರಿಯೊಂದಿಗೆ ಕ್ರೀಡೆಯಲ್ಲಿ ಭಾಗವಹಿಸುವುದೆ ಮುಖ್ಯ ಎನ್ನುವ ಮನೋಭಾವ ರೂಢಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಅವರು ಸಲಹೆ ನೀಡಿದರು. ಬಾಂಡ್ಯ ಎಜುಕೇಷನ್ ಟ್ರಸ್ಟ್ ನ ಜಂಟಿ ಆಡಳಿತ ಟ್ರಸ್ಟಿ ಬಾಂಡ್ಯ ಸುಭಾಶ್ಚಂದ್ರ ಶೆಟ್ಟಿ ಅವರು ಕ್ರೀಡೆಯಲ್ಲಿ ಭಾಗವಹಿಸುವುದೇ ಗುರಿಯಾಗಿರಬೇಕು. ಬದ್ದತೆ ಹಾಗೂ ಗುರಿಯನ್ನು ಹೊಂದಿರುವ…
ಕುಂದಾಪು ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿಶಾಲೆಯಲ್ಲಿ ದಿನಾಂಕ ನ.8 ರಂದು ಉಡುಪಿ ಜಿಲ್ಲೆಯ ಐಸಿಎಸ್ಇ ಮತ್ತು ಸಿಬಿಎಸ್ಇ ಅಂತರ್ ಶಾಲಾಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯು ಜರುಗಿತು. ಈ ಪಂದ್ಯಾವಳಿಯ ಉದ್ಘಾಟನಾ ಸಮಾರಂಭಕ್ಕೆ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಮಾಜಿ ಟ್ರಸ್ಟಿಗಳಾದ ಜಯಾನಂದ ಹೋಬಳಿದಾರ್ ಮುಖ್ಯ ಅತಿಥಿಗಳಾಗಿ ಆಗಮಿಸಿ, ಕ್ರೀಡಾಪಟುಗಳನ್ನುದ್ದೇಶಿಸಿ ಮಾತನಾಡಿ, ಕ್ರೀಡೆಯಲ್ಲಿ ಶ್ರದ್ಧೆ, ನಿಷ್ಠೆ, ಸಮಯಪ್ರಜ್ಞೆ ಅತ್ಯಗತ್ಯ. ನಮ್ಮ ನಾಡಿನ ಕ್ರೀಡಾಪಟುಗಳು ಕ್ರೀಡೆಯಲ್ಲಿ ಅತ್ಯುನ್ನತ ಸಾಧನೆಯನ್ನು ಮಾಡಿದ್ದಾರೆ. ಅವರ ಸಾಧನೆ ಇಂದಿನ ಆಟಗಾರರಿಗೆ ಸ್ಪೂರ್ತಿಯಾಗಿದೆ. ಆಟದಲ್ಲಿ ತೀರ್ಪುಗಾರರ ಬಗ್ಗೆ, ನಿಯಮಗಳ ಬಗ್ಗೆ ಗೌರವದಿಂದ ವರ್ತಿಸಬೇಕು. ನಿಮ್ಮನ್ನು ಬೇರೆಯವರು ಗುರುತಿಸುವಂತೆ ಆಟಗಳನ್ನು ಆಡಬೇಕು ಎಂದು ನುಡಿಯುತ್ತಾ ಆಟಗಾರರನ್ನು ಹುರಿದುಂಬಿಸಿದರು. ಬ್ಯಾಡ್ಮಿಂಟನ್ನ ರಾಷ್ಟ್ರೀಯಮಟ್ಟದ ತೀರ್ಪುಗಾರರು ಹಾಗೂ ಮಣಿಪಾಲದ ಮಾಧವ ಕೃಪಾ ಶಾಲೆಯ ದೈಹಿಕ ಶಿಕ್ಷಕಿಯಾದ ಶಾಲಿನಿ ಎಸ್. ಮಾತನಾಡುತ್ತಾ, ವಿವಿಧ ಪಂದ್ಯಾಟಗಳನ್ನು ಕೇವಲ ಗೆಲುವನ್ನು ಪಡೆಯಲಿಕ್ಕಷ್ಟೇ ಆಯೋಜಿಸಿರುವುದಿಲ್ಲ. ನೀವು ಈಗಿರುವುದಕ್ಕಿಂತ ಇನ್ನಷ್ಟು ಎತ್ತರಕ್ಕೆ ಕೊಂಡೊಂಯ್ಯುವುದೇ ಕ್ರೀಡಾಕೂಟಗಳ ಆಯೋಜನೆಯ ಧ್ಯೇಯವಾಗಿರುತ್ತದೆ. ನಿಮ್ಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಗುಣಮಟ್ಟದ ವೈದ್ಯಕೀಯ ಪರಿಕರಗಳಿಗೆ ಹೆಸರಾದ ‘ಗಿರಿಜಾ ಸರ್ಜಿಕಲ್ಸ್’ ಇದರ 5ನೇ ಮಳಿಗೆಯ ಉದ್ಘಾಟನಾ ಸಮಾರಂಭವು ನ.10ರ ಭಾನುವಾರ ಬೆಳಿಗ್ಗೆ 10.30ಕ್ಕೆ ಮಣಿಪಾಲ ಕೆಎಂಸಿ ಆಸ್ಪತ್ರೆ ಎದುರಿನ ವಾಣಿಜ್ಯ ಕಟ್ಟಡದಲ್ಲಿ ಶುಭಾರಂಭಗೊಳ್ಳಲಿದೆ. ಡಾ. ಟಿ.ಎಂ.ಎ ಪೈ ಫೌಂಡೇಶನ್ ಅಧ್ಯಕ್ಷರಾದ ಟಿ. ಅಶೋಕ್ ಪೈ. ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ವಿವಿಧ ಅತಿಥಿ ಗಣ್ಯರು ಜೊತೆಯಾಗಲಿದ್ದಾರೆ. ಕಡಿಮೆ ದರ, ಗುಣಮಟ್ಟದ ಪರಿಕರ, ಆಯ್ಕೆಗೆ ಅವಕಾಶ, ಮೊದಲಾದ ಗ್ರಾಹಕಸ್ನೇಹಿ ಸೇವೆಗಳನ್ನು ಒದಗಿಸುತ್ತಿರುವುದರಿಂದ ಭಟ್ಕಳದಿಂದ ಮಂಗಳೂರು ತನಕದ ಗ್ರಾಹಕರನ್ನು ಹೊಂದಿರುವ ಗಿರಿಜಾ ಸರ್ಜಿಕಲ್ಸ್ ಮಂಗಳೂರಿನಲ್ಲಿ 2 ಮಳಿಗೆ ಉಡುಪಿ ಹಾಗೂ ಕುಂದಾಪುರದಲ್ಲಿ ಈಗಾಗಲೇ ಮಳಿಗೆಗಳನ್ನು ಹೊಂದಿದ್ದು, ಇದೀಗ ಮಣಿಪಾಲದಲ್ಲಿ ನೂತನ ಮಾರಾಟ ಮಳಿಗೆ ಆರಂಭಗೊಳ್ಳುತ್ತಿದೆ. ಮಳಿಗೆಯಲ್ಲಿ ಹೋಲ್ಸೆಲ್ ದರದಲ್ಲಿ ರಿಟೆಲ್ ವಸ್ತುಗಳು ದೊರೆಯಲಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಪನಿರ್ದೇಶಕರ ಕಛೇರಿ ರಜತಾದ್ರಿ ಆಯೋಜಿಸಿದ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆಗಳು ಸ್ಪರ್ಧೆಗಳಲ್ಲಿ ಶಿಕ್ಷಕ ಸಹೋದರ- ಸಹೋದರಿ ವಿಜೇತರಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರೌಢಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆ ಸಾಮಾನ್ಯ ಜ್ಞಾನ ಸ್ಪರ್ಧೆಯಲ್ಲಿ ವಡೇರಹೋಬಳಿ ಸರಕಾರಿ ಪ್ರೌಢಶಾಲೆಯ ಸಮಾಜವಿಜ್ಞಾನ ಶಿಕ್ಷಕ ನಾರಾಯಣ ರಾಜು ದೇವಾಡಿಗ ಅವರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಬಂಧ ಸ್ಪರ್ಧೆಯಲ್ಲಿ ಉಡುಪಿ ಒಳಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆಯ ಕನ್ನಡ ಭಾಷಾ ಶಿಕ್ಷಕಿ ತಾರಾಮತಿ ದೇವಾಡಿಗ ಅವರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅವರು ಉಪ್ಪುಂದ ಹೊಳೆಬಾಗಿಲು ಬೈಲ್ ಮನೆ ನಾಗ ದೇವಾಡಿಗ ಹಾಗು ಮಾಚಿ ದೇವಾಡಿಗ ದಂಪತಿಗಳ ಮಕ್ಕಳಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನಲ್ಲಿ ಖೇಲೋ ಜನತಾ 2024 ಅತ್ಯಂತ ಸಡಗರ, ಸಂಭ್ರಮದಿಂದ ನೆರವೇರಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕರ್ನಾಟಕ ಪಬ್ಲಿಕ್ ಸ್ಕೂಲ್ ಕೋಟೇಶ್ವರದ ದೈಹಿಕ ಶಿಕ್ಷಣ ಶಿಕ್ಷಕರಾದ ಉದಯ ಅವರು ಮಾತನಾಡಿ, ಜನತಾ ಶಿಕ್ಷಣ ಸಂಸ್ಥೆ ಕ್ರೀಡಾ ರಂಗಕ್ಕೆ ಕೊಡುತ್ತಿರುವ ಪ್ರೋತ್ಸಾಹ ಅದ್ಭುತವಾಗಿದೆ. ವಿದ್ಯಾರ್ಥಿಗಳೇ ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧಕರಾಗಬೇಕಾದರೆ ಕಾಲೇಜಿನ ಕ್ರೀಡಾಕೂಟಗಳು ಅಡಿಪಾಯವಾಗಿದೆ. ಧೈರ್ಯವಾಗಿ ಆಡಿ ಎಂದು ಶುಭ ಹಾರೈಸಿದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರು ಮಾತನಾಡಿ, ವಿದ್ಯಾರ್ಥಿಗಳ ಪ್ರತಿಭೆಯ ಅನಾವರಣಕ್ಕೆ ವಾರ್ಷಿಕ ಕ್ರೀಡಾಕೂಟ ಮಹತ್ವಪೂರ್ಣವಾಗಿದೆ ಆ ಮೂಲಕ ಸಾವಿರಾರು ವಿದ್ಯಾರ್ಥಿಗಳ ಕ್ರೀಡಾ ಪ್ರತಿಭೆಗಳನ್ನು ಅನಾವವರಣಗೊಳಿಸಿ ಪ್ರೋತ್ಸಾಹ ನೀಡಲಾಗುತ್ತಿದೆ. ಸೋಲೇ ಗೆಲುವಿನ ಸೋಪಾನ ಎಂದು ಶುಭ ಹಾರೈಸಿದರು. ಸಮಾರಂಭದಲ್ಲಿ ಜನತಾ ಪ್ರೌಢಶಾಲೆ ಹೆಮ್ಮಾಡಿಯ ಮುಖ್ಯ ಶಿಕ್ಷಕರಾದ ಮಂಜು ಕಾಳಾವರ, ಕಾಲೇಜಿನ ಉಪ ಪ್ರಾಂಶುಪಾಲರಾದ ರಮೇಶ ಪೂಜಾರಿ, ಜನತಾ ನ್ಯೂ ಇಂಗ್ಲೀಷ್ ಮೀಡಿಯಂ…
